• About
  • Advertise
  • Careers
  • Contact
Monday, May 19, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home GUEST COLUMN

ಸದಾ ರಕ್ಷಣೆಯ ರಕ್ಷಾ ಬಂಧನ

cknewsnow desk by cknewsnow desk
August 22, 2021
in GUEST COLUMN
Reading Time: 2 mins read
1
ಸದಾ ರಕ್ಷಣೆಯ ರಕ್ಷಾ ಬಂಧನ

photo courtesy: wikipedia

993
VIEWS
FacebookTwitterWhatsuplinkedinEmail

ಭಾರತದಲ್ಲಿ, ಸಹೋದರ ಮತ್ತು ಸಹೋದರಿಯ ನಡುವಿನ ಬಾಂಧವ್ಯವನ್ನು ಬಲಪಡಿಸುವ ಹಬ್ಬವೆಂದರೆ ರಕ್ಷಾ ಬಂಧನ. ಶ್ರಾವಣ ಮಾಸದ ಹುಣ್ಣಿಮೆಯಂದು ಈ ಹಬ್ಬ ಆಚರಿಸಲಾಗುತ್ತದೆ. ಈ ವರ್ಷ ಆಗಸ್ಟ್ 22ರಂದು, ಅಂದರೆ ಇಂದು ರಕ್ಷಾಬಂಧನ ಆಚರಿಸಲಾಗುತ್ತಿದೆ. ಈ ಬಗ್ಗೆ ಸೊಗಸಾಗಿ ಕಟ್ಟಿಕೊಟ್ಟಿದ್ದಾರೆ ನಮ್ಮ ಅಂಕಣಕಾರ ಡಾ.ಗುರುಪ್ರಸಾದ್‌ ರಾವ್‌ ಹವಲ್ದಾರ್.‌


ಹಬ್ಬಗಳ ತವರೂರಾದ ಭಾರತ ದೇಶದಲ್ಲಿ ಹಬ್ಬ ಹರಿದಿನಗಳಿಂದ ಕೂಡಿದ ಶ್ರಾವಣ ಮಾಸಕ್ಕೆ ವಿಶೇಷ ಮಹತ್ವವಿದೆ. ಶ್ರವಣ, ಪೂಜಾ-ಪಾಠಗಳು, ಧ್ಯಾನ-ಧಾರಣೆಗಳು, ಚಿಂತನೆಗಳ ಮಾಸವೇ ಶ್ರಾವಣ. ನಾಗಚತುರ್ಥಿ, ನಾಗಪಂಚಮಿ, ಶ್ರಾವಣ-ಸೋಮವಾರ, ಶ್ರಾವಣ-ಶುಕ್ರವಾರ, ಗೋಕುಲಾಷ್ಟಮಿ, ನೂಲಹುಣ್ಣಿಮೆ, ಹೀಗೆ ಪ್ರತಿದಿನವೂ ಹಬ್ಬ.

ಈ ಎಲ್ಲ ಹಬ್ಬಗಳಲ್ಲಿ ‘ನೂಲಹುಣ್ಣಿಮೆ’ ಅಥವಾ ‘ರಕ್ಷಾಬಂಧನ’ ಹಬ್ಬವು ಹಿಂದೂ, ಜೈನ, ಸಿಖ್ ಧರ್ಮದವರಿಗೆ  ವಿಶೇಷವಾದ ಹಬ್ಬ. ಭಾರತ, ಮಾರಿಷಸ್, ನೇಪಾಳ, ಪಾಕಿಸ್ತಾನ್‍ʼನ ಕೆಲ ಪ್ರದೇಶಗಳಲ್ಲಿ ಮತ್ತು ವಿಶ್ವದಾದ್ಯಂತ ನೆಲೆಸಿರುವ ಭಾರತೀಯರು ರಕ್ಷಾ ಬಂಧನವನ್ನು ಆಚರಿಸುತ್ತಾರೆ. ಮಹಾರಾಷ್ಟ್ರದ ಕರಾವಳಿಯಲ್ಲಿ ಈ ದಿನ ‘ಕೊಳಿ’ ಸಮಾಜದವರು ಸಾಗರಕ್ಕೆ ತೆಂಗಿನಕಾಯಿ ಅರ್ಪಿಸಿ, ಪೂಜೆ ಮಾಡಿ ಮೀನುಗಾರಿಕೆಯನ್ನು ಮತ್ತೆ ಪ್ರಾರಂಭಿಸುತ್ತಾರೆ. ಅಲ್ಲಿ ನೂಲಹುಣ್ಣಿಮೆಯನ್ನು ‘ನಾರಳಿ ಪೂರ್ಣಿಮಾ’ ಎಂದು ಕರೆಯಲಾಗುತ್ತದೆ. ನೇಪಾಳದಲ್ಲಿ ‘ಜನೆವು ಪೂರ್ಣಿಮಾ’ ಎಂದು ಹೇಳುತ್ತಾರೆ. ಅಣ್ಣ ತಂಗಿಯರ ಬಾಂಧವ್ಯವದ ಶ್ರೇಷ್ಠತೆಯನ್ನು ಸಾರುವ ಹಬ್ಬ ರಾಖಿ ಹಬ್ಬ. ಪ್ರತಿ ಸಹೋದರಿಯು ಪ್ರತಿವರ್ಷ ತನ್ನ ಸಹೋದರರ ಮಣಿಕಟ್ಟಿನ ಮೇಲೆ ‘ರಾಖಿ’ ಎಂದು ಕರೆಯಲ್ಪಡುವ ಪವಿತ್ರ ದಾರವನ್ನು ಕಟ್ಟಲು ಕಾಯುತ್ತಾಳೆ.

ಈ ದಿನ ಹಳೆಯ ಜನಿವಾರವನ್ನು ಬದಲಿಸಿ ಹೊಸ ಜನಿವಾರ ಧರಿಸುತ್ತಾರೆ. ರಕ್ಷಾಬಂಧನ ಹಬ್ಬವು ಕೇವಲ ಸಹೋದರ-ಸಹೋದರಿಯರಿಗಷ್ಟೇ ಸೀಮಿತವಾಗಿರದೇ ಪ್ರತಿಯೊಬ್ಬ ಸ್ತ್ರೀ-ಪುರುಷರ ನಡುವೆ ಇರುವ ಪ್ರೀತಿ, ವಾತ್ಸಲ್ಯ, ಜವಾಬ್ದಾರಿ ಮತ್ತು ಕರ್ತವ್ಯದ ಪ್ರತೀಕವಾಗಿದೆ. ರಜಪೂತ ರಾಣಿಯರು ತಮ್ಮ ನೆರೆಯ ರಾಜ್ಯದ ರಾಜನಿಗೆ ರಾಖಿಯನ್ನು ಸಹೋದರತ್ವದ ಭಾವನೆಯಿಂದ ಕಳುಹಿಸುತಿದ್ದರು. ಈ ಹಬ್ಬವು ಪುರಾತನ ಕಾಲದಿಂದ ನಡೆದು ಬಂದಿದ್ದು ಪ್ರೀತಿ, ಸ್ನೇಹ, ಪವಿತ್ರತೆ, ಸಾಮರಸ್ಯದ ಸಂಕೇತವಾಗಿದೆ.

ಇನ್ನು, ರಾಖಿಯನ್ನು ಸಾಧಾರಣ ನೂಲಿನಿಂದ, ದಾರದಿಂದ ಮಾಡಲಾಗುತ್ತದೆ. ಇಂದಿನ ದಿನಗಳಲ್ಲಿ ಬೇರೆ ಸ್ವರೂಪ ಪಡೆದುಕೊಂಡಿದೆ ಬೆಳ್ಳಿ, ಬಂಗಾರದ  ವಜ್ರ, ಪ್ಲಾಟಿನಂಗಳನ್ನು ಬಳಸಿ ರಾಖಿಯ ಬಳಸಲಾಗುತ್ತದೆ.

ನಮ್ಮ ಪುರಾಣ ಇತಿಹಾಸಗಳಲ್ಲಿ ರಕ್ಷಾಬಂಧನದ ಉಲ್ಲೇಖಗಳನ್ನು ನೋಡಬಹುದಾಗಿದೆ. ದೇವತೆ ಮತ್ತು ರಾಕ್ಷಸರ ನಡುವೆ ನಡೆದ ಯುದ್ಧದ ಸಮಯದಲ್ಲಿ, ಇಂದ್ರನನ್ನು ದೈತ್ಯ ಬಲಿ ಸೋಲಿಸುತ್ತಾನೆ. ನಂತರ ದೇವರಾಜ ಇಂದ್ರನ ಪತ್ನಿ ಶುಚಿ ದೇವಿಯು ವಿಷ್ಣು ಕೊಟ್ಟಿರುವ ನೂಲಿನ ಕಂಕಣವನ್ನು ಸಲಹೆಯಂತೆ ಇಂದ್ರನ ಕೈಗೆ ಕಟ್ಟಿ ವಿಜಯಶಾಲಿ ಆಗಲಿ ಎಂದು ಪ್ರಾರ್ಥನೆ ಮಾಡುತ್ತಾಳೆ. ಇಂದ್ರನು ಯದ್ಧದಲ್ಲಿ ವಿಜಯಶಾಲಿಯಾಗಿ ಮತ್ತೆ ಅಮರಾವತಿಯ ರಾಜ್ಯವನ್ನು ಮರಳಿ ಪಡೆಯುತ್ತಾನೆ.

ಬಲಿ ಚಕ್ರವರ್ತಿ ಮತ್ತು ಲಕ್ಷ್ಮೀ

ಬಲಿ ಒಬ್ಬ ಮಹಾನ್‌ ರಾಜನಾಗಿದ್ದನು ಮತ್ತು ವಿಷ್ಣುವಿನ ಭಕ್ತನಾಗಿದ್ದನು. ಒಮ್ಮೆ ಬಲಿ ಯಜ್ಞವನ್ನು ಮಾಡಿದನು. ಅದೇ ಸಮಯದಲ್ಲಿ ವಿಷ್ಣು ತನ್ನ ಪರಮ ಭಕ್ತನಾದ ಬಲಿಯನ್ನು ಪರೀಕ್ಷಿಸಲು ವಾಮನ ಅವತಾರದಲ್ಲಿ ಬಲಿಯ ಮುಂದೆ ಪ್ರತ್ಯಕ್ಷನಾಗಿ ಮೂರು ರೀತಿಯ ಭೂಮಿಯನ್ನು ದಾನ ಮಾಡುವಂತೆ ಕೇಳುತ್ತಾನೆ. ವಾಮನ ಅವತಾರದಲ್ಲಿದ್ದ ಭಗವಾನ್‌ ವಿಷ್ಣು ಎರಡು ಹಂತಗಳಲ್ಲಿ ಭೂಮಿ ಮತ್ತು ಆಕಾಶವನ್ನು ವಶಪಡಿಸಿಕೊಂಡು ಮೂರನೇ ಹಂತದ ಭೂಮಿಗಾಗಿ ಬಲಿಯ ತಲೆಯ ಮೇಲೆ ಪಾದವನ್ನು ಇಡುತ್ತಾನೆ.

ಆಗ ಬಲಿಯು ವಿಷ್ಣುವಿನಲ್ಲಿ ಪ್ರಭು ನಾನು ನನ್ನೆಲ್ಲಾ ಸ್ವತ್ತನ್ನು ನಿನಗೆ ನೀಡಿದ್ದೇನೆ. ಈಗ ನೀನು ನನ್ನ ಕೋರಿಕೆಯ ಮೇರೆಗೆ ನನ್ನೊಂದಿಗೆ ಪಾತಾಳಕ್ಕೆ ಬರಬೇಕೆಂದು ಕೇಳಿಕೊಳ್ಳುತ್ತಾನೆ. ಭಕ್ತನ ಆಸೆಯ ಮೇರೆಗೆ ಭಗವಾನ್‌ ವಿಷ್ಣು ವೈಕುಂಠವನ್ನು ತ್ಯಜಿಸಿ ಪಾತಾಳಕ್ಕೆ ಹೋಗುತ್ತಾನೆ. ಇದರಿಂದ ಚಿಂತಿತಳಾದ ಲಕ್ಷ್ಮಿಯು ಬಡ ಮಹಿಳೆಯ ರೂಪವನ್ನು ಧರಿಸಿ ಬಲಿಯಿದ್ದಲ್ಲಿಗೆ ಬಂದು ಆತನಿಗೆ ರಕ್ಷಾ ದಾರವನ್ನು ಕಟ್ಟುತ್ತಾಳೆ. ಆಗ ಬಲಿ ತಾಯಿ ನಿಮಗೆ ಉಡುಗೊರೆಯಾಗಿ ನೀಡಲು ನನ್ನ ಬಳಿ ಈಗ ಏನೂ ಉಳಿದಿಲ್ಲ ಎನ್ನುತ್ತಾನೆ. ಲಕ್ಷ್ಮಿ ದೇವಿ, ನನಗೆ ನಿನ್ನ ಉಡುಗೊರೆ ಏನು ಬೇಕಾಗಿಲ್ಲ. ಆದರೆ ನನ್ನ ಪತಿ ವಿಷ್ಣುವನ್ನು ನನಗೆ ಹಿಂದಿರುಗಿಸು ಎಂದು ಕೇಳಿಕೊಳ್ಳುತ್ತಾಳೆ. ನಂತರ ಬಲಿ ವಿಷ್ಣುವನ್ನು ಪಾತಾಳ ಲೋಕದಿಂದ ಲಕ್ಷ್ಮಿಯೊಂದಿಗೆ ವೈಕುಂಠಕ್ಕೆ ಕಳುಹಿಸುತ್ತಾನೆ.

ಸಂತೋಷಿ ಮಾತೆ

ಗಣೇಶನಿಗೆ ಎರಡು ಮಕ್ಕಳು, ‘ಶುಭ’ ಮತ್ತು ‘ಲಾಭ’ ರಕ್ಷಾಬಂಧನದ ದಿನ ಗಣೇಶನ ಸಹೋದರಿಯು ಬಂದು ಅವನಿಗೆ ರಾಖಿ ಕಟ್ಟುತ್ತಾಳೆ. ಎರಡು ಮಕ್ಕಳಿಗೆ ಅದನ್ನು ನೋಡಿ ತಮಗೆ ಸಹೋದರಿ ಇಲ್ಲವೆಂದು ತುಂಬಾ ಬೇಸರವಾಗುತ್ತದೆ. ಆಗ ತಂದೆಯ ಹತ್ತಿರ ಹೋಗಿ ತಮಗೆ ಸಹೋದರಿ ಬೇಕೆಂದು ಹಠ ಮಾಡುತ್ತಾರೆ. ಕೊನೆಗೆ ನಾರದಮುನಿ ಬಂದು ಗಣೇಶನಿಗೆ ವಿನಂತಿ ಮಾಡಿ, ಅವರಿಗೆ ತಂಗಿ ಕೊಡು, ಅದರಿಂದ ನಿನಗೆ ಮತ್ತು ಮಕ್ಕಳಿಗೆ ಶುಭವಾಗುವುದು ಎಂದು ಹೇಳುತ್ತಾರೆ. ಗಣೇಶನಿಗೆ ತನ್ನ ಪತ್ನಿಗಳಾದ ರಿದ್ಧಿ ಮತ್ತು ಸಿದ್ಧಿಯಿಂದ ಮಂತ್ರಾಗ್ನಿ ಮೂಲಕ ಕನ್ಯಾರತ್ನ ಪ್ರಾಪ್ತವಾಗುತ್ತದೆ. ಅವಳ ಹೆಸರೇ ಸಂತೋಷಿ ಮಾತೆ. ತದನಂತರ ಶುಭ, ಲಾಭರಿಗೆ ತಂಗಿ ಸಂತೋಷಿ ಮಾತೆಯು ರಾಖಿ ಕಟ್ಟಿ ಅವರಿಂದ ರಕ್ಷಣೆ ಪಡೆಯುತ್ತಾಳೆ.

ಯಮ ಮತ್ತು ಯಮುನಾ

ಮೃತ್ಯು ದೇವತೆ ಯಮ ತನ್ನ ಸಹೋದರಿ ಯಮುನಾಳನ್ನು 12 ವರ್ಷಗಳಿಂದ ನೋಡಿರುವುದಿಲ್ಲ. ಅವಳು ಇದರಿಂದ ತುಂಬಾ ದುಃಖಿಯಾಗಿರುತ್ತಾಳೆ. ಗಂಗೆಗೆ ಈ ವಿಷಯವನ್ನು ತಿಳಿಸಿ ಅಣ್ಣನಿಗೆ ತನ್ನನ್ನು ಭೇಟಿ ಮಾಡಲು ತಿಳಿಸು ಎಂದು ಹೇಳುತ್ತಾಳೆ. ಗಂಗಾನದಿ ಯಮನಿಗೆ ಈ ವಿಷಯ ತಿಳಿಸುತ್ತಾಳೆ. ಆಗ ಯಮನು ಯಮುನಾಳನ್ನು ಭೇಟಿ ಮಾಡುತ್ತಾನೆ. ಅವಳಿಗೆ ತನ್ನ ಅಣ್ಣನನ್ನು ಕಂಡು ತುಂಬಾ ಸಂತೋಷವಾಗುತ್ತದೆ. ಯಮನು, ಯಮುನಾಳು ಮಾಡಿದ ಮೃಷ್ಟಾನ್ನ ಭೋಜನವನ್ನು ಸವಿದು ಖುಷಿಯಿಂದ ವರವನ್ನು ಕೇಳು ಎಂದು ಹೇಳುತ್ತಾನೆ. ಅವಳು ಯಾವುದೇ ಬೇರೆ ವರವನ್ನು ಕೇಳದೇ ಪುನಃ ಬಾರಿ-ಬಾರಿಗೂ ಭೇಟಿ ಮಾಡಲು ಮಾತ್ರ ಹೇಳುತ್ತಾಳೆ. ಯಮನು ಇದನ್ನು ಒಪ್ಪಿಕೊಂಡು ಅಮರಳಾಗುವ ವರದಾನ ಕೊಡುತ್ತಾನೆ.

ದಶರಥ ಮತ್ತು ಶ್ರವಣ ಕುಮಾರ

ಶ್ರಾವಣ ಮಾಸದ ಹುಣ್ಣಿಮೆಯ ದಿನದಂದು ಆಚರಿಸಲಾಗುವ ರಕ್ಷಾ ಬಂಧನವು ಅನೇಕ ನಂಬಿಕೆಗಳಿಂದ ಸುತ್ತುವರೆದಿದೆ. ಕೆಲವೊಂದು ನಂಬಿಕೆಗಳ ಪ್ರಕಾರ ರಕ್ಷಾ ಬಂಧನವು ಗುರು ಶಿಷ್ಯರ ಸಂಬಂಧವನ್ನು ಸೂಚಿಸುತ್ತದೆ ಎಂದು ಹೇಳಲಾಗುತ್ತದೆ. ಈ ಹಬ್ಬವು ದಶರಥ ಮಹಾರಾಜನು ಹತ್ಯೆಗೈದ ಶ್ರವಣ ಕುಮಾರನ ಸಾವಿನೊಂದಿಗೆ ಸಂಬಂಧವನ್ನು ಹೊಂದಿದೆ ಎನ್ನಲಾಗಿದೆ. ಆದ್ದರಿಂದ ರಾಖಿ ಕಟ್ಟುವ ಮುನ್ನ ರಾಖಿಯನ್ನು ಭಗವಾನ್‌ ಗಣೇಶನಿಗೆ ಅರ್ಪಿಸಬೇಕು. ನಂತರ ಒಂದು ರಾಖಿಯನ್ನು ಶ್ರವಣ ಕುಮಾರನ ಹೆಸರಿನಲ್ಲಿ ಎತ್ತಿಡಬೇಕು.

ರಾಖಿ ಯು ಮಹಾಭಾರತದೊಂದಿಗೆ ಸಂಬಂಧವನ್ನು ಹೊಂದಿದೆ. ಕೃಷ್ಣನ ಕೈಬೆರಳಿಗೆ ಗಾಯವಾದಾಗ ದ್ರೌಪದಿ ತನ್ನ ಸೀರೆಯನ್ನು ಹರಿದು ಗಾಯಕ್ಕೆ ಕಟ್ಟುತ್ತಾಳೆ. ಆಗ ಕೃಷ್ಣ ಅವಳಿಗೆ ಸಮಯ ಬಂದಾಗ ಈ ಉಪಕಾರವನ್ನು ತೀರಿಸುತ್ತೇನೆ ಎಂದು ವಾಗ್ದಾನ ನೀಡಿ ಅವಳನ್ನು ತಂಗಿ ಎಂದು ಒಪ್ಪಿಕೊಳ್ಳುತ್ತಾನೆ. ದುಶ್ಶಾಸನ ವಸ್ತ್ರಾಪಹರಣ ಮಾಡುವಾಗ ಕೃಷ್ಣ ಅವಳಿಗೆ ಸೀರೆಗಳನ್ನು ನೀಡುತ್ತಾನೆ. ಮಹಾಭಾರತದಲ್ಲಿ ದ್ರೌಪದಿ ಕೃಷ್ಣನಿಗೆ ರಾಖಿ ಕಟ್ಟಿದರೆ, ಕುಂತಿ ತನ್ನ ಮೊಮ್ಮಗ ಅಭಿಮನ್ಯುವಿಗೆ ಯುದ್ಧಕ್ಕೆ ಹೋಗುವಾಗ ಕಂಕಣ ಕಟ್ಟುತ್ತಾಳೆ.

ಕುರುಕ್ಷೇತ್ರ ಯುದ್ಧದಲ್ಲಿ ಪಾಂಡವರು ಜಯಶಾಲಿಯಾಗಲು ಮತ್ತು ಸೈನ್ಯವನ್ನು ರಕ್ಷಿಸಿಕೊಳ್ಳಲು ರಾಖಿ ಹಬ್ಬವನ್ನು ಆಚರಿಸುವಂತೆ ಭಗವಾನ್‌ ಶ್ರೀಕೃಷ್ಣನು ಯುಧಿಷ್ಠಿರನಿಗೆ ಸೂಚಿಸಿದ್ದನು. ಅಭಿಮನ್ಯು ಯುದ್ಧದಲ್ಲಿ ವಿಜಯಶಾಲಿಯಾಗಿದ್ದರೆ ಅದು ಅವನ ಅಜ್ಜಿ ಕುಂತಿ ಅವನಿಗೆ ನೀಡಿದ ರಕ್ಷಾ ದಾರ ಎನ್ನಲಾಗಿದೆ. ದ್ರೌಪದಿ ಕೂಡ ಶ್ರಾವಣ ಮಾಸದ ಹುಣ್ಣಿಮೆಯ ದಿನದಂದು ತನ್ನ ಮಾನವನ್ನು ಕಾಪಾಡಿದ ಸಹೋದರ ಮತ್ತು ಗೆಳೆಯನಾದ ಶ್ರೀಕೃಷ್ಣನಿಗೆ ರಾಖಿಯನ್ನು ಕಟ್ಟಿದ್ದಳು.

ಅಲೆಕ್ಸಾಂಡರ್ ಮತ್ತು ರಾಜ ಪುರು

ಅಲೆಕ್ಸಾಂಡರ್‌ ತನ್ನ ಯುದ್ಧದಿಂದ ಅನೇಕ ರಾಜ್ಯವನ್ನು ವಶಪಡಿಸಿಕೊಂಡಂತೆ ಅವನಿಗೆ ಜಗತ್ತನ್ನೇ ತನ್ನದಾಗಿಸಿಕೊಳ್ಳಬೇಕೆಂಬ ಹಂಬಲ ಹೆಚ್ಚಾಯಿತು. ಅಲೆಕ್ಸಾಂಡರ್ ಭಾರತದ ಮೇಲೆ ಕ್ರಿ.ಪೂ. 326ರಲ್ಲಿ ದಾಳಿ ಮಾಡಿದಾಗ ಅವನ ಪತ್ನಿ ರುಕ್ಸಾನಾ (ರೊಶನಕ್) ರಾಜ ಪೊರಸ್ʼನಿಗೆ ಪವಿತ್ರ ಕಂಕಣ ಕಳುಹಿಸಿ ತನ್ನ ಪತಿಯ ಮೇಲೆ ಯುದ್ಧಭೂಮಿಯಲ್ಲಿ ಮಾರಣಾಂತಿಕ ಹಲ್ಲೆ ಮಾಡಬಾರದು ಎಂದು ಪ್ರಾರ್ಥಿಸುತ್ತಾಳೆ. ರಾಜ ಪೊರಸ್ʼನು ಧಾರ್ಮಿಕ ಸಂಪ್ರದಾಯದಂತೆ ರಾಖಿಯನ್ನು ಸ್ವೀಕರಿಸಿ ಕಟ್ಟಿಕೊಳ್ಳುತ್ತಾನೆ. ರಣರಂಗದಲ್ಲಿ ಕೊನೆಯ ಬಾಣ ಬಿಡುವಾಗ ತನ್ನ ಕೈಯಲ್ಲಿ ಇರುವ ರಾಖಿಯನ್ನು ನೋಡಿ ದಾಳಿ ಮಾಡದೇ ಸುಮ್ಮನಿರುತ್ತಾನೆ.

ಈ ರಾಖಿಯನ್ನು ಕಂಡು ಪೊರಸ್ ಆಶ್ಚರ್ಯಚಕಿತನಾಗುತ್ತಾನೆ. ಅದೇ ಸಮಯಕ್ಕೆ ಅಲೆಕ್ಸಾಂಡರ್‌ ಯುದ್ಧವನ್ನು ಆರಂಭಿಸುತ್ತಾನೆ. ಯುದ್ಧದಲ್ಲಿ ಇಬ್ಬರು ಕತ್ತಿಯನ್ನು ಎತ್ತಿದಾಗ ಒಂದೇ ರೀತಿಯ ರಾಖಿಯನ್ನು ಕಂಡು ಯುದ್ಧವನ್ನು ನಿಲ್ಲಿಸುತ್ತಾರೆ. ಮತ್ತು ರಾಜ ಪುರು ಅಲೆಕ್ಸಾಂಡರ್‌ನ ರಾಜ್ಯವನ್ನು ಹಿಂದಿರುಗಿಸುತ್ತಾನೆ.

ರಾಣಿ ಕರ್ಣಾವತಿ ಮತ್ತು ಹುಮಾಯೂನ್

ಚಿತ್ತೋರ್ʼನ ರಾಣಿ ಕರ್ಣಾವತಿ, ಗುಜರಾತ್ʼನ ಬಹದ್ದೂರ್ ಶಾ ನ ವಿರುದ್ಧ ತಾನು ಒಂಟಿಯಾಗಿ ದಾಳಿ ಮಾಡಲು ಸಾಧ್ಯವಿಲ್ಲವೆಂದು ಯೋಚಿಸಿ ಹುಮಾಯೂನನಿಗೆ ರಾಖಿ ಕಳುಹಿಸಿ ಯುದ್ಧದಲ್ಲಿ ಸಹಾಯ ಮಾಡಲು ಪ್ರಾರ್ಥಿಸುತ್ತಾಳೆ. ಆದರೆ ಹುಮಾಯೂನನು ತಡವಾಗಿ ಬಂದಿದ್ದರಿಂದ ರಾಣಿ ಯುದ್ಧದಲ್ಲಿ ಸೋಲುತ್ತಾಳೆ. ಆ ಕಾಲದಲ್ಲಿ ಯುದ್ಧಕ್ಕೆ ಹೋಗುವಾಗ ನಾರಿಯರು ಸೈನಿಕರಿಗೆ ಕಂಕಣ ಕಟ್ಟುವ ಪದ್ಧತಿ ಇತ್ತು. ಹಾಗಾಗಿ ರಕ್ಷಣೆಯು ಸಹೋದರ-ಸಹೋದರಿಯರಿಗೆ ಮಾತ್ರವಲ್ಲ, ವಿಶ್ವದ ನರ ನಾರಿಯರಿಗೂ ಬೇಕಾಗಿದೆ.

ಬಂಗಾಳ ವಿಭಜನೆ ಸಮಯದಲ್ಲಿ ರಕ್ಷಾಬಂಧನ

ರಾಷ್ಟ್ರಕವಿ ರವಿಂದ್ರನಾಥ ಟ್ಯಾಗೋರರು ರಾಖಿಯು ಹಿಂದೂ-ಮುಸ್ಲಿಂ ಜನಾಂಗದಲ್ಲಿ ಪ್ರೀತಿ, ಬಂಧುತ್ವದ ಸಂಕೇತ ಎಂದು ಹೇಳಿದ್ದಾರೆ. ಅವರು ಬಂಗಾಳದ ವಿಭಜನೆಯ ಸಮಯದಲ್ಲಿ ರಕ್ಷಾ ಬಂಧನದ ಕಾರ್ಯಕ್ರಮಗಳನ್ನು ಆಯೊಜಿಸಿದ್ದರು. ಹಿಂದೂ-ಮುಸ್ಲಿಂಮರು ಏಕತೆಯನ್ನು ಕಾಪಾಡಿಕೊಂಡು ಬ್ರಿಟೀಷರ ವಿರುದ್ಧ ಹೋರಾಡಲಿ ಎಂಬುದು ಅವರ ಪ್ರಯತ್ನವಾಗಿತ್ತು. ಆದರೆ ಕೊನೆಗೂ ಬಂಗಾಳವು ವಿಭಜನೆಯಾಯಿತು.

ತಂಗಿಯಾದವಳಿಗೆ ಅಣ್ಣ ಕೇವಲ ಸಂಬಂಧವಲ್ಲ ಅಳುವಾಗ ಕಣ್ಣೊರೆಸುವ ಕೈಯಾಗುತ್ತಾನೆ, ನೊಂದಾಗ ಮಿಡಿಯುವ ಹೃದಯವಾಗುತ್ತಾನೆ, ರಕ್ಷಣೆಗೆ ಸದಾ ಸಿದ್ದವಿರುವ ಯೋಧನಾಗಿರುತ್ತಾನೆ, ಅಂತೆಯೇ ತಂಗಿ ಅಣ್ಣನಾದವನ ಪ್ರತಿ ಭಾವನೆಗೆ ಸ್ಪಂದಿಸುವ ಗೆಳತಿಯಾಗಿರುತ್ತಾಳೆ. ಇದು ಕೇವಲ ರಕ್ಷೆಯ ಬಂಧನವಲ್ಲ, ಮಧುರ ಪ್ರೀತಿಯ ಬಂಧನ. ಸಹೋದರ- ಸಹೋದರಿಯರ ನಡುವಿನ ಭ್ರಾತೃತ್ವದ ನಂಟನ್ನು ಗಟ್ಟಿಗೊಳಿಸುವ ಈ ಆಚರಣೆ ನಮ್ಮ ದೇಶದ ಸಂಸ್ಕೃತಿಯ ಪ್ರತೀಕವೂ ಹೌದು.

ಜನ್ಮಜನ್ಮಕೂ ಇವನೇ ನನ್ನ ಅಣ್ಣನಾಗಲಿ, ಇವಳೇ ನನ್ನ ತಂಗಿಯಾಗಲಿ ಎಂಬ ಹಾರೈಕೆಯೊಂದಿಗೆ ಹಬ್ಬ ಆಚರಿಸುತ್ತಿರುವ ಎಲ್ಲಾ ಅಣ್ಣ ತಂಗಿಯರಿಗೂ ರಕ್ಷಾಬಂಧನದ ಶುಭಾಶಯಗಳು.


ಡಾ.ಗುರುಪ್ರಸಾದ ಹವಲ್ದಾರ್

  • ಮೂಲತಃ ಉಪನ್ಯಾಸಕರು. ಬಳ್ಳಾರಿ ಜಿಲ್ಲೆಯ ಹೊಸಪೇಟೆ ತಾಲ್ಲೂಕಿನ ಮರಿಯಮ್ಮನ ಹಳ್ಳಿಯವರು. ಪ್ರಸ್ತುತ ಹಗರಿಬೊಮ್ಮನಹಳ್ಳಿ ಜಿವಿಪಿಪಿ ಪದವಿ ಕಾಲೇಜನಲ್ಲಿ ಕನ್ನಡ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತ ಜೊತೆಗೆ ಪತ್ರಿಕೆಗಳಿಗೆ ವೆಬ್ ನ್ಯೂಸ್ ಪೋಟ್೯ಲ್ ಗಳಿಗೆ ಲೇಖನ ಬರೆಯುತ್ತಿದ್ದಾರೆ.

Tags: indian festivalkarnatakaraki. raki wishesraksha bandhan
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಒಬ್ಬರೇ ಒಬ್ಬರು! ಅವರೇ ಭಾರತರತ್ನ ಕರ್ಪೂರಿ ಠಾಕೂರ್.., ಹರಿದ ಕೋಟು, ಹರಿದ ಚಪ್ಪಲಿಯೊಂದಿಗೆ ಸಾಗಿದ ಮಹಾನ್‌ ದಂತಕಥೆ!!

ಒಬ್ಬರೇ ಒಬ್ಬರು! ಅವರೇ ಭಾರತರತ್ನ ಕರ್ಪೂರಿ ಠಾಕೂರ್.., ಹರಿದ ಕೋಟು, ಹರಿದ ಚಪ್ಪಲಿಯೊಂದಿಗೆ ಸಾಗಿದ ಮಹಾನ್‌ ದಂತಕಥೆ!!

by cknewsnow desk
January 27, 2024
0

"ಒಬ್ಬರ ಜನನವು ಅವರ ಹಣೆಬರಹವನ್ನು ನಿಶ್ಚಯಿಸುವುದಿಲ್ಲ" ಎಂದ ಜನ ನಾಯಕ; ಅಪ್ಪಟ ಭಾರತರತ್ನ, ಮೀಸಲು ಕೊಟ್ಟು ಬದುಕು ಕಟ್ಟಿಕೊಟ್ಟ ಭಾರತದ ಭಾಗ್ಯವಿದಾತ

ಸರ್ದಾರ್ ಪಟೇಲರ ದೃಢ ಸಂಕಲ್ಪ, ಮುನ್ಷಿ ಅವರ ಪ್ರಚಂಡ ಧೈರ್ಯ ಮತ್ತು ಬಾಬು ರಾಜೇಂದ್ರ ಪ್ರಸಾದರ ರಾಜಿ ಇಲ್ಲದ ನಿಲುವು

ಸರ್ದಾರ್ ಪಟೇಲರ ದೃಢ ಸಂಕಲ್ಪ, ಮುನ್ಷಿ ಅವರ ಪ್ರಚಂಡ ಧೈರ್ಯ ಮತ್ತು ಬಾಬು ರಾಜೇಂದ್ರ ಪ್ರಸಾದರ ರಾಜಿ ಇಲ್ಲದ ನಿಲುವು

by cknewsnow desk
January 21, 2024
0

ಅಯೋಧ್ಯಾ ಆಂದೋಲನ ಭಾರತದ ಅಂತರಾತ್ಮದ ಧ್ವನಿ; ಎಲ್.ಕೆ.ಆಡ್ವಾಣಿ ಅವರು ತಮ್ಮ ಆತ್ಮಕಥೆ My Country My Life ಕೃತಿಯಲ್ಲಿ ಬರೆದಿರುವ ಮಹತ್ವದ ಲೇಖನ ಸಿಕೆನ್ಯೂಸ್‌ ನೌ ನಲ್ಲಿ..

ಶ್ರೀರಾಮಪ್ರಭುವೇ ಕ್ಷಮಿಸು! ನಿನ್ನ ಹೆಸರಿಟ್ಟುಕೊಂಡವರೆಲ್ಲ ನಿನ್ನವರಲ್ಲ!!

ಅಯೋಧ್ಯಾ ಆಂದೋಲನ ಭಾರತದ ಅಂತರಾತ್ಮದ ಧ್ವನಿ; ಮಂದಿರಕ್ಕೆ ಅಂಕುರಾರ್ಪಣೆ ಆಗಿದ್ದು ಹೇಗೆ?

by cknewsnow desk
January 19, 2024
0

ಎಲ್.ಕೆ.ಆಡ್ವಾಣಿ ಅವರು ತಮ್ಮ ಆತ್ಮಕಥೆ My Country My Life ಕೃತಿಯಲ್ಲಿ ಬರೆದಿರುವ ಮಹತ್ವದ ಲೇಖನ ಸಿಕೆನ್ಯೂಸ್‌ ನೌ ನಲ್ಲಿ..

ನಿಡುಮಾಮಿಡಿ ಶ್ರೀಗಳು: ಕಾವಿಯೊಳಗೆ ನಿಗಿನಿಗಿ ಹೊಳೆಯುವ ಕೆಂಪುಸೂರ್ಯ

ನಿಡುಮಾಮಿಡಿ ಶ್ರೀಗಳು: ಕಾವಿಯೊಳಗೆ ನಿಗಿನಿಗಿ ಹೊಳೆಯುವ ಕೆಂಪುಸೂರ್ಯ

by cknewsnow desk
December 28, 2023
0

ನಿಜದ ಜಾಡು ಹಿಡಿದು ಹೊರಟ ನಿಡುಮಾಮಿಡಿ ಶ್ರೀಗಳ ಹೋರಾಟಕ್ಕೆ 33 ವರ್ಷ

ಅಖಂಡ ಭಾರತದ ಅಷ್ಟದಿಕ್ಕುಗಳ ಆಮೂಲಾಗ್ರ ಅಭಿವೃದ್ಧಿಗೆ ಸುವರ್ಣ ಅಧ್ಯಾಯ ಬರೆದವರೇ ಅಜಾತಶತ್ರು ಅಟಲ್‌ ಬಿಹಾರಿ ವಾಜಪೇಯಿ

ಅಟಲ್ ಎಂದರೆ ಅಜಾತಶತ್ರು

by cknewsnow desk
December 25, 2023
0

ಇಂದು ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನ, ಉತ್ತಮ ಆಡಳಿತ ದಿನ by Dr.Gurupeasad Hawaldar ಜಾಗತಿಕ ಮಟ್ಟದ ಶ್ರೇಷ್ಠ ನಾಯಕರ ಸಾಲಿನಲ್ಲಿ ಗೌರವಿಸಲ್ಪಡುವ  ನಿಸ್ವಾರ್ಥ ರಾಜಕಾರಣಿ,...

ಶಿಕ್ಷಣ, ಶಿಕ್ಷಕ ಮತ್ತು ಬದಲಾವಣೆ; ನೂತನ ಶಿಕ್ಷಣ ನೀತಿಯ ಹೊತ್ತಿನಲ್ಲಿ ಓಶೋ ಜೋಶ್..

ಓಶೋ: ಬೆರಗು, ಬೆಡಗು ಮತ್ತು ವಿಸ್ಮಯ

by cknewsnow desk
December 11, 2023
0

ಇಂದು ಓಶೋ ಜನ್ಮದಿನ

Next Post
ಆರ್‌ಎಸ್‌ಎಸ್‌ ಬಗ್ಗೆ ಮಡಿವಂತಿಕೆ ಏಕೆ? ಮಾಜಿ ಗೆಳೆಯ ಸಿದ್ದರಾಮಯ್ಯ ಅವರಿಗೆ ಟಾಂಗ್‌ ಕೊಟ್ಟ ಎಂಎಲ್ಸಿ ವಿಶ್ವನಾಥ್‌

ಬಿಜೆಪಿ ಕೇಂದ್ರ ಸಚಿವರ ಜನಾಶೀರ್ವಾದ ಯಾತ್ರೆಯಿಂದ ಕೋವಿಡ್ ಹೆಚ್ಚಳ: ಹೆಚ್.ವಿಶ್ವನಾಥ್

Comments 1

  1. D Abdul Nishar says:
    4 years ago

    ನನ್ನ ನೆಚ್ಚಿನ ಕ್ಷೆತ್ರ ಪತ್ರಿಕೋದ್ಯಮ ಇಂದು ಸಮಾಜದಲ್ಲಿ ಅನೇಕ ರೀತಿಯ ಸಮಸ್ಯೆಗಳಿವೆ ಅವುಗಳ ಪರಿಹಾರದ ಕ್ಷೇತ್ರವೆಂದರೆ ಅದು ಮಾದ್ಯಮ ಇಂತಹ ಮಾಧ್ಯಮಗಳು ಎಲ್ಲಿ ಸಮಸ್ಯೆಗಳಿರುವವೋ ಅದನ್ನು ಪತ್ತೆಹಚ್ಚಿ ಅದರ ಪರಿಹಾರವನ್ನು ಒದಗಿಸಿ ಜನರ ನೆಮ್ಮದಿಗೆ ಕಾರಣವಾಗುತ್ತದೆ.

    Reply

Leave a Reply Cancel reply

Your email address will not be published. Required fields are marked *

Recommended

ಸ್ತ್ರೀ ಎಂದರಷ್ಟೇ ಸಾಲದು!

ಸ್ತ್ರೀ ಎಂದರಷ್ಟೇ ಸಾಲದು!

3 years ago
ಜನವರಿ 1ರಿಂದಲೇ ವಿದ್ಯಾಗಮ ಪುನಾರಂಭ; ಸರ್ವ ಮುನ್ನೆಚ್ಚರಿಕೆಗಳೊಂದಿಗೆ ತಯಾರಿ ನಡೆಸಿದೆ ಸಾರ್ವಜನಿಕ ಶಿಕ್ಷಣ ಇಲಾಖೆ, ಸರಕಾರದಿಂದ ಆದೇಶ

ಜನವರಿ 1ರಿಂದಲೇ ವಿದ್ಯಾಗಮ ಪುನಾರಂಭ; ಸರ್ವ ಮುನ್ನೆಚ್ಚರಿಕೆಗಳೊಂದಿಗೆ ತಯಾರಿ ನಡೆಸಿದೆ ಸಾರ್ವಜನಿಕ ಶಿಕ್ಷಣ ಇಲಾಖೆ, ಸರಕಾರದಿಂದ ಆದೇಶ

4 years ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ