• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home BUSINESS

ಐದು ವರ್ಷಗಳಲ್ಲಿ 300 ಶತಕೋಟಿ ಡಾಲರ್ ಡಿಜಿಟಲ್ ಉದ್ಯಮ

cknewsnow desk by cknewsnow desk
August 20, 2021
in BUSINESS, STATE
Reading Time: 1 min read
0
ಐದು ವರ್ಷಗಳಲ್ಲಿ 300 ಶತಕೋಟಿ ಡಾಲರ್ ಡಿಜಿಟಲ್ ಉದ್ಯಮ
937
VIEWS
FacebookTwitterWhatsuplinkedinEmail

ಮೈಸೂರಿನಲ್ಲಿ ಡಿಜಿಟಲ್‌ ಎಕಾನಮಿ ಮಿಷನ್‌ ಕಚೇರಿ ಉದ್ಘಾಟನೆ


  • 150 ಕೋಟಿ ಡಾಲರ್‌ ಐಟಿ ರಫ್ತು ಗುರಿ
  • ಐಟಿ ರಫ್ತಿನಲ್ಲಿ ದೇಶದಲ್ಲಿ ರಾಜ್ಯವೇ ನಂಬರ್ 1
  • 2ನೇ ಹಂತದ ನಗರಗಳಲ್ಲಿ ಉದ್ಯೋಗ ಸೃಷ್ಟಿಗೆ ಆದ್ಯತೆ

ಮೈಸೂರು: ಭಾರತದ ಡಿಜಿಟಲ್ ಉದ್ಯಮದ ವಹಿವಾಟು 2025ರ ವೇಳೆಗೆ 1 ಟ್ರಿಲಿಯನ್ ಆಗಬೇಕೆಂಬುದು ಪ್ರಧಾನಮಂತ್ರಿ ಅವರ ಗುರಿಯಾಗಿದ್ದು. ಆ ವೇಳೆಗೆ ರಾಜ್ಯದ ಡಿಜಿಟಲ್ ಉದ್ಯಮದ ಪಾಲು 300-350 ಶತಕೋಟಿ ಡಾಲರ್ ತಲುಪಬೇಕೆಂಬ ಗುರಿ ಹಾಕಿಕೊಳ್ಳಲಾಗಿದೆ ಎಂದು ಐಟಿ/ಬಿಟಿ ಸಚಿವರಾದ ಡಾ.ಸಿ.ಎನ್.ಅಶ್ಬತ್ಥ ನಾರಾಯಣ ಹೇಳಿದರು.

ಮೈಸೂರಿನ ಹೆಬ್ಬಾಳ ಕೈಗಾರಿಕ ಪ್ರದೇಶದ ಸಿಲ್ವರ್ ಸ್ಪಿರಿಟ್ ಟೆಕ್ನಾಲಜಿ ಪಾರ್ಕ್ ನಲ್ಲಿ ಸ್ಥಾಪಿಸಿರುವ ಕರ್ನಾಟಕ ಡಿಜಿಟಲ್‌ ಎಕಾನಮಿ ಮಿಷನ್ʼ ಕಚೇರಿಯನ್ನು ಉದ್ಘಾಟಿಸಿ ಮಾತನಾಡಿದ ಅವರು;  ಆರ್ಥಿಕತೆಗೆ ಯಾವುದೇ ಸವಾಲಿದ್ದರೂ ನಿಗದಿತ ಗುರಿಯನ್ನು ತಲುಪಲು ಸರಕಾರ ಎಲ್ಲ ಕ್ರಮಗಳನ್ನೂ ಕೈಗೊಂಡಿದೆ ಎಂದರು.

ಐಟಿ ರಫ್ತಿನಲ್ಲಿ ನಂಬರ್ 1

ಸದ್ಯಕ್ಕೆ ರಾಜ್ಯವು ವಾರ್ಷಿಕ 54 ಶತಕೋಟಿ ಡಾಲರ್‌ ಮೌಲ್ಯದ ಐಟಿ ರಫ್ತು ವಹಿವಾಟು ನಡೆಸುತ್ತಿದೆ. ಇದು ದೇಶದಲ್ಲೇ ಅತಿ ಹೆಚ್ಚು. ಇದರ ಪ್ರಮಾಣವನ್ನೂ ಇನ್ನು ಕೆಲವೇ ವರ್ಷಗಳಲ್ಲಿ 150 ಶತ ಕೋಟಿ ಡಾಲರ್ʼಗೆ ಹೆಚ್ಚಿಸುವ ಗುರಿ ಹಾಕಿಕೊಳ್ಳಲಾಗಿದೆ. ಅದಲ್ಲದೆ, ಒಟ್ಟಾರೆ ಜಿಎಸ್ಡಿಪಿಗೆ ಐಟಿ ವಲಯದ ಪಾಲನ್ನು 30%ಗೆ ಹೆಚ್ಚಿಸುವ ಉದ್ದೇಶ ಹೊಂದಲಾಗಿದೆ ಎಂದು ಅವರು ಹೇಳಿದರು.

ಇದಲ್ಲದೆ, ಬಿಯಾಂಡ್‌ ಬೆಂಗಳೂರು ಉಪಕ್ರಮದಡಿ 10 ಲಕ್ಷ ಜನರಿಗೆ ಉದ್ಯೋಗ ಕಲ್ಪಿಸುವ ಗುರಿ ಹೊಂದಲಾಗಿದೆ ಹಾಗೂ ರಾಜ್ಯದ ಎಲ್ಲ ಪ್ರದೇಶಗಳಲ್ಲೂ ನವೋದ್ಯಮಗಳ ಸ್ಥಾಪನೆಗೆ ಒತ್ತು ನೀಡುವ ಕೆಲಸವನ್ನು ಸರಕಾರ ಮಾಡುತ್ತಿದೆ ಎಂದು ಡಾ.ಅಶ್ವತ್ಥನಾರಾಯಣ ಹೇಳಿದರು.

ಈ ಎಲ್ಲ ಗುರಿಗಳನ್ನು ಸಾಧಿಸಿಲು ಕರ್ನಾಟಕ ಡಿಜಿಟಲ್‌ ಎಕಾನಮಿ ಮಿಷನ್‌, ಬಿಯಾಂಡ್‌ ಬೆಂಗಳೂರು, ದೇಶದಲ್ಲೇ ಅತ್ಯುತ್ತಮವಾದ ನವೋದ್ಯಮ ನೀತಿ, ಎಂಜಿಯರಿಂಗ್‌ ಸಂಶೋಧನಾ ಮತ್ತು ಅಭಿವೃದ್ಧಿ ನೀತಿ ಇತ್ಯಾದಿಗಳಿಂದ ಸಾಧ್ಯವಾಗುತ್ತಿದೆ ಎಂದ ಅವರು; ಇದಕ್ಕೆ ಪೂರಕವಾಗಿ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಕೂಡ ದೇಶದಲ್ಲೇ ಮೊತ್ತ ಮೊದಲಿಗೆ ರಾಜ್ಯದಲ್ಲೇ ಜಾರಿ ಮಾಡಲಾಗುತ್ತಿದೆ ಎಂದರು.

ಇದಲ್ಲದೆ, ರಾಜ್ಯದಲ್ಲಿ ಕೈಗಾರಿಕೆಗಳಿಗೆ ಅಗತ್ಯವಾದ ಅತ್ಯುತ್ತಮ ಕುಶಲ ಮಾನವ ಸಂಪನ್ಮೂಲವನ್ನು ಒದಗಿಸುವದಕ್ಕೆ ಕ್ರಮ ವಹಿಸಲಾಗಿದ್ದು, ಖಾಸಗಿ ಸಹಭಾಗಿತ್ವದಲ್ಲಿ ರಾಜ್ಯದ ನೂರೈವತ್ತು ಸರಕಾರಿ ಐಟಿಐಗಳನ್ನು ಅತ್ಯಾಧುನಿಕವಾಗಿ ಮೇಲ್ದರ್ಜೆಗೇರಿಸಲಾಗುತ್ತಿದೆ ಎಂದು ಸಚಿವರು ಮಾಹಿತಿ ನೀಡಿದರು.

ಉದ್ಯೋಗ ಸೃಷ್ಟಿಗೆ ಒತ್ತು

ಡಿಜಿಟಲ್‌ ಎಕಾನಮಿ ಮಿಷನ್‌ ಮೂಲಕ ಬೆಂಗಳೂರು ಮಾತ್ರವಲ್ಲ ಮೈಸೂರು, ಮಂಗಳೂರು, ಹುಬ್ಬಳ್ಳಿ, ಬೆಳಗಾವಿ, ಶಿವಮೊಗ್ಗದಂಥ ಎರಡನೇ ಹಂತದ ಹಾಗೂ ಆನಂತರದ ನಗರಗಳಲ್ಲೂ ಹೆಚ್ಚು ಪ್ರಮಾಣದಲ್ಲಿ ಉದ್ಯೋಗ ಸೃಷ್ಟಿಯಾಗಲಿದೆ ಎಂದ ಅವರು, ಈ ನಿಟ್ಟಿನಲ್ಲಿ ಮೈಸೂರು ಮುಂಚೂಣಿ ನಗರವಾಗಿದೆ, ಇತರೆ ಐಟಿ ಕ್ಷಸ್ಟರ್‌ಗಳಿಗೆ ಮೈಸೂರು ಮಾದರಿಯಾಗಲಿದೆ ಮತ್ರವಲ್ಲದೆ ಮುಂದಿನ ಕೆಲ ದಿನಗಳಲ್ಲಿ ಕರ್ನಾಟಕದಲ್ಲಿ 2000ಕ್ಕೂ ಹೆಚ್ಚು ಹೊಸ ಪದವೀಧರರು ಉದ್ಯೋಗಕ್ಕೆ ಸೇರಲು ಸಿದ್ಧರಾಗಲಿದ್ದಾರೆ. ಅವರೆಲ್ಲರಿಗೂ ಅವಕಾಶ ಸಿಗಲಿದೆ ಎಂದರು.

ಮುಂದೆ ಡಿಜಿಟಲ್‌ ಉದ್ಯೋಗಾವಕಾಶಗಳೇ ಹೆಚ್ಚುತ್ತವೆ. 2030ರ ಹೊತ್ತಿಗೆ ರಾಜ್ಯದ ಡಿಜಿಟಲ್ ಆರ್ಥಿಕತೆಗೆ ಮೈಸೂರು, ಹುಬ್ಬಳ್ಳಿ, ಮಂಗಳೂರು ಕ್ಲಸ್ಟರ್‌ಗಳಿಂದ ಶೇ 5% ಕೊಡುಗೆ ದೊರೆಯುವ ಸಾಧ್ಯತೆ ಇದೆ ಎಂದು ಅವರು ಹೇಳಿದರು.

ಈ ಕಾರ್ಯಕ್ರಮದಲ್ಲಿ ಮೈಸೂರು ರಾಜವಶಂಸ್ಥರಾದ ಶ್ರೀ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್, ಬೃಹತ್‌ ಕೈಗಾರಿಕೆ ಸಚಿವ ಮುರುಗೇಶ್‌ ನಿರಾಣಿ, ಸಂಸದ ಪ್ರತಾಪ್‌ ಸಿಂಹ, ಸ್ಟಾರ್‌ಟಪ್‌ ವಿಷನ್‌ ಗ್ರೂಪ್‌ ಅಧ್ಯಕ್ಷ ಪ್ರಶಾಂತ್‌ ಪ್ರಕಾಶ್, ರಾಜ್ಯ ಸರಕಾರದ ಎಲೆಕ್ಟ್ರಾನಿಕ್ಸ್‌, ಐಟಿ-ಬಿಟಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಡಾ.ಇಎಸ್‌ ರಮಣ ರೆಡ್ಡಿ, ಇದೇ ಇಲಾಖೆಯ ನಿರ್ದೇಶಕಿ ಮೀನಾ ನಾಗರಾಜ್‌ ಮುಂತಾದವರು ಉಪಸ್ಥಿತರಿದ್ದರು.

Tags: Beyond Bangaloredr cn ashwath narayanKARNATAKA DIGITAL ECONOMY MISSIONKDEMMysuru
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಸ್ವಸಹಾಯ ಗುಂಪುಗಳ ಮಹಿಳೆಯರಿಗೆ ಸಾಲದ ಚೆಕ್ ವಿತರಿಸಿದ ಶಾಸಕ ಎಸ್. ಎನ್.ಸುಬ್ಬಾರೆಡ್ಡಿ

ಸ್ವಸಹಾಯ ಗುಂಪುಗಳ ಮಹಿಳೆಯರಿಗೆ ಸಾಲದ ಚೆಕ್ ವಿತರಿಸಿದ ಶಾಸಕ ಎಸ್. ಎನ್.ಸುಬ್ಬಾರೆಡ್ಡಿ

Leave a Reply Cancel reply

Your email address will not be published. Required fields are marked *

Recommended

ರಥಸಪ್ತಮಿ ಪ್ರಯುಕ್ತ ಚಿಕ್ಕಬಳ್ಳಾಪುರದಲ್ಲಿ ಸೂರ್ಯ ನಮಸ್ಕಾರ, ಯೋಗ ಕಾರ್ಯಕ್ರಮ

ರಥಸಪ್ತಮಿ ಪ್ರಯುಕ್ತ ಚಿಕ್ಕಬಳ್ಳಾಪುರದಲ್ಲಿ ಸೂರ್ಯ ನಮಸ್ಕಾರ, ಯೋಗ ಕಾರ್ಯಕ್ರಮ

5 years ago
45 ದಿನ ಆದ ಮೇಲೆ ಕಣ್ ಬಿಟ್ಟ ಆಂಬ್ಯುಲೆನ್ಸ್‌

45 ದಿನ ಆದ ಮೇಲೆ ಕಣ್ ಬಿಟ್ಟ ಆಂಬ್ಯುಲೆನ್ಸ್‌

4 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ