• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS NATION

ಟೊಕಿಯೋ ಒಲಿಂಪಿಕ್ಸ್‌ನಲ್ಲಿ ಭಾರತಕ್ಕೆ ಬೆಳ್ಳಿಬೋಣಿ

cknewsnow desk by cknewsnow desk
July 24, 2021
in NATION, STATE, WORLD
Reading Time: 1 min read
0
ಟೊಕಿಯೋ ಒಲಿಂಪಿಕ್ಸ್‌ನಲ್ಲಿ ಭಾರತಕ್ಕೆ ಬೆಳ್ಳಿಬೋಣಿ
963
VIEWS
FacebookTwitterWhatsuplinkedinEmail

49 ಕೆಜಿ ವಿಭಾಗದ ವೇಟ್ ಲಿಫ್ಟಿಂಗ್‌ನಲ್ಲಿ ಬೆಳ್ಳಿ ಗೆದ್ದ ಮೀರಾಬಾಯಿ ಚಾನು; ಪದಕ ಬೇಟೆ ಆರಂಭಿಸಿದ ಭಾರತೀಯರು

ಟೋಕಿಯೋ: ಟೋಕಿಯೊ ಒಲಿಂಪಿಕ್ಸ್ -2020ರಲ್ಲಿ ಭಾರತದ ಪದಕ ಬೇಟೆ ಶುರುವಾಯಿತು. ಜಪಾನ್‌ನ ಟೋಕಿಯೊ ಅಂತಾರಾಷ್ಟ್ರೀಯ ಒಲಿಂಪಿಕ್‌ ವೇದಿಕೆಯಲ್ಲಿ ನಡೆದ ಮಹಿಳೆಯರ 49 ಕೆ.ಜಿ. ವಿಭಾಗದ ವೇಟ್ ಲಿಫ್ಟಿಂಗ್‌ ಸ್ಫರ್ಧೆಯಲ್ಲಿ ಭಾರತದ ಸೈಖೋಮ್ ಮೀರಾಬಾಯಿ ಚಾನು ಬೆಳ್ಳಿ ಪದಕ ಗೆದ್ದಿದ್ದಾರೆ. ಭಾರತಕ್ಕೆ ಮೊದಲ ಪದಕವಾಗಿ ಬೆಳ್ಳಿ ಒಲಿದೆ.

49 ಕೆ.ಜಿ.ವಿಭಾಗದ ಭಾರ ಎತ್ತುವ ಈ ಸ್ಪರ್ಧೆಯಲ್ಲಿ ನಡೆದ ನಾಲ್ಕು ಸುತ್ತುಗಳಲ್ಲಿ ಮೀರಾಬಾಯಿ ಅವರು ಒಟ್ಟು 202 ಕೆಜಿ (ಸ್ನ್ಯಾಚ್‌ನಲ್ಲಿ 87 ಕೆಜಿ ಮತ್ತು ಕ್ಲೀನ್ ಮತ್ತು ಜರ್ಕ್‌ನಲ್ಲಿ 115 ಕೆಜಿ) ಮೇಲೆತ್ತಿದ್ದಾರೆ.

ಚೀನಾದ ಝಿಹೈ ಹು ಒಟ್ಟು 210 ಕೆಜಿ ತೂಕ ಎತ್ತಿ ಚಿನ್ನದ ಪದಕ ಗಳಿಸಿ ಒಲಿಂಪಿಕ್‌ ವೇಟ್ ಲಿಫ್ಟಿಂಗ್‌ ಸ್ಫರ್ಧೆಯಲ್ಲಿ ಹೊಸ ದಾಖಲೆಯನ್ನು ಸೃಷ್ಟಿಸಿದ್ದಾರೆ. ಇನ್ನು, ಇಂಡೋನೇಷ್ಯಾದ ವಿಂಡಿ ಕ್ಯಾಂಟಿಕಾ ಐಸಾ ಒಟ್ಟು 194 ಕೆಜಿ ಭಾರ ಎತ್ತಿ ಕಂಚಿನ ಪದಕಕ್ಕೆ ಕೊರಳೊಡ್ಡಿದ್ದಾರೆ.

ಮೀರಾಬಾಯಿ ಬೆಳ್ಳಿ ಗೆದ್ದ ಕೂಡಲೇ ಟೋಕಿಯೋದ ಒಲಿಂಪಿಕ್‌ ಕ್ರೀಡಾಗ್ರಾಮದಲ್ಲಿದ್ದ ಭಾರತೀಯ ಕ್ರೀಡಾಪಟುಗಳಿಗೆ ಇನ್ನಷ್ಟು ಹುರುಪು ಬಂದಿದೆ. ಭಾರತಕ್ಕೆ ಇನ್ನಷ್ಟು ಪದಕಗಳು ಸಿಗುವ ನಿರೀಕ್ಷೆ ಇದೆ.

Silver medal! 🥈

After a tough battle, Chanu Saikhom Mirabai finishes in second place in the #Weightlifting women's -49kg and earns the first medal for India at #Tokyo2020@iwfnet @WeAreTeamIndia pic.twitter.com/zLF5Et6NLC

— The Olympic Games (@Olympics) July 24, 2021

ವೇಟ್ ಲಿಫ್ಟ್‌ನಲ್ಲಿ ಎರಡನೇ ಪದಕ

ಮೀರಾಬಾಯಿ ಅವರು ಒಲಿಂಪಿಕ್‌ ವೇಟ್ ಲಿಫ್ಟಿಂಗ್‌ ಸ್ಫರ್ಧೆಯಲ್ಲಿ ಬೆಳ್ಳಿ ಗೆಲ್ಲುವುದರೊಂದಿಗೆ ಇಡೀ ಭಾರತ ಖುಷಿಯಾಗಿದೆ. ಒಲಿಂಪಿಕ್‌ ಕ್ರೀಡಾಕೂಟದಲ್ಲಿ ಪದಕ ಗೆದ್ದ ಎರಡನೇ ವೇಯ್ಟ್‌ ಲಿಫ್ಟರ್‌ ಮೀರಾ ಆಗಿದ್ದಾರೆ. 2000ರಲ್ಲಿ ಸಿಡ್ನಿಯಲ್ಲಿ ನಡೆದಿದ್ದ ಒಲಿಂಪಿಕ್ಸ್‌ನಲ್ಲಿ 69 ಕೆ.ಜಿ. ಭಾಋ ಎತ್ತುವ ಸ್ಪರ್ಧೆಯಲ್ಲಿ ಆಂಧ್ರ ಪ್ರದೇಶದ ಕರ್ಣಂ ಮಲ್ಲೇಶ್ವರಿ ಅವರು ಕಂಚಿನ ಪದಕ ಗೆದ್ದಿದ್ದರು.

ಶುಭಾಶಯಗಳ ಸುರಿಮಳೆ

ಬೆಳ್ಳಿ ಪದಕ ಗೆದ್ದ ಮೀರಾಬಾಯಿ ಅವರಿಗೆ ಇಡೀ ದೇಶಾದ್ಯಂತ ಶುಭಾಶಯಗಳ ಸುರಿಮಳೆ ಆಗುತ್ತಿದೆ. ರಾಷ್ಟ್ರಪತಿ ರಾಮನಾಥ ಕೋವಿಂದ್‌, ಪ್ರಧಾನಿ ನರೇಂದ್ರ ಮೋದಿ ಮುಂತಾದವರು ಮೀರಾ ಅವರಿಗೆ ಶುಭಾಶಯ ಹೇಳಿದ್ದಾರೆ.

Heartiest congratulations to Mirabai Chanu for starting the medal tally for India in the Tokyo Olympics 2020 by winning silver medal in weightlifting.

— President of India (@rashtrapatibhvn) July 24, 2021

ಮೀರಾ ಅವರಿಗೆ ಹೃದಯಪೂರ್ವಕ ಶುಭಾಶಯಗಳು ಎಂದು ರಾಷ್ಟ್ರಪತಿಗಳು ಹೇಳಿದ್ದರೆ, ಬೆಳ್ಳಿಯೊಂದಿಗೆ ಭಾರತ ಶುಭಾರಂಭ ಮಾಡಿದೆ ಎಂದು ಮೋದಿ ಅವರಿ ಟ್ವೀಟ್‌ ಮಾಡಿದ್ದಾರೆ.

Could not have asked for a happier start to @Tokyo2020! India is elated by @mirabai_chanu’s stupendous performance. Congratulations to her for winning the Silver medal in weightlifting. Her success motivates every Indian. #Cheer4India #Tokyo2020 pic.twitter.com/B6uJtDlaJo

— Narendra Modi (@narendramodi) July 24, 2021

ಜತೆಗೆ, ಕೇಂದ್ರದ ಕ್ರೀಡಾ ಸಚಿವ ಅನುರಾಗ್‌ ಸಿಂಗ್‌ ಠಾಕೂರ್‌ ಸೇರಿದಂತೆ ವಿವಿಧ ಸಚಿವರು, ಮುಖ್ಯಮಂತ್ರಿ ಯಡಿಯೂರಪ್ಪ, ಉಪ ಮುಖ್ಯಮಂತ್ರಿ ಡಾ.ಸಿ.ಎನ್‌,ಅಶ್ವತ್ಥನಾರಾಯಣ ಮುಂತಾದವರು ಮೀರಾ ಅವರಿಗೆ ಶುಭ ಕೋರಿದ್ದಾರೆ.

Tags: Chanu Saikhom MirabaiIndiaindiaOlympicOlympic Games Tokyo 2020silver medalTokyo 2020Weightlifter Mirabai Chanu
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ನೀವು GST ಪಾವತಿದಾರರೇ ಹಾಗಾದರೆ ನಿಮ್ಮ ಬಿ.ಪಿ.ಎಲ್. ಕಾರ್ಡ್ ರದ್ದಾಗಬಹುದು!

ನೀವು GST ಪಾವತಿದಾರರೇ ಹಾಗಾದರೆ ನಿಮ್ಮ ಬಿ.ಪಿ.ಎಲ್. ಕಾರ್ಡ್ ರದ್ದಾಗಬಹುದು!

Leave a Reply Cancel reply

Your email address will not be published. Required fields are marked *

Recommended

ನವೆಂಬರ್ 16ರಿಂದ ಶಬರಿಮಲೆ ಮಂಡಲೋತ್ಸವ; ಕೋವಿಡ್ ನೆಗೆಟೀವ್ ಪತ್ರ ಇದ್ದರೆ ಮಾತ್ರ ಅಯ್ಯಪ್ಪ ದರ್ಶನ

ಅಯ್ಯಪ್ಪ ಭಕ್ತರಿಗೆ ಸಿಹಿಸುದ್ದಿ; ಸ್ವಾಮಿ ಪ್ರಸಾದವನ್ನು ಅಂಚೆ ಮೂಲಕವೂ ತರಿಸಿಕೊಳ್ಳಬಹುದು

5 years ago
ಹೊಸ ವರ್ಷಕ್ಕೆ ಕೋವಿಡ್‌ ವ್ಯಾಕ್ಸಿನ್

ಹೆಚ್ಚುತ್ತಲೇ ಇದೆ ಕೊರೊನಾ ಆತಂಕ; ಲಸಿಕೆ ಸಿಗುವುದು ಇನ್ನೂ ತಡ ಎಂದ ಡಾ.ಸುಧಾಕರ್

5 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ