• About
  • Advertise
  • Careers
  • Contact
Monday, May 19, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home EDITORS'S PICKS

ಬ್ರಿಟೀಷರಿಗೆ ಬಿಸಿತುಪ್ಪವಾಗಿದ್ದ ಗಣೇಶ

cknewsnow desk by cknewsnow desk
September 10, 2021
in EDITORS'S PICKS, GUEST COLUMN
Reading Time: 1 min read
0
ಬ್ರಿಟೀಷರಿಗೆ ಬಿಸಿತುಪ್ಪವಾಗಿದ್ದ ಗಣೇಶ

Photo by Mahesh MV on Unsplash

1.1k
VIEWS
FacebookTwitterWhatsuplinkedinEmail

ಕರ್ನಾಟಕದ ಒಂದೂರಿನಲ್ಲಿ ಅರ್ಧ ದಿನವಷ್ಟೇ ಗಣಪತಿ ಹಬ್ಬ!

ಇಂದು ನಮ್ಮೆಲ್ಲರಿಗೂ ಇಷ್ಟವಾದ ಗಣೇಶ ಚತುರ್ಥಿ. ಭಾರತದ ಪ್ರೇರಕ ಶಕ್ತಿಯಾಗಿ ಗಣೇಶೋತ್ಸವವು ಸ್ವಾತಂತ್ರ್ಯ ಸಂಗ್ರಾಮದ ಮೇಲೆ ಬೀರಿದ್ದ ಪರಿಣಾಮ ಅಪಾರ. ಇವತ್ತು ನಾವು ಶ್ರದ್ಧೆ –ಭಕ್ತಿಯಿಂದ ಆಚರಿಸುವ ಹಬ್ಬ ಅಂದು ಏಕತೆಯ ಸಾಧನವಾಗಿತ್ತು. ಗೌರಿ-ಗಣೇಶ ಹಬ್ಬದ ಹೊತ್ತಿನಲ್ಲಿ ನಮ್ಮ ಅಂಕಣಕಾರ ಗುರುಪ್ರಸಾದ್‌ ಹವಲ್ದಾರ್‌ ಬಹಳ ಸೊಗಸಾಗಿ ಹಬ್ಬದ ಬಗ್ಗೆ ಬರೆದಿದ್ದಾರೆ.


ಗಣೇಶ ಚತುರ್ಥಿ ಎಂಬುದು ಪ್ರಮುಖ ಹಬ್ಬ. ಇದು ಆದಿಪೂಜಿತ ಗಣಪತಿಯ ಭಜಿಸುವ, ಆರಾಧಿಸುವ ಆತನ ಹುಟ್ಟಿದ ದಿನವನ್ನು ಸಂಭ್ರಮಿಸುವ ದಿನ. ಭಾದ್ರಪದ ಮಾಸದ ಶುಕ್ಲ ಪಕ್ಷದ ಚತುರ್ಥಿಯಂದು ಆಚರಿಸಲ್ಪಡುವ ಈ ಹಬ್ಬವು ಹತ್ತು ಹಲವು ದಿನಗಳ ಕಾಲ ಆಚರಿಸಲಾಗುವುದು. ವಿವಿಧ ಪ್ರಕಾರದ, ಆಕಾರದ ಹಾಗೂ ಆಕರ್ಷಕ ಗಣೇಶನ ಮೂರ್ತಿಗಳನ್ನು ಪೂಜಿಸಲು ತಯಾರಿಸಿ ಮಾರಲಾಗುವುದು. ಕೆರೆಯ ಅಥವಾ ಜೇಡಿಮಣ್ಣಿನಿಂದ ತಯಾರಿಸಿದ ಮೂರ್ತಿಯನ್ನು ಎಲೆ, ಹೂವು, ಬಾಳೆ ಕಂಬದಿಂದ ಅಲಂಕೃತವಾದ ಮಂಟಪದಲ್ಲಿ ಇರಿಸಿ, ಮೋದಕ, ಕಡುಬು ಮುಂತಾದ ಭಕ್ಷ್ಯ ಭೋಜ್ಯಗಳನ್ನು ಅರ್ಪಿಸಿ ಭಕ್ತಿಭಾವದಿಂದ ಪೂಜಿಸುವುದು ನಮ್ಮ ಪರಂಪರೆ.

ಸ್ವಾತಂತ್ರ್ಯೋತ್ಸವದ ಪೂರ್ವದಲ್ಲಿ ಏಕತೆಗೆ ನಾಂದಿ ಹಾಡಿದ ಹಬ್ಬ ಗಣೇಶೋತ್ಸವ. ಭಕ್ತಿ ಹಾಗೂ ಭಾವೈಕ್ಯತೆಯ ರೂಪದಲ್ಲಿ ಬಾಲಗಂಗಾಧರ ತಿಲಕರ ಮುಂದಾಳತ್ವದಲ್ಲಿ ಆರಂಭವಾದ ಗಣೇಶ ಹಬ್ಬವು ಇಂದು ನಮ್ಮೆಲ್ಲರ ಅಚ್ಚುಮೆಚ್ಚಿನ ಹಬ್ಬ.

ಚದುರಿ ಹೋಗಿದ್ದ ಅಂದಿನ ಅನಕ್ಷರಸ್ಥ ಸಮಾಜದಲ್ಲಿ ಸ್ವಾತಂತ್ರ್ಯ ಹೋರಾಟಕ್ಕಾಗಿ ಜನರನ್ನು ಒಂದೇ ವೇದಿಕೆಯಡಿ ತರಲು ತಿಲಕರು ಆಯ್ಕೆ ಮಾಡಿದ್ದೇ ಈ ಗಣೇಶ ಹಬ್ಬವನ್ನು. ಜನರೂ ಅಷ್ಟೇ. ತಿಲಕರ ಕರೆಗೆ ಜಾತಿ-ಮತ ಬೇಧವಿಲ್ಲದೆ ಬಹುಬೇಗನೆ ಸ್ಪಂದಿಸಿದರು. ದೇಶಾದ್ಯಂತ ಭಕ್ತಿಯ ಪ್ರವಾಹ ಹರಿಯುವುದರೊಂದಿಗೆ ಬ್ರಿಟಿಷರಿಗೆ ನಮ್ಮ ಏಕತೆಯ ಅರಿವನ್ನೂ ಮಾಡಿಸಿದರು.

ಸ್ವಾತಂತ್ರ್ಯ ಪೂರ್ವದಲ್ಲಿ ಗಣೇಶನ ಹಬ್ಬ ಕೇವಲ ಕುಟುಂಬದ ಆಚರಣೆಯಾಗಿತ್ತು. ಮನೆ-ಮನೆಗಳಲ್ಲಿ ಮಾತ್ರ ಆಚರಣೆಯಲ್ಲಿದ್ದ ಗಣೇಶೋತ್ಸವವನ್ನು ಲೋಕಮಾನ್ಯ ಬಾಲಗಂಗಾಧರ ತಿಲಕರು ಜನರಲ್ಲಿನ ಸ್ವಾತಂತ್ರ್ಯದ ಕಿಚ್ಚನ್ನು ಹೊರಗೆಡವುವ ಸಾಧನವಾಗಿ ಬಳಸಿಕೊಂಡರು. 1892ರಲ್ಲಿ ಮಹಾರಾಷ್ಟ್ರದಲ್ಲಿ ಬಾವ್ ಸಾಹೆಬ್ ಲಕ್ಷ್ಮಣ್ ಜವೇಲ್ ಅವರು ಪ್ರಪ್ರಥಮ ಸಾರ್ವಜನಿಕ ಗಣೇಶೋತ್ಸವನ್ನು ಆಚರಣೆ ಮಾಡಿದರಾದರೂ, 1893ರಲ್ಲಿ ತಿಲಕರು ಅದಕ್ಕೆ ಸಂಪೂರ್ಣ ಸಾರ್ವಜನಿಕ ಸ್ವರೂಪ ನೀಡಿದರು. ತಮ್ಮ ಕೇಸರಿ ಪತ್ರಿಕೆಯಲ್ಲಿ ಸಾರ್ವಜನಿಕ ಗಣೇಶೋತ್ಸವದ ಪರಿಕಲ್ಪನೆ ಕುರಿತು ಬರೆದಿದ್ದ ತಿಲಕರು, 1894ರಲ್ಲಿ ಪುಣೆಯ ಕೇಸರಿವಾಡದಲ್ಲಿ ಪ್ರಪ್ರಥಮ ಸಾರ್ವಜನಿಕ ಗಣೇಶೋತ್ಸವವನ್ನು ಆರಂಭಿಸಿದರು.

  • ಲೋಕಮಾನ್ಯ ಬಾಲಗಂಗಾಧರ ತಿಲಕರು

ಗಣೇಶ ಚತುರ್ಥಿಯ ಸಾಂಸ್ಕೃತಿಕ ಮಹತ್ವವನ್ನು ಅರಿತಿದ್ದ ಲೋಕಮಾನ್ಯರು, ಬ್ರಾಹ್ಮಣರು ಮತ್ತು ಬ್ರಾಹ್ಮಣೇತರರ ನಡುವಿನ ಅಂತರವನ್ನು ಕೊನೆಗಾಣಿಸಲು, ಅವರ ನಡುವೆ ಐಕ್ಯತೆ ಮ‌ೂಡಿಸುವುದಕ್ಕಾಗಿ ಗಣೇಶೋತ್ಸವದ ಆಚರಣೆಯನ್ನು ರಾಷ್ಟ್ರೀಯ ಹಬ್ಬವಾಗಿ ರೂಪಿಸಿ ಸಮರ್ಪಕವಾಗಿ ಬಳಸಿಕೊಂಡರು. ಆರಂಭದಲ್ಲಿ ಇದು  ಜಾತಿ-ಜಾತಿಗಳ ನಡುವಿನ ಏಕತೆಯ ಪ್ರತೀಕದಂತೆ ಕಂಡು ಬಂದರೂ ಕ್ರಮೇಣ, ಬ್ರಿಟೀಷ್ ದುರಾಡಳಿತದ ವಿರುದ್ಧ ತಿಲಕರು ಆರಂಭಿಸಿದ ಪರೋಕ್ಷ ಹೋರಾಟ ಎಂಬುದು ಎಲ್ಲರಿಗೂ ಅರ್ಥವಾಯಿತು. ತಿಲಕರು ಬ್ರಿಟಿಷರ ವಿರುದ್ಧ ಭಾರತದ ಪ್ರತಿಭಟನೆಗೆ ಗಣೇಶನನ್ನು ಕೇಂದ್ರ ಬಿಂದುವಾಗಿ ಬಳಸಿಕೊಂಡರು. ಏಕೆಂದರೆ ಗಣೇಶ ಪ್ರತಿಯೊಬ್ಬರ ಪಾಲಿಗೂ ದೇವಸ್ವರೂಪಿಯಾಗಿದ್ದ.

ಮಹಾರಾಷ್ಟ್ರದಲ್ಲಿ ಪೇಶ್ವೆ ಆಡಳಿತದಲ್ಲಿ ಮುಖ್ಯ ಹಬ್ಬವಾಗಿದ್ದ ಗಣೇಶೋತ್ಸವ, ಸ್ವರಾಜ್ ಆಂದೋಲನದ ಸಂದರ್ಭದಲ್ಲಿ ಸಂಘಟಿತ ಸ್ವರೂಪ ಪಡೆಯಿತು. ಗಣೇಶನ ಬೃಹತ್ ವಿಗ್ರಹಗಳನ್ನು ಪ್ರತಿಷ್ಠಾಪಿಸಿ 10ನೇ ದಿನ ಎಲ್ಲ ವಿಗ್ರಹಗಳನ್ನು ವಿಸರ್ಜನೆ ಮಾಡುವ ಪ್ರಕ್ರಿಯೆಯನ್ನು ತಿಲಕರು ಆರಂಭಿಸಿದರು. ನೃತ್ಯ, ನಾಟಕಗಳು, ಕವಿತೆ ವಾಚನ, ಸಂಗೀತ ಗೋಷ್ಠಿಗಳು, ಚರ್ಚಾಗೋಷ್ಠಿಗಳು ಮುಂತಾದವುಗಳ ರೂಪದಲ್ಲಿ ಗಣೇಶೋತ್ಸವವು ಸಮುದಾಯದ ಪಾಲ್ಗೊಳ್ಳುವಿಕೆಗೆ ನೆರವಾಯಿತು. ಜನರ ಮೇಲೆ ನಿಯಂತ್ರಣ ಹೇರಲು ಬ್ರಿಟಿಷ್ ಆಡಳಿತವು ಸಾಮಾಜಿಕ ಮತ್ತು ರಾಜಕೀಯ ಸಭೆಗಳನ್ನು ಬಹಿಷ್ಕರಿಸಿದ ಸಂದರ್ಭದಲ್ಲಿ ಗಣೇಶೋತ್ಸವವು ಎಲ್ಲಾ ಜಾತಿ, ಸಮುದಾಯಗಳು ಒಂದು ಕಡೆ ಸೇರುವ ತಾಣವಾಯಿತು.

ಸ್ವಾತಂತ್ರ್ಯ ಸಂಗ್ರಾಮಕ್ಕಾಗಿ ತಿಲಕರು ಆರಂಭಿಸಿದ್ದ ಗಣೇಶೋತ್ಸವವನ್ನು ಅದೇ ಕಾರಣದಿಂದಾಗಿ ಅರ್ಧ ದಿನಕ್ಕೆ ನಿಲ್ಲಿಸಿದ ಘಟನೆಯೂ ಕೂಡ ಇತಿಹಾಸದ ಪುಟಗಳಲ್ಲಿ ದಾಖಲಾಗಿವೆ. ಅದೂ ಕೂಡ ನಮ್ಮ ಕರ್ನಾಟಕದಲ್ಲಿ. ಕರ್ನಾಟಕದ ಒಂದು ಮೂಲೆಯಲ್ಲಿ ಇಂದಿಗೂ ಗಣೇಶ ವಿಗ್ರಹವನ್ನು ಕೇವಲ ಅರ್ಧ ದಿನಕ್ಕೇ ವಿಸರ್ಜನೆ ಮಾಡಲಾಗುತ್ತಿದೆ. ಸಾಮಾನ್ಯವಾಗಿ ಹುಬ್ಬಳ್ಳಿಯ ಗಣೇಶೋತ್ಸವ ಎಲ್ಲರಿಗೂ ಚಿರಪರಿಚಿತವೇ. ತಿಂಗಳು ಗಟ್ಟಲೆ ಇಲ್ಲಿ ಗಣೇಶೋತ್ಸವ ನಡೆಯುತ್ತದೆ. ಆದರೆ ಇಂತಹ ಹುಬ್ಬಳ್ಳಿಯ ಸನಿಹದ  ಕಲಘಟಗಿ ತಾಲೂಕಿನ ಭೋಗೇನಾಗರಕೊಪ್ಪ ಗ್ರಾಮದಲ್ಲಿ ಮಾತ್ರ ಅರ್ಧದಿನ ಗಣೇಶ ಪ್ರತಿಷ್ಠಾಪನೆ ಮಾಡಲಾಗುತ್ತಿದೆ.

ಭೋಗೇನಾಗರಕೊಪ್ಪದ ದೇಶ ಕುಲಕರ್ಣಿ ವಾಡೆಯಲ್ಲಿ ಗಣೇಶೋತ್ಸವದ ಬೆಳಗ್ಗೆ ಪ್ರತಿಷ್ಠಾಪನೆಗೊಳ್ಳುವ ಗಣೇಶನನ್ನು ಅದೇ ದಿನ ಮಧ್ಯಾಹ್ನ ವಿಸರ್ಜಸಲಾಗುತ್ತದೆ. ಸ್ವಾತಂತ್ರ್ಯ ಪೂರ್ವದಲ್ಲಿ ಕಲಘಟಗಿ ಪ್ರದೇಶದಲ್ಲಿ ತೀವ್ರ ಬರಗಾಲ ಆವರಿಸಿದ್ದ ಸಂದರ್ಭದಲ್ಲಿ ಸ್ಥಳೀಯ ಬ್ರಿಟೀಷ್ ಆಡಳಿತ ಉಪ್ಪಿಗೂ ಅಧಿಕ ತೆರಿಗೆ ವಿಧಿಸಿತ್ತು. ಹೀಗಾಗಿ ಅಲ್ಲಿನ ಜನರು ಕಂದಾಯ ಪಾವತಿ ಮಾಡುವ ಸ್ಥಿತಿಯಲ್ಲಿರಲಿಲ್ಲ. ಇದೇ ವಿಚಾರವಾಗಿ ಭೋಗೇನಾಗರಕೊಪ್ಪ ದೇಸಾಯಿ ಹಾಗೂ ಬ್ರಿಟೀಷರ ಮಧ್ಯೆ ಭಾರೀ ವಾಗ್ವಾದವಾಗಿತ್ತು. ಇದೇ ಸಂದರ್ಭದಲ್ಲಿ ಬ್ರಿಟೀಷ್ ಅಧಿಕಾರಿಯಾಗಿದ್ದ ಲಾರ್ಡ್ ಡಾಲ್ʼಹೌಸಿ ಜಾರಿಗೆ ತಂದ ದತ್ತು ಮಕ್ಕಳಿಗೆ ಹಕ್ಕಿಲ್ಲ ಕಾಯ್ದೆಗೆ ದೇಸಾಯಿ ಸಂಸ್ಥಾನವನ್ನು ಒಳಪಡಿಸಲು ಮುಂದಾದಾಗ ವಿರೂಪಾಕ್ಷ ದೇಸಾಯಿ ಎಂಬುವವರು ಬ್ರಿಟೀಷರ ವಿರುದ್ಧ ಚಳುವಳಿ ಆರಂಭಿಸಿದರು. ಅದೇ ಸಂದರ್ಭದಲ್ಲಿ ಹುಬ್ಬಳ್ಳಿಗೆ ಆಗಮಿಸಿದ್ದ ಲೋಕಮಾನ್ಯ ಬಾಲಗಂಗಾಧರ ತಿಲಕರು ಗಣೇಶ ಚುತುರ್ಥಿ ಮುಂದಿಟ್ಟುಕೊಂಡು ಜನರಲ್ಲಿ ಐಕ್ಯತೆ ಮೂಡಿಸುವ ನಿಟ್ಟಿನಲ್ಲಿ ಹೋರಾಡುತ್ತಿದ್ದರು. ಅವರ ಕರೆಗೆ ಅನುಗುಣವಾಗಿ ಮೊದಲ ವರ್ಷದ ಆಚರಣೆ 5 ದಿನ ವಿಜೃಂಭಣೆಯಿಂದ ನಡೆದಿತ್ತು. ಜನರು ಕೂಡ ಒಗ್ಗಟ್ಟಿನ ಮಂತ್ರಿ ಜಪಿಸುವುದರೊಂದಿಗೆ ಬ್ರಿಟೀಷ್ ದುರಾಡಳಿತದ ವಿರುದ್ಧ ಕ್ರಮೇಣ ದಂಗೆ ಎದ್ದಿದ್ದರು.

ಇದು ಬ್ರಿಟೀಷ್ ಅಧಿಕಾರಿಗಳ ಕೈಕೈ ಹಿಸುಕಿಕೊಳ್ಳುವಂತೆ ಮಾಡಿತ್ತು. ಹೀಗಾಗಿ ಗಣೇಶೋತ್ಸವ ನಡೆಯುತ್ತಿದ್ದ ತಾಲೂಕಿಗೆ ಬ್ರಿಟೀಷ್ ಸೈನಿಕರನ್ನು ನುಗ್ಗಿಸುವ ಕುರಿತು ಬ್ರಿಟೀಷ್ ಅಧಿಕಾರಿಗಳು ನಿರ್ಧಾರ ಕೈಗೊಂಡಿದ್ದರು. ಈ ವಿಚಾರ ತಿಳಿದ ಗ್ರಾಮಸ್ಥರು ಗಣೇಶ ಮೂರ್ತಿಗೆ ಯಾವುದೇ ಧಕ್ಕೆಯಾಗಬಾರದು ಎಂದು ನಿರ್ಧರಿಸಿ ಅಂದೇ ಮಧ್ಯಾಹ್ನದ ಹೊತ್ತಿಗೇ ಗ್ರಾಮದ ಹುಡೇದ ಬಾವಿಯಲ್ಲಿ ಗಣೇಶ ಮೂರ್ತಿಯನ್ನು ವಿಸರ್ಜಿಸಿದರು. ಅಂದಿನಿಂದ ಇಲ್ಲಿ ಪ್ರತೀವರ್ಷ ಅರ್ಧ ದಿನ ಮಾತ್ರ ಗಣೇಶ ಮೂರ್ತಿಯನ್ನು ಇಟ್ಟು ಪೂಜಿಸಲಾಗುತ್ತದೆ. ಬೆಳಗ್ಗೆ ಮೂರ್ತಿಯನ್ನು ಇಟ್ಟು ಮಧ್ಯಾಹ್ನ ಊಟಕ್ಕೂ ಮೊದಲು ವಿಸರ್ಜಿಸಲಾಗುತ್ತದೆ.

ಭಕ್ತಿಭಾವದೊಂದಿಗೆ, ರಾಷ್ಟ್ರೀಯತೆಯನ್ನು, ಏಕತೆಯನ್ನು ಪಸರಿಸಿದ ನಮ್ಮ ಗಣಪತಿ ಹಬ್ಬ, ಇತ್ತೀಚಿನ ದಿನಗಳಲ್ಲಿ ತನ್ನ ನಿಜ ಅರ್ಥವನ್ನು ಕಳೆದುಕೊಳ್ಳುತ್ತಿರುವುದು ಬೇಸರದ ಸಂಗತಿ. ಹಬ್ಬವು ಈಗ ಆಡಂಬರ, ಮಾಲಿನ್ಯ, ಪರಿಸರ ಹಾನಿಗೆ ಕಾರಣ ಎಂಬಂತೆ ಆಗುತ್ತಿದೆ. ಇದರ ಪ್ರತಿಯಾಗಿ, ಪರಿಹಾರವಾಗಿ ಪರಿಸರ ಸ್ನೇಹಿ ಗಣಪತಿ ಹಬ್ಬದ ಆಚರಣೆಯ ಹೊಸ ಪರಂಪರೆ ಈ ನಡುವೆ ಪ್ರಾರಂಭವಾಗಿದೆ. ಗಣಪತಿಯನ್ನು ಬಣ್ಣಗಳಿಂದ ಚಂದ ಅಲಂಕರಿಸಿ, ಉತ್ಸಾಹದಿಂದ ಆಚರಿಸಲು ಇಚ್ಚಿಸುತ್ತಾರೆ, ಆದರೆ ಗಣೇಶನ ಮೂರ್ತಿಯನ್ನು ನೀರಿನಲ್ಲಿ ವಿಸರ್ಜಿಸುವುದರಿಂದ ಪರಿಸರದ ಮೇಲೆ ಆಗುವ ಪರಿಣಾಮವನ್ನು ನೋಡಬೇಕಿದೆ.

ರಾಸಾಯನಿಕ ಬಣ್ಣ ಮತ್ತು ಇತರೆ ವಸ್ತುಗಳಿಂದ ತಯಾರಿಸಿದ ಮೂರ್ತಿಯನ್ನು ನೀರಿನಲ್ಲಿ ವಿಸರ್ಜಿಸುವುದರಿಂದ ನೀರಿನ ಮಾಲಿನ್ಯ ಉಂಟಾಗುತ್ತದೆ. ಅಲಂಕಾರಕ್ಕೆ ಬಳಸುವ ಪ್ಲಾಸ್ಟಿಕ್, ತರ್ಮಕೋಲ್ ಕರಗದೆ ಪರಿಸರದ ಮೇಲೆ ದುಷ್ಪರಿಣಾಮ ಉಂಟು ಮಾಡುತ್ತದೆ. ಈ ವಸ್ತುಗಳಲ್ಲಿನ ವಿಷದ ಅಂಶವು ಸಸ್ಯ ಮತ್ತು ಜಲಚರಗಳ ಮೇಲೆ ಮಾರಕ ಪ್ರಭಾವ ಬೀರುತ್ತದೆ. ಆದ್ದರಿಂದ ಪರಿಸರ ಸ್ನೇಹಿ ಹಬ್ಬವನ್ನು ಭಕ್ತಿಭಾವದಿಂದ,  ಉಲ್ಲಾಸ ಹಾಗೂ ಸೌಹಾರ್ದದೊಂದಿಗೆ, ಸಾಮಾಜಿಕ ಕಳವಳದೊಂದಿಗೆ ಆಚರಿಸಿ ಪರಿಸರವನ್ನು ಸಂರಕ್ಷಿಸುವುದು ಒಳಿತು.


ಡಾ.ಗುರುಪ್ರಸಾದ ಹವಲ್ದಾರ್

  • ಮೂಲತಃ ಉಪನ್ಯಾಸಕರು. ಬಳ್ಳಾರಿ ಜಿಲ್ಲೆಯ ಹೊಸಪೇಟೆ ತಾಲ್ಲೂಕಿನ ಮರಿಯಮ್ಮನ ಹಳ್ಳಿಯವರು. ಪ್ರಸ್ತುತ ಹಗರಿಬೊಮ್ಮನಹಳ್ಳಿ ಜಿವಿಪಿಪಿ ಪದವಿ ಕಾಲೇಜನಲ್ಲಿ ಕನ್ನಡ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತ ಜೊತೆಗೆ ಪತ್ರಿಕೆಗಳಿಗೆ ವೆಬ್ ನ್ಯೂಸ್ ಪೋಟ್೯ಲ್ ಗಳಿಗೆ ಲೇಖನ ಬರೆಯುತ್ತಿದ್ದಾರೆ.

Tags: 1947Bal Gangadhar TilakBengalurucknewsnowganesh chaturthi 2021ganesha festivalindiaindian freedom strugglekarnataka
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

ಜೈಲಿನಿಂದ ಹೊರಬಂದ ಕೂಡಲೇ ಮೀಡಿಯಾ ಮುಂದೆ ಕುಳಿತ ಅಲ್ಲು ಅರ್ಜುನ್‌

ಜೈಲಿನಿಂದ ಹೊರಬಂದ ಕೂಡಲೇ ಮೀಡಿಯಾ ಮುಂದೆ ಕುಳಿತ ಅಲ್ಲು ಅರ್ಜುನ್‌

by cknewsnow desk
December 14, 2024
0

ಅರೆಸ್ಟ್ ಆದ 24 ಗಂಟೆಗಳಲ್ಲೇ ಜೈಲಿನಿಂದ ರಿಲೀಸ್; ಬಾಕ್ಸಾಫೀಸ್ ನಲ್ಲಿ ಧೂಳೆಬ್ಬಿಸುತ್ತಿದೆ ಪುಷ್ಪಾ - 2

ಉದ್ಯೋಗ & ಕೌಶಲ್ಯಕ್ಕೆ ₹1.48 ಲಕ್ಷ ಕೋಟಿ; ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಸಂತಸ

ಉದ್ಯೋಗ & ಕೌಶಲ್ಯಕ್ಕೆ ₹1.48 ಲಕ್ಷ ಕೋಟಿ; ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಸಂತಸ

by cknewsnow desk
July 23, 2024
0

ಪ್ರಧಾನಿ ಕನಸಿನ 'ವಿಕಸಿತ ಭಾರತ' ನಿರ್ಮಾಣಕ್ಕೆ ಶಕ್ತಿ ತುಂಬುವ ಬಜೆಟ್

ಹಾಸನ ಪೆನ್‍ಡ್ರೈವ್ ಪ್ರಕರಣ; ಅಶ್ಲೀಲ ವಿಡಿಯೋ ಲೀಕ್‌ ಹಿಂದೆ DCM ಡಿಕೆಶಿ ಕೈ ಚಳಕ

ಹಾಸನ ಪೆನ್‍ಡ್ರೈವ್ ಪ್ರಕರಣ; ಅಶ್ಲೀಲ ವಿಡಿಯೋ ಲೀಕ್‌ ಹಿಂದೆ DCM ಡಿಕೆಶಿ ಕೈ ಚಳಕ

by cknewsnow desk
May 6, 2024
0

ನಾಗಮಂಗಲದ ಎಲ್.‌ಆರ್.‌ಶಿವರಾಮೇಗೌಡ ಮಧ್ಯಸ್ಥಿಕೆ; ಮೊಬೈಲ್‌ ಸಂಭಾಷಣೆ ಆಡಿಯೋ ಬಿಡುಗಡೆ

ಶ್ರೀರಾಮ ನವಮಿ ಶುಭಾಶಯಗಳು

ಶ್ರೀರಾಮ ನವಮಿ ಶುಭಾಶಯಗಳು

by cknewsnow desk
April 17, 2024
0

ರಾಮಾಯ ರಾಮಭದ್ರಾಯ ರಾಮಚಂದ್ರಾಯ ವೇದಸೇ | ರಘುನಾಥಾಯ ನಾಥಾಯ ಸೀತಾಯಾಃ ಪತಯೇ ನಮಃ || ಶ್ರೀ ರಾಮ ಜಾನಕೀನಾಥ ತಾಟಕಾಸುರ ಮರ್ದನ | ಇಕ್ಷ್ವಾಕುಕುಲಸಂಭೂತ ರಣಪಂಡಿತ ರಾಘವಃ...

ಪ್ರಕಾಶ್ ರೈ ಸಂಸ್ಥೆಗೆ ಸರಕಾರದ ಹಣ; ದಾರಿ ತಪ್ಪಿದ ಕಲಾವಿದ ಎಂದು ಕುಟುಕಿದ JDS

ಪ್ರಕಾಶ್ ರೈ ಸಂಸ್ಥೆಗೆ ಸರಕಾರದ ಹಣ; ದಾರಿ ತಪ್ಪಿದ ಕಲಾವಿದ ಎಂದು ಕುಟುಕಿದ JDS

by cknewsnow desk
April 16, 2024
0

ಕುಮಾರಸ್ವಾಮಿ ಅವರನ್ನು ದಾರಿ ತಪ್ಪಿದ ಮಗ ಎಂದ ನಟನಿಗೆ ತಿರುಗೇಟು ಕೊಟ್ಟ ದಳ

Next Post
ಬೊಮ್ಮಾಯಿ ಸರಕಾರಕ್ಕೆ ತಿಂಗಳು

ಬೊಮ್ಮಾಯಿ ಸರಕಾರಕ್ಕೆ ತಿಂಗಳು

Leave a Reply Cancel reply

Your email address will not be published. Required fields are marked *

Recommended

ಅಪಾಯದಲ್ಲಿದೆ ಗುಡಿಬಂಡೆ ಅಮಾನಿಭೈರ ಸಾಗರ ಕೆರೆ ಏರಿ

ಅಪಾಯದಲ್ಲಿದೆ ಗುಡಿಬಂಡೆ ಅಮಾನಿಭೈರ ಸಾಗರ ಕೆರೆ ಏರಿ

4 years ago
ಬುರ್ಖಾ ಧರಿಸಿ ಪ್ರೇಕ್ಷಕರ ನಡುವೆ ಸಿನಿಮಾ ವೀಕ್ಷಿಸಿದ ನಟಿ

ಬುರ್ಖಾ ಧರಿಸಿ ಪ್ರೇಕ್ಷಕರ ನಡುವೆ ಸಿನಿಮಾ ವೀಕ್ಷಿಸಿದ ನಟಿ

3 years ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ