• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS STATE

55 ಲಕ್ಷ ಬಡ ಕುಟುಂಬಗಳಿಗೆ ತಲಾ 25,000 ರೂ. ಧನ ಸಹಾಯಕ್ಕೆ ಎಚ್‌ಡಿಕೆ ಆಗ್ರಹ

cknewsnow desk by cknewsnow desk
September 16, 2021
in STATE
Reading Time: 1 min read
0
ಕೋಲಾರದಲ್ಲಿ ನಿಂತು ಕೋಡಿಹಳ್ಳಿ ಚಳಿಬಿಡಿಸಿದ ಕುಮಾರಸ್ವಾಮಿ; ಡೋಂಗಿಗಳಿಂದ ಪಾಠ ಕಲಿಯಬೇಕಿಲ್ಲ ಎಂದ ದಳಪತಿ
996
VIEWS
FacebookTwitterWhatsuplinkedinEmail

ಉರಿವ ಮನೆಯಲ್ಲಿ ಗಳ ಹಿರಿಯುವ ಕೆಲಸ ಬೇಡವೆಂದ ಹೆಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಪೆಟ್ರೋಲ್, ಡೀಸೆಲ್ ಮತ್ತು ಅಡುಗೆ ಅನಿಲದ ಬೆಲೆಯನ್ನು ನಿರಂತರವಾಗಿ ಏರಿಸುವ ಮೂಲಕ ಉರಿವ ಮನೆಯಲ್ಲಿ ಗಳ ಹಿರಿಯುವ ಕೆಲಸ ಆಗುತ್ತಿದೆ ಎಂದು ಜಿಡಿಎಸ್ ವರಿಷ್ಠ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಟೀಕಾಪ್ರಹಾರ ನಡೆಸಿದರು.

ಅಲ್ಲದೆ; ಕೇಂದ್ರ ಮತ್ತು ರಾಜ್ಯ ಸರಕಾರಗಳಿಂದ ಇಂಧನ ಬೆಲೆ ಏರಿಕೆ ಹಾಗೂ ಕೋವಿಡ್ʼನಿಂದ ತತ್ತರಿಸಿರುವ ಜನರ ಬದುಕು ಮರಳಿ ಕಟ್ಟಿಕೊಳ್ಳಲು ಒಂದೇ ಬಾರಿಗೆ ಅನ್ವಯವಾಗುವಂತೆ 55 ಲಕ್ಷ ಕುಟುಂಬಗಳಿಗೆ ತಲಾ 25,000 ರೂ. ಪರಿಹಾರ ನೀಡುವಂತೆ ಅವರು ಸರಕಾರವನ್ನು ಆಗ್ರಹಪಡಿಸಿದ್ದಾರೆ.

ವಿಧಾನಸಭೆಯಲ್ಲಿಂದು ನಿಯಮ-69ರ ಅಡಿಯಲ್ಲಿ ಬೆಲೆ ಏರಿಕೆ ಮೇಲಿನ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು; ನೆರೆ, ಕೋವಿಡ್ʼನಿಂದ ಸಾಮಾನ್ಯ ಜನ ತತ್ತರಿಸಿದ್ದಾರೆ. ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿದೆ. ನಿರಂತರ ಬೆಲೆ ಏರಿಕೆಯಿಂದ ರೈತರು, ಬಡವರು ಮತ್ತು ಶ್ರಮಿಕರ ಮನೆಗಳಲ್ಲಿ ಬೆಂಕಿ ಬಿದ್ದಿದೆ. ಆ ಬೆಂಕಿ ಬಿದ್ದಿರುವ ಮನೆಗಳಲ್ಲಿ ಎಷ್ಟು ಗಳ ಹಿರಿಯಬಹುದು ಎಂಬ ಉದ್ದೇಶದಿಂದ ಇಷ್ಟು ತೆರಿಗೆ ಹಾಕಿದಂತಿದೆ ಎಂದು ತೀವ್ರ ವಾಗ್ದಾಳಿ ನಡೆಸಿದರು.

ಈ ಸಂದರ್ಭದಲ್ಲಿ ಎಚ್.ಡಿ.ಕುಮಾರಸ್ವಾಮಿ ಅವರು ಸವಿವರವಾಗಿ ಹೇಳಿದ್ದಿಷ್ಟು;
  • ಈ ಬಿಕ್ಕಟ್ಟನ್ನು ಸರಕಾರ ಉಪೇಕ್ಷೆ ಮಾಡಬಾರದು. ಈ ವರ್ಷವನ್ನು ʼಕೋವಿಡ್ ವರ್ಷʼ ಎಂದು ಘೋಷಣೆ ಮಾಡಿ. ಕಷ್ಟದಲ್ಲಿರುವ 55 ಲಕ್ಷ ಬಡ ಕುಟುಂಬಗಳಿಗೆ ನೆರವಾಗಿ. ಕೊನೆಯ ಪಕ್ಷ ಪ್ರತಿ ಕುಟುಂಬಕ್ಕೆ 25,000 ರೂ. ಧನ ಸಹಾಯ ಮಾಡಿ. ಅಗತ್ಯಬಿದ್ದರೆ ಈ ವರ್ಷ ಎಲ್ಲ ಅಭಿವೃದ್ಧಿ ಕೆಲಸಗಳನ್ನು ನಿಲ್ಲಿಸಿ.
  • ಈ ಬೆಲೆ ಏರಿಕೆಯನ್ನೂ ಯಾರೂ ಒಪ್ಪಲು ಸಾಧ್ಯವೇ ಇಲ್ಲ. ಇದು ಅತ್ಯಂತ ನಿರ್ದಯವಾದ ಕೆಲಸ. ಕಷ್ಟದಲ್ಲಿರುವ ಜನರ ನೆರವಿಗೆ ಧಾವಿಸುವುದು ಸರಕಾರದ ಕೆಲಸ. ಕೂಡಲೇ ಕೇಂದ್ರ ಮತ್ತು ರಾಜ್ಯ ಸರಕಾರಗಳು ಎಚ್ಚೆತ್ತುಕೊಳ್ಳಬೇಕು.
  • ಸರಕಾರಕ್ಕೆ ಆದಾಯವೂ ಮುಖ್ಯ, ನಿಜ. ಅದೇ ರೀತಿ ಜನರ ಕಲ್ಯಾಣವೂ ಮುಖ್ಯ. ಹಾಗಂತ ಮನಸೋ ಇಚ್ಛೆ ತೆರಿಗೆ ಹಾಕುವುದಲ್ಲ. ಜನರಿಗೆ ಬದುಕೇ ದುಸ್ಥರವಾಗಿದೆ. ಎರಡು ಹೊತ್ತು ಊಟಕ್ಕೂ ಕಷ್ಟವಾಗಿದೆ. ಇಂಥ ತೀವ್ರ ಸಂಕಷ್ಟದ ಸಮಯದಲ್ಲಿ ಜನರ ಮೇಲೆ ಬೆಲೆ ಏರಿಕೆ ಮತ್ತು ತರಿಗೆ ಪ್ರಹಾರ ನಡೆಸುವುದು ಎಷ್ಟು ಸರಿ?
  • ಅತಿಯಾದ ಭಾರವನ್ನು ಹೊರಲಾಗದ ಎತ್ತಿನ ಗಾಡಿಯ ಅಸಹಾಯಕ ಎತ್ತಿನಂತಿದೆ ಜನ ಸಾಮಾನ್ಯನ ಬದುಕು. ಭಾರ ಹೊರಲಾಗದಿದ್ದರೆ ಎತ್ತಿಗೆ ಛಡಿಯೇಟು ತಪ್ಪಿಲ್ಲ. ಹಾಗೆಯೇ, ಭಾರದಿಂದ ಗಾಡಿ ಚಕ್ರ ನೆಲದಲ್ಲಿ ಹೂತರೆ ಅದನ್ನು ಎಳೆಯಲಾಗದಿದ್ದರೆ ಪುನಾ ಆ ಎತ್ತಿಗೇ ಛಡಿಯೇಟು ತಪ್ಪಲ್ಲ. ಜನ ಸಾಮಾನ್ಯನ ಪರಿಸ್ಥಿತಿಯೂ ಇದೇ ಆಗಿದೆ. ತುತ್ತು ಅನ್ನಕ್ಕಾಗಿ ಪರಿತಪಿಸುತ್ತಿದ್ದಾನೆ ಅವನು. ಇಂಥ ಸಂದರ್ಭದಲ್ಲಿ ಬೆಲೆ ಏರಿಕೆಯನ್ನೇ ರಾಜಕೀಯ ಮಾಡುವ ಬದಲು ಎಲ್ಲರೂ ಪಕ್ಷಾತೀತವಾಗಿ ವರ್ತಿಸಬೇಕು. ಸರಕಾರ ಕೂಡ ಅತ್ಯಂತ ಮಾನವೀಯತೆಯಿಂದ ಜನರ ನೆರವಿಗೆ ಧಾವಿಸಬೇಕಿದೆ.
  • ಬೆಲೆ ಏರಿಕೆ ಮಾಡುವುದು ಎಂದರೆ ನಿರಂತರವಾಗಿ ಹತೋಟಿ ಇಲ್ಲದೆ ಮಾಡುವುದಲ್ಲ. ಅದಕ್ಕೆ ಒಂದು ವೈಜ್ಞಾನಿಕ ಮಾನದಂಡದ ಜತೆಗೆ ಜನರ ಪರಿಸ್ಥಿತಿಯನ್ನೂ ನೋಡಿ ನಿರ್ಧಾರ ಕೈಗೊಳ್ಳುವ ವಿವೇಚನೆ ಇರಬೇಕು. ಅದು ಬಿಟ್ಟು ಇಷ್ಟಬಂದ ಹಾಗೆ ಬೆಲೆ ಏರಿಕೆ ಮಾಡುತ್ತಾ ಹೋದರೆ ಸಾಮಾನ್ಯ ಜನರ ಪಾಡೇನು?
  • ಪತ್ರಿಕೆಯೊಂದು ಸಮೀಕ್ಷೆ ನಡೆಸಿರುವ ಪ್ರಕಾರ ಒಬ್ಬ ಸಾಮಾನ್ಯ ವ್ಯಕ್ತಿ ವರ್ಷಕ್ಕೆ ಸರಾಸರಿ ಒಂದು ಲಕ್ಷ ರೂಪಾಯಿ ತೆರಿಗೆಯನ್ನು ಸರಕಾರಕ್ಕೆ ಕಟ್ಟುತ್ತಿದ್ದಾನೆ. ಅಷ್ಟು ತೆರಿಗೆ ಕಟ್ಟುವ ಸಾಮಾನ್ಯನ ಬದುಕು ಈಗ ಅಯೋಮಯವಾಗಿದೆ. ಅವನ ಬದುಕನ್ನು ಸರಿ ಮಾಡುವ ಜವಾಬ್ದಾರಿ ಸರಕಾರದ ಮೇಲಿದೆ ಎಂಬ ಸಂಗತಿಯನ್ನು ಸರಕಾರ ಮರೆಯುವಂತಿಲ್ಲ.
  • ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ನಿಮಿತ್ತ ಸರಕಾರ ಕೆಲ ಯೋಜನೆಗಳನ್ನು ಘೋಷಣೆ ಮಾಡಿದೆ. ಆದರೆ, ಬೆಲೆ ಏರಿಯಿಂದ ಬಸವಳಿದಿರುವ ಜನರ ನೆರವಿಗೆ ಧಾವಿಸಲು ಆ ಹಣ ಮೀಸಲಿಟ್ಟು ಆ ಎಲ್ಲ ಯೋಜನೆಗಳನ್ನು ಒಂದು ವರ್ಷ ಮುಂದಕ್ಕೆ ಹಾಕಿ. ಈ ವರ್ಷವನ್ನು ʼಕೋವಿಡ್ ವರ್ಷʼವೆಂದು ಘೋಷಣೆ ಮಾಡಲಿ. ಎಲ್ಲ ಅಭಿವೃದ್ಧಿ ಕೆಲಸಗಳನ್ನು ನಿಲ್ಲಿಸಿ ಜನರ ನೆರವಿಗೆ ಧಾವಿಸಲಿ.
  • ಕಾವೇರಮ್ಮ ಎಂಬ ಬೆಂಗಳೂರು ದಕ್ಷಿಣ ಭಾಗದ ಮಹಿಳೆ ಒಂದು ಪತ್ರಿಕೆಯಲ್ಲಿ ಹೀಗೆ ಹೇಳಿಕೊಂಡಿದ್ದಾಳೆ. “ನನ್ನ ಮನೆಯಲ್ಲಿ ಅಡುಗೆ ಅನಿಲದ ಸ್ಟೌವ್ ಹಚ್ಚಲೂ ಆಗುತ್ತಿಲ್ಲ. ಬದುಕು ನಡೆಸುವುದೇ ದುಸ್ಥರವಾಗಿದೆ” ಎಂದು ಕಣ್ಣೀರು ಹಾಕಿದ್ದಾರೆ. ಆ ಮನೆಯಲ್ಲಿ ಆರು ಜನ ಬದುಕುತ್ತಿದ್ದಾರೆ, ಅವರ ಹಸಿವು ನೀಗಬೇಕು. ಆ ಮಹಿಳೆಯ ಕಷ್ಟ ಯಾವ ರೀತಿಯಲ್ಲಿದೆ? ಆ ತಾಯಿಯ ಸಂಕಟವೇನು? ಎಂಬುದನ್ನು ನಾವು ಅರ್ಥ ಮಾಡಿಕೊಳ್ಳಬೇಕು. ಸರಕಾರ ಆಲೋಚನೆ ಮಾಡಬೇಕಿದೆ. ಇಂತಹ ಲಕ್ಷಾಂತರ ಕಾವೇರಮ್ಮನ ಕಥೆಗಳು ನಮ್ಮ ರಾಜ್ಯದಲ್ಲಿವೆ.
  • ನಾವೆಲ್ಲ ರಾಜಕೀಯವಾಗಿ ಒಬ್ಬರ ಮೇಲೊಬ್ಬರು ಟೀಕೆ-ಟಿಪ್ಪಣಿ ಮಾಡಿಕೊಂಡು ಕೂರುವುದಲ್ಲ. ಎಲ್ಲರೂ ಕಾವೇರಮ್ಮನವರಂಥ ಜನರ ಕಷ್ಟಕ್ಕೆ ಧಾವಿಸಬೇಕು. ಅವರ ಜೀವನ ಸರಿ ಮಾಡಲು ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಚಿಂತನೆ ಮಾಡಬೇಕು. ಈ ಬಗ್ಗೆ ರಾಜಕೀಯ ಸಂಕುಚಿತ ಮನೋಭಾವ ತೋರಿಸುವುದು ಬೇಡ. ರಾಜಕೀಯ ಲಾಭದ ಬಗ್ಗೆ ಲೆಕ್ಕಾಚಾರ ಹಾಕುವುದೂ ಸರಿಯಲ್ಲ.
  • ಪಕ್ಷ ರಾಜಕಾರಣವನ್ನು ಬದಿಗೊತ್ತಿ ಸಂಕಷ್ಟದಲ್ಲಿರುವ ಜನ ಸಾಮಾನ್ಯನಿಗೆ ಏನು ಮಾಡಬೇಕೋ, ಅದರ ಬಗ್ಗೆ ಈ ವೇದಿಕೆಯಲ್ಲಿ ಯೋಚನೆ ಮಾಡಿ ಪರಿಹಾರ ಹುಡುಕಬೇಕಿದೆ. ಸರಕಾರ ತತ್ಕ್ಷಣವೇ ಅವನ ನೆರವಿಗೆ ಧಾವಿಸಬೇಕು ಎಂಬುದು ನನ್ನ ಒತ್ತಾಯವಾಗಿದೆ ಎಂದು ಕುಮಾರಸ್ವಾಮಿ ಅವರು ಹೇಳಿದರು.
Tags: bjpCongressdieselhd kumaraswamyjaskarnatakakarnataka assembly sessionlpgpetrolprice hike
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಅಕ್ಕಿಭಾಗ್ಯದ ಅಸಲಿಯೆತ್ತು ಬಿಚ್ಚಿಟ್ಟ ಎಚ್ಡಿಕೆ

ಅಕ್ಕಿಭಾಗ್ಯದ ಅಸಲಿಯೆತ್ತು ಬಿಚ್ಚಿಟ್ಟ ಎಚ್ಡಿಕೆ

Leave a Reply Cancel reply

Your email address will not be published. Required fields are marked *

Recommended

ಎಂಜಿನಿಯರಿಂಗ್ ಪ್ರವೇಶ: ಡಿ.31ರವರೆಗೂ ಅವಕಾಶ

ಎಂಜಿನಿಯರಿಂಗ್ ಪ್ರವೇಶ: ಡಿ.31ರವರೆಗೂ ಅವಕಾಶ

4 years ago
ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

11 months ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ