• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home EDITORS'S PICKS

ಅರುಣ್ ಸಿಂಗ್ ಕೈತಪ್ಪಲಿದೆ ರಾಜ್ಯ ಬಿಜೆಪಿ ಉಸ್ತುವಾರಿ?

P K Channakrishna by P K Channakrishna
September 2, 2021
in EDITORS'S PICKS, POLITICS, STATE
Reading Time: 1 min read
0
ಬಿಜೆಪಿಯಲ್ಲಿ ಬೇಗುದಿಗೆ ಎಣೆ ಇಲ್ಲ; ಉಸ್ತುವಾರಿ ಅರುಣ್‌ ಸಿಂಗ್‌ ಅವರ ವಿರುದ್ಧವೇ ಹೊಗೆಯಾಡುತ್ತಿದೆ ಅತೃಪ್ತಿ

ಅರುಣ್‌ ಸಿಂಗ್‌

996
VIEWS
FacebookTwitterWhatsuplinkedinEmail

ಉಸ್ತುವಾರಿ ವಿರುದ್ಧವೇ ಸೇಡು ತೀರಿಸಿಕೊಳ್ಳಲು ಮುಂದಾದರಾ ಹಳೇ ರೆಬೆಲ್‌ಗಳು?

ಬೆಂಗಳೂರು/ನವದೆಹಲಿ: ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್‌ ಸಿಂಗ್‌ ಅವರನ್ನು ಬದಲಾಯಿಸುವ ಸಾಧ್ಯತೆ ಇದೆ. ರಾಜ್ಯ ಬಿಜೆಪಿ ಪಾಳೆಯದಲ್ಲಿ ಈ ಸುದ್ದಿ ಜೋರಾಗಿದೆ.

ಸದ್ಯಕ್ಕೆ ರಾಜ್ಯದಲ್ಲಿ ಕಳೆದ ಮೂರು ದಿನಗಳಿಂದ ಮೈಸೂರು, ಹಾಸನ ಸೇರಿದಂತೆ ಹಲವು ಜಿಲ್ಲೆಗಳಿಗೆ ಅವರು ಭೇಟಿ ನೀಡುತ್ತಿದ್ದು, ಪಕ್ಷದ ಮುಖಂಡರು, ಕಾರ್ಯಕರ್ತರನ್ನು ಭೇಟಿಯಾಗುತ್ತಿದ್ದಾರೆ. ಅವರ ದಿಢೀರ್‌ ಸಕ್ರಿಯತೆ ಬಗ್ಗೆ ಎಲ್ಲರಿಗೂ ಅಚ್ಚರಿ ಉಂಟಾಗಿದ್ದು, ನಿರ್ಗಮನಕ್ಕೆ ಮೊದಲು ಸಿಂಗ್‌ ಮಿಂಚಲು ಹೊರಟಿದ್ದಾರಾ ಎನ್ನುವ ಪ್ರಶ್ನೆ ಎದ್ದಿದೆ.

ಇಂದು ಬೆಳಗ್ಗೆ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಅವರನ್ನು ಭೇಟಿಯಾಗಿದ್ದ ಸಿಂಗ್‌ ಉಪಾಹಾರ ಸೇವಿಸುವ ನೆಪದಲ್ಲಿ ಬಹಳ ಹೊತ್ತು ಮಾತುಕತೆ ನಡೆಸಿದ್ದಾರೆ. ಇವರಿಗೂ ಮುನ್ನ ರಾಜ್ಯದ ವಿವಿಧ ನಾಯಕರನ್ನು ಅವರು ಭೇಟಿಯಾಗಿದ್ದಾರೆ.

ಈ ಹಿಂದೆಯೇ ಹಿರಿಯ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಸೇರಿದಂತೆ ಯಡಿಯೂರಪ್ಪ ವಿರೋಧಿ ಗುಂಪಿನಲ್ಲಿ ಗುರುತಿಸಿಕೊಂಡಿದ್ದ ನಾಯಕರ ವಿರೋಧ ಕಟ್ಟಿಕೊಂಡಿದ್ದ ಅರುಣ್‌ ಸಿಂಗ್‌ ವಿರುದ್ಧ ಅನೇಕ ದೂರುಗಳು ಪಕ್ಷದ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಹಾಗೂ ಗೃಹ ಸಚಿವ ಅಮಿತ್‌ ಶಾ ಅವರಿಗೂ ಹೋಗಿದ್ದವು.

ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದಾಗ ಅರುಣ್‌ ಸಿಂಗ್‌ ಒಂದೇ ಕಡೆ ವಾಲಿದ್ದರು. ನಮ್ಮ ಅಭಿಪ್ರಾಯಕ್ಕೆ ಕಿಮ್ಮತ್ತು ಕೊಡುತ್ತಿರಲಿಲ್ಲ. ಹೀಗಾಗಿ ಅವರನ್ನು ರಾಜ್ಯ ಪ್ರಭಾರಿ ಹೊಣೆಯಿಂದ ಬದಲಾಯಿಸಬೇಕು ಎಂದು ಯತ್ನಾಳ್‌ ಬಹಿರಂಗವಾಗಿಯೇ ಒತ್ತಾಯ ಮಾಡಿದ್ದರು. ಇದನ್ನು ಮನಸ್ಸಿನಲ್ಲಿ ಇಟ್ಟುಕೊಂಡಿದ್ದ ಸಿಂಗ್‌ ಕಳೆದ ಜುಲೈನಲ್ಲಿ ಬಿಜೆಪಿ ಶಾಸಕರ ಜತೆ ನಡೆಸಿದ ಚರ್ಚೆಯ ವೇಳೆ ಯತ್ನಾಳ್‌ ಭೇಟಿಗೆ ನಿಗದಿಯಾಗಿದ್ದ ಸಭೆಯನ್ನು ಕೊನೆ ಕ್ಷಣದಲ್ಲಿ ರದ್ದು ಮಾಡಿ ಸೇಡು ತೀರಿಸಿಕೊಂಡಿದ್ದರು.

ಅರುಣ್‌ ಸಿಂಗ್‌ ಈ ನಡೆಯ ಬಗ್ಗೆ ಯತ್ನಾಳ್‌ ಕೂಡ ಅಷ್ಟೇ ತೀವ್ರವಾಗಿ ಟೀಕೆ ಮಾಡಿದ್ದರಲ್ಲದೆ, ಬಂಡಾಯ ಗುಂಪಿನಲ್ಲಿ ಗುರುತಿಸಿಕೊಂಡಿದ್ದವರೂ  ಕೂಡ ಸಿಂಗ್‌ ನಡೆಯಲ್ಲಿ ತಪ್ಪು ಹುಡುಕಿ ಕಟುವಾಗಿ ಟೀಕಿಸಿದ್ದರು. ಹೀಗಾಗಿ ರಾಜ್ಯದಲ್ಲಿ ಸ್ವತಃ ಸಿಂಗ್‌ ವಿರುದ್ಧವೇ ಅತೃಪ್ತಿ ಹೊಗೆಯಾಡುತ್ತಿದೆ. ರಾಜಿ ಮಾಡಿಸಲೆಂದು ರಾಜ್ಯಕ್ಕೆ ಬಂದು ರಾಜಾಹುಲಿ ಪರ ನಿಂತ ಸಿಂಗ್‌ʼಗೆ ಬುದ್ಧಿ ಕಲಿಸಲೇಬೇಕೆಂದು ಹಲೆಯ ರೆಬೆಲ್‌ಗಳು ಈಗ ಸ್ಕೆಚ್‌ ಹಾಕಿ ಕೂತಿದ್ದಾರೆ.

ಇನ್ನೊಂದೆಡೆ, ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾದ ಮೇಲೆಯೂ ಸಿಂಗ್‌ ವರಸೆ ಬದಲಾಗಿಲ್ಲ. ಸಮಯ ಸಿಕ್ಕಾಗಲೆಲ್ಲ ಅವರು ಯಡಿಯೂರಪ್ಪ ಮತ್ತು ಅವರ ಪುತ್ರ ವಿಜಯೇಂದ್ರ ಪರವಾಗಿ ಬ್ಯಾಟಿಂಗ್‌ ಮಾಡುತ್ತಿರುವುದು ಪಕ್ಷದ ಹಿರಿಯರಿಗೆ ಇಷ್ಟವಾಗುತ್ತಿಲ್ಲ. ಅರುಣ್‌ ಸಿಂಗ್‌ ನೀಡುತ್ತಿರುವ ಹೇಳಿಕೆಗಳಿಂದ ಪಕ್ಷಕ್ಕೆ ಹಾನಿಯಾಗುವ ಸಾಧ್ಯತೆಯೇ ಹೆಚ್ಚು ಎಂದು ಅವರು ಹೇಳುತ್ತಿದ್ದಾರೆ.

ಹೇಳಿಕೇಳಿ ಅರುಣ್‌ ಸಿಂಗ್‌ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಅವರ ಸಂಬಂಧಿ. ಈ ಕಾರಣಕ್ಕೆ ದಿಲ್ಲಿಗೆ ಹೋಗುವ ಪ್ರತಿಯೊಬ್ಬ ರಾಜ್ಯ ಮುಖಂಡನೂ ರಾಜನಾಥ್‌ ಸಿಂಗ್‌ ಅವರನ್ನು ಭೇಟಿಯಾಗಿ ಅರುಣ್‌ ಸೀಂಗ್‌ ಮೇಲೆ ಪ್ರಭಾವ ಬೀರಿಸುವ ಪ್ರಯತ್ನ ಮಾಡುತ್ತಿದ್ದಾರೆಂದು ಹೊಸ ಆರೋಪ. ಇದು ದಿಲ್ಲಿ ವರಿಷ್ಠರಿಗೂ ಗೊತ್ತಿಲ್ಲದ ವಿಚಾರವೇನಲ್ಲ.

ರಾಜ್ಯದಲ್ಲಿ, ಅತ್ತ ದಿಲ್ಲಿಯಲ್ಲಿ ಬೇರೆ ಬೇರೆ ಪವರ್‌ ಸೆಂಟರ್‌ʼಗಳು ಸೃಷ್ಟಿಯಾಗುವುದು ಹೈಕಮಾಂಡ್‌ʼಗೆ ಇಷ್ಟವಿಲ್ಲ. ಈ ಕಾರಣಕ್ಕೆ ಅರುಣ್‌ ಸಿಂಗ್‌ ಜಾಗಕ್ಕೆ ಬೇರೊಬ್ಬರನ್ನು ತರುವ ಸಾಧ್ಯತೆ ಇದೆ ಎನ್ನಲಾಗಿದೆ.

ಅರುಣ್‌ ಸಿಂಗ್‌ ಜಾಗಕ್ಕೆ ಯಾರು?

ಸದ್ಯಕ್ಕೆ ಸಿಕ್ಕಿರುವ ಮಾಹಿತಿ ಪ್ರಕಾರ, ಕೇಂದ್ರದ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ಅವರ ಮುಂಚೂಣಿಯಲ್ಲಿದೆ. ಈ ಹಿಂದೆಯೂ ರಾಜ್ಯ ಉಸ್ತುವಾರಿ ಆಗಿದ್ದ ಪ್ರಧಾನ್‌ ಅವರು, ರಾಜ್ಯ ಬಿಜೆಪಿ ಎಲ್ಲ ಆಗು ಹೋಗುಗಳನ್ನು ಬಲ್ಲವರು. ಇವರ ಜತೆಗೆ, ತೆಲಂಗಾಣದ ಹಿರಿಯ ನಾಯಕ ಹಾಗೂ ಕೇಂದ್ರ ಸಚಿವ ಕಿಶನ್‌ ರೆಡ್ಡಿ ಹೆಸರೂ ಹೈಕಮಾಂಡ್‌ ಪರಿಶೀಲನೆಯಲ್ಲಿದೆ.

ತಮ್ಮ ವಿರುದ್ಧ ಕರ್ನಾಟಕದಲ್ಲೇ ದಾಳ ಉರುಳುತ್ತಿದೆ ಎಂದು ಗೊತ್ತಾದ ಕೂಡಲೇ ಅರುಣ್‌ ಸಿಂಗ್‌ ಪುನಾ ರಾಜ್ಯಕ್ಕೆ ಧಾವಿಸಿ ಬಂದಿದ್ದಾರೆ ಎನ್ನುತ್ತಾರೆ ಬಿಜೆಪಿ ಮುಖಂಡರೊಬ್ಬರು.

Tags: Arun singhbjp politicsjp naddakarnatakakarnataka inchargerajnath singh
P K Channakrishna

P K Channakrishna

www.cknewsnow.com ಪ್ರಧಾನ ಸಂಪಾದಕ ಮತ್ತು ಸಂಸ್ಥಾಪಕ. ಪ್ರಿಂಟ್‌ ಮೀಡಿಯಾದಲ್ಲಿ 3 ದಶಕದಷ್ಟು ಸುದೀರ್ಘ ಅನುಭವ. ರಾಜಕೀಯ, ಕೃಷಿ, ಸಿನಿಮಾ, ಸಂಗೀತ, ಫೊಟೋಗ್ರಫಿ, ಪ್ರವಾಸ, ಸೋಶಿಯಲ್‌ ಮೀಡಿಯಾದಲ್ಲಿ ಆಸಕ್ತಿ. ಓದು ಅಚ್ಚುಮೆಚ್ಚು.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ವರ್ಲಕೊಂಡ ಪಂಚಾಯಿತಿ ಬೀಗ ತೆರವು

ವರ್ಲಕೊಂಡ ಪಂಚಾಯಿತಿ ಬೀಗ ತೆರವು

Leave a Reply Cancel reply

Your email address will not be published. Required fields are marked *

Recommended

ಕರ್ನಾಟಕ ಭಾರತದ ಬಯೋಟೆಕ್ನಾಲಜಿ ರಾಜಧಾನಿ ಎಂದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಕರ್ನಾಟಕ ಭಾರತದ ಬಯೋಟೆಕ್ನಾಲಜಿ ರಾಜಧಾನಿ ಎಂದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

5 years ago
ದಿನ 2: ಸಿಇಟಿ ಪರೀಕ್ಷೆ ಸುಖಾಂತ್ಯ

ಸಿಇಟಿ ಕೌನ್ಸೆಲಿಂಗ್: ಜನವರಿ 15ರವರೆಗೆ ಕಾಲಾವಕಾಶ ನೀಡುವಂತೆ ಕೋರಿ ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಲಿಗೆ ಪತ್ರ ಬರೆದ ಸರಕಾರ

5 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ