• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS STATE

ಹೈವೋಲ್ಟೇಜ್ ಅಧಿವೇಶನ

P K Channakrishna by P K Channakrishna
September 12, 2021
in STATE
Reading Time: 2 mins read
0
ಹೈವೋಲ್ಟೇಜ್ ಅಧಿವೇಶನ
937
VIEWS
FacebookTwitterWhatsuplinkedinEmail

ನಾಳೆಯಿಂದ ವಿಧಾನ ಮಂಡಲ ಕಲಾಪ; ಜಾತಿ ಗಣತಿ ವರದಿ, ಶಿಕ್ಷಣ ನೀತಿ ಬಗ್ಗೆ ಚಕಮಕಿ ಖಚಿತ

ಬೆಂಗಳೂರು: ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾದ ಮೇಲೆ ನಡೆಯುತ್ತಿರುವ ಮೊದಲ ವಿಧಾನ ಮಂಡಲ ಅಧಿವೇಶನ ನಾಳೆಯಿಂದ (ಸೋಮವಾರ) ಆರಂಭವಾಗಲಿದ್ದು, ಸರಕಾರವನ್ನು ವಿವಿಧ ವಿಷಯಗಳ ಸುಳಿಗೆ ಸಿಕ್ಕಿಸಲು ಪ್ರತಿಪಕ್ಷಗಳು ರೆಡಿಯಾಗಿವೆ.

ಮಖ್ಯವಾಗಿ ಕಾಂಗ್ರೆಸ್ ಪಕ್ಷವು ಕಲಾಪದಲ್ಲಿ ಸರಕಾರದ ಚಳಿ ಬಿಡಿಸಲು ನಿರ್ಧರಿಸಿದೆ. ಅಧಿವೇಶನ ಸೆಪ್ಟೆಂಬರ್ 24ರವರೆಗೆ ನಡೆಯಲಿದ್ದು, ಹತ್ತು ಹಲವು ವಿಷಯಗಳ ಬಗ್ಗೆ ಬಿಸಿಬಿಸಿ ಚರ್ಚೆ ನಡೆಯುವುದು ಖಚಿತ.

ಹದಗೆಟ್ಟ ಕಾನೂನು ಸುವ್ಯವಸ್ಥೆ, ಮೈಸೂರಿನಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣ, ತೈಲ ಮತ್ತು ಗ್ಯಾಸ್‌ ಬೆಲೆ ಏರಿಕೆ, ಆರ್ಥಿಕತೆ ಕುಸಿತ, ಸಚಿವರ ಮೇಲಿನ ಭ್ರಷ್ಟಾಚಾರ ಆರೋಪ, ಕೋವಿಡ್, ರಾಷ್ಟ್ರೀಯ ಶಿಕ್ಷಣ ನೀತಿ, ಜಾತಿಗಣತಿ ವರದಿ ಸೇರಿ ಇನ್ನೂ ಕೆಲವಾರು ವಿಚಾರಗಳನ್ನು ಮುಂದಿಟ್ಟುಕೊಂಡು ಸರಕಾರದ ಮೇಲೆ ಮುಗಿಬೀಳಲು ಕಾಂಗ್ರೆಸ್ ನಾಯಕರು ನಿರ್ಧರಿಸಿದ್ದಾರೆ. ಈಗಾಗಲೇ ಶಾಸಕಾಂಗ ಪಕ್ಷದ ಸಭೆಯಲ್ಲಿ ಚರ್ಚೆ ನಡೆಸಿರುವ ಕೈಪಾಳೆಯ ಸದನದಲ್ಲಿ ಪ್ರಸ್ತಾಪ ಮಾಡಬೇಕಿರುವ ವಿಷಯಗಳನ್ನು ಪಟ್ಟಿ ಮಾಡಿಕೊಂಡಿದೆ.

ಒಟ್ಟಾರೆಯಾಗಿ, ಈ ಹೈವೋಲ್ಟೇಜ್‌ ಅಧಿವೇಶನದಲ್ಲಿ ಜಾತಿ ಗಣತಿ ವರದಿಯ ಬಗ್ಗೆ ಭಾರೀ ಚರ್ಚೆ ನಡೆಯುವ ಸಾಧ್ಯತೆ ಹೆಚ್ಚಿದ್ದು, ಕಾಂಗ್ರೆಸ್‌ ಮತ್ತು ಬಿಜೆಪಿ ನಡುವೆ ಮಾತಿನ ಚಕಮಕಿ ತಳ್ಳಿಹಾಕುವಂತಿಲ್ಲ.

ಇನ್ನು; ಈಚೆಗೆ ನಡೆದ ಮಹಾನಗರ ಪಾಲಿಕೆಗಳ ಫಲಿತಾಂಶ, ಬೊಮ್ಮಾಯಿ ಅಧಿಕಾರಕ್ಕೆ ಬಂದ ಮೇಲೆ  ಜಾರಿಯಾದ ಜನಪರ ಕಾರ್ಯಕ್ರಮಗಳು, ಅಮೃತೋತ್ಸವದ ಘೋಷಣೆಗಳು ಸೇರಿ ಜನಪರ ಕಾರ್ಯಕ್ರಮಗಳ ಬಗ್ಗೆ ಅಂಕಿ-ಅಂಶ ಸಹಿತ ಪ್ರತಿಪಕ್ಷ ನಾಯಕರಿಗೆ ತಿರುಗೇಟು ನೀಡಲು ಆಡಳಿತ ಪಕ್ಷವೂ ಸಿದ್ಧತೆ ಮಾಡಿಕೊಂಡಿದೆ.

ಜಾತಿ ಗಣತಿ ವರದಿ ಜಟಾಪಟಿ

ಜಾತಿಗಣತಿ ವರದಿಯನ್ನು ಬಿಡುಗಡೆ ಮಾಡುವಂತೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸರಕಾರದ ಮೇಲೆ ವಾಗ್ದಾಳಿ ಮಾಡುವುದು ಖಚಿತ. ಈ ವಿಷಯದಲ್ಲಿ ಜೆಡಿಎಸ್, ತನ್ನ ಹಳೇ ದೋಸ್ತ್ ಕಾಂಗ್ರೆಸ್ ಜತೆ ನಿಲ್ಲುವುದು‌ ಬಹುತೇಕ ಅನುಮಾನ. ಈ ಬಗ್ಗೆ ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರ ನಡುವೆ ವಾಕ್ಸಮರ ನಡೆಯುವುದು ಗ್ಯಾರಂಟಿ.

  • ಸಿದ್ದರಾಮಯ್ಯ

ಸಮ್ಮಿಶ್ರ ಸರಕಾರ ಇದ್ದಾಗ ಈ ವರದಿಯನ್ನು ಅಂಗೀಕಾರ ಮಾಡಲು ಅಂದಿನ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸಮ್ಮತಿಸಲಿಲ್ಲ ಎಂದು ಸಿದ್ದರಾಮಯ್ಯ ಆರೋಪ ಮಾಡಿದ್ದರು. ಇದರಿಂದ ಕೆಂಡಾಮಡಲರಾಗಿದ್ದ ಎಚ್ಡಿಕೆ, ಸರಣಿ ಟ್ವೀಟ್ ಮಾಡಿ ಸಿದ್ದರಾಮಯ್ಯ ಹೆಸರೇಳದೇ ತೀವ್ರ ವಾಗ್ದಾಳಿ ನಡೆಸಿದ್ದರು.

“ಸಿದ್ದರಾಮಯ್ಯ ಅವರೇ ಅಧಿಕಾರದಲ್ಲಿದ್ದಾಗ ವರದಿಯನ್ನು ಸಲ್ಲಿಸಲಾಗಿತ್ತು. ಆಗ ಅಂಗೀಕಾರ ಮಾಡದೇ ಈಗ ಇನ್ನೊಬ್ಬರ ಮೇಲೆ ಗೂಬೆ ಕೂರಿಸುವುದು ಸರಿಯೇ” ಎಂದು ಪ್ರಶ್ನಿಸಿದ್ದ ಎಚ್ಡಿಕೆ, ‘ಎಲೆಕ್ಷನ್’ ಬಂದಾಗ ಯಾವುದೋ ಒಂದು ವಿಷಯವನ್ನು ಆಯ್ಕೆ ಮಾಡಿಕೊಂಡು ಪ್ರಚಾರ ಗಿಟ್ಟಿಸುವುದು ಸರಿಯಲ್ಲ. ಅಧಿಕಾರ ಇದ್ದಾಗಲೇ ಸಲ್ಲಿಕೆಯಾಗಿದ್ದ ಈ ವರದಿಯನ್ನು ಬಿಡುಗಡೆ ಮಾಡಲು ನಿರ್ಲಕ್ಷ್ಯ ತೋರಿದ್ದು ಯಾಕೆ? ಕುದುರೆ ಇದ್ದಾಗಲೇ ಏರಲಿಲ್ಲ, ಇನ್ನೊಬ್ಬರು ಕುದುರೆ ಮೇಲಿದ್ದಾಗ ಅವರನ್ನು ಕೆಳಕ್ಕೆ ಕೆಡವಲು ಏಕೀ ಕೆಟ್ಟ ಉತ್ಸಾಹ?” ಎಂದು ತರಾಟೆಗೆ ತೆಗೆದುಕೊಂಡಿದ್ದರು.

ಅಲ್ಲದೆ; “ಎಲ್ಲದರಲ್ಲೂ ʼಸಿದ್ಧಹಸ್ತʼರಾದರೆ ಉಪಯೋಗವೇನು? ಸತ್ಯ ಹೇಳುವುದಕ್ಕೂ ಗುಂಡಿಗೆ ಬೇಕು. ಇನ್ನೊಬ್ಬರ ಎದೆಗಾರಿಕೆ ಪ್ರಶ್ನಿಸುವ ಮಹಾನುಭಾವರು, ತಮ್ಮ ಅವಧಿಯಲ್ಲಿ ಈ ವರದಿಯನ್ನೇಕೆ ಕುರ್ಚಿ ಕೆಳಗೆ ಹಾಕಿಕೊಂಡು ಕೂತಿದ್ದರು ಎಂಬುದಕ್ಕೆ ಉತ್ತರ ನೀಡಲಿ. ಸಹಿ ಇಲ್ಲದ ಕಾಗದ ಪತ್ರಕ್ಕೆ ಬೆಲೆ ಇಲ್ಲ. ಅಪ್ಪ-ಅಮ್ಮನಿಲ್ಲದ ಕೂಸು ಅನಾಥ. ಹಾಗಾದರೆ, ಸಹಿ ಇಲ್ಲದ ವರದಿ ಸ್ವೀಕಾರ ಮಾಡಿ, ಆಗ ಸುಮ್ಮನಿದ್ದು, ಈಗ ಹಾಹಾಕಾರ ಮಾಡಿದರೇನು ಪ್ರಯೋಜನ? ಊಸರವಳ್ಳಿ ಉಸಾಬರಿ ಎಂದರೆ ಇದೇ ಇರಬೇಕು” ಎಂದು ಟೀಕಿಸಿದ್ದರು.

'ಎಲೆಕ್ಷನ್' ಬಂದಾಗ ಯಾವುದೋ ಒಂದು ವಿಷಯದ ಆಯ್ಕೆ ಮಾಡಿಕೊಂಡು ಪ್ರಚಾರ ಗಿಟ್ಟಿಸುವುದು ಸರಿಯಲ್ಲ. ಅಧಿಕಾರ ಇದ್ದಾಗಲೇ ಸಲ್ಲಿಕೆಯಾಗಿದ್ದ ಈ ವರದಿಯನ್ನು ಬಿಡುಗಡೆ ಮಾಡಲು ನಿರ್ಲಕ್ಷ್ಯ ತೋರಿದ್ದು ಯಾಕೆ? ಕುದುರೆ ಇದ್ದಾಗಲೇ ಏರಲಿಲ್ಲ, ಇನ್ನೊಬ್ಬರು ಕುದುರೆ ಮೇಲಿದ್ದಾಗ ಅವರನ್ನು ಕೆಳಕ್ಕೆ ಕೆಡವಲು ಏಕೀ ಕೆಟ್ಟ ಉತ್ಸಾಹ?(1/6)

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) September 8, 2021

ಜಾತಿ ಜನಗಣತಿ ವಿಚಾರದಲ್ಲಿ ಒಡೆದ ಮನೆಯಾದ ಕಾಂಗ್ರೆಸ್ ಪಕ್ಷದಲ್ಲಿ ಬಣ ರಾಜಕೀಯ ತಾರಕಕ್ಕೇರಿದೆ. ಡಿಕೆಶಿ ಬಣದಿಂದ ಜನಗಣತಿ ವಿಚಾರ ಪ್ರಸ್ತಾಪಕ್ಕೆ ವಿರೋಧವಿದೆ. ಸಿದ್ದರಾಮಯ್ಯ ಇದನ್ನೇ ಮುಂದಿಟ್ಟುಕೊಂಡು ಸರಕಾರಕ್ಕೆ ಬಿಸಿ ಮುಟ್ಟಿಸಲು ಉದ್ದೇಶಿಸಿದ್ದಾರೆ.

ಒಂದು ವೇಳೆ ಜಾತಿ ಜನಗಣತಿ ವರದಿ ಪ್ರಸ್ತಾಪ ಮಾಡಿದರೆ ಜೆಡಿಎಸ್, ಕಾಂಗ್ರೆಸ್ ನಾಯಕರ ವಿರುದ್ದ ವಾಗ್ಯುದ್ಧ ನಡೆಯುವುದು ಖಚಿತ. ಹೀಗಾಗಿ ಈ ಬಗ್ಗೆ ಪ್ರಸ್ತಾಪ ಮಾಡುವುದೇ ಬೇಡ ಎಂಬ ಅಭಿಪ್ರಾಯಕ್ಕೆ ಬಂದಿರುವ ಕಾಂಗ್ರೆಸ್ಸಿನ ಕೆಲ ನಾಯಕರು, “ಸುಮ್ಮನಿರಿ” ಎಂದು ಸಿದ್ದರಾಮಯ್ಯ ಅವರಿಗೆ ಹೇಳುವ ಪ್ರಯತ್ನ ಮಾಡುತ್ತಿದ್ದಾರೆ.

ಜಾತಿ ಗಣತಿ ವರದಿ ಬಹಿರಂಗಕ್ಕೆ ಸಿದ್ದರಾಮಯ್ಯ ಆಪ್ತ ವಲಯದಲ್ಲೇ ಇರುವ ಕೆಲ ಪ್ರಮುಖ ನಾಯಕರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಇದು ಮಾಜಿ ಮುಖ್ಯಮಂತ್ರಿಗೆ ನುಂಗಲಾರದ ತುತ್ತಾಗಿದೆ.

18 ಮಸೂದೆಗಳ ಮಂಡನೆ

ಇದೇ ಅಧಿವೇಶನದಲ್ಲಿ ಕೊಳಚೆ ಪ್ರದೇಶ ಕಬಳಿಕೆ ವಿರುದ್ಧ  ಕ್ರಮಕ್ಕೆ ತಿದ್ದುಪಡಿ ವಿಧೇಯಕ, ಬೆಂಗಳೂರು ನಗರ ನೀರು ಸರಬರಾಜು ಮತ್ತು ಒಳಚರಂಡಿ ತಿದ್ದುಪಡಿ, ಪೌರಸಭೆ ಕಾಯ್ದೆ ತಿದ್ದುಪಡಿ, ಶಿಕ್ಷಕರ ವರ್ಗಾವಣೆ ನಿಯಮ ವಿಧೇಯಕ ಹಾಗೂ ನಾಲ್ಕು ಸುಗ್ರೀವಾಜ್ಞೆ ಸೇರಿ ಒಟ್ಟು 18 ವಿಧೇಯಕಗಳನ್ನು ಮಂಡನೆ ಮಾಡಲು ಸರಕಾರ ಸಿದ್ಧತೆ ಮಾಡಿಕೊಂಡಿದೆ.

ಬೊಮ್ಮಾಯಿ ಸಂಪುಟದಲ್ಲಿ ಜೆ.ಸಿ.ಮಾಧುಸ್ವಾಮಿ ಅವರು ಪುನಾ ಕಾನೂನು ಮತ್ತು ಸಂಸದೀಯ ವ್ಯವಹಾರ ಖಾತೆ ಮಂತ್ರಿ ಜಾಗಕ್ಕೆ ಬಂದು ಕೂತಿರುವ ಕಾರಣಕ್ಕೆ ಈ ಮಸೂದೆಗಳ ಬಗ್ಗೆ ಕಾವೇರಿದ ಚರ್ಚೆ ನಡೆಯುವ ಸಾಧ್ಯತೆಯನ್ನು ತಳ್ಳಿ ಹಾಕುವಂತಿಲ್ಲ.

ಲೋಕಸಭೆ ಸ್ಪೀಕರ್ ಭಾಷಣ

ಸೆಪ್ಟೆಂಬರ್ 24ರಂದು ಮಧ್ಯಾಹ್ನ ಜಂಟಿ ಅಧಿವೇಶನ ನಡೆಯಲಿದೆ. ಅಂದು ಈ ಜಂಟಿ ಕಲಾಪವನ್ನು ಉದ್ದೇಶಿಸಿ ಲೋಕಸಭಾಧ್ಯಕ್ಷ ಓಂ ಬಿರ್ಲಾ ಅವರು ಭಾಷಣ ಮಾಡಲಿದ್ದಾರೆ.

  • ಓಂ ಬಿರ್ಲಾ

ಇದೇ ಮೊದಲ ಬಾರಿಗೆ ಸದನದ ಕಲಾಪದಲ್ಲಿ ಸಕ್ರಿಯವಾಗಿ  ಭಾಗಿಯಾಗಿ ಉತ್ತಮ ನಡವಳಿಕೆ ತೋರುವ ಶಾಸಕರಿಗೆ ʼಅತ್ಯುತ್ತಮ ಶಾಸಕ ಪ್ರಶಸ್ತಿʼ ನೀಡಲು ಸ್ಪೀಕರ್‌ ವಿಶ್ವೇಶ್ವರ ಹೆಗಡೆ ಕಾಗೇರಿ ನಿರ್ಧರಿಸಿದ್ದಾರೆ. ಸ್ಪೀಕರ್‌ ಅವರ ಈ ನಿರ್ಧಾರಕ್ಕೆ ಎಲ್ಲೆಡೆಯಿಂದ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ.

ಈ ಸುದ್ದಿಯನ್ನು ಓದಲು ಕೆಳಗಿನ ಲಿಂಕ್‌ ಕ್ಲಿಕ್‌ ಮಾಡಿ...
ಸೆ.13ರಿಂದ ಕಲಾಪ; ಸಚಿವ, ಶಾಸಕರಿಗೆ ರಜೆ ಇಲ್ಲ
Tags: best mlabjpCongressjdskarnataka assembly sessionlok sabha speakerom birlaspeakervishweshwar hegde kageri
P K Channakrishna

P K Channakrishna

www.cknewsnow.com ಪ್ರಧಾನ ಸಂಪಾದಕ ಮತ್ತು ಸಂಸ್ಥಾಪಕ. ಪ್ರಿಂಟ್‌ ಮೀಡಿಯಾದಲ್ಲಿ 3 ದಶಕದಷ್ಟು ಸುದೀರ್ಘ ಅನುಭವ. ರಾಜಕೀಯ, ಕೃಷಿ, ಸಿನಿಮಾ, ಸಂಗೀತ, ಫೊಟೋಗ್ರಫಿ, ಪ್ರವಾಸ, ಸೋಶಿಯಲ್‌ ಮೀಡಿಯಾದಲ್ಲಿ ಆಸಕ್ತಿ. ಓದು ಅಚ್ಚುಮೆಚ್ಚು.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ವಿಧಾನಮಂಡಲ ಅಧಿವೇಶನ

ವಿಧಾನಮಂಡಲ ಅಧಿವೇಶನ

Leave a Reply Cancel reply

Your email address will not be published. Required fields are marked *

Recommended

ಖಾಸಗಿ ಕಂಪನಿಯಲ್ಲಿ ಭಾರೀ ಹೂಡಿಕೆ ಮಾಡಿದ ನಟಿ ನಯನತಾರಾ

ಖಾಸಗಿ ಕಂಪನಿಯಲ್ಲಿ ಭಾರೀ ಹೂಡಿಕೆ ಮಾಡಿದ ನಟಿ ನಯನತಾರಾ

4 years ago
ಮಾಸಾಶನಕ್ಕಾಗಿ 5 ಕಿ.ಮೀ. ದೂರ ತೆವಳಿದ ಸಾಗಿದ ವೃದ್ಧೆ

ಮಾಸಾಶನಕ್ಕಾಗಿ 5 ಕಿ.ಮೀ. ದೂರ ತೆವಳಿದ ಸಾಗಿದ ವೃದ್ಧೆ

2 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ