• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS NATION

ಉತ್ತರ ಪ್ರದೇಶದ ಮಾಜಿ ಸಿಎಂ ಕಲ್ಯಾಣ್ ಸಿಂಗ್ ನಿಧನ

P K Channakrishna by P K Channakrishna
August 21, 2021
in NATION
Reading Time: 1 min read
0
ಉತ್ತರ ಪ್ರದೇಶದ ಮಾಜಿ ಸಿಎಂ ಕಲ್ಯಾಣ್ ಸಿಂಗ್ ನಿಧನ
951
VIEWS
FacebookTwitterWhatsuplinkedinEmail

ಲಖನೌ: ಬಿಜೆಪಿ ಹಿರಿಯ ನಾಯಕರಲ್ಲಿ ಒಬ್ಬರು, ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಹಾಗೂ ರಾಜಸ್ತಾನ & ಹಿಮಾಚಲ ಪ್ರದೇಶದ ಮಾಜಿ ರಾಜ್ಯಪಾಲ ಕಲ್ಯಾಣ್ ಸಿಂಗ್ (89) ಅವರು ಇನ್ನಿಲ್ಲ.

ಕೆಲ ದಿನಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಲಖನೌ ನಲ್ಲಿರುವ ಸಂಜಯ್ ಗಾಂಧಿ ಸ್ನಾತಕೋತ್ತರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಎಸ್ ಜಿಪಿಜಿಐ) ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಇಂದು ಕೊನೆಯುಸಿರೆಳೆದಿದ್ದಾರೆ. ಈ ವಿಷಯವನ್ನು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ತಿಳಿಸಿದ್ದಾರೆ.

ಕಳೆದ ಜುಲೈ 4ರಂದು ಕಲ್ಯಾಣ್‌ ಸಿಂಗ್‌ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ದೇಹ ಊದಿಕೊಂಡು ಅಸ್ವಸ್ಥರಾಗಿದ್ದ ಅವರಿಗೆ ದಿಲ್ಲಿ ಆಸ್ಪತ್ರೆಯಲ್ಲಿ ಸರ್ವ ರೀತಿಯ ಚಿಕಿತ್ಸೆಯನ್ನೂ ನೀಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿ ಆಗಲಿಲ್ಲ.

ಬಿಜೆಪಿಯ ಹಿರಿಯ ಮುಖಂಡ ಎಲ್.ಕೆ.ಆಡ್ವಾಣಿ ಅವರು ದೇಶಾದ್ಯಂತ ರಥಯಾತ್ರೆ ನಡೆಸಿದಾಗ ಕಲ್ಯಾಣ್‌ ಸಿಂಗ್‌ ಅವರು ಉತ್ತರ ಪ್ರದೇಶದ ಮುಖ್ಯಮಂತ್ರಿ ಆಗಿದ್ದರು. 1992 ಡಿಸೆಂಬರ್‌ 6ರಂದು ಅಯೋಧ್ಯೆಯಲ್ಲಿ ಬಾಬರಿ ಮಸೀದಿ ನೆಲಸಮವಾದಾಗ ಆ ರಾಜ್ಯದ ಚುಕ್ಕಾಣಿ ಹಿಡಿದಿದ್ದರು.

ಈ ಘಟನೆ ನಡೆದ ನಂತರ ಮುಖ್ಯಮಂತ್ರಿ ಪದವಿಗೆ ರಾಜೀನಾಮೆ ನೀಡಿದ್ದ ಅವರು ಪುನಾ 1997ರಿಂದ 1999ರವರೆಗೂ ಮುಖ್ಯಮಂತ್ರಿಯಾಗಿದ್ದರು. ಇದಾದ ಮೇಲೆ ಬಿಜೆಪಿ ಬಿಟ್ಟುಹೋಗಿದ್ದ ಅವರು 1999ರಲ್ಲಿ ರಾಷ್ಟ್ರೀಯ ಕ್ರಾಂತಿ ಪಕ್ಷವನ್ನು ಕಟ್ಟಿದ್ದರು. 2004ರ ಲೋಕಸಭೆ ಚುಣಾವಣೆ ಸಂದರ್ಭದಲ್ಲಿ ಪಕ್ಷಕ್ಕೆ ವಾಪಸ್ಸಾಗಿದ್ದರು.

I am saddened beyond words. Kalyan Singh Ji…statesman, veteran administrator, grassroots level leader and great human. He leaves behind an indelible contribution towards the development of Uttar Pradesh. Spoke to his son Shri Rajveer Singh and expressed condolences. Om Shanti. pic.twitter.com/ANOU2AJIpS

— Narendra Modi (@narendramodi) August 21, 2021

ಕಲ್ಯಾಣ್‌ ಸಿಂಗ್‌ ಅವರ ನಿಧನಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ. “ಕಲ್ಯಾಣ್ ಸಿಂಗ್ ಅವರು ಸಮಾಜದ ಹಿಂದುಳಿದ ವರ್ಗದ ಕೋಟ್ಯಂತರ ಜನರ ದನಿಯಾಗಿದ್ದರು. ರೈತರ, ಯುವಜನರ ಸಬಲೀಕರಣಕ್ಕೆ ಶ್ರಮಿಸಿದ್ದರು. ಅವರ ನಿಧನದಿಂದ ಉಂಟಾಗಿರುವ ದುಃಖವನ್ನು ಹೇಳಲು ಶಬ್ದಗಳಿಲ್ಲ. ಅವರು ಮುತ್ಸದ್ದಿ, ಹಿರಿಯ ಆಡಳಿತಗಾರ, ಶ್ರೇಷ್ಠ ವ್ಯಕ್ತಿ ಆಗಿದ್ದರು” ಎಂದು ಮೋದಿ ದುಃಖ ವ್ಯಕ್ತಪಡಿಸಿದ್ದಾರೆ/

ಅಲ್ಲದೆ, ಸುದ್ದಿ ತಿಳಿದ ಕೂಡಲೇ ಗೋರಖ್‌ ಪುರ ಭೇಟಿಯನ್ನು ರದ್ದು ಮಾಡಿ ಲಖನೌಗೆ ವಾಪಸ್‌ ಬಂದರು.

Tags: babri masjidbjpformer Chief MinisterKalyan SinghUttar Pradesh
P K Channakrishna

P K Channakrishna

www.cknewsnow.com ಪ್ರಧಾನ ಸಂಪಾದಕ ಮತ್ತು ಸಂಸ್ಥಾಪಕ. ಪ್ರಿಂಟ್‌ ಮೀಡಿಯಾದಲ್ಲಿ 3 ದಶಕದಷ್ಟು ಸುದೀರ್ಘ ಅನುಭವ. ರಾಜಕೀಯ, ಕೃಷಿ, ಸಿನಿಮಾ, ಸಂಗೀತ, ಫೊಟೋಗ್ರಫಿ, ಪ್ರವಾಸ, ಸೋಶಿಯಲ್‌ ಮೀಡಿಯಾದಲ್ಲಿ ಆಸಕ್ತಿ. ಓದು ಅಚ್ಚುಮೆಚ್ಚು.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಸದಾ ರಕ್ಷಣೆಯ ರಕ್ಷಾ ಬಂಧನ

ಸದಾ ರಕ್ಷಣೆಯ ರಕ್ಷಾ ಬಂಧನ

Leave a Reply Cancel reply

Your email address will not be published. Required fields are marked *

Recommended

ಮುಜರಾಯಿ ಇಲಾಖೆ ಅರ್ಚಕರು, ದೇವಾಲಯ ನೌಕರರಿಗೆ ದಸರಾ ಬಂಪರ್

ಮುಜರಾಯಿ ಇಲಾಖೆ ಅರ್ಚಕರು, ದೇವಾಲಯ ನೌಕರರಿಗೆ ದಸರಾ ಬಂಪರ್

5 years ago
ನಮ್ಮ ದೇಶದಲ್ಲೇ ತಯಾರಾದ ಕೊರೊನಾ ಲಸಿಕೆ ಕುರಿತು ಅಗೌರವ ಬೇಡ; ಭಾರತ್ ಬಯೋಟೆಕ್ ನಂಬಿಕೆಗೆ ಅರ್ಹವಾದ ಕಂಪನಿ ಎಂದ ಡಾ.ಕೆ.ಸುಧಾಕರ್

ಕೋಲಾರದ ಮಾಲೂರಿನಲ್ಲಿ 100 ಎಕರೆ ಜಾಗದಲ್ಲಿ ಕೊವ್ಯಾಕ್ಸಿನ್ ಲಸಿಕೆ ತಯಾರಿಕಾ ಘಟಕ I ದೃಢಪಡಿಸಿದ ಡಿಸಿಎಂ I ಐದು ಪಟ್ಟು ಹೆಚ್ಚು ಲಸಿಕೆ ತಯಾರಿಕೆ, ರಾಜ್ಯದಲ್ಲಿ ನೀಗುತ್ತಾ ವ್ಯಾಕ್ಸಿನ್‌ ಕೊರತೆ

5 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ