• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS STATE

ಕೋವಿಡ್ ಉತ್ತರ ಕೇಳದೆ ಕಾಂಗ್ರೆಸ್ ಪಲಾಯನ

cknewsnow desk by cknewsnow desk
September 24, 2021
in STATE
Reading Time: 2 mins read
0
ಚಿಕ್ಕಬಳ್ಳಾಪುರಕ್ಕೆ ಚೀಯರ್ಸ್ ;‌ ಡಾ.ಸುಧಾಕರ್ʼಗೆ ವೈದ್ಯಶಿಕ್ಷಣ ಜತೆಗೆ ಆರೋಗ್ಯ ಖಾತೆ
964
VIEWS
FacebookTwitterWhatsuplinkedinEmail

ಬಸವಣ್ಣನವರ ವಚನದ ಮೂಲಕ ಕೈಪಡೆಯನ್ನು ಕುಟುಕಿದ ಸಚಿವ ಡಾ.ಕೆ.ಸುಧಾಕರ್

ಬೆಂಗಳೂರು: ವಿಧಾನಸಭೆಯ ಅಧಿವೇಶನದ ಕೊನೆಯ ದಿನವಾದ ಶುಕ್ರವಾರ ಕೋವಿಡ್ ಕುರಿತು ಸರ್ಕಾರದ ಉತ್ತರ ಕೇಳದೆ ಪಲಾಯನ ಮಾಡಿರುವ ಕಾಂಗ್ರೆಸ್ʼನ ನಡೆ, ಜನರ ಆರೋಗ್ಯದ ಬಗ್ಗೆ ಪಕ್ಷಕ್ಕೆ ಇರುವ ಕಾಳಜಿ ಮತ್ತು ಬದ್ಧತೆಯನ್ನು ಬಟಾಬಯಲು ಮಾಡಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಿಧಾನಸಭೆಯಲ್ಲಿ ಗುರುವಾರ ಕೋವಿಡ್ ಕುರಿತು ದೀರ್ಘ ಚರ್ಚೆ ನಡೆದಿತ್ತು. ಶುಕ್ರವಾರ ಸಚಿವ ಡಾ.ಕೆ.ಸುಧಾಕರ್ ಅವರು ಉತ್ತರ ನೀಡಲು ಮುಂದಾದಾಗ ಕಾಂಗ್ರೆಸ್ ಸದಸ್ಯರು ಉತ್ತರವನ್ನು ಕೇಳದೆ ಸಭಾತ್ಯಾಗ ಮಾಡಿದರು.

ಈ ಬಗ್ಗೆ ಪ್ರತಿಕ್ರಿಯಿಸಿರುವ ಸಚಿವ ಡಾ.ಕೆ.ಸುಧಾಕರ್, “ಕೋವಿಡ್ ನಿರ್ವಹಣೆ ಕುರಿತು ಸದನದಲ್ಲಿ 5 ಗಂಟೆ ರಾಜಕೀಯ ಭಾಷಣ ಮಾಡಿದ ವಿಪಕ್ಷಗಳಿಗೆ ಇಂದು ಸರ್ಕಾರದ ಉತ್ತರ ಕೇಳುವ ಆಸಕ್ತಿಯೂ ಇಲ್ಲ, ಧೈರ್ಯವೂ ಇಲ್ಲ. ಸತ್ಯವನ್ನು ಕೇಳದೆ ಅವರು ಪಲಾಯನ ಮಾಡಿದ್ದಾರೆ. ಈ ಮೂಲಕ ಕಾಂಗ್ರೆಸ್ ಸದಸ್ಯರು, ತಾವು ಮಾಡಿರುವ ಎಲ್ಲ ಆರೋಪ ಸತ್ಯಕ್ಕೆ ದೂರವಾದುದು, ರಾಜಕೀಯ ಪ್ರೇರಿತ ಎಂಬುದನ್ನು ಸಾಬೀತುಪಡಿಸಿದ್ದಾರೆ. ಈ ನಡೆ ಪ್ರಜಾಪ್ರಭುತ್ವಕ್ಕೆ ಮಾಡಿದ ಅಪಮಾನ. ಕೋವಿಡ್ ಸಾವಿನಲ್ಲೂ ರಾಜಕೀಯ ಮಾಡಲು ಹೊರಟಿರುವ ಕಾಂಗ್ರೆಸ್ ನ ಕೀಳು ಸಂಸ್ಕೃತಿಯನ್ನು ರಾಜ್ಯದ ಜನರು ಗಮನಿಸಿದ್ದಾರೆ. ಸಾವಿನ ಮನೆಯಲ್ಲೂ ಬೇಳೆ ಬೇಯಿಸಿಕೊಳ್ಳುವ ಕಾಂಗ್ರೆಸ್ʼನ ನೀಚ ರಾಜಕೀಯವನ್ನು ಜನರು ಕ್ಷಮಿಸುವುದಿಲ್ಲ” ಎಂದು ಸಚಿವರು ಆಕ್ರೋಶ ಹೊರಹಾಕಿದ್ದಾರೆ.

“ನಿಂದಿಸುವನೊಬ್ಬ, ಸ್ತುತಿಸುವನೊಬ್ಬ,

ಇವರಿಬ್ಬರು ನಮ್ಮ ಶಿವಯೋಗಿಯ ಪರಮಬಂಧುಗಳಯ್ಯಾ.

ಪಾಪವನೊಬ್ಬ ಕೊಂಬ, ಪುಣ್ಯವನೊಬ್ಬ ಕೊಂಬ,

ಕೂಡಲಸಂಗಮದೇವಾ, ನಿಮ್ಮ ಶರಣರು ನಿತ್ಯಮುಕ್ತರು”

ಎಂದು ಜಗದ್ಗುರು ಬಸವಣ್ಣನವರು ಹೇಳಿದ್ದಾರೆ. ಅದೇ ರೀತಿ ಪ್ರತಿಪಕ್ಷಗಳು ನಿಂದನೆ ಮಾಡುವುದು ಹೊಸ ವಿಚಾರವಲ್ಲ. ಆದರೆ ಕಾಂಗ್ರೆಸ್ ನವರಂತೆ ರಾಜಕೀಯ ಭಾಷಣ ಮಾಡಬಾರದು.ಇದು ಶತಮಾನದ ಅತೀ ದೊಡ್ಡ ಸಾಂಕ್ರಾಮಿಕವಾಗಿದ್ದು, ಸ್ವತಂತ್ರ ಭಾರತ ಎದುರಿಸುತ್ತಿರುವ ಅತ್ಯಂತ ದೊಡ್ಡ ಸವಾಲಾಗಿದೆ. ಸ್ವಾತಂತ್ರ್ಯ ಬಂದ ನಂತರ ನಡೆದ ಎಲ್ಲ ಯುದ್ಧಗಳಲ್ಲಿ ನಾವು ಎಷ್ಟು ಜನರನ್ನು ಕಳೆದುಕೊಂಡಿದ್ದೆವೆಯೋ ಪ್ರಾಯಶಃ ಅದಕ್ಕಿಂತ ಹೆಚ್ಚು ಜನರನ್ನು ಈ ಸಾಂಕ್ರಾಮಿಕದಲ್ಲಿ ಕಳೆದುಕೊಂಡಿದ್ದೇವೆ. ಇಂತಹ ಪರಿಸ್ಥಿತಿಯಲ್ಲಿ ಜವಾಬ್ದಾರಿಯುತ ವಿಪಕ್ಷಗಳಿಂದ ಜನತೆ ನಿರೀಕ್ಷಿಸುವುದು ಆಪಾದನೆ ಅಲ್ಲ, ಸಂವೇದನೆ ಎಂಬುದನ್ನು ಅರಿಯಬೇಕು. ಸಂಘರ್ಷ ಅಲ್ಲ ಸಹಕಾರ, ಪ್ರತಿಷ್ಠೆ ಅಲ್ಲ ಪ್ರಾಮಾಣಿಕತೆ, ರಾಜಕಾರಣ ಅಲ್ಲ ಅಂತಃಕರಣ ಎಂಬುದನ್ನು ತಿಳಿಯಬೇಕು ಎಂದು ಸಚಿವರು ಹೇಳಿದ್ದಾರೆ.

ಸಂಸದೀಯ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಆಡಳಿತ ಮತ್ತು ವಿರೋಧ ಪಕ್ಷಗಳು ಬೇರೆ ಬೇರೆ ಇರಬಹುದು. ಆದರೆ ಆಡಳಿತ ಹಾಗೂ ವಿರೋಧ ಪಕ್ಷಗಳ ಗುರಿ ಒಂದೇ ಆಗಿರಬೇಕು. ನಮ್ಮ ದೃಷ್ಟಿ ಸದಾ ಜನಹಿತದ ಕಡೆ ಇದ್ದು, ಸದಾ ಜನ ಕಲ್ಯಾಣದ ಗುರಿ ಇರಬೇಕು. ಆದರೆ ಇಂದು ಕೊರೊನಾ ಸಾಂಕ್ರಾಮಿಕದ ಸಂದರ್ಭದಲ್ಲಿ ಸರ್ಕಾರದ ದೃಷ್ಟಿ ಜನಹಿತದ ಮೇಲಿದ್ದರೆ, ವಿಪಕ್ಷಗಳ ದೃಷ್ಟಿ ಅಧಿಕಾರದ ಕುರ್ಚಿಯ ಮೇಲಿದೆ. ಸರ್ಕಾರದ ಕಾರ್ಯಗಳು ಜನರ ಜೀವ ಉಳಿಸುವ, ಜನಕಲ್ಯಾಣದ ಕಡೆಗೆ ಇದ್ದರೆ, ವಿಪಕ್ಷಗಳ ಚಟುವಟಿಕೆಗಳು ಸಾವಿನ ಮನೆಯಲ್ಲಿ ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳುವ ಕಡೆ ಇದೆ ಎಂದು ಸಚಿವರು ಬೇಸರ ವ್ಯಕ್ತಪಡಿಸಿದ್ದಾರೆ.

ಅಂಕಿ ಅಂಶ ಮುಚ್ಚಿಟ್ಟಿಲ್ಲ

ಕೊರೊನಾದಿಂದ ಉಂಟಾದ ಸಾವಿನ ಸಂಖ್ಯೆಯನ್ನು ಮುಚ್ಚಿಡುತ್ತಿದ್ದೇವೆ ಎಂದು ವಿಪಕ್ಷಗಳು ಆರೋಪ ಮಾಡುವುದು ಸತ್ಯಕ್ಕೆ ದೂರವಾದ ಮಾತು. ಕೋವಿಡ್ ಅಂಕಿ ಅಂಶಗಳನ್ನು ಮುಚ್ಚಿಡುವ ಯಾವುದೇ ಅವಶ್ಯಕತೆ ಆಗಲಿ ಅಥವಾ ಉದ್ದೇಶ ಆಗಲಿ ನಮ್ಮ ಸರ್ಕಾರಕ್ಕೆ ಇಲ್ಲ. ಐಸಿಎಂಆರ್ ಮಾರ್ಗಸೂಚಿ ಪ್ರಕಾರವೇ ಎಲ್ಲ ಅಂಕಿ ಅಂಶಗಳು ದಾಖಲಾಗುತ್ತವೆ. ನಾವೆಲ್ಲರೂ ಒಂದು ವ್ಯವಸ್ಥೆಯಲ್ಲಿ, ಸಾಂವಿಧಾನಿಕ ಚೌಕಟ್ಟಿನಲ್ಲಿ ಕೆಲಸ ಮಾಡುತ್ತಿದ್ದೇವೆ. ಭಾರತ ಒಂದು ಕ್ರಿಯಾಶೀಲ, ಮುಕ್ತ ಪ್ರಜಾಪ್ರಭುತ್ವವಾಗಿದ್ದು, ಮೂರು ಹಂತಗಳ ಪ್ರಜಾಪ್ರಭುತ್ವ ಇದೆ. ಗ್ರಾಮ ಪಂಚಯಿತಿಗಳವರೆಗೂ ಅಧಿಕಾರ ವಿಕೇಂದ್ರೀಕರಣ ಆಗಿದೆ. ಮುಕ್ತವಾದ ಮಾಧ್ಯಮಗಳು ಇವೆ. ಎಲ್ಲಕ್ಕಿಂತ ಮಿಗಿಲಾಗಿ ಇವತ್ತಿನ ದಿನ ಜನರು ನೇರವಾಗಿ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಳ್ಳಬಹುದಾದ ಸೋಶಿಯಲ್ ಮೀಡಿಯಾಗಳಿವೆ. ಇಂತಹ ಮುಕ್ತ ವ್ಯವಸ್ಥೆಯಲ್ಲಿ ಸಾವಿನ ಸಂಖ್ಯೆಯನ್ನು ಮುಚ್ಚಿಡಲು ಸಾಧ್ಯವೇ? ಎಂದು ಸಚಿವರು ಪ್ರಶ್ನೆ ಮಾಡಿದ್ದಾರೆ.

ಸದನಕ್ಕೆ ತಪ್ಪು ಮಾಹಿತಿ

ಐಸಿಎಂಆರ್ ರೂಪಿಸಿದ ಮಾರ್ಗಸೂಚಿ ಪ್ರಕಾರವೇ ಮರಣಗಳನ್ನು ದಾಖಲಾಗಿಸುತ್ತಿದೆ. ವಿಪಕ್ಷ ನಾಯಕ ಸಿದ್ದರಾಮಯ್ಯನವರು ಸುವರ್ಣ ಆರೋಗ್ಯ ಸುರಕ್ಷತಾ ಟ್ರಸ್ಟ್ ನಲ್ಲಿ ಆಗಿರುವ ಕ್ಲೇಮುಗಳೆಲ್ಲ ಮರಣಗಳು ಎಂದು ತಪ್ಪಾಗಿ ಸದನಕ್ಕೆ ಮಾಹಿತಿ ನೀಡಿದ್ದಾರೆ. ಎಸ್‍ಎಎಸ್‍ಟಿ ಸಂಸ್ಥೆ ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ವಿಮೆ ಯೋಜನೆಯನ್ನು ಅನುಷ್ಠಾನಗೊಳಿಸುವ ನೋಡಲ್ ಏಜೆನ್ಸಿ ಆಗಿದ್ದು, 2 ಲಕ್ಷಕ್ಕೂ ಹೆಚ್ಚು ಕ್ಲೇಮ್ ಬಂದಿರುವುದು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿರುವ ಸೋಂಕಿತರದ್ದಾಗಿದೆ. ಮೊದಲನೇ ಅಲೆಯಲ್ಲಿ ವೈರಾಣುವಿನ ಗುಣಲಕ್ಷಣಗಳಿಗೂ ಎರಡನೇ ಅಲೆಯಲ್ಲಿ ವೈರಾಣುವಿನ ಗುಣಲಕ್ಷಣಗಳಿಗೂ ಬಹಳ ವ್ಯತ್ಯಾಸವಿದೆ. ಎರಡನೇ ಅಲೆಯಲ್ಲಿ ವೈರಾಣು ಬಹಳ ತೀವ್ರವಾಗಿ ಹರಡುವ ಮತ್ತು ಹೆಚ್ಚು ಗಂಭೀರ ಸೋಂಕು ಉಂಟುಮಾಡುವ ಲಕ್ಷಣ ಹೊಂದಿತ್ತು. ಇದು ಯಾವ ತಜ್ಞರ ಊಹೆಗೂ ಮತ್ತು ಅಂದಾಜಿಗೂ ಮೀರಿದ್ದ ಪರಿಸ್ಥಿತಿಯಾಗಿತ್ತು. ಎಂದು ಸಚಿವರು ಹೇಳಿದ್ದಾರೆ.

ಮೊದಲ ಅಲೆಯಲ್ಲಿ ಗರಿಷ್ಠ ಒಂದು ದಿನಕ್ಕೆ ದಾಖಲಾದ ಪ್ರಕರಣಗಳನ್ನು ಗಮನಿಸಬೇಕು. ಆಗ 2020 ರ ಅಕ್ಟೋಬರ್ 7 ರಂದು ದಾಖಲಾದ ಪ್ರಕರಣ 10,947. ಎರಡನೇ ಅಲೆಯಲ್ಲಿ 2021 ರ ಮೇ 5 ರಂದು ದಾಖಲಾದ ಪ್ರಕರಣ 50,112. ಅಂದರೆ ಮೊದಲನೇ ಅಲೆಗಿಂತ ಎರಡನೇ ಅಲೆ 5 ಪಟ್ಟು ಹೆಚ್ಚು ವೇಗವಾಗಿತ್ತು. ರೂಪಾಂತರಗೊಂಡ ವೈರಾಣುವಿನಿಂದಲೂ ಸಮಸ್ಯೆ ಹೆಚ್ಚಾಗಿತ್ತು ಎಂಬ ವಾಸ್ತವವನ್ನು ಸಚಿವರು ವಿವರಿಸಿದ್ದಾರೆ.

ಮೂಲಸೌಕರ್ಯ ಅಭಿವೃದ್ಧಿ

ಕೋವಿಡ್ 2 ನೇ ಅಲೆಗೆ ಯಾವುದೇ ಸಿದ್ಧತೆ ಮಾಡಿಕೊಂಡಿರಲಿಲ್ಲ ಎಂದು ಪ್ರತಿಪಕ್ಷದವರು ಟೀಕಿಸಿದ್ದರು. ಆದರೆ ಸಚಿವ ಡಾ.ಕೆ.ಸುಧಾಕರ್ ಅವರು, ಸರ್ಕಾರ ಮಾಡಿಕೊಂಡ ಸಿದ್ಧತೆಗಳ ಬಗ್ಗೆ ಅಂಕಿ ಅಂಶ ಸಹಿತ ವಿವರವಾದ ಮಾಹಿತಿಯನ್ನು ಸದನಕ್ಕೆ ಸಲ್ಲಿಸಿದ್ದಾರೆ.

ಮೊದಲ ಅಲೆಗೆ ಮುನ್ನ ವೈದ್ಯಕೀಯ ಶಿಕ್ಷಣ ಇಲಾಖೆಯ ಆಸ್ಪತ್ರೆಗಳಲ್ಲಿ 413, ಆರೋಗ್ಯ ಇಲಾಖೆ ಆಸ್ಪತ್ರೆಗಳಲ್ಲಿ 312 ಸೇರಿ ಒಟ್ಟು 725 ಐಸಿಯು ಹಾಸಿಗೆ ಇತ್ತು. ಮೊದಲ ಅಲೆಯ ವೇಳೆಗೆ ಇದನ್ನು 858 ಕ್ಕೆ ಹಾಗೂ ಎರಡನೇ ಅಲೆಯ ವೇಳೆಗೆ 1,961 ಕ್ಕೆ ಏರಿಸಲಾಯಿತು. ಆಗಸ್ಟ್ ವೇಳೆಗೆ 3,877 ಹಾಸಿಗೆ ಲಭ್ಯವಿದೆ.

ಮೊದಲ ಅಲೆಗೆ ಮುನ್ನ ವೈದ್ಯಕೀಯ ಶಿಕ್ಷಣ ಇಲಾಖೆಯ ಆಸ್ಪತ್ರೆಗಳಲ್ಲಿ 4,260, ಆರೋಗ್ಯ ಇಲಾಖೆ ಆಸ್ಪತ್ರೆಗಳಲ್ಲಿ 587 ಸೇರಿ ಒಟ್ಟು 4,847 ಆಕ್ಸಿಜನ್ ಹಾಸಿಗೆ ಇತ್ತು. ಮೊದಲ ಅಲೆಯ ವೇಳೆಗೆ ಇದನ್ನು 5,387 ಕ್ಕೆ ಹಾಗೂ ಎರಡನೇ ಅಲೆಯ ವೇಳೆಗೆ 25,184 ಗೆ ಏರಿಸಲಾಯಿತು. ಆಗಸ್ಟ್ ವೇಳೆಗೆ 28,447 ಆಕ್ಸಿಜನ್ ಹಾಸಿಗೆ ಲಭ್ಯವಿದೆ.

ಮೊದಲ ಅಲೆಗೆ ಮುನ್ನ ವೈದ್ಯಕೀಯ ಶಿಕ್ಷಣ ಇಲಾಖೆಯ ಆಸ್ಪತ್ರೆಗಳಲ್ಲಿ 9778, ಆರೋಗ್ಯ ಇಲಾಖೆ ಆಸ್ಪತ್ರೆಗಳಲ್ಲಿ31,600 ಸೇರಿ ಒಟ್ಟು 41,378 ಹಾಸಿಗೆ ಇತ್ತು. ಎರಡನೇ ಅಲೆಯ ವೇಳೆಗೆ 45,966 ಗೆ ಏರಿಸಲಾಯಿತು. ಆಗಸ್ಟ್ ವೇಳೆಗೆ 50,629 ಹಾಸಿಗೆ ಲಭ್ಯವಿದೆ.

ಆಕ್ಸಿಜನ್

ಮೊದಲ ಅಲೆಗೆ ಮುನ್ನ ಆರೋಗ್ಯ ಇಲಾಖೆಯಡಿ 2,180 ಆಕ್ಸಿಜನ್ ಸಿಲಿಂಡರ್ ಇತ್ತು. ಮೊದಲ ಅಲೆಯಲ್ಲಿ 6,530, ಎರಡನೇ ಅಲೆಯ ವೇಳೆಗೆ 9,928 ಹಾಗೂ ಪ್ರಸ್ತುತ 13,588 ಸಿಲಿಂಡರ್ ದೊರಕಿಸಿಕೊಡಲಾಗಿದೆ. ಮೊದಲ ಅಲೆಯ ವೇಳೆಗೆ 585 ಸಾಂದ್ರಕ ಇದ್ದು, ಎರಡನೇ ಅಲೆಯ ವೇಳೆಗೆ 5,435, ಪ್ರಸ್ತುತ 6,511 ಲಭ್ಯವಾಗಿಸಲಾಗಿದೆ.

ಮೊದಲ ಅಲೆಗೆ ಮುನ್ನ ವೈದ್ಯಕೀಯ ಶಿಕ್ಷಣ ಇಲಾಖೆಯ ಆಸ್ಪತ್ರೆಗಳಲ್ಲಿ 292 ಟನ್, ಆರೋಗ್ಯ ಇಲಾಖೆ ಆಸ್ಪತ್ರೆಗಳಲ್ಲಿ 28 ಟನ್ ಸೇರಿ ಒಟ್ಟು 320 ಟನ್ ಲಿಕ್ವಿಡ್ ಮೆಡಿಕಲ್ ಆಕ್ಸಿಜನ್ ಸಂಗ್ರಹಣಾ ಸಾಮರ್ಥ್ಯವಿತ್ತು. ಮೊದಲ ಅಲೆಯ ವೇಳೆಗೆ ಇದನ್ನು 500 ಟನ್ ಹಾಗೂ ಎರಡನೇ ಅಲೆಯ ವೇಳೆಗೆ 799 ಟನ್ ಗೆ ಏರಿಸಲಾಯಿತು. ಆಗಸ್ಟ್ ವೇಳೆಗೆ 1,207 ಟನ್ ಸಂಗ್ರಹಣಾ ಸಾಮರ್ಥ್ಯವಿದೆ.

ಲಸಿಕೆ

ರಾಜ್ಯದಲ್ಲಿ ಕೋವಿಡ್ ನಿಯಂತ್ರಣಕ್ಕೆ ವೇಗವಾಗಿ ಜನರಿಗೆ ಲಸಿಕೆ ನೀಡಲಾಗಿದೆ. ಸೆ.24 ಕ್ಕೆ, 5,39,49,021 ಲಸಿಕೆ ನೀಡಲಾಗಿದೆ. ರಾಜ್ಯ ಸರ್ಕಾರ ಒಟ್ಟು 4,89,11,050 ಲಸಿಕೆ ಪಡೆದಿದೆ. ಈ ಪೈಕಿ ಕೇಂದ್ರ ಸರ್ಕಾರದಿಂದ 4,63,07,690 ಡೋಸ್ ಪೂರೈಕೆಯಾಗಿದೆ. ಆರೋಗ್ಯ ಸಿಬ್ಬಂದಿಗೆ ಮೊದಲ ಡೋಸ್ ನಲ್ಲಿ 84.9%, ಎರಡನೇ ಡೋಸ್ ನಲ್ಲಿ 71.5%, ಮುಂಚೂಣಿ ಕಾರ್ಯಕರ್ತರಿಗೆ ಮೊದಲ ಡೋಸ್ ನಲ್ಲಿ 108%, ಎರಡನೇ ಡೋಸ್ ನಲ್ಲಿ 78.3%, 18-44 ವಯಸ್ಸಿನವರಿಗೆ ಮೊದಲ ಡೋಸ್ ನಲ್ಲಿ 63.9%, ಎರಡನೇ ಡೋಸ್ ನಲ್ಲಿ 16.3%, 45 ವಯಸ್ಸು ಮೇಲ್ಪಟ್ಟವರಲ್ಲಿ ಮೊದಲ ಡೋಸ್ ನಲ್ಲಿ 91.6%, ಎರಡನೇ ಡೋಸ್ ನಲ್ಲಿ 52.8% ಪ್ರಗತಿಯಾಗಿದೆ. ಒಟ್ಟು ಮೊದಲ ಡೋಸ್ 76.9%, ಎರಡನೇ ಡೋಸ್ ನಲ್ಲಿ 31.5% ಪ್ರಗತಿಯಾಗಿದೆ.

2.75 ಲಕ್ಷ ರೋಗಿಗಳಿಗೆ ಉಚಿತ ಚಿಕಿತ್ಸೆ

ಆಯುಷ್ಮಾನ್ ಭಾರತ-ಆರೋಗ್ಯ ಕರ್ನಾಟಕ ಯೋಜನೆಯಡಿ 2.75 ಲಕ್ಷ ಕೊರೊನಾ ಸೋಂಕಿತರು ಉಚಿತ ಚಿಕಿತ್ಸೆ ಪಡೆದಿದ್ದಾರೆ. ಸ್ವಾತಂತ್ರ್ಯ ಬಂದು 7 ದಶಕಗಳಾದರೂ ದೇಶದ 90% ಜನರಿಗೆ ಆರೋಗ್ಯ ವಿಮೆ ಇರಲಿಲ್ಲ. ಪ್ರಧಾನಿ ನರೇಂದ್ರ ಮೋದಿ ಅವರು ಆಯುಷ್ಮಾನ್ ಭಾರತ್ ಯೋಜನೆ ಮೂಲಕ 10 ಕೋಟಿ ಬಡ ಮತ್ತು ಆರ್ಥಿಕವಾಗಿ ಹಿಂದುಳಿದ ಕುಟುಂಬಗಳಿಗೆ ವಾರ್ಷಿಕ 5 ಲಕ್ಷ ರೂ. ಆರೋಗ್ಯ ವಿಮೆ ಯೋಜನೆ ತಂದಿದ್ದಾರೆ. ಇದು ವಿಶ್ವದ ಅತ್ಯಂತ ದೊಡ್ಡ ಆರೋಗ್ಯ ವಿಮೆ ಯೋಜನೆಯಾಗಿದ್ದು 50 ಕೋಟಿಗೂ ಹೆಚ್ಚು ಜನರಿಗೆ ಆರೋಗ್ಯ ಸೇವೆ ಖಾತ್ರಿ ಪಡಿಸಿದೆ. ಈ ಯೋಜನೆ 3 ಯಶಸ್ವಿ ವರ್ಷ ಪೂರೈಸಿದ್ದು, 2 ಕೋಟಿಗೂ ಹೆಚ್ಚು ಒಳರೋಗಿ ಚಿಕಿತ್ಸೆ ನೀಡಲಾಗಿದ್ದು, 25,000 ಕೋಟಿ ಮೌಲ್ಯದ ಚಿಕಿತ್ಸಾ ವೆಚ್ಚವನ್ನು ದೇಶಾದ್ಯಂತ ಉಚಿತವಾಗಿ ಭರಿಸಲಾಗಿದೆ ಎಂದು ಸಚಿವರು ಹೇಳಿದ್ದಾರೆ.

ಮೋದಿ ಅವರು ಪ್ರಧಾನಿ ಆದ ನಂತರ 2014ರಿಂದ 156 ಮೆಡಿಕಲ್ ಕಾಲೇಜು ಆರಂಭವಾಗಿದೆ. 70 ವರ್ಷಗಳಲ್ಲಿ 50,000 ಮೆಡಿಕಲ್ ಸೀಟು ಸೃಜಿಸಲಾಗಿದೆ. ಕಳೆದ 7 ವರ್ಷಗಳಲ್ಲಿ 30,000 ಸೀಟು ಹೆಚ್ಚಿಸಲಾಗಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಕಡ್ಡಾಯ ಸೇವೆ ಸಲ್ಲಿಕೆ ಕ್ರಮ ಅನುಷ್ಠಾನಗೊಂಡಿದ್ದು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಗಳ ವಿವಿಧ ಹುದ್ದೆಗಳಿಗೆ 2,053 ವೈದ್ಯರನ್ನು ಗುತ್ತಿಗೆ ಆಧಾರದಲ್ಲಿ ನೇಮಿಸಲಾಗಿದೆ. ಇತ್ತೀಚೆಗೆ ಪೂರ್ಣಗೊಂಡ 1,750 ವೈದ್ಯರ ಐತಿಹಾಸಿಕ ನೇರ ನೇಮಕಾತಿ ಸೇರಿದಂತೆ ಕೊರೊನಾ ಸಂದರ್ಭದಲ್ಲಿ ರಾಜ್ಯ ಸರ್ಕಾರ ಒಟ್ಟು 4,000 ವೈದ್ಯರನ್ನು ನೇಮಿಸಿಕೊಂಡಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.

ಕಾಂಗ್ರೆಸ್ ದ್ವಂದ್ವ

2020 ರ ಮಾರ್ಚ್ ಪ್ರಧಾನಿ ನರೇಂದ್ರ ಮೋದಿ, ಲಾಕ್ ಡೌನ್ ಘೋಷಿಸಿದಾಗ ಕಾಂಗ್ರೆಸ್ ಮುಖಂಡರು ಟೀಕೆ ಮಾಡಿದರು. ಇದೇ ಜನರು ಎರಡಲೇ ಅಲೆ ಬಂದಾಗ ಪೂರ್ಣ ಲಾಕ್ ಡೌನ್ ಗೆ ಒತ್ತಾಯ ಮಾಡಿದ್ದರು. ಒಂದು ಹಾಗೂ ಎರಡನೇ ಅಲೆಯ ನಡುವೆ ಯಾವ ರೀತಿಯ ಬದಲಾವಣೆ ಆಗಿದೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯನವರೇ ಎಂದು ಪ್ರಶ್ನಿಸಿರುವ ಸಚಿವ ಡಾ.ಕೆ.ಸುಧಾಕರ್, ಇಂತಹ ಗಂಭೀರ ವಿಚಾರದಲ್ಲಿ ರಾಜಕೀಯ ಮಾಡಬಾರದು ಎಂದು ಹೇಳಿದ್ದಾರೆ.

ಕೋವ್ಯಾಕ್ಸಿನ್ ಹಾಗೂ ಕೋವಿಶೀಲ್ಡ್ ಲಸಿಕೆಗೆ ಅನುಮತಿ ನೀಡಿದ್ದನ್ನು ‘ಪ್ರಿಮೆಚ್ಯೂರ್’ ಎಂದು ಟೀಕಿಸಿದ್ದ ಕಾಂಗ್ರೆಸ್ ಮುಖಂಡರು, ಲಸಿಕೆ ಬಗ್ಗೆ ಜನರಿದ್ದ ಗೊಂದಲವನ್ನು ಇನ್ನಷ್ಟು ಹೆಚ್ಚು ಮಾಡಿದ್ದರು. ಕೇಂದ್ರ ಸರ್ಕಾರ ಲಸಿಕೆಯನ್ನು ಕೊಡುತ್ತಿದ್ದಾಗ, ವಿಳಂಬವಾಗಿದೆ ಎಂದು ಟೀಕೆ ಮಾಡಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, 2024 ರ ವೇಳೆಗೆ ಲಸಿಕಾ ಅಭಿಯಾನ ಪೂರ್ಣಗೊಳ್ಳಲಿದೆ ಎಂದು ವ್ಯಂಗ್ಯವಾಡಿದ್ದರು. ನಂತರ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯನವರು, ಲಸಿಕೆಯ ದರ ಹೆಚ್ಚಿಸಲಾಗಿದೆ ಎಂದು ಟೀಕಿಸಿದ್ದರು. ಆದರೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಲಸಿಕೆಯನ್ನು ಉಚಿತವಾಗಿ ನೀಡಿದೆ.

ಕೋವಿಡ್ ನಿರ್ವಹಣೆಯನ್ನು ಮಾಡುತ್ತಿದ್ದ ರಾಜ್ಯ ಸರ್ಕಾರಕ್ಕೆ ಈ ಎಲ್ಲ ಟೀಕೆ, ರಾಜಕೀಯದಿಂದಾಗಿಯೇ ಪ್ರತಿ ಬಾರಿ ಕಾಂಗ್ರೆಸ್ ಅಡ್ಡಗಾಲು ಹಾಕಿದೆ. ಕೋವಿಡ್ ನಂತಹ ವಿಷಮ ಪರಿಸ್ಥಿತಿಯಲ್ಲಿ ಸಾರ್ವಜನಿಕರ ಆರೋಗ್ಯ ಕಾಪಾಡುವುದು ರಾಜ್ಯ ಸರ್ಕಾರದ ಉದ್ದೇಶವಾಗಿದ್ದರೆ, ಇಲ್ಲಿಯೂ ರಾಜಕೀಯ ಲಾಭ ಪಡೆಯುವ ಆಲೋಚನೆಯನ್ನು ವಿಪಕ್ಷ ನಾಯಕರು ಮಾಡುತ್ತಿದ್ದಾರೆ. ನಮ್ಮೆಲ್ಲರ ಶತ್ರು ಕೊರೊನಾ ವೈರಾಣುವೇ ಹೊರತು ಪ್ರಧಾನಿ ನರೇಂದ್ರ ಮೋದಿ ಅಥವಾ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಲ್ಲ ಎಂಬ ಸತ್ಯವನ್ನು ಟೀಕಾಕಾರರು ತಿಳಿದರೆ ಕೋವಿಡ್ ಅನ್ನು ವೇಗವಾಗಿ ನಿಮೂರ್ಲನೆ ಮಾಡಲು ಸಾಧ್ಯ ಎಂದು ಸಚಿವ ಡಾ.ಕೆ.ಸುಧಾಕರ್ ಸ್ಪಷ್ಟಪಡಿಸಿದ್ದಾರೆ.

ಮೃತರ ಕುಟುಂಬಕ್ಕೆ ಪರಿಹಾರ ಶೀಘ್ರ

ಚಾಮರಾಜನಗರದಲ್ಲಿ ನಡೆದ ದುರಂತ ಅತ್ಯಂತ ದುರದೃಷ್ಟಕರ. ನ್ಯಾಯಮೂರ್ತಿ ಎ.ಬಿ. ಪಾಟೀಲ್ ಅವರು ಸಮಿತಿ ವರದಿಯನ್ನು ಸರ್ಕಾರ ನಿರೀಕ್ಷಿಸುತ್ತಿದ್ದು ವರದಿ ಸರ್ಕಾರದ ಕೈಸೇರಿದ ಕೂಡಲೇ ಸೂಕ್ತ ಕ್ರಮ ಜರುಗಿಸಲಾಗುವುದು. ನೆನ್ನೆ ಮಾನ್ಯ ಮಾಜಿ ಮುಖ್ಯಮಂತ್ರಿ ಶ್ರೀ ಯಡಿಯೂರಪ್ಪ ಅವರು ಸ್ಪಷ್ಟ ಪಡಿಸಿದಂತೆ ಸರ್ಕಾರ ಈಗಾಗಲೇ ರೂ. ೨೦೦ ಕೋಟಿ ಮೀಸಲಿಟ್ಟಿದ್ದು ಶೀಘ್ರದಲ್ಲೇ ಪ್ರತಿಯೊಬ್ಬ ಮೃತ ಕುಟುಂಬಕ್ಕೆ 1 ಲಕ್ಷ ರೂ ಪರಿಹಾರ ತಲುಪಿಸಲಾಗುವುದು ಎಂದರು.

Tags: Congressdr k sudhakarhealth ministerkarnataka assemblysiddaramaiah
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಮುಂದಿನ ವಿಧಾನಸಭೆಯಲ್ಲಿ ಸಿದ್ದರಾಮಯ್ಯ ಯಾವ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ? ಗುಟ್ಟುಬಿಟ್ಟುಕೊಟ್ಟ ಬಂಗಾರಪೇಟೆ ಶಾಸಕ ಎಸ್.ಎನ್‌.ನಾರಾಯಣಸ್ವಾಮಿ

ಸಭಾಧ್ಯಕ್ಷರ ಹುದ್ದೆ ಮಹತ್ವ ಪ್ರಶ್ನಿಸಿದ ಸಿದ್ದರಾಮಯ್ಯ

Leave a Reply Cancel reply

Your email address will not be published. Required fields are marked *

Recommended

ಮಾ.4ರಿಂದ ಅನುದಾನಿತ ಶಾಲಾ, ಕಾಲೇಜುಗಳ ಶಿಕ್ಷಕರ ಅಂತಿಮ ಹೋರಾಟ

ಮಾ.4ರಿಂದ ಅನುದಾನಿತ ಶಾಲಾ, ಕಾಲೇಜುಗಳ ಶಿಕ್ಷಕರ ಅಂತಿಮ ಹೋರಾಟ

4 years ago
ಹೊಸ ಆರ್ಥಿಕ ಪ್ಯಾಕೇಜ್‌ ಇಲ್ಲI  ಆಕ್ಸಿಜನ್‌ ನಿರ್ವಹಣೆಗೆ 3 ಸೂತ್ರ I ಡಾ.ದೇವಿಪ್ರಸಾದ್ ಶೆಟ್ಟಿ ನೇತೃತ್ವದಲ್ಲಿ ಕಾರ್ಯಪಡೆ I ವ್ಯಾಕ್ಸಿನ್ ಕಾರ್ಯತಂತ್ರಕ್ಕೆ  ಪ್ರೊ.ಗಗನ್‍ದೀಪ್ ಕಾಂಗ್ ಸಲಹೆ

ಹೊಸ ಆರ್ಥಿಕ ಪ್ಯಾಕೇಜ್‌ ಇಲ್ಲI ಆಕ್ಸಿಜನ್‌ ನಿರ್ವಹಣೆಗೆ 3 ಸೂತ್ರ I ಡಾ.ದೇವಿಪ್ರಸಾದ್ ಶೆಟ್ಟಿ ನೇತೃತ್ವದಲ್ಲಿ ಕಾರ್ಯಪಡೆ I ವ್ಯಾಕ್ಸಿನ್ ಕಾರ್ಯತಂತ್ರಕ್ಕೆ ಪ್ರೊ.ಗಗನ್‍ದೀಪ್ ಕಾಂಗ್ ಸಲಹೆ

5 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ