• About
  • Advertise
  • Careers
  • Contact
Sunday, May 18, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home GUEST COLUMN

ನೀರಜ್ ಚೋಪ್ರ ಎಂಬ ರಾಷ್ಟ್ರೀಯ ಸ್ಫೂರ್ತಿ

cknewsnow desk by cknewsnow desk
August 11, 2021
in GUEST COLUMN
Reading Time: 2 mins read
1
ನೀರಜ್ ಚೋಪ್ರ ಎಂಬ ರಾಷ್ಟ್ರೀಯ ಸ್ಫೂರ್ತಿ

courtesy: Athletics Federation of India @afiindia

968
VIEWS
FacebookTwitterWhatsuplinkedinEmail

ಭ್ರಷ್ಟಾಚಾರ, ಸ್ವಜನ ಪಕ್ಷಪಾತ, ಜಾತಿ, ಧರ್ಮ, ಪ್ರಾಂತಿಯತೆಯಂಥ ಸೋಂಕುಗಳಿಂದ ಬಳಲುತ್ತಿರುವ ಭಾರತೀಯ ಕ್ರೀಡಾ ಕ್ಷಿತಿಜದಲ್ಲಿ ಉದಯಿಸಿದ ಅನೇಕ ಅನನ್ಯ ತಾರೆಗಳಲ್ಲಿ ನೀರಜ್‌ ಚೋಪ್ರ ಅವರದ್ದು ವಿಶೇಷ ಸ್ಥಾನ. ಹಳ್ಳಿಯಿಂದ ಆರಂಭವಾದ ಅವರ ಪಯಣ, ಸೇನೆಯ ಬೆಚ್ಚನೆಯ ಉತ್ತೇಜನದಲ್ಲಿ ತಿರುವು ಪಡೆದು ಟೊಕಿಯೋದಲ್ಲಿ ಠೇಂಕರಿಸಿದ್ದು ಸಣ್ಣ ಸಾಧನೆಯಲ್ಲ. ಅವರ ಪರಿಶ್ರಮ, ಬದ್ಧತೆ, ಗುರಿಯನ್ನು ಹೇಳುತ್ತಲೇ ಈಗ ರಾಷ್ಟ್ರೀಯ ಸ್ಫೂರ್ತಿಯಾಗಿ ಬೆಳೆದು ನಿಂತ ಯುವಕನ ಕಥೆಯನ್ನು ಬಹು ಸೊಗಸಾಗಿ ಕಟ್ಟಿಕೊಟ್ಟಿದ್ದಾರೆ ನಮ್ಮ ಅಂಕಣಕಾರ ಡಾ.ಗುರುಪ್ರಸಾದ್‌ ರಾವ್‌ ಹವಲ್ದಾರ್.‌


ಸಾವಿರಾರು ವರ್ಷಗಳ ಇತಿಹಾಸವಿರುವ, ಗೆಲ್ಲುವುದೇ ಮುಖ್ಯವಲ್ಲ ಸ್ಪರ್ಧಿಸುವುದು ಮುಖ್ಯ ಎಂಬ ಧ್ಯೇಯವಾಕ್ಯದೊಂದಿಗೆ ಪ್ರತಿ ನಾಲ್ಕು ವರ್ಷಗಳಿಗೊಮ್ಮೆ ನಡೆಯುವ ಜಗತ್ತಿನ ಬಹುದೊಡ್ಡ ಕ್ರೀಡಾಹಬ್ಬವೇ ಒಲಿಂಪಿಕ್ಸ್. ಕೊರೊನಾದಿಂದ ಕಳೆದ ವರ್ಷ ನಡೆಯಬೇಕಿದ್ದ ಈ ಕ್ರೀಡಾಕೂಟ ಈ ವರ್ಷ ನಡೆಯಿತು.

ಈ ಬಾರಿ ಜಪಾನಿನ ಟೋಕಿಯೋದಲ್ಲಿ ನಡೆದ ಒಲಂಪಿಕ್ಸ್ʼನಲ್ಲಿ ಮಾನವೀಯ ಮೌಲ್ಯಗಳೊಂದಿಗೆ ವಿಜೃಂಬಿಸಿದ್ದು, ಅದರಲ್ಲಿ ಭಾರತೀಯ ಕ್ರೀಡಾಪಟುಗಳು ಕ್ರೀಡಾಪ್ರೇಮಿಗಳ ಹೃದಯ ಗೆದ್ದಿದ್ದು ವಿಶೇಷ. ಭಾರತೀಯ ಸೈನ್ಯದ 23 ವರ್ಷದ ಸುಬೇದಾರ್, ಚಿನ್ನದ ಹುಡುಗ ನೀರಜ್‌ ಚೋಪ್ರ 13 ವರ್ಷಗಳ ನಂತರ ಭಾರತಕ್ಕೆ ಒಲಿಂಪಿಕ್ಸ್ ಅಥ್ಲೆಟಿಕ್ಸ್ʼನ ಜಾವೆಲಿನ್ ವಿಭಾಗದಲ್ಲಿ ಚಿನ್ನದ ಪದಕ ತಂದಿತ್ತಿದ್ದು ಭಾರತೀಯ ಕ್ರೀಡಾರಂಗಕ್ಕೆ ಹೊಸ ಚೈತನ್ಯ ಸಿಕ್ಕಿದಂತೆ ಆಗಿದೆ.

ಒಲಿಂಪಿಕ್ಸ್ ಇತಿಹಾಸದಲ್ಲಿ ಭಾರತದ ರಾಷ್ಟ್ರಗೀತೆ ಕಡೇ ಸಾರಿ ಮೊಳಗಿದ್ದು 2008ರ ಬೀಜಿಂಗ್ ಒಲಿಂಪಿಕ್ಸ್‌ನಲ್ಲಿ. ಆವತ್ತು ಶೂಟರ್ ಅಭಿನವ ಬಿಂದ್ರಾ ಅವರು ಬಂಗಾರ ಗೆದ್ದು ಜಾಗತಿಕ ಕ್ರೀಡಾಕೂಟದಲ್ಲಿ ಭಾರತದ ರಾಷ್ಟ್ರಗೀತೆ ಮೊಳಗುವಂತೆ ಮಾಡಿ ಇಡೀ ದೇಶಿಗರಿಗೆ ಹೆಮ್ಮೆ ಮೂಡಿಸಿದ್ದರು. ನಂತರ ಭಾರತಕ್ಕೆ ಅಥ್ಲೆಟಿಕ್ಸ್ ವಿಭಾಗದಲ್ಲಿ ಚೊಚ್ಚಲ ಚಿನ್ನದ ಪದಕವನ್ನು ಫೈನಲ್ಸ್‌ನ ಎರಡನೇ ಯತ್ನದಲ್ಲಿ 87.58 ಮೀಟರ್ ದೂರ ಜಾವೆಲಿನ್ ಎಸೆದ ನೀರಜ್‌ ಚೋಪ್ರ ಅಂತಿಮವಾಗಿ ಚಿನ್ನವನ್ನು ಭಾರತದ ಪಾಲುವಾಗುವಂತೆ ಮಾಡಿದರು.

ಈ ಮೂಲಕ ಒಲಿಂಪಿಕ್ಸ್‌ನಲ್ಲಿ ವೈಯಕ್ತಿಕ ಚಿನ್ನ ಗೆದ್ದ ಎರಡನೇ ಭಾರತೀಯರಾದರು ನೀರಜ್. ಇದು ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಭಾರತಕ್ಕೆ ಲಭಿಸುತ್ತಿರುವ 7ನೇ ಪದಕ ಮತ್ತು ಚೊಚ್ಚಲ ಬಂಗಾರ. ಜಾವೆಲಿನ್ ಥ್ರೋನಲ್ಲಿ ಚಿನ್ನದ ಗೆದ್ದಿರುವ ಅವರು ತಮ್ಮ ಪದಕವನ್ನು ಇತ್ತೀಚಿಗೆ ನಿಧನರಾದ ‘ಫ್ಲೈಯಿಂಗ್ ಸಿಖ್‘ ಖ್ಯಾತಿಯ ಅಥ್ಲೀಟ್ ಮಿಲ್ಕಾ ಸಿಂಗ್ ಅವರಿಗೆ ಅರ್ಪಿಸಿದ್ದಾರೆ. ‘ಮಿಲ್ಖಾ ಸಿಂಗ್ ಅವರು ಕ್ರೀಡಾಂಗಣದಲ್ಲಿ ರಾಷ್ಟ್ರಗೀತೆ ಕೇಳಲು ಬಯಸಿದ್ದರು. ಅವರು ಈಗ ನಮ್ಮೊಂದಿಗಿಲ್ಲ. ಆದರೆ, ಅವರ ಕನಸು ಈಡೇರಿದೆ’ ಎಂದು ಅವರು ಹೇಳಿದ್ದಾರೆ.

ಅವಿಭಕ್ತ ಕುಟುಂಬದ ಕುಡಿ

ಹರಿಯಾಣ ರಾಜ್ಯದ ಪಾಣಿಪತ್ ಹತ್ತಿರದ ಖಂಡ್ರಾ ಗ್ರಾಮದ ಅವಿಭಕ್ತ ಕುಟುಂಬದ ಕೃಷಿ ವೃತ್ತಿಯನ್ನು ಮಾಡುತ್ತಿರುವ ಸತೀಶ್ ಕುಮಾರ್ ಮತ್ತು ಸರೋಜಾದೇವಿಯವರ ಪುತ್ರ ನೀರಜ್ ಚೋಪ್ರ. ಇವರ ಕುಟುಂಬದಲ್ಲಿ 16 ಜನರಿದ್ದಾರೆ. ಅಂಥಹ ‘ದೊಡ್ಡ’ ಮನೆಯಲ್ಲಿ ಬೆಳೆದ ಹುಡುಗ ಸಣ್ಣವನಿದ್ದಾಗ ಮರ ಏರುತ್ತ, ಜಮೀನುಗಳಲ್ಲಿ ಮೇಯುತ್ತಿದ್ದ ಕೋಣಗಳ ಬಾಲ ಹಿಡಿದು ಕೀಟಲೆ ಮಾಡುತ್ತಿದ್ದ. ಅಲ್ಲದೇ 12ನೇ ವಯಸ್ಸಿನಲ್ಲಿ 90 ಕೆ.ಜಿ ದೇಹತೂಕ ಹೊಂದಿದ್ದ.

ಮಗನಿಗೆ ಶಿಸ್ತು ಕಲಿಸುವುದಕ್ಕಾಗಿ ತಂದೆ ಸತೀಶ್ ಕುಮಾರ್ ಕ್ರೀಡೆಯಲ್ಲಿ ಅಭ್ಯಾಸ ಮಾಡಲು ಒತ್ತಾಯಿಸಿದರು. ಇತ್ತ ಶಾಲೆಯಲ್ಲಿ ನೀರಜ್ ಚೋಪ್ರ ಅವರ ಟೀಚರ್ ಸಹ ಇದೇ ಸಲಹೆ ನೀಡಿದ್ದರಂತೆ. ಮೊದಲು ಒಪ್ಪಲಿಲ್ಲವಾದರೂ ಕೊನೆಗೆ ಓಟದಲ್ಲಿ ಪಾಲ್ಗೊಳ್ಳುವುದಾಗಿ ಹೇಳಿದರು. ಹೀಗೆ ಜಾವೆಲಿನ್ ಥ್ರೋ ಪ್ರಾಕ್ಟೀಸ್ ಆರಂಭಿಸಿದ ನಂತರ ದೇಹದ ಆಕಾರದಲ್ಲಿ ಸುಧಾರಣೆಯಾಗಿತ್ತಂತೆ. ಬಳಿಕ ಜಿಮ್ ಮಾಡಿ, ಫಿಟ್ನೆಸ್ ಕಾಪಾಡಿಕೊಂಡರು. ನಂತರ ಕ್ರೀಡೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡರು. ಅಲ್ಲದೇ ಸೇನೆ ಸೇರಿದ ಬಳಿಕ ಮತ್ತಷ್ಟು ಫಿಟ್ ಆಗಿದ್ದರು. ಪಾಣಿಪತ್ʼನ ಶಿವಾಜಿ ಕ್ರೀಡಾಂಗಣಕ್ಕೆ ಅವರ ಪಯಣ ಬೆಳೆಯಿತು. ನಂತರ ಪಂಚಕುಲಾದ ತವುದೇವಿ ಕ್ರೀಡಾಂಗಣದಲ್ಲಿ ಅಭ್ಯಾಸ ನಡೆಯಿತು.

ನೀರಜ್ ಚೋಪ್ರ ಕುರುಕ್ಷೇತ್ರ ವಿಶ್ವವಿದ್ಯಾಲಯದಲ್ಲಿ ಪದವಿ ಪಡೆದು, ಆ ನಂತರ ಪುಣೆಯ ಆರ್ಮಿ ಸ್ಪೋರ್ಟ್‌ ಇನ್‌ಸ್ಟಿಟ್ಯೂಟ್‌ನಲ್ಲಿ ತರಬೇತಿ ಪಡೆದು 2016ರ ಆಗಸ್ಟ್‌ 26ರಂದು ಭಾರತೀಯ ಸೈನ್ಯದ ನೈಬ್‌ ಸುಬೇದಾರ್‌ ಶ್ರೇಯಾಂಕದ ವಿಭಾಗದಲ್ಲಿ ಕಿರಿಯ ನಿಯುಕ್ತಾಧಿಕಾರಿಯಾಗಿ ಸೇರ್ಪಡೆಗೊಂಡು ಕರ್ತವ್ಯ ನಿರ್ವಹಿಸುತ್ತಿದ್ದಾರೆ.

ಅಲ್ಲಿ ಜಾವೆಲಿನ್ ಪ್ರಾಕ್ಟೀಸ್‌ ಮಾಡುತ್ತ ಪೋಲೆಂಡ್‍ನಲ್ಲಿ ನಡೆದ ಅಂಡರ್ 20 ಜೂನಿಯರ್ ವರ್ಲ್ಡ್ ಚಾಂಪಿಯನ್‍ಶಿಪ್ 2016ರಲ್ಲಿ 86.48 ಮೀಟರ್ ದೂರ ಜಾವೆಲಿನ್ ಎಸೆಯುವ ಮೂಲಕ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಆಸ್ಟ್ರೇಲಿಯಾದಲ್ಲಿ ನಡೆದ 2018ರ ಕಾಮನ್‍ವೆಲ್ತ್ ಗೇಮ್ಸ್ʼನಲ್ಲಿ ನೀರಜ್ ಚೋಪ್ರ ಚಿನ್ನದ ಪದಕ ಗೆದ್ದ ಬಳಿಕ ಒಲಿಂಪಿಕ್ಸ್ʼಗಾಗಿ ತಯಾರಿ ನಡೆಸಿದ್ದರು. ಅಲ್ಲದೆ ಅವರ ಉತ್ತಮ ಎಸೆತ 88.07 ಮೀಟರ್ ಎಂದು ನೀರಜ್ ಚಿಕ್ಕಪ್ಪ ಭೀಮಸೇನ ಚೋಪ್ರ ಅವರು ಹೇಳುತ್ತಾರೆ.

ನೀರಜ್‌ ಹಿಂದಿನ ಕನ್ನಡ ಶಕ್ತಿ

ನೀರಜ್ ಸಾಧನೆ ಹಿಂದೆ ಕನ್ನಡಿಗರೊಬ್ಬರು ಇದ್ದಾರೆ ಅಂದರೆ ಆಶ್ಚರ್ಯವಾಗಬಹುದು, ಭಾರತೀಯ ಸೇನೆಯಲ್ಲಿ ಸುಬೇದಾರ್ ಹುದ್ದೆಯಲ್ಲಿರುವ, ಪ್ರಸ್ತುತ ಪುಣೆಯ ಸೇನಾ ಕ್ರೀಡಾ ಇನ್‌ಸ್ಟಿಟ್ಯೂಟ್‌ನಲ್ಲಿ ತರಬೇತುದಾರರಾಗಿರುವ, ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಬೆಂಗಳೆ ಗ್ರಾಮದ ಕಾಶಿನಾಥ ನಾಯ್ಕ ಈ ಚಿನ್ನದ ಪದಕ ವೀರ ನೀರಜ್ ಚೋಪ್ರ ಅವರ ಹಿಂದಿನ ಶಕ್ತಿ. 23 ವರ್ಷದಿಂದ ಸೇನೆಯಲ್ಲಿರುವ ಕಾಶಿನಾಥ ನಾಯ್ಕ, 2010ರ ನವದೆಹಲಿಯ ಕಾಮನ್‌ವೆಲ್ತ್ ಗೇಮ್ಸ್‌ನ ಜಾವೆಲಿನ್ ಎಸೆತದಲ್ಲಿ ಕಂಚಿನ ಪದಕ ಗಳಿಸಿದ್ದರು. 2013ರಿಂದ 2019ರವರೆಗೆ ಅಂತಾರಾಷ್ಟ್ರೀಯ ಮಟ್ಟದ ಸ್ಪರ್ಧೆಗಳಲ್ಲಿ ಭಾರತವನ್ನು ಪ್ರತಿನಿಧಿಸುವ ಕ್ರೀಡಾಪಟುಗಳಿಗೆ ತರಬೇತಿ ನೀಡಿದ್ದಾರೆ.

2015ರಲ್ಲಿ ಕಾಶಿನಾಥ ನಾಯ್ಕರ ಬಳಿ ತರಬೇತಿಗೆ ಸೇರಿದ್ದ ನೀರಜ್ ಚೋಪ್ರ, 2017ರವರೆಗೆ ತರಬೇತಿ ಪಡೆದಿದ್ದರು. ಅಂದೇ 86.48 ಮೀಟರ್ ಜೂನಿಯರ್ ವಿಶ್ವ ದಾಖಲೆ ಮಾಡಿದ್ದ ನೀರಜ್ ಚೋಪ್ರ, ಇತ್ತೀಚಿಗೆ ವಿದೇಶಿ ತರಬೇತುದಾರರ ಬಳಿ ತರಬೇತಿ ಪಡೆಯಲಾರಂಭಿಸಿದ್ದರು.

“2016ರಲ್ಲೇ ನೀರಜ್ ಚೋಪ್ರ ಚಿನ್ನ ಗೆಲ್ಲುವ ನಿರೀಕ್ಷೆ ಇಟ್ಟುಕೊಂಡಿದ್ದೆ. ಯಾಕೆಂದರೆ, ಕೆಲ ಯುವಕರು ತರಬೇತಿ ಪಡೆದು ಒಂದಷ್ಟು ಕ್ರೀಡೆಗಳಲ್ಲಿ ಸಾಧನೆ ತೋರುತ್ತಿದ್ದಂತೆ ಅಹಂ ಬರುತ್ತದೆ. ಆದರೆ ನೀರಜ್ ಚೋಪ್ರನಲ್ಲಿ ಎಳ್ಳಷ್ಟೂ ಆ ಗುಣವಿಲ್ಲ. ಎಲ್ಲರ ಆಶೀರ್ವಾದ ಆತನ ಮೇಲಿದೆ. ಆತನ ಗುಣ ಕೂಡ ಇಂದು ಚಿನ್ನದ ಪದಕ ಗೆಲ್ಲಲು ಕಾರಣವಾಗಿದೆ, ನೀರಜ್ ಚೋಪ್ರಗೆ ಪ್ರತಿಭೆ ದೇವರು ಕೊಟ್ಟ ವರ. ದೇಶಕ್ಕೆ ಮೊದಲ ಒಲಿಂಪಿಕ್ಸ್ ಮೆಡಲ್ ಈತನೇ ತರುತ್ತಾನೆಂದು ಅವರ ಚಿಕ್ಕಪ್ಪರ ಬಳಿ 2016ರಲ್ಲೇ ನಾನು ಹೇಳಿದ್ದೆ. ಆ ಭವಿಷ್ಯ ಇಂದು ನಿಜವಾಗಿದೆ. ನನಗೂ ಒಲಿಂಪಿಕ್ಸ್‌ನಲ್ಲಿ ಪದಕ ಗೆಲ್ಲುವ ಕನಸು ಇತ್ತು. ಆದರೆ, ಅದನ್ನು ನನ್ನ ಶಿಷ್ಯ ನೀರಜ್ ಚೋಪ್ರ ನನಸು ಮಾಡಿದ್ದಾರೆ. ಹೀಗಾಗಿ ಹೆಚ್ಚು ಖುಷಿಯಾಗಿದೆ” ಎಂದಿದ್ದಾರೆ ಕಾಶಿನಾಥ ನಾಯ್ಕ.

ವಿಶ್ವ ಚಾಂಪಿಯನ್‌ಶಿಪ್, ಏಷಿಯನ್ ಗೇಮ್ಸ್ ಸೇರಿದಂತೆ ಹಲವು ಸ್ಪರ್ಧೆಗಳಲ್ಲಿ ಪದಕ ಸಾಧನೆ ಮೆರೆದ ಅನುರಾಣಿ ಅವರು 2013ರಿಂದ ಕಾಶಿನಾಥ ಅವರ ಬಳಿ ತರಬೇತಿ ಪಡೆದಿದ್ದು, ಇನ್ನೋರ್ವ ಕ್ರೀಡಾಪಟು ಶಿವಪಾಲ್‌ರಿಗೂ ಕಾಶಿನಾಥ್ ತರಬೇತಿ ನೀಡಿದ್ದರು. ಇನ್ನು, ನೀರಜ್‌ ಅವರು ಟೋಕಿಯೋ ಒಲಿಂಪಿಕ್ಸ್ʼನಲ್ಲಿ ಎರಡನೇ ಎಸೆತದಲ್ಲೇ 87.58 ಮೀಟರ್ ದೂರಕ್ಕೆ ಜಾವೆಲಿನ್ ಎಸೆಯುವ ಮೂಲಕ ಚಿನ್ನದ ಪದಕಕ್ಕೆ ಮುತ್ತಿಕ್ಕಿದ್ದಾರೆ. ಈ ಮೂಲಕ ಅಥ್ಲೆಟಿಕ್ ಲೋಕ ನಿಬ್ಬೆರಗಾಗುವಂತೆ ಮಾಡಿದ್ದಂತು ಸುಳ್ಳಲ್ಲ.

ನೀರಜ್ ಚೋಪ್ರ ಸಾಧನೆ ಇತರ ಪ್ರತಿಭಾವಂತ ಕ್ರೀಡಾಪಟುಗಳಿಗೆ ಆಶಾಕಿರಣವಾಗಿದೆ ಎಂದರೆ ತಪ್ಪಲ್ಲ, ಏಕೆಂದರೆ ಜಗತ್ತಿನಲ್ಲಿ ಅತಿಹೆಚ್ಚು ಜನಸಂಖ್ಯೆಯನ್ನು, ಯುವಕರನ್ನೂ  ಹೊಂದಿರುವ ದೇಶ ನಮ್ಮದು. ಈಗಲೂ ಸಹ ಸರಿಯಾದ ಮೂಲಭೂತ ಸೌಲಭ್ಯ-ಅವಕಾಶಗಳಿಲ್ಲದೇ ಇರುವ ಅದಿವಾಸಿ ಬುಡಕಟ್ಟುಗಳು ವಾಸ ಮಾಡುವ ಗ್ರಾಮಾಂತರ ಪ್ರದೇಶಗಳಲ್ಲಿ ಲಕ್ಷಾಂತರ ಪ್ರತಿಭಾವಂತರು ಸಣ್ಣ-ಪುಟ್ಟ ಕೆಲಸ ಮಾಡಿಕೊಂಡು ತಮ್ಮ ಕನಸುಗಳನ್ನು ಅದಮಿಟ್ಟುಕೊಂಡು ಬದುಕುತ್ತಿರುವುದು ಕಾಣುತ್ತಿವೆ. ಮೀರೂಬಾಯಿ ಅವರಂಥ ಕೆಲವರಷ್ಟೇ ಬೆಳಕಿಗೆ ಬರುತ್ತಿದ್ದಾರೆ.

ಕೇಂದ್ರ ಸರಕಾರ, ರಾಜ್ಯ ಸರಕಾರಗಳು ಮತ್ತು ಖಾಸಗಿ ಕಂಪನಿಗಳು ಸಂಸ್ಥೆಗಳು ಕ್ರೀಡಾ ಕೇಂದ್ರಗಳನ್ನು ಸ್ಥಾಪಿಸಿ ಕೋಟ್ಯಂತರ ರೂಪಾಯಿ ಹಣವನ್ನು ವಿನಿಯೋಗ ಮಾಡಿದರೂ ಅದು ಸಮರ್ಪಕವಾಗಿ ಬಳಕೆಯಾಗುತ್ತಿಲ್ಲ. ಶಾಲೆ-ಕಾಲೇಜುಗಳಲ್ಲಿ ಕ್ರೀಡೆಗೆ ಇರುವ ಸಮಯವನ್ನು ಕೇವಲ ಓದಿಗೆ ಮೀಸಲಿಟ್ಟ ಪರಿಣಾಮ ಒಲಂಪಿಕ್ಸ್ʼನಲ್ಲಿ 10 ಪದಕಗಳನ್ನು ಮಾತ್ರ ಪಡೆಯಲು ಶಕ್ತರಾಗಿದ್ದೇವೆ. ಈಗಲಾದರೂ ನಾವು ಗಂಭೀರವಾಗಿ ಯೋಚಿಸಬೇಕಿದೆ. ಆಡಳಿತಗಾರರು ತಮ್ಮ ಮನೋಧರ್ಮವನ್ನು ಬದಲಿಸಿಕೊಳ್ಳಬೇಕಿದೆ.

ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾಗವಹಿಸಿ ಪದಕ ಪ್ರಶಸ್ತಿಗಳನ್ನು ಪಡೆಯಬೇಕಾದರೆ ಮೊದಲು ಕ್ರೀಡಾಕ್ಷೇತ್ರದಲ್ಲಿ ಭ್ರಷ್ಟಾಚಾರ, ಜಾತಿ ತಾರತಮ್ಯ, ಶಿಫಾರಸುಗಳನ್ನು ಮಾಡಿ ಅರ್ಹತೆ ಇಲ್ಲದವರಿಗೆ ಅವಕಾಶ ನೀಡುವುದು, ಕಳಪೆ ಕ್ರೀಡಾ ಸಲಕರಣೆಗಳು ನೀಡುವುದು ನಿಲ್ಲಬೇಕು. ಇಂಥ ಪರಿಸ್ಥಿತಿಯಲ್ಲಿ ಸಹ ನಾವು ದೇಶಕ್ಕಾಗಿ ಆಡುತ್ತೇವೆ ಎಂಬ ಮನೋಭಾವದಿಂದ ಇಂದಿಗೂ ಕ್ರೀಡೆಗಳಲ್ಲಿ ಪದಕಗಳನ್ನು ಗೆಲ್ಲಲು ಸಾಧ್ಯವಾಗಿದೆ. ಭಾರತವು ತಂತ್ರಜ್ಞಾನ, ನವೋದ್ಯಮ, ಕೈಗಾರಿಕಾ ಕ್ಷೇತ್ರದಲ್ಲಿ ಜಗತ್ತಿನಲ್ಲಿ ತನ್ನದೇ ಛಾಪು ಮೂಡಿಸುತ್ತಿರುವ ದಿನಮಾನಗಳಲ್ಲಿ ಕ್ರೀಡೆಗೆ ಮೊದಲ ಆದ್ಯತೆ ನೀಡಿದಾಗ ಮತ್ತು ಅತ್ಯುತ್ತಮ ಸೌಲಭ್ಯ ಒದಗಿಸಿದಾಗ ನೀರಜ್ ರಂತಹ ಲಕ್ಷಾಂತರ ಜನರು ದೇಶದ ಕೀರ್ತಿಯನ್ನು ಬೆಳಗಿಸುವುದರಲ್ಲಿ ಸಂಶಯವಿಲ್ಲ.

ಓಲಂಪಿಕ್ʼನಲ್ಲಿ ಪದಕ ವಿಜೇತರಿಗೆ ಅಭಿನಂದನೆಗಳು ಹೇಳುತ್ತಾ ನಿಮ್ಮ ಈ ಕಠಿಣ ಪರಿಶ್ರಮ, ಶ್ರದ್ಧೆ, ಗೆಲ್ಲುವ ಛಲ ಇತರರಿಗೆ ಸ್ಫೂರ್ತಿ ನೀಡಲಿ ಎಂದು ಹಾರೈಸುತ್ತೇನೆ.


ಡಾ.ಗುರುಪ್ರಸಾದ ಹವಲ್ದಾರ್

ಮೂಲತಃ ಉಪನ್ಯಾಸಕರು. ಬಳ್ಳಾರಿ ಜಿಲ್ಲೆಯ ಹೊಸಪೇಟೆ ತಾಲ್ಲೂಕಿನ ಮರಿಯಮ್ಮನ ಹಳ್ಳಿಯವರು. ಪ್ರಸ್ತುತ ಹಗರಿಬೊಮ್ಮನಹಳ್ಳಿ ಜಿವಿಪಿಪಿ ಪದವಿ ಕಾಲೇಜನಲ್ಲಿ ಕನ್ನಡ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತ ಜೊತೆಗೆ ಪತ್ರಿಕೆಗಳಿಗೆ ವೆಬ್ ನ್ಯೂಸ್ ಪೋಟ್೯ಲ್ ಗಳಿಗೆ ಲೇಖನ ಬರೆಯುತ್ತಿದ್ದಾರೆ.
Tags: gold medalindian armyjapanNeeraj chopraOlympics 2021tokyotokyo olympics 2020
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಒಬ್ಬರೇ ಒಬ್ಬರು! ಅವರೇ ಭಾರತರತ್ನ ಕರ್ಪೂರಿ ಠಾಕೂರ್.., ಹರಿದ ಕೋಟು, ಹರಿದ ಚಪ್ಪಲಿಯೊಂದಿಗೆ ಸಾಗಿದ ಮಹಾನ್‌ ದಂತಕಥೆ!!

ಒಬ್ಬರೇ ಒಬ್ಬರು! ಅವರೇ ಭಾರತರತ್ನ ಕರ್ಪೂರಿ ಠಾಕೂರ್.., ಹರಿದ ಕೋಟು, ಹರಿದ ಚಪ್ಪಲಿಯೊಂದಿಗೆ ಸಾಗಿದ ಮಹಾನ್‌ ದಂತಕಥೆ!!

by cknewsnow desk
January 27, 2024
0

"ಒಬ್ಬರ ಜನನವು ಅವರ ಹಣೆಬರಹವನ್ನು ನಿಶ್ಚಯಿಸುವುದಿಲ್ಲ" ಎಂದ ಜನ ನಾಯಕ; ಅಪ್ಪಟ ಭಾರತರತ್ನ, ಮೀಸಲು ಕೊಟ್ಟು ಬದುಕು ಕಟ್ಟಿಕೊಟ್ಟ ಭಾರತದ ಭಾಗ್ಯವಿದಾತ

ಸರ್ದಾರ್ ಪಟೇಲರ ದೃಢ ಸಂಕಲ್ಪ, ಮುನ್ಷಿ ಅವರ ಪ್ರಚಂಡ ಧೈರ್ಯ ಮತ್ತು ಬಾಬು ರಾಜೇಂದ್ರ ಪ್ರಸಾದರ ರಾಜಿ ಇಲ್ಲದ ನಿಲುವು

ಸರ್ದಾರ್ ಪಟೇಲರ ದೃಢ ಸಂಕಲ್ಪ, ಮುನ್ಷಿ ಅವರ ಪ್ರಚಂಡ ಧೈರ್ಯ ಮತ್ತು ಬಾಬು ರಾಜೇಂದ್ರ ಪ್ರಸಾದರ ರಾಜಿ ಇಲ್ಲದ ನಿಲುವು

by cknewsnow desk
January 21, 2024
0

ಅಯೋಧ್ಯಾ ಆಂದೋಲನ ಭಾರತದ ಅಂತರಾತ್ಮದ ಧ್ವನಿ; ಎಲ್.ಕೆ.ಆಡ್ವಾಣಿ ಅವರು ತಮ್ಮ ಆತ್ಮಕಥೆ My Country My Life ಕೃತಿಯಲ್ಲಿ ಬರೆದಿರುವ ಮಹತ್ವದ ಲೇಖನ ಸಿಕೆನ್ಯೂಸ್‌ ನೌ ನಲ್ಲಿ..

ಶ್ರೀರಾಮಪ್ರಭುವೇ ಕ್ಷಮಿಸು! ನಿನ್ನ ಹೆಸರಿಟ್ಟುಕೊಂಡವರೆಲ್ಲ ನಿನ್ನವರಲ್ಲ!!

ಅಯೋಧ್ಯಾ ಆಂದೋಲನ ಭಾರತದ ಅಂತರಾತ್ಮದ ಧ್ವನಿ; ಮಂದಿರಕ್ಕೆ ಅಂಕುರಾರ್ಪಣೆ ಆಗಿದ್ದು ಹೇಗೆ?

by cknewsnow desk
January 19, 2024
0

ಎಲ್.ಕೆ.ಆಡ್ವಾಣಿ ಅವರು ತಮ್ಮ ಆತ್ಮಕಥೆ My Country My Life ಕೃತಿಯಲ್ಲಿ ಬರೆದಿರುವ ಮಹತ್ವದ ಲೇಖನ ಸಿಕೆನ್ಯೂಸ್‌ ನೌ ನಲ್ಲಿ..

ನಿಡುಮಾಮಿಡಿ ಶ್ರೀಗಳು: ಕಾವಿಯೊಳಗೆ ನಿಗಿನಿಗಿ ಹೊಳೆಯುವ ಕೆಂಪುಸೂರ್ಯ

ನಿಡುಮಾಮಿಡಿ ಶ್ರೀಗಳು: ಕಾವಿಯೊಳಗೆ ನಿಗಿನಿಗಿ ಹೊಳೆಯುವ ಕೆಂಪುಸೂರ್ಯ

by cknewsnow desk
December 28, 2023
0

ನಿಜದ ಜಾಡು ಹಿಡಿದು ಹೊರಟ ನಿಡುಮಾಮಿಡಿ ಶ್ರೀಗಳ ಹೋರಾಟಕ್ಕೆ 33 ವರ್ಷ

ಅಖಂಡ ಭಾರತದ ಅಷ್ಟದಿಕ್ಕುಗಳ ಆಮೂಲಾಗ್ರ ಅಭಿವೃದ್ಧಿಗೆ ಸುವರ್ಣ ಅಧ್ಯಾಯ ಬರೆದವರೇ ಅಜಾತಶತ್ರು ಅಟಲ್‌ ಬಿಹಾರಿ ವಾಜಪೇಯಿ

ಅಟಲ್ ಎಂದರೆ ಅಜಾತಶತ್ರು

by cknewsnow desk
December 25, 2023
0

ಇಂದು ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನ, ಉತ್ತಮ ಆಡಳಿತ ದಿನ by Dr.Gurupeasad Hawaldar ಜಾಗತಿಕ ಮಟ್ಟದ ಶ್ರೇಷ್ಠ ನಾಯಕರ ಸಾಲಿನಲ್ಲಿ ಗೌರವಿಸಲ್ಪಡುವ  ನಿಸ್ವಾರ್ಥ ರಾಜಕಾರಣಿ,...

ಶಿಕ್ಷಣ, ಶಿಕ್ಷಕ ಮತ್ತು ಬದಲಾವಣೆ; ನೂತನ ಶಿಕ್ಷಣ ನೀತಿಯ ಹೊತ್ತಿನಲ್ಲಿ ಓಶೋ ಜೋಶ್..

ಓಶೋ: ಬೆರಗು, ಬೆಡಗು ಮತ್ತು ವಿಸ್ಮಯ

by cknewsnow desk
December 11, 2023
0

ಇಂದು ಓಶೋ ಜನ್ಮದಿನ

Next Post
SSLC: ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಗುಡಿಬಂಡೆ ನಂ.2 ಆಗಿದ್ದು ಹೇಗೆ?

SSLC: ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಗುಡಿಬಂಡೆ ನಂ.2 ಆಗಿದ್ದು ಹೇಗೆ?

Comments 1

  1. Pingback: ಗುರುಮನೆಗೆ ಬಂದು ಟೀಕಾಕಾರರ ಬಾಯಿ ಮುಚ್ಚಿಸಿದ ನೀರಜ್ ಚೋಪ್ರ - cknewsnow

Leave a Reply Cancel reply

Your email address will not be published. Required fields are marked *

Recommended

ಮತ್ತೆ ಹಾಡಲಿದೆ ಹಳ್ಳಿಹಕ್ಕಿ! ಯಾರೆಲ್ಲ ಕಕ್ಕಾಬಿಕ್ಕಿ?

ನೈಟ್ ಕರ್ಪ್ಯೂ ವಿಚಾರದಲ್ಲಿ ಮರು ವಿಮರ್ಶೆ ಮಾಡಬೇಕಿದೆ; ಜನವರಿ 1ರಿಂದ ಶಾಲೆ-ಕಾಲೇಜು ಆರಂಭ ಬೇಡ, ಜೀವದ ಜೊತೆ ಚೆಲ್ಲಾಟ ಸರಿಯಲ್ಲ ಎಂದ ಎಚ್.ವಿಶ್ವನಾಥ್

4 years ago
ಕರ್ನಾಟಕದ ನೀರೋ ಯಾರು?

ಕರ್ನಾಟಕದ ನೀರೋ ಯಾರು?

1 year ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ