• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home EDITORS'S PICKS

ಬಸವರಾಜ ಸೋಮಪ್ಪ ಬೊಮ್ಮಾಯಿ ಹೊಸ ಮುಖ್ಯಮಂತ್ರಿ

P K Channakrishna by P K Channakrishna
July 27, 2021
in EDITORS'S PICKS, POLITICS, STATE
Reading Time: 1 min read
0
ಅನ್‌ಲಾಕ್‌ ಆದ ಮೇಲೆ ಹೆಚ್ಚುತ್ತಿದೆ ಅಪರಾಧ: ಗೃಹ ಸಚಿವ ಬೊಮ್ಮಾಯಿ
1.2k
VIEWS
FacebookTwitterWhatsuplinkedinEmail

ಬೆಂಗಳೂರು: ಬಿ.ಎಸ್.‌ಯಡಿಯೂರಪ್ಪ ಅವರಿಂದ ತೆರವಾಗಿರುವ ಮುಖ್ಯಮಂತ್ರಿ ಸ್ಥಾನಕ್ಕೆ ಗೃಹ ಸಚಿವರಾಗಿದ್ದ ಬಸವರಾಜ ಬೊಮ್ಮಾಯಿ ನೆಮಕವಾಗುವ ಸಾಧ್ಯತೆ ಇದೆ.

ಸ್ವತಃ ಯಡಿಯೂರಪ್ಪ ಅವರ ಅತ್ಯಂತ ನಂಬಿಕಸ್ಥರೂ ಆಗಿರುವ ಬೊಮ್ಮಾಯಿ ಅವರ ಹೆಸರನ್ನು ವರಿಷ್ಠರು ಫೈನಲ್‌ ಮಾಡಿದ್ದು, ಸಂಜೆ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯ ನಂತರ ವೀಕ್ಷಕರು ಘೋಷಣೆ ಮಾಡುವ ನಿರೀಕ್ಷೆ ಇದೆ.

ಮಾಜಿ ಮುಖ್ಯಮಂತ್ರಿ ಎಸ್.‌ಆರ್.‌ ಬೊಮ್ಮಾಯಿ ಅವರ ಪುತ್ರರಾಗಿರುವ ಬಸವರಾಜ ಬೊಮ್ಮಾಯಿ, ಕಳೆದ ಎರಡು ವರ್ಷಗಳಿಂದ ಗೃಹ ಸಚಿವರಾಗಿ ಕೆಲಸ ಮಾಡಿದ್ದರು. ಕೆಲ ದಿನಗಳ ಹಿಂದೆ ಸಂಪುಟ ವಿಸ್ತರಣೆ ಮಾಡಿದಾಗ ಖಾತೆಗಳ ಮರು ಹಂಚಿಕೆಯಾಗಿ ಕಾನೂನು ಮತ್ತು ಸಂದೀಯ ವ್ಯವಹಾರಗಳ ಖಾತೆಯನ್ನೂ ಬೊಮ್ಮಾಯಿ ಅವರಿಗೆ ವಹಿಸಲಾಗಿತ್ತು.

ಸೋಮವಾರ ಮುಖ್ಯಮಂತ್ರಿ ಸ್ಥಾನಕ್ಕೆ ಯಡಿಯೂರಪ್ಪ ರಾಜೀನಾಮೆ ನೀಡಿದ ನಂತರ ಸುಮಾರು ಒಂಭತ್ತು ಹೆಸರುಗಳು ಮುಖ್ಯಮಂತ್ರಿ ಗಾದಿಗೆ ಕೇಳಿ ಬಂದಿದ್ದವು. ಒಕ್ಕಲಿಗರ ಕೋಟಾದಲ್ಲಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ, ಸಿಟಿ ರವಿ, ಆರ್‌.ಅಶೋಕ್‌ ಮತ್ತು ಬ್ರಾಹ್ಮಣರ ಲೆಕ್ಕದಲ್ಲಿ ಪ್ರಹ್ಲಾದ ಜೋಶಿ, ಬಿ.ಎಲ್‌. ಸಂತೋಷ್‌, ವಿಶ್ವೇಶ್ವರ ಹೆಗಡೆ ಕಾಗೇರಿ ಹಾಗೂ ವೀರಶೈವ ಲಿಂಗಾಯತರ ಕೋಟಾದಲ್ಲಿ ಅರವಿಂದ್‌ ಬೆಲ್ಲದ, ಮುರುಗೇಶ್‌ ನಿರಾಣಿ, ಬಸವರಾಜ ಬೊಮ್ಮಾಯಿ ಹೆಸರುಗಳಿದ್ದವು. ಫೈನಲ್ಲಾಗಿ ಬಸವರಾಜ ಬೊಮ್ಮಾಯಿ ಅವರ ಹೆಸರನ್ನು ಹೈಕಮಾಂಡ್‌ ಅಂತಿಮಗೊಳಿಸಿದೆ ಎಂದು ಖಚಿತ ಮೂಲಗಳಿಂದ ಗೊತ್ತಾಗಿದೆ.

ಬೆಳಗ್ಗೆಯೆಲ್ಲ ಮಾಧ್ಯಮಗಳ ಜತೆ ಸ್ವತಃ ಮಾತನಾಡಿದ್ದ ಬೊಮ್ಮಾಯಿ, “ಇನ್ನು ಮೂರ್ನಾಲ್ಕು ದಿನಗಳಲ್ಲಿ ಹೊಸ ಮುಖ್ಯಮಂತ್ರಿ ಆಯ್ಕೆ ಆಗಬಹುದು” ಎಂದು ಮಾರ್ಮಿಕವಾಗಿ ನುಡಿದಿದ್ದರು. ರೇಸಿನ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯಲ್ಲ ಎಂದು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಅವರು ಮುಗುಮ್ಮಾಗಿ ನಕ್ಕಿದ್ದು ಬಿಟ್ಟರೆ ಬೇರೆ ಯಾವ ಪ್ರತಿಕ್ರಿಯೆಯನ್ನೂ ನೀಡಲಿಲ್ಲ. ಅಲ್ಲದೆ, ಮುಖ್ಯಮಂತ್ರಿ ಸ್ಥಾನಕ್ಕೆ ತಾವೂ ಆಕಾಂಕ್ಷಿ ಎಂದಾಗಲಿ ಅಥವಾ ವೀರಶೈವ ಲಿಂಗಾಯತ ಕೋಟಾದಲ್ಲಿ ನನ್ನನ್ನೂ ಸಿಎಂ ಮಾಡಿ ಎಂದು ಅವರು ಎಲ್ಲೂ ಕ್ಲೈಮ್‌ ಮಾಡಲಿಲ್ಲ. ಆದರೆ, ಅಂತಿಮವಾಗಿ ಅವರ ಹೆಸರೇ ಘೋಷಣೆ ಆಗುವ ಸಾಧ್ಯತೆ ಇದೆ.

ಮುಖ್ಯಮಂತ್ರಿ ಸ್ಥಾನಕ್ಕೆ ನಾನು ಯಾರ ಹೆಸರೂ ಸೂಚಿಸುವುದಿಲ್ಲ ಎಂದು ಹೇಳುತ್ತಲೇ ಯಡಿಯೂರಪ್ಪ ಅವರು ವರಿಷ್ಠರನ್ನು ಒಪ್ಪಿಸಿ ಬೊಮ್ಮಾಯಿ ಹೆಸರನ್ನೇ ಫೈನಲ್‌ ಮಾಡಿಸಿದರಾ ಎಂಬ ಅಂಶವೂ ಜೋರಾಗಿ ಚರ್ಚೆ ಆಗುತ್ತಿದೆ.

ಬೊಮ್ಮಾಯಿ ಪರಿಚಯ

ಮಾಜಿ ಮುಖ್ಯಮಂತ್ರಿ ಎಸ್‌.ಆರ್‌. ಬೊಮ್ಮಾಯಿ ಅವರ ಪುತ್ರರಾಗಿರುವ ಬಸವರಾಜ ಬೊಮ್ಮಾಯಿ ಅವರು ಶಿಗ್ಗಾವಿ ಶಾಸಕರು. ಹುಟ್ಟಿದ್ದು 28 ಜನವರಿ 1960ರಂದು. ಮೂಲತಃ ಮೆಕಾನಿಕಲ್‌ ಎಂಜಿನಿಯರ್‌ ಆಗಿರುವ ಅವರು ಜನತಾದಳ ಮೂಲಕ ತಮ್ಮ ರಾಜಕೀಯ ಜೀವನ ಆರಂಭಿಸಿದ್ದರು. 1998 ಮತ್ತು 2004ರಲ್ಲಿ ಎರಡು ಅವಧಿಗಳಿಗೆ ಅವರು ಸಂಯುಕ್ತ ಜನತಾದಳದಿಂದ ವಿಧಾನ ಪರಿಷತ್‌ ಸದಸ್ಯರಾಗಿದ್ದರು. ಮಾಜಿ ಮುಖ್ಯಮಂತ್ರಿ ಜೆ.ಎಚ್.‌ಪಟೇಲರ ರಾಜಕೀಯ ಕಾರ್ಯದರ್ಶಿಯಾಗಿಯೂ ಅವರು ಕೆಲಸ ಮಾಡಿದ್ದರು. 2008ರಲ್ಲಿ ಬಿಜೆಪಿ ಸೇರಿದ ಅವರು ಯಡಿಯೂರಪ್ಪ ಅವರ ಕಟ್ಟಾ ಬೆಂಬಲಿಗರಾಗಿ ಗುರುತಿಸಿಕೊಂಡಿದ್ದರು. ಬಳಿಕ ಅವರು ಬಿಜೆಪಿ ಸರಕಾರದಲ್ಲಿ ಜಲ ಸಂಪನ್ಮೂಲ ಹಾಗೂ ಸಹಕಾರ ಖಾತೆಗಳನ್ನು ನಿಭಾಯಿಸಿದ್ದರು. ಈವೆರೆಗೆ ಗೃಹ ಸಚಿವರಾಗಿದ್ದ ಅವರು ಹಾವೇರಿ ಮತ್ತು ಉಡುಪಿ ಜಿಲ್ಲೆಗಳ ಉಸ್ತುವಾರಿ ಸಚಿವರೂ ಆಗಿದ್ದರು.

ಏಳು ಗಂಟೆಗೆ ಬಿಜೆಪಿ ಶಾಸಕಾಂಗ ಪಕ್ಷದ ಸಭೆ

ಇಂದು ಸಂಜೆ ಏಳೂವರೆ ಗಂಟೆಗೆ ರಾಜಭವನ ರಸ್ತೆಯಲ್ಲಿರುವ ಕ್ಯಾಪಿಟಲ್ ಹೋಟೆಲ್‌ನಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯನ್ನು ಕರೆಯಲಾಗಿದೆ. ಈ ಸಭೆಯಲ್ಲಿ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್‌ ಸಿಂಗ್‌ ಹಾಗೂ ವೀಕ್ಷಕರಗಿ ಬರುತ್ತಿರುವ ಧರ್ಮೇಂದ್ರ ಪ್ರಧಾನ್‌, ಕಿಶನ್‌ ರೆಡ್ಡಿ ಅವರು ಶಾಸಕರ ಅಭಿಪ್ರಾಯ ಆಲಿಸಲಿದ್ದಾರೆ.

ಎಲ್ಲ ಶಾಸಕರಿಗೂ ಬೆಂಗಳೂರಿನಲೇ ಇರುವಂತೆ ಪಕ್ಷದಿಂದ ಸೂಚನೆ ಹೋಗಿದ್ದು, ಎಲ್ಲ ಶಾಸಕರಿಗೆ ಎಸ್ಎಂಎಸ್‌ ಮೂಲಕ ಮಾಹಿತಿ ಹೋಗಿದೆ. ಬಿಜೆಪಿಯ ಬಹುತೇಕ ಶಾಸಕರು ಈಗ ಬೆಂಗಳೂರಿನಲ್ಲೇ ಇದ್ದು, ಹೊರಗಿರುವ ಶಾಸಕರು ಸಂಜೆ ವೇಳೆಗೆ ರಾಜಧಾನಿ ಸೇರಿಕೊಳ್ಳಲಿದ್ದಾರೆ.

Tags: basavaraj bommaibjpbs yediyurappakarnatakanew chief ministerPoliticssr bommai
P K Channakrishna

P K Channakrishna

www.cknewsnow.com ಪ್ರಧಾನ ಸಂಪಾದಕ ಮತ್ತು ಸಂಸ್ಥಾಪಕ. ಪ್ರಿಂಟ್‌ ಮೀಡಿಯಾದಲ್ಲಿ 3 ದಶಕದಷ್ಟು ಸುದೀರ್ಘ ಅನುಭವ. ರಾಜಕೀಯ, ಕೃಷಿ, ಸಿನಿಮಾ, ಸಂಗೀತ, ಫೊಟೋಗ್ರಫಿ, ಪ್ರವಾಸ, ಸೋಶಿಯಲ್‌ ಮೀಡಿಯಾದಲ್ಲಿ ಆಸಕ್ತಿ. ಓದು ಅಚ್ಚುಮೆಚ್ಚು.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಲಾಕ್‌ಡೌನ್‌ ರೀತಿಯಲ್ಲೇ ವೀಕೆಂಡ್‌ ಕರ್ಫ್ಯೂ; ಅನವಶ್ಯಕವಾಗಿ ಹೊರಗಿನಿಂದ  ಬೆಂಗಳೂರಿಗೆ ಬರುವವರನ್ನು ನಿರ್ಬಂಧಿಸಲು  ಪೊಲೀಸರಿಗೆ ಸೂಚನೆ ಕೊಟ್ಟ ಬೊಮ್ಮಾಯಿ

ಪಕ್ಷ ನಿಷ್ಠೆ, ತಾಳ್ಮೆ & ಜ್ಞಾನಕ್ಕೆ ಮನ್ನಣೆ; ಬಸವರಾಜ ಬೊಮ್ಮಾಯಿ ಹೊಸ ಸಿಎಂ

Leave a Reply Cancel reply

Your email address will not be published. Required fields are marked *

Recommended

ಚಿಕ್ಕಬಳ್ಳಾಪುರದಲ್ಲಿ ಅತ್ಯುತ್ತಮ ದರ್ಜೆಯ ಮಾದರಿ ಗೋಶಾಲೆ; ರಾಜ್ಯದಲ್ಲೇ ಮೊದಲು

ಚಿಕ್ಕಬಳ್ಳಾಪುರದಲ್ಲಿ ಅತ್ಯುತ್ತಮ ದರ್ಜೆಯ ಮಾದರಿ ಗೋಶಾಲೆ; ರಾಜ್ಯದಲ್ಲೇ ಮೊದಲು

5 years ago
ಸಿಎಂ ಎದುರೇ ಫೈಟ್! ಮುಖ್ಯಮಂತ್ರಿಗೆ ಕಪ್ಪುಬಟ್ಟೆ ಪ್ರದರ್ಶನ

ಸಿಎಂ ಎದುರೇ ಫೈಟ್! ಮುಖ್ಯಮಂತ್ರಿಗೆ ಕಪ್ಪುಬಟ್ಟೆ ಪ್ರದರ್ಶನ

4 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ