• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home CHIKKABALLAPUR

ಹಳ್ಳಿಗಳಲ್ಲಿ ಲಸಿಕೆ ಎಂದರೆ ಓಡುವ ಮಹಿಳೆಯರು

cknewsnow desk by cknewsnow desk
September 12, 2021
in CHIKKABALLAPUR, STATE
Reading Time: 2 mins read
0
ಹಳ್ಳಿಗಳಲ್ಲಿ ಲಸಿಕೆ ಎಂದರೆ ಓಡುವ ಮಹಿಳೆಯರು
1.1k
VIEWS
FacebookTwitterWhatsuplinkedinEmail

ಗುಡಿಬಂಡೆ: ಹಬ್ಬದ ರಜೆ ಪಕ್ಕಕ್ಕಿಟ್ಟು ಮನೆ ಬಾಗಿಲಿಗೇ ಹೋಗಿ ಲಸಿಕೆ ನೀಡಿದ ಸಿಬ್ಬಂದಿ

by GS Bharath Gudibande

ಗುಡಿಬಂಡೆ: ತಾಲೂಕಿನ ಪ್ರತಿ ಹಳ್ಳಿಯ ಮನೆ ಬಾಗಿಲಿಗೇ ಆರೋಗ್ಯ ಇಲಾಖೆ, ತಹಸೀಲ್ದಾರ್, ತಾಲೂಕು ಪಂಚಾಯಿತಿ ಇಒ, ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿ ಮತ್ತು ಸಿಬ್ಬಂದಿಯೇ ಹೋಗಿ ಜನರಿಗೆ ವ್ಯಾಕ್ಸಿನೇಷನ್‌ ಮಾಡಿಸುತ್ತಿದ್ದಾರೆ.

ಆದರೆ, ಗ್ರಾಮೀಣ ಭಾಗದಲ್ಲಿ ಕೋವಿಡ್ ಲಸಿಕೆ ಪಡೆಯಲು ಕೆಲ ಮಹಿಳೆಯರು ನಿರಾಕರಿಸುತ್ತಿದ್ದು ಅವರ ಮನವೊಲಿಕೆ ಮಾಡಲು ಅಧಿಕಾರಿಗಳು ಶತ ಪ್ರಯತ್ನ ಮಾಡುತ್ತಿದ್ದಾರೆ.

ಹಬ್ಬ-ಹರಿ, ರಜೆ ಎನ್ನದೇ ತಾಲೂಕಿನ 8 ಪಂಚಾಯಿತಿಯ ಶೇ.50ಕ್ಕಿಂತ ಹೆಚ್ಚು ಹಳ್ಳಿಗಳಲ್ಲಿ 100% ಲಸಿಕೀಕರಣ ಯಶಸ್ವಿಯಾಗಿ ಸಾಧಿಸಿರುವುದು ಸಂತಸವಾಗಿದೆ ಎಂದು ತಹಸೀಲ್ದಾರ್ ಸಿಬ್ಗತ್ ವುಲ್ಲಾ ಅವರು ಸಿಕೆನ್ಯೂಸ್ ನೌ ವೆಬ್‌ತಾಣಕ್ಕೆ ಮಾಹಿತಿ ನೀಡಿದರು.

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲೇ ಕಟ್ಟಕಡೆಯ ಹಾಗೂ ಚಿಕ್ಕ ತಾಲೂಕು ಆಗಿರುವ ಗುಡಿಬಂಡೆಯಲ್ಲಿ ಲಸಿಕೆ ಹಾಕುವುದಕ್ಕೆ ವ್ಯಾಪಕ ಕ್ರಮ ಕೈಗೊಳ್ಳಲಾಗಿದ್ದು, ತಾಲೂಕು ಆಡಳಿತ ಒಟ್ಟಾಗಿ ಡ್ರೈವ್‌ ಮಾಡುತ್ತಿರುವುದು ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.

ಮದುವೇ ಮನೆಯಲ್ಲಿ ಲಸಿಕೀಕರಣ

ತಾಲೂಕಿನ ವರ್ಲಕೊಂಡ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮದುವೆ ಮನೆಯಲ್ಲಿ ಎಲ್ಲರಿಗೂ ಲಸಿಕೀಕರಣ ಮಾಡಲಾಗಿದೆ. ವ್ಯಾಕ್ಸಿನೇಷನ್‌ ವಿಚಾರದಲ್ಲಿ ಭಯ, ಅಪ ಪ್ರಚಾರವನ್ನು ನಂಬದೇ ಮುಂದೆ ಬರಬೇಕು, ಲಸಿಕೀಕರಣ ಮಾಡಿಸಿಕೊಳ್ಳಬೇಕು ಎಂದು ತಹಸೀಲ್ದಾರ್‌ ಕೋರಿದ್ದಾರೆ.

ಎಲ್ಲೆಲ್ಲಿ ಸಾಧ್ಯವೋ ಅಲ್ಲೆಲ್ಲ ಜನರಿಗೆ ಲಸಿಕೆ ಹಾಕುವ ಕೆಲಸ ಭರದಿಂದ ಸಾಗಿದೆ. ಮದುವೆ ಮನೆಗಳು, ಪೂಜಾ ಕಾರ್ಯಕ್ರಮ ಸೇರಿ ಜನ ಸೇರುವ ಪ್ರದೇಶಗಳಲ್ಲಿ ಹುಡುಕಿ-ಹುಡುಕಿ ಲಸಿಕೆ ನೀಡಲಾಗುತ್ತಿದೆ.

ಟೀ, ಪಾನಿಪುರಿ ಅಂಗಡಿ, ಬಸ್ ನಿಲ್ದಾಣದಲ್ಲಿ ಲಸಿಕೆ

ವಿಶೇಷವೆಂದರೆ ಪಟ್ಟಣ ಹಾಗೂ ತಾಲೂಕಿನಲ್ಲಿ ಹೆಚ್ಚು ಜನ ಸೇರುವ ಸ್ಥಳಗಳಾದ ಕಾಫಿ-ಟೀ, ಪಾನಿಪುರಿ ಅಂಗಡಿ, ಬಸ್ ನಿಲ್ದಾಣದಲ್ಲಿ ತಹಸೀಲ್ದಾರ್ ಸಿಬ್ಗತ್ ವುಲ್ಲಾ ನೇತೃತ್ವದಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳು, ಪೊಲೀಸ್ ಇಲಾಖೆಯ ಸಹಕಾರದಿಂದ ಲಸಿಕೀಕರಣ ಮಾಡಲಾಗುತ್ತಿದೆ. ತಾಲೂಕಿನಲ್ಲಿ ಸಂಪೂರ್ಣ ಲಸಿಕೀರಣ ಮಾಡುವ ದಿಕ್ಕಿನಲ್ಲಿ ಇದೊಂದು ಗಂಭೀರ ಪ್ರಯತ್ನವಾಗಿದೆ. ಕೆಲ ದಿನಗಳ ಹಿಂದೆ ರೈತರಿಗೆ ರಸಗೊಬ್ಬರ ವಿತರಣೆ ಮಾಡುವ ಅಂಗಡಿ ಮುಂದೆಯೇ ವ್ಯಾಕ್ಸಿನೇಷನ್‌ ಮಾಡಲಾಯಿತು.

ಹೀಗೆ ಪ್ರತಿ ಅವಕಾಶವನ್ನು ಅಧಿಕಾರಿಗಳು ಸದುಪಯೋಗ ಮಾಡಿಕೊಂಡು ಯಾರೂ ಲಸಿಕೆಯಿಂದ ತಪ್ಪಿಸಿಕೊಳ್ಳದಂತೆ ಎಚ್ಚರಿಕೆ ವಹಿಸುತ್ತಿದ್ದಾರೆ.

ಲಸಿಕೆ ಬೇಡವೆನ್ನುತ್ತಿರುವ ಮಹಿಳೆಯರು

ಎಲ್ಲರಿಗೂ ಲಸಿಕೆ ನೀಡಲು ಅಧಿಕಾರಿಗಳು ಹರಸಾಹಸ ಪಡುತ್ತಿದ್ದಾರೆ ಎನ್ನುವುದಕ್ಕೆ ಹಳ್ಳಿಗಳಲ್ಲಿ ಕಂಡು ಬರುತ್ತಿರುವ ದೃಶ್ಯಗಳೇ ಸಾಕ್ಷಿ.

ತಾಲೂಕಿನ ಕೆಲ ಗ್ರಾಮಗಳಲ್ಲಿ ಲಸಿಕೆ ಎಂದರೆ ಮಹಿಳೆರೆಯರು ಮಂಗಮಾಯ ಆಗುತ್ತಿದ್ದಾರೆ. ವಯೋವೃದ್ದ ಮಹಿಳೆಗೆ ಗ್ರಾಮವೊಂದರಲ್ಲಿ ಲಸಿಕೆ ನೀಡಲು ಸಿಬ್ಬಂದಿ ದೊಡ್ಡ ಸರ್ಕಸ್‌ ಅನ್ನೇ ಮಾಡಬೇಕಾಯಿತು.

ಪರಿಪರಿಯಾಗಿ ಕೇಳಿಕೊಂಡರೂ ಲಸಿಕೆ ಪಡೆಯಲು ಜಗ್ಗದ ಮಹಿಳೆ ಹೇಳಿದ್ದಿಷ್ಟು; ಬಾಲ್ಯದಿಂದಲೂ ಮಾತ್ರೆ, ಇಂಜೆಕ್ಷನ್ ತಗೊಂಡಿಲ್ಲ. ಈಗಲೂ ಹಾಕಿಸಿಕೊಳ್ಳೋದಿಲ್ಲ ಎಂದು ಆ ಮಹಿಳೆ ಹಠ ಹಿಡಿದರು. ಲಸಿಕೆ ಹಾಕಿಸಿಕೊಂಡರೆ ಒಂದು ದಿನದ ಕೂಲಿ ಹೋಗುತ್ತದೆ ಅಂದ ಮಹಿಳೆಗೆ ಹಣ ನೀಡಿ ಮನವೊಲಿಸುವ ಪ್ರಯತ್ನ ನಡೆಸಲಾಯಿತು. ಕೊನೆಗೆ ಲಸಿಕೆ ಹಾಕಿಸಿಕೊಂಡಿಲ್ಲಾಂದ್ರೆ ರೇಷನ್ ಕಟ್ ಮಾಡ್ತೀವಿ ಅಂದರೆ, ಕೊಡುವ 4 ಕೆ.ಜಿ. ಅಕ್ಕಿಯಿಂದ ಕೂಲಿ ಮಾಡೋದು ತಪ್ಪಿಲ್ಲ ಸ್ವಾಮಿ ಎಂದರು ಆ ಮಹಿಳೆ. ಕಡೆಗೂ ಅಧಿಕಾರಿಗಳು ಮನವೊಲಿಸಿ ಲಸಿಕೆ ನೀಡುವಲ್ಲಿ ಯಶಸ್ವಿಯಾದರು.

ತಾಲೂಕಿನಲ್ಲಿ ಲಸಿಕೀಕರಣ ಪ್ರತಿದಿನ ನಡೆಯುತ್ತಿದೆ. ಶೇ.100ರಷ್ಟು ಲಸಿಕೀಕರಣ ಪ್ರಗತಿ ಸಾಧಿಸುವ ಗುರಿ ಹೊಂದಿಲಾಗಿದ್ದು, ಈಗಾಗಲೇ ಶೇ.50ಕ್ಕಿಂತ ಹೆಚ್ಚು ಹಳ್ಳಿಗಳಲ್ಲಿ ಈ ಪ್ರಗತಿ ಸಾಧಿಸಲಾಗಿದೆ, ಹೆಚ್ಚು ಜನ ಸೇರುವ ಪ್ರದೇಶಗಳಲ್ಲಿ ಲಸಿಕೀಕರಣ ಮಾಡುತ್ತಿದ್ದೇವೆ. ನಮ್ಮ ಆರೋಗ್ಯ ಇಲಾಖೆ, ಇಒ ರವೀಂದ್ರ, ಡಾ.ನರಸಿಂಹಮೂರ್ತಿ, ಪೊಲೀಸ್ ಇಲಾಖೆ, ಪಪಂ ಮುಖ್ಯಾಧಿಕಾರಿ ರಾಜಶೇಖರ್, ಫ್ರಂಟ್ʼಲೈನ್ ವಾರಿಯರ್ಸ್‌ʼಗಳ ಕೆಲಸ ಮೆಚ್ಚಲೇಬೇಕು. ಇನ್ನು, ಜನ ಸ್ವ ಇಚ್ಛೆಯಿಂದ ಮುಂದೆ ಬಂದು ಲಸಿಕೆ ಪಡೆಯಬೇಕು. ಮಹಿಳೆಯರು ಹೆದರುವ ಅಗತ್ಯ ಇಲ್ಲ.

ಸಿಬ್ಗತ್ ವುಲ್ಲಾ, ತಹಸೀಲ್ದಾರ್, ಗುಡಿಬಂಡೆ ತಾಲೂಕು
Tags: chikkaballapuracovid19gudibandekarnataka fights coronavaccination
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ತಲೈವಿ: ಅಮ್ಮನ ವೈಭವೀಕರಣ! ನಿರ್ದೇಶಕನಿಗಿಲ್ಲ ಕರುಣ!!

ತಲೈವಿ: ಅಮ್ಮನ ವೈಭವೀಕರಣ! ನಿರ್ದೇಶಕನಿಗಿಲ್ಲ ಕರುಣ!!

Leave a Reply Cancel reply

Your email address will not be published. Required fields are marked *

Recommended

ಥೂ! ಅಸಹ್ಯ!! ಹಣಕ್ಕಾಗಿ ಮತ! ತಿರುಪತಿ ಲಡ್ಡು, ಕೈ ತುಂಬಾ ದುಡ್ಡು!!

ಥೂ! ಅಸಹ್ಯ!! ಹಣಕ್ಕಾಗಿ ಮತ! ತಿರುಪತಿ ಲಡ್ಡು, ಕೈ ತುಂಬಾ ದುಡ್ಡು!!

4 years ago
ರಥಸಪ್ತಮಿ ಪ್ರಯುಕ್ತ ಚಿಕ್ಕಬಳ್ಳಾಪುರದಲ್ಲಿ ಸೂರ್ಯ ನಮಸ್ಕಾರ, ಯೋಗ ಕಾರ್ಯಕ್ರಮ

ರಥಸಪ್ತಮಿ ಪ್ರಯುಕ್ತ ಚಿಕ್ಕಬಳ್ಳಾಪುರದಲ್ಲಿ ಸೂರ್ಯ ನಮಸ್ಕಾರ, ಯೋಗ ಕಾರ್ಯಕ್ರಮ

5 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ