ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್ ಇಲಾಖೆಯಲ್ಲಿ ಉದ್ಯೋಗಾವಕಾಶ
ಬೆಂಗಳೂರು: ಗ್ರಾಮ ಪಂಚಾಯತಿ ಕಾರ್ಯದರ್ಶಿ ಮತ್ತು ಗ್ರಾಮೀಣಾಭಿವೃದ್ಧಿ ಸಹಾಯಕ (ಗ್ರೇಡ್-2) ಹಾಗೂ ದ್ವೀತಿಯ ದರ್ಜೆ ಲೆಕ್ಕ ಸಹಾಯಕರ ನೇರ ನೇಮಕಾತಿ ಪ್ರಕ್ರಿಯೆಯನ್ನು ಪುನಾ ಆರಂಭಿಸಲಾಗಿದೆ.
ಕೋವಿಡ್ ಕಾರಣಕ್ಕಾಗಿ ತಡೆಹಿಡಿಯಲಾಗಿದ್ದ ಆದೇಶವನ್ನು ಈಗ ತೆರವುಗೊಳಿಸಿ ಆದೇಶ ಹೊರಡಿಸಲಾಗಿದೆ.
ಈ ಕೂಡಲೇ ಪ್ರಕ್ರಿಯೆಯನ್ನು ಪ್ರಾರಂಭಿಸಲು ಎಲ್ಲ ಜಿಲ್ಲಾ ಪಂಚಾಯತಿಗಳ ಸಿಇಓಗಳಿಗೆ ಸೂಚನೆ ನೀಡಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಖಾತೆ ಸಚಿವ ಕೆ.ಎಸ್.ಈಶ್ವರಪ್ಪ ಅವರು ತಿಳಿಸಿದ್ದಾರೆ.
ಇಲಾಖೆಯ ಸುತ್ತೋಲೆ ಹೀಗಿದೆ ನೋಡಿ..