• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home GUEST COLUMN

ಸಮಷ್ಟಿಯ ಸುಖವನ್ನು ಬಯಸುವ ಶ್ರೀಕೃಷ್ಣ ಜಯಂತಿ

cknewsnow desk by cknewsnow desk
August 30, 2021
in GUEST COLUMN, STATE
Reading Time: 1 min read
0
ಸಮಷ್ಟಿಯ ಸುಖವನ್ನು ಬಯಸುವ ಶ್ರೀಕೃಷ್ಣ ಜಯಂತಿ
1k
VIEWS
FacebookTwitterWhatsuplinkedinEmail
ಎಲ್ಲರೂ ನಮ್ಮವನು ಎಂದು ನಂಬಿ ನಡೆದುಕೊಳ್ಳುವ ಕೃಷ್ಣಾಷ್ಟಮಿ ಇಂದು. ಅಂದರೆ, ಶ್ರೀಕೃಷ್ಣನ ಹುಟ್ಟಿದ ಹಬ್ಬ. ಪರಮ ಪುರುಷನು, ಲೋಕಪೂಜಿತನೂ ಆದ ಕೃಷ್ಣನ ಬಗ್ಗೆ ಹಾಗೂ ಅಷ್ಟಮಿ ಬಗ್ಗೆ ನಮ್ಮಅಂಕಣಕಾರ ಡಾ.ಗುರುಪ್ರಸಾದ್‌ ರಾವ್‌ ಹವಲ್ದಾರ್‌ ಬರೆದಿದ್ದಾರೆ.

ಐದು ಸಾವಿರ ವರ್ಷಗಳ ಹಿಂದೆ ಕಾಣಿಸಿಕೊಂಡು ಮಾನವನಂತೆ ನಡೆದು ದೈವತ್ವಕ್ಕೇರಿ ಜನಮಾನಸದಲ್ಲಿ ನೆಲೆಯಾದವನು ಅಲ್ಲದೇ ಪರಮ ಪುರುಷನಾಗಿ ಉಳಿದುಕೊಂಡವನು.

ಕೃಷ್ಣ ಎಂದರೆ ಏನೋ ಸೆಳೆತ, ಸಂಭ್ರಮ, ಸಡಗರ, ಸಂತೋಷ, ಆತ್ಮೀಯತೆ, ನಮ್ಮವನೆಂಬ ವ್ಯಾಮೋಹ ಸಹಜವಾಗಿ ಆವರಿಸುತ್ತದೆ. ಶೋಷಿತರ ಪಕ್ಷಪಾತಿಯಾಗಿ, ಸಮಷ್ಟಿಯ ಸುಖವನ್ನು ಬಯಸಿದ ಶ್ರೀಕೃಷ್ಣ ‘ಅವನ ಲೀಲಾ ವಿನೋದಗಳನ್ನು ಕೀರ್ತನೆಗಳನ್ನು ಭಜನಾರೂಪದಲ್ಲಿ ಹಾಡುವ ಸಂದರ್ಭವೇ ಶ್ರೀಕೃಷ್ಣ ಜನ್ಮಾಷ್ಟಮಿ.

ಈ ಪರಮಪುರುಷ ವಾಸುದೇವನನ್ನು ಕಾಯಾವಾಚಾಮನಸಾ ನಮ್ಮನ್ನು ನಾವು ಸಮರ್ಪಿಸಿಕೊಂಡು ಅವನಿಗೆ ಅರ್ಪಿಸುವ ಕಲೆಯೇ ಕೃಷ್ಣ ಪ್ರಜ್ಞೆ. ಇಂತಹ ಜಗದೋದ್ಧಾರಕನ ಜನ್ಮದಿನವಾದ ಶ್ರಾವಣ ಮಾಸದ ಕೃಷ್ಣ ಅಷ್ಟಮಿಯ ದಿನವನ್ನು ಶ್ರೀಕೃಷ್ಣ ಜನ್ಮಾಷ್ಟಮಿ ರೂಪದಲ್ಲಿ ಆಚರಿಸಲಾಗುತ್ತದೆ.

ಪ್ರತಿಯೊಬ್ಬರ ಹೃದಯ ಕಮಲದಲ್ಲಿ ನೆಲೆನಿಂತ ಯೋಗೇಶ್ವರ ಶ್ರೀಕೃಷ್ಣ ಜಗತ್ತಿಗೆ ಗೀತೋಪದೇಶ ನೀಡಿದವನು. ಶ್ರೀಕೃಷ್ಣ ಪರಮಾತ್ಮನ ಗೀತಾಶಾಸ್ತ್ರವನ್ನು ಓದುವ ಹಾಗೂ ಕೇಳುವವರ ಪುಣ್ಯವನ್ನು ಹೆಚ್ಚಿಸುವಂತಹುದು. ಸಮಸ್ತ ದುಃಖಗಳನ್ನು ದೂರ ಮಾಡುವವನು.

ಮನೆ, ಮಡದಿ, ಮಕ್ಕಳು, ಸಂಪತ್ತು ಇವುಗಳಲ್ಲಿ ಯಾವುದೂ ಶಾಶ್ವತವಾದುದದಲ್ಲ. ಶಾಶ್ವತ ಸುಖವು ನಮಗೆ ದೊರೆಯಬೇಕಾದರೆ ನಮ್ಮನ್ನು ನಾವು ಕೃಷ್ಣ ಪರಮಾತ್ಮನಿಗೆ ಒಪ್ಪಿಸಿಕೊಳ್ಳಬೇಕು. ಅನಂತ ಗುಣ ಪರಿಪೂರ್ಣನಾದ ಸಕಲ ದೋಷ ವಿವರ್ಜಿತನಾದ ಶ್ರೀಕೃಷ್ಣನ ಕಾರುಣ್ಯಕ್ಕೆ ಪಾತ್ರರಾಗಲು ನಮಗೆ ಬೇಕಿರುವುದು ನಿರ್ಮಲ ಭಕ್ತಿ. ದೀನ ದಲಿತರ ಮೇಲೆ ತೋರುವ ಕರುಣೆ, ಸಮಾನರಲ್ಲಿ ತೋರುವ ಪ್ರೀತಿ, ಹಿರಿಯರಲ್ಲಿ ಮಾಡುವ ಭಕ್ತಿ ಆ ಶ್ರೀಕೃಷ್ಣನಿಗೇ  ಸಲ್ಲುತ್ತದೆ.

‘ಆಡಿಸಿದಳೆಶೋದೆ ಜಗದೋದ್ಧಾರನ’ ಎಂಬುದಾಗಿ ಯಶೋದೆಯ ಮಾತೃಪ್ರೇಮವನ್ನು ಮತ್ತು ‘ದಾಸನ ಮಾಡಿಕೊ ಎನ್ನ …’ ಪುರಂದರದಾಸರು ಹೇಳಿದರೆ, ಕನಕದಾಸರು ‘ದಾಸ ದಾಸರ ಮನೆಯ ದಾಸಿಯರ ಮಗ ನಾನು’ ಎಂದು ಕೃಷ್ಣನಲ್ಲಿ ನಿವೇದನೆ ಮಾಡಿಕೊಳ್ಳುತ್ತಾರೆ. ‘ಎಲ್ಲಾಡಿ ಬಂದ್ಯೊ ಎನ್ನ ರಂಗಯ್ಯ! ಎನ್ನ ಕಣ್ಣ ಮುಂದಾಡದೆ..’  ಎಂಬುದಾಗಿ ಮಹಿಪತಿದಾಸರು ಶ್ರೀಕೃಷ್ಣನನ್ನು ಪ್ರಶ್ನಿಸಿದರೆ, ಶ್ರೀಪಾದರಾಯರು  ಯಶೋದೆಯು ಕೇಳುವಂತೆ ‘ಬೆರಳ ಉಂಗುರವೆಲ್ಲಿ ಹೋಗಿದೆ? ನಿನ್ನ ಕೊರಳ ಪದಕವೆಲ್ಲಿ ನೀಗಿದೆ? ಕಳ್ಳತನವ ಹೀಗೆ ಮಾಡಿದೆ ನಿನ್ನ ಸುಳ್ಳು ಕಡೆಗೆ ನಾ ನೋಡಿದೆ’ ಪ್ರಶ್ನಿಸುವಂತಾಗಿದೆ. ಇಲ್ಲವೇ ‘ಪೋಗದಿರೆಲೋ ರಂಗ, ಬಾಗಿಲಿಂದಾಚೆ ಭಾಗವತರು ಬಂದು ಕರೆದೆತ್ತಿಕೊಂಡೊಯ್ಯುವರೋ’ ಎಂದು ಆತಂಕವೂ ದಾಸರೊಳಗಿನ ಪದದಲ್ಲಿ ಇದೆ. ಶ್ರೀಕೃಷ್ಣನ ಹೆಸರಲ್ಲಿ ರಚಿಸಿದ ಅಷ್ಟೂ ಹಾಡುಗಳಲ್ಲಿ ನಾವು ಶ್ರೀಕೃಷ್ಣ ವ್ಯಕ್ತಿತ್ವವನ್ನು ಕಣ್ತುಂಬಿಕೊಳ್ಳಬಹುದು.

ಕೃಷ್ಣಂ ನಾರಾಯಣಂ ವಂದೇ ಕೃಷ್ಣಂ ವಂದೇ ವ್ರಜಪ್ರಿಯಮ್||

ಕೃಷ್ಣಂ ದ್ವೈಪಾಯನಂ ವಂದೇ ಕೃಷ್ಣಂ ವಂದೇ ಪ್ರಧಾಸುತಮ್||

ಜಗತ್ತಿನ ಉತ್ಪತ್ತಿ, ಸ್ಥಿತಿ, ವಿನಾಶ ಮಾಡಬಲ್ಲ ಹಾಗೂ ಆಧ್ಯಾತ್ಮಿಕ, ಆದಿ ದೈವಿಕ, ಆದಿ ಭೌತಿಕ ತ್ರಿತಾಪಗಳನ್ನು ನಾಶಮಾಡುವಂತಹಾ ಸಚ್ಚಿದಾನಂದ ಸ್ವರೂಪನಾದವನು..

ಮನ್ವಂತರಾಧಿಪ, ಜಗದಧಿಪತಿ, ಗೀತಾಬೋಧಕ, ಪರಮಪಾವನ ಪರಮಾತ್ಮನು ಮನುಜರೂಪದಲ್ಲಿ ಈ ಧರೆಗಿಳಿದ ಮಂಗಲ ದಿನವನ್ನು ಶ್ರೀಕೃಷ್ಣ ಜನ್ಮಾಷ್ಟಮಿಯ ಭಗವಾನ್ ಶ್ರೀಕೃಷ್ಣನಿಗೆ ನಮಸ್ಕರಿಸೋಣ.


ಡಾ.ಗುರುಪ್ರಸಾದ ಹವಲ್ದಾರ್

  • ಮೂಲತಃ ಉಪನ್ಯಾಸಕರು. ಬಳ್ಳಾರಿ ಜಿಲ್ಲೆಯ ಹೊಸಪೇಟೆ ತಾಲ್ಲೂಕಿನ ಮರಿಯಮ್ಮನ ಹಳ್ಳಿಯವರು. ಪ್ರಸ್ತುತ ಹಗರಿಬೊಮ್ಮನಹಳ್ಳಿ ಜಿವಿಪಿಪಿ ಪದವಿ ಕಾಲೇಜನಲ್ಲಿ ಕನ್ನಡ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತ ಜೊತೆಗೆ ಪತ್ರಿಕೆಗಳಿಗೆ ವೆಬ್ ನ್ಯೂಸ್ ಪೋಟ್೯ಲ್ ಗಳಿಗೆ ಲೇಖನ ಬರೆಯುತ್ತಿದ್ದಾರೆ.
Tags: indiakarnatakalord krishnasri krishnasrikrishna janmashtamisrikrishna jayanthi
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಗ್ಯಾಂಗ್ ರೇಪ್ ಗ್ಯಾಂಗ್ʼನಲ್ಲಿ ವಿಕೃತಕಾಮಿ

ಗ್ಯಾಂಗ್ ರೇಪ್ ಗ್ಯಾಂಗ್ʼನಲ್ಲಿ ವಿಕೃತಕಾಮಿ

Leave a Reply Cancel reply

Your email address will not be published. Required fields are marked *

Recommended

ಸರಕಾರಕ್ಕೆ ಸಂಚಕಾರ; ಹೆಚ್.ಡಿ.ಕುಮಾರಸ್ವಾಮಿ, ಯೋಗಿ ಹೇಳಿಕೆಯಿಂದ ಕಾಂಗ್ರೆಸ್‌ನಲ್ಲಿ ತಳಮಳ

ಪರಪಕ್ಷಗಳ ಶಾಸಕರ ಮೇಲೆ ಕಣ್ಣು; ಆಪರೇಷನ್ ಕಮಲಕ್ಕೂ ಮುನ್ನವೇ ಆಪರೇಷನ್ ಹಸ್ತ

2 years ago
ಹೆಚ್.ಡಿ.ಕುಮಾರಸ್ವಾಮಿ ರಾಜಕೀಯ ವಿಲನ್

ಹೆಚ್.ಡಿ.ಕುಮಾರಸ್ವಾಮಿ ರಾಜಕೀಯ ವಿಲನ್

3 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ