• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS NATION

1,000 ರೂ.ನತ್ತ ಎಲ್‌ಪಿಜಿ, ಮತ್ತೆ 25 ರೂ. ಏರಿಕೆ

cknewsnow desk by cknewsnow desk
September 2, 2021
in NATION, STATE
Reading Time: 1 min read
1
1,000 ರೂ.ನತ್ತ ಎಲ್‌ಪಿಜಿ, ಮತ್ತೆ 25 ರೂ. ಏರಿಕೆ
953
VIEWS
FacebookTwitterWhatsuplinkedinEmail

ಅಡುಗೆ ಅನಿಲ ದರ ಹೆಚ್ಚಳ, ಜನ ವಿಲವಿಲ

ಬೆಂಗಳೂರು: ಕೋವಿಡ್‌ ನಡುವೆ ಹೈರಾಣವಾಗಿರುವ ಜನರು ಪೆಟ್ರೋಲ್-ಡೀಸೆಲ್‌ ಬೆಲೆ ನಿರಂತರ ಏರಿಕೆಯಿಂದ ಕಂಗೆಟ್ಟು ಹೋಗಿದ್ದರೆ, ಅಡುಗೆ ಅನಿಲದ ಬೆಲೆಯೂ ಪದೇಪದೆ ಏರಿಕೆಯಾಗುತ್ತಿರುವ ಕಾರಣದಿಂದ ಬಡಜನರ ಪಾಡು ನರಕ ಸದೃಶವಾಗಿದೆ.

ದೇಶದಲ್ಲಿ ನರೇಂದ್ರ ಮೋದಿ ನೇತೃತ್ವದ ಸರಕಾರ ಬರುತ್ತಿದ್ದಂತೆ ತೈಲ ಬೆಲೆಗಳ ಮೇಲೆ ನಿಯಂತ್ರಣ ತೆಗೆದುಹಾಕಿ, ಅದರ ಹೊಣೆಗಾರಿಕೆಯನ್ನು ಕಂಪನಿಗಳ ಕೈಗೆ ಕೊಟ್ಟ ನಂತರ ಜನಸಾಮಾನ್ಯರ ಪಾಡು ಶೋಚನೀಯ ಸ್ಥಿತಿಗೆ ಹೋಗಿ ತಲುಪಿದೆ.

ಈಗ ಮತ್ತೆ ಬುಧವಾರ ಕಂಪೆನಿಗಳು ಎಲ್‌ಪಿಜಿ ಸಿಲೆಂಡರ್ ಬೆಲೆಯನ್ನು ಪುನಾ 25 ರೂ. ಹೆಚ್ಚಳ ಮಾಡಿದ್ದು, ಇದರಿಂದ ದೇಶದೆಲ್ಲೆಡೆ ಬೆಲೆ ಹೆಚ್ಚಾಗಿದೆ. ನವದೆಹಲಿಯಲ್ಲಿ ಈಗ ಸಬ್ಸಿಡಿಯೇತರ 14.2 ಕೆಜಿ ತೂಕದ ಅಡುಗೆ ಅನಿಲ ಸಿಲೆಂಡರ್ ಬೆಲೆ 886.50 ರೂ. ಆಗಿದೆ. ಬೆಂಗಳೂರಿನಲ್ಲಿ 14.2 ಕೆಜಿ ತೂಕದ ಸಬ್ಸಿಡಿಯೇತರ ಅಡುಗೆ ಅನಿಲ ಸಿಲಿಂಡರ್‌ ದರ 887. 50 ರೂ. ಆಗಿದೆ.

ಇನ್ನು, ಹೊಸ ದರ ಇಂದಿನಿಂದಲೇ ಜಾರಿಗೆ ಬಂದಿದ್ದು, ಗ್ರಾಹಕರು ಹೊಸ ದರವನ್ನು ಪಾವತಿಸಿ ಸಿಲಿಂಡರ್‌ಪಡೆಯುತ್ತಿದ್ದಾರೆ.

19 ಕೆಜಿ ತೂಕದ ಕಮರ್ಷಿಯಲ್ ಸಿಲೆಂಡರ್ ಬೆಲೆಯಲ್ಲಿ ಏಕಾಎಕಿ 75 ರೂ. ಹೆಚ್ಚಳ ಮಾಡಲಾಗಿದ್ದು, ಅದರ ಬೆಲೆ ಈಗ 1,693 ರೂ. ಆಗಿದೆ.

ಹತೋಟಿ ಇಲ್ಲದೆ ಏರಿಕೆಯಾಗುತ್ತಿರುವ ಅಡುಗೆ ಅನಿಲ ಬೆಲೆಯಿಂದ ಜನರು ಕಂಗಾಲಾಗಿದ್ದಾರೆ. ಕಳೆದ ಹದಿನೈದು ದಿನಗಳಲ್ಲಿ ತಲಾ 25 ರೂ.ನಂತೆ ಎರಡು ಸಲ 14.2 ಕೆಜಿ ತೂಕದ ಸಿಲಿಂಡರ್‌ ಬೆಲೆ ಹೆಚ್ಚಳವಾಗಿದ್ದು, ಮಹಿಳೆಯರು ಕೇಂದ್ರ ಸರಕಾರ ಮತ್ತು ತೈಲ ಕಂಪನಿಗಳಿಗೆ ಹಿಡಿಶಾಪ ಹಾಕುತ್ತಿದ್ದಾರೆ. ಆಘಾತಕಾರಿ ಸಂಗತಿ ಎಂದರೆ,  ಕಳೆದ ಜನವರಿ 1ರಿಂದ ಅಡುಗೆ ಅನಿಲ ಬೆಲೆಯಲ್ಲಿ ಬರೋಬ್ಬರಿ 169 ರೂ. ಹೆಚ್ಚಳವಾಗಿದೆ. ಇನ್ನು, ಇದೇ ರೀತಿಯಲ್ಲಿ ಹಂತ ಹಂತವಾಗಿ ಗ್ಯಾಸ್‌ ದರವನ್ನು 25 ರೂ.ನಂತೆ ಏರಿಕೆ ಮಾಡುತ್ತಾ ಹೋಗಿ 1,000 ರೂ. ಮಟ್ಟಕ್ಕೆ ಬೆಲೆ ಮುಟ್ಟಿಸುವ ಎಲ್ಲ ಸಾಧ್ಯತೆ ನಿಚ್ಚಳವಾಗಿ ಗೊತ್ತಾಗುತ್ತಿದೆ.

ಬರೆಯ ಮೇಲೆ ಬರೆ

ಈಗಾಗಲೇ ಕೋವಿಡ್‌ ಕಾರಣದಿಂದ ಆರ್ಥಿಕತೆ ನೆಲಕಚ್ಚಿದೆ. ಜನರು ಉದ್ಯೋಗ ಕಳೆದುಕೊಂಡಿದ್ದಾರೆ. ಹೊಸ ಉದ್ಯೋಗ ಸೃಷ್ಟಿ ಶೂನ್ಯವಾಗಿದೆ. ಆದರೆ, ತೈಲ ಬೆಲೆ ಹಾಗೂ ಅಡುಗೆ ಅನಿಲದ ಬೆಲೆ ಏರಿಕೆಯಿಂದ ಜನಸಾಮಾನ್ಯರ ಸ್ಥಿತಿ ಬರ್ಬರವಾಗಿದೆ. ಈಗ ಅಡುಗೆ ಅನಿಲ ಬೆಲೆ ಹೆಚ್ಚಳದಿಂದ ಹೊಟೇಲುಗಳಲ್ಲಿ ಆಹಾರ, ತಿಂಡಿ ಬೆಲೆ ಇನ್ನಷ್ಟು ಜಾಸ್ತಿಯಾಗಲಿದೆ.

ವ್ಯವಸ್ಥಿತ ತಂತ್ರ ಹೂಡಿದ ಮೋದಿ

ಮೋದಿ ದೇಶದ ಪ್ರಧಾನಿ ಆಗುತ್ತಿದ್ದಂತೆ ಹಂತ ಹಂತವಾಗಿ ಜನರಿಗೆ ನೀಡಲಾಗುತ್ತಿದ್ದ ಸಬ್ಸಿಡಿಗಳ ಮೇಲೆ ಕಾಕದೃಷ್ಟಿ ಬೀರಲಾಯಿತು. ಮುಖ್ಯವಾಗಿ ತೈಲ ಬೆಲೆಗಳ ಮೇಲಿದ್ದ ನಿಯಂತ್ರಣವನ್ನು ತೆಗೆಯಲಾಯಿತು. ಬಳಿಕ ಶ್ರೀಮಂತರು, ಸಿಲಿಂಡರ್‌ʼಗಳ ಮೇಲೆ ಪಡೆಯುವ ಸಬ್ಸಿಡಿಯನ್ನು ʼದೊಡ್ಡ ಮನಸ್ಸುʼ ಮಾಡಿ ಬಿಟ್ಟುಕೊಡಬೇಕು ಎಂದು ಮೋದಿ ಕರೆ ನೀಡಿದರು.

ಅದರಂತೆ, ಕೆಲ ಉಳ್ಳವರು ಸಬ್ಸಿಡಿಯನ್ನು ಬಿಟ್ಟುಕೊಟ್ಟರು. ಕರ್ನಾಟಕದಲ್ಲಿ ಅಂದಿನ ಕೇಂದ್ರ ಮಂತ್ರಿ ಆಗಿದ್ದ ಅನಂತ್‌ ಕುಮಾರ್‌ ಅವರು ಎಲ್‌ಪಿಜಿ ಸಬ್ಸಿಡಿ ತೊರೆದವರಲ್ಲಿ ಪ್ರಮುಖರು.

ಬಳಿಕ, ಗ್ರಾಮೀಣ ಪ್ರದೇಶಗಳಲ್ಲಿ ಮಹಿಳೆಯರು ಸೌದೆ ಒಲೆಯಲ್ಲಿ ಅಡುಗೆ ಮಾಡುತ್ತಾ ಹೊಗೆಯಲ್ಲಿ ತಮ್ಮ ಆರೋಗ್ಯ ಹಾಳು ಮಾಡಿಕೊಳ್ಳುತ್ತಿದ್ದಾರೆಂದು ಹೇಳುತ್ತಾ ಕೇಂದ್ರವು ʼಉಜ್ವಲʼ ಯೋಜನೆಯನ್ನು ಜಾರಿಗೆ ತಂದಿತು. ಈ ಯೋಜನೆಯಡಿ 130 ಕೋಟಿ ಜನಸಂಖ್ಯೆ ಇರುವ ಭಾರತದಲ್ಲಿ ಕೇವಲ 8 ಕೋಟಿ ಬಡ, ಗ್ರಾಮೀಣ ಜನರಿಗಷ್ಟೇ ಅಡುಗೆ ಅನಿಲ ಸಂಪರ್ಕ ನೀಡಲು ಸಾಧ್ಯವಾಯಿತು.

ಇದಾದ ಮೇಲೆ 2019ರಲ್ಲಿ ಕೋವಿಡ್‌ ಬಂದು ವಕ್ಕರಿಸುತ್ತಿದ್ದಂತೆ ಜನರ ಗಮನವೆಲ್ಲ ವೈರಸ್‌ ವಿರುದ್ಧ ಹೋರಾಡುವುದೇ ಆಯಿತು. ಹತ್ತಾರು ಸಂದರ್ಭಗಳಲ್ಲಿ ಭಾವನಾತ್ಮಕ ಮಾತುಗಳ ಸುಳಿಗೆ ಸಿಕ್ಕಿದ ಜನರಿಗೆ ಅಡುಗೆ ಅನಿಲ ಸಿಲಿಂಡರ್‌ ಮೇಲಿನ ಸಬ್ಸಿಡಿಯನ್ನು ಕೇಂದ್ರ ಹಿಂಪಡೆದಿದ್ದು ಗೊತ್ತಾಗಲೇ ಇಲ್ಲ. ಪೂರ್ಣ ಹಣ ಕೊಟ್ಟ ಸಿಲಿಂಡರ್‌ ಪಡೆಯುತ್ತಿದ್ದ ಜನರಿಗೆ ತಮ್ಮ ಖಾತೆಗೆ ಜಮೆ ಆಗುತ್ತಿದ್ದ ಹೆಚ್ಚುವರಿ ಹಣ ಕ್ರಮೇಣ ನಿಂತು ಹೋಯಿತು.

ಹತೋಟಿ ಇಲ್ಲದೆ ಅಡುಗೆ ಅನಿಲ ಮತ್ತು ತೈಲ ಬೆಲೆ ಏರಿಕೆ ಮಾಡುತ್ತಿರುವ ನರೇಂದ್ರ ಮೋದಿ ಸರಕಾರ ಪ್ರತಿಪಕ್ಷಗಳು ಮತ್ತು ಜನರ ಆಕ್ರೋಶವನ್ನು ಗಣನೆಗೆ ತೆಗೆದುಕೊಳ್ಳುತ್ತಿಲ್ಲ. ಜನರ ಕಷ್ಟವನ್ನು ಕಡೆಗಣೆಸಿ ಏಕಪಕ್ಷೀಯವಾಗಿ ವರ್ತಿಸುತ್ತಿದೆ.

ಇನ್ನೊಂದೆಡೆ ಪೆಟ್ರೋಲ್‌ ಮತ್ತು ಡೀಸೆಲ್‌ ಬೆಲೆಯೂ ನಾಗಾಲೋಟದಲ್ಲಿದ್ದು, ಈಗ ಪೆಟ್ರೋಲ್‌ ಬೆಲೆ ಲೀಟರಿಗೆ 104.98 ರೂ. ಹಾಗೂ ಡೀಸೆಲ್‌ ಬೆಲೆ ಲೀಟರಿಗೆ 94.34 ರೂ. ಆಗಿದೆ.

cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಬಿಜೆಪಿಯಲ್ಲಿ ಬೇಗುದಿಗೆ ಎಣೆ ಇಲ್ಲ; ಉಸ್ತುವಾರಿ ಅರುಣ್‌ ಸಿಂಗ್‌ ಅವರ ವಿರುದ್ಧವೇ ಹೊಗೆಯಾಡುತ್ತಿದೆ ಅತೃಪ್ತಿ

ಅರುಣ್ ಸಿಂಗ್ ಕೈತಪ್ಪಲಿದೆ ರಾಜ್ಯ ಬಿಜೆಪಿ ಉಸ್ತುವಾರಿ?

Comments 1

  1. Pingback: ತೆರಿಗೆ ರೂಪದಲ್ಲಿ ಕರ್ನಾಟಕದಿಂದ ಕೇಂದ್ರ ಸುಲಿಗೆ ಮಾಡಿದ್ದೆಷ್ಟು? - cknewsnow

Leave a Reply Cancel reply

Your email address will not be published. Required fields are marked *

Recommended

ಡಿಜಿಟ್‌ನೊಂದಿಗೆ  ಸಿಎಂ ಪುತ್ರ ವಿಜಯೇಂದ್ರ ಡೀಲ್ ಬಗ್ಗೆ ಹೇಳಿದ  ಬಸನಗೌಡ ಪಾಟೀಲ್‌ ಯತ್ನಾಳ್‌

ಕುಟುಂಬದವರೇ ಜನಪ್ರತಿನಿಧಿಗಳಾಗುವ ಸಂಪ್ರದಾಯ ತೊಲಗಲಿ

4 years ago
ಚಂದ್ರನ ವಶಕ್ಕೆ ಚೀನ ತಂತ್ರ

ಚಂದ್ರನ ವಶಕ್ಕೆ ಚೀನ ತಂತ್ರ

4 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ