• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS STATE

ಬಿಜೆಪಿ ಕೇಂದ್ರ ಸಚಿವರ ಜನಾಶೀರ್ವಾದ ಯಾತ್ರೆಯಿಂದ ಕೋವಿಡ್ ಹೆಚ್ಚಳ: ಹೆಚ್.ವಿಶ್ವನಾಥ್

cknewsnow desk by cknewsnow desk
August 22, 2021
in STATE
Reading Time: 1 min read
0
ಆರ್‌ಎಸ್‌ಎಸ್‌ ಬಗ್ಗೆ ಮಡಿವಂತಿಕೆ ಏಕೆ? ಮಾಜಿ ಗೆಳೆಯ ಸಿದ್ದರಾಮಯ್ಯ ಅವರಿಗೆ ಟಾಂಗ್‌ ಕೊಟ್ಟ ಎಂಎಲ್ಸಿ ವಿಶ್ವನಾಥ್‌

ಅಡಗೂರು ವಿಶ್ವನಾಥ್‌

948
VIEWS
FacebookTwitterWhatsuplinkedinEmail

ದಶಪಥ ಯೋಜನೆ ನಿಮ್ಮದಲ್ಲ ಮಿಸ್ಟರ್ ಪ್ರತಾಪ ಸಿಂಹ ಎಂದ ಹಳ್ಳಿಹಕ್ಕಿ

ಮೈಸೂರು: ಕೇಂದ್ರ ಸಚಿವರು ಕೈಗೊಂಡಿರುವ ಜನಾಶೀರ್ವಾದ ಯಾತ್ರೆಯಿಂದ ರಾಜ್ಯದಲ್ಲಿ ಕೋವಿಡ್‌ ಸೋಂಕು ಹೆಚ್ಚಾಗುತ್ತಿದೆ ಎಂದು ಬಿಜೆಪಿ ನಾಯಕ ಹಾಗೂ ವಿಧಾನ ಪರಿಷತ್‌ ಸದಸ್ಯ ಹೆಚ್.ವಿಶ್ವನಾಥ್‌ ಅಭಿಪ್ರಾಯಪಟ್ಟಿದ್ದಾರೆ.

ಮೈಸೂರಿನಲ್ಲಿ ಭಾನುವಾರ ಮಾದ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು; ತಮ್ಮದೇ ಪಕ್ಷದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರಲ್ಲದೆ, ಕೂಡಲೇ ಎಲ್ಲಾ ರಾಜಕೀಯ ಸಭೆ-ಸಮಾರಂಭ, ಮೆರವಣಿಗೆಗಳನ್ನು ಸ್ಥಗಿತಗೊಳಿಸಬೇಕು. ಕೋವಿಡ್ ಹರಡಲು ಇದೇ ಪ್ರಮುಖವಾದ ಕಾರಣವಾಗಿದೆ ಎಂದು ಹೇಳಿದರು.

ರಾಜಕೀಯ ಪಕ್ಷಗಳ ಸಭೆ ಸಮಾರಂಭಗಳಿಂದಲೇ ಸಮಸ್ಯೆ ಹೆಚ್ಚು. ರಾಜಕೀಯ ಪಕ್ಷಗಳು ಜನ ಗುಂಪಾಗಿ ಸೇರುವ ಕಾರ್ಯಕ್ರಮಗಳನ್ನ ಬಿಡಿ. ವೀಕೆಂಡ್ ಕರ್ಫ್ಯೂ ಅಗತ್ಯವಿಲ್ಲ, ವೀಕೆಂಡ್ ಕರ್ಫ್ಯೂನಿಂದ ಕೊರೊನಾ ಕಂಟ್ರೋಲ್ ಆಗಲ್ಲ. ಶಾಲಾ ಕಾಲೇಜುಗಳು ಆರಂಭವಾಗುವುದರಿಂದ ಕೋವಿಡ್ ಹರಡಲ್ಲ ಎಂದರು ಅವರು.

ಶಾಲೆ ಕಾಲೇಜು ಆರಂಭ ಸ್ವಾಗತಾರ್ಹ

ನಾಳೆಯಿಂದ ಶಾಲಾ-ಕಾಲೇಜು ಆರಂಭ ಸ್ವಾಗತ ವಿಚಾರ. ಮುಂಜಾಗ್ರತಾ ಕ್ರಮಗಳೊಂದಿಗೆ ಶಾಲೆ ಆರಂಭ ಮಾಡುತ್ತಿದ್ದಾರೆ. ಮುಖ್ಯಮಂತ್ರಿ ಆದಿಯಾಗಿ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳುವುದಾಗಿ ಹೇಳಿದ್ದಾರೆ. ಇದು ಉತ್ತಮ ಬೆಳವಣಿಗೆ ಎಂದು ವಿಧಾನ ಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ತಿಳಿಸಿದರು.

ಕೇವಲ ನಗರ ಪ್ರದೇಶಗಳಿಗೆ ಮಾತ್ರ ಬಿಗಿ ಕ್ರಮಗಳು ಸೀಮಿತವಾಗಬಾರದು. ಗ್ರಾಮೀಣ ಪ್ರದೇಶಗಳಲ್ಲೂ ಕೂಡ ಹೆಚ್ಚಿನ ಮುಂಜಾಗ್ರತೆ ವಹಿಸಬೇಕು. ಶಿಕ್ಷಣ ಇಲಾಖೆ ಮಾತ್ರವಲ್ಲದೆ ಆರೋಗ್ಯ ಇಲಾಖೆ, ಸ್ಥಳೀಯ ಸಂಸ್ಥೆಗಳು ಗಮನಹರಿಸಬೇಕು. ಗ್ರಾಪಂಗಳು ನಮಗೆ ಸಂಬಂಧಿದ ಇಲ್ಲ ಎಂದು ಸುಮ್ಮನಿರಬಾರದು. ಎಲ್ಲರೂ ನಮ್ಮ ಜವಾಬ್ದಾರಿಯನ್ನು ನಿರ್ವಹಿಸಬೇಕು. ಪ್ರಾಮಾಣಿಕವಾಗಿ ಎಲ್ಲಾ ಇಲಾಖೆ ಕಾರ್ಯನಿರ್ವಹಿಸಬೇಕು ಎಂದರು.

ದಶಪಥ ಯೋಜನೆ ನಿಮ್ಮದಲ್ಲ ಮಿಸ್ಟರ್ ಪ್ರತಾಪ ಸಿಂಹ

ಮಿಸ್ಟರ್ ಪ್ರತಾಪ್ ಸಿಂಹ. ದಶಪಥ ಯೋಜನೆ ನಿಮ್ಮದಲ್ಲ. ಇದು ನಾನು ಎಂಪಿ ಆಗಿದ್ದ ವೇಳೆ ಡಿಪಿಆರ್ ಆಗಿತ್ತು. ಆ ವೇಳೆ ನಾನು, ಧ್ರುವನಾರಾಯಣ್, ರಮ್ಯಾ, ಡಿ.ಕೆ.ಸುರೇಶ್ ಈ ಬಗ್ಗೆ ಸಭೆಗೆ ಹೋಗಿದ್ದೆವು. ಕೇಂದ್ರದಲ್ಲಿ ಕುಳಿತು ಈ ಬಗ್ಗೆ ಡಿಪಿಆರ್ ಫೈನಲ್ ಮಾಡಿಸಿದ್ದೇವೆ. ಆದರೆ ಈಗ ಬಂದು ನಾನು ಮಾಡ್ದೆ ಅಂದ್ರೆ ಹೇಗೆ ಎಂದು ವಿಶ್ವನಾಥ್‌ ಪ್ರಶ್ನಿಸಿದರು.

ಇದರಲ್ಲಿ ಲೋಕೋಪಯೋಗಿ ಸಚಿವರಾಗಿದ್ದ ಮಹಾದೇವಪ್ಪ ಅವರ ಶ್ರಮವೂ ಇದೆ. ಅಂದಿನ ಸಿದ್ದರಾಮಯ್ಯ ಅವರ ಸರಕಾರದ ಪಾತ್ರವೂ ಇದೆ. ಮಗು ಹುಟ್ಟಿದ ಬಳಿಕ ಬಿಟ್ಟು, ಶಾಲೆಗೆ ಹೋಗುವಾಗ ಮಗು ನಂದು ಎಂದರೆ ಹೇಗೆ? ಈ ಯೋಜನೆ ನಾವೇ ತಂದಿದ್ದು ಎಂದ ಸಂಸದ ಪ್ರತಾಪ ಸಿಂಹಗೆ ವಿಶ್ವನಾಥ್ ಟಾಂಗ್ ನೀಡಿದರು.

ಹಿಂದೆ ಇದ್ದ ಎಂಪಿ, ಯುಪಿಎ ಸರಕಾರ, ಸಿದ್ದರಾಮಯ್ಯ ಸರಕಾರದ ಸಾಧನೆ ಇದು. ಪ್ರತಾಪ ಸಿಂಹ ಹೇಳಿಕೆ ಸರಿ ಅಲ್ಲ. ನಾನೇ ಮಾಡಿಬಿಟ್ಟೆ ಅನ್ನೋದು ಸರಿ ಅಲ್ಲ. ಪಾಪ ಆ ಹೆಣ್ಣು ಮಗಳು ಹೇಳಿದ್ದು ಸರಿ ಇದೆ ಎಂದು ಸಂಸದೆ ಸುಮಲತಾ ಮೇಲೆ ಅನುಕಂಪ ತೋರಿದರು ವಿಶ್ವನಾಥ್.

10ರಿಂದ 12 ವರ್ಷಗಳ ಹಿಂದೆ ದಶಪಥ ಆಗಿದ್ದು. ಸುಳ್ಳು ಎಷ್ಟು ದಿನ ಅಂತಾ ಹೇಳುತ್ತೀರಾ? ಇದು ನಾನು, ಧೃವನಾರಾಯಣ್, ರಮ್ಯಾ ಎಂಪಿಗಳಾಗಿದ್ದಾಗ ಆದ ಕೆಲಸ. ನೀವು ಹೊಸದಾಗಿ ತಂದಿದ್ದರೆ ಬೇಕಾದರೆ ಜನರಿಗೆ ಹೇಳಿ. ಉಂಡವಾಡಿ ಯೋಜನೆಯೂ ಅಷ್ಟೆ ಎಂದು ಅವರು ತಿರುಗೇಟು ನೀಡಿದರು.

ಶಾಸಕ ಜಿ.ಟಿ.ದೇವೇಗೌಡ ವಿರುದ್ದವೂ ವಾಗ್ದಾಳಿ ನಡೆಸಿದ ವಿಶ್ವನಾಥ್, ಉಂಡುವಾಡಿ ಕುಡಿಯುವ ನೀರು ಯೋಜನೆ ಜಿ.ಟಿ.ದೇವೇಗೌಡರ ಸಾಧನೆ ಅಲ್ಲ. ಅದನ್ನು ನಾನು ಮಾಡಿಸಿದ್ದು. ನೀವು ಎಲ್ಲಿದ್ದಿರೀ ಮಿಸ್ಟರ್ ಜಿ.ಟಿ.ದೇವೇಗೌಡ ಎಂದು ಕುಟುಕಿದರು.

ಮೈಸೂರು ಜಿಲ್ಲೆಯಲ್ಲಿ ವೀಕೆಂಡ್ ಕರ್ಫ್ಯೂ ಜಾರಿಗೊಳಿಸುತ್ತಿರುವುದಕ್ಕೆ ವಿಶ್ವನಾಥ್ ವಿರೋಧ ವ್ಯಕ್ತಪಡಿಸಿದರಲ್ಲದೆ, ಜಿಲ್ಲೆಯಲ್ಲಿ ಇತ್ತೀಚೆಗೆ ಕೊರೊನಾ ಪಾಸಿಟಿವಿಟಿ ದರ ಕಡಿಮೆಯಾಗಿದೆ. ವೀಕೆಂಡ್ ಕರ್ಫ್ಯೂ ಜಾರಿಯಿಂದ ಸಣ್ಣಪುಟ್ಟ ವ್ಯಾಪಾರಸ್ಥರಿಗೆ ತೊಂದರೆಯಾಗುತ್ತಿದೆ. ರಾಜ್ಯದ ಗಡಿ ಭಾಗಗಳಲ್ಲಿ ಬಿಗಿ ಕ್ರಮ ಕೈಗೊಳ್ಳಬೇಕು. ಗಡಿ ಭಾಗದಲ್ಲಿ ಹಣ ಪಡೆದು ವಾಹನಗಳನ್ನು ಒಳಬಿಡುತ್ತಿದ್ದಾರೆ. ಗಡಿಗಳನ್ನು ಬಂದ್ ಮಾಡಿ, ಬಿಗಿ ಕ್ರಮ ವಹಿಸಬೇಕು. ಆ ಮೂಲಕ ವೀಕೆಂಡ್ ಕರ್ಫ್ಯೂ ರದ್ದು ಮಾಡಬೇಕು ಎಂದು ಆಗ್ರಹಿಸಿದರು.

Tags: bjpcovid19H Vishwanathjan ashirwad yatrakarnatakamysorepratap simha
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯಡಿ ಕಲಿಕೆಗೆ ನಾಳೆಯಿಂದ ವಿದ್ಯಾರ್ಥಿಗಳ ದಾಖಲು ಪ್ರಕ್ರಿಯೆ

ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯಡಿ ಕಲಿಕೆಗೆ ನಾಳೆಯಿಂದ ವಿದ್ಯಾರ್ಥಿಗಳ ದಾಖಲು ಪ್ರಕ್ರಿಯೆ

Leave a Reply Cancel reply

Your email address will not be published. Required fields are marked *

Recommended

ಮತ್ತೆ ಹಾಡಲಿದೆ ಹಳ್ಳಿಹಕ್ಕಿ! ಯಾರೆಲ್ಲ ಕಕ್ಕಾಬಿಕ್ಕಿ?

ಮೈಸೂರು ಭೂ ಅಕ್ರಮ: ರೋಹಿಣಿ ಸಿಂಧೂರಿ 4 ಆದೇಶಗಳ ಬಗ್ಗೆ ಕ್ರಮ ಆಗಬೇಕು ಎಂದ ಬಿಜೆಪಿ ಲೀಡರ್‌ ಎಚ್.ವಿಶ್ವನಾಥ್‌‌

5 years ago
ಟೊಯೋಟ ಕಿರ್ಲೋಸ್ಕರ್‌ ಕಾರ್ಮಿಕರ ಬಿಕ್ಕಟ್ಟು ಶಮನ; 115 ದಿನಗಳ ಹಗ್ಗಜಗ್ಗಾಟ ಕೊನೆಗೂ ಸುಖಾಂತ್ಯ,  ಶುಕ್ರವಾರದೊಳಗೆ ಕೆಲಸಕ್ಕೆ ಹಾಜರಾಗಲು ಕಾರ್ಮಿಕರಿಗೆ ಡೆಡ್‌ಲೈನ್

ಟೊಯೋಟ ಕಿರ್ಲೋಸ್ಕರ್‌ ಕಾರ್ಮಿಕರ ಬಿಕ್ಕಟ್ಟು ಶಮನ; 115 ದಿನಗಳ ಹಗ್ಗಜಗ್ಗಾಟ ಕೊನೆಗೂ ಸುಖಾಂತ್ಯ, ಶುಕ್ರವಾರದೊಳಗೆ ಕೆಲಸಕ್ಕೆ ಹಾಜರಾಗಲು ಕಾರ್ಮಿಕರಿಗೆ ಡೆಡ್‌ಲೈನ್

5 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ