• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home CHIKKABALLAPUR

ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಬಾಗೇಪಲ್ಲಿಯಲ್ಲಿ ಪ್ರಜಾ ಸಂಘರ್ಷ ಸಮಿತಿ ಬೃಹತ್‌ ಪ್ರತಿಭಟನೆ

cknewsnow desk by cknewsnow desk
August 3, 2021
in CHIKKABALLAPUR, STATE
Reading Time: 2 mins read
0
ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಬಾಗೇಪಲ್ಲಿಯಲ್ಲಿ ಪ್ರಜಾ ಸಂಘರ್ಷ ಸಮಿತಿ ಬೃಹತ್‌ ಪ್ರತಿಭಟನೆ
1k
VIEWS
FacebookTwitterWhatsuplinkedinEmail

ತಾಲೂಕಿನಲ್ಲಿ 9,760 ಭೂ ಮಂಜೂರಾತಿ ಅರ್ಜಿಗಳು ವರ್ಷಗಳಿಂದ ಬಾಕಿ: ಜಿ.ವಿ.ಶ್ರೀರಾಮರೆಡ್ಡಿ ಆರೋಪ

by Ra Na Gopala Reddy Bagepalli

ಬಾಗೇಪಲ್ಲಿ: ತಾಲೂಕಿನಲ್ಲಿ ಬಗರ್ ಹುಕುಂ ಸಾಗುವಳಿದಾರರಿಗೆ ಭೂಮಿ ಮಂಜೂರು ಮಾಡಿಲ್ಲ. ಅರ್ಜಿ ಸಲ್ಲಿಸಿದವರಿಗೆ ಮನೆ, ನಿವೇಶನ ಹಂಚಿಕೆ ಆಗಿಲ್ಲ. ಸಾಗುವಳಿ ಚೀಟಿಗಳನ್ನು ನೀಡುವಲ್ಲಿ ಅಧಿಕಾರಿಗಳು, ಜನಪ್ರತಿನಿಧಿಗಳು ನಿರ್ಲಕ್ಷ್ಯ ತೋರುತ್ತಿದ್ದಾರೆ ಎಂದು ಮಾಜಿ ಶಾಸಕ ಹಾಗೂ ಪ್ರಜಾ ಸಂಘರ್ಷ ಸಮಿತಿ ಸಂಚಾಲಕ ಜಿ.ವಿ.ಶ್ರೀರಾಮರೆಡ್ಡಿ ಆರೋಪಿಸಿದರು.

ಪಟ್ಟಣದ ತಾಲೂಕು ಕಚೇರಿಯ ಮುಂದೆ ಸೋಮವಾರ ಹಮ್ಮಿಕೊಂಡಿದ್ದ ಬೃಹತ್ ಪ್ರತಿಭಟನಾ ಧರಣಿಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ತಾಲೂಕಿನ ಬಡರೈತರು ಹಾಗೂ ದಲಿತರು ಬಗರ್ ಹುಕುಂ ಸಾಗುವಳಿ ಮಂಜೂರಾತಿಗಾಗಿ ಅರ್ಜಿ ಸಲ್ಲಿಸಿ ಅನೇಕ ವರ್ಷಗಳು ಕಳೆದಿದೆ. ಭೂಮಿ ಮಂಜೂರು ಮಾಡುವಂತೆ ಸರಕಾರಿ ಆದೇಶ ಇದ್ದರೂ, ಭೂಮಿ ಮಂಜೂರು ಮಾಡಿಲ್ಲ. ತಾಲೂಕಿನಲ್ಲಿ 9,760 ಅರ್ಜಿಗಳು ಇತ್ಯರ್ಥವಾಗಿಲ್ಲ. ಪುನಾ ಅರ್ಜಿಗಳನ್ನು ಸಲ್ಲಿಸಲು ಅವಕಾಶ ಕೊಡಬೇಕು ಎಂದು ಒತ್ತಾಯ ಮಾಡಿದರು.

ಶಾಸಕರ ಅಧ್ಯಕ್ಷತೆಯಲ್ಲಿ ಇರುವ ಭೂ ಮಂಜೂರಾತಿ ಸಮಿತಿಯನ್ನು ತಕ್ಷಣವೇ ರಚನೆ ಮಾಡಿ ಎಲ್ಲ ಸಾಗುವಳಿ ಚೀಟಿ ಬೇಡಿಕೆಯ ಅರ್ಜಿಗಳನ್ನು ಇತ್ಯರ್ಥಗೊಳಿಸಬೇಕು ಎಂದು ಅವರು ಆಗ್ರಹಿಸಿದರು.

ತಾಲೂಕಿನಲ್ಲಿ ಕೂಲಿ ಕಾರ್ಮಿಕರು ಹೆಚ್ಚಾಗಿದ್ದಾರೆ. ಕೂಲಿ ಸಿಗದೇ ವಲಸೆ ಹೋಗುತ್ತಿದ್ದರೂ, ವಲಸೆ ತಡೆದು ಉದ್ಯೋಗ ಖಾತರಿ ಯೋಜನೆಯನ್ನು ಸಮರ್ಪಕವಾಗಿ ಜಾರಿ ಮಾಡಿಲ್ಲ. ಇದರ ಬದಲಾಗಿ ಅಧಿಕಾರಿಗಳು ಜೆಸಿಬಿ ಯಂತ್ರಗಳ ಮೂಲಕ ಕೆಲಸ ಮಾಡಿಸಿ ಬಡವರ, ಕೂಲಿ-ಕಾರ್ಮಿಕರ ಹೊಟ್ಟೆ ಮೇಲೆ ಹೊಡೆಯುತ್ತಿದ್ದಾರೆ ಹಾಗೂ ಕೂಲಿಕಾರರಿಗೆ ಕೂಲಿ ಕೆಲಸ ನೀಡಿಲ್ಲ. ಉದ್ಯೋಗ ಖಾತರಿ ಯೋಜನೆಯನ್ನು ಕೂಲಿ-ಕಾರ್ಮಿಕರಿಗೆ ಸಿಗಬೇಕು. ಗ್ರಾಮೀಣ ಪ್ರದೇಶಗಳಂತೆ ನಗರ ಪ್ರದೇಶಗಳಿಗೂ ಯೋಜನೆಯನ್ನು ಜಾರಿ ಮಾಡಬೇಕು ಎಂದು ಅವರು ಒತ್ತಾಯಿಸಿದರು.

ಕೃಷಿಭಾಗ್ಯ ಯೋಜನೆಯಲ್ಲಿ ಭ್ರಷ್ಟಾಚಾರ

ವಿವಿಧ ವಸತಿ ಯೋಜನೆಗಳಡಿ ವಸತಿ ರಹಿತರಿಗೆ ಮನೆ ಕಟ್ಟಲು ಅವಕಾಶ ಇದೆ. ಆದರೆ ಕೆಲ ಅಧಿಕಾರಿಗಳು ವಸತಿ, ಮನೆರಹಿತರಿಗೆ ಮನೆ, ನಿವೇಶನಗಳನ್ನು ಹಂಚಿಕೆ ಮಾಡದೇ ನಿರ್ಲಕ್ಷ್ಯ ತೋರುತ್ತಿದ್ದಾರೆ. ಕೃಷಿ ಇಲಾಖೆಯಲ್ಲಿ ಕೃಷಿಭಾಗ್ಯ ಯೋಜನೆಯಲ್ಲಿ ಭ್ರಷ್ಟಾಚಾರ ಹೆಚ್ಚಾಗಿದೆ. ತೋಟಗಾರಿಕೆ ಇಲಾಖೆಯಲ್ಲಿ ಹನಿ ನೀರಾವರಿ ಮತ್ತು ಪೌಲ್ಟ್ರಿಹೌಸ್‌ಗಳಲ್ಲಿ ಹಲವಾರು ಅಕ್ರಮಗಳು ನಡೆದು ಅರ್ಹ ಫಲಾನುಭವಿಗಳಿಗೆ ಸೌಲಭ್ಯಗಳು ವಿತರಣೆ ಆಗುತ್ತಿಲ್ಲ ಎಂದು ಶ್ರೀರಾಮರೆಡ್ಡಿ ಆರೋಪ ಮಾಡಿದರು.

ಪ್ರಜಾ ಸಂಘರ್ಷ ಸಮಿತಿಯಿಂದ 11 ದಿನಗಳ ಕಾಲ 11 ಬೇಡಿಕೆಗಳಿನ್ನಿಟ್ಟು ಹಮ್ಮಿಕೊಂಡಿದ್ದ ಜನಜಾಗೃತಿಯಲ್ಲಿ ಇದೀಗ ಜನರು ಬೀದಿಗಿಳಿದು ಹೋರಾಟ ಮಾಡುತ್ತಿದ್ದಾರೆ. ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಸಮಸ್ಯೆಗಳನ್ನು ಬಗೆಹರಿಸಬೇಕು ಎಂದು ಅವರು ಪಟ್ಟುಹಿಡಿದರು.

ಪ್ರತಿಭಟನಾ ಸ್ಥಳಕ್ಕೆ ತಹಶೀಲ್ದಾರ್, ಇಒ, ಕೃಷಿ, ತೋಟಗಾರಿಕೆ ಹಾಗೂ ಅರಣ್ಯ ಇಲಾಖೆಗಳ ಅಧಿಕಾರಿಗಳು ಭೇಟಿ ನೀಡಿದರು. ತಹಶೀಲ್ದಾರ್ ಡಿ.ಎ.ದಿವಾಕರ್ ಪ್ರತಿಭಟನಾ ಸ್ಥಳಕ್ಕೆ ಬಂದು ಪ್ರತಿಭಟನಾಕಾರರಿಂದ ಮನವಿ ಸ್ವೀಕರಿಸಿದರು. ನಂತರ ಪ್ರತಿಕ್ರಿಯಿಸಿ, ಈ ಕೂಡಲೇ ಅರ್ಜಿ ವಿಲೇವಾರಿ ಮಾಡಲಾಗುವುದು. ಬೇಡಿಕೆಗಳ ಬಗ್ಗೆ ಚರ್ಚೆ ಮಾಡಲು ಮುಖಂಡರ ಹಾಗೂ ಅಧಿಕಾರಿಗಳ ಸಭೆ ಕರೆಯಲಾಗುವುದು ಎಂದು ಭರವಸೆ ನೀಡಿದರು.

ಹೊಸ ಪಡಿತರ ಚೀಟಿ ವಿತರಿಸಿ

ಪ್ರಜಾ ಸಂಘರ್ಷ ಸಮಿತಿ ಜಿಲ್ಲಾ ಸಮಿತಿ ಸಹ ಸಂಚಾಲಕ ಚನ್ನರಾಯಪ್ಪ ಮಾತನಾಡಿ, ಭೂ ಮಂಜೂರಾತಿ ಸಮಿತಿಯನ್ನು ಕೂಡಲೇ ರಚಿಸಬೇಕು. ಜಿ.ವಿ.ಶ್ರೀರಾಮರೆಡ್ಡಿ ಅವರು ಶಾಸಕರಾಗಿದ್ದ ಅವಧಿಯಲ್ಲಿ ಬಗರ್ ಹುಕುಂ ಸಾಗುವಳಿ ಚೀಟಿಗಳನ್ನು ಜನರಿಗೆ ವಿತರಿಸಿದ್ದರು. ತೋಟಗಾರಿಕೆ, ಕೃಷಿ ಇಲಾಖೆ ಯೋಜನೆ ಅರ್ಹ ಫಲಾನುಭವಿಗೆ ತಲುಪುತ್ತಿಲ್ಲ. ಹೊಸ ಪಡಿತರ ಚೀಟಿಗಳನ್ನು ವಿತರಿಸಬೇಕು. ನೂರಾರು ವರ್ಷಗಳಿಂದ ಅರಣ್ಯ ಭೂಮಿಯಲ್ಲಿ ಸಾಗುವಳಿ ಮಾಡುತ್ತಿರುವವರಿಗೆ ಸಾಗುವಳಿ ಚೀಟಿ ನೀಡಬೇಕು ಎಂದು ಒತ್ತಾಯಿಸಿದರು.

ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಗೋಪಾಲಕೃಷ್ಣ, ಸಮಿತಿ ಮುಖಂಡ ಜಿ.ಎಂ.ರಾಮಕೃಷ್ಣಪ್ಪ, ಎಚ್.ಎನ್.ಚಂದ್ರಶೇಖರ ರೆಡ್ಡಿ, ಆರ್.ಚಂದ್ರಶೇಖರ ರೆಡ್ಡಿ, ಎಲ್.ವೆಂಕಟೇಶ್, ನಾರಾಯಣಸ್ವಾಮಿ, ಟಿ.ಎಲ್.ವೆಂಕಟೇಶ್, ಸಿ.ಕೆ.ನರಸಿಂಹಪ್ಪ, ರಾಮಾಂಜಿನಪ್ಪ, ಬಾಷಾಸಾಬ್, ಭೈರಾರೆಡ್ಡಿ, ಪೆದ್ದ ಮುನಿಯಪ್ಪ, ಪ್ರಮೀಳಮ್ಮ ಮುಂತಾದವರು ಇದ್ದರು.

Tags: bagar hukum applicationbagepallichikkaballapuragv sreeramareddykarnatakapraja sangharsh samitipss
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಒಕ್ಕಲಿಗರ ಅಭಿವೃದ್ಧಿ ನಿಗಮ ಸ್ಥಾಪನೆ: ಸರಕಾರದಿಂದ ಆದೇಶ

ಡಿಗ್ರಿ ಕಾಲೇಜುಗಳಲ್ಲಿ ದಾಖಲಾತಿ ಪ್ರಕ್ರಿಯೆ ಮುಂದೂಡಿಕೆ

Leave a Reply Cancel reply

Your email address will not be published. Required fields are marked *

Recommended

ಗುಡಿಬಂಡೆಯಲ್ಲಿ ಆಲಿಕಲ್ಲು ಅಬ್ಬರ; ಬೆಳೆ ಪರಿಹಾರಕ್ಕೆ ರೈತರ ಆಗ್ರಹ

ಗುಡಿಬಂಡೆಯಲ್ಲಿ ಆಲಿಕಲ್ಲು ಅಬ್ಬರ; ಬೆಳೆ ಪರಿಹಾರಕ್ಕೆ ರೈತರ ಆಗ್ರಹ

4 years ago
ಲಖೀಂಪುರ್ ಖೇರಿ ಹಿಂಸಾಚಾರ & ರೈತರ ಹತ್ಯೆಗೆ ಖಂಡನೆ

ಲಖೀಂಪುರ್ ಖೇರಿ ಹಿಂಸಾಚಾರ & ರೈತರ ಹತ್ಯೆಗೆ ಖಂಡನೆ

5 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ