• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home CHIKKABALLAPUR

ನೇಮಕವಾದ ವೈದ್ಯರು 4,000, ಕೆಲಸಕ್ಕೆ ಹಾಜರಾಗಿದ್ದು 2,500!!

cknewsnow desk by cknewsnow desk
August 27, 2021
in CHIKKABALLAPUR, STATE
Reading Time: 2 mins read
0
ನೇಮಕವಾದ ವೈದ್ಯರು 4,000, ಕೆಲಸಕ್ಕೆ ಹಾಜರಾಗಿದ್ದು 2,500!!

ಬಾಲ ಹೃದಯ ಯಶಸ್ವಿ ಶಸ್ತ್ರಚಿಕಿತ್ಸೆ ಪಡೆದ ಪುಟಾಣಿಗಳಿಗೆ ಸದ್ಗರು ಶ್ರೀ ಮಧುಸೂದನ ಸಾಯಿ ರವರ ಸಾನ್ನಿಧ್ಯದಲ್ಲಿ ಬದುಕಿನ ಉಡುಗೊರೆ ನೀಡಿದ ಮುಖ್ಯಮಂತ್ರಿ.

1k
VIEWS
FacebookTwitterWhatsuplinkedinEmail

ಸೇವಾ ಮನೋಭಾವ ಕುಗ್ಗುತ್ತಿದೆ ಎಂದು ನೊಂದುಕೊಂಡ ಮುಖ್ಯಮಂತ್ರಿ

ಸತ್ಯಸಾಯಿ ಗ್ರಾಮದಲ್ಲಿ ಅಂತಾರಾಷ್ಟ್ರೀಯ ವೈದ್ಯಕೀಯ ವಿದ್ಯಾಲಯ ಸ್ಥಾಪನೆಗೆ ಸರಕಾರದ ಸಹಕಾರ ಘೋಷಿಸಿದ ಸಿಎಂ: ಶ್ರೀ ಸತ್ಯಸಾಯಿ ಸರಳ ಸ್ಮಾರಕ ಆಸ್ಪತ್ರೆಯನ್ನು ಹಾಗೂ ಮಕ್ಕಳ ತೀವ್ರ ನಿಗಾ ಘಟಕ ಲೋಕಾರ್ಪಣೆ

by GS Bharath Gudibande

ಚಿಕ್ಕಬಳ್ಳಾಪುರ: ಪ್ರಶಾಂತಿ ಬಾಲಮಂದಿರ ಟ್ರಸ್ಟ್ ವತಿಯಿಂದ ಚಿಕ್ಕಬಳ್ಳಾಪುರ ತಾಲ್ಲೂಕಿನ ಮುದ್ದೇನಹಳ್ಳಿಯ ಸತ್ಯಸಾಯಿ ಗ್ರಾಮದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ವೈದ್ಯಕೀಯ ವಿದ್ಯಾಲಯ ಸ್ಥಾಪನೆಗೆ ಸರಕಾರದ ಸಂಪೂರ್ಣ ಸಹಕಾರ ಇರುತ್ತದೆ ಎಂದು ಮುಖ್ಯಮಂತ್ರಿ ಬಸವರಾಜು ಬೊಮ್ಮಾಯಿ ತಿಳಿಸಿದ್ದಾರೆ.

ತಾಲ್ಲೂಕಿನ ಮುದ್ದೇನಹಳ್ಳಿಯ ಸತ್ಯಸಾಯಿ ಗ್ರಾಮದಲ್ಲಿ ಸ್ಥಾಪಿಸಲಾಗಿರುವ 300 ಹಾಸಿಕೆಗಳ ಶ್ರೀ ಸತ್ಯಸಾಯಿ ಸರಳ ಸ್ಮಾರಕ ಆಸ್ಪತ್ರೆಯನ್ನು ಹಾಗೂ ಮಕ್ಕಳ ತೀವ್ರ ನಿಗಾ ಘಟಕವನ್ನು  ಉದ್ಘಾಟಿಸಿ ಅವರು ಮಾತನಾಡಿದರು.

  • ಶ್ರೀ ಸತ್ಯಸಾಯಿ ಸರಳ ಸ್ಮಾರಕ ಆಸ್ಪತ್ರೆ

ಈ ಭಾಗದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ವೈದ್ಯಕೀಯ ಕಾಲೇಜು ಸ್ಥಾಪನೆಯಿಂದ ಬಡವರಿಗೆ, ಕಷ್ಟದಲ್ಲಿರುವರಿಗೆ ಹಾಗೂ ಅಶಕ್ತರಿಗೆ ಸಹಾಯ ಆಗಲಿದೆ. ಬಡವರಿಗೆ ಉಚಿತವಾಗಿ ವೈದ್ಯಕೀಯ ಸೇವೆಯನ್ನು ನೀಡುತ್ತಿರುವ ಈ ಸೇವಾ ಸಂಸ್ಥೆಯ ಕಾರ್ಯ ಅಮೋಘವಾದದ್ದು ಎಂದರು.

ನೋವನ್ನು ತಡೆಯುವ ಮತ್ತು ನಿವಾರಿಸುವ ಶಕ್ತಿ ವೈದ್ಯರಿಗೆ ಮಾತ್ರ ಇರುತ್ತದೆ. ಈ ನಿಟ್ಟಿನಲ್ಲಿ ವಿದೇಶಗಳಿಂದ ಸತ್ಯಸಾಯಿ ಗ್ರಾಮಕ್ಕೆ ಅನೇಕ ವೈದ್ಯರು, ತಜ್ಞರು, ರೋಗಿಗಳ ಆರೋಗ್ಯ ಸೇವೆ ಮಾಡಲು ಮುಂದೆ ಬಂದಿದ್ದಾರೆ. ಇದಕ್ಕೆ ಸೇವಾ ಮನೋಭಾವ ಬಹಳ ಮುಖ್ಯ. ಅಂತಹ ಸೇವಾ ಮನೋಭಾವ ಹುಟ್ಟಿಸಬೇಕಾದರೆ ಆಧ್ಯಾತ್ಮಿಕ ಶಕ್ತಿಯಿಂದ ಮಾತ್ರ  ಸಾಧ್ಯ. ಈ ಶಕ್ತಿ ಎಲ್ಲಾ ಕಡೆ ಇರಬೇಕು. ಆಗ ಮಾತ್ರ ಕಲಿಯುಗ ಸುವ್ಯವಸ್ಥೆಯತ್ತ ಸಾಗುತ್ತದೆ. ನಮ್ಮ ಸರಕಾರ ಹಲವಾರು ಜನಪರ ಯೋಜನೆಗಳನ್ನು ಜಾರಿಗೆ ತಂದಿದೆ. 4000 ವೈದ್ಯರ ನೇಮಕಾತಿಗೆ ಕ್ರಮ ವಹಿಸಿತ್ತು. ಇದರಲ್ಲಿ 2500 ವೈದ್ಯರು ಮಾತ್ರ ಕರ್ತವ್ಯಕ್ಕೆ ವರದಿ ಮಾಡಿಕೊಂಡರು ಎಂದು ಸಿಎಂ ವಿಷಾಧಿಸಿದರು

ಮುದ್ದೇನಹಳ್ಳಿಯ ಸತ್ಯಸಾಯಿ ಗ್ರಾಮದಲ್ಲಿ ಪ್ರಶಾಂತಿ ಬಾಲಮಂದಿರ ಟ್ರಸ್ಟ್ ವತಿಯಿಂದ ನಿರ್ಮಿಸಿರುವ 300 ಹಾಸಿಗೆಗಳ ಶ್ರೀ ಸತ್ಯಸಾಯಿ ಸರಳ ಸ್ಮಾರಕ ಆಸ್ಪತ್ರೆ ಮತ್ತು ಮಕ್ಕಳ ತೀವ್ರ ನಿಗಾ ಘಟಕವನ್ನು ಮುಖ್ಯಮಂತ್ರಿ @BSBommai ರವರು ಇಂದು ಉದ್ಘಾಟಿಸಿದರು. (1/2) pic.twitter.com/3FBmFMIDlC

— CM of Karnataka (@CMofKarnataka) August 27, 2021

ಕಲಿಯುಗದಲ್ಲಿ ಭಗವಂತ ಗುರುವಿನ ರೂಪದಲ್ಲಿ ಕಾಣಿಸಿಕೊಂಡಿದ್ದಾನೆ. ಆದ್ದರಿಂದ ನಾವೆಲ್ಲರೂ ಗುರುವಿನಲ್ಲಿ ಕರಗಿ ಲೀನವಾಗಬೇಕು. ಆಗಲೇ ಗುರುವಿನ ಸಂಪೂರ್ಣ ಆಶಿರ್ವಾದ ಸಿಗುತ್ತದೆ. ಗುರುವಿನ ಮೂಲಕ ದೈವತ್ವದ ದರ್ಶನವಾಗುತ್ತದೆ ಎಂದರು ಮುಖ್ಯಮಂತ್ರಿ.

ಶ್ರೀ ಸತ್ಯಸಾಯಿ ಸರಳ ಸ್ಮಾರಕ ಆಸ್ಪತ್ರೆಯಲ್ಲಿ 300 ಹಾಸಿಗೆಗಳ ಅತ್ಯಾಧುನಿಕ ಸುಸಜ್ಜಿತ ವ್ಯವಸ್ಥೆ ಇದ್ದು,ಪ್ರಸ್ತುತ 150 ಆಮ್ಲಜನಕ ಯುಕ್ತ ಹಾಸಿಗೆಗಳು ಮತ್ತು ಮಕ್ಕಳ ತೀವ್ರ ನಿಗಾ ಘಟಕವು ಮಕ್ಕಳು ಮತ್ತು ನವಜಾತ ಶಿಶುಗಳ ಆರೋಗ್ಯ ಸಂರಕ್ಷಣಾ ಕಾರ್ಯದಲ್ಲಿ ತೊಡಗಿಸಿಕೊಳ್ಳಲು ಸಿದ್ದವಾಗಿದೆ ಹಾಗೂ ಕೋವಿಡ್-19ರ ಸಂಭಾವ್ಯ ಮೂರನೇ ಅಲೆಯ ಹೊಡೆತವನ್ನು ಎದುರಿಸಲು ಸಶಕ್ತವಾಗಿದೆ ಎಂದು ಅವರು ತಿಳಿಸಿದರು.

ಸದ್ಗುರು ಶ್ರೀ ಮಧುಸೂದನ್ ಸಾಯಿ ಸ್ವಾಮೀಜಿ, ಆರೋಗ್ಯ ಸಚಿವ @mla_sudhakar, ಸಂಸದ @BNBachegowda_MP ಮೊದಲಾದವರು ಉಪಸ್ಥಿತರಿದ್ದರು. (2/2) pic.twitter.com/PLEjgjwf72

— CM of Karnataka (@CMofKarnataka) August 27, 2021

ವೇದಿಕೆ ಕಾರ್ಯಕ್ರಮದಲ್ಲಿ ಇತ್ತೀಚಿಗೆ ಸಂಸ್ಥೆಯ ಆಸ್ಪತ್ರೆಯಲ್ಲಿ ಬಾಲ ಹೃದಯ ಯಶಸ್ವಿ ಶಸ್ತ್ರಚಿಕಿತ್ಸೆ ಪಡೆದ ಪುಟಾಣಿಗಳಿಗೆ ರಾಜ್ಯದ ಮುಖ್ಯಮಂತ್ರಿಗಳು ಸದ್ಗರು ಶ್ರೀ ಮಧುಸೂದನ ಸಾಯಿ ರವರ ಸಾನ್ನಿಧ್ಯದಲ್ಲಿ ಬದುಕಿನ ಉಡುಗೊರೆ ನೀಡಿದರು.

ಸಭಾ ಕಾರ್ಯಕ್ರಮಕ್ಕೂ ಮುನ್ನ ಶ್ರೀ ಸತ್ಯಸಾಯಿ ಸರಳಾ ಸ್ಮಾರಕ ಆಸ್ಪತ್ರೆಯ ವಿಸ್ತೃತ ವಿಭಾಗದ ಶ್ರೀ ಸತ್ಯಸಾಯಿ ರಾಜೇಶ್ವರಿ ಬ್ಲಾಕ್ʼಗೆ ಭೂಮಿ ಪೂಜೆಯನ್ನು ಆರೋಗ್ಯ ಸಚಿವ ಡಾ. ಕೆ.ಸುಧಾಕರ್ ಮುಖ್ಯಮಂತ್ರಿಗಳೊಂದಿಗೆ ನೆರವೇರಿಸಿದರು.

ಪ್ರಶಾಂತಿ ಬಾಲಮಂದಿರ ಟ್ರಸ್ಟ್ ವತಿಯಿಂದ ಚಿಕ್ಕಬಳ್ಳಾಪುರ ಜಿಲ್ಲೆಯ ಮುದ್ದೇನಹಳ್ಳಿಯಲ್ಲಿ ನಿರ್ಮಿಸಿರುವ 300 ಹಾಸಿಗೆಗಳ ಶ್ರೀ ಸತ್ಯಸಾಯಿ ಸರಳಾ ಸ್ಮಾರಕ ಆಸ್ಪತ್ರೆ ಹಾಗೂ ಮಕ್ಕಳ ತೀವ್ರನಿಗಾ ಘಟಕವನ್ನು ಲೋಕಾರ್ಪಣೆ ಮಾಡಿದ ನಂತರ ಮುಖ್ಯಮಂತ್ರಿ @BSBommai ರವರು ಸಂದರ್ಶಕರ ಪುಸ್ತಕದಲ್ಲಿ ತಮ್ಮ ಅಭಿಪ್ರಾಯವನ್ನು ದಾಖಲಿಸಿದರು. pic.twitter.com/w2nH7SVtti

— CM of Karnataka (@CMofKarnataka) August 27, 2021

ಕಾರ್ಯಕ್ರಮದಲ್ಲಿ ಶ್ರೀ ಮಧುಸೂದನ ಸಾಯಿ, ಸಂಸದ ಬಿ.ಎನ್.ಬಚ್ಚೇಗೌಡ, ಜಿಲ್ಲಾಧಿಕಾರಿ ಆರ್.ಲತಾ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪಿ.ಶಿವಶಂಕರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ ಕುಮಾರ್, ಚಿಕ್ಕಬಳ್ಳಾಪುರ ನಗರಸಭಾ ಅಧ್ಯಕ್ಷ ಆನಂದ ರೆಡ್ಡಿ (ಬಾಬು), ಶ್ರೀ ಸತ್ಯಸಾಯಿ ಮಾನವ ಅಭ್ಯುಧಯ ವಿಶ್ವವಿದ್ಯಾಲಯ ಕುಲಾಧಿಪತಿ ಬಿ.ಎನ್.ನರಸಿಂಹಮೂರ್ತಿ, ಶ್ರೀ ಸತ್ಯಸಾಯಿ ಆರೋಗ್ಯ ಮತ್ತು ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸಿ.ಶ್ರೀನಿವಾಸ್ ಮುಂತಾದವರು ಉಪಸ್ಥಿತರಿದ್ದರು.

Tags: chief minister basavaraj bommaichikkaballapuraMuddenahalliSathya Sai Gramasri madhusudan saiSri Sathya Sai Sarla Memorial Hospital
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
3 ದಿನ ಸಿಇಟಿ ಪರೀಕ್ಷೋತ್ಸವ

3 ದಿನ ಸಿಇಟಿ ಪರೀಕ್ಷೋತ್ಸವ

Leave a Reply Cancel reply

Your email address will not be published. Required fields are marked *

Recommended

ನೆಕ್ಸ್ಟ್ ಲೆವೆಲ್‌ಗೆ ರಾಜ್ಯದ ಪ್ರವಾಸೋದ್ಯಮ;‌ ನಂದಿ ಗಿರಿಧಾಮ ಸೇರಿ ಕೆಲ ಬೆಟ್ಟಗಳಿಗೆ ರೋಪ್‌ ವೇ, ಐದು ಕಡೆ ಹೆಲಿಪೋರ್ಟ್ & ಕುಡ್ಲದ ಸಮುದ್ರ ಕಿನಾರೆಯಲ್ಲಿ ಹಾರಲಿದೆ ಸೀ ಪ್ಲೇನ್

ವಿಜಯೇಂದ್ರ ಹಸ್ತಕ್ಷೇಪಕ್ಕೆ ಬಹಿರಂಗ ಸಡ್ಡು ಹೊಡೆದ ಸೈನಿಕ; ಸಿಎಂ ಹೆಸರಿನಲ್ಲಿ ಇನ್ನೊಬ್ಬರ ದರ್ಬಾರ್‌ ಸಹಿಸಲ್ಲ ಎಂದ ಸಿ.ಪಿ.ಯೋಗೀಶ್ವರ್‌

5 years ago
ಇಂದಿನ ಹೋರಾಟಗಳು ಪ್ರಚಾರಕ್ಕಾಗಿ, ಸುದ್ದಿಗಾಗಿ ಹಾಗೂ ಮನವಿ ಪತ್ರ ನೀಡುವುದಕ್ಕೆ ಸೀಮಿತ: ಜಿ.ವಿ.ಶ್ರೀರಾಮರೆಡ್ಡಿ

ಇಂದಿನ ಹೋರಾಟಗಳು ಪ್ರಚಾರಕ್ಕಾಗಿ, ಸುದ್ದಿಗಾಗಿ ಹಾಗೂ ಮನವಿ ಪತ್ರ ನೀಡುವುದಕ್ಕೆ ಸೀಮಿತ: ಜಿ.ವಿ.ಶ್ರೀರಾಮರೆಡ್ಡಿ

5 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ