• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home EDITORS'S PICKS

ಶಾ ಕೊಟ್ಟ ಶಾಕ್! ಯಡಿಯೂರಪ್ಪ ಪುತ್ರ ವ್ಯಾಮೋಹಕ್ಕೆ ಚೆಕ್‌ಮೇಟ್

P K Channakrishna by P K Channakrishna
September 3, 2021
in EDITORS'S PICKS, NATION, POLITICS, STATE
Reading Time: 2 mins read
0
ಶಾ ಕೊಟ್ಟ ಶಾಕ್! ಯಡಿಯೂರಪ್ಪ ಪುತ್ರ ವ್ಯಾಮೋಹಕ್ಕೆ ಚೆಕ್‌ಮೇಟ್

ಅಮಿತ್ ಶಾ

1.1k
VIEWS
FacebookTwitterWhatsuplinkedinEmail

ಅಮಿತ್ ಶಾ ಹೇಳಿಕೆಯಿಂದ ರಾಜ್ಯ ಬಿಜೆಪಿಯಲ್ಲಿ ಕಂಪನವಲ್ಲ, ಪ್ರಕಂಪನ ಆರಂಭ

ಬೆಂಗಳೂರು: ಬೆಳಗಾವಿ, ಹುಬ್ಬಳ್ಳಿ-ಧಾರವಾಡ ಮತ್ತು ಕಲಬುರಗಿ ಮಹಾನಗರ ಪಾಲಿಕೆಗಳ ಚುನಾವಣೆಗೆ ಇನ್ನೂ ಕೆಲ ಗಂಟೆಗಳು ಬಾಕಿ ಇರುವಾಗಲೇ ಮುಂದಿನ ವಿಧಾನಸಭೆ ಚುನಾವಣೆಯನ್ನು ಹಾಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲೇ ಎದುರಿಸಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹೇಳಿದ ಮಾತು ಬಿಜೆಪಿ ಆಳದಲ್ಲಿ ಭಾರೀ ಪ್ರಕಂಪನಗಳನ್ನು ಸೃಷ್ಟಿ ಮಾಡಿದೆ.

ನಿನ್ನೆ (ಗುರುವಾರ) ದಾವಣಗೆರೆಯ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದ ಶಾ, ದಾವಣಗೆರೆ ಪಕ್ಕದ ಜಿಲ್ಲೆಯಲ್ಲೇ ಬೆಳಗ್ಗೆ ಮಹತ್ವದ ಚುನಾವಣೆ ಇದೆ ಎಂದು ಗೊತ್ತಿದ್ದೂ ಕೊಟ್ಟ ಹೇಳಿಕೆ ಚುಣಾವಣೆ ಮೇಲೆ ಯಾವ ಪರಿಣಾಮ ಬೀರಬಹುದು ಎಂಬ ಲೆಕ್ಕಾಚಾರ ಶುರುವಾಗಿದೆ.

ಉತ್ತರ ಕರ್ನಾಟಕ ಮಾತ್ರವಲ್ಲದೆ, ಸಮಸ್ತ ಲಿಂಗಾಯತರ ಪ್ರಶ್ನಾತೀತ ನಾಯಕರಾಗಿರುವ ಯಡಿಯೂರಪ್ಪ ಅನುಪಸ್ಥಿತಿಯಲ್ಲಿ ನಡೆಯುತ್ತಿರುವ ಮೂರೂ ಪಾಲಿಕೆಗಳ ಚುನಾವಣೆ ಕಾಂಗ್ರಸ್‌ʼಗಿಂತ ಬಿಜೆಪಿಗೇ ಹೆಚ್ಚು ಮುಖ್ಯ. ಶತಾಯಗತಾಯ ಗೆಲ್ಲಲು ಬೊಮ್ಮಾಯಿ ಕಸರತ್ತು ನಡೆಸಿದ್ದಾರೆ. ಈ ಚುನಾವಣೆ ಅವರಿಗೆ ಪ್ರತಿಷ್ಠೆಯೂ ಹೌದು. ಹೀಗಿದ್ದರೂ ಅಮಿತ್‌ ಶಾ ಉರುಳಿಸಿರುವ ಈ ದಾಳ ಸೆಪ್ಟೆಂಬರ್ 6ರಂದು ಹೊರಬೀಳಲಿರುವ ಫಲಿತಾಂಶದ ದಿಕ್ಕನ್ನು ಬದಲಿಸುತ್ತದಾ? ಎನ್ನುವ ಚರ್ಚೆಗೆ ನಾಂದಿ ಹಾಡಿದೆ.

  • ಯಡಿಯೂರಪ್ಪ & ಬಸವರಾಜ ಬೊಮ್ಮಾಯಿ

ಯಡಿಯೂರಪ್ಪ ಪಾಳೆಯಕ್ಕೆ ಶಾಕ್‌

ಕೇವಲ ಒಂದೂ ಮುಕ್ಕಾಲು ವರ್ಷಕ್ಕಷ್ಟೇ ಬೊಮ್ಮಾಯಿ ಮುಖ್ಯಮಂತ್ರಿ. ಆ ನಂತರದ ನಾಯಕತ್ವ ಬೇರೆಯವರದ್ದು. ಹೊಸ ನಾಯಕನ ನೇತೃತ್ವದಲ್ಲಿ ಮುಂದಿನ ವಿಧಾನಸಭೆ ಚುನಾವಣೆ ಎದುರಿಸಲಾಗುವುದು ಎಂದು ನಂಬಿದ್ದ ಪಕ್ಷದ ʼಕೆಲವರಿಗೆʼ, ಅದರಲ್ಲೂ ಯಡಿಯೂರಪ್ಪ ಪಾಳೆಯಕ್ಕೆ ಶಾ ಅವರ ಹೇಳಿಕೆ ದೊಡ್ಡ ಶಾಕ್‌ ನೀಡಿದೆ.

ಮುಂದಿನ ಅಸೆಂಬ್ಲಿ ಚುನಾವಣೆ ಹೊತ್ತಿಗೆ ತಮ್ಮ ಕಿರಿಯ ಪುತ್ರ ಬಿ.ವೈ.ವಿಜಯೇಂದ್ರ ಅವರನ್ನು ಪಕ್ಷದಲ್ಲಿ ಮುನ್ನಲೆಗೆ ತರಲೇಬೇಕು ಎನ್ನುವ ಲೆಕ್ಕಾಚಾರದಲ್ಲಿರುವ ಯಡಿಯೂರಪ್ಪ ಅವರಿಗೆ ಶಾ ಹೇಳಿಕೆ ದೊಡ್ಡ ಹಿನ್ನಡೆ ಎಂದು ʼಕೆಲವರುʼ ವ್ಯಾಖ್ಯಾನ ಮಾಡುತ್ತಿದ್ದಾರೆ.

ಯಡಿಯೂರಪ್ಪ ಅವರ ಪುತ್ರ ವ್ಯಾಮೋಹಕ್ಕೆ ಈ ಮೂಲಕ ಹೈಕಮಾಂಡ್ ‌ಬ್ರೇಕ್ ಹಾಕಿಬಿಟ್ಟಿದೆ ಎನ್ನಲಾಗಿದ್ದು, ಪಕ್ಷದಲ್ಲಿ ತಮ್ಮ ಉತ್ತರಾಧಿಕಾರಿಯನ್ನಾಗಿ ವಿಜಯೇಂದ್ರ ಅವರನ್ನು ಪ್ರತಿಷ್ಠಾಪನೆ ಮಾಡುವ ಅವರ ಪ್ರಯತ್ನಕ್ಕೆ ತಣ್ಣೀರೆರಚಿದಂತೆ ಆಗಿದೆ ಎಂದು ಬಿಜೆಪಿ ನಾಯಕರೊಬ್ಬರು ಸಿಕೆನ್ಯೂಸ್‌ ನೌ ಜತೆ ಮಾತನಾಡುತ್ತಾ ಹೇಳಿದರು.

ಅಲ್ಲದೆ, ಬೊಮ್ಮಾಯಿ ಸರಕಾರದಲ್ಲಿ ವಿಜಯೇಂದ್ರ ಮಂತ್ರಿ ಆಗುವ ಅವಕಾಶಕ್ಕೂ ಅಮಿತ್‌ ಶಾ ತಡೆಯೊಡ್ಡಿದ್ದು, ಯಾವಾಗ? ಏನು? ಹೇಗೆ? ಮಾಡಬೇಕು ಎಂಬುದನ್ನು ನಾವೇ ಸೂಚನೆ ನೀಡುತ್ತೇವೆ ಎಂದು ಅಮಿತ್‌ ಶಾ ಹೇಳಿದ್ದಕ್ಕೆ  ಮುಖ್ಯಮಂತ್ರಿಳು ʼಹ್ಞೂಂʼ ಎಂದಿದ್ದಾರೆ ಎಂದು ಗೊತ್ತಾಗಿದೆ.

ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಪುತ್ರಿಯ ವಿವಾಹಕ್ಕೆ ಬಂದಿದ್ದ ಶಾ, ಮುಖ್ಯಮಂತ್ರಿ ಬೊಮ್ಮಾಯಿ ಅವರಿಂದ ಸರಕಾರದ ಆಗುಹೋಗುಗಳು, ಯಡಿಯೂರಪ್ಪ ಪ್ರವಾಸ ಇತ್ಯಾದಿಗಳ ಬಗ್ಗೆ ಕ್ಲುಪ್ತವಾಗಿ ಮಾಹಿತಿ ಪಡೆದುಕೊಂಡಿದ್ದಾರೆಂದು ಹುಬ್ಬಳ್ಳಿಯ ಅತ್ಯಂತ ಪ್ರಮುಖ ಮೂಲವೊಂದು ಸಿಕೆನ್ಯೂಸ್‌ ನೌ ವೆಬ್‌ʼತಾಣಕ್ಕೆ ತಿಳಿಸಿದೆ.

  • ಬಿ.ವೈ.ವಿಜಯೇಂದ್ರ

ಹಿಂಬಾಗಿಲಿನಿಂದ ಬಂದವರು ಹಿಂದೆಯೇ!

ರಾಜಕೀಯ ಹಿನ್ನೆಲೆ, ಹಣ ಬಲ ಅಥವಾ ಮತ್ತಾವುದೋ ಶಕ್ತಿಯ ಕಾರಣಕ್ಕೆ ಮುನ್ನಲೆಗೆ ಬಂದು ಅಧಿಕಾರಕ್ಕೇರುವ ಪರಿಪಾಠಕ್ಕೆ ಹೈಕಮಾಂಡ್‌ ಈ ಮೂಲಕ ಚೆಕ್‌ʼಮೇಟ್‌ ಇಟ್ಟಿದೆ. ಸಂಘಟನೆಯಿಂದ ಬಂದವರಿಗೆ ಮಾತ್ರ ಅವಕಾಶ. ಕುಟುಂಬ ರಾಜಕಾರಣದ ವರ್ಚಸ್ಸಿಗೆ ಮುಂದೆ ಚಾನ್ಸ್‌ ಇಲ್ಲ ಎಂಬ ಕಠಿಣ ಸಂದೇಶವನ್ನು ಸಂಬಂಧಪಟ್ಟವರಿಗೆ ಈ ಮೂಲಕ ಹೈಕಮಾಂಡ್ ರವಾನಿಸಿದೆ.

ಪಕ್ಷದಲ್ಲಿ ಅತ್ಯಂತ ತಳಮಟ್ಟದಿಂದ ಹಂತ ಹಂತವಾಗಿ ಬೆಳೆದವರಿಗೆ ಸೂಕ್ತ ಸಮಯದಲ್ಲಿ ಅವಕಾಶ ನೀಡಬೇಕು. ಅದನ್ನು ಹೊರತುಪಡಿಸಿದರೆ ಮಾಜಿ ಮುಖ್ಯಮಂತ್ರಿ ಪುತ್ರನೆಂಬ ಕಾರಣಕ್ಕೆ ಅಧಿಕಾರದ ಅವಕಾಶ ಸಿಗಬಹುದೆಂಬ ನಿರೀಕ್ಷೆ ಇಟ್ಟುಕೊಳ್ಳದಂತೆ ಸ್ಪಷ್ಟ ಮಾಹಿತಿಯನ್ನು ಮಾಜಿ ಸಿಎಂಗೆ ರವಾನಿಸಿದಂತೆ ಆಗಿದೆ.

ದಾವಣಗೆರೆಯಲ್ಲಿ ಅಮಿತ್‌ ಶಾ ಅವರು ಯಾರಿಗೆ? ಏನೆಲ್ಲ ಹೇಳಬೇಕೋ ಅದನ್ನೇ ಹೇಳಿದ್ದಾರೆ. ಮಾತ್ರವಲ್ಲದೆ, ಕಾಂಗ್ರೆಸ್‌ ಮತ್ತು ಜೆಡಿಎಸ್‌ʼನಂತೆ ಕುಟುಂಬ ರಾಜಕಾರಣಕ್ಕೆ ಅವಕಾಶ ಇಲ್ಲ ಎಂಬ ಸಂದೇಶವನ್ನು ನೇರವಾಗಿಯೇ ಹೊರಡಿಸಿದ್ದಾರೆ.

ಸಾಮೂಹಿಕ ನಾಯಕತ್ವ

ಬಿಜೆಪಿ ಬದಲಾಗಿದೆ. ಆಧುನಿಕ ದೃಷ್ಟಿಕೋನದಿಂದ ವೇಗವಾಗಿ ಬೆಳೆಯುತ್ತಿದೆ. ಜಗತ್ತಿನ ಅತಿದೊಡ್ಡ ರಾಜಕೀಯ ಪಕ್ಷವಾಗಿ ಹೊರಹೊಮ್ಮಿದೆ. ಇದೇ ಕಾಲಕ್ಕೆ ಕುಟುಂಬದ ರಾಜಕೀಯದ ಸುಳಿಗೆ ಸಿಕ್ಕಿ ಕಾಂಗ್ರೆಸ್‌ ನೆಲಕಚ್ಚಿದೆ.

ಈ ಕಾರಣಕ್ಕೆ ತಳಮಟ್ಟದಿಂದಲೇ ಸಾಮೂಹಿಕ ನಾಯಕತ್ವಕ್ಕೆ ಅವಕಾಶ ನೀಡಲಾಗುತ್ತಿದ್ದು, ಏಕವ್ಯಕ್ತಿ ಪಾರುಪತ್ಯಕ್ಕೆ ಕೊನೆ ಹಾಡಲಾಗಿದೆ ಎಂದು ಹೇಳಲಾಗಿದೆ. ಯಡಿಯೂರಪ್ಪ ಅವರಿಗೆ ಪರ್ಯಾಯ ನಾಯಕತ್ವ ಇಲ್ಲ ಎಂಬ ವ್ಯಾಖ್ಯಾನವನ್ನು ಪಕ್ಕಕ್ಕೆ ಸರಿಸಿ ಪಕ್ಷದಲ್ಲಿ ಸದೃಢ ನಾಯಕತ್ವ ಇದೆ ಎಂಬ ಸಂದೇಶವನ್ನು ಹೈಕಮಾಂಡ್‌, ಪಕ್ಷದ ನಾಯಕರು ಹಾಗೂ ಕಾರ್ಯಕರ್ತರಿಗೆ ನೀಡಿದೆ. ಶಾ ಕೊಟ್ಟ ಸಂದೇಶ ಕಾರ್ಯಕರ್ತರಲ್ಲೂ ಹೊಸ ಹುರುಪು ಮೂಡಿಸಿದೆ.

ಯಡಿಯೂರಪ್ಪ ಅವರು ಪಕ್ಷದಲ್ಲಿ ಈಗ ಮಾರ್ಗದರ್ಶಕರಾಗಿರುತ್ತಾರಷ್ಟೇ. ಅಗತ್ಯಬಿದ್ದಾಗ ಮಾತ್ರ ಪಕ್ಷ ಅವರ ಅಭಿಪ್ರಾಯ ಪಡೆಯಲಿದೆ. ಬಿಜೆಪಿ ರಾಷ್ಟ್ರೀಯ ಪಕ್ಷ, ಕಾರ್ಯಕರ್ತರ ಪಕ್ಷ. ಹೀಗಾಗಿ ಬಿಜೆಪಿಯಲ್ಲಿ ‌ಕುಟುಂಬ ರಾಜಕಾರಣ ನಡೆಯಲ್ಲ. ಯಾರೇ ಆಗಲಿ ಸಂಘಟನೆ ಮೂಲಕವೇ ಬರಬೇಕೆಂಬುದು ಹೈಕಮಾಂಡ್ ಆಶಯ. ಈ ನಿಟ್ಟಿನಲ್ಲಿ ವಿಜಯೇಂದ್ರ ಕೂಡ ಹೊರತಲ್ಲ. ಏಕಾಎಕಿ ಸರ್ಕಾರದಲ್ಲಿ ಯಾವುದೇ ಹುದ್ದೆ ನೀಡಲು ಸಾಧ್ಯವಿಲ್ಲ ಎಂದು ಖಡಕ್ ಆಗಿ ಸಾರ್ವಜನಿಕ ವೇದಿಕೆಯಲ್ಲೇ ಶಾ ಅವರು ಸುಳಿವು ನೀಡಿರುವುದು ಪಕ್ಷದಲ್ಲಿ ವಿದ್ಯುತ್‌ ಸಂಚಲನ ಉಂಟು ಮಾಡಿದೆ.

ಅಮಿತ್‌ ಶಾ ಅವರು ಬೊಮ್ಮಾಯಿ ನೇತೃತ್ವದಲ್ಲಿ ಮುಂದಿನ ಚುನಾವಣೆ ಘೋಷಿಸಿದ ಬೆನ್ನಲ್ಲೇ ಕಂಗಾಲಾಗಿರುವ ಯಡಿಯೂರಪ್ಪ, ಮತ್ತವರ ಬೆಂಬಲಿಗರು ಸದ್ಯಕ್ಕೆ ಮೌನದಿಂದಿರಲು ತೀರ್ಮಾನಿಸಿದ್ದಾರೆ ಎನ್ನಲಾಗಿದೆ. ಪುತ್ರನ ರಾಜಕೀಯ ಭವಿಷ್ಯ ಅತಂತ್ರ ಆಗುವ ಆತಂಕ ರಾಜಾಹುಲಿಯನ್ನು ಕಾಡುತ್ತಿದೆ ಎಂಬುದಂತೂ ಸುಳ್ಳಲ್ಲ.‌

Tags: amit shahbasavaraj bommaibjpHome Minister Amit ShahkarnatakaPolitics
P K Channakrishna

P K Channakrishna

www.cknewsnow.com ಪ್ರಧಾನ ಸಂಪಾದಕ ಮತ್ತು ಸಂಸ್ಥಾಪಕ. ಪ್ರಿಂಟ್‌ ಮೀಡಿಯಾದಲ್ಲಿ 3 ದಶಕದಷ್ಟು ಸುದೀರ್ಘ ಅನುಭವ. ರಾಜಕೀಯ, ಕೃಷಿ, ಸಿನಿಮಾ, ಸಂಗೀತ, ಫೊಟೋಗ್ರಫಿ, ಪ್ರವಾಸ, ಸೋಶಿಯಲ್‌ ಮೀಡಿಯಾದಲ್ಲಿ ಆಸಕ್ತಿ. ಓದು ಅಚ್ಚುಮೆಚ್ಚು.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಆಮ್ಲಜನಕ, ರೆಮಿಡಿಸ್ವೀರ್‌ ಕೃತಕ ಅಭಾವ ಸೃಷ್ಟಿ!! ಸೋಂಕಿತರ ಸಂಖ್ಯೆಗೂ-ಬೇಡಿಕೆಗೂ ತಾಳ-ಮೇಳವಿಲ್ಲ, ಸಪ್ಲೈ ಆಗುತ್ತಿರುವುದೆಲ್ಲ ಎಲ್ಲಿ ಹೋಗುತ್ತಿದೆ ಎಂದು ಪ್ರಶ್ನಿಸಿದ ಡಿಸಿಎಂ

ಸೆಪ್ಟೆಂಬರ್ 20ಕ್ಕೆ ಸಿಇಟಿ ಫಲಿತಾಂಶ

Leave a Reply Cancel reply

Your email address will not be published. Required fields are marked *

Recommended

ಸೋಶಿಯಲ್‌ ಮೀಡಿಯಾ ಮೂಲಕ ಜನರಿಗೆ ಇನ್ನಷ್ಟು ಹತ್ತಿರವಾಗಲು ಕಮಲ ಪಾಳೆಯ ಮಾಸ್ಟರ್‌ ಪ್ಲ್ಯಾನ್‌; ತಾಲ್ಲೂಕು ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆ ಮೇಲೂ ಕಣ್ಣು

ಸೋಶಿಯಲ್‌ ಮೀಡಿಯಾ ಮೂಲಕ ಜನರಿಗೆ ಇನ್ನಷ್ಟು ಹತ್ತಿರವಾಗಲು ಕಮಲ ಪಾಳೆಯ ಮಾಸ್ಟರ್‌ ಪ್ಲ್ಯಾನ್‌; ತಾಲ್ಲೂಕು ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆ ಮೇಲೂ ಕಣ್ಣು

5 years ago
ನೂತನ ಸಂಸತ್ ಉದ್ಘಾಟನೆ: HDD ಹಾಜರಿಗೆ ಜೆಡಿಎಸ್ ರಾಷ್ಟ್ರೀಯ ಕಾರ್ಯಕಾರಿಣಿ ಸಹಮತ

ನೂತನ ಸಂಸತ್ ಉದ್ಘಾಟನೆ: HDD ಹಾಜರಿಗೆ ಜೆಡಿಎಸ್ ರಾಷ್ಟ್ರೀಯ ಕಾರ್ಯಕಾರಿಣಿ ಸಹಮತ

3 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ