ಮೈಸೂರು: ಮೈಸೂರು ವಿಶ್ವ ವಿದ್ಯಾನಿಲಯದಲ್ಲಿ 92 ಆಫ್ಘಾನ್ ವಿದ್ಯಾರ್ಥಿಗಳಿದ್ದು, ಅವರ ಬೇಡಿಕೆಗೆ ಸ್ಪಂದಿಸುವ ಕೆಲಸವನ್ನ ಮೈಸೂರು ವಿವಿ ಮಾಡುತ್ತದೆ ಎಂದು ಕುಲಪತಿ ಪ್ರೊ. ಜಿ. ಹೇಮಂತ್ ಕುಮಾರ್ ತಿಳಿಸಿದರು.
ಮೈಸೂರಲ್ಲಿ ಮಂಗಳವಾರ ಮೈಸೂರು ವಿವಿ ಕುಲಪತಿ ಪ್ರೊ. ಜಿ.ಹೇಮಂತ್ ಕುಮಾರ್ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.
ಸದ್ಯ ಮೈಸೂರಿನಲ್ಲಿರುವ ಅಫ್ಘನ್ ವಿದ್ಯಾರ್ಥಿಗಳು ನಿರ್ಭೀತಿಯಿಂದ ಇದ್ದಾರೆ. ಅವರಿಂದ ಯಾವುದೇ ಬೇಡಿಕೆ ಬಂದಿಲ್ಲ. ಬೇಡಿಕೆ ಬಂದರೆ ಸ್ಪಂದಿಸಿ, ವಿದ್ಯಾರ್ಥಿಗಳ ಸಮಸ್ಯೆ ಬಗೆಹರಿಸುವ ಕೆಲಸ ಮಾಡುತ್ತೇವೆ ಎಂದು ಹೇಮಂತ್ ಕುಮಾರ್ ಹೇಳಿದರು.
ವೀಸಾ ಅವಧಿ ವಿಸ್ತರಣೆ ಮಾಡಿದರೇ ಆಫ್ಘಾನ್ ವಿದ್ಯಾರ್ಥಿಗಳಿಗೆ ಸಹಾಯ ಮಾಡುತ್ತೇವೆ. ಮೈಸೂರಿನಲ್ಲಿ ಉಳಿದುಕೊಳ್ಳಲು ವ್ಯವಸ್ಥೆ ಮಾಡುತ್ತೇವೆ ಎಂದು ಕುಲಪತಿ ಪ್ರೊ.ಜಿ. ಹೇಮಂತ್ ಕುಮಾರ್ ತಿಳಿಸಿದರು.