• About
  • Advertise
  • Careers
  • Contact
Sunday, May 18, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home GUEST COLUMN

ಬೊಮ್ಮಾಯಿ ಸರಕಾರಕ್ಕೆ ತಿಂಗಳು

cknewsnow desk by cknewsnow desk
September 10, 2021
in GUEST COLUMN
Reading Time: 2 mins read
0
ಬೊಮ್ಮಾಯಿ ಸರಕಾರಕ್ಕೆ ತಿಂಗಳು
948
VIEWS
FacebookTwitterWhatsuplinkedinEmail

ನಿರೀಕ್ಷೆಯಲ್ಲಿ ಕಾಮನ್‌ಮ್ಯಾನ್‌

ಬಹುಶ: ಕರ್ನಾಟಕದಲ್ಲಿ ಸಿಎಂ ಅಂದರೆ ಕಾಮನ್‌ʼಮ್ಯಾನ್‌ ಎಂದು ಹೇಳಿಕೊಂಡ ಮೊತ್ತ ಮೊದಲ ಮುಖ್ಯಮಂತ್ರಿ ಎಂದರೆ ಬಸವರಾಜ ಬೊಮ್ಮಾಯಿ ಅವರೊಬ್ಬರೇ. ಆ ದಿಕ್ಕಿನಲ್ಲೇ ಇವೆ ಅವರ ಹೆಜ್ಜೆಗಳು. ಒಂದು ತಿಂಗಳ ಅವರ ಆಡಳಿತದಲ್ಲಿ ಅಂಥ ಗುರುತುಗಳೂ ಮೂಡಿವೆ. ನಮ್ಮ ಅಂಕಣಕಾರ ಡಾ.ಗುರುಪ್ರಸಾದ್‌ ಹವಲ್ದಾರ್‌ ಆ ಬಗ್ಗೆ ಬೆಳಕು ಚೆಲ್ಲಿದ್ದಾರೆ.


ರಾಜ್ಯ ಬಿಜೆಪಿಯಲ್ಲಿನ ತೀವ್ರ ಬೆಳವಣಿಗೆಗಳ ನಡುವೆ ಕೊನೆಯ ಕ್ಷಣದಲ್ಲಿ ಮುಖ್ಯಮಂತ್ರಿಯಾಗಿ  ಹೊರಹೊಮ್ಮಿದ ಬಸವರಾಜ ಬೊಮ್ಮಾಯಿ ಅವರು ಕಳೆದ ಜು.28ರಂದು ಪ್ರಮಾಣ ವಚನ ಸ್ವೀಕರಿಸಿ ಮೊದಲ ಒಂದು ತಿಂಗಳು ಪೂರೈಸಿ ಹಂತ ಹಂತವಾಗಿ ರಾಜಕೀಯ ಅನಿಶ್ಚಿತತೆಯಿಂದ ಹೊರಬಂದು ಭರವಸೆಯತ್ತ ಹೆಜ್ಜೆ ಇಟ್ಟಿದ್ದಾರೆ.

ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರ ನೆರಳಿನಲ್ಲಿ ಪಳಗಿರುವ ಬೊಮ್ಮಾಯಿ ಅವರು ಏಕಾಂಗಿಯಾಗಿ ಅಧಿಕಾರ ಸ್ವೀಕರಿಸಿದ ಮೊದಲ ದಿನವೇ ಹಲವು ಹೊಸ ನಿರ್ಣಯಗಳನ್ನು ಪ್ರಕಟಿಸುವ ಮೂಲಕ ಶೋಷಿತರ ಪರವಾಗಿ ಸುಮಾರು 2,500 ಕೋಟಿ ರೂ.ಗಳ ಯೋಜನೆಗಳನ್ನು ಘೋಷಿಸಿದರು. ರೈತರ, ವೃದ್ಧರ, ಶೋಷಿತರ, ಅಬಲರ ಪರವಾಗಿಯೇ ಇವೆ. ಸ್ವಾತಂತ್ರೋತ್ಸವ ದಿನ ಮಾಡಿದ ಹದಿನಾಲ್ಕು ಅಮೃತ ಘೋಷಣೆಗಳೆಲ್ಲವೂ ರಾಜ್ಯದ ಸಮಗ್ರ ಅಭಿವೃದ್ಧಿಗೆ ಸಂಬಂಧಿಸಿದ ಸುಮಾರು 1,000 ಕೋಟಿ ರೂ. ಯೋಜನೆಗಳಿವೆ. ಇವು ತುಳಿತಕ್ಕೆ ಒಳಗಾದ ಸಮುದಾಯದ ಪರವಾಗಿರುವುದೇ ಆಗಿದ್ದು ಸಮುದಾಯಗಳಿಗೆ ಭರವಸೆಯನ್ನು ಮೂಡಿಸಿದೆ.

ರಾಷ್ಟ್ರೀಯ ಶಿಕ್ಷಣ ನೀತಿಗೆ ಚಾಲನೆ ನೀಡುವ ಸಂದರ್ಭದಲ್ಲಿ ಐದು ಘೋಷಣೆಗಳನ್ನು ಮಾಡಿದರು. ಅದರಲ್ಲಿ ಪ್ರಾಥಮಿಕ ಶಿಕ್ಷಣಕ್ಕೂ ಪ್ರತ್ಯೇಕ ಪರಿಷತ್ ರಚನೆಯೂ ಒಂದು. ಅದು ಚರ್ಚೆಯೊಂದರ ಸಂದರ್ಭದ ಅಭಿಪ್ರಾಯವೆಂದು ಹೇಳಲಾಗುತ್ತಿದೆ. ಅಗಸ್ಟ್‌ 15ರಂದು ಸ್ವಾತಂತ್ರ್ಯ ದಿನಾಚರಣೆಯಲ್ಲಿ ನಾಡಿನ ಜನರನ್ನು ಉದ್ದೇಶಿಸಿ ಮಾಡಿದ ಭಾಷಣದಲ್ಲೂ ಹಲವು ಹೊಸ ಕಾರ್ಯಕ್ರಮಗಳನ್ನು ಘೋಷಿಸುವ ಮೂಲಕ ತಾವು ಅಭಿವೃದ್ಧಿ ಪರ ಎಂಬುದನ್ನು ಸಿಎಂ ನಿರೂಪಿಸಿದರು.

ಬೊಮ್ಮಾಯಿ ಮುಖ್ಯಮಂತ್ರಿಯಾದಾಗ ಅವರು ಯಾರದ್ದೋ ರಬ್ಬರ್ ಸ್ಟಾಂಪ್ ಆಗುತ್ತಾರೆ, ಇನ್ನಾರದೋ ಹಿಡಿತದಲ್ಲಿರುತ್ತಾರೆ, ಅವರಿಂದ ಸ್ವಂತಿಕೆಯ ಆಡಳಿತ ಸಾಧ್ಯವೇ ಎಂಬ ಪ್ರಶ್ನೆ ಸಹಜವಾಗಿಯೇ ರಾಜಕೀಯ ವಲಯದಲ್ಲಿ ಕೇಳಿ ಬಂದಿತ್ತು. ಆದರೆ, ಒಂದು ತಿಂಗಳ ಆಡಳಿತ ಬಹುತೇಕ ಉತ್ತರ ನೀಡಿದೆ ಎನ್ನಬಹುದು. ಬ್ರಿಟಿಷ್ ಕಾಲದ ಗಾರ್ಡ್ ಆಫ್ ಆನರ್ ಎಂಬ ಸಾಂಪ್ರದಾಯಿಕ ಪದ್ಧತಿಗೆ ಮೊದಲು ತಿಲಾಂಜಲಿಯನ್ನಿಟ್ಟಿದ್ದು, ಜೀರೋ ಟ್ರಾಫಿಕ್ ವ್ಯವಸ್ಥೆ ತೆಗೆದು ಹಾಕಿದ್ದು, ಕನ್ನಡ ಪುಸ್ತಕಗಳ ಕೊಡುಗೆ ಸಹಜವಾಗಿಯೇ ಜನರ ಗಮನ ಸೆಳೆದವು. ಸುವರ್ಣಸೌಧದ ಬಳಕೆ ಬಗ್ಗೆ ನೀಡಿರುವ ಭರವಸೆಗಳು ಅವರಲ್ಲಿ ವಿಶ್ವಾಸ ಹೆಚ್ಚಿಸಿದವು.

ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ ಬೆನ್ನಲ್ಲೇ ಎದುರಾದ ಸಂಪುಟ ರಚನೆ ಮತ್ತು ಖಾತೆಗಳ ಹಂಚಿಕೆಯಲ್ಲೂ ಜಾಣ್ಮೆ ಮೆರೆದ ಮುಖ್ಯಮಂತ್ರಿ ಬೊಮ್ಮಾಯಿ ಅವರು ಅದಕ್ಕೆ ಸಂಬಂಧಿಸಿದ ಅಸಮಾಧಾನವನ್ನೂ ಅಲ್ಲಲ್ಲೇ ನಿಭಾಯಿಸಿ ತಣ್ಣಗಾಗಿಸುವಲ್ಲಿ ಯಶಸ್ವಿಯಾದರು.

ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿದ ನಂತರ ಮುಂದೆ ಯಾರೇ ಮುಖ್ಯಮಂತ್ರಿಯಾದರೂ ಬಿಜೆಪಿಯಲ್ಲಿ ಆಂತರಿಕ ತಿಕ್ಕಾಟ ತೀವ್ರ ಸ್ವರೂಪಕ್ಕೆ ತಿರುಗಿ ಕೋಲಾಹಲವಾಗುತ್ತದೆ ಎಂಬ ಪ್ರತಿಪಕ್ಷಗಳ ಎಣಿಕೆಯನ್ನು ಹುಸಿಗೊಳಿಸಿದ್ದು, ಕಳೆದ ಒಂದು ತಿಂಗಳಲ್ಲಿ ಪ್ರತಿಪಕ್ಷಗಳು ಪ್ರಮುಖವಾಗಿ ಬೆರಳು ತೋರುವಂಥ ಯಾವುದೇ ಅಚಾತುರ್ಯವಾಗದಂತೆ ಎಚ್ಚರಿಕೆ ವಹಿಸಿದ್ದಾರೆ. ಸಣ್ಣಪುಟ್ಟ ಆರೋಪಗಳು ಕೇಳಿಬಂದರೂ ಅದಕ್ಕೆ ತಕ್ಷಣವೇ ಸ್ಪಂದಿಸಿ ಸರಿಪಡಿಸುವ ಪ್ರಯತ್ನವನ್ನೂ ಬೊಮ್ಮಾಯಿ ಮಾಡಿದ್ದಾರೆ.

ತಮ್ಮನ್ನು ಭೇಟಿಯಾಗಲು ಬರುವವರು ಹಾರ ತರಾಯಿ ತರದಂತೆ ಸೂಚನೆ ನೀಡಿರುವ ಮುಖ್ಯಮಂತ್ರಿ ಬೊಮ್ಮಾಯಿ ಅವರು ಅನಗತ್ಯ ಖರ್ಚುಗಳಿಗೆ ಕಡಿವಾಣ ಹಾಕುವಂತೆ ಎಲ್ಲ ಇಲಾಖೆಗಳ ಮುಖ್ಯಸ್ಥರಿಗೆ ತಾಕೀತು ಮಾಡಿದ್ದಾರೆ.

ಕೋವಿಡ್‌ ಮೂರನೇ ಅಲೆ ಬರಬಹುದು ಎಂಬ ತಜ್ಞರ ಎಚ್ಚರಿಕೆ ಹಿನ್ನೆಲೆಯಲ್ಲಿ ತಕ್ಷಣ ಕಾರ್ಯಪ್ರವೃತ್ತರಾದ ಮುಖ್ಯಮಂತ್ರಿ ಬೊಮ್ಮಾಯಿ ಅವರು ನೆರೆಯ ಕೇರಳದಿಂದ ಅಪಾಯವಾಗುವುದನ್ನು ತಡೆಗಟ್ಟುವ ಸಂಬಂಧ ಗಡಿ ಜಿಲ್ಲೆಗಳಾದ ಮೈಸೂರು, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ಖುದ್ದಾಗಿ ತೆರಳಿ ಪರಿಶೀಲನೆ ನಡೆಸಿ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿ ಬಂದಿದ್ದಾರೆ.

ಕ್ಷಿಪ್ರ ಅವಧಿಯಲ್ಲಿ ಕೋವಿಡ್‌ ಸಂಕಷ್ಟದ ನಡುವೆಯೂ ಆರ್ಥಿಕ ಶಿಸ್ತನ್ನು ಸರಿದಾರಿಗೆ ತರಲು ಬೇಕಾದ ಪ್ರಯತ್ನಕ್ಕೂ ಕೈಹಾಕಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಕೇಂದ್ರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರನ್ನು ಕಂಡು ಆರ್ಥಿಕ ಅಭಿವೃದ್ಧಿಗೆ ಪೂರಕವಾದ ಚರ್ಚೆ ನಡೆಸಿದ್ದಾರೆ.

ಇದೆಲ್ಲದರ ನಡುವೆ ನೆರೆಯ ತಮಿಳುನಾಡು ಸರ್ಕಾರ ಮತ್ತು ಅಲ್ಲಿನ ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಉಪವಾಸದ ಬೆದರಿಕೆ ವಿರೋಧಕ್ಕೆ ಅವರದೇ ದಾಟಿಯಲ್ಲಿ ಉತ್ತರ ನೀಡಿ, ಅದಕ್ಕೆ ಪ್ರತಿಯಾಗಿ ಕಾನೂನು ತಜ್ಞರ ನೆರವಿನೊಂದಿಗೆ ಯೋಜನೆ ಜಾರಿಗೆ ಹೆಜ್ಜೆ ಹಾಕಿದ್ದಾರೆ. ಯಾವುದೇ ಕಾರಣಕ್ಕೂ ನೆಲ, ಜಲ ವಿಷಯದಲ್ಲಿ ರಾಜಿಯಾಗುವ ಪ್ರಶ್ನೆಯೇ ಇಲ್ಲ ಎಂದು ಸಾರಿರುವುದು ಕನ್ನಡಿಗರಲ್ಲಿ ವಿಶ್ವಾಸ ಮೂಡಿಸಿದೆ.

ಈ ನಡುವೆ ಬೆಳಗಾವಿ, ಹುಬ್ಬಳ್ಳಿ-ಧಾರವಾಡ ಮತ್ತು ಕಲಬುರ್ಗಿ ಮಹಾನಗರ ಪಾಲಿಕೆಗಳ ಚುನಾವಣೆ ಫಲಿತಾಂಶ ಮುಖ್ಯಮಂತ್ರಿ ಬೊಮ್ಮಾಯಿ ಅವರ ಆಡಳಿತ ಸರಿದಾರಿಯಲ್ಲಿ ಸಾಗುತಿದೆ ಎಂಬುದಕ್ಕೆ ನಿರ್ದಶನವಾಗಿದೆ, ಅಲ್ಲದೇ ಆಡಳಿತಾರೂಢ ಬಿಜೆಪಿಯಷ್ಟೇ ಅಲ್ಲದೆ ಪ್ರತಿಪಕ್ಷಗಳಿಂದಲೂ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ಈ ಒಂದು ತಿಂಗಳ ಅವಧಿಯ ಬೊಮ್ಮಾಯಿ ಅವರ ನಡೆ ಮತ್ತು ಅವರ ಆಡಳಿತದ ವೈಖರಿಯನ್ನು ಕುತೂಹಲದಿಂದ ಗಮನಿಸುತ್ತಿರುವ ಆಡಳಿತಾರೂಢ ಬಿಜೆಪಿ ವರಿಷ್ಠರಿಗೆ ಮತ್ತು ಕಾರ್ಯಕರ್ತರಿಗೆ ಒಂದಷ್ಟು ಸಮಾಧಾನ ತಂದಿದೆ. ಇತ್ತೀಚಿಗೆ ಗೃಹ ಸಚಿವ ಅಮಿತ್ ಶಾ ವರು ರಾಜ್ಯಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಕರ್ನಾಟಕದಲ್ಲಿ ಅಭಿವೃದ್ಧಿಯ ಕಾಲ ಯಡಿಯೂರಪ್ಪರಿಂದಲೇ ಶುರುವಾಯಿತು,  ಮುಂದೆ ಬೊಮ್ಮಾಯಿವರ ನೇತೃತ್ವದಲ್ಲಿ ಮುಂದಿನ ಚುನಾವಣೆ ಎದುರಿಸಲಾಗುವುದು, ಬಹುಮತದೊಂದಿಗೆ ಅಧಿಕಾರಕ್ಕೆ ಹಿಡಿಯುತ್ತೇವೆ” ಎಂಬ ಮಾತು ಅವರ ಆಡಳಿತಕ್ಕೆ ಹಿಡಿದ ಕನ್ನಡಿಯಾಗಿದೆ, ಅದರೆ ಪಕ್ಷದ ಹಿರಿಯರಿಗೆ ಇರುಸುಮುರುಸು ಅಗಿರುವುದು ಅಂತೂ ಸತ್ಯ.

ಸೆಪ್ಟಂಬರ್ 13ರಿಂದ 24ರವರೆಗೆ ನಡೆಯುವ ವಿಧಾನಸಭೆ ಅಧಿವೇಶನದಲ್ಲಿ ಮೇಲ್ಮನೆ ಮತ್ತು ಕೆಳಮನೆಯಲ್ಲಿ ವಿರೋಧ ಪಕ್ಷಗಳಿಗೆ ಉತ್ತರ ನೀಡಬೇಕಿದೆ. ಕಾನೂನು ಮತ್ತು ಸಂಸದೀಯ ಖಾತೆಯನ್ನು ನಿರ್ವಹಿಸಿದ್ದ ಬೊಮ್ಮಾಯಿ ಅವರ ರಾಜಕೀಯ ಚಾಣಾಕ್ಷತೆಗೆ ಸಿಎಂ ಆಗಿ ಕಾರ್ಯ ನಿರ್ವಹಿಸುವುದು ಸವಾಲಾಗಿದೆ.

ಮುಂದೆಯೂ ಅವರಿಗೆ ಬೆಟ್ಟದಷ್ಟು ಸವಾಲುಗಳು ನಿಂತಿವೆ ಚುನಾವಣೆ, ರಾಜ್ಯದ ಅರ್ಥಿಕ ಸ್ಥಿತಿಯನ್ನು ಸರಿದಾರಿಗೆ ತರುವುದು, ಭಿನ್ನಮತೀಯ ಚಟುವಟಿಕೆಗಳಿಗೆ ನಿಭಾಯಿಸುವುದು, ಹಲವು ಯೋಜನೆಗಳಿಗೆ ಕೇಂದ್ರ ಸರ್ಕಾರದೊಂದಿಗೆ ಮಾತನಾಡಿ ಹಣ ತರಬೇಕಾಗಿದೆ, ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಸಮರ್ಪಕವಾಗಿ ಜಾರಿಗೆ ತರಲು ಮತ್ತು ಶಾಲಾ ಕಾಲೇಜುಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ಹೀಗೆ ಹತ್ತು ಹಲವು ಸವಾಲು ಅವರ ಮುಂದಿದ್ದು, ಹೇಗೆ ನಿಭಾಯಿಸುತ್ತಾರೆ ಎಂಬುದು ಮುಂದಿನ ದಿನಗಳಲ್ಲಿ ಗೊತ್ತಾಗಲಿದೆ.

ಬೊಮ್ಮಯಿವರ ಸರ್ಕಾರ ಆರ್ಥಿಕವಾಗಿ ಹಿಂದುಳಿದ, ಶೋಷಿತರಪರ ಜನರ ಆಶೋತ್ತರಗಳಿಗೆ ಅನುಗುಣವಾಗಿ ಆಡಳಿತ ನಡೆಸಲಿ ಎಂಬುದು ನಮ್ಮ ಆಶಯ.


ಡಾ.ಗುರುಪ್ರಸಾದ ಹವಲ್ದಾರ್

  • ಮೂಲತಃ ಉಪನ್ಯಾಸಕರು. ಬಳ್ಳಾರಿ ಜಿಲ್ಲೆಯ ಹೊಸಪೇಟೆ ತಾಲ್ಲೂಕಿನ ಮರಿಯಮ್ಮನ ಹಳ್ಳಿಯವರು. ಪ್ರಸ್ತುತ ಹಗರಿಬೊಮ್ಮನಹಳ್ಳಿ ಜಿವಿಪಿಪಿ ಪದವಿ ಕಾಲೇಜನಲ್ಲಿ ಕನ್ನಡ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತ ಜೊತೆಗೆ ಪತ್ರಿಕೆಗಳಿಗೆ ವೆಬ್ ನ್ಯೂಸ್ ಪೋಟ್೯ಲ್ ಗಳಿಗೆ ಲೇಖನ ಬರೆಯುತ್ತಿದ್ದಾರೆ.
Tags: basavaraj bommaicommon mancovid19karnataka governmentnepKarnatakaone month cm
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಒಬ್ಬರೇ ಒಬ್ಬರು! ಅವರೇ ಭಾರತರತ್ನ ಕರ್ಪೂರಿ ಠಾಕೂರ್.., ಹರಿದ ಕೋಟು, ಹರಿದ ಚಪ್ಪಲಿಯೊಂದಿಗೆ ಸಾಗಿದ ಮಹಾನ್‌ ದಂತಕಥೆ!!

ಒಬ್ಬರೇ ಒಬ್ಬರು! ಅವರೇ ಭಾರತರತ್ನ ಕರ್ಪೂರಿ ಠಾಕೂರ್.., ಹರಿದ ಕೋಟು, ಹರಿದ ಚಪ್ಪಲಿಯೊಂದಿಗೆ ಸಾಗಿದ ಮಹಾನ್‌ ದಂತಕಥೆ!!

by cknewsnow desk
January 27, 2024
0

"ಒಬ್ಬರ ಜನನವು ಅವರ ಹಣೆಬರಹವನ್ನು ನಿಶ್ಚಯಿಸುವುದಿಲ್ಲ" ಎಂದ ಜನ ನಾಯಕ; ಅಪ್ಪಟ ಭಾರತರತ್ನ, ಮೀಸಲು ಕೊಟ್ಟು ಬದುಕು ಕಟ್ಟಿಕೊಟ್ಟ ಭಾರತದ ಭಾಗ್ಯವಿದಾತ

ಸರ್ದಾರ್ ಪಟೇಲರ ದೃಢ ಸಂಕಲ್ಪ, ಮುನ್ಷಿ ಅವರ ಪ್ರಚಂಡ ಧೈರ್ಯ ಮತ್ತು ಬಾಬು ರಾಜೇಂದ್ರ ಪ್ರಸಾದರ ರಾಜಿ ಇಲ್ಲದ ನಿಲುವು

ಸರ್ದಾರ್ ಪಟೇಲರ ದೃಢ ಸಂಕಲ್ಪ, ಮುನ್ಷಿ ಅವರ ಪ್ರಚಂಡ ಧೈರ್ಯ ಮತ್ತು ಬಾಬು ರಾಜೇಂದ್ರ ಪ್ರಸಾದರ ರಾಜಿ ಇಲ್ಲದ ನಿಲುವು

by cknewsnow desk
January 21, 2024
0

ಅಯೋಧ್ಯಾ ಆಂದೋಲನ ಭಾರತದ ಅಂತರಾತ್ಮದ ಧ್ವನಿ; ಎಲ್.ಕೆ.ಆಡ್ವಾಣಿ ಅವರು ತಮ್ಮ ಆತ್ಮಕಥೆ My Country My Life ಕೃತಿಯಲ್ಲಿ ಬರೆದಿರುವ ಮಹತ್ವದ ಲೇಖನ ಸಿಕೆನ್ಯೂಸ್‌ ನೌ ನಲ್ಲಿ..

ಶ್ರೀರಾಮಪ್ರಭುವೇ ಕ್ಷಮಿಸು! ನಿನ್ನ ಹೆಸರಿಟ್ಟುಕೊಂಡವರೆಲ್ಲ ನಿನ್ನವರಲ್ಲ!!

ಅಯೋಧ್ಯಾ ಆಂದೋಲನ ಭಾರತದ ಅಂತರಾತ್ಮದ ಧ್ವನಿ; ಮಂದಿರಕ್ಕೆ ಅಂಕುರಾರ್ಪಣೆ ಆಗಿದ್ದು ಹೇಗೆ?

by cknewsnow desk
January 19, 2024
0

ಎಲ್.ಕೆ.ಆಡ್ವಾಣಿ ಅವರು ತಮ್ಮ ಆತ್ಮಕಥೆ My Country My Life ಕೃತಿಯಲ್ಲಿ ಬರೆದಿರುವ ಮಹತ್ವದ ಲೇಖನ ಸಿಕೆನ್ಯೂಸ್‌ ನೌ ನಲ್ಲಿ..

ನಿಡುಮಾಮಿಡಿ ಶ್ರೀಗಳು: ಕಾವಿಯೊಳಗೆ ನಿಗಿನಿಗಿ ಹೊಳೆಯುವ ಕೆಂಪುಸೂರ್ಯ

ನಿಡುಮಾಮಿಡಿ ಶ್ರೀಗಳು: ಕಾವಿಯೊಳಗೆ ನಿಗಿನಿಗಿ ಹೊಳೆಯುವ ಕೆಂಪುಸೂರ್ಯ

by cknewsnow desk
December 28, 2023
0

ನಿಜದ ಜಾಡು ಹಿಡಿದು ಹೊರಟ ನಿಡುಮಾಮಿಡಿ ಶ್ರೀಗಳ ಹೋರಾಟಕ್ಕೆ 33 ವರ್ಷ

ಅಖಂಡ ಭಾರತದ ಅಷ್ಟದಿಕ್ಕುಗಳ ಆಮೂಲಾಗ್ರ ಅಭಿವೃದ್ಧಿಗೆ ಸುವರ್ಣ ಅಧ್ಯಾಯ ಬರೆದವರೇ ಅಜಾತಶತ್ರು ಅಟಲ್‌ ಬಿಹಾರಿ ವಾಜಪೇಯಿ

ಅಟಲ್ ಎಂದರೆ ಅಜಾತಶತ್ರು

by cknewsnow desk
December 25, 2023
0

ಇಂದು ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನ, ಉತ್ತಮ ಆಡಳಿತ ದಿನ by Dr.Gurupeasad Hawaldar ಜಾಗತಿಕ ಮಟ್ಟದ ಶ್ರೇಷ್ಠ ನಾಯಕರ ಸಾಲಿನಲ್ಲಿ ಗೌರವಿಸಲ್ಪಡುವ  ನಿಸ್ವಾರ್ಥ ರಾಜಕಾರಣಿ,...

ಶಿಕ್ಷಣ, ಶಿಕ್ಷಕ ಮತ್ತು ಬದಲಾವಣೆ; ನೂತನ ಶಿಕ್ಷಣ ನೀತಿಯ ಹೊತ್ತಿನಲ್ಲಿ ಓಶೋ ಜೋಶ್..

ಓಶೋ: ಬೆರಗು, ಬೆಡಗು ಮತ್ತು ವಿಸ್ಮಯ

by cknewsnow desk
December 11, 2023
0

ಇಂದು ಓಶೋ ಜನ್ಮದಿನ

Next Post
ಕೆಂಗಲ್ ಹನುಮಂತಯ್ಯ ಅವರನ್ನು ಮರಳಿ ಸಿಎಂ ಹುದ್ದೆಗೇರಿಸುವ ಕನಸು ಈಡೇರಲಿಲ್ಲ

ಕೆಂಗಲ್ ಹನುಮಂತಯ್ಯ ಅವರನ್ನು ಮರಳಿ ಸಿಎಂ ಹುದ್ದೆಗೇರಿಸುವ ಕನಸು ಈಡೇರಲಿಲ್ಲ

Leave a Reply Cancel reply

Your email address will not be published. Required fields are marked *

Recommended

ಆಮ್ಲಜನಕ, ರೆಮಿಡಿಸ್ವೀರ್‌ ಕೃತಕ ಅಭಾವ ಸೃಷ್ಟಿ!! ಸೋಂಕಿತರ ಸಂಖ್ಯೆಗೂ-ಬೇಡಿಕೆಗೂ ತಾಳ-ಮೇಳವಿಲ್ಲ, ಸಪ್ಲೈ ಆಗುತ್ತಿರುವುದೆಲ್ಲ ಎಲ್ಲಿ ಹೋಗುತ್ತಿದೆ ಎಂದು ಪ್ರಶ್ನಿಸಿದ ಡಿಸಿಎಂ

ಸರಕಾರವು ಅತಿಥಿ ಉಪನ್ಯಾಸಕರ ಪರವಾಗಿಯೇ ಇದೆ ಎಂದ ಡಾ.ಅಶ್ವತ್ಥನಾರಾಯಣ

3 years ago
ಸಿಎಂ ಕುರ್ಚಿ ಮೇಲೆ ಕೂತಿದ್ದಾಗಲೂ ಯೋಗಿಯಂತೆ ಬದುಕಿದ ಎನ್ಟಿಆರ್ ಅವರೇ ಸಾಧ್ಯವಾದರೆ ಮತ್ತೆ ಹುಟ್ಟಿಬನ್ನಿ

ಸಿಎಂ ಕುರ್ಚಿ ಮೇಲೆ ಕೂತಿದ್ದಾಗಲೂ ಯೋಗಿಯಂತೆ ಬದುಕಿದ ಎನ್ಟಿಆರ್ ಅವರೇ ಸಾಧ್ಯವಾದರೆ ಮತ್ತೆ ಹುಟ್ಟಿಬನ್ನಿ

4 years ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ