• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home POLITICS

ಸಭಾಧ್ಯಕ್ಷರ ಹುದ್ದೆ ಮಹತ್ವ ಪ್ರಶ್ನಿಸಿದ ಸಿದ್ದರಾಮಯ್ಯ

cknewsnow desk by cknewsnow desk
September 24, 2021
in POLITICS, STATE
Reading Time: 1 min read
0
ಮುಂದಿನ ವಿಧಾನಸಭೆಯಲ್ಲಿ ಸಿದ್ದರಾಮಯ್ಯ ಯಾವ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ? ಗುಟ್ಟುಬಿಟ್ಟುಕೊಟ್ಟ ಬಂಗಾರಪೇಟೆ ಶಾಸಕ ಎಸ್.ಎನ್‌.ನಾರಾಯಣಸ್ವಾಮಿ
930
VIEWS
FacebookTwitterWhatsuplinkedinEmail

ಮುಖ್ಯಮಂತ್ರಿಗೆ ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇಲ್ಲ ಎಂದು ಟೀಕೆ

ಬೆಂಗಳೂರು: ಸಭಾಧ್ಯಕ್ಷರ ಹುದ್ದೆ ರಾಜಕಿಯ ಮತ್ತು ಪಕ್ಷಗಳನ್ನು ಮೀರಿದ ಹುದ್ದೆ. ಅವರ ನಿರ್ಣಯಗಳು ಯಾವಾಗಲೂ ಪಕ್ಷಾತೀತವಾಗಿರಬೇಕು. ಸಭಾಧ್ಯಕ್ಷರು ಒಂದು ರಾಜಕೀಯ ಪಕ್ಷದ ಸದಸ್ಯನಂತೆ ವರ್ತಿಸುವುದಾದರೆ ಆ ಹುದ್ದೆಗೆ ಮಹತ್ವವೇನಿದೆ ಎಂದು ವಿಧಾನಸಭೆಯ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಪ್ರಶ್ನಿಸಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಪ್ರಜಾಪ್ರಭುತ್ವದಲ್ಲಿ, ಸಂಸದೀಯ ವ್ಯವಸ್ಥೆಯಲ್ಲಿ ನಂಬಿಕೆಯಿಟ್ಟಿದ್ದಾರೆ ಎಂಬ ನನ್ನ ನಂಬಿಕೆ ಹುಸಿಯಾಗಿದೆ. ಮುಖ್ಯಮಂತ್ರಿಯಾದಿಯಾಗಿ ಇಡೀ ಸರ್ಕಾರ ಆರ್.ಎಸ್.ಎಸ್ ನವರ ನಿರ್ದೇಶನದಲ್ಲಿ ಮುಖವಾಡ ಧರಿಸಿ, ಅವರ ಕೈಗೊಂಬೆಯಾಗಿ ಕೆಲಸ ಮಾಡುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

ವಿಧಾನಸಭೆ ಕಲಾಪವನ್ನು ಸಭಾಧ್ಯಕ್ಷರು ಅನಿರ್ಧಿಷ್ಟ ಅವಧಿಗೆ ಮುಂದೂಡಿದ ಬಳಿಕ ಸಿದ್ದರಾಮಯ್ಯ ಅವರು ಮೊಗಸಾಲೆಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದರು.

ರಾಜ್ಯ @BJP4Karnataka ಸರ್ಕಾರ ಸದನದ ಒಳಗೆ ನಮ್ಮ ಬಾಯಿ ಮುಚ್ಚಿಸಿರಬಹುದು, ನಾವು ಹೋರಾಟವನ್ನು ಬೀದಿಗೆ ಕೊಂಡೊಯ್ಯುತ್ತೇವೆ. ಅಕ್ಟೋಬರ್ 2ರ ಗಾಂಧಿ ಜಯಂತಿಯಂದು ಬೆಲೆಯೇರಿಕೆಯನ್ನು ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆಯನ್ನು ಆರಂಭಿಸಿ, ಬೆಲೆ ಇಳಿಕೆಯಾಗುವವರೆಗೂ ಮುಂದುವರೆಸಿಕೊಂಡು ಹೋಗುತ್ತೇವೆ. 12/12#Session

— Siddaramaiah (@siddaramaiah) September 24, 2021

ಮಾಧ್ಯಮ ಪ್ರತಿನಿಧಿಗಳಿಗೆ ಅವರು ಹೇಳಿದ್ದು :

  • ಸರ್ಕಾರದ ನಿರ್ದೇಶನದ ಮೇರೆಗೆ ಸಭಾಧ್ಯಕ್ಷರು ಕಲಾಪವನ್ನು ಅನಿರ್ಧಿಷ್ಟ ಅವಧಿಗೆ ಮುಂದೂಡಿದ್ದಾರೆ. ಆರು ತಿಂಗಳ ಬಳಿಕ ಅಧಿವೇಶನ ನಡೆಯುತ್ತಿದೆ. ಚರ್ಚಿಸಲು ಸಾಕಷ್ಟು ವಿಷಯಗಳಿವೆ. ಸರ್ಕಾರದ ಗಮನ ಸೆಳೆಯಬೇಕಾದ ಸಮಸ್ಯೆಗಳಿವೆ, ಹಾಗಾಗಿ ಕನಿಷ್ಟ ಇಪ್ಪತ್ತು ದಿನ ಸದನ ನಡೆಸಬೇಕು ಎಂದು ಕಲಾಪ ಸಲಹಾ ಸಮಿತಿ ಸಭೆಯಲ್ಲಿ ಹೇಳಿದ್ದೆ. ಸಭಾಧ್ಯಕ್ಷರು ಇನ್ನೊಂದು ಸಭೆ ಕರೆದಾಗ ಈ ಬಗ್ಗೆ ತೀರ್ಮಾನ ಮಾಡೋಣ ಎಂಬ ಭರವಸೆ ನೀಡಿದ್ದರು. ಆದರೆ ಈ ವಾರ ಸಭೆ ಕರೆಯಲೇ ಇಲ್ಲ, ಇನ್ನು ಐದು ದಿನವಾದರೂ ಸದನ ಮುಂದುವರೆಸುವಂತೆ ಆಗ ಸಭಾಧ್ಯಕ್ಷರಿಗೆ ಪತ್ರ ಬರೆದೆ. ಅದಕ್ಕವರು ಸರ್ಕಾರ ಸಿದ್ಧವಿಲ್ಲ ಎಂದರು.
  • ರಾಷ್ಟ್ರೀಯ ಶಿಕ್ಷಣ ನೀತಿ ಬಗ್ಗೆ ಚರ್ಚೆಗೆ ನಾನು ಅವಕಾಶ ಕೇಳಿದ್ದೆ. ಸಮಯ ಇಲ್ಲ ಎಂದು ಅವಕಾಶವನ್ನೇ ನೀಡಿಲ್ಲ. ಇನ್ನು ರಾಜ್ಯದ ಆರ್ಥಿಕ ಪರಿಸ್ಥಿತಿ ತೀರ ಕೆಟ್ಟದಾಗಿದೆ, ಹೀಗೆ ಅನೇಕ ವಿಚಾರಗಳ ಬಗ್ಗೆಯೂ ಚರ್ಚೆ ಮಾಡಬೇಕಿತ್ತು.  ಸನದ ಮುಂದುವರೆಸಿದ್ದರೆ ಈ ಎಲ್ಲಾ ವಿಷಯಗಳ ಮೇಲೆ ಚರ್ಚಿಸಬಹುದಿತ್ತು. ಈ ವರೆಗೆ ಸದನದಲ್ಲಿ ಪ್ರಸ್ತಾಪಿಸಿದ ವಿಷಯಗಳ ಬಗ್ಗೆಯಾದರೂ ಸರ್ಕಾರ ಸಕಾರಾತ್ಮಕವಾಗಿ ಉತ್ತರ ನೀಡಿದೆಯೇ, ಅದೂ ಇಲ್ಲ. ಸದನದಲ್ಲಿ ಧರಣಿ, ಪ್ರತಿಭಟನೆ ಮಾಡದೆ ಜನರ ಸಮಸ್ಯೆಗಳ ಚರ್ಚೆಗೆ ಹೆಚ್ಚು ಸಮಯ ಸಿಗಲಿ ಎಂದು ಶಾಸಕಾಂಗ ಸಭೆಯಲ್ಲಿ ನಿರ್ಧರಿಸಿದ್ದೆವು. ಯಾವಾಗ ಸದನ ಮುಂದುವರೆಸಲು ಆಗುವುದೇ ಇಲ್ಲ ಎಂದು ಹೇಳಿದರೋ ಆಗ ಅನಿವಾರ್ಯವಾಗಿ ಧರಣಿ ಮಾಡಬೇಕಾಯಿತು.
  • ರಾಷ್ಟ್ರೀಯ ಶಿಕ್ಷಣ ನೀತಿಯ ಮೂಲಕ ಕೇಂದ್ರ ಸರ್ಕಾರ ಶೋಷಿತರು, ದಲಿತರು, ಮಹಿಳೆಯರನ್ನು ಸಂಘ ಪರಿವಾರದ, ಮೇಲ್ವರ್ಗದ ಜನರ ಗುಲಾಮರನ್ನಾಗಿಸಲು ಹೊರಟಿದೆ. ಇದನ್ನು ಸದನದಲ್ಲಿ ವಿರೋಧ ಮಾಡಿದರೆ ಸಭಾಧ್ಯಕ್ಷರೇ ಸಮರ್ಥನೆಗೆ ಇಳಿಯುತ್ತಾರೆ.
  • ಕೆಐಎಡಿಬಿ ಅಧೀನದಲ್ಲಿರುವ ಸುಮಾರು 400 ಕೋಟಿ ಮೌಲ್ಯದ 116 ಎಕರೆ ಭೂಮಿಯನ್ನು ರಾಜ್ಯ ಸರ್ಕಾರ ಕೇವಲ ರೂ. 50 ಕೋಟಿಗೆ ಸೆಸ್ ಎಂಬ ಆರ್.ಎಸ್.ಎಸ್ ನವರನ್ನು ಒಳಗೊಂಡ ಸಂಸ್ಥೆಗೆ ಮಾರಲು ನಿರ್ಧರಿಸಿದೆ. ಇದನ್ನು ಪ್ರಶ್ನಿಸಿದರೆ ಸಭಾಧ್ಯಕ್ಷರು ಸರ್ಕಾರದ ಕೈಗೊಂಬೆಯಂತೆ ವರ್ತಿಸಿದರು.
  • ಕೊರೊನಾದಿಂದ ಸತ್ತವರ ಲೆಕ್ಕದಲ್ಲೂ ಸರ್ಕಾರ ಸುಳ್ಳು ಹೇಳಿದೆ. ಹಿಂದಿನ ಮುಖ್ಯಮಂತ್ರಿ ಮೃತರ ಕುಟುಂಬಗಳಿಗೆ ತಲಾ ಒಂದು ಲಕ್ಷ ರೂ. ಪರಿಹಾರ ನೀಡಲು ಮೂನ್ನೂರು ಕೋಟಿ ಘೋಷಣೆ ಮಾಡಿದ್ದರು. ಅವರು ಅಧಿಕಾರದಿಂದ ಇಳಿದು ಎರಡು ತಿಂಗಳಾಯಿತು. ಇನ್ನೂ ಒಂದು ಪೈಸೆ ಪರಿಹಾರ ಕೊಟ್ಟಿಲ್ಲ. ಶ್ರೀರಾಮುಲು ಪರಿಹಾರ ಕೊಟ್ಟಿದ್ದೀವಿ ಎಂದು ಹೇಳಿ ಸಿಕ್ಕಿಬಿದ್ದರು, ಕೊನೆಗೆ ಯಡಿಯೂರಪ್ಪ ಅವರೇ ಪರಿಹಾರ ಕೊಟ್ಟಿಲ್ಲ ಎಂದು ಸಮಜಾಯಿಷಿ ಹೇಳಿದರು.
  • ಲೋಕಸಭೆಯ ಸಭಾಧ್ಯಕ್ಷರು ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲು ಸಂವಿಧಾನದಲ್ಲಿ ಅವಕಾಶ ಇಲ್ಲ. ದೇಶದ 75 ವರ್ಷಗಳ ಇತಿಹಾಸದಲ್ಲಿ, ವಿಧಾನಸೌಧ ಸ್ಥಾಪನೆಯಾಗಿ ಕಾರ್ಯಾರಂಭ ಮಾಡಿದ ದಿನದಿಂದ ಇವತ್ತಿನವರೆಗೆ ಲೋಕಸಭಾ ಸಭಾಧ್ಯಕ್ಷರು ವಿಧಾನಮಂಡಲದ ಜಂಟಿ ಅಧಿವೇಶನ ಕುರಿತು ಭಾಷಣ ಮಾಡಿಲ್ಲ.
  • ಪೆಟ್ರೋಲ್, ಡೀಸೆಲ್ ಸೇರಿದಂತೆ ಅಗತ್ಯ ವಸ್ತುಗಳ ಬೆಲೆಯೇರಿಕೆ ಖಂಡಿಸಿ ನಾವು ಸೈಕಲ್, ಎತ್ತಿನಗಾಡಿ, ಟಾಂಗಾ ಸವಾರಿಯಲ್ಲಿ ಅಧಿವೇಶನಕ್ಕೆ ಆಗಮಿಸುವ ಮೂಲಕ ಪ್ರತಿಭಟನೆ ನಡೆಸಿದ್ದೇವೆ.
  • ನರೇಂದ್ರ ಮೋದಿ ಅವರು ಪ್ರಧಾನಿಯಾದ ಮೇಲೆ ಪೆಟ್ರೋಲ್, ಡೀಸೆಲ್, ಗ್ಯಾಸ್, ಆಸ್ಪತ್ರೆ ಬಿಲ್, ದಿನಸಿ ಪದಾರ್ಥ, ಬಸ್ ದರ ಸೇರಿದಂತೆ ಎಲ್ಲಾ ಅಗತ್ಯ ವಸ್ತುಗಳು ಹಾಗೂ ಸೇವೆಗಳ ಬೆಲೆ ಗಗನಕ್ಕೇರಿ, ಜನಸಾಮಾನ್ಯರು ಪರದಾಡುವಂತಾಗಿದೆ.
  • ಒಂದು ಮಧ್ಯಮ ವರ್ಗದ ಕುಟುಂಬದ ಜೀವನ ನಿರ್ವಹಣೆಯ ವೆಚ್ಚ ಇಂದು ದುಪ್ಪಟ್ಟಾಗಿದೆ, ಆದರೆ ಸಂಬಳ, ಪಿಂಚಣಿ, ಕೂಲಿ ಇವೆಲ್ಲವೂ ಹಿಂದಿನಷ್ಟೇ ಇದೆ. ಹೀಗಾದರೆ ಸಾಮಾನ್ಯ ಜನ ಬದುಕುವುದು ಹೇಗೆ?
  • ದೇಹದಲ್ಲಿ ರಕ್ತಕ್ಕೆಷ್ಟು ಮಹತ್ವದ ಪಾತ್ರವಿದೆಯೋ, ಜನರ ಬದುಕಿನಲ್ಲಿ ಡೀಸೆಲ್ ಗೂ ಅಷ್ಟೇ ಮಹತ್ವವಿದೆ. ಹಿಂದೆ ಯು.ಪಿ.ಎ ಸರ್ಕಾರವಿದ್ದಾಗ ಡೀಸೆಲ್ ದರ ರೂ. 47 ಇತ್ತು, ಇಂದು ರೂ. 96 ಆಗಿದೆ. ಡೀಸೆಲ್ ಬೆಲೆಯೇರಿಕೆ ಇಂದ ಉಳಿದೆಲ್ಲಾ ವಸ್ತುಗಳ ಬೆಲೆ ಹೆಚ್ಚಳವಾಗುತ್ತದೆ. ಅಗತ್ಯ ವಸ್ತುಗಳ ಬೆಲೆ ಏರಿಕೆ ಆಗಬಾರದು ಎಂಬ ಕಾರಣಕ್ಕೆ ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿದ್ದಾಗ ಡೀಸೆಲ್ ಬೆಲೆ ರೂ. 50 ರ ಗಡಿ ದಾಟದಂತೆ ನೋಡಿಕೊಂಡಿದ್ದರು. ನರೇಂದ್ರ ಮೋದಿ ಸರ್ಕಾರ ಡೀಸೆಲ್ ಮೇಲಿನ ಅಬಕಾರಿ ಸುಂಕ ಹೆಚ್ಚಿಸಿದ್ದೇ ಇಂದಿನ ಬೆಲೆಯೇರಿಕೆ ನೇರ ಕಾರಣ.
  • ಅಚ್ಚೇ ದಿನದ ಆಸೆ ತೋರಿಸಿ ಅಧಿಕಾರಕ್ಕೆ ಬಂದ ನರೇಂದ್ರ ಮೋದಿ ಅವರು ಜನರ ಜೇಬಿಗೆ ಕೈ ಹಾಕಿ, ದರೋಡೆಗಿಳಿದಿದ್ದಾರೆ. ಇದರಿಂದ ಜನ ತಮ್ಮ ಮನೆಯಲ್ಲಿದ್ದ ಬಂಗಾರವನ್ನೆಲ್ಲಾ ಅಡವಿಟ್ಟು ಜೀವನ ಸಾಗಿಸುವಂತಾಗಿದೆ.
  • ಕೊರೊನಾ ಆರಂಭವಾದ ನಂತರ ಸುಮಾರು ರೂ. 4 ಲಕ್ಷದ 17 ಸಾವಿರ ಕೋಟಿ ಬೆಲೆಬಾಳುವ 1500 ಮೆಟ್ರಿಕ್ ಟನ್ ಬಂಗಾರವನ್ನು ಮುತ್ತೂಟ್ ಮತ್ತು ಮಣಪ್ಪುರಂನಲ್ಲಿ ಅಡವಿಟ್ಟಿದ್ದಾರೆ. ಇಂತಹಾ ಸ್ಥಿತಿಗೆ ದೇಶವನ್ನು ಮೋದಿ ಸರ್ಕಾರ ತಂದು ನಿಲ್ಲಿಸಿದೆ. ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆ ಕಡಿಮೆ ಮಾಡಿ ಕಾರ್ಪೊರೇಟ್ ಉದ್ದಿಮೆಗಳ ಮೇಲೆ ತೆರಿಗೆ ಹೆಚ್ಚು ಮಾಡಬೇಕಿತ್ತು. ಆದರೆ ಮೋದಿ ಸರ್ಕಾರ ಬಂಡವಾಳಶಾಹಿಗಳು, ಉದ್ದಿಮೆದಾರರು, ಕಾರ್ಪೊರೇಟ್ ಕಂಪನಿಗಳ ಪರವಾಗಿದ್ದಾರೆ.
  • ಕಾಂಗ್ರೆಸ್ ಪಕ್ಷ ಬಡವರು, ಮಹಿಳೆಯರು, ಆಟೋ, ಕ್ಯಾಬ್ ಚಾಲಕರು, ದಿನಗೂಲಿ ನೌಕರರು, ಕಾರ್ಮಿಕರ ಪರವಾಗಿ ಇದೆ. ಈ ಕಾರಣಕ್ಕಾಗಿಯೇ ನಾವು ಇಂದು ಜನರ ದನಿಯಾಗಿ ಹೋರಾಟಕ್ಕಿಳಿದಿದ್ದೇವೆ. ಸರ್ಕಾರದ ವಿರುದ್ಧ ಮಾತನಾಡುವವರ ಮೇಲೆ ಸುಳ್ಳು ಕ್ರಿಮಿನಲ್ ಕೇಸ್, ದೇಶದ್ರೋಹದ ಆರೋಪ ಹೊರಿಸಿ ಬಂಧಿಸುತ್ತಾರೆ.
  • ಬಿಜೆಪಿ ಸರ್ಕಾರದಲ್ಲಿ ಪ್ರಜಾಪ್ರಭುತ್ವದ ಮೌಲ್ಯಗಳಿಗಾಗಲೀ, ಅಭಿವ್ಯಕ್ತಿ ಸ್ವಾತಂತ್ರ್ಯಕ್ಕಾಗಲೀ ಬೆಲೆಯೇ ಇಲ್ಲ. ಇಂಥಾ ಕ್ರೂರ ಸರ್ಕಾರವನ್ನು ನನ್ನ 45 ವರ್ಷಗಳ ರಾಜಕೀಯ ಜೀವನದಲ್ಲೇ ನೋಡಿರಲಿಲ್ಲ. ಕಳೆದ ಏಳು ವರ್ಷಗಳಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ಅಬಕಾರಿ ಸುಂಕವೊಂದರಲ್ಲೇ ಕೇಂದ್ರ ಸರ್ಕಾರ ರೂ. 23 ಲಕ್ಷ ಕೋಟಿ ತೆರಿಗೆ ಹಣ ಸಂಗ್ರಹಿಸಿದೆ. ಇದನ್ನು ಕ್ರಿಮಿನಲ್ ಲೂಟ್ ಅಂದರೆ ತಪ್ಪೇನಿದೆ?
  • ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ರೈತ ಹೋರಾಟವನ್ನು “ಪ್ರಾಯೋಜಿತ ಚಳವಳಿ” ಎಂದು ಕರೆದು ಇಡೀ ರೈತ ಸಮುದಾಯಕ್ಕೆ ಅವಮಾನ ಮಾಡಿದ್ದಾರೆ. ಹೋರಾಟವನ್ನೇ ಮಾಡದೆ ಆಪರೇಷನ್ ಕಮಲದ ಮೂಲಕ ಅಧಿಕಾರ ಹಿಡಿದವರಿಗೆ ಹೋರಾಟದ ಬೆಲೆ ಗೊತ್ತೇ?
  • ಪಕ್ಕದ ತಮಿಳುನಾಡಿನ ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಅವರು ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆಯನ್ನು 3 ರೂಪಾಯಿ ಕಡಿತ ಮಾಡಿದರು. ರಾಜ್ಯ ಸರ್ಕಾರಕ್ಕೆ ನಿಜವಾಗಿ ಬಡವರ, ರೈತರ ಮೇಲೆ ಕಾಳಜಿ ಇದ್ದರೆ ಪೆಟ್ರೋಲ್, ಡೀಸೆಲ್ ಮೇಲೆ ರೂ. 10 ತೆರಿಗೆ ಕಡಿತ ಮಾಡಲಿ.
  • ಈ ಸರ್ಕಾರದ ಜೊತೆ ಅಧಿವೇಶನದಲ್ಲಿ ಎಷ್ಟೇ ಗುದ್ದಾಡಿದರೂ ಇವರು ಯಾವುದಕ್ಕೂ ತಲೆಕೆಡಿಸಿಕೊಳ್ಳದಷ್ಟು ಭಂಡಗೆಟ್ಟಿದ್ದಾರೆ. ನಮ್ಮ ಪಕ್ಷವೇ ಇಂದು ಅಧಿಕಾರದಲ್ಲಿ ಇದ್ದಿದ್ದರೆ ಕನಿಷ್ಟ 10 ರೂಪಾಯಿ ತೆರಿಗೆ ಕಡಿತ ಮಾಡುತ್ತಿದ್ದೆ. ಅಕ್ಟೋಬರ್ 2ರ ಗಾಂಧಿಜಯಂತಿಯಂದು ಬೆಲೆಯೇರಿಕೆಯನ್ನು ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆಯನ್ನು ಆರಂಭಿಸಿ, ಬೆಲೆ ಇಳಿಕೆಯಾಗುವವರೆಗೂ ಮುಂದುವರೆಸಿಕೊಂಡು ಹೋಗುತ್ತೇವೆ.
Tags: bjpCongresskarnatakakarnataka assemblysiddaramaiahspeakervishweshwar hegde kageri
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಚಿನ್ನದೊಂದಿಗೆ ಮಿಂಚಿದ ರೈತನ ಮಗಳು

ಚಿನ್ನದೊಂದಿಗೆ ಮಿಂಚಿದ ರೈತನ ಮಗಳು

Leave a Reply Cancel reply

Your email address will not be published. Required fields are marked *

Recommended

ಕರ್ನಾಟಕ ಭಾರತದ ಬಯೋಟೆಕ್ನಾಲಜಿ ರಾಜಧಾನಿ ಎಂದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಕರ್ನಾಟಕ ಭಾರತದ ಬಯೋಟೆಕ್ನಾಲಜಿ ರಾಜಧಾನಿ ಎಂದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

5 years ago
ದಿನ 2: ಸಿಇಟಿ ಪರೀಕ್ಷೆ ಸುಖಾಂತ್ಯ

ಸಿಇಟಿ ಕೌನ್ಸೆಲಿಂಗ್: ಜನವರಿ 15ರವರೆಗೆ ಕಾಲಾವಕಾಶ ನೀಡುವಂತೆ ಕೋರಿ ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಲಿಗೆ ಪತ್ರ ಬರೆದ ಸರಕಾರ

5 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ