• About
  • Advertise
  • Careers
  • Contact
Monday, May 19, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home GUEST COLUMN

ಶ್ರೀ ಗುರು ರಾಘವೇಂದ್ರರ ಜತೆ ಆಂಗ್ಲ ಅಧಿಕಾರಿಯ ಭಕ್ತಿಯ ನಂಟು

cknewsnow desk by cknewsnow desk
August 24, 2021
in GUEST COLUMN, NATION, STATE
Reading Time: 2 mins read
0
ಶ್ರೀ ಗುರು ರಾಘವೇಂದ್ರರ ಜತೆ ಆಂಗ್ಲ ಅಧಿಕಾರಿಯ ಭಕ್ತಿಯ ನಂಟು
1k
VIEWS
FacebookTwitterWhatsuplinkedinEmail

ಇಂದು ಶ್ರೀ ರಾಘವೇಂದ್ರ ಸ್ವಾಮೀಜಿ ಅವರ 350ನೇ ಆರಾಧನಾ ಮಹೋತ್ಸವ

ಇಂದು ವಿಶ್ವಾದ್ಯಾಂತ ಗುರುಸಾರ್ವಭೌಮರಾದ ಶ್ರೀ ರಾಘವೇಂದ್ರ ಸ್ವಾಮೀಜಿ ಗುರುರಾಯರ 350ನೇ ಆರಾಧನಾ ಮಹೋತ್ಸವ ನಡೆಯುತ್ತಿದೆ. ಈ ಪುಣ್ಯದಿನದ ಹೊತ್ತಿನಲ್ಲಿ ರಾಯರ ಜತೆ ಭಕ್ತಿಯ ನಂಟು ಹೊಂದಿದ್ದ ಆಂಗ್ಲ ಅಧಿಕಾರಿ ಸರ್ ಥಾಮಸ್ ಮುನ್ರೋ ಬಗ್ಗೆ ಬರೆದಿದ್ದಾರೆ ನಮ್ಮ ಅಂಕಣಕಾರ ಡಾ.ಗುರುಪ್ರಸಾದ್‌ ರಾವ್‌ ಹವಲ್ದಾರ್.‌ ತಪ್ಪದೇ ಓದಬೇಕಾದ ಲೇಖನವಿದು.

ಮಧ್ವಾಚಾರ್ಯರ ಅನುಯಾಯಿಯಾಗಿ ಮಧ್ವ ಮತದ ದ್ವೈತ ಸಿದ್ಧಾಂತವನ್ನು ಪ್ರತಿಪಾದಿಸಿದವರು ಶ್ರೀ ರಾಯರು.  ಶ್ರೀ ಪ್ರಹ್ಲಾದ ರಾಯರ ಮೂರನೇ ಅವತಾರವೇ ಶ್ರೀ ರಾಘವೇಂದ್ರರು. ಎರಡನೆಯ ಅವತಾರವು ಶ್ರೀ ವ್ಯಾಸರಾಯರು. ಶ್ರೀ ಗುರು ರಾಘವೇಂದ್ರ ಸ್ವಾಮಿಗಳನ್ನು ಭಕ್ತರು ರಾಯರು, ಗುರುರಾಯರು, ಗುರುರಾಜರು ಎಂದು ಭಕ್ತಿಯಿಂದ ಕರೆಯುತ್ತಾರೆ.

ರಾ- ಎನ್ನಲು ರಾಶಿ ದೋಷಗಳು ದಹಿಸುವುದು, ಘ- ಎನ್ನಲು ಘನ ಜ್ಞಾನ ಭಕುತಿಯನಿತ್ತು, ವೇಂ- ಎನ್ನಲು ವೇಗಾದಿ ಜನನ ಮರಣ ಗೆದ್ದು, ದ್ರ- ಎನ್ನಲು ದ್ರವಿಣಾಕ್ಷಪ್ರತಿಪಾದ್ಯನಕಾಂಬ’ ಎಂದು ಅವರ ನಾಮಸ್ಮರಣೆಗೆ ಇಷ್ಟು ಫಲವನ್ನು  ಶ್ರೀ ಗೋಪಾಲ ದಾಸರು ಹೇಳಿದ್ದಾರೆ. ಗುರು ರಾಘವೇಂದ್ರರು ಮಾಡಿದ ಪವಾಡಗಳು, ತೋರಿದ ಮಹಿಮೆಗಳು ಅಪಾರ. ಇಂದಿಗೂ ಬೃಂದಾವನದಲ್ಲಿ ಅವರು ನೆಲೆಸಿದ್ದಾರೆ ಎನ್ನುವುದು ಅವರ ಪವಾಡಕ್ಕೆ ಮತ್ತೂಂದು ನಿದರ್ಶನ.

ರಾಘವೇಂದ್ರ ಸ್ವಾಮಿಗಳು ಕ್ರಿ.ಶ. 1595 ಮನ್ಮಥನಾಮ ಸಂವತ್ಸರ ಫಾಲ್ಗುಣ ಶುದ್ಧ ಸಪ್ತಮಿ ಗುರುವಾರ, ತಮಿಳುನಾಡಿನ ಭುವನಗಿರಿಯಲ್ಲಿ, ಬೀಗಮುದ್ರೆ ಮನೆತನದ ಗೋಪಮ್ಮ ಹಾಗೂ ತಿಮ್ಮಣ್ಣ ಭಟ್ಟ ದಂಪತಿಯ ಉದರದಲ್ಲಿ ತಿರುಪತಿ ತಿಮ್ಮಪ್ಪನ ಹರಕೆಯಿಂದ ಜನ್ಮವೆತ್ತಿದರು. ಮಗುವಿಗೆ ‘ವೆಂಕಟನಾಥ’ ಎಂದೇ ಹೆಸರಿಡಲಾಯಿತು. ವೆಂಕಟನಾಥನಿಗೆ ಪ್ರಾಥಮಿಕ ಗುರುಗಳು ಅಕ್ಕ ವೆಂಕಟಾಂಬೆಯ ಪತಿ ಲಕ್ಷ್ಮೀನರಸಿಂಹ ಆಚಾರ್ಯ; ಮುಂದೆ ಹೆಚ್ಚಿನ ವಿದ್ಯಾಭ್ಯಾಸ ಸುಧೀಂದ್ರತೀರ್ಥರಿಂದ ದೊರೆಯಿತು.

ಬ್ರಹ್ಮಲೋಕದ ಶಂಕುಕರ್ಣನೆಂಬ ದೇವತೆ, ಬ್ರಹ್ಮನ ಶಾಪಕ್ಕೆ ಗುರಿಯಾಗಿ ಶಾಪವನ್ನು ವರವಾಗಿ ಸ್ವೀಕರಿಸಿ ಕೃತಯುಗದಲ್ಲಿ ಹಿರಣ್ಯಕಶಿಪುವೆಂಬ ರಾಕ್ಷಸನ ಉದರದಲ್ಲಿ ‘ಭಕ್ತ ಪ್ರಹ್ಲಾದ’ನಾಗಿ, ದ್ವಾಪರದಲ್ಲಿ ಬಾಹ್ಲಿಕ ರಾಜರಾಗಿ, ಕಲಿಯುಗದಲ್ಲಿ ವ್ಯಾಸರಾಯರಾಗಿ ಹಾಗೂ ಕೊನೆಯ ಅವತಾರವಾಗಿ ರಾಘವೇಂದ್ರರಾಗಿ ಭೂಲೋಕದಲ್ಲಿ ನಾಲ್ಕು ಅವತಾರ ಎತ್ತಿದರು ಎಂಬ ನಂಬಿಕೆ ಭಕ್ತರಲ್ಲಿ ಇದೆ. ರಾಘವೇಂದ್ರ ಸ್ವಾಮಿಗಳು ಕೃತಯುಗದಲ್ಲಿ ಪ್ರಹ್ಲಾದರಾಜನಾಗಿ ಜನ್ಮವೆತ್ತಿದಾಗ ಹತ್ತು ಸಹಸ್ರ ವರ್ಷ ಹರಿನಾಮ ಸ್ಮರಣೆ ಮಾಡಿ ಪುಣ್ಯದ ಕಣಜವನ್ನೇ ತಮ್ಮದಾಗಿರಿಸಿಕೊಂಡರು. ತಾವು ಸಂಪಾದಿಸಿದ ಅಪಾರ ಪುಣ್ಯವನ್ನು ಹಂಚಿ ಜನರ ಬವಣೆಯನ್ನು ನೀಗಿಸಲೆಂದೇ ರಾಯರು ತಮ್ಮ 76ನೇ ವರ್ಷದಲ್ಲಿ ಅಂದರೆ ಕ್ರಿ.ಶ. 1671 ವಿರೋಧಿನಾಮ ಸಂವತ್ಸರ ಶ್ರಾವಣ ಕೃಷ್ಣ ಬಿದಿಗೆಯಂದು ಮಂತ್ರಾಲಯದ ಮಂಚಾಲಮ್ಮನ ಸನ್ನಿಧಿಯಲ್ಲಿ ಸಶರೀರ ವಾಗಿ ಬೃಂದಾವನ ಪ್ರವೇಶಿಸಿದರು; ಬೃಂದಾವನದಲ್ಲಿ ತಾವು ಏಳುನೂರು ವರ್ಷಗಳು ನೆಲೆಸುವುದಾಗಿ ತಿಳಿಸಿದ್ದಾರೆ.

ರಾಯರು ಬಯಸಿ ನೆಲೆಸಿರುವ ಮಂತ್ರಾಲಯದ ಮಹಿಮೆ ಬಣ್ಣಿಸಲಾಗದಷ್ಟು ಅಪಾರವಾಗಿದೆ. ಕೃತಯುಗದಲ್ಲಿ ಪ್ರಹ್ಲಾದರು ಯಜ್ಞ ಮಾಡಿದ ಸ್ಥಳ, ತ್ರೇತಾಯುಗದಲ್ಲಿ ರಾಮ–ಲಕ್ಷ್ಮಣರು ವಿಶ್ರಮಿಸಿದ ಬಂಡೆಯಿಂದ ನಿರ್ಮಿಸಿದ ಬೃಂದಾವನದ ಸ್ಥಳ, ದ್ವಾಪರದಲ್ಲಿ ಅನುಸಾಲ್ವನೆಂಬ ರಾಜ ಪಾಂಡವರ ಅಶ್ವಮೇಧಯಾಗದ ಕುದುರೆಯನ್ನು ಕಟ್ಟಿಹಾಕಿ ಪಾಂಡವರನ್ನು ಹಿಮ್ಮೆಟ್ಟಿದ ಸ್ಥಳ, ಮಂಚಾಲಮ್ಮನ ಸನ್ನಿಧಿ – ಇಂತಹ ಪುಣ್ಯಸ್ಥಳದಲ್ಲಿ ನೆಲೆಸಿರುವ ಗುರುಸಾರ್ವಭೌಮರು ಭಕ್ತರ ಪಾಲಿಗೆ ಕಲಿಯುಗದ ಕಲ್ಪತರು. ರಾಯರು ಬೃಂದಾವನಸ್ಥರಾಗಿ ಮುನ್ನೂರೈವತ್ತು ವಸಂತಗಳು ಉರುಳಿವೆ; ವಿಶ್ವದಾದ್ಯಂತ ಎರಡು ಸಾವಿರಕ್ಕೂ ಹೆಚ್ಚಿನ ಬೃಂದಾವನಗಳು ನಿರ್ಮಾಣವಾಗಿವೆ.

ರಾಘವೇಂದ್ರ ಸ್ವಾಮಿಗಳು ಭವರೋಗ ವೈದ್ಯರು ಹಾಗೂ ಪವಾಡ ಪುರುಷರು ಎಂದೇ ಭಕ್ತರು ನಂಬಿದ್ದಾರೆ. ಮಾಂಸವನ್ನು ಫಲಪುಷ್ಪಾದಿಗಳಾಗಿ ಮಾಡಿದ ಹಾಗೂ ಒನಕೆಯನ್ನೇ ಚಿಗುರಿಸಿ ಜೀವತುಂಬಿ ಗಿಡವನ್ನಾಗಿ ಮಾಡಿದ ಕಥೆ ಅವರ ಜೀವನ ಚರಿತ್ರೆಯಲ್ಲಿ ಬರುತ್ತದೆ. ರಾಯರು ಬೃಂದಾವನಸ್ಥರಾಗಿ 135 ವರ್ಷಗಳ ನಂತರ, ಕ್ರಿ.ಶ. 1806ರಲ್ಲಿ, ಸರ್ ಥಾಮಸ್ ಮುನ್ರೋ ಅವರಿಗೆ ಬೃಂದಾವನದಿಂದ ಹೊರಬಂದು ದರ್ಶನ ನೀಡಿ ಇಂಗ್ಲೀಷ್ʼನಲ್ಲಿ ಮಾತನಾಡಿದ್ದು ರಾಯರು ಇಂದಿಗೂ ಭಕ್ತರೊಂದಿಗೆ ಇರುವುದಕ್ಕೆ ಸಾಕ್ಷಿಯಾಗಿದೆ. ಥಾಮಸ್ ಮುನ್ರೋ ಅವರ 5ನೇ ತಲೆಮಾರು ಈಗಲೂ ಶ್ರೀ ರಾಯರ ಆರಾಧನೆ ಮಾಡುತ್ತಿದೆ, ಮಂತ್ರಾಲಯಕ್ಕೆ ಬಂದು ದರ್ಶನ ಮಾಡಿ ಸೇವೆ ಸಲ್ಲಿಸಿದ್ದು ರಾಯರ ಮಹಿಮೆಗೆ ಸಾಕ್ಷಿ ರೂಪವಾಗುತ್ತದೆ.

  • ಸರ್ ಥಾಮಸ್ ಮುನ್ರೋ / Courtesy: Wikipedia & National Portrait Gallery, London

ಒಳ್ಳೆಯ ಅಧಿಕಾರಿಯನ್ನು ಜನ ಹೇಗೆ ಗೌರವಿಸುತ್ತಾರೆ ಎಂಬುದಕ್ಕೆ ನಿದರ್ಶನ ಸರ್ ಥಾಮಸ್ ಮುನ್ರೋ. 1779ರಿಂದ 1827ರ ವರೆಗೆ ಭಾರತದಲ್ಲಿ ಸೇವೆ ಸಲ್ಲಿಸಿದ ಒಬ್ಬ ದಕ್ಷ ಆಂಗ್ಲ ಅಧಿಕಾರಿ. ಎರಡನೇ ಮೈಸೂರು ಯುದ್ಧ ಮತ್ತು ಮೂರನೇ ಮೈಸೂರು ಯುದ್ಧ ಹಾಗೂ ಮೂರನೇ ಮರಾಠ ಯುದ್ಧದಲ್ಲಿ ಪಾಲ್ಗೊಂಡು ಈಸ್ಟ್ ಇಂಡಿಯಾ ಕಂಪನಿಯಿಂದ ಶ್ಲಾಘನೆಗೆ ಒಳಗಾಗಿದ್ದ ವ್ಯಕ್ತಿ.

ಬಳ್ಳಾರಿ, ಮಂಗಳೂರು, ಮದ್ರಾಸು ಮತ್ತಿತರ ಕಡೆ ಅಧಿಕಾರಿಯಾಗಿದ್ದ ಆತ, ಜನರ ಪ್ರೀತಿ ಗಳಿಸಿದ್ದನು. ಆತನ ಸೇವೆ ಸಲ್ಲಿಸಿದ ಸ್ಥಳಗಳಲ್ಲಿ ಅಲ್ಲಿನ ಪ್ರಾದೇಶಿಕ ಭಾಷೆಯನ್ನೇ ಆಡಳಿತ ಭಾಷೆಯನ್ನಾಗಿ ಬಳಸಿದ ಮೊದಲ ಆಂಗ್ಲ ಅಧಿಕಾರಿ. ಹೀಗಾಗಿ ಅವನು ಸೇವೆ ಸಲ್ಲಿಸಿದ ಸ್ಥಳಗಳಲ್ಲಿ ಜನರೇ ಅವನ ಮೂರ್ತಿಯನ್ನು ನಿಲ್ಲಿಸಿ ತಮ್ಮ ಕೃತಜ್ಞತೆಗಳನ್ನು ಸಲ್ಲಿಸಿದ್ದಾರೆ ಜನರು. 

ಬಳ್ಳಾರಿಯ ಜನರು ಈ ಅಧಿಕಾರಿಯನ್ನು ಮುನ್ರಪ್ಪನೆಂದು ಪ್ರೀತಿಯಿಂದ ಕರೆಯುತ್ತಿದ್ದರು. ಕ್ರಿ.ಶ.1800ರಲ್ಲಿ ಮನ್ರೋ ಬಳ್ಳಾರಿಯ ಕಲೆಕ್ಟರ್ ಆಗಿದ್ದಾಗ ಮಂತ್ರಾಲಯ ಮಠದ ಮತ್ತು ಹಳ್ಳಿಯ ಆದಾಯವನ್ನು ಸರ್ಕಾರದ ಖಜಾನೆಗೆ ಸೇರಿಸಿಕೊಳ್ಳಬೇಕೆಂಬ ಮದ್ರಾಸು ಸರ್ಕಾರದ ಆದೇಶವನ್ನು ಹೊತ್ತು ಮಂತ್ರಾಲಯಕ್ಕೆ ಹೋಗಿದ್ದೂ, ಅಲ್ಲಿ ಬೃಂದಾವನದಿಂದ ಹೊರಬಂದ ರಾಯರನ್ನು ಮಾತನಾಡಿಸಿದ್ದು, ಅವರಿಂದ ಮಂತ್ರಾಕ್ಷತೆ ಪಡೆದು ಬಂದಿದ್ದು, ನಂತರ ಮದ್ರಾಸು ಸರ್ಕಾರದ ಆದೇಶವನ್ನು ಹಿಂಪಡೆಯುವಂತೆ ಮಾಡಿದ್ದು ಇವೆಲ್ಲಾ ಮದ್ರಾಸು ಸರ್ಕಾರದ ಗೆಜೆಟ್ನಲ್ಲಿ ಪ್ರಕಟವಾಗಿರುವ ಅಂಶಗಳು. 

ಮನ್ರೋ ಭೂ ಕಂದಾಯ ಕಾಯಿದೆ ರೂಪಿಸುವಲ್ಲಿ ಮಹತ್ವದ ಪಾತ್ರ ವಹಿಸಿದವನು. ರೈತವಾರಿ ವ್ಯವಸ್ಥೆಯನ್ನು ಜಾರಿಗೊಳಿಸುವಾಗ ಮನ್ರೋ ಎಲ್ಲ ಜಮೀನುಗಳನ್ನು ಸರ್ವೇ ಮಾಡಿಸಿ ಭೂ ಕಂದಾಯ ನಿಗದಿಪಡಿಸುತ್ತಿದ್ದ. ಮಂತ್ರಾಲಯ ಮಠದ ಜಮೀನಿನ ವಿಷಯ ಬರುವಾಗ ಗೊಂದಲವಾಗಿತ್ತು. ಭೂಮಾಲೀಕರಿಲ್ಲದ ಸ್ಥಳ ಈಸ್ಟ್‌ ಇಂಡಿಯಾ  ಕಂಪೆನಿ ಸುಪರ್ದಿಗೆ ಹೋಗಬೇಕಿತ್ತು. ಇದರ ಬಗ್ಗೆ ಖಚಿತ ನಿಲುವು ತಳೆಯಲು ಮನ್ರೋ ಸ್ವತಃ ಮಂತ್ರಾಲಯ ಮಠಕ್ಕೆ ಬಂದ. ಆಗ ಮಂತ್ರಾಲಯ ಸ್ವಾಮಿಗಳು ಮನ್ರೋ ಜತೆ ಇಂಗ್ಲಿಷ್‌ನಲ್ಲಿ ಮಾತನಾಡಿದರು. ಮನ್ರೋ ಟಿಪ್ಪಣಿ ಮಾಡಿಕೊಂಡು ಹೋಗಿ ಮಠದ ಪರವಾಗಿ ಶಿಫಾರಸು ಮಾಡಿದ ಎಂಬುದು ಲಭ್ಯ ಮಾಹಿತಿ. ಗಜೆಟಿಯರ್‌ ಮಾಹಿತಿ ಪ್ರಕಾರ ಬೂಟ್ಸ್‌, ಹ್ಯಾಟ್‌ ತೆಗೆದಿಟ್ಟು ಮನ್ರೋ ಮಠದ ಒಳಗೆ ಹೋದ ಎಂದಿದೆ.  ರಾಘವೇಂದ್ರ ಸ್ವಾಮಿಗಳು ಮಂತ್ರಾಕ್ಷತೆ ಕೊಟ್ಟರು, ಅದನ್ನು ಮನ್ರೋ ತನ್ನ ನಿವಾಸಕ್ಕೆ ಹೋಗಿ ಅಡುಗೆ ಸಾಮಗ್ರಿಗಳ ಧಾನ್ಯದ ಪಾತ್ರೆಗೆ ಹಾಕಿದ ಎಂದು ಉಲ್ಲೇಖವಿದೆ. ಇನ್ನು ಕೆಲವು ದಾಖಲೆಗಳ ಪ್ರಕಾರ ಮನ್ರೋ ಮಠದ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ಬಂದಿದ್ದ ಎಂದಿದೆ. ವಿಷಯ ಏನೇ ಇದ್ದರೂ ಇಲ್ಲಿ ಆತ ಸಮಾಧಿಸ್ಥ ಸ್ವಾಮೀಜಿಯವರೊಂದಿಗೆ ಮಾತನಾಡಿದ್ದು ಮಾತ್ರ ಕುತೂಹಲದ ವಿಷಯ. ಮನ್ರೋ ಆದೇಶದಂತೆ ಮದ್ರಾಸ್‌ ಸರಕಾರದ ಅಂದಿನ ಗಜೆಟ್‌ನ ಚಾಪ್ಟರ್‌ 11, 213ನೇ ಪುಟದಲ್ಲಿ ಇದು ದಾಖಲಾಗಿದೆ. ಇದು ಚೆನ್ನೈಯ ರಾಜ್ಯ ಸರಕಾರದ ಪತ್ರಾಗಾರದಲ್ಲಿ ಇದೆ. 

ಇಂದು ಭಕ್ತಕೋಟಿ ಗುರು ರಾಘವೇಂದ್ರ ಸ್ವಾಮಿಗಳ ಸನ್ನಿಧಿಗೆ ಬರುತ್ತದೆ ಎಂದರೆ ಆ ಸ್ಥಳ ಮಹಿಮೆ ಕಾರಣ. ಪವಾಡ ಮಾಡಿದವರೆಲ್ಲ ಮಹಾಮಹಿಮರಾಗಿಲ್ಲ. ಆದರೆ, ದೈವಾಂಶ ಸಂಭೂತರಂತೆ ಅವತರಿಸಿ ಜನರ ಕಷ್ಟ ಕಾರ್ಪಣ್ಯ ನೀಗಿದವರು ಮಹಾಮಹಿಮರಾಗುವರು. ಶ್ರೀ ರಾಘವೇಂದ್ರ ಸ್ವಾಮಿಗಳು ಅಕ್ಷರಶಃ ದೈವಾಂಶಸಂಭೂತರು. ಅದಕ್ಕೇ ಅವರನ್ನು “ಕಲಿಯುಗದ ಕಾಮಧೇನು’ ಎಂದೇ ಕರೆಯುವುದು.


ಡಾ.ಗುರುಪ್ರಸಾದ ಹವಲ್ದಾರ್

  • ಮೂಲತಃ ಉಪನ್ಯಾಸಕರು. ಬಳ್ಳಾರಿ ಜಿಲ್ಲೆಯ ಹೊಸಪೇಟೆ ತಾಲ್ಲೂಕಿನ ಮರಿಯಮ್ಮನ ಹಳ್ಳಿಯವರು. ಪ್ರಸ್ತುತ ಹಗರಿಬೊಮ್ಮನಹಳ್ಳಿ ಜಿವಿಪಿಪಿ ಪದವಿ ಕಾಲೇಜನಲ್ಲಿ ಕನ್ನಡ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತ ಜೊತೆಗೆ ಪತ್ರಿಕೆಗಳಿಗೆ ವೆಬ್ ನ್ಯೂಸ್ ಪೋಟ್೯ಲ್ ಗಳಿಗೆ ಲೇಖನ ಬರೆಯುತ್ತಿದ್ದಾರೆ.
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

ಚುನಾವಣಾ ವ್ಯವಸ್ಥೆಗೆ ಸುಪ್ರೀಂ ಚಿಕಿತ್ಸೆ

ಹನಿಟ್ರ್ಯಾಪ್‌: ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

by cknewsnow desk
March 27, 2025
0

ಅರ್ಜಿದಾರರನ್ನೇ ಕ್ಲಾಸ್ ತೆಗೆದುಕೊಂಡ ಕೋರ್ಟ್

Next Post
ತಲೆಗೂದಲು ತೆರೆದಿಟ್ಟ ಸತ್ಯ

ತಲೆಗೂದಲು ತೆರೆದಿಟ್ಟ ಸತ್ಯ

Leave a Reply Cancel reply

Your email address will not be published. Required fields are marked *

Recommended

ಲೀಡರ್ ಎನ್ನುವುದಕ್ಕಿಂತ ಜನಸೇವಕ ಎಂದರೆ‌ ಹೆಚ್ಚು  ಖುಷಿಪಡುತ್ತೇನೆ ಎಂದ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ

ಲೀಡರ್ ಎನ್ನುವುದಕ್ಕಿಂತ ಜನಸೇವಕ ಎಂದರೆ‌ ಹೆಚ್ಚು ಖುಷಿಪಡುತ್ತೇನೆ ಎಂದ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ

4 years ago
ಚಿಕ್ಕಬಳ್ಳಾಪುರದಲ್ಲಿ ಕೈಗಾರಿಕೀಕರಣ: ಜಿಲ್ಲೆಯ 100 ಎಕರೆಯಲ್ಲಿ ಬರಲಿದೆ ಎಲೆಕ್ಟ್ರಿಕ್‌ ಬೈಕ್‌ ಕಾರ್ಖಾನೆ; ಕೃಷಿ ಉತ್ಪನ್ನ ಕೈಗಾರಿಕೆಗಳಿಗೆ 300 ಎಕರೆ ಭೂಮಿ ಬೇಕು ಎಂದ ಡಾ.ಕೆ.ಸುಧಾಕರ್

ಪ್ರತಿ ದಿನ 5 ಲಕ್ಷ ಲಸಿಕೆ ನೀಡುವ ಗುರಿ ಇದೆ ಎಂದ ಸಚಿವ ಡಾ.ಕೆ.ಸುಧಾಕರ್

4 years ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ