• About
  • Advertise
  • Careers
  • Contact
Monday, May 19, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home CHIKKABALLAPUR

ಮುಂದಿನ ಅಗಸ್ಟ್‌ 15ಕ್ಕೆ ಚಿಕ್ಕಬಳ್ಳಾಪುರ ಮೆಡಿಕಲ್ ಕಾಲೇಜು ಆರಂಭ

cknewsnow desk by cknewsnow desk
August 15, 2021
in CHIKKABALLAPUR, STATE
Reading Time: 1 min read
0
ಮುಂದಿನ ಅಗಸ್ಟ್‌ 15ಕ್ಕೆ ಚಿಕ್ಕಬಳ್ಳಾಪುರ ಮೆಡಿಕಲ್ ಕಾಲೇಜು ಆರಂಭ
1k
VIEWS
FacebookTwitterWhatsuplinkedinEmail

ಜಿಲ್ಲೆಯ ಸಮಗ್ರ ಅಭಿವೃದ್ಧಿ ಕನಸು ಬಿಚ್ಚಿಟ್ಟ ಸಚಿವ ಡಾ.ಕೆ.ಸುಧಾಕರ್

ಚಿಕ್ಕಬಳ್ಳಾಪುರ: ರಾಜಧಾನಿ ಬೆಂಗಳೂರು ಮತ್ತು ಅಂತಾರಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಮೀಪವಿರುವ ಚಿಕ್ಕಬಳ್ಳಾಪುರ ಜಿಲ್ಲಾ ಕೇಂದ್ರವನ್ನು ಸಮಗ್ರವಾಗಿ ಅಭಿವೃದ್ಧಿ ಮಾಡುವ ಕನಸು ಬಿಚ್ಚಿಟ್ಟ ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್‌, ಜಿಲ್ಲೆಯ ಈವರೆಗಿನ ಅಭಿವೃದ್ಧಿಯ ಹಿನ್ನೋಟ-ಮುನ್ನೋಟವನ್ನು ಬಿಚ್ಚಿಟ್ಟರು.

ಜಿಲ್ಲೆಯನ್ನು ಕೈಗಾರಿಕಾ ಹಬ್ ಆಗಿ ಅಭಿವೃದ್ಧಿಪಡಿಸುವುದರ ಜತೆಗೆ ಆರೋಗ್ಯ ಮತ್ತು ಶಿಕ್ಷಣ ಕೇಂದ್ರವನ್ನಾಗಿ ರೂಪಿಸಬೇಕೆಂಬ ಕನಸಿದ್ದು, ಅದರಂತೆ ಜಿಲ್ಲೆಯ ಸಮಗ್ರ ಹಾಗೂ ಸರ್ವಾಂಗೀಣ ಅಭಿವೃದ್ಧಿಗೆ ವಿಶೇಷ ಒತ್ತು ನೀಡಲಾಗುತ್ತಿದೆ ಎಂದು ಅವರು ಹೇಳಿದರು.

ನಗರದ ಸರ್ ಎಂ.ವಿ.ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತದ ವತಿಯಿಂದ ಹಮ್ಮಿಕೊಂಡಿದ್ದ ೭೫ನೇ ಸ್ವಾತಂತ್ರ್ಯೋತ್ಸವದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಕೈಗಾರಿಕೆಗಳಿಗೆ ಸಾಕಷ್ಟು ಅವಕಾಶಗಳಿವೆ. ಈ ದಿಸೆಯಲ್ಲಿ ಹಲವು ರೀತಿಯ ಕೈಗಾರಿಕಾಭಿವೃದ್ಧಿಗೆ ಉತ್ತೇಜನ ನೀಡಲು ಕ್ರಮ ಕೈಗೊಂಡಿದ್ದು, ಜಿಲ್ಲೆಯಲ್ಲಿ ಜವಳಿ ಪಾರ್ಕ್ ನಿರ್ಮಾಣಕ್ಕೆ ಪ್ರಸ್ತಾವನೆಯನ್ನು ಇತ್ತೀಚಿಗೆ ಕೇಂದ್ರ ಸರಕಾರಕ್ಕೆ ಸಲ್ಲಿಸಲಾಗಿದೆ. ಅಲ್ಲದೆ ಸುಮಾರು ೬೧೦ ಕೋಟಿ ರೂ. ವೆಚ್ಚದಲ್ಲಿ ಚಿಕ್ಕಬಳ್ಳಾಪುರದ ಅರೂರು ಬಳಿ ವೈದ್ಯಕೀಯ ಕಾಲೇಜು ಕಾಮಗಾರಿ ಆರಂಭಿಸಲಾಗಿದೆ. ಈಗಾಗಲೇ ಕಾಮಗಾರಿ ಶೇ.೬೦ರಷ್ಟು ಪೂರ್ಣಗೊಂಡಿದೆ. ಮುಂದಿನ ವರ್ಷದ ಅಗಸ್ಟ್‌ ೧೫ರೊಳಗೆ ಕಾಮಗಾರಿ ಮುಗಿದು ಕಾಲೇಜು ಸೇವೆಗೆ ಮುಕ್ತವಾಗಲಿದೆ ಎಂದರು ಅವರು.

ಶೀಡ್ಲಘಟ್ಟದ ಅಮರಾವತಿ ಬಳಿ ಉತ್ತರ ವಿಶ್ವವಿದ್ಯಾಲಯ ಸ್ಫಾಪನೆಗೆ ೧೭೫ ಎಕರೆ ಜಮೀನು ಗುರುತಿಸಲಾಗಿದ್ದು, ಇದರಲ್ಲಿ ೧೧೦ ಎಕರೆ ಜಮೀನನ್ನು ವಿವಿಗೆ ಈಗಾಗಲೇ ಹಸ್ತಾಂತರ ಮಾಡಲಾಗಿದೆ. ಉಳಿದ ಜಮೀನು ರೈತರಿಂದ ಭೂಸ್ವಾದೀನ ಪ್ರಕ್ರಿಯೆ ನಡೆಸಿದ್ದು, ಈ ವಿವಿಯಿಂದ ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಕೋಲಾರ ಹಾಗೂ ಇತರೆ ಜಿಲ್ಲೆಗಳ ಪದವಿ, ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ಸಾಕಷ್ಟು ಅನುಕೂಲವಾಗಲಿದೆ ಎಂದು ಸಚಿವರು ಹೇಳಿದರು.

ಚಿಂತಾಮಣಿ ತಾಲೂಕು ಮಸ್ತೇನಹಳ್ಳಿ ಕೈಗಾರಿಕಾ ಪ್ರದೇಶದ ವ್ಯಾಪ್ತಿಯಲ್ಲಿ ೨ನೇ ಹಂತದ ಕೈಗಾರಿಕಾ ಪ್ರದೇಶ ಅಭಿವೃದ್ಧಿಗಾಗಿ ೪೧೪-೨೫ ಮತ್ತು ೩ನೇ ಹಂತದ ಕೈಗಾರಿಕಾ ಪ್ರದೇಶ ಅಭಿವೃದ್ಧಿಗಾಗಿ ೧೪೮೯ ಎಕರೆ ವಿಸ್ತೀರ್ಣದ ಜಮೀನನನ್ನು ಗುರುತಿಸಲಾಗಿದ್ದು, ಕೆಐಎಡಿಬಿ ವತಿಯಿಂದ ಅಂತಿಮ ಅಧಿಸೂಚನೆ ಹೊರಡಿಸಲಾಗಿರುತ್ತದೆ. ಗೌರಿಬಿದನೂರು ತಾಲೂಕು ಕುಡುಮಲಕುಂಟೆ ಕೈಗಾರಿಕಾ ಪ್ರದೇಶದ ವ್ಯಾಪ್ತಿಯಲ್ಲಿ ೩ನೇ ಹಂತದ ಕೈಗಾರಿಕಾ ಪ್ರದೇಶ ಅಭಿವೃದ್ಧಿಗಾಗಿ ೮೩೯ ಎಕರೆ ವಿಸ್ತೀರ್ಣದ ಜಮೀನನ್ನು ಗುರುತಿಸಿದ್ದು, ಕೆಐಎಡಿಬಿ ವತಿಯಿಂದ ಅಂತಿಮ ಅಧಿಸೂಚನೆ ಹೊರಡಿಸಲಾಗಿರುತ್ತದೆ ಎಂದು ಅವರು ಹೇಳಿದರು.

ಜಿಲ್ಲಾ ಕೇಂದ್ರವಾಗಿ ೧೪ ವರ್ಷ

ಚಿಕ್ಕಬಳ್ಳಾಪುರವು ಜಿಲ್ಲೆಯಾಗಿ ೧೪ ವರ್ಷ ಪೂರೈಸಿದೆ. ಇಬ್ಬರು ಭಾರತರತ್ನಗಳಾದ ಸರ್‌ ಎಂ.ವಿಶ್ವೇಶ್ವರಯ್ಯ ಹಾಗೂ ಸಿ.ಎನ್‌.ಆರ್ ರಾವ್‌ ಅವರು ಜಿಲ್ಲೆಯ ಕೀರ್ತಿಕಲಶವಾಗಿದ್ದು, ಶಿಕ್ಷಣ ತಜ್ಞ ಡಾ.ಎಚ್.ನರಸಿಂಹಯ್ಯ ಅವರು ಕೂಡ ನಮ್ಮ ಜಿಲ್ಲೆಯ ಹೆಮ್ಮೆ. ಅವರ ನೆನಪಿಗಾಗಿ ಗೌರಿಬಿದನೂರಿನ ಹೊಸೂರಿನಲ್ಲಿ ಸರಕಾರದಿಂದ ೧೦ ಕೋಟಿ ರೂ. ವೆಚ್ಚದಲ್ಲಿ ಅಂತಾರರಾಷ್ಟ್ರೀಯ ವಿಜ್ಣಾನ ಕೇಂದ್ರ ಅಂತರಾಷ್ಡ್ರೀಯ ವಿಜ್ಞಾನ ಕೇಂದ್ರವು ಸ್ಥಾಪಿಸಲಾಗುತ್ತಿದೆ. ಇದಲ್ಲದೆ ಇಲ್ಲಿನ ವಿಧುರಾಶ್ವತ್ಥವು ಅತ್ಯಂತ ಮಹತ್ವದವಾದ ಕ್ಷೇತ್ರವಾಗಿದ್ದು, ಇಲ್ಲಿ ರಾಜ್ಯ ಮಟ್ಟದ ೭೫ನೇ ಸ್ವಾತಂತ್ರ‍್ಯ ಅಮೃತ ಮಹೋತ್ಸವಕ್ಕೆ ರಾಜ್ಯದ ನಿಕಟಪೂರ್ವ ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಈ ಹಿಂದಿನ ರಾಜ್ಯಪಾಲರಾದ ವಜುಬಾಯ್ ವಾಲಾ ಅವರು ಚಾಲನೆ ನೀಡಿದ್ದರು. ಇದು ಜಿಲ್ಲೆಗೆ ಮತ್ತೊಂದು ಗೌರವವಾಗಿದೆ ಎಂದರು ಅವರು.

ಜಿಲ್ಲೆಯಲ್ಲಿ ಅನೇಕ ಪುಣ್ಯಕ್ಷೇತ್ರಗಳು, ಪ್ರವಾಸಿ ತಾಣಗಳು, ಐತಿಹಾಸಿಕ ಸ್ಥಳಗಳಿವೆ. ಚಿಕ್ಕಬಳ್ಳಾಪುರ ಮತ್ತು ಕೋಲಾರ ಅವಳಿ ಜಿಲ್ಲೆಗಳಲ್ಲಿ ಸರಿಸುಮಾರು ೧,೮೦೦ಕ್ಕೂ ಅಧಿಕ ಕೆರೆಗಳಿವೆ. ಎರಡೂ ಜಿಲ್ಲೆಗಳಲ್ಲಿ ಅಂತರ್ಜಲವನ್ನು ವೃದ್ಧಿಸುವ ಸಲುವಾಗಿ ಕೋಲಾರಕ್ಕೆ ಕೆ.ಸಿ.ವ್ಯಾಲಿ ಹಾಗೂ ಚಿಕ್ಕಬಳ್ಳಾಪುರಕ್ಕೆ ಎಚ್.ಎನ್.ವ್ಯಾಲಿ ಯೋಜನೆಗಳನ್ನು ರೂಪಿಸಿ ಕೆರೆಗಳಿಗೆ ನೀರು ತುಂಬಿಸಲಾಗುತ್ತಿದೆ. ಇದಲ್ಲದೆ, ಹೊಸದಾಗಿ ವೃಷಭಾವತಿ ಯೋಜನೆ ಮೂಲಕ ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಗೆ ನೀರು ಹರಿಸಲು ಚಿಂತನೆ ಮಾಡಲಾಗಿದ್ದು, ಮುಂದಿನ ದಿನಗಳಲ್ಲಿ ಗೌರಿಬಿದನೂರು, ಮಂಚೇನಹಲ್ಲಿ ಮತ್ತು ಬಾಗೇಪಲ್ಲಿ ತಾಲೂಕಿಗಳಿಗೂ ನೀರು ಹರಿಸಲಾಗುವುದು ಎಂದು ಅವರು ಭರವಸೆ ನೀಡಿದರು.

ನಿವೇಶನ ರಹಿತರಿಗೆ ನಿವೇಶನ

ಜಿಲ್ಲೆಯಾದ್ಯಂತ ನಿವೇಶನ ರಹಿತರಿಗೆ ನಿವೇಶನ ಹಂಚಿಕೆ ಮಾಡಲು ಗ್ರಾಮೀಣ ಹಾಗೂ ನಗರ ಪ್ರದೇಶಗಳು ಸೇರಿದಂತೆ ಒಟ್ಟು ೮೨೪.೨೭ ಎಕರೆ ಜಮೀನನ್ನು ಮಂಜೂರು ಮಾಡಲಾಗಿದೆ. ಜಿಲ್ಲಾಡಳಿತವು ರಾಜ್ಯದಲ್ಲೇ ಅತಿ ಹೆಚ್ಚು ನಿವೇಶನ ಹಂಚಿಕೆಗೆ ಜಮೀನು ಮಂಜೂರು ಮಾಡಿದೆ. ೮೨೪.೨೭ ಎಕರೆ ಜಮೀನನ್ನು ಪೈಕಿ ಚಿಕ್ಕಬಳ್ಳಾಪುರ ತಾಲೂಕಿನಲ್ಲಿ ೨೬೨.೧೦ ಎಕರೆ, ಗುಡಿಬಂಡೆ ತಾಲೂಕಿನಲ್ಲಿ ೮೧.೨೮ ಎಕರೆ, ಗೌರಿಬಿದನೂರು ತಾಲೂಕಿನಲ್ಲಿ ೧೪೨.೦೫ ಎಕರೆ, ಚಿಂತಾಮಣಿ ತಾಲೂಕಿನಲ್ಲಿ ೯೨.೩೮ ಎಕರೆ, ಶಿಡ್ಲಘಟ್ಟ ತಾಲೂಕಿನಲ್ಲಿ ೧೪೪.೦೨ ಎಕರೆ ಹಾಗೂ ಬಾಗೇಪಲ್ಲಿ ತಾಲೂಕಿನಲ್ಲಿ ೧೦೩.೩೩ ಎಕರೆಗಳನ್ನು ಮಂಜೂರು ಮಾಡಲಾಗಿದೆ. ಮಂಜೂರಾದ ೮೨೪.೨೭ ಎಕರೆ ಜಮೀನಿನಲ್ಲಿ ೩೮,೦೯೧ ನಿವೇಶನಗಳನ್ನು ಹಂಚಿಕೆ ಮಾಡಬಹುದಾಗಿದ್ದು, ಈ ನಿಟ್ಟಿನಲ್ಲಿ ಕ್ರಮ ವಹಿಸಿ ಬಡಾವಣೆ ಅಭಿವೃದ್ಧಿ ಮತ್ತು ನೀಲನಕ್ಷೆ ಸಿದ್ಧತೆ ಸೇರಿದಂತೆ ನಾನಾ ಪ್ರಕ್ರಿಯೆಗಳಿಗೆ ಚಾಲನೆ ನೀಡಲಾಗಿದೆ. ಈಗಾಗಲೇ ೧,೬೬೪ ಹಕ್ಕುಪತ್ರಗಳನ್ನು ರಾಜೀವ್ ಗಾಂಧಿ ವಸತಿ ಅಭಿವೃದ್ಧಿ ನಿಗಮದಿಂದ ಸ್ವೀಕರಿಸಲಾಗಿದೆ. ಈ ಪೈಕಿ ಹಲವು ಫಲಾನುಭವಿಗಳಿಗೆ ಹಕ್ಕುಪತ್ರಗಳನ್ನು ಸಹ ವಿತರಿಸಲಾಗಿದೆ. ಉಳಿದ ೩೬,೪೨೭ ಹಕ್ಕುಪತ್ರಗಳನ್ನು ವಿತರಿಸುವ ಪ್ರಕ್ರಿಯೆ ಪ್ರಗತಿಯಲ್ಲಿದೆ ಎಂದು ಸಚಿವ ಡಾ.ಸುಧಾಕರ್‌ ಹೇಳಿದರು.

ಎಕೋ ಥೀಮ್ ಪಾರ್ಕ್

ಚಿಕ್ಕಬಳ್ಳಾಪುರ ನಗರಕ್ಕೆ ಹೊಂದಿಕೊಂಡಿರುವ ಕಂದವಾರ ಕೆರೆ ಬಳಿ ಕೆಆರ್‌ಎಸ್ ಬೃಂದಾವನ ಮಾದರಿಯಲ್ಲಿ ಕಂದವಾರ ‘ಎಕೋ ಥೀಮ್ ಪಾರ್ಕ್’ನ್ನು ೮.೧೦ ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲು ಈಗಾಗಲೇ ಸರಕಾರದ ಅನುಮತಿ ಪಡೆದಿದ್ದು, ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದ್ದು, ಆರ್ಥಿಕ ಬಿಡ್‌ನ್ನು ಸಹ ತೆರೆಯಲಾಗಿದೆ ಎಂದ ಸಚಿವರು, ಈ ಉದ್ಯಾನವನದಲ್ಲಿ ಸರಳ ಜಿಮ್, ಪಾರ್ಕಿಂಗ್ ವ್ಯವಸ್ಥೆ, ಮಕ್ಕಳ ಆಟದ ಅನುಕೂಲಗಳು, ಹಿರಿಯ ನಾಗರಿಕರ ವಿಶ್ರಾಂತಿ ಸ್ಥಳ, ಸಂಗೀತ ಕಾರಂಜಿ, ಬೋಟಿಂಗ್, ಕಲಾಗ್ರಾಮದ ಮಳಿಗೆಗಳು, ಪಾದಾಚಾರಿ ಸೇತುವೆ ವನೌಷಧಿ ಸಸ್ಯಗಳು ಇತ್ಯಾದಿ ವಿಶೇಷ ಆಕರ್ಷಣೆಯೊಂದಿಗೆ ಪ್ರವಾಸಿಗರಿಗೆ ಮುದ ನೀಡಲಿದೆ. ಇದಲ್ಲದೇ ಅಮಾನಿ ಗೋಪಾಲಕೃಷ್ಣ ಕೆರೆಯನ್ನು ಪ್ರವಾಸಿ ತಾಣವಾಗಿ ಅಭಿವೃದ್ಧಿ ಪಡಿಸಲು ಯೋಜಿಸಲಾಗಿದೆ ಎಂದರು.

ಈ ಸಂದರ್ಭದಲ್ಲಿ ಸಂಸದ ಬಿ.ಎನ್.ಬಚ್ಚೇಗೌಡ, ಕರ್ನಾಟಕ ರಾಜ್ಯ ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮದ ಅಧ್ಯಕ್ಷರಾದ ಕೆ.ವಿ.ನಾಗರಾಜು, ನಗರಸಭೆ ಅಧ್ಯಕ್ಷರಾದ ಆನಂದರೆಡ್ಡಿ, ಜಿಲ್ಲಾಧಿಕಾರಿ ಆರ್.ಲತಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ ಕುಮಾರ್, ಅಪರ ಜಿಲ್ಲಾಧಿಕಾರಿ ಎಚ್.ಅಮರೇಶ್, ಉಪವಿಭಾಗಾಧಿಕಾರಿ ಎ.ಎನ್.ರಘುನಂದನ್, ಜಿಲ್ಲಾ ಪಂಚಾಯತಿ ಉಪ ಕಾರ್ಯದರ್ಶಿ ಶಿವಕುಮಾರ್, ಡಿಎಚ್‌ಒ ಡಾ.ಇಂದಿರಾ ಆರ್.ಕಬಾಡೆ, ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಹರೀಶ್ ಹಾಗೂ ಎಲ್ಲಾ ಇಲಾಖೆಗಳ ಅಧಿಕಾರಿ ಸಿಬ್ಬಂದಿ ಉಪಸ್ಥಿತರಿದ್ದರು.

Tags: azadi ka amrut mahotsavchikkaballapuradr k sudhakarindependence day 2021karnataka
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

ಚುನಾವಣಾ ವ್ಯವಸ್ಥೆಗೆ ಸುಪ್ರೀಂ ಚಿಕಿತ್ಸೆ

ಹನಿಟ್ರ್ಯಾಪ್‌: ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

by cknewsnow desk
March 27, 2025
0

ಅರ್ಜಿದಾರರನ್ನೇ ಕ್ಲಾಸ್ ತೆಗೆದುಕೊಂಡ ಕೋರ್ಟ್

Next Post
ಹೊಸ ಘೋಷಣೆಗಳಿಗೆ ಅಮೃತದ ಟಚ್‌ ನೀಡಿದ ಸಿಎಂ ಬೊಮ್ಮಾಯಿ

ಹೊಸ ಘೋಷಣೆಗಳಿಗೆ ಅಮೃತದ ಟಚ್‌ ನೀಡಿದ ಸಿಎಂ ಬೊಮ್ಮಾಯಿ

Leave a Reply Cancel reply

Your email address will not be published. Required fields are marked *

Recommended

ಜೆಡಿಎಸ್‌ ಬಗ್ಗೆ ಕಾಂಗ್ರೆಸ್ ನಡೆಸಿದ ಅಪಪ್ರಚಾರಕ್ಕೆ ಫಲಿತಾಂಶವೇ ಉತ್ತರ ನೀಡಿದೆ: ಹೆಚ್‌ಡಿಕೆ

ರೈತರ ಮಕ್ಕಳಿಗೆ ಹಸಿರು ಶಾಲು ಹಾಕಿಕೊಂಡು ಶಾಲೆಗೆ ಹೋಗಿ ಎಂದು ಹೇಳಬೇಕಾಗುತ್ತದೆ ಎಂದ ಹೆಚ್‌ಡಿಕೆ

3 years ago
ಸ್ವಾತಂತ್ರ್ಯ ಚಳವಳಿಯ ವೀರೋಚಿತ ಅಧ್ಯಾಯ: ಕರಾಳ ಕಾಲಾಪಾನಿ ಮತ್ತು ವೀರ ಸಾವರ್ಕರ್‌ ಪುಟಗಳಲ್ಲಿ ತೆರೆದುಕೊಂಡ ಸೆಲ್ಯುಲರ್‌ ಜೈಲ್‌

ಸ್ವಾತಂತ್ರ್ಯ ಚಳವಳಿಯ ವೀರೋಚಿತ ಅಧ್ಯಾಯ: ಕರಾಳ ಕಾಲಾಪಾನಿ ಮತ್ತು ವೀರ ಸಾವರ್ಕರ್‌ ಪುಟಗಳಲ್ಲಿ ತೆರೆದುಕೊಂಡ ಸೆಲ್ಯುಲರ್‌ ಜೈಲ್‌

4 years ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ