• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home CHIKKABALLAPUR

ರಸ್ತೆ ಅಗಲೀಕರಣದ ಅನ್ಯಾಯಕ್ಕೆ ಆರು ವರ್ಷ

cknewsnow desk by cknewsnow desk
August 12, 2021
in CHIKKABALLAPUR, STATE
Reading Time: 2 mins read
0
ಶೇ.5ಕ್ಕೆ ಕುಸಿದ ಪಾಸಿಟಿವಿಟ ದರ: ಚಿಕ್ಕಬಳ್ಳಾಪುರ, ಕೋಲಾರ ಸೇರಿ 16 ಜಿಲ್ಲೆಗಳಲ್ಲಿ ಕೋವಿಡ್‌ ಲಾಕ್‌ಡೌನ್‌ ನಿರ್ಬಂಧ ಸಡಿಲಿಕೆ
1.4k
VIEWS
FacebookTwitterWhatsuplinkedinEmail

ಗುಡಿಬಂಡೆಯಲ್ಲಿ ಮನೆ, ಅಂಗಡಿ ಕಳೆದುಕೊಂಡ 316 ಜನರ ಸ್ಥಿತಿ ಅಯೋಮಯ

by GS Bharath Gudibande

ಗುಡಿಬಂಡೆ: ಪಟ್ಟಣದ ಜೀವನಾಡಿಯಾಗಿದ್ದ ಮುಖ್ಯರಸ್ತೆಯ ಅಗಲೀಕರಣದಿಂದ ಜಾಗ, ಮನೆಗಳನ್ನು ಕಳೆದುಕೊಂಡ ಗುಡಿಬಂಡೆ ಜನರಿಗೆ ಆರು ವರ್ಷಗಳೇ ಕಳೆದರೂ ಇನ್ನೂ ನ್ಯಾಯ ಸಿಕ್ಕಿಲ್ಲ.

2015ರಲ್ಲಿ ರಾಜ್ಯ ಹೆದ್ದಾರಿ 94ರ ಮುಖ್ಯರಸ್ತೆಯ ಅಗಲೀಕರಣ ಮಾಡಲಾಗಿತ್ತು. ಮನೆಗಳನ್ನು ಕಳೆದುಕೊಂಡವರಿಗೆ ಪರಿಹಾರ ನೀಡದೆ ಜಿಲ್ಲಾಡಳಿತ, ತಾಲೂಕು ಆಡಳಿತ, ಪಟ್ಟಣ ಪಂಚಾಯಿತಿ ನಿರ್ಲಕ್ಷ್ಯ ತೋರುತ್ತಿರುವುದು ಪಟ್ಟಣವಾಸಿಗಳ ಆಕ್ರೋಶಕ್ಕೆ ಕಾರಣವಾಗಿದೆ.

ಅಲ್ಲದೆ, ಪಟ್ಟಣದ ಜನಪ್ರತಿನಿಧಿಗಳು ಕೂಡ ಮೂಕ ಪ್ರೇಕ್ಷಕರಾಗಿದ್ದು, ಮನೆಗಳನ್ನು ಕಳೆದುಕೊಂಡವರ ಪಾಡು ಅವರ ಮುಂದೆ ಮೂಕ ರೋಧನವಾಗಿದೆ.

ಮನೆ ಕಳೆದುಕೊಂಡ ಸಂತ್ರಸ್ತರ ಪರ ಸ್ವತಃ ಶಾಸಕ ಎಸ್.‌ಎನ್.‌ಸುಬ್ಬಾರೆಡ್ಡಿ ಅವರೇ ಸದನದಲ್ಲಿ ಪ್ರಸ್ತಾಪ ಮಾಡಿ ಬೇಡಿಕೆ ಇಟ್ಟಿದ್ದರೂ ಈವರೆಗೂ ಯಾವುದೇ ಪ್ರಯೋಜನ ಆಗಿಲ್ಲ. ಶಾಸಕರ ಸೂಚನೆಗೂ ಕಿಮ್ಮತ್ತು ನೀಡದ ಅಧಿಕಾರಿಗಳು ಪರಿಹಾರ ನೀಡುವಲ್ಲಿ ಕಣ್ಣಾಮುಚ್ಚಾಲೆ ಆಡುತ್ತಿದ್ದಾರೆ.

ರಾಜ್ಯದಲ್ಲೇ ತೀರಾ ತಾಲೂಕು ಆಗಿರುವ ಗುಡಿಬಂಡೆ ಪಟ್ಟಣದಲ್ಲಿ ಬಡತನ, ನಿರುದ್ಯೋಗ, ಆರ್ಥಿಕ ಸಂಕಷ್ಟ ವಿಪರೀತ ಎನ್ನುವಷ್ಟು ಇದ್ದು, ಈಗ ಕೋವಿಡ್‌ ಕೂಡ ಸೇರಿಕೊಂಡು ಜನರ ಬವಣೆಯ ಮೇಲೆ ಬಿಸಿತುಪ್ಪ ಸುರಿದಂತೆ ಆಗಿದೆ. ರಸ್ತೆ ಅಗಲೀಕರಣದಿಂದ ಮನೆಗಳನ್ನು ಕಳೆದುಕೊಂಡವರಿಗೆ ಬದಲಿ ನಿವೇಶನ ನೀಡುತ್ತೇವೆ ಎಂದು ಹೇಳಿದ್ದವರು ಈಗ ಪತ್ತೆ ಇಲ್ಲ. ಇಷ್ಟು ದಿನವಾದರೂ ಕನಿಷ್ಠ ಪರಿಹಾರವನ್ನೂ ನೀಡಿಲ್ಲ ಎಂದು ಸಂತ್ರಸ್ತರು ನೋವು ವ್ಯಕ್ತಪಡಿಸಿದ್ದಾರೆ.

  • ರಸ್ತೆ ಅಗಲೀಕರಣಕ್ಕಾಗಿ ತಾವೇ ಮುಂದೆ ನಿಂತು ಕಟ್ಟಡಗಳನ್ನು ತೆರವುಗೊಳಿಸುವಂತೆ ಮಾಡಿದ ಅಂದಿನ ಜಿಲ್ಲಾಧಿಕಾರಿ ಎಂ. ‌ವಿ. ವೆಂಕಟೇಶ್ /ಸಂಗ್ರಹ ಚಿತ್ರ

ಜಿಡ್ಡುಗಟ್ಟಿದ ಆಡಳಿತ ವ್ಯವಸ್ಥೆಗೆ ಹಿಡಿಶಾಪ

2015ರಲ್ಲಿ ತಾಲೂಕು ಅಭಿವೃದ್ಧಿ ದೃಷ್ಟಿಯಿಂದ ರಾಷ್ಟ್ರೀಯ ಹೆದ್ದಾರಿ 94ರ ಮುಖ್ಯರಸ್ತೆ ಅಗಲೀಕರಣ ಮಾಡಲಾಯಿತು. ಈ ಸಂದರ್ಭದಲ್ಲಿ 316 ಅಂಗಡಿ ಮತ್ತು ಮನೆಗಳನ್ನು ನಿರ್ದಾಕ್ಷಿಣ್ಯವಾಗಿ ತೆರವು ಮಾಡಲಾಯಿತು. ಇಡೀ ಪಟ್ಟಣವಷ್ಟೇ ಅಲ್ಲದೆ, ಪೂರ ತಾಲೂಕಿಗೇ ಪ್ರಮುಖ, ಏಕೈಕ ವಾಣಿಜ್ಯ ಜಾಗವೂ ಆಗಿತ್ತಲ್ಲದೆ ಅನೇಕರಿಗೆ ಸಂಪಾದನೆಯ ಮಾರ್ಗವಾಗಿ ಬದುಕಿನ ಜೀವನಾಡಿಯೂ ಆಗಿತ್ತು. ಈಗ ಅಷ್ಟೂ ಜನರು ಇದ್ದ ಮನೆ, ಅಂಗಡಿಗಳನ್ನು ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದಾರೆ.

ರಸ್ತೆ ಅಗಲೀಕರಣ ಮಾಡುವ ತನಕ ಕಾಲಮಿತಿಯೊಳಗೆ ಪರಿಹಾರ ನೀಡಿ ಬದಲಿ ನಿವೇಶನ ನೀಡುವುದಾಗಿ ಹೇಳುತ್ತಿದ್ದ ಜಿಲ್ಲಾಡಳಿತ, ಅಗಲೀಕರಣದ ಕಾಮಗಾರಿ ಮುಗಿಯುತ್ತಿದ್ದಂತೆ ವಿಷಯವನ್ನೇ ಮರೆತುಹೋಗಿದೆ. ಇನ್ನು ತಾಲೂಕು ಆಡಳಿತ ಜಿಲ್ಲಾಡಳಿತದತ್ತ ಬೊಟ್ಟು ಮಾಡಿ ತೋರಿಸುತ್ತಿದೆ. ಉಳಿದಂತೆ ಪಟ್ಟಣ ಪಂಚಾಯತಿ ಆಡಳಿತವಾಗಲಿ ಇಲ್ಲವೇ ಅಲ್ಲಿನ ಜನಪ್ರತಿನಿಧಿಗಳಾಗಲಿ ಸಂಕಷ್ಟಕ್ಕೆ ಸಿಲುಕಿರುವ ಜನರ ನೆರವಿಗೆ ಧಾವಿಸುತ್ತಿಲ್ಲ. ಆರು ವರ್ಷಗಳಾದರೂ ಈ ಬಗ್ಗೆ ಕ್ರಮ ಕೈಗೊಳ್ಳಲದ ಜಿಡ್ಡುಗಟ್ಟಿದ ಆಡಳಿತ ವ್ಯವಸ್ಥೆ ಬಗ್ಗೆ ಜನರು ಹಿಡಿಶಾಪ ಹಾಕುತ್ತಿದ್ದಾರೆ.

  • ಮುಖ್ಯರಸ್ತೆ ಅಗಲೀಕರಣಕ್ಕಾಗಿ 2016ರಲ್ಲಿ ಕಟ್ಟಡ ತೆರವುಮಾಡಿದ ದೃಶ್ಯ. / ಸಂಗ್ರಹ ಚಿತ್ರ

ವಿಧಾನಸಭೆಯಲ್ಲೂ ಪ್ರಸ್ತಾವ

ರಸ್ತೆ ಅಗಲೀಕರಣದ ವೇಳೆ ಮನೆಗಳನ್ನು ಕಳೆದುಕೊಂಡ ಕುಟುಂಬಗಳಿಗೆ ನಿವೇಶನ ನೀಡಲು ಶಾಸಕ ಎಸ್.ಎನ್.‌ಸುಬ್ಬಾರೆಡ್ಡಿ ಗಂಭೀರ ಪ್ರಯತ್ನ ಮಾಡಿದ್ದರು. ಕೂಡಲೇ ಸಂಕಷ್ಟದಲ್ಲಿ ಸಿಲುಕಿರುವ ಜನರಿಗೆ ಬದಲಿ ನಿವೇಶನ ನೀಡಬೇಕ ಹಾಗೂ ಈ ಬಗ್ಗೆ ಜಿಲ್ಲಾಡಳಿತಕ್ಕೆ ಸ್ಪಷ್ಟ ನಿರ್ದೇಶನ ನೀಡಬೇಕು ಎಂದು ಸರಕಾರವನ್ನು ಒತ್ತಾಯ ಮಾಡಿದ್ದರು. ಅವರ ಒತ್ತಾಯಕ್ಕೂ ಸರಕಾರವಾಗಲಿ, ಜಿಲ್ಲಾಡಳಿತವಾಗಲಿ ಮಣಿದಿಲ್ಲ.

  • ಕಟ್ಟಡ ತೆರವುಗೊಳಿಸಲು ನೀಡಲಾಗಿದ್ದ ನೊಟೀಸ್.

ವಾಬಸಂದ್ರ, ಬ್ರಾಹ್ಮಣರಹಳ್ಳಿ ಸೇರಿದಂತೆ ತಾಲೂಕಿನ ವಿವಿಧ ಸ್ಥಳಗಳಲ್ಲಿ ಬದಲಿ ನಿವೇಶನಗಳನ್ನು ಗುರುತಿಸಿದ್ದರು ಶಾಸಕರು. ಆದರೆ, ಕೆಲ ಕಾರಣಗಳನ್ನು ಮುಂದಿಟ್ಟು ಆ ಪ್ರಸ್ತಾವನೆಗೂ ಜಿಲ್ಲಾಡಳಿತ ಎಳ್ಳೂನೀರು ಬಿಟ್ಟಿತ್ತು.


ಯಾರು ಏನಂತಾರೆ?

ರಸ್ತೆ ಅಗಲೀಕರಣದ ವೇಳೆ ಮನೆ ಮತ್ತು ಅಂಗಡಿಗಳನ್ನು ಕಳೆದುಕೊಂಡವರಿಗೆ ನಿವೇಶ ನೀಡಲು ಶಾಸಕರ ಸೂಚನೆಯ ಮೆರೆಗೆ ಎಲ್ಲಾ ಸಿದ್ದತೆಗಳನ್ನು ಮಾಡಿ ಸ್ಥಳ ಗುರುತಿಸಲಾಗಿದೆ. ಹಕ್ಕು ಪತ್ರಗಳು ಸಿದ್ದವಾದ ತಕ್ಷಣ ವಿತರಿಸಲಾಗುವುದು.

ರಾಜಶೇಖರ್, ಮುಖ್ಯಾಧಿಕಾರಿ, ಗುಡಿಬಂಡೆ ಪಟ್ಟಣ ಪಂಚಾಯಿತಿ

ಪಟ್ಟಣದ ಅಭಿವೃದ್ಧಿ ದೃಷ್ಟಿಯಿಂದ ರಸ್ತೆ ಅಗಲೀಕರಣ ಮಾಡಿ 6 ವರ್ಷಗಳೇ ಕಳೆದಿವೆ. ಇದುವರೆಗೂ ಪರಿಹಾರವೂ ಇಲ್ಲ, ನಿವೇಶನವೂ ಇಲ್ಲ. ಜಿಲ್ಲಾಡಳಿತದ ನಿರ್ಲಕ್ಷ್ಯದಿಂದ ನೂರಾರು ಕುಟುಂಬಗಳು ಸಂಕಷ್ಟಕ್ಕೆ ಸಿಲುಕಿವೆ. ಇನ್ನಾದರೂ ಶೀಘ್ರದಲ್ಲಿ ಸಮಸ್ಯೆಯನ್ನು ಬಗೆಹರಿಸಬೇಕಿದೆ.

ಜಿ.ವಿ.ಗೋಪಿ, ಗುಡಿಬಂಡೆ ನಿವಾಸಿ

ರಸ್ತೆ ಅಗಲೀಕರಣ ಸಂದರ್ಭದಲ್ಲಿ ನಮ್ಮ ಮನೆಗಳನ್ನು ತೆರವುಗೊಳಿಸಿದ್ದಾರೆ. ನಂತರ ನಮಗೆ ನಿವೇಶನ ನೀಡುತ್ತೇವೆಂದು ಹೇಳಿದ್ದರು. 6 ವರ್ಷಗಳಿಂದ ನಾವು ಬಾಡಿಗೆ ಮನೆಯಲ್ಲಿದ್ದೇವೆ. ರಸ್ತೆ ಅಗಲೀಕರಣದ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳ ಬಳಿ ದಾಖಲೆಗಳು ಇಲ್ಲ. ನಮಗೆ ಸೂಕ್ತ ಪರಿಹಾರ ಕುಡಲು ಶಾಸಕರು ಕ್ರಮ ವಹಿಸಬೇಕು.

ಪಣೀಂದ್ರ ಶೆಟ್ಟಿ, ರಸ್ತೆ ಅಗಲೀಕರಣದಲ್ಲಿ ಮನೆ ಕಳೆದುಕೊಂಡ ವ್ಯಕ್ತಿ

Tags: baepallichikkaballapuragovernment of karnatakagudibande main roadmla sn subbareddyroad widening
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಡಿಪ್ಲೊಮಾಗೆ 8 ಹೊಸ ಕೋರ್ಸ್:‌ ಗೌರಿಬಿದನೂರು ಸೇರಿ 10 ಪಾಲಿಟೆಕ್ನಿಕ್‌ಗಳಲ್ಲಿ ಈ ವರ್ಷದಿಂದಲೇ ಬೋಧನೆ

ಡಿಪ್ಲೊಮಾಗೆ 8 ಹೊಸ ಕೋರ್ಸ್:‌ ಗೌರಿಬಿದನೂರು ಸೇರಿ 10 ಪಾಲಿಟೆಕ್ನಿಕ್‌ಗಳಲ್ಲಿ ಈ ವರ್ಷದಿಂದಲೇ ಬೋಧನೆ

Leave a Reply Cancel reply

Your email address will not be published. Required fields are marked *

Recommended

ಶಿಕ್ಷಣ ನೀತಿ ಬಗ್ಗೆ ಅಲ್ಪಸಂಖ್ಯಾತರಿಗೆ ಅನುಮಾನ ಬೇಡ

ಕಲಾಪ ಕರೆಯಿರಿ ಎಂದ ಮಾಜಿ ಸಿಎಂ ಒತ್ತಾಯಕ್ಕೆ ಉನ್ನತ ಶಿಕ್ಷಣ ಸಚಿವರ ಅಪಹಾಸ್ಯ

4 years ago
ಮಕ್ಕಳಿಗೆ ಸರ್‌ ಎಂವಿ, ಸಿಎನ್‌ಆರ್ ರಾವ್‌ ಸ್ಫೂರ್ತಿ

ಮಕ್ಕಳಿಗೆ ಸರ್‌ ಎಂವಿ, ಸಿಎನ್‌ಆರ್ ರಾವ್‌ ಸ್ಫೂರ್ತಿ

2 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ