• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS STATE

ಮಾರ್ಮಿಕವಾಗಿ ಮಾತಿನ ಬಾಣ ಬಿಟ್ಟ ಬೊಮ್ಮಾಯಿ!

cknewsnow desk by cknewsnow desk
August 15, 2021
in STATE
Reading Time: 1 min read
0
ಮಾರ್ಮಿಕವಾಗಿ ಮಾತಿನ ಬಾಣ ಬಿಟ್ಟ ಬೊಮ್ಮಾಯಿ!
961
VIEWS
FacebookTwitterWhatsuplinkedinEmail

“ಜನಪ್ರಿಯವಾಗುವುದಕ್ಕಿಂತ ಜನೋಪಯೋಗಿ ಆಗುವುದು ಬಹಳ ಮುಖ್ಯ” ಎಂದ ಮುಖ್ಯಮಂತ್ರಿ!!

ಬೆಂಗಳೂರು: ಜನಪ್ರಿಯವಾಗುವುದು ಸುಲಭ. ಜನಪ್ರಿಯವಾಗುವುದಕ್ಕಿಂತ ಜನೋಪಯೋಗಿ ಆಗುವುದು ಬಹಳ ಮುಖ್ಯ. ಜನೋಪಯೋಗಿ ಆಡಳಿತವನ್ನು ನಾವು ನೀಡಲಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ವಿಧಾನಮಂಡಲದ ವತಿಯಿಂದ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ʼನಲ್ಲಿ ನಡೆದ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಇಂದು ಅವರು ಪಾಲ್ಗೊಂಡು ಮಾತನಾಡಿದರು.

ಸಾಮಾನ್ಯವಾಗಿ ಮಾತಿನಲ್ಲಿ ಎಂದೂ ಹಳಿತಪ್ಪದ ಬೊಮ್ಮಾಯಿ ಅವರು; ಬ್ಯಾಂಕ್ವೆಟ್‌ ಹಾಲ್‌ ಕಾರ್ಯಕ್ರಮದಲ್ಲಿ ಮಾತ್ರ ತುಸು ವಿಭಿನ್ನವಾಗಿ ಮಾತನಾಡಿದರು. ತಮ್ಮನ್ನು ಶ್ಯಾಡೋ ಸಿಎಂ ಎಂದು ಮೂದಲಿಸುವ ಕೆಲವರಿಗೆ ಪರೋಕ್ಷವಾಗಿ ಟಾಂಗ್‌ ಕೊಟ್ಟರು.

ಅವರು ಹೇಳಿದ್ದಿಷ್ಟು;
  • ದೇಶಕ್ಕೆ ಸ್ವಾತಂತ್ರ್ಯ ದೊರೆತು 75 ವರ್ಷಗಳಾಗಿವೆ. ದೇಶವೊಂದಕ್ಕೆ 75 ಆದರೆ, ಬಾಲ್ಯವನ್ನು ಮುಗಿಸಿ ಯೌವ್ವನಕ್ಕೆ ಕಾಲಿರಿಸಿದಂತೆ. ಯೌವ್ವನದ ನವ ಚೇತನ, ಹೊಸ ಆಸೆಗಳು, ತುಡಿತ, ಕನಸು, ಸಾಧಿಸುವ ಹಂಬಲವಿರುವ ಘಟ್ಟಕ್ಕೆ ದೇಶ ತಲುಪಿದೆ.
  • ಸ್ವಾತಂತ್ರ್ಯ ಮನುಷ್ಯನ ಸಹಜ ಗುಣಧರ್ಮ. ಬ್ರಿಟಿಷರು ಅಂದು ಅಂಥ ಪ್ರಮುಖ ಗುಣಧರ್ಮ ವನ್ನು ಹತ್ತಿಟ್ಟಿದ್ದರು ಎಂದರೆ, ಸ್ವಾತಂತ್ರ್ಯ ಪೂರ್ವದ ದೇಶ ಹೇಗಿತ್ತು ಎಂದು ಆಲೋಚಿಸಬೇಕು. ಸ್ವಾತಂತ್ರ್ಯ ಹೋರಾಟಕ್ಕೆ ಧಾರ್ಮಿಕ ಚಳವಳಿಯ ಹಿನ್ನೆಲೆ ಇದೆ. ಅರವಿಂದರು, ಗೋಪಾಲಕೃಷ್ಣ ಗೋಖಲೆ, ಲೋಕಮಾನ್ಯ ತಿಲಕ್, ವೀರ ಸಾವರ್ಕರ್ ಮುಂತಾದವರು ಹೋರಾಟಕ್ಕೆ ಸಾತ್ವಿಕ ಚಿಂತನೆ ನೀಡಿದರು. ಮುಂದೆ ಅದಕ್ಕೆ ಭಗತ್ ಸಿಂಗ್, ಚಂದ್ರಶೇಖರ್ ಆಜಾದ್, ಸುಭಾಷ್ ಚಂದ್ರ ಬೋಸ್ ಕಾರ್ಯಾಚರಣೆ ನೀಡಿದರೆ, ಗಾಂಧೀಜಿ ಅಹಿಂಸೆ ಮತ್ತು ಸತ್ಯ ಎಂಬ ಎರಡು ಅಸ್ತ್ರ ಗಳನ್ನು ನೀಡಿದರು. ಸಾತ್ವಿಕತೆ, ಕಾರ್ಯಾಚರಣೆ, ಸತ್ಯ ಅಹಿಂಸೆಗಳು, ನಮಗೆ ಸ್ವಾತಂತ್ರ್ಯ ತಂದುಕೊಟ್ಟಿವೆ.
  • ಅನಾಮಧೇಯ ಸ್ವಾತಂತ್ರ್ಯ ಹೋರಾಟಗಾರರು, ಬಾರ್ಡೋಲಿ ರೈತ ಸತ್ಯಾಗ್ರಹ ಮತ್ತು ಚಂಪಾರನ್, ಕಾರ್ಮಿಕರ ಚಳವಳಿಗಳು ದೇಶಕ್ಕೆ ಸ್ವಾತಂತ್ರ್ಯ ತಂದುಕೊಡುವಲ್ಲಿ ಪ್ರಮುಖ ಪಾತ್ರ ವಹಿಸಿವೆ. ಇವು ಸ್ವಾತಂತ್ರ್ಯ ಹೋರಾಟಕ್ಕೆ ಬಹು ದೊಡ್ಡ ತಿರುವು ನೀಡಿದವು.
  • ದೇಶದ ಪ್ರಗತಿಯಲ್ಲಿ ಕರ್ನಾಟಕದ ಪಾಲು ದೊಡ್ಡದು. ಕರ್ನಾಟಕ ವಿಧಾನಮಂಡಲ ಹಲವಾರು ದಶಕಗಳಿಂದ ರಾಜ್ಯದಲ್ಲಿ ಬೆಳವಣಿಗೆ ಮತ್ತು ಬದಲಾವಣೆ ತಂದಿದೆ.
  • ವಿಧಾನಸೌಧ ಪ್ರಜಾಪ್ರಭುತ್ವದ ದೇವಾಲಯ. ಸಂವಿಧಾನ ಈ ದೇವಾಲಯಕ್ಕೆ ಭಗವದ್ಗೀತೆ ಇದ್ದಂತೆ. ವಿಧಾನಸಭೆಯ ಪರಂಪರೆ, ಸಂವಿಧಾನ ಬದ್ಧ ಆಡಳಿತವನ್ನು ನಾವು ಕಾಪಾಡಿಕೊಂಡು ಹೋಗಬೇಕಿದೆ.
  • ಕರ್ನಾಟಕದಲ್ಲಿ ಅನೇಕ ಚಿಂತಕರಿದ್ದಾರೆ. 11ನೇ ಶತಮಾನದಲ್ಲಿಯೇ ಜನಪರ ಚಿಂತನೆ ಮಾಡಿ ಜನೋಪಯೋಗಿ ಶಾಸನ ರಚಿಸಬೇಕು. ಇದನ್ನು ಸಂಪೂರ್ಣವಾಗಿ ಅನುಷ್ಠಾನ ಮಾಡುವ ಆಡಳಿತ ಯಂತ್ರವಿರಬೇಕು. ಇಂದು ಆಳುವವನು ಆಡಳಿತ ಮಾಡಿದರೆ, ಆಡಳಿತ ಮಾಡುವವನು ಆಳುವ ವಾತಾವರಣವಿದೆ. ಇದನ್ನು ಸರಿಪಡಿಸುವ ನಿಟ್ಟಿನಲ್ಲಿ ಉಭಯ ಸದನಗಳು ಕಾರ್ಯನಿರ್ವಹಿಸಬೇಕು.
  • ನಾಡಿನ ಅನೇಕ ಪ್ರಮುಖರು ಸಾಮಾಜಿಕ ಸಮಾನತೆ, ಸುಭಿಕ್ಷತೆ, ಚರಿತ್ರಾರ್ಹ ತೀರ್ಪುಗಳನ್ನು ಹಾಗೂ ಆಚಾರವಂತ ನಿರ್ದೇಶನಗಳನ್ನು ನೀಡಿದ್ದಾರೆ. ಪ್ರೇರಣಾದಾಯಕ ಇತಿಹಾಸ ನಮ್ಮದು. ನನ್ನ ಆಡಳಿತ ಜನಪರ, ಜನರಿಗೋಸ್ಕರ, ದಕ್ಷ ಹಾಗೂ ಪಾರದರ್ಶಕವಾಗಿರುತ್ತದೆ.
  • ಬದಲಾವಣೆಯ ಪರ್ವ ಇದು. ನಾಡನ್ನು ಶ್ರೇಷ್ಠ ರಾಜ್ಯವನ್ನಾಗಿಸೋಣ. ಈ ನಿಟ್ಟಿನಲ್ಲಿ ಸಿದ್ಧತೆಗಳಾಗುತ್ತಿವೆ. ಇಂದು ಘೋಷಣೆಯಾಗಿರುವ ಕಾರ್ಯಕ್ರಮಗಳನ್ನು ಅನುಷ್ಠಾನಕ್ಕೆ ತರೋಣ.

ಬಹಳಷ್ಟು ಅಪೇಕ್ಷೆಗಳನ್ನಿಟ್ಟುಕೊಂಡು ಜನ ನಮ್ಮನ್ನು ಆಯ್ಕೆ ಮಾಡುತ್ತಾರೆ. ಅವರ ವಿಶ್ವಾಸಕ್ಕೆ ಚ್ಯುತಿ ಬಾರದಂತೆನಾವು ಕೆಲಸ ಮಾಡಬೇಕು. ಜನಪ್ರಿಯವಾಗುವುದಕ್ಕಿಂತ ಜನೋಪಯೋಗಿ ಆಗುವುದು ಬಹಳ ಮುಖ್ಯ. ಆನಿಟ್ಟಿನಲ್ಲಿ ಕೆಲಸ ಮಾಡಬೇಕು.

ಬಸವರಾಜ ಬೊಮ್ಮಾಯಿ‌, ಮುಖ್ಯಮಂತ್ರಿ
Tags: azadi ka amrut mahotsavchief minister basavaj bommaiindependence dayindependence day 2021karnataka
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಬಾಗೇಪಲ್ಲಿಯಲ್ಲಿ ಆಜಾದಿ ಅಮೃತ ಮಹೋತ್ಸವದ ಸಂಭ್ರಮ

ಬಾಗೇಪಲ್ಲಿಯಲ್ಲಿ ಆಜಾದಿ ಅಮೃತ ಮಹೋತ್ಸವದ ಸಂಭ್ರಮ

Leave a Reply Cancel reply

Your email address will not be published. Required fields are marked *

Recommended

ದೇವರಾಜ ಅರಸು ಆಶಯ ಉಲ್ಟಾ ಮಾಡಿದ ಬಿಜೆಪಿ!!

ಸಂಕಷ್ಟ ಸೂತ್ರ ಇಲ್ಲದಿರುವುದೇ ಸಂಕಷ್ಟಕ್ಕೆ ಕಾರಣ ಎಂದು ಕೈಚೆಲ್ಲಿದ ಸಿದ್ದರಾಮಯ್ಯ

3 years ago
ಲಾಕ್ ಡೌನ್ ಇಲ್ಲ

ವೈಫಲ್ಯ ಮುಚ್ಚಿಕೊಳ್ಳಲು ಬೊಮ್ಮಾಯಿ ಬುಲ್ಡೋಜರ್ ಜಪ

4 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ