• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS STATE

ಬೆಂಗಳೂರು ತ್ಯಾಜ್ಯ ನೀರಿನ 3ನೇ ಹಂತದ ಶುದ್ಧೀಕರಣ ಆಗಲೇಬೇಕು; ರಾಜಿ ಪ್ರಶ್ನೆ ಇಲ್ಲ ಎಂದ ಸಿ ಪಿ ಯೋಗೇಶ್ವರ

P K Channakrishna by P K Channakrishna
July 23, 2021
in STATE
Reading Time: 3 mins read
0
ಬೆಂಗಳೂರು ತ್ಯಾಜ್ಯ ನೀರಿನ 3ನೇ ಹಂತದ ಶುದ್ಧೀಕರಣ ಆಗಲೇಬೇಕು; ರಾಜಿ  ಪ್ರಶ್ನೆ ಇಲ್ಲ ಎಂದ ಸಿ ಪಿ ಯೋಗೇಶ್ವರ
989
VIEWS
FacebookTwitterWhatsuplinkedinEmail

ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಗೆ ಹೆಚ್‌.ಎನ್.ವ್ಯಾಲಿ, ಕೆ.ಸಿ.ವ್ಯಾಲಿ ಯೋಜನೆಗಳ ಮೂಲಕ ಹರಿಸುವ ತ್ಯಾಜ್ಯ ನೀರಿನ ಶುದ್ಧೀಕರಣ

ಚಿಕ್ಕಬಳ್ಳಾಪುರದ ಜಿ.ಎಸ್.‌ಪರಮಶಿವಯ್ಯ ಸ್ಮಾರಕ ನೀರಾವರಿ ಗ್ರಂಥಾಲಯ-ಮಾಹಿತಿ ಕೇಂದ್ರಕ್ಕೆ ಸಚಿವರ ಭೇಟಿ

ಸಚಿವರಿಗೆ ಶಾಶ್ವತ ನೀರಾವರಿ ಹೋರಾಟಗಾರರ ಮನವಿ

ಚಿಕ್ಕಬಳ್ಳಾಪುರ: ಬರಪೀಡಿತ ಚಿಕ್ಕಬಳ್ಳಾಪುರ, ಕೋಲಾರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಗೆ ಹೆಚ್‌.ಎನ್.ವ್ಯಾಲಿ, ಕೆ.ಸಿ.ವ್ಯಾಲಿ ಯೋಜನೆಗಳ ಮೂಲಕ ಬೆಂಗಳೂರಿನ ತ್ಯಾಜ್ಯ ನೀರನ್ನು 3ನೇ ಹಂತದಲ್ಲೂ ಶುದ್ಧೀಕರಣ ಆಗಲೇಬೇಕು. ಈ ಬಗ್ಗೆ ರಾಜಿ ಪ್ರಶ್ನೆ ಇಲ್ಲ ಎಂದು ಪ್ರವಾಸೋದ್ಯಮ, ಪರಿಸರ ಮತ್ತು ಜೀವಿಶಾಸ್ತ್ರ ಖಾತೆ ಸಚಿವ ಸಿ.ಪಿ.ಯೋಗೇಶ್ವರ ಸ್ಪಷ್ಟ ಮಾತುಗಳಲ್ಲಿ ಹೇಳಿದರು.

ಈಗಾಗಲೇ ಈ ತ್ಯಾಜ್ಯ ನೀರನ್ನು ಎರಡು ಹಂತಗಳಲ್ಲಿ ಶುದ್ಧೀಕರಣ ಮಾಡಲಾಗುತ್ತಿದೆ. ಪರಿಸರ, ಜನ ಮತ್ತು ಜಾನುವಾರುಗಳ ಹಿತದೃಷ್ಟಿಯಿಂದ ಅದು ಸಾಲದು. ಹೀಗಾಗಿ 3ನೇ ಹಂತದ ಶುದ್ಧೀಕರಣ ಆಗಲೇಬೇಕೆಂದು ಸಂಬಂಧಪಟ್ಟ ಎಲ್ಲ ಇಲಾಖೆಗಳ ಉನ್ನತ ಅಧಿಕಾರಿಗಳಿಗೆ ಈಗಾಗಲೇ ಕಟ್ಟುನಿಟ್ಟಾಗಿ ತಾಕೀತು ಮಾಡಿದ್ದೇನೆ ಎಂದು ಅವರು ಹೇಳಿದರು.

ಚಿಕ್ಕಬಳ್ಳಾಪುರದಲ್ಲಿ ಶುಕ್ರವಾರ ಬಯಲುಸೀಮೆಯ ನೀರಾವರಿ ವಿಷಯ-ಮಾಹಿತಿಗಳ ಸಂಗ್ರಹಗಾರವೂ ಆಗಿರುವ ʼಜಿ.ಎಸ್.‌ಪರಮಶಿವಯ್ಯ ಸ್ಮಾರಕ ನೀರಾವರಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರʼಕ್ಕೆ ಭೇಟಿ ನೀಡಿದ ವೇಳೆ ಸಚಿವರು ಅಲ್ಲಿ ನೆರೆದಿದ್ದ ನೀರಾವರಿ ಹೋರಾಟಗಾರರನ್ನು ಉದ್ದೇಶಿಸಿ ಮಾತನಾಡಿದರು.

ಮುಂದುವರಿದು ಸಚಿವರು ಹೇಳಿದ್ದು ಇಷ್ಟು…

ಮೂರನೇ ಹಂತದ ಶುದ್ಧೀಕರಣದ ವಿಷಯದಲ್ಲಿ ರಾಜಿ ಪ್ರಶ್ನೆ ಇಲ್ಲ. ಅದು ಆಗಲೇಬೇಕು, ಎಷ್ಟು ಹಣ ಖರ್ಚಾದರೂ ಸರಿ. ಇದು ಸ್ಪಷ್ಟ ನಿಲುವು.

ತ್ಯಾಜ್ಯ 3ನೇ ಹಂತದ ಶುದ್ಧೀಕರಣ ಮಾಡಲು ಸ್ವಲ್ಪ ಖರ್ಚು ಬರುತ್ತದೆ ಎಂಬುದೇನೋ ನಿಜ. ಆದರೆ, ಹಣಕ್ಕಿಂತ ಜನ, ಜಾನುವಾರು ಹಾಗೂ ಪರಿಸರ ಮುಖ್ಯ. ಈ ಎಲ್ಲವನ್ನೂ ನಾವು ಆರೋಗ್ಯವಾಗಿ ಉಳಿಸಿಕೊಳ್ಳಲೇಬೇಕಾಗಿದೆ. ಹೆಚ್ಚೆಂದರೆ ಇನ್ನು 1,000 ಕೋಟಿ ಖರ್ಚು ಬರಬಹುದು. ಇಲ್ಲಿ ಹಣಕ್ಕಿಂತ ಜನ ಹೆಚ್ಚು ಮುಖ್ಯ.

ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (BWSSB) ಇನ್ನೂ ನೀರಿನ ಶುದ್ಧೀಕರಣದಲ್ಲಿ ಹಳೆಯ ತಂತ್ರಜ್ಞಾನವನ್ನೇ ಬಳಕೆ ಮಾಡುತ್ತಿದೆ. ಆ ಸಂಸ್ಥೆ ಯಾವ ಸ್ಥಿತಿಯಲ್ಲಿದೆ ಎಂದರೆ, 2000ನೇ ಇಸವಿಯಲ್ಲಿ 1950ನೇ ವರ್ಷದ ತಂತ್ರಜ್ಞಾನ ಬಳಕೆ ಮಾಡುತ್ತಿದೆ. ಈಗ ನಾವು 2020-21ರಲ್ಲಿದ್ದೇವೆ. ಆ ಸಂಸ್ಥೆ ಇನ್ನೂ 2000ನೇ ವರ್ಷದ ತಂತ್ರಜ್ಞಾನವನ್ನೇ ಇಟ್ಟುಕೊಂಡಿದೆ. ಯಾವುದೇ ಸಂದರ್ಭದಲ್ಲಿ ನೋಡಿದರೂ ಜಲಮಂಡಳಿ ತಂತ್ರಜ್ಞಾನದ ವಿಷಯದಲ್ಲಿ 25 ವರ್ಷ ಹಿಂದೆಯೇ ಉಳಿದಿದೆ. ಕೆಲಸಕ್ಕೆ ಬಾರದ ಕೆಟ್ಟು ನಿಂತಿರುವ ಯಂತ್ರಗಳೇ ಸಾಕಷ್ಟಿವೆ.

ಅರೆ ಸಂಸ್ಕರಿತ ನೀರಿನಿಂದ ಆಗಿರುವ ಅನಾಹುತವನ್ನು ನಾನು ಬಿಡಿಸಿ ಹೇಳಲಾರೆ. ನಮ್ಮ ಭಾಗದ ಭೈರಮಂಗಲ ಮತ್ತಿತರೆ ಕಡೆ ಬಹಳ ಅಧ್ವಾನವಾಗಿವೆ. ಒಂದು ಎಳನೀರನ್ನೂ ಕುಡಿಯೋ ಹಾಗಿಲ್ಲ. ಅದರಲ್ಲಿಯೂ ವಿಷಕಾರಿ ಲವಣಾಂಶಗಳು ಸೇರಿಬಿಟ್ಟಿವೆ. ಹಸು ಹಾಲಿನದ್ದು ಇದೇ ಸ್ಥಿತಿ. ಹೀಗಾಗಿ ಇಂಥ ತ್ಯಾಜ್ಯ ನೀರನ್ನು ಮೂರು ಹಂತಗಳಲ್ಲಿ ಶುದ್ಧೀಕರಣ ಮಾಡಲೇಬೇಕು.

ಎತ್ತಿನಹೊಳೆ; ಭೂಸ್ವಾಧೀನವೇ ಸ್ಥಗಿತವಾಗಿದೆ!!

ಚಿಕ್ಕಬಳ್ಳಾಪುರ, ಕೋಲಾರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಗೆ ನೀರೊದಗಿಸುವ ಎತ್ತಿನಹೊಳೆ ಯೋಜನೆ ಆದಷ್ಟು ಬೇಗ ಕಾರ್ಯಗತವಾಗಬೇಕು ಎಂಬುದು ನನ್ನ ಇಚ್ಛೆ. ಆದರೆ, ಯೋಜನೆ ವಿಳಂಬವಾಗಿ ಸಾಗುತ್ತಿದೆ. ಸ್ವಾಧೀನ ಮಾಡಿಕೊಳ್ಳುವ ಭೂಮಿಗೆ ನಾಲ್ಕು ಪಟ್ಟು ಹೆಚ್ಚು ಪರಿಹಾರದ ಹಣ ನೀಡಬೇಕು ಎಂದು ನ್ಯಾಯಾಲಯ ಅದೇಶ ನೀಡಿದ ಮೇಲೆ ಅಲ್ಲಿ ಭೂಸ್ವಾಧೀನ ಪ್ರಕ್ರಿಯೆಯನ್ನೇ ನಿಲ್ಲಿಸಲಾಗಿದೆ.

ನೀರಾವರಿ ಯೋಜನೆಗಳನ್ನು ಕಾಲಮಿತಿಯೊಳಗೆ ಕಾರ್ಯಗತ ಮಾಡದಿದ್ದರೆ ಯೋಜನೆಯ ವೆಚ್ಚವೂ ಹೆಚ್ಚಾಗುತ್ತದೆ. ಭೂ ಸ್ವಾಧೀನ, ಲೋಹ ಮತ್ತಿತರೆ ವಸ್ತುಗಳ ಬೆಲೆ ಹೆಚ್ಚಾಗುತ್ತದೆ. ಈ ಭಾಗದಲ್ಲಿ ಭೂಮಿ ಬಂಗಾರದಂತಿದೆ. ನೀರು ಸಿಕ್ಕರೆ ರೈತರು ಅದ್ಭುತಗಳನ್ನೇ ಸೃಷ್ಟಿಸುತ್ತಾರೆ. ಯಾವುದೇ ನೀರಾವರಿ ಯೋಜನೆ ಕೈಗೊಂಡರೂ ಬಯಲುಸೀಮೆ ಜಿಲ್ಲೆಗಳಿಗೆ ಮೊದಲ ಆದ್ಯತೆ ನೀಡಬೇಕು.

ಸಿ.ಪಿ.ಯೋಗೇಶ್ವರ, ಸಚಿವರು

ಈ ಮೂರೂ ಜಿಲ್ಲೆಗಳಿಗೆ ಕಾವೇರಿ ನೀರನ್ನೂ ಕೊಡಬಹುದು. ಎತ್ತಿನಹೊಳೆ ನೀರು ತರಬಹುದಾದರೆ, ಕಾವೇರಿ ನೀರು ಕೊಡಲು ಸಾಧ್ಯವಿಲ್ಲವೇ? ಹಾಗೆಯೇ ತುಂಗಭದ್ರಾದಿಂದಲೂ ನೀರು ಪಡೆಯಬಹುದು. ಈ ಬಗ್ಗೆ ವೆಚ್ಚದ ಬಗ್ಗೆ ಲೆಕ್ಕ ಹಾಕಲೇಬಾರದು. ಮೊದಲು ಜನರನ್ನು, ಜಾನುವಾರುಗಳನ್ನು, ಪರಿಸರವನ್ನು ಉಳಿಸಿಕೊಳ್ಳಬೇಕು. ಒಮ್ಮೆ ನೀರು ಹರಿದ ಮೇಲೆ ಖರ್ಚಾದ ಹಣಕ್ಕಿಂತ ಸಾವಿರಾರು ಪಟ್ಟು ಹೆಚ್ಚು ಆದಾಯವೂ ಬರುತ್ತದೆ. ಈ ಜಿಲ್ಲೆಗಳಿಗೆ ಶಾಶ್ವತ ನೀರಾವರಿ ಸೌಲಭ್ಯಕ್ಕಾಗಿ ನಾನೂ ಜತೆಯಲ್ಲಿರುತ್ತೇನೆ. ಸರಕಾರದ ಮಟ್ಟದಲ್ಲಿ ನನ್ನ ಕೈಲಾದ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ.

ಸಚಿವರಿಗೆ ಮನವಿ ನೀಡಿದ ರೈತರು

ಹೆಚ್‌.ಎನ್.ವ್ಯಾಲಿ, ಕೆ.ಸಿ.ವ್ಯಾಲಿ ಯೋಜನೆಗಳ ನೀರನ್ನು ಮೂರನೇ ಹಂತದಲ್ಲಿ ಶುದ್ಧೀಕರಣ ಮಾಡಬೇಕೆನ್ನುವ ಬಗ್ಗೆ ಇದೇ ವೇಳೆ ಶಾಶ್ವತ ನೀರಾವರಿ ಹೋರಾಟ ಸಮಿತಿ ಅಧ್ಯಕ್ಷ ಆರ್.‌ಆಂಜನೇಯ ರೆಡ್ಡಿ ಅವರ ನೇತೃತ್ವದಲ್ಲಿ ನೀರಾವರಿ ಹೋರಾಟಗಾರರು ಸಚಿವ ಯೋಗೇಶ್ವರ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ಕೇಂದ್ರ ಸರಕಾರದ ಮಾರ್ಗಸೂಚಿಯಂತೆ ತ್ಯಾಜ್ಯ ನೀರನ್ನು ಶುದ್ಧೀಕರಣ ಮಾಡಬೇಕು ಹಾಗೂ ನೀರಿನ ಗುಣಮಟ್ಟದ ಮೇಲೆ ನಿರಂತರವಾಗಿ ಕಣ್ಗಾವಲು ಇಡಬೇಕು ಎಂದು ಒತ್ತಾಯ ಮಾಡಿದ ಹೋರಾಟಗಾರರು; ಬೆಂಗಳೂರು ನಗರದ ಕೈಗಾರಿಕೆಗಳು, ವಾಣಿಜ್ಯ ಕಟ್ಟಡಗಳು ಕಡ್ಡಾಯವಾಗಿ ʼಶೂನ್ಯ ವಿಸರ್ಜನೆ ನೀತಿʼ (zero discharge policy)ಯನ್ನು ಪಾಲಿಸುವಂತೆ ಮಾಡಬೇಕು. ಈ ನೀತಿಯನ್ನು ಉಲ್ಲಂಘನೆ ಮಾಡುವವರ ವಿರುದ್ಧ ಕಠಿಣ ಕ್ರಮ ಜರುಗಿಸುವ ಮೂಲಕ ನೀರಿನ ಗುಣಮಟ್ಟದ ಮೇಲೆ ನಿರಂತರವಾಗಿ ಮೇಲುಸ್ತುವಾರಿ ವಹಿಸಬೇಕು ಎಂದು ಮನವಿ ಪತ್ರದಲ್ಲಿ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಸಚಿವ ಯೋಗೇಶ್ವರ ಅವರು ನೀರಾವರಿ ಹೋರಾಟಗಾರರು, ರೈತ ಮುಖಂಡರು, ರೈತರ ಜತೆ ಸಂವಾದ ನಡೆಸಿದರು. ಜತೆಗೆ, ಪಕ್ಕದಲ್ಲೇ ಇದ್ದ ದ್ರಾಕ್ಷಿ ತೋಟಕ್ಕೆ ಭೇಟಿ ನೀಡಿದರು. ಸಮೃದ್ಧಿಯಾಗಿ ಬೆಳೆದಿದ್ದ ದ್ರಾಕ್ಷಿ ಬೆಳೆಯನ್ನು ಕಂಡು ಸಂತಸ ವ್ಯಕ್ತಪಡಿಸಿದರು.

ಶಾಶ್ವತ ನೀರಾವರಿ ಹೋರಾಟಗಾರರಾದ ಮಳ್ಳೂರು ಹರೀಶ್‌, ಜಿಜಿ ಹಳ್ಳಿ ನಾರಾಯಣಸ್ವಾಮಿ, ಎಂ.ಆರ್.ಲಕ್ಷ್ಮೀನಾರಾಯಣ, ಆನೂರು ದೇವರಾಜ್‌, ನಾಗದೇನಹಳ್ಳಿ ನಾರಾಯಣಸ್ವಾಮಿ, ಮುನಿ ಕೆಂಪಣ್ಣ, ಹೆಣ್ಣೂರು ಬಸವರಾಜ್‌, ಸುಷ್ಮಾ ಶ್ರೀನಿವಾಸ್‌, ಪ್ರಭಾ ನಾರಾಯಣಗೌಡ, ಜೀವಿಕಾ ರತ್ನಮ್ಮ, ಉಷಾ ಆಂಜನೇಯ ರೆಡ್ಡಿ, ವಿಜಯಭಾವ ರೆಡ್ಡಿ, ಶ್ರೀರಾಮ ಗೌಡ, ಬಾಲು, ರಾಘವೇಂದ್ರ ಮುಂತಾದವರು ಉಪಸ್ಥಿತರಿದ್ದರು.

Tags: Bangalore ruralBangalore waste waterchikkaballapurahn valleykc valleykolarminister cp yogeshwarathird level waste water treatmentyettinahole
P K Channakrishna

P K Channakrishna

www.cknewsnow.com ಪ್ರಧಾನ ಸಂಪಾದಕ ಮತ್ತು ಸಂಸ್ಥಾಪಕ. ಪ್ರಿಂಟ್‌ ಮೀಡಿಯಾದಲ್ಲಿ 3 ದಶಕದಷ್ಟು ಸುದೀರ್ಘ ಅನುಭವ. ರಾಜಕೀಯ, ಕೃಷಿ, ಸಿನಿಮಾ, ಸಂಗೀತ, ಫೊಟೋಗ್ರಫಿ, ಪ್ರವಾಸ, ಸೋಶಿಯಲ್‌ ಮೀಡಿಯಾದಲ್ಲಿ ಆಸಕ್ತಿ. ಓದು ಅಚ್ಚುಮೆಚ್ಚು.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಗುಡಿಬಂಡೆ ಸಿಪಿಐ ಲಿಂಗರಾಜು ಸಮಾಜಮುಖಿ ಕೆಲಸಕ್ಕೆ ಚಿಕ್ಕಬಳ್ಳಾಪುರ ಎಸ್‌ಪಿ ಪ್ರಶಂಸೆ

ಗುಡಿಬಂಡೆ ಸಿಪಿಐ ಲಿಂಗರಾಜು ಸಮಾಜಮುಖಿ ಕೆಲಸಕ್ಕೆ ಚಿಕ್ಕಬಳ್ಳಾಪುರ ಎಸ್‌ಪಿ ಪ್ರಶಂಸೆ

Leave a Reply Cancel reply

Your email address will not be published. Required fields are marked *

Recommended

ದಾಖಲೆ ಸಲ್ಲಿಸಲು ಪೂರೈಕೆ ಕಂಪನಿಗಳ ಮೀನಾ-ಮೇಷ; ತಯಾರಿಕೆ ಕಂಪನಿಗಳಿಂದಲೇ ನೇರವಾಗಿ ವ್ಯಾಕ್ಸಿನ್  ಖರೀದಿಗೆ ಮುಂದಾದ ಸರಕಾರ

ಕಾಲೇಜು ವಿದ್ಯಾರ್ಥಿಗಳಿಗೆ ಜುಲೈ ತಿಂಗಳಲ್ಲಿ ಲಸಿಕೆ: ಶೀಘ್ರ ತರಗತಿಗಳ ಆರಂಭಕ್ಕೆ ಚಿಂತನೆ ಎಂದ ಡಿಸಿಎಂ

5 years ago
ಯಡಿಯೂರಪ್ಪ ಅವರಿಂದ ಎಷ್ಟು ಸೂಟ್ ಕೇಸ್ ತೆಗೆದುಕೊಂಡಿರಿ ಸಿದ್ದರಾಮಯ್ಯ?

ಮೇಲ್ಮನೆ ಚುನಾವಣೆ ಮೈತ್ರಿ ವಿಚಾರ, ಭಾನುವಾರದೊಳಗೆ ನಿರ್ಧಾರ

4 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ