• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home CHIKKABALLAPUR

ಗುಡಿಬಂಡೆ ಹೊಂಗೆ ಉದ್ಯಾನವನಕ್ಕೆ ಮತ್ತೆ ಒಳ್ಳೆಯ ಕಾಲ

cknewsnow desk by cknewsnow desk
August 31, 2021
in CHIKKABALLAPUR, STATE
Reading Time: 2 mins read
0
ಗುಡಿಬಂಡೆ ಹೊಂಗೆ ಉದ್ಯಾನವನಕ್ಕೆ ಮತ್ತೆ ಒಳ್ಳೆಯ ಕಾಲ
1.1k
VIEWS
FacebookTwitterWhatsuplinkedinEmail

ಪಟ್ಟಣ ಪಂಚಾಯಿತಿ & ಪೊಲೀಸ್‌ ಅಧಿಕಾರಿಗಳ ಭೇಟಿ: ಇದು ಸಿಕೆನ್ಯೂಸ್‌ ನೌ ಫಲಶ್ರುತಿ

by GS Bharath Gudibande

ಗುಡಿಬಂಡೆ: ಮಕ್ಕಳು, ಮಹಿಳೆಯರು ಮಾತ್ರವಲ್ಲದೆ, ಇಡೀ ಪಟ್ಟಣದ ಜನ ಹಾಗೂ ಪ್ರವಾಸಿಗರಿಗೂ ನೆಚ್ಚಿನ ತಾಣವಾಗಿದ್ದ ಇಲ್ಲಿನ ಹೊಂಗೆ ಉದ್ಯಾನವನದತ್ತ ಕೊನೆಗೂ ಅಧಿಕಾರಿಗಳ ನೋಟ ಹರಿದಿದೆ.

ಕುಡುಕರ ಅಡ್ಡೆಯಾಗಿ ಪಾಳುಬಿದ್ದಿದ್ದ ಉದ್ಯಾನವನದ ಕಳೆಗೆಟ್ಟ ದೃಶ್ಯಗಳೊಂದಿಗೆ ಸಿಕೆನ್ಯೂಸ್ ನೌ ಪ್ರಕಟಿಸಿದ ವರದಿಗೆ ಫಲ ಸಿಕ್ಕಿದ್ದು, ಪಟ್ಟಣ ಪಂಚಾಯಿತಿ ಸಿಬ್ಬಂದಿ ಸ್ವಚ್ಛಗೊಳಿದ್ದಾರೆ.

ಜೆಎಂಎಫ್‌ಸಿ ನ್ಯಾಯಾಲಯ ಎದುರು, ಶ್ರೀ ವೈದ್ಯನಾಥೇಶ್ವರ ದೇವಾಲಯದ ತಪ್ಪಲಿನಲ್ಲಿರುವ ಉದ್ಯಾನವನವನ್ನು ಕಳೆದ 10 ವರ್ಷಗಳಿಂದ ಪಟ್ಟಣದ ಪರಿಸರ ಪ್ರೇಮಿಗಳು ಹೊಂಗೆ ಗಿಡಗಳನ್ನು ನೆಟ್ಟು ಬೆಳೆಸಿದ್ದರು. ಈಗ ಗಿಡಗಳು ಮರಗಳಾಗಿ ಬೆಳೆದು ನಿಂತಿದ್ದು, ಬಂದವರಿಗೆ ನೆರಳು ನೀಡಿ ಪೊರೆಯುತ್ತಿವೆ.

ಬೆಳಗ್ಗೆ ಮತ್ತು ಸಂಜೆಯ ವಾಯುವಿಹಾರಿಗಳ ಪಾಲಿಗೆ ನೆಚ್ಚಿನ ತಾಣವಾಗಿದ್ದ ಇಲ್ಲಿ ಪ್ರಾಣಯಾಮ, ಲಘು ವ್ಯಾಯಾಮ ಮಾಡಲು ಯೋಗ್ಯವಾಗಿತ್ತು. ಹೊಂಗೆ ಮಿಶ್ರಿತ ಗಾಳಿಯಲ್ಲಿ ಎಲ್ಲರೂ ವಿಹರಿಸುತ್ತಿದ್ದರು. ಅಲ್ಲದೆ, ಅಮಾನಿ ಭೈರಸಾಗರದ ತಪ್ಪಲಿನಲ್ಲಿರುವ ಈ ಉದ್ಯಾನದಲ್ಲಿ ಬೆಳಗ್ಗೆ-ಸಂಜೆ ಕೂರುವುದೆಂದರೆ ಅದೊಂದು ಅವರ್ಣನೀಯ ಅನುಭವವಾಗಿತ್ತು ಎನ್ನುತ್ತಾರೆ ಪಟ್ಟಣದ ನಿವಾಸಿಗಳು.

ಇಂಥ ಉದ್ಯಾನವನವನ್ನು ಪಟ್ಟಣ ಪಂಚಾಯಿತಿ ಸರಿಯಾಗಿ ನಿರ್ವಹಣೆ ಮಾಡದ ಕಾರಣ ಹಾಳಾಗಿತ್ತು. ಎಲ್ಲಡೆ ಹುಲ್ಲು, ಗಿಡಗಂಟೆ ಬೆಳೆದು ಮಕ್ಕಳು, ಮಹಿಳೆಯರು ಹಾಗೂ ವಾಯುವಿಹಾರಿಗಳು ಬರುವುದಕ್ಕೆ ಆತಂಕಪಡುವ ಸ್ಥಿತಿ ನಿರ್ಮಾಣವಾಗಿತ್ತು. ಅಲ್ಲದೆ, ಪುಂಡು ಪೋಕರಿಗಳ ಅಡ್ಡೆಯಾಗಿ ಬದಲಾಗಿ, ಅಲ್ಲಿಯೇ ತ್ಯಾಜ್ಯವೆಲ್ಲ ತುಂಬಿ ಕೊಳಕಾಗಿತ್ತು.

CkNewsNow ಇಂಪ್ಯಾಕ್ಟ್

ಸಾರ್ವಜನಿಕರು ಹಾಗೂ ಪರಿಸರ ಪ್ರೇಮಿಗಳ ದೂರಿನ ಮೇಲೆ ಸಿಕೆನ್ಯೂಸ್ ನೌ ಉದ್ಯಾನವನದ ಹಾಳು ಸ್ಥಿತಿಯನ್ನು ಅಗಸ್ಟ್ 29ರಂದು ಸವಿವರವಾಗಿ ವರದಿ ಮಾಡಿತ್ತು. ಈ ವರದಿಗೆ ಸ್ಪಂದಿಸಿದ ಪಟ್ಟಣ ಪಂಚಾಯಿತಿ ಅಧಿಕಾರಿಗಳು ಕೂಡಲೇ ಉದ್ಯಾನವನದ ಸ್ವಚ್ಚತಾ ಕಾರ್ಯವನ್ನು ಮಾಡಿದ್ದಾರಲ್ಲದೆ, ಸಮಗ್ರ ನಿರ್ವಹಣೆಗೆ ಮುಂದಾಗಿದ್ದಾರೆ.

ಈ ಸುದ್ದಿಯನ್ನು ಓದಲು ಕೆಳಗಿನ ಲಿಂಕ್‌ ಕ್ಲಿಕ್‌ ಮಾಡಿ..
ಕುಡುಕರ ಅಡ್ಡೆಯಾದ ಗುಡಿಬಂಡೆ ಹೊಂಗೆ ಉದ್ಯಾನವನ




ಪಟ್ಟಣದಲ್ಲಿ ಸ್ವಚ್ಚತೆಯನ್ನು ಕಾಪಾಡುತ್ತಿರುವ ಪಪಂ ಅಧಿಕಾರಿಗಳು ಮತ್ತು ಪೌರ ಕಾರ್ಮಿಕರಿಗೆ ಧನ್ಯವಾದಗಳು. ಪಟ್ಟಣದ ಹಲವು ಉದ್ಯಾನವನಗಳನ್ನು ಸರಿಯಾಗಿ ನಿರ್ವಹಣೆ ಮಾಡುವ ಜವಾಬ್ದಾರಿ ಪಟ್ಟಣ ಪಂಚಾಯಿತಿ ಮೇಲಿದೆ. ಇನ್ನು ಮುಂದೆಯಾದರೂ ಎಲ್ಲ ಉದ್ಯಾನವನಗಳನ್ನು ಸಮರ್ಪಕವಾಗಿ ನಿರ್ವಹಣೆ ಮಾಡಬೇಕು.

ಜಿ.ಎನ್.ನವೀನ್, ಪರಿಸರ ಪ್ರೇಮಿ, ಗುಡಿಬಂಡೆ

ಪಟ್ಟಣದ ಸಾರ್ವಜನಿಕರು, ಪ್ರವಾಸಿಗರಿಗೆ ಅನುಕೂಲವಾಗಲಿ ಎಂದು ಪಪಂ ಹಲವು ಭಾರಿ ಸ್ವಚ್ಚತೆ ಮಾಡುತ್ತಾ ಬಂದಿದೆ, ಆದರೆ, ಸಂಜೆ ವೇಳೆ ಕುಡುಕರಿಂದ ಉದ್ಯಾನವನ ಹಾಳಾಗುತ್ತಿದೆ. ಪೊಲೀಸರು ಸಂಜೆ ವೇಳೆ ಗಸ್ತು ಹೋಗುವ ಮೂಲಕ ಪುಂಡರಿಗೆ ಎಚ್ಚರಿಕೆ ನೀಡಬೇಕು.

ಶಿವಣ್ಣ, ಆರೋಗ್ಯ ನಿರೀಕ್ಷಕ, ಪಟ್ಟಣ ಪಂಚಾಯಿತಿ
Tags: chikkaballapuracrimeenvironmentgudibandehonge parkpolicepublic parktree
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ksrtc ಬಸ್ಸಿನಲ್ಲಿ ಕೋಳಿಗೂ ಟಿಕೆಟ್!

ksrtc ಬಸ್ಸಿನಲ್ಲಿ ಕೋಳಿಗೂ ಟಿಕೆಟ್!

Leave a Reply Cancel reply

Your email address will not be published. Required fields are marked *

Recommended

ಕರ್ನಾಟಕ ಭಾರತದ ಬಯೋಟೆಕ್ನಾಲಜಿ ರಾಜಧಾನಿ ಎಂದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಕರ್ನಾಟಕ ಭಾರತದ ಬಯೋಟೆಕ್ನಾಲಜಿ ರಾಜಧಾನಿ ಎಂದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

5 years ago
ದಿನ 2: ಸಿಇಟಿ ಪರೀಕ್ಷೆ ಸುಖಾಂತ್ಯ

ಸಿಇಟಿ ಕೌನ್ಸೆಲಿಂಗ್: ಜನವರಿ 15ರವರೆಗೆ ಕಾಲಾವಕಾಶ ನೀಡುವಂತೆ ಕೋರಿ ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಲಿಗೆ ಪತ್ರ ಬರೆದ ಸರಕಾರ

5 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ