• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home EDITORS'S PICKS

ನೀರಿನ ಗ್ಯಾರಂಟಿಯೇ ಇಲ್ಲದ ಎತ್ತಿಹೊಳೆಗೆ ಹಣದ ಹೊಳೆ

cknewsnow desk by cknewsnow desk
September 14, 2021
in EDITORS'S PICKS, STATE
Reading Time: 2 mins read
0
ಎತ್ತಿನಹೊಳೆಯಲ್ಲಿ ಮತ್ತಷ್ಟು ಎತ್ತುವಳಿ! ರಾಷ್ಟ್ರೀಯ ಯೋಜನೆ ಸ್ಟೇಟಸ್ ಎಂಬ ಸ್ಮಾರ್ಟ್ ಐಡಿಯಾ!!

ನೀರಿನಂತೆ ಹರಿಯುತ್ತಿರುವ ಹಣಕ್ಕೆ ಮೂಕ ಸಾಕ್ಷಿಗಳಂತಿವೆ ಈ ಪೈಪುಗಳು.

977
VIEWS
FacebookTwitterWhatsuplinkedinEmail

ಯೋಜನಾ ವೆಚ್ಚ 23,251 ಕೋಟಿ ರೂ.ಗೆ ಹೆಚ್ಚಳ

  • 2023ರ ಅಂತ್ಯಕ್ಕೆ ಎತ್ತಿನಹೊಳೆ ಪೂರ್ಣ
  • ಒಂದೆರಡು ತಿಂಗಳಲ್ಲಿ ಪ್ರಾಯೋಗಿಕವಾಗಿ ನೀರು ಹರಿಸ್ತಾರಂತೆ ಜಲ ಸಂಪನ್ಮೂಲ ಸಚಿವರು
  • ಭೂ ಸ್ವಾಧೀನ ಪ್ರಕ್ರಿಯೆಗೆ 195 ಕೋಟಿ ರೂ.
  • ಭೂ ಸ್ವಾಧೀನ ಪ್ರಕ್ರಿಯೆಯಲ್ಲಿ ಅಧಿಕಾರಿಗಳ ಕೈಚಳಕ
  • ಸದನದಲ್ಲೇ ಸತ್ಯಸಂಗತಿ ಹೇಳಿದ ಸಚಿವ ಕಾರಜೋಳ

ವಿಧಾನಸಭೆ: ಎತ್ತಿನಹೊಳೆ ಯೋಜನೆಯ ಭೂ ಸ್ವಾಧೀನ ಪ್ರಕ್ರಿಯೆಯಲ್ಲಿರುವ ಅಡೆತಡೆಗಳನ್ನು ನಿವಾರಿಸಲು ಇಷ್ಟರಲ್ಲಿಯೇ ಸಭೆ ನಡೆಸುವುದಾಗಿ ಹೇಳಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಯೋಜನೆಯನ್ನು 2023ರ ಅಂತ್ಯಕ್ಕೆ ಪೂರ್ಣಗೊಳಿಸುವುದಾಗಿ ವಿಧಾನಸಭೆಗೆ ಮಂಗಳವಾರ ತಿಳಿಸಿದರು.

ಕೊರಟಗೆರೆ ಶಾಸಕ ಡಾ.ಜಿ.ಪರಮೇಶ್ವರ ಅವರು ಎತ್ತಿನಹೊಳೆ ಯೋಜನೆಯ ಬೈರಗೊಂಡ್ಲು ಜಲಾಶಯದ ಭೂ ಸ್ವಾಧೀನ ಪ್ರಕ್ರಿಯೆಯ ಸಮಸ್ಯೆಗಳ ಕುರಿತು ಪ್ರಶ್ನೋತ್ತರ ವೇಳೆಯಲ್ಲಿ ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಅವರು ನೀಡಿದ ಉತ್ತರಕ್ಕೆ ಧ್ವನಿಗೂಡಿಸಿ ಈ ವಿಷಯವನ್ನು ತಿಳಿಸಿದರು.

ಎತ್ತಿನಹೊಳೆಯಿಂದ ನೀರು ಎತ್ತಿಯೇ ತೀರುತ್ತೇವೆ ಎಂದು ಮುಖ್ಯಮಂತ್ರಿಗಳು ಒತ್ತಿ ಹೇಳಿದರು.

ಇದಕ್ಕೂ ಮುನ್ನ ಉತ್ತರಿಸಿದ ಸಚಿವರು; ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಗೆ ಶಾಶ್ವತ ಕುಡಿಯುವ ನೀರು ಪೂರೈಕೆ ಮಾಡುವ ಎತ್ತಿನಹೊಳೆ ಯೋಜನೆಯನ್ನು 2023ರ ಅಂತ್ಯಕ್ಕೆ ಪೂರ್ಣಗೊಳಿಸಲು ಸರ್ಕಾರ ತೀರ್ಮಾನಿಸಿದೆ. ಯೋಜನೆಯ ವೆಚ್ಚ 23,251 ಕೋಟಿ ರೂ.ಗೆ ಹೆಚ್ಚಿಸಲಾಗಿದ್ದು, ಆರ್ಥಿಕ ಇಲಾಖೆಯ ಸಹಮತಿಗೆ ಕಳುಹಿಸಲಾಗಿದೆ ಎಂದು ತಿಳಿಸಿದರು.

ಇತ್ತೀಚೆಗೆ ನಾನು ಕೂಡ ಎತ್ತಿನಹೊಳೆ ಯೋಜನಾ ಪ್ರದೇಶಕ್ಕೆ ಭೇಟಿ ಕೊಟ್ಟಿದ್ದೆ. ಭೂ ಸ್ವಾಧೀನವೂ ಸೇರಿದಂತೆ ಯೋಜನೆಯ ಅಡ್ಡಿ ಆತಂಕಗಳನ್ನು ನಿವಾರಿಸಲು ಅಗತ್ಯ ಕ್ರಮ ಕೈಗೊಂಡು ಪರಿಹರಿಸಲು ಮಾಡಿದ ಪ್ರಯತ್ನ ಫಲವಾಗಿ ಎರಡು ಬಹುದೊಡ್ಡ ಅಡ್ಡಿ ಅಡೆತಡೆಗಳು ನಿವಾರಣೆಯಾಗಿವೆ. ಒಂದೆರಡು ತಿಂಗಳಲ್ಲಿ ಎತ್ತಿನಹೊಳೆಯಿಂದ ಪ್ರಾಯೋಗಿಕವಾಗಿ ನೀರು ಹರಿಸಲಾಗುವುದು ಎಂದು ಜಲ ಸಂಪನ್ಮೂಲ ಸಚಿವರು ತಿಳಿಸಿದರು.

ಎತ್ತಿನಹೊಳೆಯಂತಹ ಮಹತ್ವಾಕಾಂಕ್ಷಿ ಕುಡಿಯುವ ನೀರಿನ ಯೋಜನೆಗೆ ಇರುವ ಅಡ್ಡಿ ಆತಂಕ ಪರಿಹರಿಸಿ ತಕ್ಷಣ ಕ್ರಮಕೈಗೊಳ್ಳಲು ಕಾರ್ಯಪ್ರವೃತ್ತವಾಗಿದ್ದು, ಆದಷ್ಟು ಬೇಗ ಫಲಿತಾಂಶ ನಿಮ್ಮ ಕಣ್ಣಿಗೆ ಕಾಣಿಸಲಿದೆ ಎಂದು ಸಚಿವರು ತಿಳಿಸಿದರು.

ಎತ್ತಿನಹೊಳೆ ಯೋಜನೆ ಭೂಸ್ವಾದೀನ ಪ್ರಕ್ರಿಯೆ ಅಡೆತಡೆಗಳನ್ನು ನಿವಾರಿಸಲು ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಯಿತು. pic.twitter.com/Fc5KqB0c8P

— Govind M Karjol (ಮೋದಿಯವರ ಕುಟುಂಬ ) (@GovindKarjol) September 14, 2021

ಭೂ ಸ್ವಾಧೀನ ಪ್ರಕ್ರಿಯೆಗೆ 195 ಕೋಟಿ ರೂ. ಹಣ ಒದಗಿಸಲಾಗಿದ್ದರೂ, ಕೆಲ ಅಧಿಕಾರಿಗಳು ರೈತರಿಗೆ ಹಣವಿಲ್ಲವೆಂದು ಹೇಳುತ್ತಿದ್ದರು. ಭೂ ಸ್ವಾಧೀನ ಪ್ರಕ್ರಿಯೆ ಪೂರ್ಣಗೊಂಡ ಪ್ರಕರಣಗಳಲ್ಲಿ ರೈತರಿಗೆ ಹಣ ಪಾವತಿ ಮಾಡುವುದು ವಿಳಂಬವಾದಲ್ಲಿ ಭೂ ಸ್ವಾಧೀನ ಅಧಿಕಾರಿಗಳನ್ನೇ ನೇರವಾಗಿ ಹೊಣೆಗಾರರನ್ನಾಗಿಸಲಾಗುವುದು ಎಂದು ಸಚಿವರು ಸದನಕ್ಕೆ ತಿಳಿಸಿದರು.

ಕೊರಟಗೆರೆ ಮತ್ತು ದೊಡ್ಡಬಳ್ಳಾಪುರ ತಾಲೂಕಿನ ರೈತರ 5078 ಎಕರೆ ಭೂ ಸ್ವಾಧೀನಕ್ಕೆ ಸಂಬಂಧಪಟ್ಟಂತೆ ಏಕರೂಪದ ದರ ನಿಗದಿಪಡಿಸುವಲ್ಲಿ ಸಮಸ್ಯೆಗಳಿವೆ. ಈ ಸಮಸ್ಯೆ ಪರಿಹಾರಕ್ಕೆ 11.10.2018ರಂದು ಅಂದಿನ ಉಪ ಮುಖ್ಯಮಂತ್ರಿ ಆಗಿದ್ದ ಡಾ.ಜಿ.ಪರಮೇಶ್ವರ ಅವರ ನೇತೃತ್ವದ ಸಚಿವ ಸಂಪುಟದ ಉಪ ಸಮಿತಿ ಸಭೆ ನಡೆದಿದ್ದರೂ ಯಾವುದೇ ಅಂತಿಮ ನಿರ್ಣಯ ಕೈಗೊಳ್ಳಲಾಗಲಿಲ್ಲ. ಈಗ ನಮ್ಮ ಸರ್ಕಾರ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದೆ ಎಂದು ಸಚಿವರು ಉತ್ತರ ನೀಡಿದರು.

ಎತ್ತಿನಹೊಳೆ ಯೋಜನೆಯ ಅನುಷ್ಠಾನದಲ್ಲಿ ಸಣ್ಣ-ಪುಟ್ಟ ಅಡ್ಡಿಗಳನ್ನು ನಿವಾರಿಸಿಕೊಂಡು ಮುಂದಿನ ಹೆಜ್ಜೆ ಇರಿಸುವುದಾಗಿ, ಆದಷ್ಟು ಬೇಗ ಯೋಜನೆ ಸಾಕಾರಗೊಳಿಸಲು ಪ್ರಯತ್ನ ಮಾಡುವುದಾಗಿ ಹೇಳಿದರು.

ಹೈಡ್ರಾಲಜಿ ಬಗ್ಗೆ ಇಲ್ಲ ಸೊಲ್ಲು

ಎತ್ತಿನಹೊಳೆ ಯೋಜನಾ ವೆಚ್ಚ ಹೆಚ್ಚಳ, ಭೂಸ್ವಾಧೀನ, ಅಧಿಕಾರಿಗಳ ಗೋಲ್ಮಾಲ್‌ ಇತ್ಯಾದಿಗಳ ಬಗ್ಗೆ ಸದನದಲ್ಲಿ ಚರ್ಚೆ ನಡೆಯಿತಾದರೂ, ಯೋಜನೆಯ ಆತ್ಮವಾದ ʼಹೈಡ್ರಾಲಜಿʼ (ಜಲ ವಿಜ್ಞಾನ) ಯ ಬಗ್ಗೆ ಒಂದು ಪದವೂ ಸದನದಲ್ಲಿ ಚರ್ಚೆಯಾಗಲಿಲ್ಲ.

ಪ್ರಶ್ನೆ ಕೇಳಿದ ಮಾಜಿ ಡಿಸಿಎಂ ಪರಮೇಶ್ವರ ಆಗಲಿ ಅಥವಾ ಉತ್ತರ ಕೊಟ್ಟ ಮುಖ್ಯಮಂತ್ರಿಯಾಗಲಿ, ಜಲ ಸಂಪನ್ಮೂಲ ಸಚಿವರೇ ಆಗಲಿ ಹೈಡ್ರಾಲಜಿಯ ಬಗ್ಗೆ ಪ್ರಸ್ತಾಪ ಮಾಡಲಿಲ್ಲ. ನೀರಿನ ಇಳುವರಿಯೇ ಇಲ್ಲದ ಯೋಜನೆಯಲ್ಲಿ 2023ಕ್ಕೆ ನೀರನ್ನು ಹೇಗೆ ಹರಿಸುತ್ತಾರೆ? ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳಿಗೆ ಮಾತ್ರ ಮೀಸಲಾಗಿದ್ದ ಯೋಜನೆಯನ್ನು ರಾಜಕೀಯ ಕಾರಣಗಳಿಗಾಗಿ ವಿವಿಧ ಜಿಲ್ಲೆಗಳಿಗೆ ಹರಿದು ಹಂಚಲಾಗಿದ್ದು, ಕಟ್ಟಕಡೆಯ ತಾಲೂಕಿಗೆ ನೀರು ಹರಿಯುತ್ತದಾ? ಈ ಪ್ರಶ್ನೆಗೆ ಸರಕಾರ ಉತ್ತರ ಕೊಡಬೇಕಾಗಿದೆ ಎಂದು ಶಾಶ್ವತ ನೀರಾವರಿ ಸಮಿತಿ ಹೋರಾಟಗಾರ ಆರ್.‌ಆಂಜನೇಯ ರೆಡ್ಡಿ ಒತ್ತಾಯ ಮಾಡಿದ್ದಾರೆ.

  • ಆರ್.‌ ಆಂಜನೇಯ ರೆಡ್ಡಿ

ಯೋಜನಾ ವೆಚ್ಚವನ್ನು ಏರಿಸುವುದರಲ್ಲಿ ಸರಕಾರ ಉತ್ಸಾಹ ತೋರುತ್ತಿದೆ. ಆದರೆ ಜಲ ವಿಜ್ಞಾನದ ಬಗ್ಗೆ ಮರು ಅಧ್ಯಯನ ಮಾಡಲು ಸರಕಾರ ನಿರಾಸಕ್ತಿ ತೋರುತ್ತಿದೆ. ಕೇಂದ್ರ ಜಲ ಆಯೋಗ ತಿರಸ್ಕರಿಸಿರುವ ಈ ಯೋಜನೆಗೆ  23,251 ರೂ.ಗಳಿಗೆ ಮರು ಡಿಪಿಆರ್‌ ಮಾಡಲಾಗಿದೆ. ಇದು ಜನತೆಗೆ ಎಸಗುತ್ತಿರುವ ಮಹಾ ವಂಚನೆ ಎಂದು ಆಂಜನೇಯ ರೆಡ್ಡಿ ಹೇಳಿದರು.

ಎತ್ತಿನಹೊಳೆ ಯೋಜನೆಯ ಪ್ರತಿಹೆಜ್ಜೆಯೂ ಅನುಮಾನಾಸ್ಪದವಾಗಿದೆ. ಮೂಲ ಯೋಜನಾ ಸಮಗ್ರ ವರದಿಯಲ್ಲಿ 9.5 ಟಿಎಂಸಿ ನೀರು ಲಭ್ಯವಿದೆ ಎಂದು ತೋರಿಸಿ 8,300 ಕೋಟಿ ರೂ.ಗಳನ್ನು ಯೋಜನಾ ವೆಚ್ಚವೆಂದು ನಿಗದಿ ಮಾಡಿ ಅನುಮೋದನೆ ಪಡೆಯಲಾಗಿತ್ತು. ಅದಾಗಿ ಆರೇ ತಿಂಗಳಲ್ಲಿ ಪುನಾ ಪರಿಷ್ಕೃತ DPR ಮಾಡಿ ಲಭ್ಯ ನೀರಿನ ಪ್ರಮಾಣವನ್ನು 24 ಟಿಎಂಸಿ (!!) ಎಂದು ತೋರಿಸಿ 13,000 ಕೋಟಿ ರೂ. ವೆಚ್ಚವೆಂದು ನಮೂದು ಮಾಡಿ ಮರು ಆಡಳಿತಾತ್ಮಕ ಅನುಮೋದನೆ ಪಡೆಯಲಾಯಿತು. ಈಗ ನೋಡಿದರೆ ಭೂ ಸ್ವಾಧೀನ, ಕಚ್ಛಾ ಸಾಮಗ್ರಿಗಳ ವೆಚ್ಚ, ಕೋವಿಡ್ ನೆಪಗಳನ್ನು ಮುಂದೆ ಮಾಡಿ 23,251 ಕೋಟಿ ರೂ.ಗಳ ಇನ್ನೊಂದು ಪರಿಷ್ಕೃತ ಆಡಳಿತಾತ್ಮಕ ಅನುಮೋದನೆ ಪಡೆದುಕೊಳ್ಳಲು ಸರಕಾರ ಮುಂದಾಗಿದೆ. ಇದು ಅತ್ಯಂತ ಕಳವಳಕಾರಿ ಎಂದು ಅವರು ತಿಳಿಸಿದರು.

ಈ ಸುದ್ದಿಯನ್ನು ಓದಲು ಕೆಳಗಿನ ಲಿಂಕ್‌ ಕ್ಲಿಕ್‌ ಮಾಡಿ..
ಎತ್ತಿನಹೊಳೆಯಲ್ಲಿ ಮತ್ತಷ್ಟು ಎತ್ತುವಳಿ! ರಾಷ್ಟ್ರೀಯ ಯೋಜನೆ ಸ್ಟೇಟಸ್ ಎಂಬ ಸ್ಮಾರ್ಟ್ ಐಡಿಯಾ!!
Tags: bagalore ruralbasavaraj bommaichikkaballapuracwcdrinking watergovind karjolkolaryettinaholeYettinahole project
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಉತ್ತಮ ಆರೋಗ್ಯ, ಒಳ್ಳೆಯ ವಿದ್ಯೆ ಇವತ್ತಿನ ಅಗತ್ಯ ಎಂದ ಸಿ.ಕೆ.ರಮೇಶ್

ಉತ್ತಮ ಆರೋಗ್ಯ, ಒಳ್ಳೆಯ ವಿದ್ಯೆ ಇವತ್ತಿನ ಅಗತ್ಯ ಎಂದ ಸಿ.ಕೆ.ರಮೇಶ್

Leave a Reply Cancel reply

Your email address will not be published. Required fields are marked *

Recommended

ಕೋವಿಡ್ ಕೆಸರು; ಬಿಜೆಪಿ, ಕಾಂಗ್ರೆಸ್ ಪಕ್ಷಗಳಿಗೆ ಪಂಚಪ್ರಶ್ನೆ ಹಾಕಿದ ಎಚ್ಡಿಕೆ

“ಕಾಂಗ್ರೆಸ್ ನಾಯಕರು ಜೆಡಿಎಸ್ ಲೀಡರುಗಳ ಮನೆಗಳ ಮುಂದೆ ಬಲೆ ಹಾಕಿಕೊಂಡು ಕೂತಿದ್ದಾರೆ!”

5 years ago
ಸ್ವಿಚ್ ಆಫ್ ಆದ ದಾರಿ ದೀಪಗಳು; ಗುಡಿಬಂಡೆ ಕೆರೆ ಏರಿ ಮೇಲೆ ಕಗ್ಗತ್ತಲು

ಸ್ವಿಚ್ ಆಫ್ ಆದ ದಾರಿ ದೀಪಗಳು; ಗುಡಿಬಂಡೆ ಕೆರೆ ಏರಿ ಮೇಲೆ ಕಗ್ಗತ್ತಲು

5 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ