• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS STATE

ಅಜಾತಶತ್ರು ಆಸ್ಕರ್ ಫರ್ನಾಂಡೀಸ್ ಇನ್ನಿಲ್ಲ

cknewsnow desk by cknewsnow desk
September 13, 2021
in STATE
Reading Time: 1 min read
0
ಅಜಾತಶತ್ರು ಆಸ್ಕರ್ ಫರ್ನಾಂಡೀಸ್ ಇನ್ನಿಲ್ಲ
962
VIEWS
FacebookTwitterWhatsuplinkedinEmail

ಸರಳತೆ, ಸಜ್ಜನಿಕೆಯ ಸಾಕಾರಮೂರ್ತಿ

ಮಂಗಳೂರು:  ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ, ಕೇಂದ್ರದ ಮಾಜಿ ಸಚಿವ ಆಸ್ಕರ್ ಫರ್ನಾಂಡಿಸ್ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಇಂದು (ಸೆಪ್ಟೆಂಬರ್‌ 13) ನಿಧನರಾಗಿದ್ದಾರೆ.

ತಮ್ಮ ಮನೆಯಲ್ಲಿ ವ್ಯಾಯಾಮ ಮಾಡುತ್ತಿರುವಾಗ ಕುಸಿದು ಬಿದ್ದು ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಅವರ ನಿಧನ ಕಾಂಗ್ರೆಸ್‌ ಪಕ್ಷಕ್ಕೆ ತೀವ್ರ ಆಘಾತ ಉಂಟು ಮಾಡಿದ್ದು, ಪಕ್ಷದ ನಾಯಕರೆಲ್ಲರೂ ಇಲ್ಲಿಗೆ ಧಾವಿಸುತ್ತಿದ್ದಾರೆ.

ಸರಳತೆ, ಸಜ್ಜನಿಕೆಯ ರಾಜಕಾರಣಿಯಾಗಿದ್ದ ಅವರು ಯಾವುದೇ ಕಪ್ಪುಚುಕ್ಕೆ ಇಲ್ಲದ ಪ್ರಾಮಾಣಿಕ ನಾಯಕರಾಗಿದ್ದರು. ಹಮ್ಮು ಬಿಮ್ಮು ಇಲ್ಲದೆ ಎಲ್ಲರಲ್ಲೂ ಒಬ್ಬರಾಗಿ ತಮ್ಮ ಜೀವನವನ್ನು ಜನ ಸೇವೆಗೆ ಮೀಸಲಿಟ್ಟಿದ್ದರು.

1941 ಮಾರ್ಚ್‌ 27ರಂದು ಜನಿಸಿದ್ದ ಆಸ್ಕರ್ ಫರ್ನಾಂಡಿಸ್ ಅವರು, ಕುಟುಂಬದ ಹನ್ನೆರಡು ಮಕ್ಕಳಲ್ಲಿ ಒಬ್ಬರಾಗಿದ್ದರು. ಆಸ್ಕರ್‌ ಅವರ ತಂದೆ ರೂಕ್‌ ಫೆರ್ನಾಂಡಿಸ್‌ ಅವರು ಇಲ್ಲಿನ ಸರ್ಕಾರಿ ಸಂಯುಕ್ತ ಪದವಿಪೂರ್ವ ಕಾಲೇಜಿನ ಮುಖ್ಯಸ್ಥರಾಗಿದ್ದರಷ್ಟೇ ಅಲ್ಲದೆ ಮಣಿಪಾಲ ತಾಂತ್ರಿಕ ವಿದ್ಯಾಲಯದ ಮೊದಲ ಅಧ್ಯಕ್ಷರಾಗಿದ್ದರು.

ಕಾಲೇಜು ದಿನಗಳಲ್ಲಿಯೇ ನಾಯಕತ್ವದ ಗುಣಗಳನ್ನು ಮೈಗೂಡಿಸಿಕೊಂಡಿದ್ದ ಆಸ್ಕರ್, 1980ರಲ್ಲಿ 7ನೇ ಲೋಕಸಭೆಗೆ ಉಡುಪಿ ಕ್ಷೇತ್ರದಿಂದ ಮೊದಲ ಬಾರಿಗೆ ಆಯ್ಕೆಯಾಗಿದ್ದರು. 1984, 1989, 1991, 1996ರಲ್ಲಿ ಸತತವಾಗಿ ಇದೇ ಕ್ಷೇತ್ರದಿಂದ ಲೋಕಸಭೆಗೆ ಆಯ್ಕೆಯಾಗಿದ್ದರು.

ಬಳಿಕ 1998ರಲ್ಲಿ ರಾಜ್ಯಸಭೆಗೆ ಆಯ್ಕೆಯಾದ ಅವರು, 2004ರಲ್ಲಿ ಮರು ಆಯ್ಕೆಗೊಂಡರು. ಡಾ.ಮನಮೋಹನ್‌ ಸಿಂಗ್‌ ಅವರ ಯುಪಿಎ- 1 ಸರಕಾರದಲ್ಲಿ 2004-2009ರವರೆಗೆ ಸಾಂಖ್ಯಿಕ ಹಾಗೂ ಯೋಜನಾ ಜಾರಿ. ಅನಿವಾಸಿ ಭಾರತೀಯರ ವ್ಯವಹಾರ ಖಾತೆ, ಯುವಜನ &  ಕ್ರೀಡೆ, ಕಾರ್ಮಿಕ, ಉದ್ಯೋಗ ಖಾತೆಗಳ ಸಚಿವರಾಗಿದ್ದರು. ಯುಪಿಎ-2 ನಲ್ಲಿ ಸಾರಿಗೆ, ರಸ್ತೆ ಹಾಗೂ ಹೆದ್ದಾರಿ ಸಚಿವರಾಗಿಯೂ ಕಾರ್ಯನಿರ್ವಹಿಸಿದ್ದರು.

ಅಗಲಿದ ಆಜಾತಶತ್ರುವಿಗೆ ಕಂಬನಿ

ರಾಜಕೀಯದಲ್ಲಿ ಆಸ್ಕರ್‌ ಫರ್ನಾಂಡೀಸ್‌ ಅವರು ಅಜಾತಶತ್ರುವಾಗಿದ್ದರು. ಅನೇಕ ಗಣ್ಯರು ಅವರ ನಿಧನಕ್ಕೆ ಕಂಬನಿ ಮಿಡಿದ್ದಾರೆ. ರಾಹುಲ್‌ ಗಾಂಧಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಎಚ್.‌ಡಿ.ಕುಮಾರಸ್ವಾಮಿ, ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.‌ಅಶ್ವತ್ಥನಾರಾಯಣ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮುಂತಾದವರು ಶೋಕ ವ್ಯಕ್ತಪಡಿಸಿದ್ದಾರೆ.

ರಾಜ್ಯಸಭಾ ಸದಸ್ಯರು, ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾದ ಶ್ರೀ ಆಸ್ಕರ್ ಫರ್ನಾಂಡಿಸ್ ರವರು ಇಂದು ನಮ್ಮನ್ನೆಲ್ಲ ಅಗಲಿರುವುದು ನನಗೆ ಬಹಳ ದುಃಖ ಉಂಟು ಮಾಡಿದೆ.
ಅವರ ಆತ್ಮಕ್ಕೆ ಚಿರ ಶಾಂತಿ ಸಿಗಲೆಂದು ಕೋರುತ್ತೇನೆ. ಹಾಗೂ ಅವರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ದೇವರು ಅವರ ಕುಟುಂಬ ವರ್ಗಕ್ಕೆ ಕರುಣಿಸಲೆಂದು ಪ್ರಾರ್ಥಿಸುತ್ತೇನೆ. pic.twitter.com/P1eYUw5Enh

— Basavaraj S Bommai (Modi Ka Parivar) (@BSBommai) September 13, 2021

ನಮ್ಮ ನಾಡಿನ ಹಿರಿಯ ರಾಜಕಾರಣಿ, ಕೇಂದ್ರದ ಮಾಜಿ ಸಚಿವರು, ನನ್ನ ಆಪ್ತರೂ ಆಗಿದ್ದ ಆಸ್ಕರ್ ಫರ್ನಾಂಡೀಸ್ ಅವರ ನಿಧನ ನನಗೆ ಬಹಳ ನೋವುಂಟು ಮಾಡಿದೆ. ಕೆಲ ದಿನಗಳಿಂದ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇನ್ನೇನು ಗುಣಮುಖರಾಗಿ ಮನೆಗೆ ಮರಳುತ್ತಾರೆ ಎನ್ನುವ ಹೊತ್ತಿನಲ್ಲಿ ಈ ಆಘಾತದ ಸುದ್ದಿ ಬಂದಿದೆ. (1/5) pic.twitter.com/Ivjp4BHlxZ

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) September 13, 2021

Tags: congress leaderkarnatakamangalurumember of parliamentOscar Fernandes
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಬರದಿಂದ ನಲುಗಿದ್ದ ಬಾಗೇಪಲ್ಲಿ ಜನರಿಗೆ ಅನ್ನ ಕೊಡಿಸಿದ್ದರು ಆಸ್ಕರ್

ಬರದಿಂದ ನಲುಗಿದ್ದ ಬಾಗೇಪಲ್ಲಿ ಜನರಿಗೆ ಅನ್ನ ಕೊಡಿಸಿದ್ದರು ಆಸ್ಕರ್

Leave a Reply Cancel reply

Your email address will not be published. Required fields are marked *

Recommended

ಮುಜರಾಯಿ ಇಲಾಖೆ ಅರ್ಚಕರು, ದೇವಾಲಯ ನೌಕರರಿಗೆ ದಸರಾ ಬಂಪರ್

ಮುಜರಾಯಿ ಇಲಾಖೆ ಅರ್ಚಕರು, ದೇವಾಲಯ ನೌಕರರಿಗೆ ದಸರಾ ಬಂಪರ್

5 years ago
ನಮ್ಮ ದೇಶದಲ್ಲೇ ತಯಾರಾದ ಕೊರೊನಾ ಲಸಿಕೆ ಕುರಿತು ಅಗೌರವ ಬೇಡ; ಭಾರತ್ ಬಯೋಟೆಕ್ ನಂಬಿಕೆಗೆ ಅರ್ಹವಾದ ಕಂಪನಿ ಎಂದ ಡಾ.ಕೆ.ಸುಧಾಕರ್

ಕೋಲಾರದ ಮಾಲೂರಿನಲ್ಲಿ 100 ಎಕರೆ ಜಾಗದಲ್ಲಿ ಕೊವ್ಯಾಕ್ಸಿನ್ ಲಸಿಕೆ ತಯಾರಿಕಾ ಘಟಕ I ದೃಢಪಡಿಸಿದ ಡಿಸಿಎಂ I ಐದು ಪಟ್ಟು ಹೆಚ್ಚು ಲಸಿಕೆ ತಯಾರಿಕೆ, ರಾಜ್ಯದಲ್ಲಿ ನೀಗುತ್ತಾ ವ್ಯಾಕ್ಸಿನ್‌ ಕೊರತೆ

5 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ