• About
  • Advertise
  • Careers
  • Contact
Sunday, May 18, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home EDITORS'S PICKS

ಅಖಿಲ ಭಾರತ ಕೋಟಾ: MBBS ಸೇರಿ ವೈದ್ಯ ಕೋರ್ಸುಗಳಲ್ಲಿ ಒಬಿಸಿಗೆ 27%, ಆರ್ಥಿಕ ದುರ್ಬಲರಿಗೆ 10% ಮೀಸಲು

cknewsnow desk by cknewsnow desk
July 29, 2021
in EDITORS'S PICKS, NATION
Reading Time: 1 min read
0
ಅಖಿಲ ಭಾರತ ಕೋಟಾ: MBBS ಸೇರಿ ವೈದ್ಯ ಕೋರ್ಸುಗಳಲ್ಲಿ ಒಬಿಸಿಗೆ 27%, ಆರ್ಥಿಕ ದುರ್ಬಲರಿಗೆ 10% ಮೀಸಲು
948
VIEWS
FacebookTwitterWhatsuplinkedinEmail

ನವದೆಹಲಿ: ಪ್ರಸಕ್ತ ಶೈಕ್ಷಣಿಕ ವರ್ಷ (2021-22) ದಿಂದ ಅಖಿಲ ಭಾರತ ಕೋಟಾದಡಿ (AIQ) ಪದವಿಪೂರ್ವ ಮತ್ತು ಸ್ನಾತಕೋತ್ತರ ವೈದ್ಯಕೀಯ/ದಂತ ವೈದ್ಯಕೀಯ (ಎಂ.ಬಿ.ಬಿ.ಎಸ್/ಎಂಡಿ/ಡಿಪ್ಲೊಮ/ಬಿಡಿಎಸ್/ಎಂ.ಡಿ.ಎಸ್)  ಕೋರ್ಸ್ʼಗಳಿಗೆ ಒಬಿಸಿ 27% ಮತ್ತು ಆರ್ಥಿಕವಾಗಿ ಹಿಂದುಳಿದವರಿಗೆ 10% ಮೀಸಲಾತಿ ಕಲ್ಪಿಸುವ ಮಹತ್ವದ ನಿರ್ಧಾರವನ್ನು ಕೇಂದ್ರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಕೈಗೊಂಡಿದೆ. 

2021ರ ಜುಲೈ 26 (ಸೋಮವಾರ) ರಂದು ಪ್ರಧಾನಮಂತ್ರಿ ಮೋದಿ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ದೀರ್ಘಕಾಲದಿಂದ ಬಾಕಿ ಉಳಿದಿರುವ ವಿಷಯಗಳಿಗೆ ಪರಿಣಾಮಕಾರಿಯಾಗಿ ಪರಿಹಾರ ಒದಗಿಸುವಂತೆ ನಿರ್ದೇಶನ ನೀಡಲಾಗಿತ್ತು. ಅದರಂತೆ ಈ ನಿರ್ಧಾರ ಕೈಗೊಳ್ಳಲಾಗಿದೆ.

ಈ ನಿರ್ಧಾರದಿಂದ ಪ್ರತಿವರ್ಷ 1500 ಮಂದಿ ಒಬಿಸಿಗಳಿಗೆ ಎಂ.ಬಿ.ಬಿ.ಎಸ್ ಮತ್ತು 2,500 ಒಬಿಸಿ ವಿದ್ಯಾರ್ಥಿಗಳಿಗೆ ಸ್ನಾತಕೋತ್ತರ ಹಾಗೂ 550 ಆರ್ಥಿಕವಾಗಿ ಹಿಂದುಳಿದ (EWS) ವಲಯದ ವಿದ್ಯಾರ್ಥಿಗಳಿಗೆ ಎಂ.ಬಿ.ಬಿ.ಎಸ್ ಮತ್ತು 1000 ಇ.ಡಬ್ಲ್ಯೂ.ಎಸ್ ವಿದ್ಯಾರ್ಥಿಗಳಿಗೆ ಸ್ನಾತಕೋತ್ತರ ಕೋರ್ಸ್ ಗಳಿಗೆ ಪ್ರವೇಶ ಪಡೆಯಲು ಸಾಧ್ಯವಾಗಲಿದೆ. 

ಅಖಿಲ ಭಾರತ ಕೋಟಾ (AIQ) ಕಾರ್ಯಕ್ರಮವನ್ನು 1986ರಲ್ಲಿ ಸುಪ್ರೀಂ ಕೋರ್ಟ್ ನಿರ್ದೇಶನದ ಮೇರೆಗೆ ಪರಿಚಯಿಸಲಾಯಿತು. ಯಾವುದೇ ರಾಜ್ಯದ ವಿದ್ಯಾರ್ಥಿಗಳಿಗೆ ಬೇರೆ ರಾಜ್ಯದಲ್ಲಿರುವ ಉತ್ತಮ ವೈದ್ಯಕೀಯ ಕಾಲೇಜುಗಳಲ್ಲಿ ವ್ಯಾಸಂಗ ಮಾಡುವ ಆಕಾಂಕ್ಷಿಗಳಿಗೆ ಅರ್ಹತೆ ಆಧಾರದ ಮೇಲೆ ಪ್ರವೇಶದ ಅವಕಾಶಗಳನ್ನು ಇದು ಒದಗಿಸುತ್ತದೆ. ಅಖಿಲ ಭಾರತ ಕೋಟಾದಡಿ ಪದವಿ ಪೂರ್ವ–ಯುಜಿ ಅಡಿ ಶೇ.15ರಷ್ಟು ಸೀಟುಗಳಿವೆ ಮತ್ತು ಸ್ನಾತಕೋತ್ತರದ ವೈದ್ಯಕೀಯ ವಲಯದಲ್ಲಿ ಶೇ.50ರಷ್ಟು ಸೀಟುಗಳು ದೊರೆಲಿವೆ.

ಆರಂಭಿಕವಾಗಿ 2007ರವರೆಗೆ ಎಐಕ್ಯೂ ವಲಯದಲ್ಲಿ ಮೀಸಲಾತಿ ಇರಲಿಲ್ಲ. 2007ರಲ್ಲಿ ಎಐಕ್ಯೂ ಕಾರ್ಯಕ್ರಮದಡಿ 15%  ಎಸ್.ಸಿಗಳು ಮತ್ತು 7.5% ಎಸ್.ಟಿ. ಮೀಸಲನ್ನು ಜಾರಿಗೊಳಿಸುವಂತೆ ಆದೇಶಿಸಿತು. ಕೇಂದ್ರೀಯ ಶಿಕ್ಷಣ ಸಂಸ್ಥೆಗಳಲ್ಲಿ ಒಬಿಸಿಗಳಿಗೆ 27% ಮೀಸಲಾತಿ ಜಾರಿಗೊಳಿಸುವ ಕೇಂದ್ರೀಯ ಶಿಕ್ಷಣ ಸಂಸ್ಥೆಗಳಲ್ಲಿ (ಪ್ರವೇಶದಲ್ಲಿ ಮೀಸಲಾತಿ) ಕಾಯ್ದೆ 2007ರಲ್ಲಿ ಜಾರಿಗೆ ಬಂತು. ಇದು ಸಪ್ದರ್ ಜಂಗ್ ಆಸ್ಪತ್ರೆಗಳು, ಲೇಡಿ ಹಾರ್ಡನಿಂಗ್ ವೈದ್ಯಕೀಯ ಕಾಲೇಜು, ಅಲಿಘರ್ ಮುಸ್ಲೀಂ ವಿಶ‍್ವವಿದ್ಯಾಲಯ ಮತ್ತು ಬನಾರಸ್ ಹಿಂದೂ ಯೂನಿವರ್ಸಿಟಿ ಮತ್ತಿತರೆ ಕಡೆಗಳಲ್ಲಿ ಜಾರಿಗೆ ತರಲಾಯಿತು. ಆದಾಗ್ಯೂ ಇದನ್ನು ರಾಜ್ಯ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕಾಲೇಜುಗಳಿಗೆ ವಿಸ್ತರಿಸಿಲ್ಲ. 

ಹಾಲಿ ಸರಕಾರ ಹಿಂದುಳಿದ ವರ್ಗವಷ್ಟೇ ಅಲ್ಲದೇ ಆರ್ಥಿಕವಾಗಿ ಹಿಂದುಳಿದ ವಲಯಕ್ಕೆ ಮೀಸಲು ಕಲ್ಪಿಸಲು ಬದ್ಧವಾಗಿದೆ. ಇದೀಗ ಕೇಂದ್ರ ಸರಕಾರ ಎಐಕ್ಯೂ ಕೋಟಾದಡಿ ಈ ವಲಯಕ್ಕೆ 10% ಮೀಸಲಾತಿ ಮತ್ತು ಒಬಿಸಿ ವಲಯಕ್ಕೆ 27% ಮೀಸಲಾತಿ ಕಲ್ಪಿಸುವ ಐತಿಹಾಸಿಕ ತೀರ್ಮಾನ ಕೈಗೊಂಡಿದೆ. ಎಐಕ್ಯೂ ಕಾರ್ಯಕ್ರಮದಡಿ ಯಾವುದೇ ರಾಜ್ಯದ ಒಬಿಸಿ ವಿದ್ಯಾರ್ಥಿಗಳು ಸ್ಪರ್ಧಾತ್ಮಕವಾಗಿ ಸೀಟುಗಳನ್ನು ಪಡೆಯಬಹುದಾಗಿದೆ. ಕೇಂದ್ರೀಯ ಯೋಜನೆಯಡಿ ಕೇಂದ್ರೀಯ ಪಟ್ಟಿಯಲ್ಲಿರುವ ಒಬಿಸಿಗಳು ಈ ಮೀಸಲಾತಿ ಸೌಲಭ್ಯವನ್ನು ಪಡೆಯಬಹುದಾಗಿದೆ. ಸುಮಾರು 1,500 ಒಬಿಸಿಗಳು ಎಂ.ಬಿ.ಬಿ.ಎಸ್ ಮತ್ತು 2,500 ಸ್ನಾತಕೋತ್ತರ ಕೋರ್ಸ್ʼಗಳ ಸೀಟುಗಳ ಸೌಲಭ್ಯ ಪಡೆಯಬಹುದಾಗಿದೆ.

ಆರ್ಥಿಕವಾಗಿ ಹಿಂದುಳಿದ ವರ್ಗಕ್ಕೆ ಸೇರಿದ ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಸಂಸ್ಥೆಗಳಲ್ಲೂ ಪ್ರವೇಶ ಪಡೆಯಬಹುದು. ಇದಕ್ಕಾಗಿ 2019ರಲ್ಲಿ ಸಾಂವಿಧಾನಿಕ ತಿದ್ದುಪಡಿ ಮಾಡಲಾಗಿದ್ದು, ಈ ವಲಯದಲ್ಲಿ 10% ಮೀಸಲಾತಿ ಸೌಲಭ್ಯ ದೊರೆಯುತ್ತಿದೆ. ಇದಕ್ಕೆ ಅನುಗುಣವಾಗಿ ವೈದ್ಯಕೀಯ/ದಂತ ವೈದ್ಯ ವಲಯದಲ್ಲಿ 2019-20 ಮತ್ತು 2020–21ರಲ್ಲಿ ಎರಡು ವರ್ಷಗಳಲ್ಲಿ ಸೀಟುಗಳ ಸಂಖ್ಯೆಯನ್ನು ಹೆಚ್ಚಿಸಲಾಗಿದ್ದು, ಆರ್ಥಿಕವಾಗಿ ಹಿಂದುಳಿದ ವಲಯದಲ್ಲಿ 10% ಸೀಟುಗಳ ಸಂಖ್ಯೆ ಹೆಚ್ಚಾಗಿದ್ದು, ಮೀಸಲಾತಿ ವ್ಯಾಪ್ತಿಗೆ ಒಳಪಡದ ಸೀಟುಗಳ ಸಂಖ್ಯೆಯಲ್ಲಿ ಕಡಿಮೆಯಾಗಿಲ್ಲ. ಆದಾಗ್ಯೂ ಎಐಕ್ಯೂ ಸೀಟುಗಳ ಸೌಲಭ್ಯವನ್ನು ಈವರೆಗೆ ವಿಸ್ತರಿಸಲಿಲ್ಲ. ಆದ್ದರಿಂದ 2021–22ರ ಸಾಲಿನಿಂದ ಪದವಿಪೂರ್ವ/ಸ್ನಾತಕೋತ್ತರ ವೈದ್ಯಕೀಯ/ದಂತ ವೈದ್ಯಕೀಯ ಕೋರ್ಸ್ʼಗಳ ಎಐಕ್ಯೂ ವಲಯದಲ್ಲಿ ಒಬಿಸಿಗಳಿಗೆ ಶೇ.27ರಷ್ಟು, ಆರ್ಥಿಕವಾಗಿ ಹಿಂದುಳಿದವರಿಗೆ ಶೇ.10ರಷ್ಟು ಮೀಸಲಾತಿ ಸೌಲಭ್ಯ ದೊರೆಯುತ್ತಿದೆ. ಇದರಿಂದ ಪ್ರತಿವರ್ಷ 550 ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಎಂ.ಬಿ.ಬಿ.ಎಸ್ ಮತ್ತು ಪಿ.ಜಿ. ವೈದ್ಯಕೀಯ ಕೋರ್ಸ್ʼಗಳಲ್ಲಿ 1000 ವಿದ್ಯಾರ್ಥಿಗಳಿಗೆ ಲಾಭ ದೊರೆಯಲಿದೆ.

ದಿಟ್ಟಹೆಜ್ಜೆ: ಡಾ.ಸಿ.ಎನ್.ಅಶ್ವತ್ಥಣಾರಾಯಣ

ಈ ನಿರ್ಧಾರ 2014ರಿಂದ ವೈದ್ಯಕೀಯ ಶಿಕ್ಷಣ ಕ್ಷೇತ್ರದಲ್ಲಿ ಕೈಗೊಂಡ ಮಹತ್ವದ ಸುಧಾರಣೆಗಳಲ್ಲಿ ಮಹತ್ವದ್ದಾಗಿದ್ದು, ಕಳೆದ ಆರು ವರ್ಷಗಳಲ್ಲಿ ಎಂ.ಬಿ.ಬಿ.ಎಸ್ ಸೀಟುಗಳ ಪ್ರಮಾಣ 56% ಹೆಚ್ಚಳವಾಗಿದೆ. 2014ರಲ್ಲಿ 54,348 ರಷ್ಟಿದ್ದ ಸೀಟುಗಳ ಸಂಖ್ಯೆ 2020ರ ವೇಳೆಗೆ 84,649ಕ್ಕೆ ಏರಿಕೆಯಾಗಿದೆ. ಪಿಜಿ ಸೀಟುಗಳ ಪ್ರಮಾಣದಲ್ಲಿ 80% ಏರಿಕೆ ಕಂಡಿದ್ದು, 2014ರಲ್ಲಿ 30,191 ರಿಂದ 2020ರ ವೇಳೆಗೆ 54,275ಕ್ಕೆ ಏರಿಕೆಯಾಗಿದೆ. ಇದೇ ಅವಧಿಯಲ್ಲಿ 179 ವೈದ್ಯ ಕಾಲೇಜುಗಳಿದ್ದವು ಮತ್ತು ಈಗ ದೇಶದಲ್ಲಿ 558 (289 ಸರಕಾರಿ, 269 ಖಾಸಗಿ) ವೈದ್ಯಕೀಯ ಕಾಲೇಜುಗಳಿವೆ.

“ಪ್ರಧಾನಿ ನರೇಂದ್ರ ಮೋದಿ ಅವರ ಮಾರ್ಗದರ್ಶನದಲ್ಲಿ ಕೈಗೊಳ್ಳಲಾಗಿರುವ ಈ ನಿರ್ಧಾರ ದೇಶದ ಉನ್ನತ ಶಿಕ್ಷಣ ವ್ಯವಸ್ಥೆಯ ದಿಕ್ಕನ್ನೇ ಬದಲಿಸಲಿದೆ ಹಾಗೂ ಕ್ರಾಂತಿಕಾರಕ ಬದಲಾವಣೆಗಳನ್ನು ತಂದು ಎಲ್ಲ ಹಂತದ ಸಾಮಾಜಿಕ, ಆರ್ಥಿಕ ಬದಲಾವಣೆಗಳಿಗೆ ಕಾರಣವಾಗುತ್ತದೆ” ಎಂದು ಅಭಿಪ್ರಾಯಪಟ್ಟಿದ್ದಾರೆ.

ಒಬಿಸಿ ಕೋಟಾದಲ್ಲಿ 27% ಮತ್ತು ಆರ್ಥಿಕವಾಗಿ ಹಿಂದುಳಿದವರಿಗೆ 10% ಮೀಸಲು ಕಲ್ಪಿಸುವುದು ಸುಲಭದ ಮಾತಲ್ಲ. ಅದಕ್ಕೆ ಪ್ರಬಲ ರಾಜಕೀಯ ಇಚ್ಛಾಶಕ್ತಿ ಬೇಕು. ಮೋದಿ ಅವರಲ್ಲಿ ಅಂತಹ ಬಲವಾದ ಇಚ್ಛಾಶಕ್ತಿ ಇರುವ ಕಾರಣಕ್ಕೆ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯುವ ಇಂಥ ಅತ್ಯುತ್ತಮ ನಿರ್ಧಾರ ಆಗಿದೆ ಎಂದು ಮಾಜಿ ಉಪ ಮುಖ್ಯಮಂತ್ರಿಗಳು ತಿಳಿಸಿದ್ದಾರೆ.

ಕೇಂದ್ರ ಸರಕಾರದ ಊ ನಿರ್ಧಾರದಿಂದ ಪ್ರತಿವರ್ಷವೂ 1,500 ಒಬಿಸಿ ಅಭ್ಯರ್ಥಿಗಳಿಗೆ ಎಂಬಿಬಿಎಸ್ನಲ್ಲಿ, 2,500 ಒಬಿಸಿ ವಿದ್ಯಾರ್ಥಿಗಳಿಗೆ ಸ್ನಾತಕೋತ್ತರದಲ್ಲಿ ಹಾಗೂ 550 ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಎಂಬಿಬಿಎಸ್, 1000 ವಿದ್ಯಾರ್ಥಿಗಳಿಗೆ ಸ್ನಾತಕೋತ್ತರ ಕೋರ್ಸ್ʼಗಳಿಗೆ ಪ್ರವೇಶ ಪಡೆಯಲು ಸಾಧ್ಯವಾಗುತ್ತದೆ ಎಂದು ಮಾಜಿ ಡಾ.ಅಶ್ವತ್ಥನಾರಾಯಣ ಹೆಳಿದ್ದಾರೆ.

Tags: BDSdiplomaEconomically Weaker SectionMBBSMDMDSmedical educationMSreservation for OBC
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

ರಾಜ್ಯದಲ್ಲಿ ಕಾಂಗ್ರೆಸ್‌ ಅಲೆ ಎದ್ದಿದೆ ಎಂದ ಸಿದ್ದು

ರಾಜ್ಯದಲ್ಲಿ HMPV ವೈರಸ್ಸಿನ ಎರಡು ಪ್ರಕರಣ ಪತ್ತೆ

by cknewsnow desk
January 6, 2025
0

ಸೋಂಕು ಹರಡದಂತೆ ಸರ್ಕಾರದಿಂದ ಸೂಕ್ತ ಮುಂಜಾಗ್ರತಾ ಕ್ರಮ; ಮುಖ್ಯಮಂತ್ರಿ ಸಿದ್ದರಾಮಯ್ಯ

Next Post
ಬೊಮ್ಮಾಯಿ ಸಂಪುಟದಲ್ಲಿ 7 ವಲಸಿಗರಿಗೆ ಅವಕಾಶ ಅನುಮಾನ

ಬೊಮ್ಮಾಯಿ ಸಂಪುಟದಲ್ಲಿ 7 ವಲಸಿಗರಿಗೆ ಅವಕಾಶ ಅನುಮಾನ

Leave a Reply Cancel reply

Your email address will not be published. Required fields are marked *

Recommended

ಸಾಕು ಸಾಕಾಗಿ ನರೇಂದ್ರ ಮೋದಿ ಸರಕಾರದ ವಿರುದ್ಧ ಸುಪ್ರೀಂ ಕೋರ್ಟ್‌ ಮೊರೆ ಹೋದ ಸಿದ್ದರಾಮಯ್ಯ ಸರಕಾರ

ಸಾಕು ಸಾಕಾಗಿ ನರೇಂದ್ರ ಮೋದಿ ಸರಕಾರದ ವಿರುದ್ಧ ಸುಪ್ರೀಂ ಕೋರ್ಟ್‌ ಮೊರೆ ಹೋದ ಸಿದ್ದರಾಮಯ್ಯ ಸರಕಾರ

1 year ago
ಶಾಸಕ ಪ್ರದೀಪ್‌ ಈಶ್ವರ್‌ಗೆ ಪ್ರಶ್ನಿಸಿದ್ದಕ್ಕೆ ಜೆಡಿಎಸ್‌ ಕಾರ್ಯಕರ್ತನಿಗೆ ಜೀವ ಬೆದರಿಕೆ!

ಶಾಸಕ ಪ್ರದೀಪ್‌ ಈಶ್ವರ್‌ಗೆ ಪ್ರಶ್ನಿಸಿದ್ದಕ್ಕೆ ಜೆಡಿಎಸ್‌ ಕಾರ್ಯಕರ್ತನಿಗೆ ಜೀವ ಬೆದರಿಕೆ!

1 year ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ