• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home CHIKKABALLAPUR

ಚಿಕ್ಕಬಳ್ಳಾಪುರ ಜಿಲ್ಲೆಗೆ ಕೋವಿಡ್ 3ನೇ ಅಲೆ ಆತಂಕವಿಲ್ಲ: ಸಚಿವ ಡಾ.ಕೆ.ಸುಧಾಕರ್

cknewsnow desk by cknewsnow desk
August 5, 2021
in CHIKKABALLAPUR, STATE
Reading Time: 1 min read
0
ಚಿಕ್ಕಬಳ್ಳಾಪುರ ಜಿಲ್ಲೆಗೆ ಕೋವಿಡ್ 3ನೇ ಅಲೆ ಆತಂಕವಿಲ್ಲ: ಸಚಿವ ಡಾ.ಕೆ.ಸುಧಾಕರ್
1.1k
VIEWS
FacebookTwitterWhatsuplinkedinEmail

by M Krishnappa Chikkaballapura

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಹಾಗೂ ಸಾವಿನ ಪ್ರಮಾಣ ನಿಯಂತ್ರಣದಲ್ಲಿದ್ದು, ಮೂರನೇ ಅಲೆಯ ಆತಂಕವಿಲ್ಲ ಎಂದು ನೂತನ ಸಚಿವ ಡಾ.ಕೆ.ಸುಧಾಕರ್ ಸ್ಪಷ್ಟಪಡಿಸಿದರು.

ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಕೋವಿಡ್ʼನಿಂದ ತಮ್ಮವರನ್ನು ಕಳೆದುಕೊಂಡ ಕುಟುಂಬಕ್ಕೆ ಸಾಯಿಕೃಷ್ಣ ಚಾರಿಟಬಲ್ ಟ್ರಸ್ಟ್ ನಿಂದ ‘ಆಸರೆ’ ಕಾರ್ಯಕ್ರಮದಡಿ 1 ಲಕ್ಷ ರೂ. ಸಹಾಯಧನ ವಿತರಣೆ ಕಾರ್ಯಕ್ರಮದಲ್ಲಿ ಸಚಿವರು ಮಾತನಾಡಿದರು. ನೊಂದ ಕುಟುಂಬಗಳ‌ ಮನೆಗೆ ಭೇಟಿ ಕೊಟ್ಟ ಅವರು ಪರಿಹಾರದ ಮೊತ್ತವನ್ನು ವಿತರಿಸಿ ಸಾಂತ್ವನ ನೀಡಿದರು.

ಚಿಕ್ಕಬಳ್ಳಾಪುರ ಜನತೆಯ ಆಶೀರ್ವಾದದಿಂದ ಎರಡನೇ ಬಾರಿ ಸಚಿವನಾಗಿ ಸೇವೆ ಸಲ್ಲಿಸುವ ಅವಕಾಶ ದೊರೆತಿದೆ. ಮೊದಲ ಸಚಿವ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿಗಳು ಕೋವಿಡ್ ನಿಯಂತ್ರಿಸುವ ಜವಾಬ್ದಾರಿ ವಹಿಸಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಣ ಕುರಿತು ಸಭೆ ನಡೆಸಲಾಗಿದೆ. ಬೇರೆ ಜಿಲ್ಲೆಗಳಿಗೆ ಹೋಲಿಸಿದರೆ ಚಿಕ್ಕಬಳ್ಳಾಪುರದಲ್ಲಿ ಕೋವಿಡ್ ನಿಯಂತ್ರಣಕ್ಕೆ ಬಂದಿದೆ. 14 ದಿನಗಳಿಂದ ಪಾಸಿಟಿವಿಟಿ ದರ ಎರಡಂಕಿಯನ್ನೂ ದಾಟಿಲ್ಲ. ಮೂರನೇ ಅಲೆ ಆರಂಭದ ಮುನ್ಸೂಚನೆ ಕೆಲ ಜಿಲ್ಲೆಗಳಲ್ಲಿ ಕಂಡುಬರುತ್ತಿದೆ. ಆದರೆ ಅಂತಹ ಆತಂಕ ಚಿಕ್ಕಬಳ್ಳಾಪುರದಲ್ಲಿ ಇಲ್ಲ ಎಂದು ತಿಳಿಸಿದರು.

ಗುಡಿಬಂಡೆ, ಬಾಗೇಪಲ್ಲಿ, ಚಿಂತಾಮಣಿ, ಗೌರಿಬಿದನೂರು, ಶಿಡ್ಲಘಟ್ಟ ತಾಲೂಕು ಕೇಂದ್ರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲಾ ಕೇಂದ್ರದಲ್ಲಿ ಆಕ್ಸಿಜನ್ ಘಟಕ ನಿರ್ಮಿಸಲಾಗಿದೆ. ಜಿಲ್ಲಾಕೇಂದ್ರದ ಹೊಸ ಆಸ್ಪತ್ರೆ ಹಾಗೂ ಹಳೆ ಆಸ್ಪತ್ರೆಯಲ್ಲಿ ಒಟ್ಟು ಎರಡು ಘಟಕ ಆರಂಭಿಸಲಾಗುತ್ತಿದೆ. ಅದೇ ರೀತಿ ಮಕ್ಕಳ ವಿಶೇಷ ನಿಗಾ ಘಟಕವನ್ನು ಜಿಲ್ಲೆಯಲ್ಲಿ ಆರಂಭಿಸಲು ಸಿದ್ಧತೆ ನಡೆದಿದ್ದು, ಅದಕ್ಕೆ ಬೇಕಾದ ವೆಂಟಿಲೇಟರ್ ಗಳನ್ನು ಒಂದೆರಡು ದಿನಗಳಲ್ಲಿ ನೀಡಲಾಗುವುದು. ವೈದ್ಯರ ನೇರ ನೇಮಕಾತಿ ಮಾಡಿರುವುದರಿಂದ ಶೇ.90 ರಷ್ಟು ವೈದ್ಯರ ಕೊರತೆ ನೀಗಿದೆ ಎಂದರು.

ದೂರದೃಷ್ಟಿಯ ನಾಯಕತ್ವ ಗುಣದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಾಜ್ಯವನ್ನು ಎಲ್ಲಾ ಆಯಾಮಗಳಲ್ಲಿ ಅಭಿವೃದ್ಧಿಪಡಿಸುವ ಕನಸನ್ನು ಬಿಚ್ಚಿಟ್ಟಿದ್ದಾರೆ. ಇದಕ್ಕೆ ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸ್ಪೂರ್ತಿಯಾಗಿದ್ದಾರೆ. ಈ ಸರ್ಕಾರದಿಂದ ಆರೋಗ್ಯ, ಶಿಕ್ಷಣ, ಕೈಗಾರಿಕೆಯ ಅಭಿವೃದ್ಧಿ, ಬಡವರ ಕಲ್ಯಾಣ, ಉದ್ಯೋಗ ಸೃಷ್ಟಿಯಾಗಲಿದೆ. ಮೊದಲ ದಿನ ರೈತರ ಮಕ್ಕಳಿಗೆ ವಿದ್ಯಾರ್ಥಿವೇತನ ಘೋಷಿಸಿರುವುದೇ ಮುಖ್ಯಮಂತ್ರಿಗಳ ರೈತಪರ ಕಾಳಜಿ ತೋರಿಸಿದೆ. ಅದೇ ರೀತಿ ಸಂಧ್ಯಾ ಸುರಕ್ಷಾ, ವಿಧವಾ ವೇತನ, ಅಂಗವಿಕಲರ ವೇತನ ಹೆಚ್ಚಳದಿಂದ ಸಾಮಾಜಿಕ ಭದ್ರತೆ ದೊರೆತಿದೆ ಎಂದರು.

ಅಕ್ಕಿ ನೀಡಿದರೆ ಊಟ ಮಾಡಬಹುದು. ಆದರೆ ಮೀನು ಕೊಡುವ ಬದಲು ಮೀನುಗಾರಿಕೆಯನ್ನು ಕಲಿಸಬೇಕು ಎಂಬ ಮಾತಿದೆ. ಹಾಗೆಯೇ ನಮ್ಮ ಸರಕಾರ ಶಿಕ್ಷಣಕ್ಕೆ ಒತ್ತು ನೀಡಿ ಬದುಕು ಕಟ್ಟಿಕೊಡುವ ಕೆಲಸ ಮಾಡುತ್ತಿದೆ. ಈ ರೀತಿ ಉನ್ನತ ಶಿಕ್ಷಣಕ್ಕೆ 1 ಸಾವಿರ ಕೋಟಿ ರೂ. ವಿದ್ಯಾರ್ಥಿವೇತನ ನೀಡಿರುವ ಬೇರೆ ಉದಾಹರಣೆ ಇಲ್ಲ. ಪರಿಶಿಷ್ಟ ಪಂಗಡದ ಜನರಿಗಾಗಿ ವಿಶೇಷ ಸಚಿವಾಲಯ ರೂಪಿಸಬೇಕೆಂಬ ಬೇಡಿಕೆ ಇದ್ದು, ಅದನ್ನು ಆರಂಭಿಸಲು ತೀರ್ಮಾನಿಸಲಾಗಿದೆ ಎಂದರು.

ಮುಂದಿನ ಒಂದು ತಿಂಗಳಿಗಾಗಿ ಒಂದೂವರೆ ಕೋಟಿ ಲಸಿಕೆಯ ಬೇಡಿಕೆ ಇಡಲಾಗಿತ್ತು. ಈವರೆಗೆ ರಾಜ್ಯದಲ್ಲಿ 3.9 ಕೋಟಿ ಲಸಿಕೆ ನೀಡಿದ್ದು, ಆಗಸ್ಟ್ ಅಂತ್ಯಕ್ಕೆ 4 ಕೋಟಿ ಹಾಗೂ ಸೆಪ್ಟೆಂಬರ್ ಅಂತ್ಯಕ್ಕೆ ಐದೂವರೆ ಕೋಟಿ ಲಸಿಕೆ ನೀಡುವ ಕೆಲಸವನ್ನು ಸರಕಾರ ಮಾಡಲಿದೆ ಎಂದು ಅವರು ತಿಳಿಸಿದರು.

ಯಾವುದೇ ಜಿಲ್ಲೆಯಲ್ಲಿ ಪಾಸಿಟಿವಿಟಿ ದರ ಶೇ.5ಕ್ಕಿಂತ ಹೆಚ್ಚಿಲ್ಲ. ಕೇರಳಕ್ಕೆ ಹೊಂದಿಕೊಂಡ ಜಿಲ್ಲೆಗಳಲ್ಲಿ ಹೆಚ್ಚಿನ ಎಚ್ಚರಿಕೆಯನ್ನು ಸರಕಾರ ವಹಿಸಿದೆ ಎಂದ ಅವರು, ಮಂಚೇನಹಳ್ಳಿಗೆ ತಾಯಿ ಮತ್ತು ಮಕ್ಕಳ ಎರಡು ಆಸ್ಪತ್ರೆ ಮಂಜೂರಾಗಿದೆ. ಮಿನಿ ವಿಧಾನಸೌಧ ಮಂಜೂರಾಗಿದೆ ಎಂದರು.

cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಗುಡಿಬಂಡೆಯಲ್ಲೊಬ್ಬರು ಆಮ್‌ಆದ್ಮಿಗಳ ಡಾಕ್ಟರ್!‌ ಸೋಂಕಿತರಿಗೆ ವೈದ್ಯಕೀಯ ಆರೈಕೆ ಜತೆಗೆ ಆತ್ಮಸ್ಥೈರ್ಯದ ಪಾಠ

ಹಳ್ಳಿ ಜನರ ಮನೆ ಬಾಗಿಲಿಗೇ ಲಸಿಕೆ

Leave a Reply Cancel reply

Your email address will not be published. Required fields are marked *

Recommended

ದೇವರಾಜ ಅರಸು ಆಶಯ ಉಲ್ಟಾ ಮಾಡಿದ ಬಿಜೆಪಿ!!

ಸಂಕಷ್ಟ ಸೂತ್ರ ಇಲ್ಲದಿರುವುದೇ ಸಂಕಷ್ಟಕ್ಕೆ ಕಾರಣ ಎಂದು ಕೈಚೆಲ್ಲಿದ ಸಿದ್ದರಾಮಯ್ಯ

3 years ago
ಲಾಕ್ ಡೌನ್ ಇಲ್ಲ

ವೈಫಲ್ಯ ಮುಚ್ಚಿಕೊಳ್ಳಲು ಬೊಮ್ಮಾಯಿ ಬುಲ್ಡೋಜರ್ ಜಪ

4 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ