• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS STATE

ರಾಜ್ಯದಲ್ಲಿ ಬರಲಿದೆ ಮತಾಂತರ ನಿಷೇಧ ಕಾಯಿದೆ

cknewsnow desk by cknewsnow desk
September 21, 2021
in STATE
Reading Time: 1 min read
0
ರಾಜ್ಯದಲ್ಲಿ ಬರಲಿದೆ ಮತಾಂತರ ನಿಷೇಧ ಕಾಯಿದೆ
1k
VIEWS
FacebookTwitterWhatsuplinkedinEmail

ಗೃಹ ಸಚಿವ ಆರಗ ಜ್ಞಾನೇಂದ್ರ

ಬೆಂಗಳೂರು: ರಾಜ್ಯದಲ್ಲಿ ಬಲವಂತದ ಹಾಗೂ ಆಮಿಷವೊಡ್ಡಿ ಮತಾಂತರ ನಡೆಸುತ್ತಿರುವ ಪ್ರಕರಣಗಳು ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ, “ಮತಾಂತರ ನಿಷೇಧ’ ಕಾಯಿದೆ ಜಾರಿಗೆ ತರುವ ಚಿಂತನೆ ಇದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

ವಿಧಾನಸಭೆಯಲ್ಲಿಂದು ಶೂನ್ಯವೇಳೆಯಲ್ಲಿ ಬಿಜೆಪಿ ಸದಸ್ಯ ಗೂಳಿಹಟ್ಟಿ ಶೇಖರ್ ಈ ವಿಷಯ ಪ್ರಸ್ತಾಪಿಸಿ; ತಮ್ಮ ಜಿಲ್ಲೆ ಹಾಗೂ ಮತ ಕ್ಷೇತ್ರದಲ್ಲಿ ಕೆಲ ಕ್ರಿಶ್ಚಿಯನ್ ಮಿಷನರಿಗಳು ಹಾಗೂ ಸಂಘಟನೆಗಳು ವ್ಯಾಪಕವಾಗಿ ಬಲವಂತದ ಹಾಗೂ ಆಮಿಷಗಳನ್ನೊಡ್ಡಿ ಮುಗ್ಧ ಜನರನ್ನು ಮತಾಂತರಗೊಳಿಸುವ ಪ್ರಕ್ರಿಯೆಯಲ್ಲಿ ತೊಡಗಿದ್ದು, ಕೆಲ ಕುಟುಂಬಗಳೇ ಮುರಿದು ಬಿದ್ದಿವೆ. ಇದನ್ನು ತಡೆಯಲು ಸರಕಾರವು ತಕ್ಷಣದಿಂದಲೇ ಅಗತ್ಯ ಕ್ರಮ ತೆಗೆದುಕೊಳ್ಳಬೇಕೆಂದು ಒತ್ತಾಯಿಸಿದರು.

ಶಾಸಕರು ಸ್ವತಃ ತಮ್ಮದೇ ಅನುಭವವನ್ನು ಸದನದಲ್ಲಿ ಹಂಚಿಕೊಂಡು ಅತೀವ ನೋವು ವ್ಯಕ್ತಪಡಿಸಿದರು. ಅವರು ಹೇಳಿದ್ದಿಷ್ಟು;

“ನನ್ನ ತಾಯಿಯನ್ನೇ ಮತಾಂತರಗೊಳಿಸಲಾಗಿದ್ದು ಕುಟುಂಬದ ಸದಸ್ಯರಲ್ಲಿ ಕಳವಳವುಂಟಾಗಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ ಸುಮಾರು ಹದಿನೈದರಿಂದ ಇಪ್ಪತ್ತು ಸಾವಿರ ಜನರನ್ನು ಮತಾಂತರಗೊಳಿಸಲಾಗಿದೆ. ಈ ಪ್ರಕ್ರಿಯೆಯಲ್ಲಿ ದಲಿತ, ಹಿಂದುಳಿದ ಹಾಗೂ ಮುಸ್ಲಿಂ ಸಮುದಾಯದ ಜನರೂ ಮತಾಂತರಗೊಂಡಿದ್ದಾರೆ. ಮತಾಂತರ ಪ್ರಕ್ರಿಯೆಯನ್ನು ವಿರೋಧಿಸುವವರಿಗೆ ಬೆದರಿಕೆ ಹಾಕಲಾಗುತ್ತಿದ್ದು, ಪೊಲೀಸ್‌ ಬಲ ಉಪಯೋಗಿಸಿ ಸುಳ್ಳು ಕೇಸುಗಳನ್ನು ಹಾಕಲಾಗುತ್ತಿದೆ.

ಗೂಳಿಹಟ್ಟಿ ಶೇಖರ್ ಪ್ರಸ್ತಾಪಿಸಿದ ಈ ವಿಷಯಕ್ಕೆ ಉತ್ತರ ನೀಡಿದ ಗೃಹ ಸಚಿವರು; ರಾಜ್ಯದಲ್ಲಿ ಬಲವಂತದ ಮತಾಂತರಕ್ಕೆ ಅವಕಾಶವಿಲ್ಲ. ಆಮಿಶವೊಡ್ಡಿ ಮತಾಂತರ ಮಾಡುವುದು ಕಾನೂನಿಗೆ ವಿರುದ್ಧ. ಪೊಲೀಸರಿಗೆ ಈ ಕುರಿತು ಸ್ಪಷ್ಟ ನಿರ್ದೇಶನ ನೀಡಿ ಸೂಕ್ತ ಕ್ರಮ ತೆಗೆದುಕೊಳ್ಳಲು ತಿಳಿಸಲಾಗಿದೆ ಎಂದರು.

ಜನತೆಯ ಮುಗ್ಧತೆ ಅಥವಾ ಇನ್ನಿತರೆ ಸನ್ನಿವೇಶಗಳನ್ನು ಉಪಯೋಗಿಸಿಕೊಂಡು ಯಾವುದೇ ಸಂಘಟನೆ ಅಥವಾ ಸಂಸ್ಥೆಗಳು ಮತಾಂತರ ಮಾಡುವುದರಿಂದ ಸಮಾಜದಲ್ಲಿ ಶಾಂತಿ ಕದಡುವ ಸಂಭವವೂ ಇದೆ ಎಂದ ಗೃಹ ಸಚಿವರು, ಈ ಕುರಿತು ರಾಜ್ಯ ಸರಕಾರ ಸೂಕ್ತ ಕಾನೂನನ್ನು ಜಾರಿಗೆ ತರಲು ಚಿಂತನೆ ನಡೆಸಿದೆ ಎಂದು ಸದನಕ್ಕೆ ತಿಳಿಸಿದರು.

“ಆಮಿಷ ಒಡ್ಡಿ ಜನರನ್ನು ಮತಾಂತರಗೊಳಿಸುವ ಪ್ರಕ್ರಿಯೆಯಲ್ಲಿ ಒಂದು ವ್ಯವಸ್ಥಿತ ಜಾಲವೇ ಇದ್ದು, ಅದನ್ನು ಯಾವ ರೀತಿ ತಡೆಗಟ್ಟಲು ಸಾಧ್ಯ ಎಂಬುದರ ಬಗ್ಗೆ ಚರ್ಚೆ ಆಗುತ್ತಿದೆ. ಮುಂದಿನ ದಿನಗಳಲ್ಲಿ ಸೂಕ್ತ ಕಾನೂನನ್ನು ತರಲಾಗುವುದು” ಎಂದು ಸಚಿವರು ತಿಳಿಸಿದರು.

“ಶಾಂತಿ ಭಂಗಕ್ಕೆ ಕಾರಣವಾಗುವ ಯಾವುದೇ ಸಂಘಟನೆಗಳ ಅಥವಾ ವ್ಯಕ್ತಿಗಳ ವಿರುದ್ಧ ಕಾನೂನು ಪ್ರಕಾರ ಕ್ರಮ ತೆಗೆದುಕೊಳ್ಳಲಾಗುವುದು” ಎಂದು ಸಚಿವರು ಸದನಕ್ಕೆ ತಿಳಿಸಿದರು.

ಕಾಂಗ್ರೆಸ್ ಸದಸ್ಯ ಕೆ.ಜೆ.ಜಾರ್ಜ್ ಮಧ್ಯ ಪ್ರವೇಶಿಸಿ ಮಾತನಾಡಿ; ಬಲವಂತವಾಗಿ ಮತಾಂತರಿಸುವ ಯಾವುದೇ ಪ್ರಯತ್ನಕ್ಕೆ ನಮ್ಮ ವಿರೋಧವಿದೆ, ಆದರೆ ಯಾವುದೋ ಒಂದು ಸಂಘಟನೆ ತಪ್ಪು ಮಾಡಿದರೆ ಅದನ್ನು ಸಾರ್ವತ್ರಿಕವಾಗಿ ದೂಷಿಸುವುದು ಸರಿಯಲ್ಲ ಎಂದು ಹೇಳಿದರು.

ಇದೆ ಸಂಧರ್ಭದಲ್ಲಿ ಮಾತನಾಡಿದ ಜೆಡಿಎಸ್ ಶಾಸಕ ದೇವಾನಂದ್; ತಮ್ಮ ವಿಜಯಪುರ ಜಿಲ್ಲೆಯಲ್ಲಿಯೂ ಮತಾಂತರ ಹಾವಳಿ ಅವ್ಯಾಹತವಾಗಿದೆ. ಬಂಜಾರ ಸಮುದಾಯವನ್ನು ಗುರಿ ಮಾಡಿಕೊಂಡಿರುವ ಕೆಲವು ಸಂಘಟನೆಗಳು ಮಾಡುತ್ತಿರುವ ಕೃತ್ಯದಿಂದ ಶಾಂತಿ ಹಾಗೂ ಕುಟುಂಬದ ಸದಸ್ಯರ ನಡುವೆಯೇ ಸಮನ್ವಯ ಕದಡಿ ಹೋಗಿದೆ. ಸರಕಾರ ಈ ಕೂಡಲೇ ಮಧ್ಯ ಪ್ರವೇಶಿಸಬೇಕು

ಎಂದು ಹೇಳಿದರು.

Tags: araga jnanendragoolihatti shekharkarnatakareligion conversion in karnataka
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಗಾಂಧಿ ಜಯಂತಿಗೂ ಮುನ್ನವೇ ಪಬ್ ಒಪೆನ್!

ಗಾಂಧಿ ಜಯಂತಿಗೂ ಮುನ್ನವೇ ಪಬ್ ಒಪೆನ್!

Leave a Reply Cancel reply

Your email address will not be published. Required fields are marked *

Recommended

ಶಿಕ್ಷಣದಿಂದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವುದು ಹೇಗೆ? ಡಾ.ಕಸ್ತೂರಿ ರಂಗನ್‌ ಅವರು ಹೇಳಿದ್ದೇನು?

ಶಿಕ್ಷಣದಿಂದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವುದು ಹೇಗೆ? ಡಾ.ಕಸ್ತೂರಿ ರಂಗನ್‌ ಅವರು ಹೇಳಿದ್ದೇನು?

5 years ago
ಉಳುವವನಿಂದ ಉಳ್ಳವನಿಗೆ ಭೂಮಿ! ಭೂ ಸುಧಾರಣೆ ಕಾಯ್ದೆ ತಿದ್ದುಪಡಿಯಲ್ಲಿ ಏನಿದೆ ಸ್ವಾಮಿ?

ಉಳುವವನಿಂದ ಉಳ್ಳವನಿಗೆ ಭೂಮಿ! ಭೂ ಸುಧಾರಣೆ ಕಾಯ್ದೆ ತಿದ್ದುಪಡಿಯಲ್ಲಿ ಏನಿದೆ ಸ್ವಾಮಿ?

6 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ