• About
  • Advertise
  • Careers
  • Contact
Thursday, October 29, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS NATION

ಜಮೀರ್ ವ್ಯವಹಾರ ಜಾಲಾಡಿದ ಇಡಿ; ರೋಷನ್ ಬೇಗ್ ಮೇಲೂ ದಾಳಿ

cknewsnow desk by cknewsnow desk
August 5, 2021
in NATION, STATE
Reading Time: 1 min read
0
ಜಮೀರ್ ವ್ಯವಹಾರ ಜಾಲಾಡಿದ ಇಡಿ; ರೋಷನ್ ಬೇಗ್ ಮೇಲೂ ದಾಳಿ
983
VIEWS
FacebookTwitterWhatsuplinkedinEmail

ಚಾಮರಾಜಪೇಟೆ ಶಾಸಕ ಜಮೀರ್‌ ಅಹಮದ್‌ ಮನೆ, ನ್ಯಾಷನಲ್‌ ಟ್ರಾವೆಲ್ಸ್‌ ಸೇರಿ 6 ಕಡೆ ರೇಡ್‌; ಬೇಗ್‌ ನಿವಾಸ, ಅವರ ಮಗಳ ಮನೆಯ ಮೇಲೂ ದಾಳಿ 

ಬೆಂಗಳೂರು: ಕೆಲ ದಿನಗಳಿಂದ ಭಾರೀ ಸುದ್ದಿಯಲ್ಲಿದ್ದ ಚಾಮರಾಜಪೇಟೆ ಕ್ಷೇತ್ರದ ಕಾಂಗ್ರೆಸ್‌ ಪಕ್ಷದ ಶಾಸಕ ಜಮೀರ್‌ ಅಹಮದ್‌ ಖಾನ್‌ ಹಾಗೂ ಐಎಂಎ ಹಗರಣದಲ್ಲಿ ಆರೋಪಕ್ಕೆ ಗುರಿಯಾಗಿದ್ದ ಮಾಜಿ ಸಚಿವ ರೋಷನ್‌ ಬೇಗ್‌ ಮೇಲೆ ಗುರುವಾರ ಬೆಳಗ್ಗೆ ಜಾರಿ ನಿರ್ದೇಶನಾಲಯ (ಇಡಿ) ಏಕಕಾಲಕ್ಕೆ ದಾಳಿ ನಡೆಸಿದೆ. ಸಂಜೆ ಐದು ಗಂಟೆಯಾದರೂ ದಾಳಿ ಮುಗಿದಿರಲಿಲ್ಲ. ಅಂದರೆ ಬರೋಬ್ಬರಿ ಹತ್ತು ಗಂಟೆಗಳೇ ಕಳೆದರೂ ರೇಡ್‌ ಅಂತ್ಯ ಕಂಡಿಲ್ಲ.

ದಾಳಿ ಒಂದೆಡೆ ನಡೆಯುತ್ತಿದ್ದರೆ, ಇನ್ನೊಂದೆಡೆ ಜಮೀರ್‌ ಮತ್ತು ರೋಷನ್‌ ಬೇಗ್‌ ಅವರ ಅರಮನೆಗಳಂಥ ಕಟ್ಟಡಗಳನ್ನು ಮಾಧ್ಯಮಗಳಲ್ಲಿ ಕಂಡ ರಾಜ್ಯದ ಜನರು ಹೌಹಾರಿದರು. ಇಂದ್ರಭವನಗಳನ್ನೇ ನಾಚಿಸುವಂತಿರುವ ಆ ಕಟ್ಟಡಗಳನ್ನು ಕಂಡು ಸ್ವತಃ ಇಡಿ ಅಧಿಕಾರಿಗಳೇ ಚಕಿತರಾದರು ಎಂದು ಗೊತ್ತಾಗಿದೆ. ಆದಾಯ, ಅದಕ್ಕೆ ತಕ್ಕ ತೆರಿಗೆಯನ್ನು ಪಾವತಿ ಮಾಡದಿರುವ ಈ ಇಬ್ಬರು ನಾಯಕರ ಕೆಲ ಅನುಮಾನಾಸ್ಪದ ವ್ಯವಹಾರಗಳು ದಾಳಿಗೆ ಕಾರಣವಾಗಿರಬಹುದು ಎಂದು ಗೊತ್ತಾಗಿದೆ. 

ಬೆಳಬೆಳಗ್ಗೆಯೇ ಸುಮಾರು 45ಕ್ಕೂ ಹೆಚ್ಚು ಅಧಿಕಾರಿಗಳು ಇಪ್ಪತ್ತೈದಕ್ಕೂ ಹೆಚ್ಚು ಕಾರುಗಳಲ್ಲಿ ಇಬ್ಬರು ನಾಯಕರ ನಿವಾಸಗಳ ಮೇಲೆ ಮುಗಿಬಿದ್ದಿದ್ದಾರೆ. ಜಮೀರ್‌ ನಿವಾಸ, ಕಚೇರಿ ಸೇರಿ ಆರು ಕಡೆ ದಾಳಿ ನಡೆಸಿದ್ದಾರೆ. ಹಾಗೆಯೇ, ರೋಷನ್‌ ಬೇಗ್‌ ಮನೆಯೂ ಸೇರಿ, ಬೆಂಗಳೂರಿನ ಭೂಪಸಂದ್ರದಲ್ಲಿರುವ ಅವರ ಪುತ್ರಿಯ ಮನೆ ಮತ್ತಿತರ ಕಡೆಯೂ ದಾಳಿ ನಡೆಸಲಾಗಿದೆ.

ಜಮೀರ್‌ ಐಶಾರಾಮಿ ಸಾಮ್ರಾಜ್ಯ

ಕಾಂಗ್ರೆಸ್‌ ಪಕ್ಷದಲ್ಲಿ ಮುಂದಿನ ಮುಖ್ಯಮಂತ್ರಿ ಬಗ್ಗೆ ಹೇಳಿಕೆ ನೀಡಿ ವಿವಾದ ಮೈಮೇಲೆ ಎಳೆದುಕೊಂಡಿದ್ದ ಜಮೀರ್‌, ಕೆಲ ದಿನಗಳ ಹಿಂದೆ ಕೋವಿಡ್‌ ಬೆಡ್‌ ಬ್ಲಾಕಿಂಗ್‌ ದಂಧೆಯಲ್ಲೂ ಕೆಲವರ ಪರ ಮೂಗು ತೂರಿಸಿದಿದ್ದರು. ಈ ಕಾರಣಕ್ಕಾಗಿ ಸುದ್ದಿಯಲ್ಲಿದ್ದ ಅವರಿಗೆ ಬೆಳಗ್ಗೆಯೇ ಇಡಿ ಅಧಿಕಾರಿಗಳು ದೊಡ್ಡ ಶಾಕ್‌ ನೀಡಿದ್ದಾರೆ.

ಅವರ ಒಡೆತನದ ಕಲಾಸಿಪಾಳ್ಯದ ನ್ಯಾಷನಲ್‌ ಟ್ರಾವೆಲ್ಸ್‌ ಕಚೇರಿ, ರಿಚ್ಮಂಡ್‌ ಟೌನ್‌ನಲ್ಲಿರುವ ಐಶಾರಾಮಿ ಮನೆ, ಕಂಟೋನ್ಮೆಂಟ್‌ ಬಳಿ ಇರುವ ಐಶಾರಾಮಿ ಮನೆ, ಯುಬಿ ಸಿಟಿಯಲ್ಲಿರುವ ಐಶಾರಾಮಿ ಪ್ಲ್ಯಾಟ್‌ ಸೇರಿ ಒಟ್ಟು ಆರು ಕಡೆ ಬೆಳಗ್ಗೆ 5.45ರ ಸುಮಾರಿಗೆಲ್ಲ ಇಡಿ ಅಧಿಕಾರಿಗಳು ಏಕಕಾಲದಲ್ಲೇ ದಾಳಿ ನಡೆಸಿದ್ದಾರೆ. ದಾಳಿ ನಡೆದಾಗ ಜಮೀರ್‌ ಮನೆಯಲ್ಲೇ ಇದ್ದರು ಎಂಬ ಮಾಹಿತಿ ಲಭ್ಯವಾಗಿದೆ. ಅವರ ಮೊಬೈಲ್‌ ಸ್ವಿಚ್‌ ಆಫ್‌ ಆಗಿದೆ.

ದಾಳಿ ಮಾಡಿದ ಎಲ್ಲ ಜಾಗಗಳನ್ನು ಇಂಚಿಂಚೂ ಶೋಧ ಮಾಡಿರುವ ಅಧಿಕಾರಿಗಳು, ಅಪಾರ ಪ್ರಮಾಣದ ದಾಖಲೆ ಪತ್ರಗಳು, ಬ್ಯಾಂಕ್‌ ಖಾತೆಗಳ ವಿವರಗಳು, ಹಣಕಾಸು ವ್ಯವಹಾರಗಳ ದಾಖಲೆಗಳು, ಭೂ ವ್ಯವಹಾರದ ದಾಖಲೆಗಳು, ಚಿನ್ನಾಭರಣ, ಲಾಕರ್‌ಗಳು, ಫೊನ್‌ ಕಾಲ್‌ಗಳ ವಿವರ ಇತ್ಯಾದಿಗಳನ್ನು ಪರಿಶೀಲನೆ ಮಾಡಿ ಸಾಕಷ್ಟು ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆಂದು ಗೊತ್ತಾಗಿದೆ. ಕೆಲ ಬ್ಯಾಗುಗಳಷ್ಟು ದಾಖಲೆಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆಂದು ಹೇಳಲಾಗಿದೆ.

ಮೌಲ್ಯ 90 ಕೋಟಿ! ಮಾರಿದ್ದು 9.38 ಕೋಟಿಗೆ!!

ಬಹುಕೋಟಿ ರೂ.ಗಳ ಐಎಂಎ ಹಗರಣದ ಪ್ರಮುಖ ಆರೋಪಿ ಮನನ್ಸೂರ್‌ ಖಾನ್‌ ಜತೆಗಿನ ನಂಟು-ವ್ಯವಹಾರವು ಜಮೀರ್‌ಗೆ ಮುಳುವಾಗಿರುವ ಸಾಧ್ಯತೆ ಇದೆ. ಇವರಿಬ್ಬರ ನಡುವೆ ನಡೆದಿದೆ ಎನ್ನಲಾದ ಭಾರೀ ವ್ಯವಹಾರಗಳ ವಾಸನೆ ಇಡಿಗೆ ಬಡಿದಿದ್ದು; ಆಸ್ತಿ, ಚಿನ್ನ ಖರೀದಿ, ಹಣ ವಿನಿಮಯ ಹಾಗೂ ಚುನಾವಣೆ ಸಂದರ್ಭಗಳಲ್ಲಿ ಖರ್ಚು-ವೆಚ್ಚ ಇತ್ಯಾದಿಗಳ ಬಗ್ಗೆ ಅಧಿಕಾರಿಗಳು ತಲಾಶ್‌ ಮಾಡಿದ್ದಾರೆ.

ಮುಖ್ಯವಾಗಿ ರಿಚ್ಮಂಡ್‌ ಟೌನ್‌ನಲ್ಲಿರುವ 90 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಭಾರೀ ಐಶಾರಾಮಿ ಭಂಗಲೆಯನ್ನು ಕೇವಲ 9.38 ಕೋಟಿ ರೂ.ಗಳಿಗೆ ಮನ್ಸೂರ್‌ ಖಾನ್‌ಗೆ ಮಾರಾಟ ಮಾಡಿ ಭಾರೀ ತೆರಿಗೆ ವಂಚನೆ ಮಾಡಲಾಗಿದೆ ಎಂಬ ಆರೋಪವಿದೆ. ಈ ಪ್ರಕರಣಕ್ಕೆ ಸಂಬಂಧಿಸಿ ಕೆಲ ದಿನಗಳ ಹಿಂದೆ ಬಿಜೆಪಿ ನಾಯಕ ಎನ್.‌ಆರ್.‌ರಮೇಶ್ ಈ ಬಗ್ಗೆ ದಾಖಲೆಗಳ ಸಮೇತ ಆರೋಪ ಮಾಡಿ ತನಿಖೆಗೆ ಒತ್ತಾಯ ಮಾಡಿದ್ದರು. ಈಗ ಇದೇ ವ್ಯವಹಾರ ಇಡಿ ಇಕ್ಕಳದಲ್ಲಿ ಸಿಲುಕಿಕೊಂಡಿದೆ. ಇದಲ್ಲದೆ, ಶ್ರೀಲಂಕಾದ ಕ್ಯಾಸಿನೋಗಳಲ್ಲಿ ಹಾಗೂ ಕೆಲ ದೇಶಗಳಲ್ಲಿ ಜಮೀರ್‌ ಹೂಡಿಕೆ ಮಾಡಿರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ರೋಷನ್‌ ಬೇಗ್‌ ಕೂಡ ಟಾರ್ಗೆಟ್

ಜಮೀರ್‌ ಜತೆಯಲ್ಲೇ ಮಾಜಿ ಸಚಿವ ರೋಷನ್‌ ಬೇಗ್‌ ಮೇಲೆ ದಾಳಿ ನಡೆದಿದ್ದಾರೆ. ಐಎಂಎ ವಂಚನೆ ಪ್ರಕರಣ ಸಂಬಂಧ ಬೇಗ್​ ಮನೆ ಮೇಲೆ ಈ ದಾಳಿ ನಡೆದಿದೆ ಎನ್ನಲಾಗಿದ್ದು, ಏಕಕಾಲದಲ್ಲಿ ಒಟ್ಟು 6 ಕಡೆ ದಾಳಿ ನಡೆಸಲಾಗಿದೆ. ಬೆಳಗ್ಗೆ 7 ಗಂಟೆ ಹೊತ್ತಿಗೆ ಶಿವಾಜಿನಗರದ ಕೋಲ್ಸ್ ಪಾರ್ಕ್ ಬಳಿ ಇರುವ ಬೇಗ್ ಮನೆ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದು,  ಐಎಂಎ ಹಗರಣದಲ್ಲಿ ಅವರು ಆ ಕಂಪನಿಯಿಂದ 400 ಕೋಟಿ ರೂ. ಪಡೆದಿದ್ದರೆಂಬ ಆರೋಪ ಇದೆ. ಈ ಬಗ್ಗೆ ಇಡಿ ಅಧಿಕಾರಿಗಳು ಜಾಲಾಡಿದ್ದಾರೆ ಎನ್ನಲಾಗಿದೆ.

ಇದಾದ ಮೇಲೆ ನಗರದ ಫ್ರೇಜರ್ʼಟೌನ್ʼನಲ್ಲಿರುವ ರೋಷನ್ ಬೇಗ್ ಮನೆಯ ಮೇಲೂ ಇಡಿ ಅಧಿಕಾರಿಗಳು ದಾಳಿ ಇಟ್ಟಿದ್ದಾರೆ. ಈ ಮನೆಯಲ್ಲಿ 8-10 ಅಧಿಕಾರಿಗಳು ದಾಖಲೆಗಳನ್ನು ಪರಿಸೀಲನೆ ಮಾಡುತ್ತಿದ್ದಾರೆಂಬ ಮಾಹಿತಿ ಇದೆ. ಜತೆಗೆ, ವಿದೇಶಗಳಲ್ಲಿ ಅಪಾರ ಪ್ರಮಾಣದ ಹಣ ಹೂಡಿಕೆ ಮಾಡಿದ ಅನುಮಾನವೂ ಇಡಿ ಅಧಿಕಾರಿಗಳಿಗೆ ಇದ್ದು, ಆ ನಿಟ್ಟಿನಲ್ಲೂ ಶೋಧ ಮುಂದುವರಿದಿದೆ ಎನ್ನಲಾಗಿದೆ.

45 ಅಧಿಕಾರಿಗಳು ಮತ್ತು 25ಕ್ಕೂ ಹೆಚ್ಚು ಕಾರು

ಅತ್ಯಂತ ಮಹತ್ವದ್ದಾಗಿರುವ ಈ ದಾಳಿ ನಡೆಸುವ ಮುನ್ನ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಭಾರೀ ಸಿದ್ಧತೆ ನಡೆಸಿದ್ದಾರೆ. ವಾರಕ್ಕೆ ಮೊದಲೇ ಬಂದು ಬೆಂಗಳೂರಿನ ಖಾಸಗಿ ಹೋಟಲ್‌ ಒಂದರಲ್ಲಿ ಪ್ರವಾಸಿಗರಂತೆ, ಖಾಸಗಿ ಕಂಪನಿ ಉದ್ಯೋಗಿಗಳಂತೆ ಯಾರಿಗೂ ಎಳ್ಳಷ್ಟೂ ಅನುಮಾನ ಬಾರದಂತೆ ಮೊಕ್ಕಾಂ ಹೂಡಿದ್ದ 45 ಅಧಿಕಾರಿಗಳು, ಆ ಮೋದಲೇ ಸಂಗ್ರಹಿಸಿದ್ದ ಮಾಹಿತಿಯಂತೆ ವ್ಯಾಪಕ ವರ್ಕೌಟ್‌ ಮಾಡಿದ್ದರು.

ಜಮೀರ್‌, ರೋಷನ್‌ ಚಲನವಲನಗಳ ಮೇಲೆ ಕಣ್ಣಿಟ್ಟಿದ್ದ ಅಧಿಕಾರಿಗಳು ಗುರುವಾರ ಬೆಳಗ್ಗೆ ದಾಳಿಯ ಮಹೂರ್ತ ಫಿಕ್ಸ್‌ ಮಾಡಿದ್ದರು. ಬೆಳಗ್ಗೆ ಐದು ಗಂಟೆಗೆ ಹೋಟೆಲ್‌ ಬಿಟ್ಟು 5.45ಕ್ಕೆಲ್ಲ ಇಬ್ಬರೂ ನಾಯಕರ ಕದ ತಟ್ಟಿದ್ದರು. ಆ ಕ್ಷಣದಲ್ಲಿ ಇಬ್ಬರೂ ನಾಯಕರೂ ಅವರವರ ಮನೆಗಳಲ್ಲೇ ಇದ್ದರು. ಇಡಿ ಟೀಮ್‌ಗಳನ್ನು ಕಂಡು ಇಬ್ಬರೂ ಶಾಕ್‌ ಆಗಿದ್ದಾರೆ. ‌

Tags: chamarajpet mlaCongress MLA Zameer Ahmed Khaneded raidenforcement directorateIMA scam casezameer ahmed
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

by cknewsnow desk
October 28, 2026
0

ಬೆಂಗಳೂರಿನಲ್ಲಿ 43.13% ಮತದಾರರ ಪ್ರಮಾಣ ಕುಸಿತ

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

by cknewsnow desk
October 25, 2026
0

ಹಾಲಿ ಮುಖ್ಯಮಂತ್ರಿ ವಿರುದ್ಧ ಕೇಂದ್ರ ಸಚಿವರ ಗಂಭೀರ ಆರೋಪ; ಈಗಿನ ಮಹಾನ್ ಮುಖ್ಯಮಂತ್ರಿಗಳೇ ಸ್ಟಿಂಗ್ ಮೂಲಪುರುಷ

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

by cknewsnow desk
October 25, 2026
0

ಸ್ಟಿಂಗ್ ಆಪರೇಶನ್ ಪ್ರಕರಣದಲ್ಲಿ ರಾಜ್ಯ ಸರ್ಕಾರದ್ದು ಇಬ್ಬಗೆ ನೀತಿ; ಕೇಂದ್ರ ಸಚಿವ ಪ್ರಲ್ಹಾದ ಜೋಶಿ ವಾಗ್ದಾಳಿ

ಸ್ಟಿಂಗ್ ವಿರುದ್ಧ ಕೋರ್ಟ್ ಮೊರೆ ಹೋದ ಸಿದ್ದರಾಮಯ್ಯ! ಇಂದು ಆದೇಶ ನಿರೀಕ್ಷೆ

ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

by cknewsnow desk
October 25, 2026
0

ಹೆಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ; #kpsc ಹಗರಣದ ದಿಕ್ಕು ತಪ್ಪಿಸಲು ಪ್ರಿಯಾಂಕ್ ಖರ್ಗೆ ಒದ್ದಾಟ

ಬೆಂಗಳೂರು ಸುತ್ತಲಿನ ಜನರ ಸಮಾಧಿ ಮೇಲೆ ಬ್ರ್ಯಾಂಡ್‌ ಬೆಂಗಳೂರು

10 ತಿಂಗಳಾದರೂ ಸಿಗದ ಭೂಮಿ; ರಾಜ್ಯದ ಕೈತಪ್ಪಲಿದೆಯಾ ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರ

by cknewsnow desk
October 22, 2026
0

ಬೇಸತ್ತು ಮುಖ್ಯಮಂತ್ರಿ ಡಿಕೆಶಿಗೆ ಪತ್ರ ಬರೆದ ಕೇಂದ್ರ ಸಚಿವ #HDK

ರಾಜೀನಾಮೆ ಕೊಟ್ಟು ಹೊರಬನ್ನಿ; ಅಪಮಾನಿತ ದಲಿತ ಸಚಿವರಿಗೆ #Jds ಕಿವಿಮಾತು

ರಾಜೀನಾಮೆ ಕೊಟ್ಟು ಹೊರಬನ್ನಿ; ಅಪಮಾನಿತ ದಲಿತ ಸಚಿವರಿಗೆ #Jds ಕಿವಿಮಾತು

by cknewsnow desk
October 22, 2026
0

ಮೈಸೂರು ದಸರಾದಲ್ಲಿ ಅವಮಾನ ಪ್ರಸಂಗ; ಬಾಯಲ್ಲಿ ಜಾತ್ಯತೀತ ತತ್ವ, ಆಚರಣೆಯಲ್ಲಿ ಅಸೃಶ್ಯತೆ!; ಕಾಂಗ್ರೆಸ್ ವಿರುದ್ಧ ಜೆಡಿಎಸ್ ವಾಗ್ದಾಳಿ

Next Post
ಚಿಕ್ಕಬಳ್ಳಾಪುರ ಜಿಲ್ಲೆಗೆ ಕೋವಿಡ್ 3ನೇ ಅಲೆ ಆತಂಕವಿಲ್ಲ: ಸಚಿವ ಡಾ.ಕೆ.ಸುಧಾಕರ್

ಚಿಕ್ಕಬಳ್ಳಾಪುರ ಜಿಲ್ಲೆಗೆ ಕೋವಿಡ್ 3ನೇ ಅಲೆ ಆತಂಕವಿಲ್ಲ: ಸಚಿವ ಡಾ.ಕೆ.ಸುಧಾಕರ್

Leave a Reply Cancel reply

Your email address will not be published. Required fields are marked *

Recommended

ಗುರುಮನೆಗೆ ಬಂದು ಟೀಕಾಕಾರರ ಬಾಯಿ ಮುಚ್ಚಿಸಿದ ನೀರಜ್ ಚೋಪ್ರ

ಗುರುಮನೆಗೆ ಬಂದು ಟೀಕಾಕಾರರ ಬಾಯಿ ಮುಚ್ಚಿಸಿದ ನೀರಜ್ ಚೋಪ್ರ

5 years ago
ಕಾಂಗ್ರೆಸ್ಸಿಗೆ ಅಸತ್ಯವೇ ಅಷ್ಟೈಶ್ವರ್ಯ! ಆತ್ಮವಂಚನೆಯೇ ಅಧಿಕಾರದ ಮೂಲ ಬಂಡವಾಳ!!

ಕಾಂಗ್ರೆಸ್ಸಿಗೆ ಅಸತ್ಯವೇ ಅಷ್ಟೈಶ್ವರ್ಯ! ಆತ್ಮವಂಚನೆಯೇ ಅಧಿಕಾರದ ಮೂಲ ಬಂಡವಾಳ!!

3 years ago

Popular News

  • #SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

    #SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

    0 shares
    Share 0 Tweet 0
  • ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

    0 shares
    Share 0 Tweet 0
  • ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

    0 shares
    Share 0 Tweet 0
  • ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

    0 shares
    Share 0 Tweet 0
  • 10 ತಿಂಗಳಾದರೂ ಸಿಗದ ಭೂಮಿ; ರಾಜ್ಯದ ಕೈತಪ್ಪಲಿದೆಯಾ ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರ

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

October 28, 2026
ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

October 25, 2026
ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

October 25, 2026
ಸ್ಟಿಂಗ್ ವಿರುದ್ಧ ಕೋರ್ಟ್ ಮೊರೆ ಹೋದ ಸಿದ್ದರಾಮಯ್ಯ! ಇಂದು ಆದೇಶ ನಿರೀಕ್ಷೆ

ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

October 25, 2026

Covid 19

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

October 16, 2026
ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ