• About
  • Advertise
  • Careers
  • Contact
Thursday, October 29, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home CHIKKABALLAPUR

ಮಕ್ಕಳಿಗೆ ಒತ್ತಡ ನಿವಾರಣೆ; ಶಿಕ್ಷಕರಿಗೆ ಟಿಪ್ಸ್ ಕೊಟ್ಟ ಡಾಕ್ಟರ್ ಸುಧಾಕರ್

cknewsnow desk by cknewsnow desk
September 5, 2021
in CHIKKABALLAPUR, STATE
Reading Time: 2 mins read
0
ಮಕ್ಕಳಿಗೆ ಒತ್ತಡ ನಿವಾರಣೆ; ಶಿಕ್ಷಕರಿಗೆ ಟಿಪ್ಸ್ ಕೊಟ್ಟ ಡಾಕ್ಟರ್ ಸುಧಾಕರ್
1k
VIEWS
FacebookTwitterWhatsuplinkedinEmail

ಚಿಕ್ಕಬಳ್ಳಾಪುರದಲ್ಲಿ ಶಿಕ್ಷಕರ ದಿನಾಚರಣೆ

by M Krishnappa Chikkaballapura

ಚಿಕ್ಕಬಳ್ಳಾಪುರ: ಶಿಕ್ಷಣ ಅಂದರೆ ವಿದ್ಯಾಭ್ಯಾಸ ಮಾತ್ರವಲ್ಲ, ಹೆಚ್ಚು ಅಂಕ ಪಡೆದವರಷ್ಟೇ  ಜೀವನದಲ್ಲಿ ಸಫಲರಾಗುತ್ತಾರೆ ಅಂತಾನೂ ಅಲ್ಲ.  ವಿದ್ಯಾರ್ಥಿಗಳಲ್ಲಿರುವ ಅಭಿರುಚಿಯನ್ನು ಮತ್ತು ಸೂಕ್ತ ಗುಣವನ್ನು ಗುರುತಿಸಿ ಮಾರ್ಗದರ್ಶನ ನೀಡುವುದೇ ನಿಜವಾದ ಶಿಕ್ಷಣ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರು ಶಿಕ್ಷಕರಿಗೆ ಸಲಹೆ ನೀಡಿದರು.

ಅವರು ಜಿಲ್ಲಾಡಳಿತ ಭವನದಲ್ಲಿ ಭಾನುವಾರ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಹಮ್ಮಿಕೊಂಡಿದ್ದ  ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಜನ್ಮ ಕೊಡೋದು ತಂದೆ-ತಾಯಿ. ಜೀವನ ಕೊಡೋದು ಶಿಕ್ಷಕರು. ನಮ್ಮದು ಗುರು ಪರಂಪರೆಯ ದೇಶ. ಶಿಕ್ಷಣ ವ್ಯವಸ್ಥೆ ಶಾಲಾ ಕಾಲೇಜುಗಳ ಕಟ್ಟಡ ನಿರ್ಮಾಣದಿಂದ ಆಗಲ್ಲ. ಶಿಕ್ಷಕರ ಪಾತ್ರ ಬಹಳ ಮುಖ್ಯವಾದದ್ದು , ಶಿಕ್ಷಕರು ಮಕ್ಕಳನ್ನು ಜ್ಞಾನ ಸಂಪನ್ನರನ್ನಾಗಿ ಮಾಡಲು ಮೌಲ್ಯಾಧಾರಿತ ಶಿಕ್ಷಣ ನೀಡಬೇಕು. ಸಮ ಸಮಾಜದ ಕಲ್ಪನೆಯನ್ನು, ಕುವೆಂಪುರವರ ವಿಶ್ವಮಾನವ ಸಂದೇಶ ಮತ್ತು ಶಾಂತಿ ತೋಟದ ಕಲ್ಪನೆಯ ವಿಚಾರಗಳನ್ನು ಮೈಗೂಡಿಸಿಕೊಂಡು ವಿದ್ಯಾರ್ಥಿಗಳ  ವ್ಯಕ್ತಿತ್ವ ವಿಕಸನ ಆಗುವಂತಹ  ಶಿಕ್ಷಣ ನೀಡಬೇಕು ಎಂದರು.

ಕೇವಲ ಹಣದಿಂದ ನೆಮ್ಮದಿ, ಸಂತೋಷ ಸಿಗುವುದಿಲ್ಲ. ಅದಕ್ಕೆ ಜ್ಞಾನದ ಅವಶ್ಯಕತೆ ಇದೆ. ಅಂತಹ ಜ್ಞಾನವನ್ನು ನೀಡುವವರು ಶಿಕ್ಷಕರು. ವೈದ್ಯ ವೃತ್ತಿಯಂತೆ ಶಿಕ್ಷಕ ವೃತ್ತಿಯು ಅತಿ ಮುಖ್ಯವಾದದ್ದು. ಆದ್ದರಿಂದ ವೃತ್ತಿ ಮತ್ತು ಪ್ರವೃತ್ತಿ ಎಲ್ಲಾ ಶಿಕ್ಷಣವೇ ಎಂದು ನಂಬಿದ್ದ ಮಾಜಿ ರಾಷ್ಟ್ರಪತಿಗಳಾದ  ಭಾರತರತ್ನ ಡಾ.ಎಸ್.ರಾಧಾಕೃಷ್ಣನ್ ಅವರ ಜನ್ಮ ದಿನದಂದು ಶಿಕ್ಷಕರ ದಿನಾಚರಣೆ ಆಚರಿಸುತ್ತಿರುವುದು ಅರ್ಥಪೂರ್ಣ. ಆದ್ದರಿಂದ ಶಿಕ್ಷಕರನ್ನು ನೋಡಿ  ನಾವು ಹೀಗೇ ಆಗಬೇಕು ಎನ್ನುವ ಭಾವನೆ ಮಕ್ಕಳಲ್ಲಿ ಮೂಡಬೇಕು. ಅಂತಹವರು ಶ್ರೇಷ್ಠ ಶಿಕ್ಷಕರಾಗುತ್ತಾರೆ. ಶಿಕ್ಷಣ ವ್ಯವಸ್ಥೆ ಅಮೂಲಾಗ್ರವಾಗಿ ಬದಲಾವಣೆ ಆಗಬೇಕು ಎನ್ನುವ ನಿಟ್ಟಿನಲ್ಲಿ 2020ರ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಯಾಗುತ್ತಿದೆ. ಎಲ್ಲರಿಗೂ ಸಮಾನ ಅವಕಾಶಗಳನ್ನು ನೀಡುವ ಮತ್ತು ಅತ್ಯಾಧುನಿಕ ತಂತ್ರಜ್ಞಾನ ಯುಗದಲ್ಲಿನ  ಹೊಸ ಕಲಿಕಾ ವಿಧಾನಗಳಿಗೆ  ಹತ್ತಿರವಾಗಿರುವ ಶಿಕ್ಷಣ ನೀತಿಯಾಗಲಿದೆ ಎಂದರು ಸಚಿವರು.

ಸೆಪ್ಟೆಂಬರ್ 6ರಿಂದ ಆರನೇ ತರಗತಿಗೂ ಮೇಲ್ಪಟ್ಟ ಶಾಲೆಗಳು ಆರಂಭವಾಗುತ್ತಿವೆ. ತಮ್ಮ ಸ್ವಂತ ಮಕ್ಕಳನ್ನು ನೋಡಿಕೊಳ್ಳುವಂತೆ ಶಿಕ್ಷಕರು ಎಚ್ಚರಿಕೆ ವಹಿಸಬೇಕು. ಎಲ್ಲ ಮಕ್ಕಳು ಕೋವಿಡ್  ಮಾರ್ಗಸೂಚಿ ಪಾಲಿಸುವಂತೆ ನೋಡಿಕೊಳ್ಳಬೇಕು. ಆನ್ಲೈನ್ ತರಗತಿಗಳಿಗಿಂತ ಭೌತಿಕ ತರಗತಿಗಳೇ ಕಲಿಕೆಗೆ ಹೆಚ್ಚು ಪರಿಣಾಮಕಾರಿ. ಎಲ್ಲ ತರಗತಿಗಳು ಭೌತಿಕವಾಗಿ ನಡೆಯುವಂತಹ ವಾತಾವರಣ ಬೇಗ ಬರಲಿ ಎಂದರು.

  • ಜಿಲ್ಲಾ ಗುರುಭವನಕ್ಕೆ ಭೂಮಿಪೂಜೆ ನೆರೆವೇರಿಸಿದ ಸಚಿವ ಡಾ.ಕೆ.ಸುಧಾಕರ್.

 ಒಂದೇ ವರ್ಷದಲ್ಲಿ ಗುರುಭವನ ನಿರ್ಮಾಣ 

ಜಿಲ್ಲಾಧಿಕಾರಿಗಳು ನಗರದ ಪ್ರತಿಷ್ಠಿತ  ಜಾಗದಲ್ಲಿ ಜಿಲ್ಲಾ  ಗುರುಭವನ ನಿರ್ಮಿಸಲು  ಜಮೀನು ನೀಡಿದ್ದಾರೆ. ಸುಮಾರು 5 ಕೋಟಿ ರೂ. ವೆಚ್ಚದಲ್ಲಿ ಮುಂದಿನ ವರ್ಷದೊಳಗಡೆ ಜಿಲ್ಲಾ ಗುರುಭವನ ನಿರ್ಮಾಣವಾಗಲಿದೆ ಎಂದು ಸಚಿವರು ಹೇಳಿದರು. ಈ ಕಾರ್ಯಕ್ರಮಕ್ಕೂ  ಮುನ್ನ  ನಗರದ  ಹೊರವಲಯದ ಜೈನ್ ಆಸ್ಪತ್ರೆ ಹತ್ತಿರ ಗುರುಭವನ ನಿರ್ಮಾಣ ಕಾಮಗಾರಿಗೆ  ಸಚಿವರು ಶಂಕುಸ್ಥಾಪನೆ ನೆರವೇರಿಸಿದರು.

ಎಸ್ಸೆಸ್ಸೆಲ್ಸಿ ಫಲಿತಾಂಶಕ್ಕೆ ಮೆಚ್ಚುಗೆ

ಕಳೆದ 2 ವರ್ಷಗಳಿಂದ ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆ ತನ್ನದೇ ಆದಂತಹ ಛಾಪು ಮೂಡಿಸುತ್ತಿದೆ. 2019-20 ನೇ ಸಾಲಿನಲ್ಲಿ ಇಡೀ ರಾಜ್ಯಕ್ಕೆ ಪ್ರಥಮ ಸ್ಥಾನ ಜಿಲ್ಲೆ ಗಳಿಸಿತ್ತು ಮತ್ತು 2020-21 ಸಾಲಿನಲ್ಲಿ  ರಾಜ್ಯದಲ್ಲಿ 625 ಅಂಕ ಗಳಿಸಿದ 157 ವಿದ್ಯಾರ್ಥಿಗಳ ಪೈಕಿ ಜಿಲ್ಲೆಯವರೇ 30  ವಿದ್ಯಾರ್ಥಿಗಳು ಇರುವುದು ಹೆಮ್ಮೆಯ ಸಂಗತಿ. ಈ ಎಲ್ಲ ಸಾಧನೆಗಳ ಹಿಂದೆ ಜಿಲ್ಲೆಯ ಶಿಕ್ಷಕರ ಮತ್ತು ಜಿಲ್ಲಾಡಳಿತದ ಸಮನ್ವಯ ಇಲಾಖೆಗಳ  ಅಧಿಕಾರಿ ಸಿಬ್ಬಂದಿಗಳ ಪಾತ್ರ ಮಹತ್ವದ್ದಾಗಿದೆ ಎಂದು ಸಚಿವರು ಮೆಚ್ಚುಗೆ ವ್ಯಕ್ತಪಡಿಸಿದರು.

ಅತ್ಯುತ್ತಮ 18 ಶಿಕ್ಷಕರಿಗೆ ಸನ್ಮಾನ

ಈ ವೇಳೆ  ಸಚಿವರು 2021-22ನೇ ಸಾಲಿಗೆ ರಾಜ್ಯ ಮಟ್ಟದ ತ್ತಮ ಶಿಕ್ಷಕ ಪ್ರಶಸ್ತಿಗೆ ಜಲ್ಲೆಯಿಂದ  ಆಯ್ಕೆಯಾಗಿರುವ ಗೌರಿಬಿದನೂರು ತಾಲೂಕಿನ ಅಲೀಪುರದ ಸರ್ಕಾರಿ ಪ್ರೌಢಶಾಲೆಯ ವಿಜ್ಞಾನ ಶಿಕ್ಷಕ ಆರ್. ಯು.ನವೀನ್ ಕುಮಾರ್ ಮತ್ತು ಶಿಡ್ಲಘಟ್ಟ ತಾಲ್ಲೂಕಿನ  ವಾರಹಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಕನ್ನಡ ಶಿಕ್ಷಕಿ ವಿವಿಶಾ ಅವರಿಗೆ ಅಭಿನಂದನೆ ತಿಳಿಸಿ, 2021-22ನೇ ಸಾಲಿನ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ 18 ಶಿಕ್ಷಕರಿಗೆ ಸನ್ಮಾನ ಮಾಡಿದರು.

ಸನ್ಮಾನಿತರಾದ ಶಿಕ್ಷಕರು

  1. ಪ್ರಮೀಳಮ್ಮ, ಸಹಶಿಕ್ಷಕರು, ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ, ದೇವರಗುಡಿಪಲ್ಲಿ, ಬಾಗೇಪಲ್ಲಿ ತಾಲ್ಲೂಕು.
  2. ಚಂದ್ರಶೇಖರರೆಡ್ಡಿ, ಸಹಶಿಕ್ಷಕರು, ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ, ಕಮ್ಮಗಾನಹಳ್ಳಿ, ಚಿಕ್ಕಬಳ್ಳಾಪುರ ತಾಲ್ಲೂಕು.,
  3. ಮಂಜುನಾಥ, ಸಹಶಿಕ್ಷಕರು, ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ, ಮಾರಪಲ್ಲಿ, ಚಿಂತಾಮಣಿ ತಾಲ್ಲೂಕು.
  4. ಎನ್. ರವಿಕುಮಾರ್, ಸಹಶಿಕ್ಷಕರು, ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ, ದೊಡ್ಡರಾಗಡಹಳ್ಳಿ, ಗೌರಿಬಿದನೂರು ತಾಲ್ಲೂಕು.
  5. ಎನ್. ಗೋಪಾಲಕೃಷ್ಣಸಿಂಗ್, ಸಹಶಿಕ್ಷಕರು, ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ, ಕೊಂಡಾವಲಹಳ್ಳಿ, ಗುಡಿಬಂಡೆ ತಾಲ್ಲೂಕು.
  6. ಎಂ.ವೇಣುಗೋಪಾಲ, ಸಹಶಿಕ್ಷಕರು, ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ, ಗಡಿಮಿಂಚೇನಹಳ್ಳಿ, ಶಿಡ್ಲಘಟ್ಟ ತಾಲ್ಲೂಕು.
  7. ಎನ್. ನಾಗರಾಜು, ಸಹಶಿಕ್ಷಕರು, ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ, ಚಾಕವೇಲು, ಬಾಗೇಪಲ್ಲಿ ತಾಲ್ಲೂಕು.
  8. ಆರ್. ಶ್ರೀನಿವಾಸ್, ಬಡ್ತಿ ಮುಖ್ಯ ಶಿಕ್ಷಕರು, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ರೆಡ್ಡಿಗೊಲ್ಲವಾರಹಳ್ಳಿ, ಚಿಕ್ಕಬಳ್ಳಾಪುರ ತಾಲ್ಲೂಕು.
  9. ಕೆ.ಎಂ.ಜಯರಾಮರೆಡ್ಡಿ, ಬಡ್ತಿ ಮುಖ್ಯ ಶಿಕ್ಷಕರು, ಸರ್ಕಾರಿ ಬಾಲಕರ ಮಾದರಿ ಹಿರಿಯ ಪ್ರಾಥಮಿಕ ಶಾಲೆ, ಚಿಂತಾಮಣಿ ತಾಲ್ಲೂಕು.
  10. ಸಂಜೀವರೆಡ್ಡಿ, ಸಹಶಿಕ್ಷಕರು, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ನಕ್ಕಲಹಳ್ಳಿ, ಗೌರಿಬಿದನೂರು ತಾಲ್ಲೂಕು.
  11. ಎಂ. ಶಂಕರ್, ಸಹಶಿಕ್ಷಕರು, ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ, ಬೀಚಗಾನಹಳ್ಳಿ, ಗುಡಿಬಂಡೆ ತಾಲ್ಲೂಕು.
  12. ಪಿ.ಗೀತಾ, ಬಡ್ತಿ ಮುಖ್ಯ ಶಿಕ್ಷಕರು, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಜೆ.ವೆಂಕಟಾಪುರ, ಶಿಡ್ಲಘಟ್ಟ ತಾಲ್ಲೂಕು.
  13. ಮಹಬೂಬ್ಸಾಬಿ, ಉಪಪ್ರಾಂಶುಪಾಲರು, ಸರ್ಕಾರಿ ಬಾಲಕರ ಪ್ರೌಢಶಾಲೆ, ಬಾಗೇಪಲ್ಲಿ ತಾಲ್ಲೂಕು.
  14. ಎಲ್. ರಾಮಲಿಂಗಪ್ಪ, ಸಹಶಿಕ್ಷಕರು, ಸರ್ಕಾರಿ ಪ್ರೌಢಶಾಲೆ, ಅಂಗರೇಕನಹಳ್ಳಿ, ಚಿಕ್ಕಬಳ್ಳಾಪುರ ತಾಲ್ಲೂಕು.
  15. ಈ.ರಾಘವೇಂದ್ರ, ಸಹಶಿಕ್ಷಕರು, ಸರ್ಕಾರಿ ಪ್ರೌಢಶಾಲೆ, ಬಟ್ಲಹಳ್ಳಿ, ಚಿಂತಾಮಣಿ ತಾಲ್ಲೂಕು.
  16. ಆರ್.ರಾಣಾಪ್ರತಾಪ್, ಸಹಶಿಕ್ಷಕರು, ಸರ್ಕಾರಿ ಪ್ರೌಢಶಾಲೆ, ಕಲ್ಲಿನಾಯಕನಹಳ್ಳಿ, ಗೌರಿಬಿದನೂರು ತಾಲ್ಲೂಕು.
  17. ಹರೀಶ್ ರಾಜ್ ಅರಸ್, ಸಹಶಿಕ್ಷಕರು, ಸರ್ಕಾರಿ ಪ್ರೌಢಶಾಲೆ, ಹಂಪಸಂದ್ರ, ಗುಡಿಬಂಡೆ ತಾಲ್ಲೂಕು.
  18. ಎಲ್.ವಿ. ವೆಂಕಟರೆಡ್ಡಿ, ಪ್ರಭಾರ ಮುಖ್ಯ ಶಿಕ್ಷಕರು, ಸರ್ಕಾರಿ ಪ್ರೌಢಶಾಲೆ, ಕುಂದಲಗುರ್ಕಿ, ಶಿಡ್ಲಘಟ್ಟ ತಾಲ್ಲೂಕು.

ಕಾರ್ಯಕ್ರಮದಲ್ಲಿ ರಾಜ್ಯ ಮಾವು ಮತ್ತು ಮಾರುಕಟ್ಟೆ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷರಾದ ಕೆ.ವಿ.ನಾಗರಾಜು, ಜಿಲ್ಲಾಧಿಕಾರಿ ಆರ್.ಲತಾ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪಿ.ಶಿವಶಂಕರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ ಕುಮಾರ್, ಚಿಕ್ಕಬಳ್ಳಾಪುರ ನಗರಸಭೆ ಅಧ್ಯಕ್ಷರಾದ ಆನಂದರೆಡ್ಡಿ (ಬಾಬು), ಅಪರ ಜಿಲ್ಲಾಧಿಕಾರಿ ಹೆಚ್. ಅಮರೇಶ್,  ಪಟ್ರೇನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಟಿ.ಎಸ್ ಜಯಚಂದ್ರ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಜಿ.ಹರೀಶ್,  ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಕೆ.ಎಂ. ಜಯರಾಮರೆಡ್ಡಿ ಮತ್ತು ವಿವಿಧ ಇಲಾಖೆಗಳ ಅಧಿಕಾರಿ ಸಿಬ್ಬಂದಿಗಳು ಹಾಗೂ ಶಾಲಾ ಶಿಕ್ಷಕರು ಹಾಜರಿದ್ದರು.

Tags: chikkaballapuraguru bhavanaindiakarnatakaSarvepalli Radhakrishnanteachres day 2021
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

by cknewsnow desk
October 28, 2026
0

ಬೆಂಗಳೂರಿನಲ್ಲಿ 43.13% ಮತದಾರರ ಪ್ರಮಾಣ ಕುಸಿತ

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

by cknewsnow desk
October 25, 2026
0

ಹಾಲಿ ಮುಖ್ಯಮಂತ್ರಿ ವಿರುದ್ಧ ಕೇಂದ್ರ ಸಚಿವರ ಗಂಭೀರ ಆರೋಪ; ಈಗಿನ ಮಹಾನ್ ಮುಖ್ಯಮಂತ್ರಿಗಳೇ ಸ್ಟಿಂಗ್ ಮೂಲಪುರುಷ

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

by cknewsnow desk
October 25, 2026
0

ಸ್ಟಿಂಗ್ ಆಪರೇಶನ್ ಪ್ರಕರಣದಲ್ಲಿ ರಾಜ್ಯ ಸರ್ಕಾರದ್ದು ಇಬ್ಬಗೆ ನೀತಿ; ಕೇಂದ್ರ ಸಚಿವ ಪ್ರಲ್ಹಾದ ಜೋಶಿ ವಾಗ್ದಾಳಿ

ಸ್ಟಿಂಗ್ ವಿರುದ್ಧ ಕೋರ್ಟ್ ಮೊರೆ ಹೋದ ಸಿದ್ದರಾಮಯ್ಯ! ಇಂದು ಆದೇಶ ನಿರೀಕ್ಷೆ

ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

by cknewsnow desk
October 25, 2026
0

ಹೆಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ; #kpsc ಹಗರಣದ ದಿಕ್ಕು ತಪ್ಪಿಸಲು ಪ್ರಿಯಾಂಕ್ ಖರ್ಗೆ ಒದ್ದಾಟ

ಬೆಂಗಳೂರು ಸುತ್ತಲಿನ ಜನರ ಸಮಾಧಿ ಮೇಲೆ ಬ್ರ್ಯಾಂಡ್‌ ಬೆಂಗಳೂರು

10 ತಿಂಗಳಾದರೂ ಸಿಗದ ಭೂಮಿ; ರಾಜ್ಯದ ಕೈತಪ್ಪಲಿದೆಯಾ ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರ

by cknewsnow desk
October 22, 2026
0

ಬೇಸತ್ತು ಮುಖ್ಯಮಂತ್ರಿ ಡಿಕೆಶಿಗೆ ಪತ್ರ ಬರೆದ ಕೇಂದ್ರ ಸಚಿವ #HDK

ರಾಜೀನಾಮೆ ಕೊಟ್ಟು ಹೊರಬನ್ನಿ; ಅಪಮಾನಿತ ದಲಿತ ಸಚಿವರಿಗೆ #Jds ಕಿವಿಮಾತು

ರಾಜೀನಾಮೆ ಕೊಟ್ಟು ಹೊರಬನ್ನಿ; ಅಪಮಾನಿತ ದಲಿತ ಸಚಿವರಿಗೆ #Jds ಕಿವಿಮಾತು

by cknewsnow desk
October 22, 2026
0

ಮೈಸೂರು ದಸರಾದಲ್ಲಿ ಅವಮಾನ ಪ್ರಸಂಗ; ಬಾಯಲ್ಲಿ ಜಾತ್ಯತೀತ ತತ್ವ, ಆಚರಣೆಯಲ್ಲಿ ಅಸೃಶ್ಯತೆ!; ಕಾಂಗ್ರೆಸ್ ವಿರುದ್ಧ ಜೆಡಿಎಸ್ ವಾಗ್ದಾಳಿ

Next Post
ಸಚಿವರಿಂದ ಉತ್ತಮ ಶಿಕ್ಷಕ ಪ್ರಶಸ್ತಿ ಸ್ವೀಕರಿಸಿದ ಬಾಗೇಪಲ್ಲಿಯ ಮೆಹಬೂಬ್ ಸಾಬಿ

ಸಚಿವರಿಂದ ಉತ್ತಮ ಶಿಕ್ಷಕ ಪ್ರಶಸ್ತಿ ಸ್ವೀಕರಿಸಿದ ಬಾಗೇಪಲ್ಲಿಯ ಮೆಹಬೂಬ್ ಸಾಬಿ

Leave a Reply Cancel reply

Your email address will not be published. Required fields are marked *

Recommended

ಬಾಗೇಪಲ್ಲಿ ಪ್ರತಿಭೆ ಬಿ.ವಿ.ಲಕ್ಷ್ಮಣರೆಡ್ಡಿಗೆ ನೀಟ್ ಪರೀಕ್ಷೆಯಲ್ಲಿ ದೇಶಕ್ಕೇ 65ನೇ ರ‍್ಯಾಂಕ್

ಬಾಗೇಪಲ್ಲಿ ಪ್ರತಿಭೆ ಬಿ.ವಿ.ಲಕ್ಷ್ಮಣರೆಡ್ಡಿಗೆ ನೀಟ್ ಪರೀಕ್ಷೆಯಲ್ಲಿ ದೇಶಕ್ಕೇ 65ನೇ ರ‍್ಯಾಂಕ್

5 years ago
ಉನ್ನತ ಶಿಕ್ಷಣ ಸಚಿವರ ಉದಾರತೆ

ಉನ್ನತ ಶಿಕ್ಷಣ ಸಚಿವರ ಉದಾರತೆ

5 years ago

Popular News

  • #SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

    #SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

    0 shares
    Share 0 Tweet 0
  • ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

    0 shares
    Share 0 Tweet 0
  • ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

    0 shares
    Share 0 Tweet 0
  • ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

    0 shares
    Share 0 Tweet 0
  • 10 ತಿಂಗಳಾದರೂ ಸಿಗದ ಭೂಮಿ; ರಾಜ್ಯದ ಕೈತಪ್ಪಲಿದೆಯಾ ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರ

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

October 28, 2026
ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

October 25, 2026
ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

October 25, 2026
ಸ್ಟಿಂಗ್ ವಿರುದ್ಧ ಕೋರ್ಟ್ ಮೊರೆ ಹೋದ ಸಿದ್ದರಾಮಯ್ಯ! ಇಂದು ಆದೇಶ ನಿರೀಕ್ಷೆ

ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

October 25, 2026

Covid 19

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

October 16, 2026
ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ