• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS STATE

ಪದ್ಮಭೂಷಣ ಡಾ.ಶ್ರೀ ಬಾಲಗಂಗಾಧರನಾಥ ಮಹಾಸ್ವಾಮಿಗಳವರ 48ನೇ ಪಟ್ಟಾಭಿಷೇಕ ಮಹೋತ್ಸವ

cknewsnow desk by cknewsnow desk
September 25, 2021
in STATE
Reading Time: 1 min read
0
ಪದ್ಮಭೂಷಣ ಡಾ.ಶ್ರೀ ಬಾಲಗಂಗಾಧರನಾಥ ಮಹಾಸ್ವಾಮಿಗಳವರ 48ನೇ ಪಟ್ಟಾಭಿಷೇಕ ಮಹೋತ್ಸವ
1k
VIEWS
FacebookTwitterWhatsuplinkedinEmail

ಮಹಾಲಕ್ಷ್ಮಿ ಬಡಾವಣೆಯಲ್ಲಿ 3 ಕೋಟಿ ರೂ. ವೆಚ್ಚದಲ್ಲಿ ಪೂಜ್ಯ ಗುರುಗಳ ಕಂಚಿನ ಪ್ರತಿಮೆ

ಆದಿಚುಂಚನಗಿರಿ: ಶ್ರೀ ಆದಿಚುಂಚನಗಿರಿ ಕ್ಷೇತ್ರದಲ್ಲಿಂದು ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಪದ್ಮಭೂಷಣ ಡಾ.ಬಾಲಗಂಗಾಧರನಾಥ ಮಹಾಸ್ವಾಮಿಗಳವರ ನಲವತ್ತೆಂಟನೇ ವಾರ್ಷಿಕ ಪಟ್ಟಾಭಿಷೇಕ ಮಹೋತ್ಸವ ಮತ್ತು ಶ್ರೀಗುರು ಸಂಸ್ಮರಣೋತ್ಸವ ಸಮಾರಂಭವು ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ.ನಿರ್ಮಲಾನಂದನಾಥ ಮಹಾಸ್ವಾಮಿಗಳವರ ದಿವ್ಯ ಸಾನ್ನಿಧ್ಯದಲ್ಲಿ ನೆರವೇರಿತು.

ಶ್ರೀ ಗುರು ಬಾಲಗಂಗಾಧರನಾಥ ಮಹಾಸ್ವಾಮಿಗಳವರ ಚೈತನ್ಯ ಮೂರ್ತಿಗೆ ಪುಷ್ಪಾಭಿಷೇಕ ಮಾಡಿ ಆರತಿ ಬೆಳಗಿ ಭಕ್ತಿ ಸಮರ್ಪಿಸಿದ ನಂತರ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಆಶೀರ್ವದಿಸಿದ ಶ್ರೀ ನಿರ್ಮಲಾನಂದನಾಥ ಮಹಾಸ್ವಾಮಿಗಳವರು; “ಪರಮಪೂಜ್ಯ ಬಾಲಗಂಗಾಧರನಾಥ ಮಹಾಸ್ವಾಮಿಗಳವರು ಶ್ರೀ ಮಠದ ಪೀಠಾಧ್ಯಕ್ಷರಾಗಿ ನಲವತ್ತೆಂಟು ಸಂವತ್ಸರಗಳು ಕಳೆದಿವೆ. ತಮ್ಮ ಸೇವೆಯ ಮೂಲಕವೇ ಸರ್ವಜನ ಮಾನಸದಲ್ಲಿ ವಿರಾಜಮಾನರಾಗಿರುವ ಶ್ರೀ ಗುರುವಿಗೆ ಶಾಶ್ವತ ಪಟ್ಟಾಭಿಷೇಕ ನಿರಂತರವಾಗಿ ನಡೆಯುತ್ತಿರುತ್ತದೆ” ಎಂದು ನುಡಿದರು.

“ಪೂಜ್ಯ ಗುರುಗಳು ಪೀಠಾಧಿಕಾರಕ್ಕೆ ಬಂದ ಸಂದರ್ಭದಲ್ಲಿ ಯಾವ ಮನೆ ಶಾಶ್ವತವಾಗಿ ಅವಿದ್ಯೆಯಿಂದ ಕೂಡಿದೆಯೋ ಅಂತಹ ಮನೆಗಳ ಮಕ್ಕಳಿಗೆ ವಿದ್ಯೆಯನ್ನು ನೀಡಬೇಕು. ನಮ್ಮ ಜೀವಿತದ ಸಂದರ್ಭದಲ್ಲಿ ಹತ್ತು ಸಾವಿರ ಮಂದಿ ಮಕ್ಕಳಿಗಾದರೂ ವಿದ್ಯೆಯನ್ನು ನೀಡುವಂತಾಗಬೇಕೆಂದು ಸಂಕಲ್ಪಿಸಿದ್ದರು. ಆದರೆ ಪೂಜ್ಯ ಗುರುಗಳ ಜೀವಿತಾವಧಿಯಲ್ಲಿಯೇ ಶ್ರೀ ಆದಿಚುಂಚನಗಿರಿ ಶಿಕ್ಷಣ ಸಂಸ್ಥೆಯಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಮಕ್ಕಳು ವಿದ್ಯೆಯನ್ನು ಪಡೆಯುತ್ತಿದ್ದರು. ಗುರುಗಳ ಸತ್ಸಂಕಲ್ಪಕ್ಕೆ ಅಂತಹ ಶಕ್ತಿಯಿತ್ತು. ಅಂತಹ ಮಹಾಯೋಗಿ 1800 ವರ್ಷಗಳ ಇತಿಹಾಸವನ್ನುಳ್ಳ ಶ್ರೀ ಆದಿಚುಂಚನಗಿರಿ ಕ್ಷೇತ್ರಕ್ಕೆ ಪೀಠಾಧಿಕಾರಿಯಾಗಿ ಬಂದು ಪರುಷಮಣಿಯಂತೆ ಇಡೀ ಜಗತ್ತನ್ನು ಉದ್ಧರಿಸಿ ಎಲ್ಲರ ಮನದಲ್ಲಿ ಶಾಶ್ವತವಾಗಿ ಉಳಿದಿದ್ದಾರೆ. ಇಂಥ ಮಹಾ ಮಹಿಮೆಯನ್ನುಳ್ಳ ಗುರುಗಳನ್ನು ಪಡೆದಿರುವ ನಾವೇ ಧನ್ಯರು” ಎಂದು ಶ್ರೀಗಳವರು ನುಡಿದರು.

ಸಮಾರಂಭದಲ್ಲಿ ಉಪಸ್ಥಿತರಿದ್ದ ಸಚಿವ ಗೋಪಾಲಯ್ಯ ಮಾತನಾಡಿ, ಶ್ರೀ ಬಾಲಗಂಗಾಧರನಾಥ ಮಹಾಸ್ವಾಮಿಗಳವರ ದೂರ ದೃಷ್ಠಿಯ ಫಲವಾಗಿ ಇಂದು ಈ ಸಮಾಜದ ಅಸಂಖ್ಯಾತ ಅಕ್ಷರ ವಂಚಿತ ಮಕ್ಕಳು ವಿದ್ಯಾವಂತರಾಗಿ ಬದುಕನ್ನು ರೂಪಿಸಿಕೊಳ್ಳಲು ಸಾಧ್ಯವಾಗಿದೆ. ಈ ಮಠ ಕೇವಲ ಒಕ್ಕಲಿಗರ ಮಕ್ಕಳಿಗಷ್ಟೇ ಸೀಮಿತವಾದುದಲ್ಲ. ಎಲ್ಲಾ ಜಾತಿ ವರ್ಗ ಮತ ಧರ್ಮದ ಮಕ್ಕಳಿಗೂ ಶಿಕ್ಷಣವನ್ನು ಸಲ್ಲಿಸುತ್ತಿದೆ. ಸಮಾಜದ ಎಲ್ಲಾ ವರ್ಗದವರಿಗೂ ತನ್ನ ಅಪರಿಮಿತ ಸೇವೆಯನ್ನು ಸಲ್ಲಿಸುತ್ತಿದೆ. ಇದಕ್ಕೆಲ್ಲ ಪರಮಪೂಜ್ಯ ಶ್ರೀ ಬಾಲಗಂಗಾಧರನಾಥ ಮಹಾಸ್ವಾಮಿಗಳವರ ಸತ್ಸಂಕಲ್ಪವೇ ಕಾರಣವಾಗಿದೆ ಎಂದು ತಿಳಿಸಿ, ಬೆಂಗಳೂರಿನ ಮಹಾಲಕ್ಷ್ಮಿ ಬಡಾವಣೆಯಲ್ಲಿ  ಮೂರು ಕೋಟಿ ರೂಪಾಯಿ ವೆಚ್ಚದಲ್ಲಿ ಪೂಜ್ಯ ಗುರುಗಳ ಕಂಚಿನ ಪ್ರತಿಮೆ ಸ್ಥಾಪಿಸಲಾಗುವುದು ಎಂದರು.

ಶಾಸಕ ಸಿ.ಎಸ್.ಪುಟ್ಟರಾಜು ಮಾತನಾಡಿ; ಪರಮಪೂಜ್ಯ ಗುರೂಜಿ ಅವರೊಡನೆಯ ತಮ್ಮ ಸ್ಮರಣೀಯ ನೆನಪುಗಳನ್ನು ಹಂಚಿಕೊಂಡರು. ಶ್ರೀ ಕ್ಷೇತ್ರದಲ್ಲಿ ಶ್ರೀ ಕಾಲಭೈರವೇಶ್ವರ ಸ್ವಾಮಿ ದೇಗುಲವನ್ನು ನಿರ್ಮಿಸುವಾಗ ತನಗೂ ಸೇವೆಯನ್ನು ಸಲ್ಲಿಸುವ ಭಾಗ್ಯವನ್ನು ನನಗೆ ದಯಪಾಲಿಸಿದ್ದರು ಎಂದು ಸ್ಮರಿಸಿಕೊಂಡರು. ಶ್ರೀ ಗುರುಗಳ ಕೃಪೆಯಿಂದ ಲೋಕಸಭಾ ಸದಸ್ಯರಾಗಲು, ರಾಜ್ಯದ ಸಚಿವರಾಗಲು ಶಾಸಕನಾಗಿ ಸೇವೆ ಸಲ್ಲಿಸುವ ಭಾಗ್ಯ ನನ್ನದಾಗಿತ್ತು ಎಂದರು.

ವಾಗ್ಮಿ ಪ್ರೊ. ಕೃಷ್ಣೇಗೌಡರು ಮಾತನಾಡಿ, “ಕ್ರಿಸ್ತ ಹುಟ್ಟಿದ ನಂತರದ ಕಾಲವನ್ನು ಕ್ರಿಸ್ತಶಕ ಎಂದು ಗುರುತಿಸುತ್ತಾರೆ. ಅಂತೆಯೇ ಪರಮಪೂಜ್ಯ ಶ್ರೀ ಬಾಲಗಂಗಾಧರನಾಥ ಮಹಾಸ್ವಾಮಿಗಳವರ ನಂತರದ ಕಾಲವನ್ನು ಶ್ರೀಗುರು ಬಾಲಗಂಗಾಧರ ಶಕೆ ಎಂದು ನಾವು ಗುರುತಿಸಬಹುದು. ಸ್ವಾತಂತ್ರ್ಯ ನಂತರದ ದಿನಗಳಲ್ಲಿ ದೇಶ ತೀವ್ರ ಬರಗಾಲದ ಸ್ಥಿತಿಯಲ್ಲಿತ್ತು. ನಮ್ಮ ನಾಡಿನಲ್ಲಿ ಅವಿದ್ಯಾವಂತರೇ ತುಂಬಿ ಕೊಂಡಿದ್ದರು. ಅಂತಹ ಕಾಲದಲ್ಲಿ ನಮ್ಮ ಜನರಿಗೆ ವಿದ್ಯೆಯನ್ನು, ಜ್ಞಾನವನ್ನು ನೀಡದೆ ನಮ್ಮ ಸಮಾಜದ ಬಡತನವನ್ನು ಮೌಢ್ಯವನ್ನು ತೊಲಗಿಸಲು ಸಾಧ್ಯವಿಲ್ಲ ಎಂಬುದನ್ನು ಅರಿತು ಇಡೀ ನಾಡಿನಾದ್ಯಂತ ಶಾಲೆಗಳನ್ನು ತೆರೆಯಲು ಪ್ರಾರಂಭಿಸಿದ ಫಲವಾಗಿ ಇಂದು ಶ್ರೀ ಆದಿಚುಂಚನಗಿರಿ ಶಿಕ್ಷಣ ಸಂಸ್ಥೆಯಲ್ಲಿ ಪ್ರತಿ ವರ್ಷ ಒಂದು ಲಕ್ಷದ ನಲವತ್ತೆಂಟು ಸಾವಿರ ಮಂದಿ ಮಕ್ಕಳು ವಿದ್ಯಾಭ್ಯಾಸ ಪಡೆಯುತ್ತಿದ್ದಾರೆ. ಆದ್ದರಿಂದ ನಮ್ಮ ಸಮಾಜದ ಪಾಲಿಗೆ, ಶ್ರೀಮಠದ ಪಾಲಿಗೆ ಇದು ಬಾಲಗಂಗಾಧರನಾಥ ಸ್ವಾಮಿ ಶಖೆಯಾಗಿದೆ” ಎಂದು ತಿಳಿಸಿದರು.

ಇದೇ ಶುಭ ಸಂದರ್ಭದಲ್ಲಿ ಮಹಾಸ್ವಾಮಿಗಳವರು ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 625ಕ್ಕೆ 625 ಅಂಕ ಗಳಿಸಿ  ಆದಿಚುಂಚನಗಿರಿ ಶಿಕ್ಷಣ ಸಂಸ್ಥೆಯ ಕೀರ್ತಿಯನ್ನು ಹೆಚ್ಚಿಸಿದ ಮುವ್ವತ್ತೈದು ವಿದ್ಯಾರ್ಥಿಗಳನ್ನು ಸನ್ಮಾನಿಸಿ ಆಶೀರ್ವದಿಸಿದರು.

ಪ್ರೊ.ಶಿವರಾಮರೆಡ್ಡಿ, ಆದಿಚುಂಚನಗಿರಿ ವಿಶ್ವವಿದ್ಯಾಲಯದ ಉಪಕುಲಪತಿ ಡಾ. ಚಂದ್ರಶೇಖರಶೆಟ್ಟಿ, ಹೇಮಲತಾ ಗೋಪಾಲಯ್ಯ, ಆದಿಚುಂಚನಗಿರಿ ಮಹಾಸಂಸ್ಥಾನದ ಎಲ್ಲಾ ಶಾಖಾಮಠಗಳ ಸ್ವಾಮಿಗಳವರು ಸಮಾರಂಭದಲ್ಲಿ ಉಪಸ್ಥಿತರಿದ್ದರು. ಶ್ರೀ ಪ್ರಸನ್ನನಾಥಸ್ವಾಮಿಗಳವರು ಪ್ರಾಸ್ತಾವಿಕ ನುಡಿಗಳನ್ನಾಡಿ ಎಲ್ಲರನ್ನೂ ಸ್ವಾಗತಿಸಿದರು.

Tags: adichunchanagiricknewsnowkarnatakanewssri balagangadharanatha mahaswamijisri nirmalanandanatha mahaswamiji
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಪಾಕಿಸ್ತಾನ, ಚೀನಾಕ್ಕೆ ಕಠಿಣ ಸಂದೇಶ ರವಾನಿಸಿದ ಭಾರತ

ಪಾಕಿಸ್ತಾನ, ಚೀನಾಕ್ಕೆ ಕಠಿಣ ಸಂದೇಶ ರವಾನಿಸಿದ ಭಾರತ

Leave a Reply Cancel reply

Your email address will not be published. Required fields are marked *

Recommended

ಗ್ಯಾಂಗ್ ರೇಪ್ ಗ್ಯಾಂಗ್ʼನಲ್ಲಿ ವಿಕೃತಕಾಮಿ

ಗ್ಯಾಂಗ್ ರೇಪ್ ಗ್ಯಾಂಗ್ʼನಲ್ಲಿ ವಿಕೃತಕಾಮಿ

5 years ago
ರಥಸಪ್ತಮಿ ಪ್ರಯುಕ್ತ ಚಿಕ್ಕಬಳ್ಳಾಪುರದಲ್ಲಿ ಸೂರ್ಯ ನಮಸ್ಕಾರ, ಯೋಗ ಕಾರ್ಯಕ್ರಮ

ರಥಸಪ್ತಮಿ ಪ್ರಯುಕ್ತ ಚಿಕ್ಕಬಳ್ಳಾಪುರದಲ್ಲಿ ಸೂರ್ಯ ನಮಸ್ಕಾರ, ಯೋಗ ಕಾರ್ಯಕ್ರಮ

5 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ