• About
  • Advertise
  • Careers
  • Contact
Thursday, October 29, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS STATE

ಹೊಸ ಘೋಷಣೆಗಳಿಗೆ ಅಮೃತದ ಟಚ್‌ ನೀಡಿದ ಸಿಎಂ ಬೊಮ್ಮಾಯಿ

cknewsnow desk by cknewsnow desk
August 15, 2021
in STATE
Reading Time: 1 min read
0
ಹೊಸ ಘೋಷಣೆಗಳಿಗೆ ಅಮೃತದ ಟಚ್‌ ನೀಡಿದ ಸಿಎಂ ಬೊಮ್ಮಾಯಿ
1.1k
VIEWS
FacebookTwitterWhatsuplinkedinEmail

ಸ್ವಾತಂತ್ರ್ಯದ ಅಮೃತ ಮಹೋತ್ಸವಕ್ಕೆ 13 ಯೋಜನೆಗಳ ಘೋಷಣೆ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಸ್ವಾತಂತ್ರ್ಯದ ಅಮೃತ ಮಹೋತ್ಸವದ ನೆನಪಿಗೆ ಹಲವು ಹೊಸ ಜನಪರ ಯೋಜನೆಗಳನ್ನು ಘೋಷಿಸಿದರು. ಅವೆಲ್ಲವೂ ʼಅಮೃತʼಮಯವೇ ಆಗಿವೆ.

75ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ಮಾಡಿ ಮಾತನಾಡಿದ ಅವರು, ಸ್ವಾತಂತ್ರ್ಯದ ಅಮೃತ ಮಹೋತ್ಸವದ ನೆನಪಿಗಾಗಿ ‘ಅಮೃತ’ ಹೆಸರಿನಲ್ಲಿ ಗ್ರಾಮೀಣಾಭಿವೃದ್ಧಿ, ನಗರಾಭಿವೃದ್ಧಿ, ರೈತರು, ಬಡವರು, ಮಹಿಳೆಯರು, ಉದ್ಯಮ ಸೇರಿದಂತೆ ವಿವಿಧ ವಲಯಗಳ ಅಭಿವೃದ್ಧಿಯನ್ನು ಗಮನದಲ್ಲಿಟ್ಟುಕಕೊಂಡು ಹೊಸ ಯೋಜನೆಗಳನ್ನು ಘೋಷಿಸಿದರು.

ಹೊಸ ಯೋಜನೆಗಳ ವಿವರ

  1. ಅಮೃತ ಗ್ರಾಮ ಪಂಚಾಯತಿಗಳು
    ಆಯ್ದ 750 ಗ್ರಾಮ ಪಂಚಾಯತಿಗಳಲ್ಲಿ ಬೀದಿ ದೀಪಗಳು, ಪ್ರತಿ ಮನೆಗೆ ಕುಡಿಯುವ ನೀರಿನ ಸರಬರಾಜು, ಶೇ.100 ರಷ್ಟು ಘನತ್ಯಾಜ್ಯ ವಿಂಗಡಣೆ ಹಾಗೂ ವಿಲೇವಾರಿ, ತ್ಯಾಜ್ಯ ನೀರನ್ನು ವೈಜ್ಞಾನಿಕವಾಗಿ ವಿಸರ್ಜಿಸುವುದು, ಸೌರವಿದ್ಯುತ್ ಅಳವಡಿಕೆ, ಡಿಜಿಟಲ್ ಲೈಬ್ರರಿಗಳೊಂದಿಗೆ ಸುಸಜ್ಜಿತವಾದ ಶಾಲೆಗಳನ್ನು ಸ್ಥಾಪಿಸಿ ಸಮಗ್ರ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡುವ ಯೋಜನೆ
  2. ಅಮೃತ ಗ್ರಾಮೀಣ ವಸತಿ ಯೋಜನೆ
    ಆಯ್ದ 750 ಗ್ರಾಮ ಪಂಚಾಯತಿಗಳಲ್ಲಿ ವಸತಿ ಮತ್ತು ಆಶ್ರಯರಹಿತರನ್ನು ಗುರುತಿಸಿ ಸರ್ವರಿಗೂ ವಸತಿ ಕಲ್ಪಿಸುವ ಯೋಜನೆ
  3. ಅಮೃತ ರೈತ ಉತ್ಪಾದಕ ಸಂಸ್ಥೆಗಳು
    ರೈತ, ನೇಕಾರ ಮತ್ತು ಮೀನುಗಾರರ ಉತ್ಪನ್ನಗಳ ಉತ್ಪಾದನೆ ಹಾಗೂ ಮಾರಾಟಕ್ಕೆ ವಿಶೇಷ ಪ್ರೋತ್ಸಾಹ ನೀಡಲು 750 ಅಮೃತ ರೈತ ಉತ್ಪಾದಕ ಸಂಸ್ಥೆಗಳ ಸ್ಥಾಪನೆ. ಪ್ರತಿ ಸಂಸ್ಥೆಗೆ 30 ಲಕ್ಷ ರೂ. ನಂತೆ ಮೂರು ವರ್ಷದ ಅವಧಿಗೆ 225 ಕೋಟಿ ರೂ. ಅನುದಾನ.
  4. ಅಮೃತ ನಿರ್ಮಲ ನಗರ
    ಆಯ್ದ 75 ನಗರ ಸ್ಥಳೀಯ ಸಂಸ್ಥೆಗಳಲ್ಲಿ ಸ್ವಚ್ಛತೆ ಮತ್ತು ಸೌಂದರ್ಯ ಕಾಪಾಡಿಕೊಳ್ಳಲು ಅಮೃತ ನಿರ್ಮಲ ನಗರ ರೂಪಿಸಿ ಪ್ರತಿ ಸ್ಥಳೀಯ ಸಂಸ್ಥೆಗೆ 1 ಕೋಟಿ ರೂ.ನಂತೆ 75 ಕೋಟಿ ರೂ. ನೆರವು.
  5. ಅಮೃತ ಶಾಲಾ ಸೌಲಭ್ಯ ಯೋಜನೆ
    ಆಯ್ದ 750 ಶಾಲೆಗಳಿಗೆ ಸುಸಜ್ಜಿತ ಕಟ್ಟಡ, ಪ್ರಯೋಗಾಲಯ, ಗ್ರಂಥಾಲಯ, ಶೌಚಾಲಯ ಇತ್ಯಾದಿ ಸಮಗ್ರ ಸೌಲಭ್ಯ ಒದಗಿಸಲು ತಲಾ 10 ಲಕ್ಷ ರೂ.ಗಳಂತೆ 75 ಕೋಟಿ ರೂ. ಅನುದಾನ.
  6. ಅಮೃತ ಅಂಗನವಾಡಿ ಕೇಂದ್ರಗಳು
    ಆಯ್ದ 750 ಅಂಗನವಾಡಿ ಕೇಂದ್ರಗಳ ಮೂಲಸೌಕರ್ಯ ಮೇಲ್ದರ್ಜೆಗೇರಿಸಲು ಪ್ರತಿ ಅಂಗನವಾಡಿಗೆ 1 ಲಕ್ಷ ರೂ.ನಂತೆ 7.5 ಕೋಟಿ ರೂ. ನೆರವು.
  7. ಅಮೃತ ನಗರೋತ್ಥಾನ
    ಬೆಂಗಳೂರು ನಗರದ ಸಮಗ್ರ ಅಭಿವೃದ್ಧಿಗೆ ಅಮೃತ ನಗರೋತ್ಥಾನ ಯೋಜನೆ ಪ್ರಾರಂಭ; ಅಮೃತ ಮಹೋತ್ಸವದ ಅಂಗವಾಗಿ ಬೆಂಗಳೂರಿನ 75 ಕೊಳೆಗೇರಿ ಅಭಿವೃದ್ಧಿ; 75 ಕೆರೆ/ ಉದ್ಯಾನಗಳ ಅಭಿವೃದ್ಧಿ. ನಗರದ ಸುಗಮ ಸಂಚಾರಕ್ಕೆ 12 ಹೈ ಡೆನ್ಸಿಟಿ ಕಾರಿಡಾರ್ ಅಭಿವೃದ್ಧಿ, ಫ್ಲೈ ಓವರ್, ರಿಂಗ್ ರಸ್ತೆ ಅಭಿವೃದ್ಧಿಗೆ ಕ್ರಮ.
  8. ಅಮೃತ ಸ್ವಸಹಾಯ ಕಿರು ಉದ್ದಿಮೆಗಳು
    ಆಯ್ದ 7,500 ಸ್ವಸಹಾಯ ಗುಂಪುಗಳನ್ನು ಕಿರು ಉದ್ಯಮ ಸಂಸ್ಥೆಗಳಾಗಿ (Micro Enterprises) ರೂಪಿಸಲು ತಲಾ 1 ಲಕ್ಷ ರಂತೆ 75 ಕೋಟಿ ರೂ. ಬೀಜ ಧನ ಸೌಲಭ್ಯ.
  9. ಅಮೃತ ಸಮುದಾಯ ಅಭಿವೃದ್ಧಿ ಯೋಜನೆ
    ಆಯ್ದ 750 ಶಾಲಾ ಕಾಲೇಜುಗಳ ವಿದ್ಯಾರ್ಥಿಗಳನ್ನು ಗುರುತಿಸಿ ರಚನಾತ್ಮಕ ಸಾಮುದಾಯಿಕ ಸೇವೆಗಳಲ್ಲಿ ತೊಡಗಿಕೊಳ್ಳುವಂತೆ ಪ್ರೇರೇಪಣೆ.
  10. ಅಮೃತ ಆರೋಗ್ಯ ಮೂಲಸೌಕರ್ಯ ಉನ್ನತೀಕರಣ ಯೋಜನೆ
    ಆಯ್ದ 750 ಪ್ರಾಥಮಿಕ ಆರೋಗ್ಯ ಕೇಂದ್ರಗಳ ಮೂಲಸೌಕರ್ಯಗಳ ವಿಸ್ತರಣೆ ಮತ್ತು ಉನ್ನತೀಕರಣಕ್ಕೆ ತಲಾ 20 ಲಕ್ಷ ರೂ.ಗಳಂತೆ 150 ಕೋಟಿ ರೂ. ವೆಚ್ಚ.
  11. ಅಮೃತ ಕೌಶಲ್ಯ ತರಬೇತಿ ಯೋಜನೆ
    ರಾಜ್ಯದ ಪರಿಶಿಷ್ಟ ಜಾತಿ, ವರ್ಗ, ಹಿಂದುಳಿದ ವರ್ಗ ಮತ್ತು ಅಲ್ಪಸಂಖ್ಯಾತ ಸಮುದಾಯಗಳ 75 ಸಾವಿರ ಯುವಕ ಯುವತಿಯರ ಕೌಶಲ್ಯಾಭಿವೃದ್ಧಿಗೆ 2 ವರ್ಷಗಳ ತರಬೇತಿ ಯೋಜನೆಗೆ 112 ಕೋಟಿ ರೂ. ವೆಚ್ಚ.
  12. ಸ್ಟಾರ್ಟಪ್ ಉತ್ತೇಜನ ಯೋಜನೆ
    ಈ ಯೋಜನೆಯಡಿ 75 ಸ್ಟಾರ್ಟಪ್ ಉದ್ಯಮಗಳಿಗೆ ಉತ್ತೇಜನ ನೀಡಲು ಕ್ರಮ.
  13. ಅಮೃತ ಕ್ರೀಡಾ ದತ್ತು ಯೋಜನೆ
    ಮುಂದಿನ ಪ್ಯಾರೀಸ್ ಒಲಿಂಪಿಕ್ ಕ್ರೀಡಾಕೂಟದಲ್ಲಿ ಉತ್ತಮ ಸಾಧನೆ ಹಾಗೂ ಪದಕ ವಿಜೇತ ಸಾಮಥ್ರ್ಯವುಳ್ಳ ಆಯ್ದ 75 ಕ್ರೀಡಾಪಟುಗಳನ್ನು ರೂಪಿಸಲು ಅಗತ್ಯವಾದ ತರಬೇತಿ ಮತ್ತು ಪ್ರೋತ್ಸಾಹ ನೀಡಲು ಅಮೃತ ಕ್ರೀಡಾ ದತ್ತು ಯೋಜನೆ ಅನುಷ್ಠಾನ.

ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ಮುಖ್ಯಮಂತ್ರಿ @BSBommai ರವರು ಇಂದು ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.

ಜಿಲ್ಲಾಧಿಕಾರಿ ಮಂಜುನಾಥ್, ಬಿ.ಬಿ.ಎಂ.ಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ, ಪೊಲೀಸ್ ಆಯುಕ್ತ ಕಮಲ್ ಪಂತ್ ಉಪಸ್ಥಿತರಿದ್ದರು. #ಸ್ವಾತಂತ್ರ್ಯದಿನ pic.twitter.com/78a84mrIRl

— CM of Karnataka (@CMofKarnataka) August 15, 2021
Tags: agust 15thazadi ka amrut mahotsavchief minister basavaj bommaiindependence dayindependence day 2021indiakarnataka
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

by cknewsnow desk
October 28, 2026
0

ಬೆಂಗಳೂರಿನಲ್ಲಿ 43.13% ಮತದಾರರ ಪ್ರಮಾಣ ಕುಸಿತ

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

by cknewsnow desk
October 25, 2026
0

ಹಾಲಿ ಮುಖ್ಯಮಂತ್ರಿ ವಿರುದ್ಧ ಕೇಂದ್ರ ಸಚಿವರ ಗಂಭೀರ ಆರೋಪ; ಈಗಿನ ಮಹಾನ್ ಮುಖ್ಯಮಂತ್ರಿಗಳೇ ಸ್ಟಿಂಗ್ ಮೂಲಪುರುಷ

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

by cknewsnow desk
October 25, 2026
0

ಸ್ಟಿಂಗ್ ಆಪರೇಶನ್ ಪ್ರಕರಣದಲ್ಲಿ ರಾಜ್ಯ ಸರ್ಕಾರದ್ದು ಇಬ್ಬಗೆ ನೀತಿ; ಕೇಂದ್ರ ಸಚಿವ ಪ್ರಲ್ಹಾದ ಜೋಶಿ ವಾಗ್ದಾಳಿ

ಸ್ಟಿಂಗ್ ವಿರುದ್ಧ ಕೋರ್ಟ್ ಮೊರೆ ಹೋದ ಸಿದ್ದರಾಮಯ್ಯ! ಇಂದು ಆದೇಶ ನಿರೀಕ್ಷೆ

ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

by cknewsnow desk
October 25, 2026
0

ಹೆಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ; #kpsc ಹಗರಣದ ದಿಕ್ಕು ತಪ್ಪಿಸಲು ಪ್ರಿಯಾಂಕ್ ಖರ್ಗೆ ಒದ್ದಾಟ

ಬೆಂಗಳೂರು ಸುತ್ತಲಿನ ಜನರ ಸಮಾಧಿ ಮೇಲೆ ಬ್ರ್ಯಾಂಡ್‌ ಬೆಂಗಳೂರು

10 ತಿಂಗಳಾದರೂ ಸಿಗದ ಭೂಮಿ; ರಾಜ್ಯದ ಕೈತಪ್ಪಲಿದೆಯಾ ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರ

by cknewsnow desk
October 22, 2026
0

ಬೇಸತ್ತು ಮುಖ್ಯಮಂತ್ರಿ ಡಿಕೆಶಿಗೆ ಪತ್ರ ಬರೆದ ಕೇಂದ್ರ ಸಚಿವ #HDK

ರಾಜೀನಾಮೆ ಕೊಟ್ಟು ಹೊರಬನ್ನಿ; ಅಪಮಾನಿತ ದಲಿತ ಸಚಿವರಿಗೆ #Jds ಕಿವಿಮಾತು

ರಾಜೀನಾಮೆ ಕೊಟ್ಟು ಹೊರಬನ್ನಿ; ಅಪಮಾನಿತ ದಲಿತ ಸಚಿವರಿಗೆ #Jds ಕಿವಿಮಾತು

by cknewsnow desk
October 22, 2026
0

ಮೈಸೂರು ದಸರಾದಲ್ಲಿ ಅವಮಾನ ಪ್ರಸಂಗ; ಬಾಯಲ್ಲಿ ಜಾತ್ಯತೀತ ತತ್ವ, ಆಚರಣೆಯಲ್ಲಿ ಅಸೃಶ್ಯತೆ!; ಕಾಂಗ್ರೆಸ್ ವಿರುದ್ಧ ಜೆಡಿಎಸ್ ವಾಗ್ದಾಳಿ

Next Post
ಮಾರ್ಮಿಕವಾಗಿ ಮಾತಿನ ಬಾಣ ಬಿಟ್ಟ ಬೊಮ್ಮಾಯಿ!

ಮಾರ್ಮಿಕವಾಗಿ ಮಾತಿನ ಬಾಣ ಬಿಟ್ಟ ಬೊಮ್ಮಾಯಿ!

Leave a Reply Cancel reply

Your email address will not be published. Required fields are marked *

Recommended

ರಾಜ್ಯದಲ್ಲಿ ಏಳು ಮಂದಿಗೆ ಬ್ರಿಟೀಷ್ ಮೂಲದ ರೂಪಾಂತರಿ ಕೊರೊನಾ; ಪ್ರತಿ ಸರಕಾರಿ ಆಸ್ಪತ್ರೆಗೆ ಆಯುಷ್‌ ವೈದ್ಯರ ನೇಮಕಕ್ಕೆ ನಿರ್ಧರಿಸಿದ ಸರಕಾರ

ಕೊರೊನಾ ಲಸಿಕೆ ತಯಾರಿ ಇಡೀ ದೇಶವೇ ಹೆಮ್ಮೆಪಡುವಂಥ ಸಂಗತಿ, ವ್ಯಾಕ್ಸಿನ್ ವಿತರಣೆಗೆ ಸಕಲ ಸಿದ್ಧತೆ‌ ಮಾಡಲಾಗುತ್ತಿದೆ ಎಂದ ಆರೋಗ್ಯ ಸಚಿವ ಡಾ.ಸುಧಾಕರ್

6 years ago
ರೆಬೆಲ್‌ಸ್ಟಾರ್ ಅಂಬಿ ಎಂದರೆ ಆನಂದ, ಅಂಬಿ ಎಂದರೆ ಆಶ್ಚರ್ಯ, ಅಂಬಿ ಎಂದರೆ ಸಂಭ್ರಮ; ಕನ್ನಡಕ್ಕೆ ಅಂಬಿ ಒಬ್ಬರೇ ಒಬ್ಬರು! ಅಂದು, ಇಂದು, ಮುಂದೆಂದೂ..

ರೆಬೆಲ್‌ಸ್ಟಾರ್ ಅಂಬಿ ಎಂದರೆ ಆನಂದ, ಅಂಬಿ ಎಂದರೆ ಆಶ್ಚರ್ಯ, ಅಂಬಿ ಎಂದರೆ ಸಂಭ್ರಮ; ಕನ್ನಡಕ್ಕೆ ಅಂಬಿ ಒಬ್ಬರೇ ಒಬ್ಬರು! ಅಂದು, ಇಂದು, ಮುಂದೆಂದೂ..

5 years ago

Popular News

  • #SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

    #SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

    0 shares
    Share 0 Tweet 0
  • ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

    0 shares
    Share 0 Tweet 0
  • ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

    0 shares
    Share 0 Tweet 0
  • ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

    0 shares
    Share 0 Tweet 0
  • 10 ತಿಂಗಳಾದರೂ ಸಿಗದ ಭೂಮಿ; ರಾಜ್ಯದ ಕೈತಪ್ಪಲಿದೆಯಾ ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರ

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

October 28, 2026
ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

October 25, 2026
ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

October 25, 2026
ಸ್ಟಿಂಗ್ ವಿರುದ್ಧ ಕೋರ್ಟ್ ಮೊರೆ ಹೋದ ಸಿದ್ದರಾಮಯ್ಯ! ಇಂದು ಆದೇಶ ನಿರೀಕ್ಷೆ

ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

October 25, 2026

Covid 19

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

October 16, 2026
ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ