• About
  • Advertise
  • Careers
  • Contact
Thursday, October 29, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home CHIKKABALLAPUR

ಚಿಕ್ಕಬಳ್ಳಾಪುರದಲ್ಲಿ ಅತ್ಯುತ್ತಮ ದರ್ಜೆಯ ಮಾದರಿ ಗೋಶಾಲೆ; ರಾಜ್ಯದಲ್ಲೇ ಮೊದಲು

cknewsnow desk by cknewsnow desk
August 28, 2021
in CHIKKABALLAPUR, STATE
Reading Time: 1 min read
1
ಚಿಕ್ಕಬಳ್ಳಾಪುರದಲ್ಲಿ ಅತ್ಯುತ್ತಮ ದರ್ಜೆಯ ಮಾದರಿ ಗೋಶಾಲೆ; ರಾಜ್ಯದಲ್ಲೇ ಮೊದಲು
1.1k
VIEWS
FacebookTwitterWhatsuplinkedinEmail

ಭೂಮಿಪೂಜೆ ನೆರೆವೇರಿಸಿದ ಸಚಿವ ಡಾ.ಕೆ.ಸುಧಾಕರ್

ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾನೂನು ಜಾರಿಯಾದ ಬಳಿಕ, ಗೋ ಸಂರಕ್ಷಣೆಗಾಗಿ ಚಿಕ್ಕಬಳ್ಳಾಪುರದಲ್ಲಿ ರಾಜ್ಯದಲ್ಲೇ ಮೊದಲ ಬಾರಿಗೆ ಮಾದರಿ ಗೋಶಾಲೆ ಸ್ಥಾಪನೆಗೆ ಚಾಲನೆ ದೊರೆತಿದೆ.

ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು, ಶನಿವಾರ ಶಿಡ್ಲಘಟ್ಟ ತಾಲೂಕಿನ ಬಶೆಟ್ಟಿಹಳ್ಳಿ ಹೋಬಳಿಯ ನಾಗರೆಡ್ಡಿಹಳ್ಳಿ ಬಳಿ ಪಶುಸಂಗೋಪನಾ ಇಲಾಖೆಯಿಂದ ನಿರ್ಮಿಸಲು ಉದ್ದೇಶಿಸಿರುವ ಗೋಶಾಲೆ ಕಾಮಗಾರಿಗೆ ಚಾಲನೆ ನೀಡಿದರು.

ಈ ಹಿಂದೆಯೇ ರಾಜ್ಯ ಸರಕಾರ ಗೋ ಸಂರಕ್ಷಣೆಗೆ ಆದ್ಯತೆ ನೀಡಿ ಕಠಿಣ ಕಾನೂನು ಜಾರಿ ಮಾಡಿದೆ. ಇದಕ್ಕೆ ಪೂರಕವಾಗಿ ಸಚಿವ ಡಾ.ಕೆ.ಸುಧಾಕರ್ ಅವರು ತಮ್ಮ ಜಿಲ್ಲೆಯಲ್ಲಿ ಗೋ ಸಂರಕ್ಷಣೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವ ಭಾರತೀಯ ಪರಂಪರೆ, ಸಾಂಪ್ರದಾಯಿಕ ಕೃಷಿಯನ್ನು ಕಾಪಾಡುವ ಕಾರ್ಯಕ್ಕೆ ಮುಂದಾಗಿದ್ದಾರೆ.

ಗೋ ಸಂರಕ್ಷಣೆಗಾಗಿ ರಾಜ್ಯ ಸರಕಾರ ಜಿಲ್ಲೆಗೊಂದರಂತೆ ಗೋಶಾಲೆ ಆರಂಭಿಸಲು 50 ಲಕ್ಷ ರೂ. ನಿಗದಿಪಡಿಸಿದೆ. ನಾಗರೆಡ್ಡಿಹಳ್ಳಿ ಗ್ರಾಮದ ಸರ್ವೆ ನಂ.41 ರಲ್ಲಿ 10 ಎಕರೆಯನ್ನು ಗೋಶಾಲೆಗೆ ಮೀಸಲಿಟ್ಟಿದ್ದು, 2021ರ ಅಕ್ಟೋಬರ್ 2ರೊಳಗಾಗಿ ಇದನ್ನು ನಿರ್ಮಿಸುವ ಗುರಿ ಹಾಕಿಕೊಳ್ಳಲಾಗಿದೆ. ಈಗಾಗಲೇ ಜಾರಿಯಲ್ಲಿರುವ ಕೊಟ್ಟಿಗೆ, ಕೃಷಿ ಹೊಂಡ, ಮೇವು ಉತ್ಪಾದನೆ ಮೊದಲಾದ ಯೋಜನೆಗಳನ್ನು ಒಂದು ಸೂರಿನಡಿ ಮಾಡಲು ಉದ್ದೇಶಿಸಲಾಗಿದೆ.

ಗೋಶಾಲೆಯ ಉಪ ಉತ್ಪನ್ನಗಳನ್ನು ಖಾದಿ ಗ್ರಾಮೋದ್ಯೋಗ, ಕೆಎಂಎಫ್ ಅಥವಾ ಕೆಎಪಿಎಲ್ʼನಿಂದ ಮಾರಾಟ ಮಾಡಿ, ಸಂಪನ್ಮೂಲ ಕ್ರೋಢೀಕರಣ ಮಾಡಲಾಗುತ್ತದೆ. ಗೋಶಾಲೆಯ ಸುಸ್ಥಿರತೆ, ನಿರ್ವಹಣೆಗೆ ಮೇವು ಬೆಳೆಯುವುದು, ಉತ್ಪನ್ನ ಮಾರಾಟ ಮಾಡಲು ಜಿಲ್ಲಾ ಪ್ರಾಣಿ ದಯಾ ಸಂಘಕ್ಕೆ ಅವಕಾಶ ನೀಡಲಾಗಿದೆ. ಒಂದು ವೇಳೆ ಸಾರ್ವಜನಿಕರು ಸ್ವಯಂ ಪ್ರೇರಣೆಯಿಂದ ಜಾನುವಾರುಗಳನ್ನು ನೋಡಿಕೊಳ್ಳಲು ಮುಂದೆ ಬಂದರೆ, ಅದಕ್ಕೂ ಅವಕಾಶವಿದೆ.

ರಾಜ್ಯದಲ್ಲಿ ಗೋಶಾಲೆಗಳ ನಿರ್ಮಾಣಕ್ಕಾಗಿ ಪ್ರತಿ ಜಿಲ್ಲೆಗೆ ಮೊದಲ ಹಾಗೂ ಎರಡನೇ ಕಂತು ಸೇರಿ 24 ಲಕ್ಷ ರೂ. ಅನುದಾನವನ್ನು ಸರಕಾರ ಬಿಡುಗಡೆ ಮಾಡಿದೆ. ಸರಕಾರ ಅಥವಾ ಸಂಸ್ಥೆಗಳಿಂದ ನಡೆಸುವ ಗೋಶಾಲೆಯಲ್ಲಿ ಪ್ರತಿ ಜಾನುವಾರು ವೆಚ್ಚ ದಿನಕ್ಕೆ 17.30 ರೂ. ನಿಗದಿಪಡಿಸಲಾಗಿದೆ. ಜಿಲ್ಲೆಯ ಒಟ್ಟು ಜಾನುವಾರು ಪೈಕಿ ಶೇ.0.75ರಷ್ಟು ಜಾನುವಾರುಗಳಿಗೆ ಸ್ಥಳಾವಕಾಶ ಲಭ್ಯವಿರುವುದನ್ನು ಖಚಿತಪಡಿಸಿಕೊಳ್ಳಬೇಕಾಗುತ್ತದೆ. 2018ರ ಗಣತಿ ಪ್ರಕಾರ ಜಿಲ್ಲೆಯಲ್ಲಿ 2,13,815 ದನಗಳು ಹಾಗೂ 26,397 ಎಮ್ಮೆಗಳಿವೆ.

ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಬಶೆಟ್ಟಿಹಳ್ಳಿ ಬಳಿ ₹2 ಕೋಟಿ ವೆಚ್ಚದಲ್ಲಿ ನಿರ್ಮಿಸಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರದ ಕಟ್ಟಡ ಕಾಮಗಾರಿಗೆ ಇಂದು ಭೂಮಿ ಪೂಜೆ ನೆರವೇರಿಸಲಾಯಿತು. ಮಾಜಿ ಸಚಿವ ಶ್ರೀ ಮುನಿಯಪ್ಪ, ಮಾಜಿ ಶಾಸಕ ಶ್ರೀ ರಾಜಣ್ಣ, ಜಿಲ್ಲಾಧಿಕಾರಿ ಶ್ರೀಮತಿ ಆರ್.ಲತಾ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು. pic.twitter.com/POhJJIADzm

— Dr Sudhakar K (Modi ka Parivar) (@DrSudhakar_) August 28, 2021

ಪ್ರಥಮ ಗೋಶಾಲೆ

“ಪ್ರತೀ ಜಿಲ್ಲೆಗೆ ಒಂದು ಗೋಶಾಲೆ ನಿರ್ಮಿಸಲಾಗುತ್ತಿದ್ದು, ಚಿಕ್ಕಬಳ್ಳಾಪುರದ ಈ ಗೋಶಾಲೆ ರಾಜ್ಯದಲ್ಲಿಯೇ ಪ್ರಥಮ ಗೋಶಾಲೆ ಆಗಲಿರುವುದು ಸಂತಸದ ವಿಷಯ ಎಂದು ಸಚಿವ ಡಾ.ಕೆ.ಸುಧಾಕರ್ ಹೇಳಿದರು.

“10 ಎಕರೆ ಪ್ರದೇಶದಲ್ಲಿ ಸುಮಾರು 50 ಲಕ್ಷ ವೆಚ್ಚದಲ್ಲಿ ಈ ಗೋಶಾಲೆ ನಿರ್ಮಾಣವಾಗಲಿದ್ದು, ವಯಸ್ಸಾದ, ರೋಗಗ್ರಸ್ಥ, ಅಂಗವಿಕಲ ಜಾನುವಾರುಗಳಿಗೆ ಮರು ವಸತಿ ಕಲ್ಪಿಸಲಿದೆ. ಗೋಶಾಲೆಯ ಉಪ ಉತ್ಪನ್ನಗಳಿಂದ ತಯಾರಿಸಿದ ವಸ್ತುಗಳಿಗೆ ಖಾದಿ ಗ್ರಾಮೋದ್ಯೋಗ, ಕೆಎಂಎಫ್ ಮೂಲಕ ಮಾರುಕಟ್ಟೆ ಕಲ್ಪಿಸಿ, ಸುಸ್ಥಿರ ಸಂಪನ್ಮೂಲದ ವ್ಯವಸ್ಥೆ ಮಾಡಲಾಗುವುದು” ಎಂದು ಸಚಿವರು ತಿಳಿಸಿದರು.

ಶಿಡ್ಲಘಟ್ಟ ಶಾಸಕ ವಿ.ಮುನಿಯಪ್ಪ, ಮಾಜಿ ಶಾಸಕ ರಾಜಣ್ಣ, ಜಿಲ್ಲಾಧಿಕಾರಿ ಆರ್.‌ಲತಾ, ಪೊಲೀಸ್‌ ವರಿಷ್ಠಾಧಿಕಾರಿ ಮಿಥುನ್‌ ಕುಮಾರ್‌ ಸೇರಿ ಜಿಲ್ಲೆಯ ವಿವಿಧ ಅಧಿಕಾರಿಗಳು ಹಾಜರಿದ್ದರು.

Chikkaballapura will be the first to implement GoK's first-of-its-kind initiative to establish GoShalas in every district.

The GoShalas will not only provide rehabilitation to sick and old aged cows but also facilitates marketing of by-products for self-sustenance of GoShalas. pic.twitter.com/nGe8ropaiD

— Dr Sudhakar K (Modi ka Parivar) (@DrSudhakar_) August 28, 2021

Tags: chikkaballapuradr k sudhakarGoShalakarnatakarehabilitation for cows
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

by cknewsnow desk
October 28, 2026
0

ಬೆಂಗಳೂರಿನಲ್ಲಿ 43.13% ಮತದಾರರ ಪ್ರಮಾಣ ಕುಸಿತ

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

by cknewsnow desk
October 25, 2026
0

ಹಾಲಿ ಮುಖ್ಯಮಂತ್ರಿ ವಿರುದ್ಧ ಕೇಂದ್ರ ಸಚಿವರ ಗಂಭೀರ ಆರೋಪ; ಈಗಿನ ಮಹಾನ್ ಮುಖ್ಯಮಂತ್ರಿಗಳೇ ಸ್ಟಿಂಗ್ ಮೂಲಪುರುಷ

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

by cknewsnow desk
October 25, 2026
0

ಸ್ಟಿಂಗ್ ಆಪರೇಶನ್ ಪ್ರಕರಣದಲ್ಲಿ ರಾಜ್ಯ ಸರ್ಕಾರದ್ದು ಇಬ್ಬಗೆ ನೀತಿ; ಕೇಂದ್ರ ಸಚಿವ ಪ್ರಲ್ಹಾದ ಜೋಶಿ ವಾಗ್ದಾಳಿ

ಸ್ಟಿಂಗ್ ವಿರುದ್ಧ ಕೋರ್ಟ್ ಮೊರೆ ಹೋದ ಸಿದ್ದರಾಮಯ್ಯ! ಇಂದು ಆದೇಶ ನಿರೀಕ್ಷೆ

ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

by cknewsnow desk
October 25, 2026
0

ಹೆಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ; #kpsc ಹಗರಣದ ದಿಕ್ಕು ತಪ್ಪಿಸಲು ಪ್ರಿಯಾಂಕ್ ಖರ್ಗೆ ಒದ್ದಾಟ

ಬೆಂಗಳೂರು ಸುತ್ತಲಿನ ಜನರ ಸಮಾಧಿ ಮೇಲೆ ಬ್ರ್ಯಾಂಡ್‌ ಬೆಂಗಳೂರು

10 ತಿಂಗಳಾದರೂ ಸಿಗದ ಭೂಮಿ; ರಾಜ್ಯದ ಕೈತಪ್ಪಲಿದೆಯಾ ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರ

by cknewsnow desk
October 22, 2026
0

ಬೇಸತ್ತು ಮುಖ್ಯಮಂತ್ರಿ ಡಿಕೆಶಿಗೆ ಪತ್ರ ಬರೆದ ಕೇಂದ್ರ ಸಚಿವ #HDK

ರಾಜೀನಾಮೆ ಕೊಟ್ಟು ಹೊರಬನ್ನಿ; ಅಪಮಾನಿತ ದಲಿತ ಸಚಿವರಿಗೆ #Jds ಕಿವಿಮಾತು

ರಾಜೀನಾಮೆ ಕೊಟ್ಟು ಹೊರಬನ್ನಿ; ಅಪಮಾನಿತ ದಲಿತ ಸಚಿವರಿಗೆ #Jds ಕಿವಿಮಾತು

by cknewsnow desk
October 22, 2026
0

ಮೈಸೂರು ದಸರಾದಲ್ಲಿ ಅವಮಾನ ಪ್ರಸಂಗ; ಬಾಯಲ್ಲಿ ಜಾತ್ಯತೀತ ತತ್ವ, ಆಚರಣೆಯಲ್ಲಿ ಅಸೃಶ್ಯತೆ!; ಕಾಂಗ್ರೆಸ್ ವಿರುದ್ಧ ಜೆಡಿಎಸ್ ವಾಗ್ದಾಳಿ

Next Post
ಬೂಟು ಬಿಚ್ಚದೆ ಗೋಶಾಲೆಗೆ ಭೂಮಿಪೂಜೆ! ಗಂಗಾಮಾತೆಗೂ ಆರತಿ!!

ಬೂಟು ಬಿಚ್ಚದೆ ಗೋಶಾಲೆಗೆ ಭೂಮಿಪೂಜೆ! ಗಂಗಾಮಾತೆಗೂ ಆರತಿ!!

Comments 1

  1. Pingback: ಬೂಟು ಬಿಚ್ಚದೆ ಗೋಶಾಲೆಗೆ ಭೂಮಿಪೂಜೆ! ಗಂಗಾಮಾತೆಗೂ ಆರತಿ!! - cknewsnow

Leave a Reply Cancel reply

Your email address will not be published. Required fields are marked *

Recommended

ನಮ್ಮ ದೇಶದಲ್ಲೇ ತಯಾರಾದ ಕೊರೊನಾ ಲಸಿಕೆ ಕುರಿತು ಅಗೌರವ ಬೇಡ; ಭಾರತ್ ಬಯೋಟೆಕ್ ನಂಬಿಕೆಗೆ ಅರ್ಹವಾದ ಕಂಪನಿ ಎಂದ ಡಾ.ಕೆ.ಸುಧಾಕರ್

ಜನವರಿ 16ರಂದು ಲಸಿಕೆ ವಿತರಣೆ; ಕೊಟ್ಟ ಲಸಿಕೆ ಪಡೆಯಬೇಕು, ಅದೇ ಬೇಕು-ಇದೇ ಬೇಕೆಂದು ಡಿಮಾಂಡ್‌ ಮಾಡುವಂತಿಲ್ಲ

6 years ago
ದತ್ತೋಪಂತ ಠೇಂಗಡಿ ಹೇಳಿದ ಬಂಗಾರದಂಥ ಮಾತುಗಳನ್ನು ಮರೆತ ಯಡಿಯೂರಪ್ಪ ಟೀಂ; ಎ.ಕೆ.ಗೋಪಾಲನ್‌ ಮಾತು ಅಲಕ್ಷಿಸಿ ಕಮ್ಯುನಿಸ್ಟರು ಹಾಳಾದರು, ಇತಿಹಾಸದಿಂದ  ಪಾಠ ಕಲಿಯದ ಬಿಜೆಪಿಗರು!!

ದತ್ತೋಪಂತ ಠೇಂಗಡಿ ಹೇಳಿದ ಬಂಗಾರದಂಥ ಮಾತುಗಳನ್ನು ಮರೆತ ಯಡಿಯೂರಪ್ಪ ಟೀಂ; ಎ.ಕೆ.ಗೋಪಾಲನ್‌ ಮಾತು ಅಲಕ್ಷಿಸಿ ಕಮ್ಯುನಿಸ್ಟರು ಹಾಳಾದರು, ಇತಿಹಾಸದಿಂದ ಪಾಠ ಕಲಿಯದ ಬಿಜೆಪಿಗರು!!

5 years ago

Popular News

  • #SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

    #SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

    0 shares
    Share 0 Tweet 0
  • ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

    0 shares
    Share 0 Tweet 0
  • ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

    0 shares
    Share 0 Tweet 0
  • ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

    0 shares
    Share 0 Tweet 0
  • 10 ತಿಂಗಳಾದರೂ ಸಿಗದ ಭೂಮಿ; ರಾಜ್ಯದ ಕೈತಪ್ಪಲಿದೆಯಾ ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರ

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

October 28, 2026
ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

October 25, 2026
ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

October 25, 2026
ಸ್ಟಿಂಗ್ ವಿರುದ್ಧ ಕೋರ್ಟ್ ಮೊರೆ ಹೋದ ಸಿದ್ದರಾಮಯ್ಯ! ಇಂದು ಆದೇಶ ನಿರೀಕ್ಷೆ

ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

October 25, 2026

Covid 19

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

October 16, 2026
ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ