• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home CHIKKABALLAPUR

ಚಿಕ್ಕಬಳ್ಳಾಪುರದಲ್ಲಿ ಚುನಾವಣೆಗೆ ನಿಂತು ಘಟಾನುಘಟಿಗಳನ್ನೇ ನಡುಗಿಸಿದ್ದರು ಜಯಂತಿ

P K Channakrishna by P K Channakrishna
July 27, 2021
in CHIKKABALLAPUR, ET CINEMA
Reading Time: 1 min read
0
ಚಿಕ್ಕಬಳ್ಳಾಪುರದಲ್ಲಿ ಚುನಾವಣೆಗೆ ನಿಂತು ಘಟಾನುಘಟಿಗಳನ್ನೇ ನಡುಗಿಸಿದ್ದರು ಜಯಂತಿ
1k
VIEWS
FacebookTwitterWhatsuplinkedinEmail

ಬೆಂಗಳೂರು: ಸೋಮವಾರ ಬೆಂಗಳೂರಿನಲ್ಲಿ ನಿಧನರಾದ ಹಿರಿಯ ನಟಿ ಜಯಂತಿ ಅವರು ನಟನೆಯ ಜತೆಗೆ ರಾಜಕೀಯದಲ್ಲೂ ಸದ್ದು ಮಾಡಿದ್ದರು.

ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಅವರ ಲೋಕಶಕ್ತಿ ಪಕ್ಷದಲ್ಲಿ ಗುರುತಿಸಿಕೊಂಡಿದ್ದ ಜಯಂತಿ ಅವರು 1998ರ ಲೋಕಸಭೆ ಚುನಾವಣೆಯಲ್ಲಿ ಚಿಕ್ಕಬಳ್ಳಾಪುರ ಕ್ಷೇತ್ರದಿಂದ ಸ್ಫರ್ಧಿಸಿದ್ದರು. ಘಟಾನುಘಟಿಗಳಿಗೆ ಸಡ್ಡು ಹೊಡೆದು ಹೆಗಡೆ ಅವರ ನಾಮಬಲದಿಂದಲೇ ಅಖಾಡಕ್ಕೆ ಇಳಿದಿದ್ದ ಅವರು, ಕಾಂಗ್ರೆಸ್‌ ಪಕ್ಷದ ಆರ್‌.ಎಲ್.ಜಾಲಪ್ಪ, ಜನತಾದಳದ ಸಿ.ಭೈರೇಗೌಡರ ವಿರುದ್ಧ ಸೆಣಸಿ 204359 ಮತ ಗಳಿಸಿ ಮೂರನೇ ಸ್ಥಾನ ಪಡೆದಿದ್ದರು. ಅಂದರೆ, ಮತದಾನವಾಗಿದ್ದ ಒಟ್ಟು ಮತಗಳಲ್ಲಿ 25.16% ರಷ್ಟು ಮತಗಳನ್ನು ಪಡೆದಿದ್ದರು. ಆ ಸಂದರ್ಭದ ಜಿದ್ದಾಜಿದ್ದಿ ರಾಜಕಾರಣದಲ್ಲಿ ಜಯಂತಿ ಅವರು ಇಷ್ಟು ದೊಡ್ಡ ಪ್ರಮಾಣದ ಮತಗಳನ್ನು ಪಡೆದ ರಾಜಕೀಯ ದಿಗ್ಗಜರಿಗೆ ಟಕ್ಕರ್‌ ಕೊಟ್ಟಿದ್ದು ರಾಜ್ಯದ ಮಾಧ್ಯಮಗಳಲ್ಲಿ ದೊಡ್ಡ ಸುದ್ದಿಯಾಗಿತ್ತು.

ಆ ಚುನಾವಣೆಯಲ್ಲಿ ಜಾಲಪ್ಪ ಅವರು 360761 ಮತಗಳನ್ನು, ಭೈರೇಗೌಡರು 233706 ಮತಗಳನ್ನು ಪಡೆದಿದ್ದರು. ಈ ಚುನಾವಣೆಯು ಮಾಜಿ ಪ್ರಧಾನಮಂತ್ರಿ ದೇವೇಗೌಡರು ಹಾಗೂ ಮಾಜಿ ಸಿಎಂ ರಾಮಕೃಷ್ಣ ಹೆಗಡೆ ಅವರ ನಡುವಿನ ಜಿದ್ದಿನ ಕಣವಾಗಿತ್ತು. ಗೌಡರು ಪ್ರಧಾನಿಯಾದ ಮೇಲೆ ಹೆಗಡೆ ಅವರನ್ನು ಜನತಾದಳದಿಂದ ಹೊರಹಾಕಲಾಗಿತ್ತು. ಪರಿಣಾಮವಾಗಿ ಹೆಗಡೆ ಅವರು ದಳಕ್ಕೆ ಸಡ್ಡು ಹೊಡೆದು ಲೋಕಶಕ್ತಿ ಕಟ್ಟಿದ್ದರು. ಆ ಪಕ್ಷದ ಅಭ್ಯರ್ಥಿಯಾಗಿ ಜಯಂತಿ ಸ್ಪರ್ಧಿಸದೇ ಇದ್ದಿದ್ದರೆ ಜಾಲಪ್ಪ ಸೋತು ಭೈರೇಗೌಡರು ನಿರಾಯಾಸವಾಗಿ ಗೆದ್ದುಬಿಡುತ್ತಿದ್ದರು.

ಅಷ್ಟೇ ಅಲ್ಲ, ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಜಯಂತಿ ಅವರು ಬಿರಗಾಳಿಯಂತೆ ಪ್ರಚಾರ ನಡೆಸಿದ್ದರು. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಹಾಗೂ ಅಂದಿನ ಕೋಲಾರ ಜಿಲ್ಲೆಗಳಲ್ಲಿ ಹಂಚಿ ಹೋಗಿದ್ದ ಈ ಬೃಹತ್‌ ಲೋಕಸಭಾ ಕ್ಷೇತ್ರದಲ್ಲಿ ಅವರು ಅಬ್ಬರದ ಪ್ರಚಾರ ನಡೆಸಿದ್ದರು. ಚಿಕ್ಕಬಳ್ಳಾಪುರ, ಗೌರಿಬಿದನೂರು, ಶಿಡ್ಲಘಟ್ಟ, ಬಾಗೇಪಲ್ಲಿ, ಗುಡಿಬಂಡೆ ತಾಲೂಕುಗಳಲ್ಲಿ ವ್ಯಾಪಕ ಪ್ರಚಾರ ನಡೆಸಿದ್ದರು. ಕನ್ನಡ ಮತ್ತು ತೆಲುಗು ಚಿತ್ರರಂಗಗಳಲ್ಲಿ ಖ್ಯಾತ ನಟಿಯಾಗಿದ್ದ ಅವರನ್ನು ಸ್ಥಳೀಯ ಜನರು ಬಹಳ ಅಕ್ಕರೆಯಿಂದ ಸ್ವಾಗತಿಸಿದ್ದರು.

ಅವರಿಗಾಗಿ ಸ್ವತಃ ರಾಮಕೃಷ್ಣ ಹೆಗಡೆ, ಜೀವರಾಜ ಆಳ್ವಾ, ಟಿಎನ್‌ ಸೀತಾರಾಂ ಸೇರಿದಂತೆ ಅನೇಕ ಘಟಾನುಘಟಿ ನಾಯಕರೆಲ್ಲ ಬಂದು ಚಿಕ್ಕಬಳ್ಳಾಪುರದಲ್ಲಿ ಪ್ರಚಾರ ಮಾಡಿದ್ದರು. ಹೀಗಾಗಿ ರಾಜಕೀಯವಾಗಿ ಜಯಂತಿ ಅವರಿಗೆ ಚಿಕ್ಕಬಳ್ಳಾಪುರ ಜಿಲ್ಲೆಯ ಜತೆ ನಂಟಿತ್ತು. ಆಗಾಗ ಅವರು ತಮ್ಮ ರಾಜಕೀಯ ಬದುಕಿನ ಬಗ್ಗೆ ಮಾತನಾಡುವಾಗಲೆಲ್ಲ ಚಿಕ್ಕಬಳ್ಳಾಪುರದ ಬಗ್ಗೆ ಪ್ರಸ್ತಾವನೆ ಮಾಡುವುದನ್ನು ಮರೆಯುತ್ತಿರಲಿಲ್ಲ.

ಆ ಚುನಾವಣೆಯನ್ನು ಬಹಳ ಹತ್ತಿರದಿಂದ ನೋಡಿದ್ದ ವಾರ್ತಾ ಇಲಾಖೆಯ ಹಿರಿಯ ಅಧಿಕಾರಿಯಾಗಿ ನಿವೃತ್ತಿಯಾಗಿರುವ ಜಗನ್ನಾಥ್‌ ಪ್ರಕಾಶ್‌ ಅವರು ಕೆಲ ಸಂಗತಿಗಳನ್ನು ಸಿಕೆನ್ಯೂಸ್‌ ನೌ ಗೆ ತಿಳಿಸಿದರು.

“ಜಯಂತಿ ಅವರು ಕನ್ನಡ ಚಿತ್ರರಂಗದಂತೆ ತೆಲುಗು ಚಿತ್ರರಂಗದಲ್ಲೂ ಖ್ಯಾತ ನಟಿಯಾಗಿದ್ದರು. ಎನ್.ಟಿ.ರಾಮಾರಾವ್‌ ಅವರಂಥ ದಿಗ್ಗಜ ನಟನ ಜತೆಯೂ ನಟಿಸಿದ್ದರು. ಹೀಗಾಗಿ ಆಂಧ್ರ ಪ್ರದೇಶದ ಗಡಿಗೆ ಹೊಂದಿಕೊಂಡಿರುವ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಜಯಂತಿ ಅವರಿಗೆ ಹೆಗಡೆ ಅವರು ಟಿಕೆಟ್‌ ನೀಡಿದ್ದರು. ಆದರೆ, ಜಯಂತಿ ಅವರು ನಿರಾಶೆ ಮಾಡಲಿಲ್ಲ. ಒಳ್ಳೆಯ ಸ್ಕೋರನ್ನೇ ಮಾಡಿದ್ದರು” ಎಂದು ಅವರು ಹೇಳುತ್ತಾರೆ.

ಇದಾದ ಮೇಲೆ 1999ರ ವಿಧಾನಸಭೆ ಚುನಾವಣೆಯಲ್ಲಿ ಜಯಂತಿ ಅವರು ತುಮಕೂರು ಜಿಲ್ಲೆಯ ಕೊರಟಗೆರೆ ಕ್ಷೇತ್ರದಿಂದ ಲೋಕಶಕ್ತಿ ಪಕ್ಷದಿಂದ ಸ್ಪರ್ಧಿಸಿ ಪರಾಭವಗೊಂಡಿದ್ದರು.

ಏನೇ ಆದರೂ ಚಿತ್ರರಂಗದಲ್ಲಿ ಅನಭಿಷಕ್ತ ರಾಣೆಯಾಗಿ ಮೆರೆದರೂ ಅನೇಕ ಏಳುಬೀಳುಗಳನ್ನು ಕಂಡಿದ್ದ ಜಯಂತಿ ಅವರು ರಾಜಕೀಯದಲ್ಲೂ ಮಿಂಚಿನಂತೆ ಬಂದು ಮರೆಯಾಗಿದ್ದರು. ಈಗ ಅವರು ಶಾಶ್ವತ ಚಿರನಿದ್ರೆಗೆ ಜಾರಿದ್ದಾರೆ.

Tags: 1998 lokasabha electionactress jayanthi political lifechikkaballapurajayanthikannada actresskannada cinemakoratagere
P K Channakrishna

P K Channakrishna

www.cknewsnow.com ಪ್ರಧಾನ ಸಂಪಾದಕ ಮತ್ತು ಸಂಸ್ಥಾಪಕ. ಪ್ರಿಂಟ್‌ ಮೀಡಿಯಾದಲ್ಲಿ 3 ದಶಕದಷ್ಟು ಸುದೀರ್ಘ ಅನುಭವ. ರಾಜಕೀಯ, ಕೃಷಿ, ಸಿನಿಮಾ, ಸಂಗೀತ, ಫೊಟೋಗ್ರಫಿ, ಪ್ರವಾಸ, ಸೋಶಿಯಲ್‌ ಮೀಡಿಯಾದಲ್ಲಿ ಆಸಕ್ತಿ. ಓದು ಅಚ್ಚುಮೆಚ್ಚು.

Related Posts

ಚಿಕ್ಕಬಳ್ಳಾಪುರಕ್ಕೆ ಬಜೆಟ್’ನಲ್ಲಿ ವಿಶೇಷ ಪ್ರಾಧಾನ್ಯತೆ ನೀಡಲು ಶ್ರಮಿಸಿದ ಸಂಸದ ಡಾ.ಕೆ.ಸುಧಾಕರ್

ಚಿಕ್ಕಬಳ್ಳಾಪುರಕ್ಕೆ ಬಜೆಟ್’ನಲ್ಲಿ ವಿಶೇಷ ಪ್ರಾಧಾನ್ಯತೆ ನೀಡಲು ಶ್ರಮಿಸಿದ ಸಂಸದ ಡಾ.ಕೆ.ಸುಧಾಕರ್

by cknewsnow desk
July 23, 2024
0

ಸಂಸದರಿಗೆ ಅಭಿನಂದನೆ ಸಲ್ಲಿಸಿದ ಆರ್.ಮಿಥುನ್ ರೆಡ್ಡಿ; ಹೈದರಾಬಾದ್‌-ಬೆಂಗಳೂರು ಕೈಗಾರಿಕಾ ಕಾರಿಡಾರ್‌ ನಿಂದ ಬಾಗೇಪಲ್ಲಿಗೆ ಹೆಚ್ಚು ಅನುಕೂಲ

ಬಾಗೇಪಲ್ಲಿಯಲ್ಲಿ ಗುರುಪೂರ್ಣಿಮೆ

ಬಾಗೇಪಲ್ಲಿಯಲ್ಲಿ ಗುರುಪೂರ್ಣಿಮೆ

by cknewsnow desk
July 23, 2024
0

ಶ್ರೀ ಯೋಗಿನಾರೇಯಣ ಬಲಿಜ ಟ್ರಸ್ಟ್ ವತಿಯಿಂದ ಆಚರಣೆ

ಪ್ರಕಾಶ್ ರೈ ಸಂಸ್ಥೆಗೆ ಸರಕಾರದ ಹಣ; ದಾರಿ ತಪ್ಪಿದ ಕಲಾವಿದ ಎಂದು ಕುಟುಕಿದ JDS

ಪ್ರಕಾಶ್ ರೈ ಸಂಸ್ಥೆಗೆ ಸರಕಾರದ ಹಣ; ದಾರಿ ತಪ್ಪಿದ ಕಲಾವಿದ ಎಂದು ಕುಟುಕಿದ JDS

by cknewsnow desk
April 16, 2024
0

ಕುಮಾರಸ್ವಾಮಿ ಅವರನ್ನು ದಾರಿ ತಪ್ಪಿದ ಮಗ ಎಂದ ನಟನಿಗೆ ತಿರುಗೇಟು ಕೊಟ್ಟ ದಳ

ಡಾ.ಕೆ.ಸುಧಾಕರ್ ಅವರಿಗೆ ಬೆಂಬಲ ಘೋಷಿಸಿದ ಮಿಥುನ್ ರೆಡ್ಡಿ

ಡಾ.ಕೆ.ಸುಧಾಕರ್ ಅವರಿಗೆ ಬೆಂಬಲ ಘೋಷಿಸಿದ ಮಿಥುನ್ ರೆಡ್ಡಿ

by cknewsnow desk
April 14, 2024
0

ಎನ್'ಡಿಎ ಅಭ್ಯರ್ಥಿ ಡಾ.ಕೆ ಸುಧಾಕರ್ ಗೆಲ್ಲಿಸುವುದೇ ನಮ್ಮ ಗುರಿ

ದ್ವಿತೀಯ ಪಿಯುಸಿ ಫಲಿತಾಂಶ; ಗುಡಿಬಂಡೆ ಕಾಲೇಜ್ ಉತ್ತಮ ಸಾಧನೆ

ದ್ವಿತೀಯ ಪಿಯುಸಿ ಫಲಿತಾಂಶ; ಗುಡಿಬಂಡೆ ಕಾಲೇಜ್ ಉತ್ತಮ ಸಾಧನೆ

by cknewsnow desk
April 10, 2024
0

ವಿಜ್ಞಾನ ವಿಭಾಗದಲ್ಲಿ ಶೇ.79 ಫಲಿತಾಂಶ

ದೇಶಕ್ಕೆ ಭಷ್ಟಾಚಾರಕ್ಕಿಂತ ವಾತಾವರಣ ಬದಲಾವಣೆಯಿಂದ ಭಾರೀ ನಷ್ಟವಾಗುತ್ತಿದೆ: ಪ್ರೊ.ಸುರೇಶ್

ದೇಶಕ್ಕೆ ಭಷ್ಟಾಚಾರಕ್ಕಿಂತ ವಾತಾವರಣ ಬದಲಾವಣೆಯಿಂದ ಭಾರೀ ನಷ್ಟವಾಗುತ್ತಿದೆ: ಪ್ರೊ.ಸುರೇಶ್

by cknewsnow desk
April 9, 2024
0

ರಣಬಿಸಿಲನ್ನು ತಡೆಯುವ ಶಕ್ತಿ ಕೇವಲ ಮರಗಿಡಗಳಿಗೆ ಮಾತ್ರ ಇದೆ

Next Post
ಅನ್‌ಲಾಕ್‌ ಆದ ಮೇಲೆ ಹೆಚ್ಚುತ್ತಿದೆ ಅಪರಾಧ: ಗೃಹ ಸಚಿವ ಬೊಮ್ಮಾಯಿ

ಬಸವರಾಜ ಸೋಮಪ್ಪ ಬೊಮ್ಮಾಯಿ ಹೊಸ ಮುಖ್ಯಮಂತ್ರಿ

Leave a Reply Cancel reply

Your email address will not be published. Required fields are marked *

Recommended

ದಾಖಲೆ ಸಲ್ಲಿಸಲು ಪೂರೈಕೆ ಕಂಪನಿಗಳ ಮೀನಾ-ಮೇಷ; ತಯಾರಿಕೆ ಕಂಪನಿಗಳಿಂದಲೇ ನೇರವಾಗಿ ವ್ಯಾಕ್ಸಿನ್  ಖರೀದಿಗೆ ಮುಂದಾದ ಸರಕಾರ

ಕಾಲೇಜು ವಿದ್ಯಾರ್ಥಿಗಳಿಗೆ ಜುಲೈ ತಿಂಗಳಲ್ಲಿ ಲಸಿಕೆ: ಶೀಘ್ರ ತರಗತಿಗಳ ಆರಂಭಕ್ಕೆ ಚಿಂತನೆ ಎಂದ ಡಿಸಿಎಂ

5 years ago
ಯಡಿಯೂರಪ್ಪ ಅವರಿಂದ ಎಷ್ಟು ಸೂಟ್ ಕೇಸ್ ತೆಗೆದುಕೊಂಡಿರಿ ಸಿದ್ದರಾಮಯ್ಯ?

ಮೇಲ್ಮನೆ ಚುನಾವಣೆ ಮೈತ್ರಿ ವಿಚಾರ, ಭಾನುವಾರದೊಳಗೆ ನಿರ್ಧಾರ

4 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ