• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home POLITICS

2023 ಚುನಾವಣೆ: ಸಂಕ್ರಾಂತಿಗೆ ಜೆಡಿಎಸ್ ಅಭ್ಯರ್ಥಿಗಳ ಮೊದಲ ಪಟ್ಟಿ

P K Channakrishna by P K Channakrishna
September 28, 2021
in POLITICS, STATE
Reading Time: 2 mins read
0
2023 ಚುನಾವಣೆ: ಸಂಕ್ರಾಂತಿಗೆ ಜೆಡಿಎಸ್ ಅಭ್ಯರ್ಥಿಗಳ ಮೊದಲ ಪಟ್ಟಿ
931
VIEWS
FacebookTwitterWhatsuplinkedinEmail

ಮಾಜಿ ಮಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಘೋಷಣೆ

ಬೆಂಗಳೂರು: ಜನವರಿ ತಿಂಗಳ ಸಂಕ್ರಾಂತಿ ದಿನವೇ  2023ರ ವಿಧಾನಸಭೆ ಚುನಾವಣೆಯ ಅಭ್ಯರ್ಥಿಗಳ ಮೊದಲ ಪಟ್ಟಿ ರಿಲೀಸ್ ಮಾಡಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಇಂದು ಪ್ರಕಟಿಸಿದರು.

ಜನತಾ ಪರ್ವ 1.O ಹಾಗೂ ಮಿಷನ್ 123 ಗುರಿಯೊಂದಿಗೆ ಬಿಡದಿಯ ತಮ್ಮ ತೋಟದಲ್ಲಿ ಹ್ಮಮಿಕೊಂಡಿದ್ದ 4 ದಿನಗಳ ಕಾರ್ಯಗಾರದ 2ನೇ ದಿನದ ಕೊನೆಯಲ್ಲಿ ಮಾಧ್ಯಮಗಳ ಜತೆ ಮಾತನಾಡುತ್ತಾ ಈ ವಿಷಯ ತಿಳಿಸಿದರು.

ಇಂದಿನ ಕಾರ್ಯಾಗಾರದಲ್ಲಿ ಮುಂದಿನ ಅಭ್ಯರ್ಥಿಗಳಿಗೆ  30 ಅಂಶಗಳ ಅಜೆಂಡಾ ನೀಡಿದ್ದೇವೆ. ಆ ಅಜೆಂಡಾ ಪ್ರಕಾರ ಅವರು ಕೆಲಸ ಮಾಡಿ ತೋರಿಸಬೇಕು. ಅವರೆಲ್ಲರೂ 3 ತಿಂಗಳಲ್ಲಿ ಈ ಕಾರ್ಯಕ್ರಮ ಅನುಷ್ಠಾನ ಮಾಡಬೇಕು‌. ಯಶಸ್ವಿಯಾಗಿ ಅನುಷ್ಠಾನ ಮಾಡುವ ಅಭ್ಯರ್ಥಿಗಳಿಗೆ ಟಿಕೆಟ್ ಕೊಡಲಾಗುವುದು ಎಂದರು ಅವರು.

ನಿಗದಿತ ಅವಧಿಯೊಳಗೆ ಈ ಅಜೆಂಡಾವನ್ನು  ಗ್ರಾಮ ಪಂಚಾಯ್ತಿ ಮಟ್ಟಕ್ಕೆ ಅನುಷ್ಠಾನ ಮಾಡಲೆಬೇಕು ಹಾಗೂ ಇದನ್ನು ಪರಿವೇಕ್ಷಣೆ ಮಾಡಲು ವಿಶೇಷ ತಂಡವನ್ನು ರಚನೆ ಮಾಡಲಾಗಿದೆ. ಪ್ರತಿನಿತ್ಯ ಇದರ ಬಗ್ಗೆ ಮಾಹಿತಿ ಪಡೆಯುತ್ತೇನೆ ಎಂದು ಅವರು ಮಾಹಿತಿ ನೀಡಿದರು.

ಇಂದು ವೇಳೆ ಈ 30 ಅಂಶಗಳ ಕಾರ್ಯಕ್ರಮ ಅನುಷ್ಠಾನ ಮಾಡದಿದ್ದರೆ ಅಂತಹ ಅಭ್ಯರ್ಥಿಗಳ ಹೆಸರುಗಳನ್ನು ತಡೆ ಹಿಡಿಯುತ್ತೇವೆ. ಅಲ್ಲಿ ಮತ್ತೊಬ್ಬರನ್ನು ಹಾಕುತ್ತೇವೆ. ಇದರಲ್ಲಿ ಯಾವುದೇ ರಾಜಿ ಪ್ರಶ್ನೆ ಇಲ್ಲ ಎಂದು ಅವರು ಸ್ಪಷ್ಟ ಮಾತುಗಳಲ್ಲಿ ಹೇಳಿದರು.

ನೀರಾವರಿ ಬಗ್ಗೆ ಬಿಜೆಪಿಗೆ ಬದ್ದತೆ ಇಲ್ಲ

ಮೇಕೆದಾಟು ಸೇರಿ ರಾಜ್ಯದ ನೀರಾವರಿ ಯೋಜನೆಗಳ ಬಗ್ಗೆ ರಾಜ್ಯ ಸರಕಾರಕ್ಕೆ ಹಾಗೂ ಬಿಜೆಪಿಗೆ ಯಾವ ಬದ್ಧತೆಯೂ ಇಲ್ಲ. ಹೊಸ ಮುಖ್ಯಮಂತ್ರಿಗೆ ಕೂಡ ಬದ್ಧತೆ ಇಲ್ಲ. ಮೇಕೆದಾಟು ಯೋಜನೆ ಕೇಂದ್ರ ಸರಕಾರದ ಮುಂದೆಯೇ ಇಲ್ಲ. ರಾಜ್ಯ ರಾಜ್ಯಗಳ ನಡುವೆ ಬಿಕ್ಕಟ್ಟಿದೆ ಎನ್ನುವ ಕಾರಣಕ್ಕೆ ಕೇಂದ್ರ ಹಿಂಜರಿಯುತ್ತಿದೆ ಎಂದು ಕುಮಾರಸ್ವಾಮಿ ಅವರು ಆರೋಪ ಮಾಡಿದರು.

ಹೀಗಾಗಿ. ನೀರಾವರಿ ಯೋಜನೆಗಳ ಬಗ್ಗೆ ಜೆಡಿಎಸ್ ಹೋರಾಟ ಮಾಡಲಿದೆ. ಮುಂಬರುವ ದಿನಗಳಲ್ಲಿ ದೊಡ್ಡ ಹೋರಾಟ ರೂಪಿಸುತ್ತೇವೆ. ಕೇಂದ್ರ ಸರ್ಕಾರದ ವಿರುದ್ದವೂ ಹೋರಾಟ ಮಾಡುತ್ತೇವೆ. ಭಾಷೆ, ನೆಲ, ನೀರಿನ ವಿಚಾರದಲ್ಲಿ ನಾಡಿನ ಹಿತ ಕಾಪಾಡಲು ಜೆಡಿಎಸ್ ಕೆಲಸ ಮಾಡುತ್ತದೆ ಎಂದು ಅವರು ಸ್ಪಷ್ಟ ಮಾತುಗಳಲ್ಲಿ ಹೇಳಿದರು.

ರಾಜ್ಯದಲ್ಲಿ ಜನರು ಎರಡು ರಾಷ್ಟ್ರೀಯ ಪಕ್ಷಗಳನ್ನು  ‌ನೋಡಿದ್ದಾರೆ. ಹೀಗಾಗಿ ಅವರ ವರ್ತನೆಗಳು ಏನು ಅನ್ನುವುದು ಗೊತ್ತಿದೆ. ಹೀಗಾಗಿ ಈ ಬಾರಿ ಜನ ನಮ್ಮ ಜತೆ ಇಇರುತ್ತಾರೆ ಅನ್ನೋ ವಿಶ್ವಾಸ ಇದೆ. ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಅನೇಕ ಜನಪರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದರು ಹೆಚ್ಡಿಕೆ ಅವರು.

ಪಂಚರತ್ನ ಯೋಜನೆ ಘೋಷಣೆ

ಪಂಚರತ್ನ ಯೋಜನೆಗಳಾದ ವಸತಿ, ಆರೋಗ್ಯ, ಶಿಕ್ಷಣ, ಉದ್ಯೋಗ, ಕೃಷಿಗೆ ವಿಶೇಷ ಯೋಜನೆ ನೀಡುತ್ತೇವೆ. ಈ ಬಗ್ಗೆ ನನ್ನ ಪರಿಕಲ್ಪನೆಯ ಕಾರ್ಯಕ್ರಮಗಳು ಜಾರಿ ಆಗುತ್ತವೆ. ಈ ಎಲ್ಲ ಸಂಗತಿಗಳನ್ನು ಜನರಿಗೆ ಮನದಟ್ಟು ಮಾಡಲಾಗುವುದು.

ಅಲ್ಲದೆ, ಆರೋಗ್ಯ ಇಲಾಖೆ ಸಿಬ್ಬಂದಿ, ಆಶಾ ಕಾರ್ಯಕರ್ತರು, ಸಮಸ್ಯೆ ಪರಿಹಾರ ನೀಡುವ ಕೆಲಸ ಮಾದುತ್ತೇವೆ. ವಿಧವಾ ವೇತನಾ, ಹಿರಿಯ ನಾಗರೀಕರು, ಯುವಕ ಸಮಸ್ಯೆಗೆ ಬೇಕಾದ ಹಲವು ಯೋಜನೆ ಪ್ರಾರಂಭಿಸುತ್ತೇವೆ. ಮುಂದಿನ 17 ತಿಂಗಳು ಈ ಕಾರ್ಯಕ್ರಮಗಳನ್ನ ಜನರಿಗೆ ತಿಳಿಸುವ ಕೆಲಸ ಮಾಡುತ್ತೇವೆ ಎಂದು ಅವರು ಮಾಹಿತಿ ನೀಡಿದರು.

ಏನಿದು ಪಂಚರತ್ನ ಯೋಜನೆ?

  1. ವಸತಿ ಇಲ್ಲದ ಪ್ರತಿ ಕುಟುಂಬಕ್ಕೆ ಸರ್ಕಾರದಿಂದ ಉಚಿತವಾಗಿ ವಸತಿ ನೀಡುವುದು ವಸತಿ ಆಸರೆ
  2. ಉತ್ತಮ ಗುಣಮಟ್ಟದ ಹಾಗೂ ವ್ಯವಸ್ಥಿತ ಶಿಕ್ಷಣವನ್ನು ಉಚಿತವಾಗಿ ನೀಡುವ ಯೋಜನೆ ಶಿಕ್ಷಣವೇ ಆಧುನಿಕ ಶಕ್ತಿ
  3. ಪ್ರತಿಯೊಂದು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ 24×7 ಕಾರ್ಯ ನಿರ್ವಹಿಸುವ ಸುಸಜ್ಜಿತ ಹೈಟೆಕ್ ಆಸ್ಪತ್ರೆ ನಿರ್ಮಾಣ ಆರೋಗ್ಯ ಸಂಪತ್ತು
  4. ಆಧುನಿಕ ತಂತ್ರಜ್ಞಾನದ ಕೃಷಿ ಪದ್ದತಿ ಅಳವಡಿಕೆ, ಸರಿಯಾದ ಬೆಳೆ ಶೇಖರಣಾ ವ್ಯವಸ್ಥೆ ಹಾಗೂ ಲಾಭದಾಯಕವಾದ ಮಾರುಕಟ್ಟೆ ವ್ಯವಸ್ಥೆ ರೈತ ಚೈತನ್ಯ
  5. ಯುವ ಜನತೆ ಹಾಗೂ ಮಹಿಳೆಯರಿಗೆ ಉದ್ಯೋಗ ಪಡೆಯಲು ಅಗತ್ಯ ತರಬೇತಿ ಹಾಗೂ ಮಾರ್ಗದರ್ಶನ ಯುವ ನವ ಮಾರ್ಗ ಹಾಗೂ ಮಹಿಳಾ ಸಬಲೀಕರಣ

*

ಜನತಾ ಪರ್ವ ಮಾಸ್ಟರ್ ಮೈಂಡ್ ನಾನೇ

ಇವತ್ತು ನಾನು ನಮ್ಮ ಪಕ್ಷಕ್ಕಾಗಿ ಶಿಕ್ಷಕ ಆಗಿದ್ದೆ. ನಮ್ಮ ಶಾಸಕರು, ಮುಂದಿನ ಚುನಾವಣೆಯ ಅಭ್ಯರ್ಥಿಗಳಿಗೆ ಪಾಠ ಮಾಡಿದ್ದು ವಿಶೇಷ ಅನುಭವ. ಅಲ್ಲದೆ, ಇಂದಿನ ಪಿಪಿಟಿ ಪ್ಲ್ಯಾನ್ ಕೂಡಾ ನನ್ನದೆ. ಕಂಟೆಂಟ್ ಕೂಡ ನನ್ನದೇ ಎಂದು ಹೆಚ್ಡಿಕೆ ಅವರು ಹೇಳಿದರು.

ಕಾಲೇಜು ದಿನಗಳಲ್ಲಿ ನಾನು ಕೊನೆ ಬೇಂಚ್ ವಿದ್ಯಾರ್ಥಿ ಆಗಿದ್ದೆ. ಇಂದು ಅಭ್ಯರ್ಥಿಗಳಿಗೆ ಪಕ್ಷದ ವಿಚಾರಗಳು ತಿಳಿಸಲು ವಿದ್ಯಾರ್ಥಿ ಆಗೋಕ್ಕಿಂತ ಶಿಕ್ಷಕನಂತೆ ಆಗಿ ಶಾಸಕರಿಗೆ ತಿಳಿ ಹೇಳಿದ್ದೇನೆ. ಅಭ್ಯರ್ಥಿಗಳು ಶಿಸ್ತಿನ ವಿಧ್ಯಾರ್ಥಿಗಳಾಗಿ ಕುಳಿತು ಕೇಳಿದ್ದಾರೆ. ಇಡೀ ಕಾರ್ಯಾಗಾರದ ಸಂಪೂರ್ಣ ಪರಿಕಲ್ಪನೆ ನನ್ನದೆ ಎಂದು ಕುಮಾರಸ್ವಾಮಿ ಅವರು ತಿಳಿಸಿದರು.

ಮಾಧ್ಯಮಗೋಷ್ಠಿಯಲ್ಲಿ ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷ ಹೆಚ್.ಕೆ.ಕುಮಾರಸ್ವಾಮಿ ಅವರು ಉಪಸ್ಥಿತರಿದ್ದರು.

Tags: hd devegowdahd kumaraswamyindiajanata parva 1.Ojdskannadakarnatakamission 123
P K Channakrishna

P K Channakrishna

www.cknewsnow.com ಪ್ರಧಾನ ಸಂಪಾದಕ ಮತ್ತು ಸಂಸ್ಥಾಪಕ. ಪ್ರಿಂಟ್‌ ಮೀಡಿಯಾದಲ್ಲಿ 3 ದಶಕದಷ್ಟು ಸುದೀರ್ಘ ಅನುಭವ. ರಾಜಕೀಯ, ಕೃಷಿ, ಸಿನಿಮಾ, ಸಂಗೀತ, ಫೊಟೋಗ್ರಫಿ, ಪ್ರವಾಸ, ಸೋಶಿಯಲ್‌ ಮೀಡಿಯಾದಲ್ಲಿ ಆಸಕ್ತಿ. ಓದು ಅಚ್ಚುಮೆಚ್ಚು.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಪ್ರಾಧ್ಯಾಪಕರಾದ ದಳಪತಿ

ಎತ್ತಿನಹೊಳೆ ಯೋಜನೆಯಲ್ಲಿ ಸರಕಾರದ ಕಣ್ಣಾಮುಚ್ಚಾಲೆ: ಹೆಚ್ಡಿಕೆ ಟೀಕೆ

Leave a Reply Cancel reply

Your email address will not be published. Required fields are marked *

Recommended

ಕರ್ನಾಟಕ ಭಾರತದ ಬಯೋಟೆಕ್ನಾಲಜಿ ರಾಜಧಾನಿ ಎಂದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಕರ್ನಾಟಕ ಭಾರತದ ಬಯೋಟೆಕ್ನಾಲಜಿ ರಾಜಧಾನಿ ಎಂದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

5 years ago
ದಿನ 2: ಸಿಇಟಿ ಪರೀಕ್ಷೆ ಸುಖಾಂತ್ಯ

ಸಿಇಟಿ ಕೌನ್ಸೆಲಿಂಗ್: ಜನವರಿ 15ರವರೆಗೆ ಕಾಲಾವಕಾಶ ನೀಡುವಂತೆ ಕೋರಿ ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಲಿಗೆ ಪತ್ರ ಬರೆದ ಸರಕಾರ

5 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ