• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home CHIKKABALLAPUR

ಗುಡಿಬಂಡೆಯಲ್ಲಿ ಮನೆ ಬಾಗಿಲಿಗೇ ವ್ಯಾಕ್ಸಿನ್

cknewsnow desk by cknewsnow desk
August 26, 2021
in CHIKKABALLAPUR, COVID-19, STATE
Reading Time: 1 min read
0
ಗುಡಿಬಂಡೆಯಲ್ಲಿ ಮನೆ ಬಾಗಿಲಿಗೇ ವ್ಯಾಕ್ಸಿನ್
1k
VIEWS
FacebookTwitterWhatsuplinkedinEmail

ಕೋವಿಡ್ 3ನೇ ಅಲೆ ತಪ್ಪಿಸಲು ನಾಳೆಯಿಂದ ವ್ಯಾಪಕ ಲಸಿಕೀಕರಣ; ಲಸಿಕೆಯ ಬಗ್ಗೆ ಅಪಪ್ರಚಾರ ಮಾಡಿದರೆ ಕಠಿಣ ಕ್ರಮ; ತಹಸೀಲ್ದಾರ್‌ ಎಚ್ಚರಿಕೆ

by GS Bharath Gudibande

ಗುಡಿಬಂಡೆ: ಇನ್ನೂ ಎರಡನೇ ಅಲೆ ಮುಗಿದಿಲ್ಲ, ಇನ್ನೇನು ಮೂರನೇ ಅಲೆಯೂ ಬರುವುದರಲ್ಲಿದೆ. ಇದೇ ಹೊತ್ತಿನಲ್ಲಿ ಗುಡಿಬಂಡೆ ಆರೋಗ್ಯ ಇಲಾಖೆ ಮನೆ-ಮನೆ ಬಾಗಿಲಿಗೇ ತೆರಳಿ ಲಸಿಕೆ ನೀಡುವ ಅಭಿಯಾನವನ್ನು ನಾಳೆಯಿಂದ (ಗುರುವಾರ) ಆರಂಭಿಸುತ್ತಿದೆ.

ದೇಶಾದ್ಯಂತ ಕೆಲ ರಾಜ್ಯಗಳಲ್ಲಿ 3ನೇ ಅಲೆ ಭಾರೀ ಭೀತಿ ಸೃಷ್ಟಿ ಮಾಡಿದ್ದು, ಪುನಾ ಲಾಕ್‌ಡೌನ್ ಆಗಬಹುದು ಎಂಬ ಮಾತುಗಳೂ ಕೇಳಿಬರುತ್ತಿವೆ. ನೆರೆಯ ಕೇರಳ ಮತ್ತು ಮಹಾರಾಷ್ಟ್ರ ರಾಜ್ಯಗಳಲ್ಲಿ ಪರಿಸ್ಥಿತಿ ಬಿಗಡಾಯಿಸಿದೆ. ಕೊರೋನ 3ನೇ ಅಲೆಯನ್ನು ಎದುರಿಸಲು ಜಿಲ್ಲಾಡಳಿತ ಮತ್ತು ಆರೋಗ್ಯ ಇಲಾಖೆಯು ಈವರೆಗೆ ಲಸಿಕೆ ಪಡೆಯದ ಹದಿನೆಂಟು ವರ್ಷಕ್ಕೆ ಮೇಲ್ಪಟ್ಟವರನ್ನು ಹುಡುಕಿ-ಹುಡುಕಿ ಲಸಿಕೆ ನೀಡುವ ಕಾರ್ಯಕ್ರಮ ಹಾಕಿಕೊಂಡಿದೆ.

ಈ ಬಗ್ಗೆ ಸಿಕೆನ್ಯೂಸ್‌ ನೌ ಜತೆ ಮಾತನಾಡಿದ ತಹಸೀಲ್ದಾರ್‌ ಸಿಗ್ಬಲ್‌ ವುಲ್ಲಾ ಅವರು, ಎಲ್ಲರೂ ಸ್ವಯಂ ಪ್ರೇರಣೆಯಿಂದ ಮುಂದೆ ಬಂದು ಲಸಿಕೆ ಪಡೆಯಬೇಕು. ಲಸಿಕೆಯಿಂದ ಯಾವುದೇ ಅಡ್ಡ ಪರಿಣಾಮ ಬೀರುವುದಿಲ್ಲ. ಯಾರಾದರೂ ಲಸಿಕೆಯ ಬಗ್ಗೆ ಅಪಪ್ರಚಾರ ಮಾಡಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

“ಜಗತ್ತಿನ ಪ್ರತಿ ದೇಶವೂ ಈ ಮಾರಕ ವೈರಸ್ʼಗೆ ತುತ್ತಾಗಿ ಸಂಕಷ್ಟ ಅನುಭವಿಸಿದೆ. ಎಲ್ಲೆಡೆ ಅಪಾರ ಜೀವನಷ್ಟವೂ ಆಗಿದೆ. ಆದರೆ, ಎಲ್ಲೆಡೆ ವ್ಯಾಕ್ಸಿನ್‌ ನೀಡುವ ಮೂಲಕ ಜನರ ಜೀವ ಕಾಪಾಡಲಾಗುತ್ತಿದೆ. ನಮ್ಮ ದೇಶಾದ್ಯಂತ ಇದೇ ಕ್ರಮ ಅನುಸರಿಸಲಾಗುತ್ತಿದ್ದು, ರಾಜ್ಯಾದ್ಯಂತ ವ್ಯಾಪಕವಾಗಿ ವ್ಯಾಕ್ಸಿನೇಷನ್‌ ನಡೆದಿದೆ. ಈಗ ನಮ್ಮ ತಾಲೂಕಿನಲ್ಲಿ ಮನೆ ಮನೆಗೂ ತೆರಳಿ ಲಸಿಕೆ ನೀಡಲು ತಂಡ ಸಿದ್ದವಾಗಿದೆ” ಎಂದು  ವೈದ್ಯಾಧಿಕಾರಿ ಡಾ.ನರಸಿಂಹಮೂರ್ತಿ ಅವರು ಸಿಕೆನ್ಯೂಸ್ ನೌ ವೆಬ್‌ತಾಣಕ್ಕೆ ಮಾಹಿತಿ ನೀಡಿದರು.

ತಾಲೂಕಿನಲ್ಲಿ 18 ವರ್ಷ ಮೇಲ್ಪಟ್ಟವರ ಸಂಖ್ಯೆ ಹೆಚ್ಚಾಗಿದೆ ಹಾಗೂ ಕೆಲವರು ಸ್ವಯಂ ಪ್ರೇರಿತರಾಗಿ ಬಂದು ಲಸಿಕೆ ಪಡೆಯುತ್ತಿದ್ದಾರೆ. ಲಸಿಕೆ ಪಡೆಯದ ಎಲ್ಲರೂ ನಿಮ್ಮ ಹತ್ತಿರದ ಆರೋಗ್ಯ ಕೇಂದ್ರಕ್ಕೆ ಬಂದು ಲಸಿಕೆ ಪಡೆದು ಕೊರೋನಾ ಕಟ್ಟಿಹಾಲು ಸಹಕರಿಸಬೇಕು ಎಂದು ಡಾ.ನರಸಿಂಹಮೂರ್ತಿ ಮನವಿ ಮಾಡಿದರು.

ಲಸಿಕೆ ಪಡೆದು ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಿ

ಈಗಾಗಲೇ ಸರಕಾರ ಹಾಗೂ ಆರೋಗ್ಯ ಇಲಾಖೆ ಹೇಳಿರುವಂತೆ ಲಸಿಕೆ ಪಡೆಯುವುದರಿಂದ ಯಾವುದೇ ಅಡ್ಡ ಪರಿಣಾಮ ಆಗುವುದಿಲ್ಲ, ಬದಲಿಗೆ ವೈರಸ್ ವಿರುದ್ಧ ಹೋರಾಡಲು ಅಗತ್ಯ ಶಕ್ತಿ ನಮ್ಮ ದೇಹಕ್ಕೆ ಬರುತ್ತದೆ. ಹಾಗಾಗಿ ಲಸಿಕೆ ಪಡೆಯಲು ಅಲಕ್ಷ್ಯ ಬೇಡ. ಕೂಡಲೇ ಲಸಿಕೆ ಪಡೆಯಲು ಎಲ್ಲರೂ ಮುಂದಾಗಬೇಕು ಎಂದು ತಹಶೀಲ್ದಾರ್ ಸಿಬ್ಗತ್ ವುಲ್ಲಾ ಜನೆತೆಗೆ ಮನವಿ ಮಾಡಿದ್ದಾರೆ.

ಕಡ್ಡಾಯವಾಗಿ ಮಾಸ್ಕ್ ಧರಿಸಿ

ಕೊರೊನಾ ವಿರುದ್ಧ ನಿರೋಧಕತೆಗೆ ಮಾಸ್ಕ್‌ಗಳು ಸಹಕಾರಿ. ತಪ್ಪದೆ ಮಾಸ್ಕ್‌ ಧರಿಸಿದರೆ ವೈರಸ್ ಪ್ರಸರಣವನ್ನು ಪರಿಣಾಮಕಾರಿಯಾಗಿ ನಿಯಂತ್ರಿಸಬಹುದು ಎಂದು ವಿಜ್ಞಾನಿಗಳು ಅಭಿಪ್ರಾಯಪಟ್ಟಿದ್ದಾರೆ. ”ವೈರಾಣುವಿನ ಪ್ರಮಾಣ ದೇಹದಲ್ಲಿ ಹೊಕ್ಕಿರುವುದನ್ನು ಆಧರಿಸಿ ಕೊರೊನಾ ಸೋಂಕಿನ ಗಂಭೀರತೆ ಅಥವಾ ವೈರಸ್‌ ಲೋಡ್‌ ನಿರ್ಧರಿತವಾಗುತ್ತದೆ. ಹಾಗಾಗಿ ಸರಿಯಾಗಿ ಧರಿಸಿದ ಮಾಸ್ಕ್‌ಗಳು ವೈರಾಣುಗಳ ಪ್ರಮಾಣವನ್ನು ಸಾಕಷ್ಟು ಬಾರಿ ತಡೆಯುವ ಸಾಮರ್ಥ್ಯ ಹೊಂದಿವೆ. ಇದರಿಂದಾಗಿ ಮಾಸ್ಕ್‌ಗಳು ಕೂಡ ಕೊರೊನಾ ನಿಯಂತ್ರಕ ಲಸಿಕೆ ಇದ್ದಂತೆ” ಎಂದಿದ್ದಾರೆ ಸಿಬ್ಗತ್ ವುಲ್ಲಾ.

ಲಸಿಕೀಕರಣ ಎಲ್ಲೆಲ್ಲಿ?

ಪಟ್ಟಣದ ಸಾರ್ವಜನಿಕ ಆಸ್ಪತ್ರೆ, ಅಂಗನವಾಡಿ ಕೇಂದ್ರಗಳು ಸೇರಿ ತಾಲೂಕಿನ ಪ್ರತಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಲಸಿಕಾ ಅಭಿಯಾನವನ್ನು ವಿವಿಧ ಇಲಾಖೆಗಳ ಸಹಕಾರದಿಂದ ಹಮ್ಮಿಕೊಳ್ಳಲಾಗಿದೆ ಎಂದು ಸಿಬ್ಗತ್ ವುಲ್ಲಾ ಮಾಹಿತಿ ನೀಡಿದರು.

ಮನೆ ಬಾಗಿಲಿಗೇ ಟಾಸ್ಕ್ ಫೋರ್ಸ್‌

ಪಟ್ಟಣ ಹಾಗೂ ತಾಲೂಕಿನ 8 ಪಂಚಾಯಿತಿಗಳಲ್ಲಿ ನಾಳೆಯಿಂದ ಲಸಿಕಾ ಅಭಿಯಾನ ನಡೆಯುತ್ತಿದ್ದು, ಪಟ್ಟಣದ 11 ವಾರ್ಡ್ʼಗಳು ಹಾಗೂ ತಾಲೂಕಿನ 8 ಪಂಚಾಯಿತಿಗಳಲ್ಲಿ ಟಾಸ್ಕ್ ಫೋರ್ಸ್‌ ಕಮಿಟಿ ಪ್ರತಿ ಮನೆ ಬಾಗಿಲಿಗೇ ತೆರಳಲಿದ್ದು, ಲಸಿಕೆ ಪಡೆದವರ ಮಾಹಿತಿ ಪಡೆಯಲಿದ್ದಾರೆ. ಈ ಲಸಿಕಾ ಅಭಿಯಾನಕ್ಕೆ ತಾಲೂಕಿನ ಎಲ್ಲಾ ಸಾರ್ವಜನಿಕರು ಸಹಕರಿಸಬೇಕು ಎಂದು ತಾಲೂಕು ಮಟ್ಟದ ಅಧಿಕಾರಿಗಳು ಮನವಿ ಮಾಡಿದ್ದಾರೆ.

ಪಟ್ಟಣ ಮತ್ತು ತಾಲೂಕಿನ ಪಂಚಾಯತಿಗಳಲ್ಲಿ ವ್ಯಾಕ್ಸಿನ್ ಅಭಿಯಾನ ನಾಳೆ ಆರಂಭವಾಗಲಿದ್ದು, ಎಲ್ಲರೂ ಬಂದು ವ್ಯಾಕ್ಸಿನ್ ಹಾಕಿಸಿಕೊಂಡು ಸೋಂಕು ಹರಡುವುದನ್ನು ತಡೆಗಟ್ಟಬೇಕು, ಗ್ರಾಮ ಮಟ್ಟದ ಟಾಸ್ಕ್ ಫೋರ್ಸ್‌ ಕಮಿಟಿ ಹಳ್ಳಿಹಳ್ಳಿ ಬೇಟಿ ಮಾಡಿ ವ್ಯಾಕ್ಸಿನ್ ಮಹತ್ವದ ಬಗ್ಗೆ ತಿಳಿಸಬೇಕು, ಅಪಪ್ರಚಾರ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ.

ಸಿಬ್ಗತ್ ವುಲ್ಲಾ. ತಹಶೀಲ್ದಾರ್ ಗುಡಿಬಂಡೆ

ನಾಳೆ ಲಸಿಕಾ ಅಭಿಯಾನದಡಿ ಪಟ್ಟಣ ಮತ್ತು ತಾಲೂಕಿನ ಎಲ್ಲಾ ಪಂಚಾಯತಿಗಳ ಹಳ್ಳಿಗಳ ಮನೆ ಬಾಗಿಲಿಗೇ ನಮ್ಮ ತಂಡದವರು ತೆರಳಿ 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಲಿದ್ದಾರೆ. ಹಾಗೂ ಈ ಗಾಗಲೇ ತಾಲ್ಲೂಕಿನ 39711 ಜನರಿಗೆ ಲಸಿಕೆ ನೀಡುವಲ್ಲಿ ಯಶಸ್ವಿಯಾಗಿದ್ದೇವೆ, ಇದರಲ್ಲಿ 26186 ಜನರಿಗೆ ಮೊದಲ ಡೋಸ್, 13525 ಜನರಿಗೆ ಎರಡನೇ ಡೋಸ್ ಕೊಡಲಾಗಿದೆ. ಒಟ್ಟಾರೆಯಾಗಿ ದೈಹಿಕ ಅಂತರ ಹಾಗೂ ಕಡ್ಡಾಯವಾಗಿ ಮಾಸ್ಕ್ ಧರಿಸಿದರೆ ಈ ಮಹಾಮಾರಿಯನ್ನು ನಿಯಂತ್ರಿಸಬಹುದು.

ಡಾ.ನರಸಿಂಹಮೂರ್ತಿ, ಆರೋಗ್ಯ ವೈದ್ಯಾಧಿಕಾರಿ. ಸಾರ್ವಜನಿಕ ಆಸ್ಪತ್ರೆ, ಗುಡಿಬಂಡೆ

Tags: chikkaballapuracovid19gudibandekarnataka fights coronavaccinationvaccine at your doorstep
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಆಫ್ಘಾನ್‌ ಉಗ್ರರ ಮೇಲೆ ದಾಳಿ ಸುಳಿವು ಕೊಟ್ಟ ಅಮೆರಿಕ

ಆಫ್ಘಾನ್‌ ಉಗ್ರರ ಮೇಲೆ ದಾಳಿ ಸುಳಿವು ಕೊಟ್ಟ ಅಮೆರಿಕ

Leave a Reply Cancel reply

Your email address will not be published. Required fields are marked *

Recommended

200 ಯುನಿಟ್‌ ಮೇಲೆ ಕರೆಂಟ್‌ ಬಿಲ್‌ ಕಟ್ಟಬೇಡಿ; ಮಹಿಳೆಯರು ಬಸ್‌ ಚಾರ್ಜ್‌ ಕೊಡಬೇಡಿ

200 ಯುನಿಟ್‌ ಮೇಲೆ ಕರೆಂಟ್‌ ಬಿಲ್‌ ಕಟ್ಟಬೇಡಿ; ಮಹಿಳೆಯರು ಬಸ್‌ ಚಾರ್ಜ್‌ ಕೊಡಬೇಡಿ

3 years ago
ಬಸವರಾಜ ಬೊಮ್ಮಾಯಿ s/o ಸೋಮಪ್ಪ ರಾಯಪ್ಪ & ಬೊಮ್ಮಾಯಿ c/o ಸರಳತೆ-ಸಜ್ಜನಿಕೆ

ಬಸವರಾಜ ಬೊಮ್ಮಾಯಿ s/o ಸೋಮಪ್ಪ ರಾಯಪ್ಪ & ಬೊಮ್ಮಾಯಿ c/o ಸರಳತೆ-ಸಜ್ಜನಿಕೆ

5 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ