ಬೆಂಗಳೂರು: ರಾಜ್ಯದ ಎಲ್ಲಾ ಸರಕಾರಿ ಮತ್ತು ಖಾಸಗಿ ಅನುದಾನಿತ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಆಗಸ್ಟ್ 4 ರಿಂದ ಆರಂಭವಾಗಬೇಕಿದ್ದ ಪ್ರವೇಶ ಪ್ರಕ್ರಿಯೆಯನ್ನು ಮುಂದೂಡಿ ಕಾಲೇಜು ಶಿಕ್ಷಣ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದಾರೆ.
ಕಾರಣಾಂತರಗಳಿಂದ 2021-22 ನೇ ಸಾಲಿನ ಪ್ರವೇಶಾತಿ ಪ್ರಕ್ರಿಯೆಯನ್ನು ಮುಂದೂಡವಂತೆ ಸೂಚಿಸಲಾಗಿದೆ ಎಂದು ಈ ಸುತ್ತೋಲೆಯಲ್ಲಿ ನಿರ್ದೇಶಕರು ತಿಳಿಸಿದ್ದಾರೆ. ಮುಂದಿನ ದಿನಾಂಕವನ್ನು ಶೀಘ್ರವೇ ತಿಳಿಸುವುದಾಗಿಯೂ ಅವರು ಹೇಳಿದ್ದಾರೆ.
ಬಹುಶಃ ಕೇರಳ ಮತ್ತು ಮಹಾರಾಷ್ಟ್ರದಲ್ಲಿ ಕೋವಿಡ್ ಸೋಂಕಿತರು ಹೆಚ್ಚಿದ್ದು, ಬೆಂಗಳೂರಿನಲ್ಲೂ ಸೋಂಕಿತರು ಹೆಚ್ಚುತ್ತಿದ್ದಾರೆ. ಕೇರಳಕ್ಕೆ ಹೊಂದಿಕೊಂಡ ಜಿಲ್ಲೆಗಳು ಸೇರಿ ಒಟ್ಟು ಏಳು ಜಿಲ್ಲೆಗಳಲ್ಲಿ ಪರಿಸ್ಥಿತಿ ಬಿಗಡಾಯಿಸುತ್ತಿದೆ. ಈ ಹಿನ್ನೆಲೆಯಲ್ಲಿ ಪದವಿ ಕಾಲೇಜು ವಿದ್ಯಾರ್ಥಿಗಳ ದಾಖಲಾತಿ ವಿಳಂಬವಾಗಬಹುದು ಎಂದು ಇಲಾಖೆಯ ಮೂಲಗಳು ತಿಳಿಸಿವೆ.
ಸುತ್ತೋಲೆಯ ಪ್ರತಿ ಗಮನಿಸಿ…