• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS NATION

ಪಕ್ಷ ನಿಷ್ಠೆ, ತಾಳ್ಮೆ & ಜ್ಞಾನಕ್ಕೆ ಮನ್ನಣೆ; ಬಸವರಾಜ ಬೊಮ್ಮಾಯಿ ಹೊಸ ಸಿಎಂ

P K Channakrishna by P K Channakrishna
July 31, 2021
in NATION, POLITICS, STATE
Reading Time: 1 min read
0
ಲಾಕ್‌ಡೌನ್‌ ರೀತಿಯಲ್ಲೇ ವೀಕೆಂಡ್‌ ಕರ್ಫ್ಯೂ; ಅನವಶ್ಯಕವಾಗಿ ಹೊರಗಿನಿಂದ  ಬೆಂಗಳೂರಿಗೆ ಬರುವವರನ್ನು ನಿರ್ಬಂಧಿಸಲು  ಪೊಲೀಸರಿಗೆ ಸೂಚನೆ ಕೊಟ್ಟ ಬೊಮ್ಮಾಯಿ
989
VIEWS
FacebookTwitterWhatsuplinkedinEmail

ಬಿಜೆಪಿ ಶಾಸಕಾಂಗ ಪಕ್ಷ ಸಭೆಯಲ್ಲಿ ಆಯ್ಕೆ; ವೀಕ್ಷಕರ ಸಮ್ಮುಖದಲ್ಲಿ ಸರ್ವಸಮ್ಮತ ಆಯ್ಕೆ

ಬೆಂಗಳೂರು: ಬಿಜೆಪಿ ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ ಎಸ್.‌ಆರ್.ಬೊಮ್ಮಾಯಿ ಅವರ ಪುತ್ರ ಬಸವರಾಜ ಬೊಮ್ಮಾಯಿ ಅವರು ಭಾರತೀಯ ಜನತಾ ಪಕ್ಷದ ಶಾಸಕಾಂಗ ಪಕ್ಷದ ನೂತನ ನಾಯಕರಾಗಿ ಆಯ್ಕೆಯಾಗಿದ್ದಾರೆ.

ಬೆಂಗಳೂರಿನ ಕ್ಯಾಪಿಟಲ್‌ ಹೋಟೆಲ್‌ನಲ್ಲಿ ನಡೆದ ಹೈವೋಲ್ಟೇಜ್‌ ಸಭೆಯಲ್ಲಿ ದಿಲ್ಲಿಯಿಂದ ಬಂದಿದ್ದ ವೀಕ್ಷಕರ ಸಮ್ಮುಖದಲ್ಲಿ ಬೊಮ್ಮಾಯಿ ಅವರ ಆಯ್ಕೆಯನ್ನು ಘೋಷಣೆ ಮಾಡಲಾಯಿತು. ದಿಲ್ಲಿಯಿಂದ ಕೇಂದ್ರ ಸಚಿವರಾದ ಧರ್ಮೇಂದ್ರ ಪ್ರಧಾನ್‌ ಹಾಗೂ ಕಿಶನ್‌ ರೆಡ್ಡಿ ಅವರು ವೀಕ್ಷಕರಾಗಿ ಬಂದಿದ್ದರು. ಜತೆಗೆ, ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್‌ ಸಿಂಗ್‌ ಕೂಡ ಇದ್ದರು. ಜತೆಗೆ, ಸಹ ಉಸ್ತುವಾರಿ ಡಿ.ಕೆ.ಅರುಣಾ ಅವರು ಇದ್ದರು.

ಬಿ.ಎಸ್.‌ಯಡಿಯೂರಪ್ಪ ಅವರು ಸೋಮವಾರ ರಾಜೀನಾಮೆ ನೀಡಿದ ಹಿನ್ನೆಲೆ ಉತ್ತರ ಕರ್ನಾಟಕದ ಲಿಂಗಾಯತ ನಾಯಕನಿಗೆ ಅದೃಷ್ಟ ಖುಲಾಯಿಸಿದ್ದು, ಅವರು ರಾಜ್ಯದ 30ನೇ ಮುಖ್ಯಮಂತ್ರಿಯಾಗಿ ಪ್ರಮಾಣ ಸ್ವೀಕಾರ ಮಾಡಲಿದ್ದಾರೆ.

ಯಡಿಯೂರಪ್ಪ ಅವರು ಬೊಮ್ಮಾಯಿ ಅವರ ಹೆಸರನ್ನು ಮಂಡಿಸಿದರು. ಅದನ್ನು ಮಾಜಿ ಡಿಸಿಎಂ ಗೋವಿಂದ ಕಾರಜೋಳ ಅನುಮೋದಿಸಿದರು. ಇದರೊಂದಿಗೆ ಸಿಎಂ ರೇಸಿನಲ್ಲಿದ್ದ ಎಲ್ಲರ ಹೆಸರುಗಳನ್ನು ಹಿಂದಿಕ್ಕಿ ಮುನ್ನೆಲೆಗೆ ಬಂದರು.

ಬೊಮ್ಮಾಯಿ ಅವರು ಬುಧವಾರ ಮಧ್ಯಾಹ್ನ ಪ್ರಮಾಣ ಸೀಕಾರ ಮಾಡುವ ಸಾಧ್ಯತೆ ಇದ್ದು. ಒಂದು ವರ್ಷ ಹತ್ತು ತಿಂಗಳ ಕಾಲ ಅವರು ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರಿಯಲಿದ್ದಾರೆ.

ಅಂದಹಾಗೆ ಬೊಮ್ಮಾಯಿ ಅವರ ತಂದೆ ಎಸ್.‌ಆರ್.‌ಬೊಮ್ಮಾಯಿ ಅವರು 13 ಆಗಸ್ಟ್ 1988 ರಿಂದ 21 ಏಪ್ರಿಲ್ 1989ರವರೆಗೆ ರಾಜ್ಯದ 11ನೇ ಮುಖ್ಯಮಂತ್ರಿ ಆಗಿದ್ದರು. ಆದರೆ ಅವರ ಸರಕಾರಕ್ಕೆ ಕೆಲ ಶಾಸಕರು ಕೈಕೊಟ್ಟರು. ನಂತರ ರಾಜ್ಯಪಾಲರು ಅವರ ಸರಕಾರವನ್ನು ವಜಾ ಮಾಡಿದ್ದರು

ಬೊಮ್ಮಾಯಿ ಆಯ್ಕೆ ಐತಿಹಾಸಿಕ

ರಾಜ್ಯದಲ್ಲಿ ಮುಖ್ಯಮಂತ್ರಿ ಆಗಿದ್ದವರೊಬ್ಬರ ಪುತ್ರರು ಸಿಎಂ ಆಗಿದ್ದು ದೇವೇಗೌಡ ಕುಟುಂಬದಲ್ಲಿ ಮಾತ್ರ ನಡೆದಿದೆ. 1994ರಲ್ಲಿ ದೇವೇಗೌಡರು ಮತ್ತು 2006ರಲ್ಲಿ ಎಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿ ಆಗುವ ಮೂಲಕ ತಂದೆ-ಮಗ ಇಬ್ಬರು ರಾಜ್ಯದ ಸಿಎಂಗಳಾದ ದಾಖಲೆ ಇತ್ತು. ಈಗ ಆ ಸಾಲಿಗೆ ಬಸವರಾಜ ಬೊಮ್ಮಾಯಿ ಅವರು ಸೇರ್ಪಡೆಯಾಗುತ್ತಿದ್ದಾರೆ. ಇದೊಂದು ಐತಿಹಾಸಿಕ ಘಟನೆಯಾಗಿದೆ.

ಮೆಕಾನಿಕಲ್‌ ಎಂಜಿನಿಯರ್‌, ಲಾ ಎಕ್ಸ್‌ಪರ್ಟ್‌

ಮಾಜಿ ಮುಖ್ಯಮಂತ್ರಿ ಎಸ್‌.ಆರ್‌. ಬೊಮ್ಮಾಯಿ ಅವರ ಪುತ್ರರಾಗಿರುವ ಬಸವರಾಜ ಬೊಮ್ಮಾಯಿ ಅವರು ಶಿಗ್ಗಾವಿ ಶಾಸಕರು. ಹುಟ್ಟಿದ್ದು 28 ಜನವರಿ 1960ರಂದು. ಮೂಲತಃ ಮೆಕಾನಿಕಲ್‌ ಎಂಜಿನಿಯರ್‌ ಆಗಿರುವ ಅವರು ಜನತಾದಳ ಮೂಲಕ ತಮ್ಮ ರಾಜಕೀಯ ಜೀವನ ಆರಂಭಿಸಿದ್ದರು. 1998 ಮತ್ತು 2004ರಲ್ಲಿ ಎರಡು ಅವಧಿಗಳಿಗೆ ಅವರು ಸಂಯುಕ್ತ ಜನತಾದಳದಿಂದ ವಿಧಾನ ಪರಿಷತ್‌ ಸದಸ್ಯರಾಗಿದ್ದರು. ಮಾಜಿ ಮುಖ್ಯಮಂತ್ರಿ ಜೆ.ಎಚ್.‌ಪಟೇಲರ ರಾಜಕೀಯ ಕಾರ್ಯದರ್ಶಿಯಾಗಿಯೂ ಅವರು ಕೆಲಸ ಮಾಡಿದ್ದರು. 2008ರಲ್ಲಿ ಬಿಜೆಪಿ ಸೇರಿದ ಅವರು ಯಡಿಯೂರಪ್ಪ ಅವರ ಕಟ್ಟಾ ಬೆಂಬಲಿಗರಾಗಿ ಗುರುತಿಸಿಕೊಂಡಿದ್ದರು. ಬಳಿಕ ಅವರು ಬಿಜೆಪಿ ಸರಕಾರದಲ್ಲಿ ಜಲ ಸಂಪನ್ಮೂಲ ಹಾಗೂ ಸಹಕಾರ ಖಾತೆಗಳನ್ನು ನಿಭಾಯಿಸಿದ್ದರು. ಈವೆರೆಗೆ ಗೃಹ ಸಚಿವರಾಗಿದ್ದ ಅವರು ಹಾವೇರಿ ಮತ್ತು ಉಡುಪಿ ಜಿಲ್ಲೆಗಳ ಉಸ್ತುವಾರಿ ಸಚಿವರೂ ಆಗಿದ್ದರು.

Tags: basavaraj bommaibjpbs yediyurappakarnatakanew chief minister
P K Channakrishna

P K Channakrishna

www.cknewsnow.com ಪ್ರಧಾನ ಸಂಪಾದಕ ಮತ್ತು ಸಂಸ್ಥಾಪಕ. ಪ್ರಿಂಟ್‌ ಮೀಡಿಯಾದಲ್ಲಿ 3 ದಶಕದಷ್ಟು ಸುದೀರ್ಘ ಅನುಭವ. ರಾಜಕೀಯ, ಕೃಷಿ, ಸಿನಿಮಾ, ಸಂಗೀತ, ಫೊಟೋಗ್ರಫಿ, ಪ್ರವಾಸ, ಸೋಶಿಯಲ್‌ ಮೀಡಿಯಾದಲ್ಲಿ ಆಸಕ್ತಿ. ಓದು ಅಚ್ಚುಮೆಚ್ಚು.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಬೊಮ್ಮಾಯಿ ಎದುರು ಬೆಟ್ಟದಷ್ಟು ಸವಾಲು

ಬೊಮ್ಮಾಯಿ ಎದುರು ಬೆಟ್ಟದಷ್ಟು ಸವಾಲು

Leave a Reply Cancel reply

Your email address will not be published. Required fields are marked *

Recommended

ಚುನಾವಣಾ ವ್ಯವಸ್ಥೆಗೆ ಸುಪ್ರೀಂ ಚಿಕಿತ್ಸೆ

ಚುನಾವಣಾ ವ್ಯವಸ್ಥೆಗೆ ಸುಪ್ರೀಂ ಚಿಕಿತ್ಸೆ

5 years ago
ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಅವಕಾಶ ಇಲ್ಲ

ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಅವಕಾಶ ಇಲ್ಲ

4 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ