• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS STATE

ರಾಜಾಹುಲಿ ರಾಜೀನಾಮೆ

P K Channakrishna by P K Channakrishna
July 27, 2021
in STATE
Reading Time: 1 min read
0
4 ದಿನ ಮುನ್ನವೇ ರಾಜಿನಾಮೆ ಸುಳಿವು ನೀಡಲು ಕಾರಣವಾದ ಆ 8 ಕಾರಣ
1.1k
VIEWS
FacebookTwitterWhatsuplinkedinEmail

ಮುಖ್ಯಮಂತ್ರಿ ಸ್ಥಾನಕ್ಕೆ ಬಿಎಸ್‌ವೈ ಭಾವುಕ ವಿದಾಯ; ಬ್ಯಾಂಕ್ವೆಟ್‌ ಹಾಲ್‌ನಲ್ಲಿ ಬಿಕ್ಕಳಿಸುತ್ತಲೇ ಪದತ್ಯಾಗದ ಘೋಷಣೆ ಮಾಡಿದ ಯಡಿಯೂರಪ್ಪ

ಬೆಂಗಳೂರು: ವಿಧಾನಸೌಧ ಬ್ಯಾಂಕ್ವೆಟ್‌ ಹಾಲ್‌ನಲ್ಲಿ ಭಾವಪರವಶರಾಗಿ ವಿದಾಯ ಭಾಷಣ ಮಾಡಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು, ಕೊನೆಗೂ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದರು.

ಈ ಮೂಲಕ ಕಳೆದ ಕೆಲ ದಿನಗಳಿಂದ ನಾಯಕತ್ವ ಬದಲಾವಣೆಗೆ ಸಂಬಂಧಿಸಿದಂತೆ ಬಿಜೆಪಿಯಲ್ಲಿ ಉಂಟಾಗಿದ್ದ ಹಗ್ಗಜಗ್ಗಾಟದಿಂದ ತೀವ್ರ ಬೇಸರಕ್ಕೆ ಗುರಿಯಾಗಿದ್ದ ಅವರು, ಉಕ್ಕಿ ಬರುತ್ತಿದ್ದ ದುಃಖವನ್ನು ತಡೆಯುತ್ತಲೇ ಬಿಕ್ಕಿಳಿಸುತ್ತಲೇ ತಮ್ಮ ಪದತ್ಯಾಗದ ಘೋಷಣೆ ಮಾಡಿದರು.

ಆರಂಭದಲ್ಲಿ ಎಂದಿನಂತೆಯೇ ಅವರು ಭಾಷಣ ಆರಂಭಿಸಿದರೂ ಅವರ ಮಾತುಗಳಲ್ಲಿ ಭಾರವಿತ್ತು. ಉಕ್ಕಿಬರುತ್ತಿದ್ದ ಭಾವಾವೇಶವನ್ನು ಅವರು ತಡೆದುಕೊಳ್ಳುತ್ತಿದ್ದರು. ಕೆಲ ನಿಮಿಷಗಳಾದ ನಂತರ ಅವರದ್ದು ವಿದಾಯ ಭಾಷಣ ಎಂಬುದು ಸ್ಪಷ್ಟವಾಗಿಬಿಟ್ಟಿತು. ಕೊನೆಗೆ ಪದತ್ಯಾಗ ಮಾತನ್ನೇಳುವ ಹೊತ್ತಿಗೆ ಅತೀವ ಭಾವುಕತೆಗೆ ಒಳಗಾದ ರಾಜಾಹುಲಿ, ಭಾರವಾದ ಮನಸ್ಸಿನಿಂದಲೇ ರಾಜೀನಾಮೆ ನೀಡುತ್ತಿರುವುದಾಗಿ ಪ್ರಕಟಿಸಿದರು.

ನಾನು ಇಂದು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಲಿದ್ದೇನೆ. ರಾಜ್ಯದ ಜನರ ಬೆಂಬಲದಿಂದ, ಪ್ರಧಾನಿ ಶ್ರೀ @narendramodi, ರಾಷ್ಟ್ರೀಯ ಅಧ್ಯಕ್ಷ ಶ್ರೀ @JPNadda, ಗೃಹ ಸಚಿವ ಶ್ರೀ @AmitShah ರವರ ಸಹಕಾರದಿಂದ, ಎಲ್ಲಾ ಶಾಸಕರು, ಪಕ್ಷದ ನೆರವಿನಿಂದ 2 ವರ್ಷ ಅಭಿವೃದ್ಧಿ ಪರ ಆಡಳಿತ ನೀಡಲು ಶಕ್ತಿಮೀರಿ ಪ್ರಯತ್ನ ನಡೆಸಿದ ತೃಪ್ತಿ ನನಗಿದೆ.

— B.S.Yediyurappa (Modi Ka Parivar) (@BSYBJP) July 26, 2021

“ಈ ಕಾರ್ಯಕ್ರಮದಲ್ಲಿ ಬಾಗಿಯಾದ ನೀವೆಲ್ಲರೂ ಊಟ ಮಾಡಿ. ನೀವೆಲ್ಲರೂ ಊಟ ಮಾಡಿದ ನಂತರ ರಾಜಭವನಕ್ಕೆ ತೆರಳಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೋಡಲು ನಿರ್ಧರಿಸಿದ್ದೇನೆ. ನಾನು ಈಗಾಗಲೇ ನಿರ್ಧರಿಸಿದ್ದೇನೆ” ಎಂದು ಯಡಿಯೂರಪ್ಪ ಹೇಳಿದರು.

ಅವರು ರಾಜೀನಾಮೆ ವಿಷಯ ಕೆಲವರಿಗಾದರೂ ಗೊತ್ತಿತ್ತೋ ಇಲ್ಲವೋ ಗೊತ್ತಿಲ್ಲ. ಆದರೆ ಅವರ ಅಕ್ಕಪಕ್ಕ ಕೂತಿದ್ದ ಉಪ ಮುಖ್ಯಮಂತ್ರಿಗಳಾದ ಗೋವಿಂದ ಕಾರಜೋಳ, ಡಾ.ಅಶ್ವತ್ಥನಾರಾಯಣ, ಲಕ್ಷ್ಮಣ ಸವದಿ ಮುಂತಾದವರು ತೀವ್ರ ದಿಗ್ಬ್ರಮೆಗೊಳಗಾದರು. ಎದುರಿನ ಆಸನಗಳಲ್ಲಿ ಕೂತಿದ್ದ ಸಚಿವರು, ಶಾಸಕರು ಹಾಗೂ ಅಧಿಕಾರಿಗಳೆಲ್ಲರೂ ಒಮ್ಮಲೆ ಶಾಕ್‌ಗೆ ಗುರಿಯಾದರು.

ಮುಖ್ಯಮಂತ್ರಿ ಸ್ಥಾನಕ್ಕೆ ಯಡಿಯೂರಪ್ಪ ರಾಜೀನಾಮೆ ಘೋಷಣೆ; ಭಾವುಕರಾಗಿ ವಿದಾಯ ಹೇಳಿದ ರಾಜಾಹುಲಿ..#ಯಡಿಯೂರಪ್ಪ #ರಾಜಾಹುಲಿ#Yediyurappa
@pkcklb pic.twitter.com/ZVQj24I1Qp

— cknewsnow.com (@cknewsnow) July 26, 2021

ಯಡಿಯೂರಪ್ಪ ಅವರ ಪ್ರತಿ ಮಾತಿನಲ್ಲೂ ಭಾವತೀವ್ರತೆ ಇತ್ತು. ಕಳೆದ ಎರಡು ವರ್ಷಗಳ ತಮ್ಮ ಅಧಿಕಾರಾವಧಿಯ ಸಾಧನೆಗಳ ಪಟ್ಟಿ ಮಾಡುತ್ತಲೇ, “ಪ್ರತಿ ಸಂದರ್ಭದಲ್ಲಿಯೂ ನನಗೆ ಅಗ್ನಿಪರೀಕ್ಷೆಗಳೇ ಎದುರಾದವು. ಎರಡು ವರ್ಷಗಳ ಹಿಂದೆ ಪ್ರಮಾಣ ವಚನ ಸ್ವೀಕಾರ ಮಾಡಿದ ಮೇಲೆ ಎರಡು ತಿಂಗಳ ಕಾಲ ವರಿಷ್ಠರು ಸಂಪುಟ ರಚನೆಗೆ ಅವಕಾಶವನ್ನೇ ನೀಡಲಿಲ್ಲ. ಉತ್ತರ ಕರ್ನಾಟಕದಲ್ಲಿ ಪ್ರವಾಹ ಉಂಟಾದಾಗ ಒಬ್ಬನೇ ಹುಚ್ಚನಂತೆ ಓಡಾಡಿದೆ. ಪ್ರವಾಹ ಪರಿಸ್ಥಿತಿ ಹತೋಟಿಗೆ ಬಂದ ಮೇಲೆ ಕೋವಿಡ್‌ ಮಾರಿ ಕಾಣಿಸಿಕೊಂಡಿತು. ಹೀಗೆ ಹೆಜ್ಜೆಹೆಜ್ಜೆಗೂ ಅಗ್ನಿಪರೀಕ್ಷೆಗಳು, ಸವಾಲುಗಳೇ ಇದ್ದವು. ಆದರೆ ಎಲ್ಲ ಶಾಸಕರು, ಸಚಿವರು, ಅಧಿಕಾರಿಗಳು ಹಾಗೂ ಪಕ್ಷದ ಸಹಕಾರದಿಂದ ಎದುರಿಸಿದೆ” ಎಂದು ಅವರು ಹೇಳಿದರು.

ಒಂದೆಡೆ; ನರೇಂದ್ರ ಮೋದಿ, ಅಮಿತ್‌ ಶಾ ಹಾಗೂ ಜೆ.ಪಿನಡ್ಡಾ ಅವರು ಎಲ್ಲ ರೀತಿಯ ಕಾಳಜಿ, ಪ್ರೀತಿ ತೋರಿದರು ಎಂದು ಹೇಳುತ್ತಲೇ, ಹೈಕಮಾಂಡ್‌ ಕಡೆಯಿಂದ ಎದುರಾದ ಪರೀಕ್ಷೆಗಳೂ ಅವರು ಪ್ರಸ್ತಾಪ ಮಾಡಿದರು. ಎರಡು ತಿಂಗಳ ಕಾಲ ವರಿಷ್ಠರು ಸಂಪುಟ ರಚನೆಗೆ ಅವಕಾಶವನ್ನೇ ನೀಡಲಿಲ್ಲ ಎಂಬ ಅಂಶವನ್ನು ಪುನರುಚ್ಚರಿಸಿದರು.

ನಾಲ್ಕು ಬಾರಿ ಮುಖ್ಯಮಂತ್ರಿಯಾದರೂ ಅವಧಿಗೂ ಮುನ್ನವೇ ಯಡಿಯೂರಪ್ಪ ಒಮ್ಮೆಯೂ ಐದು ವರ್ಷಗಳ ಅಧಿಕಾರಾವಧಿ ಪೂರ್ಣಗೊಳಿಸಲಿಲ್ಲ.

ರಾಜೀನಾಮೆ ಅಂಗೀಕಾರ

ಬ್ಯಾಂಕ್ವೆಟ್‌ ಹಾಲ್‌ ಕಾರ್ಯಕ್ರಮ ಮುಗಿಸಿಕೊಂಡ ಯಡಿಯೂರಪ್ಪ ಅವರು ನೇರವಾಗಿ ರಾಜಭವನಕ್ಕೆ ತೆರಳಿ ರಾಜ್ಯಪಾಲ ಥಾವರಚಂದ್‌ ಗೆಹ್ಲೋತ್‌ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದರು. ರಾಜ್ಯಪಾಲರು ರಾಜೀನಾಮೆ ಅಂಗೀಕಾರ ಮಾಡಿದ್ದಾರೆ. ಕೆಲವೊತ್ತು ರಾಜ್ಯಪಾಲರ ಜತೆ ಮಾತುಕತೆ ನಡೆಸಿದ ಅವರು, ರಾಜಕೀಯ ಬೆಳವಣಿಗೆಗಳ ಬಗ್ಗೆ ಮಾಹಿತಿ ನೀಡಿದರು. ಮುಂದಿನ ಮುಖ್ಯಮಂತ್ರಿ ಪ್ರಮಾಣ ಸ್ವೀಕಾರ ಮಾಡುವವರೆಗೆ ಮುಂದುವರಿಯುವಂತೆ ಗೆಹ್ಲೋತ್‌ ಅವರು ಬಿಎಸ್‌ವೈ ಅವರಿಗೆ ಸೂಚನೆ ನೀಡಿದರು ಎಂದು ಮೂಲಗಳು ತಿಳಿಸಿವೆ.

ನಾಳೆ ನೂತನ ಮುಖ್ಯಮಂತ್ರಿ ಆಯ್ಕೆ

ಬಿಜೆಪಿ ಸಂಸದೀಯ ಮಂಡಳಿ ಸಭೆ ನಾಳೆ ನಡೆಯಲಿದ್ದು, ರಾಜ್ಯದ ಹೊಸ ಮುಖ್ಯಮಂತ್ರಿ ಯಾರೆಂಬುದು ಗೊತ್ತಾಗಲು ಇನ್ನೂ 24 ಗಂಟೆ ಕಾಯಬೇಕಿದೆ.

ಆದರೆ, ಮುಖ್ಯಮಂತ್ರಿ ಯಾರಾಗುತ್ತಾರೆ ಎಂಬ ಗುಟ್ಟನ್ನು ಬಿಜೆಪಿ ಬಿಟ್ಟುಕೊಡುತ್ತಿಲ್ಲ. ಆದರೆ, ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ, ಡಿಸಿಎಂ ಡಾ.ಅಶ್ವತ್ಥನಾರಾಯಣ, ಸಚಿವ ಮುರುಗೇಶ್‌ ನಿರಾಣಿ, ಸ್ಪೀಕರ್‌ ವಿಶ್ವೇಶ್ವರ ಹೆಗಡೆ ಕಾಗೇರಿ ಮುಂತಾದವರ ಹೆಸರುಗಳಿದ್ದು, ಅಂತಿಮವಾಗಿ ಮೋದಿ, ಅಮಿತ್‌ ಶಾ ಮತ್ತು ನಡ್ಡಾ ಯಾರ ಹೆಸರನ್ನು ಫೈನಲ್‌ ಮಾಡುತ್ತಾರೋ ಕಾದು ನೋಡಬೇಕಿದೆ.

ಉಳಿದಂತೆ ಹಿರಿಯ ಸಚಿವರಿಗೆ ಬಹುತೇಕ ಕೋಕ್ ನೀಡಲಾಗುವುದು ಎನ್ನಲಾಗಿದ್ದು, ಹೊಸ ಮುಖಗಳಿಗೆ ಅವಕಾಶ ಸಿಗಲಿದೆ ಎನ್ನಲಾಗಿದೆ. ಇನ್ನು ಆಪರೇಷನ್‌ ಕಮಲದ ಮೂಲಕ ಬಿಜೆಪಿಗೆ ಹಾರಿದ್ದ ಬಾಂಬೆ ಫ್ರೆಂಡ್ಸ್ ಎಲ್ಲರೂ ಸಂಪುಟದಲ್ಲಿ ಉಳಿಯುವ ಸಾಧ್ಯತೆ ಇದೆ.

Tags: bjpbs yediyurappachief ministerkarnatakaPoliticsresignationtwo years celebration
P K Channakrishna

P K Channakrishna

www.cknewsnow.com ಪ್ರಧಾನ ಸಂಪಾದಕ ಮತ್ತು ಸಂಸ್ಥಾಪಕ. ಪ್ರಿಂಟ್‌ ಮೀಡಿಯಾದಲ್ಲಿ 3 ದಶಕದಷ್ಟು ಸುದೀರ್ಘ ಅನುಭವ. ರಾಜಕೀಯ, ಕೃಷಿ, ಸಿನಿಮಾ, ಸಂಗೀತ, ಫೊಟೋಗ್ರಫಿ, ಪ್ರವಾಸ, ಸೋಶಿಯಲ್‌ ಮೀಡಿಯಾದಲ್ಲಿ ಆಸಕ್ತಿ. ಓದು ಅಚ್ಚುಮೆಚ್ಚು.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಚಿಕ್ಕಬಳ್ಳಾಪುರದಲ್ಲಿ ಚುನಾವಣೆಗೆ ನಿಂತು ಘಟಾನುಘಟಿಗಳನ್ನೇ ನಡುಗಿಸಿದ್ದರು ಜಯಂತಿ

ಚಿಕ್ಕಬಳ್ಳಾಪುರದಲ್ಲಿ ಚುನಾವಣೆಗೆ ನಿಂತು ಘಟಾನುಘಟಿಗಳನ್ನೇ ನಡುಗಿಸಿದ್ದರು ಜಯಂತಿ

Leave a Reply Cancel reply

Your email address will not be published. Required fields are marked *

Recommended

ಕೈಗಾರಿಕೆಗಳಲ್ಲಿ ಹೂಡಿಕೆ; ಕೋಲಾರ, ಚಿಕ್ಕಬಳ್ಳಾಪುರಕ್ಕೆ ಜಾಕ್’ಪಾಟ್

ಕೈಗಾರಿಕೆಗಳಲ್ಲಿ ಹೂಡಿಕೆ; ಕೋಲಾರ, ಚಿಕ್ಕಬಳ್ಳಾಪುರಕ್ಕೆ ಜಾಕ್’ಪಾಟ್

6 years ago
ತಾಲಿಬಾನ್ ಉಪಟಳ; ಮೈಸೂರಿನಲ್ಲಿ ಆಫ್ಘಾನ್ ವಿದ್ಯಾರ್ಥಿಗಳ ಆತಂಕ

ತಾಲಿಬಾನ್ ಉಪಟಳ; ಮೈಸೂರಿನಲ್ಲಿ ಆಫ್ಘಾನ್ ವಿದ್ಯಾರ್ಥಿಗಳ ಆತಂಕ

5 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ