• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home POLITICS

ಟಾರ್ಗೆಟ್ 2023; ಪಕ್ಷಕ್ಕೆ ಶಕ್ತಿ ತುಂಬಲು ಎಚ್ಡಿಕೆ ರಣವ್ಯೂಹ

cknewsnow desk by cknewsnow desk
September 26, 2021
in POLITICS, STATE
Reading Time: 1 min read
0
ಕೋಲಾರದಲ್ಲಿ ನಿಂತು ಕೋಡಿಹಳ್ಳಿ ಚಳಿಬಿಡಿಸಿದ ಕುಮಾರಸ್ವಾಮಿ; ಡೋಂಗಿಗಳಿಂದ ಪಾಠ ಕಲಿಯಬೇಕಿಲ್ಲ ಎಂದ ದಳಪತಿ
945
VIEWS
FacebookTwitterWhatsuplinkedinEmail

ಜೆಡಿಎಸ್‌ ಬಲವರ್ಧನೆಗೆ ನಾಲ್ಕು ದಿನಗಳ ಕಾಋಯಾಗಾರ

ಬೆಂಗಳೂರು: 2023ರ ವಿಧಾನಸಭೆ ಚುನಾವಣೆಯನ್ನು ಗುರಿ ಇಟ್ಟುಕೊಂಡಿರುವ ಜೆಡಿಎಸ್, ನಾಳೆಯಿಂದ ನಾಲ್ಕು ದಿನಗಳ ಕಾಲ ಕಾರ್ಯಾಗಾರ ನಡೆಸುವ ಮೂಲಕ ರಾಜ್ಯದಲ್ಲಿ ಪ್ರಬಲ ಶಕ್ತಿಯಾಗಿ ಹೊರಹೊಮ್ಮಲು ಸಕಲ ಸಿದ್ಧತೆ ಮಾಡಿಕೊಳ್ಳಲು ಮುಂದಾಗಿದೆ.

ರಾಮನಗರ ಜಿಲ್ಲೆ ಬಿಡದಿಯ ಕೇತಗಾನಹಳ್ಳಿಯಲ್ಲಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ತೋಟದ ಮನೆಯಲ್ಲಿ ನಾಳೆಯಿಂದ ಸೆ.30ರವರೆಗೂ ನಾಲ್ಕು ದಿನಗಳ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ.

ವಿವಿಧ ಹಂತದಲ್ಲಿ ಪಕ್ಷವನ್ನು ಸಂಘಟಿಸಿ ಬಲಗೊಳಿಸಲು ಪಕ್ಷದ ಮುಖಂಡರು, ಕಾರ್ಯಕರ್ತರನ್ನು ಹುರಿದುಂಬಿಸಲು ಉದ್ದೇಶಿಸಿದ್ದು, ನಾಳೆ ಶಾಸಕರು, ಮಾಜಿ ಸಚಿವರು, ಮಾಜಿ ಶಾಸಕರು ಕಳೆದ ವಿಧಾನಸಭೆ, ವಿಧಾನ ಪರಿಷತ್‍ನ ಚುನಾವಣೆಯಲ್ಲಿ ಸ್ಪರ್ದಿಸಿದ್ದ ಅಭ್ಯರ್ಥಿಗಳು ಪಕ್ಷದ ಎಲ್ಲ ಘಟಕದ ಅಧ್ಯಕ್ಷರಿಗೆ ನಾಳೆ ಮತ್ತು ಮಂಗಳವಾರ ಕಾರ್ಯಾಗಾರ ಹಮ್ಮಿಕೊಂಡಿದ್ದು, ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಕಾರ್ಯಾಗಾರವನ್ನು ಉದ್ಘಾಟಿಸಲಿದ್ದಾರೆ.

29ರಂದು ಮಹಿಳಾ ಮುಖಂಡರ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿದ್ದು, ವಿಧಾನಸಭೆ ಚುನಾವಣೆಯಲ್ಲಿ ಮಹಿಳೆಯರಿಗೆ ನೀಡುವ ಪ್ರಾತಿನಿಧ್ಯ ಕುರಿತು ಚರ್ಚಿಸಲಾಗುತ್ತದೆ. ಎಲ್ಲ ಹಂತದಲ್ಲಿ ಪಕ್ಷವನ್ನು ಸಂಘಟಿಸುವುದು, ಮುಂಬರುವ ಪಂಚಾಯತ್‍ರಾಜ್, ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮಹಿಳಾ ಮುಖಂಡರು ಸಕ್ರಿಯವಾಗಿ ಸ್ಪರ್ಧಿಸಲು ಮಾರ್ಗದರ್ಶನ ಮಾಡಲಾಗುತ್ತದೆ.

30ರಂದು ಯುವ ಕಾರ್ಯಾಗಾರ ಹಮ್ಮಿಕೊಂಡಿದ್ದು, ಅದರಲ್ಲಿ ವಿದ್ಯಾರ್ಥಿ ಜನತಾದಳ ಸೇರಿದಂತೆ ಜೆಡಿಎಸ್ ಮುಖಂಡರಿಗೆ ಕಾರ್ಯಾಗಾರ ನಡೆಸಲಾಗುತ್ತಿದೆ. ಎಲ್ಲ ಹಂತದಲ್ಲಿ ಪಕ್ಷವನ್ನು ಬಲಗೊಳಿಸಲು ಸಾಮಾಜಿಕ ಜಾಲತಾಣವನ್ನು ಬಳಸಿಕೊಳ್ಳುವ ಬಗ್ಗೆ ಮಾರ್ಗದರ್ಶನವನ್ನು ವರಿಷ್ಠರು ಮಾಡಲಿದ್ದಾರೆ.

ಈ ಸಂಬಂಧ ಜಂಟಿ ಪತ್ರ ಬರೆದಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಹಾಗೂ ಜೆಡಿಎಸ್ ಅಧ್ಯಕ್ಷ ಎಚ್.ಕೆ.ಕುಮಾರಸ್ವಾಮಿ ಅವರು, ಕಾರ್ಯಾಗಾರದಲ್ಲಿ ಕಡ್ಡಾಯವಾಗಿ ಪಾಲ್ಗೊಳ್ಳುವಂತೆ ಪಕ್ಷದ ಮುಖಂಡರಲ್ಲಿ ಮನವಿ ಮಾಡಿದ್ದಾರೆ.

ರಾಜ್ಯದಲ್ಲಿ ಪಕ್ಷವನ್ನು ಸಂಘಟಿಸಿ ಬಲಗೊಳಿಸುವ ಉದ್ದೇಶದಿಂದ ರಾಷ್ಟ್ರ ಮತ್ತು ರಾಜ್ಯ ಮಟ್ಟದಲ್ಲಿ ಪ್ರಚಲಿತ ಪ್ರಮುಖ ವಿಷಯ ಮತ್ತು ಸಮಸ್ಯೆಗಳ ಬಗ್ಗೆ ಚಿಂತನೆ ನಡೆಸಲಿದ್ದು, ಬೇರೆ ರಾಜ್ಯಗಳಲ್ಲಿ ಪ್ರಾದೇಶಿಕ ಪಕ್ಷಗಳು ಸ್ವಂತ ಬಲದ ಮೇಲೆ ಅಧಿಕಾರಕ್ಕೆ ಬಂದಿರುವುದನ್ನು ಮುಂದಿಟ್ಟುಕೊಂಡು ಕಾರ್ಯಾಗಾರ ನಡೆಸಲಾಗುತ್ತಿದೆ.

ರಾಜ್ಯದ ಜನತೆಯ ಆಶೋತ್ತರಗಳನ್ನು ಈಡೇರಿಸುವಲ್ಲಿ ಕನ್ನಡ ನೆಲಜಲ ಮತ್ತು ಪ್ರಾದೇಶಿಕತೆಗೆ ಪ್ರಾಮುಖ್ಯತೆ ನೀಡುವ ಗುರಿಯನ್ನು ಹೊಂದಿದ್ದು, ಪಂಚಸೂತ್ರಗಳನ್ನು ಈಗಾಗಲೇ ರೂಪಿಸಲಾಗಿದೆ. ಈ ನಿಟ್ಟಿನಲ್ಲಿ ಹೆಚ್.ಡಿ.ಕುಮಾರಸ್ವಾಮಿ ಅವರು ಪಕ್ಕಾ ಕಾರ್ಯತಂತ್ರ ರೂಪಿಸುತ್ತಿದ್ದು, ಮನೆ ಬಾಗಿಲಿಗೇ ಪಕ್ಷದ ಕಾರ್ಯಕರ್ತರನ್ನು ಬರಮಾಡಿಕೊಂಡು ಸಮಾಲೋಚನೆ ನಡೆಸಲು ಮುಂದಾಗಿದ್ದಾರೆ.

ಕಾಂಗ್ರೆಸ್ ಮತ್ತು ಬಿಜೆಪಿಗೆ ರಾಜ್ಯವನ್ನು ಎರಡು ರಾಷ್ಟ್ರೀಯ ಪಕ್ಷಗಳು ನಿರ್ಲಕ್ಷ್ಯ ಮಾಡುವೆ. ಜೆಡಿಎಸ್ ಕನ್ನಡಿಗರ ಏಕೈಕ ಆಯ್ಕೆಯಾಗಿದ್ದು, ಮುಂದಿನ ಚುನಾವಣೆಯಲ್ಲಿ ಪಕ್ಷದ ಮುಂದಿರುವ ಆಯ್ಕೆಗಳು ಹಾಗೂ ಸವಾಲುಗಳು, ಅವುಗಳ ಪರಿಹಾರದ ಬಗ್ಗೆಯೂ ಅವರು ಚರ್ಚೆ ನಡೆಸಿ ಸೂಚನೆಗಳನ್ನು ನೀಡಲಿದ್ದಾರೆ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ.

ಕಾರ್ಯಗಾರದಲ್ಲಿ ಎನೇನಿರುತ್ತದೆ?

  • ಮುಂದಿನ ಗುರಿ ಮತ್ತು ದಾರಿಯ ಬಗ್ಗೆ ಚರ್ಚೆ
  • ಚುನಾವಣೆ 2023ರ ಬಗ್ಗೆ ಸ್ಪಷ್ಟ ಗುರಿ ನಿಗದಿ ಮಾಡಲಿರುವ ಹೆಚ್.ಡಿ.ಕುಮಾರಸ್ವಾಮಿ ಅವರು.
  • ಕಾರ್ಯಕರ್ತರ ಸಮಸ್ಯೆಗಳ ಆಳಿಕೆ.
  • ಪ್ರಶ್ನೆ, ಉತ್ತರ ಮತ್ತು ಪರಿಹಾರ.
  • ತಳಮಟ್ಟದಲ್ಲಿ ಪಕ್ಷ ಕಟ್ಟುವ ಬಗ್ಗೆ ಸ್ಪಷ್ಟ ದಿಕ್ಸೂಚಿ.
  • ಕಾರ್ಯಕರ್ತರ ಸಮಸ್ಯೆ ಪರಿಹಾರಕ್ಕೆ ನಿರಂತರ ವ್ಯವಸ್ಥೆ.

ಯಾವ ವಿಷಯಗಳ ಬಗ್ಗೆ ಚರ್ಚೆ?

ಈ ಕಾರ್ಗಾಗಾರದಲ್ಲಿ ಮುಖ್ಯವಾಗಿ ರಾಜ್ಯದಲ್ಲಿರುವ ಪ್ರಸಕ್ತ ರಾಜಕೀಯ ಸ್ಥಿತಿಗತಿಗಳ ಬಗ್ಗೆ ಚರ್ಚೆ ನಡೆಯಲಿದೆ. ಹಾಗೆಯೇ; ಜೆಡಿಎಸ್ಗೆ ಇರುವ ರಾಜಕೀಯ ಅವಕಾಶಗಳು, ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಅನುಸರಿಸಬೇಕಾದ ಕಾರ್ಯತಂತ್ರ, ಗುರಿ ಮತ್ತು ದಾರಿಯ ಬಗ್ಗೆ ಸ್ಪಷ್ಟ ದಿಕ್ಸೂಚಿ, ಪಕ್ಷ ಸಂಘಟನೆ, ಪಕ್ಷದಲ್ಲಿ ಮಹಿಳೆಯರಿಗೆ ಅವಕಾಶ ಇತ್ಯಾದಿ ವಿಷಯಗಳ ಬಗ್ಗೆ ಮಹತ್ವದ ಚರ್ಚೆ ನಡೆಯಲಿದೆ ಎಂದು ಎಚ್ಡಿಕೆ ಅವರು ತಿಳಿಸಿದರು.

Tags: hd devegowdahd kumaraswamyjdskarnatakatarget 123target 2023
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಕೋವಿಡ್‌ನಿಂದ ಕೊರಗಿದ ಪ್ರವಾಸೋದ್ಯಮ

ಕೋವಿಡ್‌ನಿಂದ ಕೊರಗಿದ ಪ್ರವಾಸೋದ್ಯಮ

Leave a Reply Cancel reply

Your email address will not be published. Required fields are marked *

Recommended

ನಂದಿ ಗಿರಿಧಾಮ ಅಂತಾರಾಷ್ಟ್ರೀಯ ಪ್ರವಾಸಿ ತಾಣವಾಗಿ ಅಭಿವೃದ್ಧಿ, 10 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿ, ರೋಪ್ ವೇ ಕನಸು ನನಸಾಗಲಿದೆ ಎಂದ ಸಚಿವ ಡಾ.ಕೆ.ಸುಧಾಕರ್

ನಂದಿ ಗಿರಿಧಾಮ ಅಂತಾರಾಷ್ಟ್ರೀಯ ಪ್ರವಾಸಿ ತಾಣವಾಗಿ ಅಭಿವೃದ್ಧಿ, 10 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿ, ರೋಪ್ ವೇ ಕನಸು ನನಸಾಗಲಿದೆ ಎಂದ ಸಚಿವ ಡಾ.ಕೆ.ಸುಧಾಕರ್

5 years ago
ಮೋದಿ ಸಂಪುಟದ ಸಂಭಾವ್ಯ ಸಚಿವರ ಪಟ್ಟಿ

ಪರೀಕ್ಷಾ ಪೇ ಚರ್ಚಾದ 5ನೇ ಆವೃತ್ತಿಯಲ್ಲಿ ಮೋದಿ

4 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ