• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home POLITICS

ಪ್ರಾಧ್ಯಾಪಕರಾದ ದಳಪತಿ

cknewsnow desk by cknewsnow desk
September 28, 2021
in POLITICS, STATE
Reading Time: 1 min read
0
ಪ್ರಾಧ್ಯಾಪಕರಾದ ದಳಪತಿ
918
VIEWS
FacebookTwitterWhatsuplinkedinEmail

ಸ್ವತಂತ್ರ ಸರಕಾರ ರಚನೆ; ಹೆಚ್ಡಿಕೆ ಕನಸುಗಳ ಅನಾವರಣ; ವಿದ್ಯಾರ್ಥಿಗಳಂತೆ ನಾಯಕರ ಪಾಠ ಆಲಿಸಿದ ಶಾಸಕರು, ಮುಂದಿನ ಅಭ್ಯರ್ಥಿಗಳು

ಬಿಡದಿ: ಮುಂದಿನ ವಿಧಾನಸಭೆ ಚುನಾವಣೆ ಎದುರಿಸುವ ಬಗ್ಗೆ ಪಕ್ಷದ ಹಾಲಿ ಶಾಸಕರೂ, ಕಳೆದ ಚುನಾವಣೆಯಲ್ಲಿ ಪರಾಜಿತರಾಗಿದ್ದ ಅಭ್ಯರ್ಥಿಗಳು ಹಾಗೂ ಮುಂದಿನ ಚುನಾವಣೆಯ ಅಭ್ಯರ್ಥಿಗಳ ಜತೆ ಮಹತ್ವದ ಸಭೆ ನಡೆಸಿದ ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರು, ‘ಮಿಷನ್ 123’ ಕುರಿತು ಪವರ್ ಪಾಯಿಂಟ್ ಪ್ರಸೆಂಟೇಷನ್ ಮಾಡುವ ಮೂಲಕ 2023ರ ಚುನಾವಣೆಗೆ ರೋಡ್ ಮ್ಯಾಪ್ ಪ್ರಸ್ತುತಪಡಿಸಿದರು.

ಸ್ವತಃ ಕಾಲೇಜು ಪ್ರಾಧ್ಯಾಪಕರಂತೆ ಸಂಘಟನಾ ಕಾರ್ಯಾಗಾರದ ಎರಡನೇ ದಿನ ಪಾಠಕ್ಕೆ ನಿಂತ ಹೆಚ್‌ಡಿಕೆ ಅವರು, ನಿರ್ದಿಷ್ಟ ಕಾರ್ಯಸೂಚಿಯೊಂದಿಗೆ ತಮ್ಮ ಕನಸುಗಳನ್ನು ಬಿಚ್ಚಿಟ್ಟರು.

ರಾಜ್ಯದಲ್ಲಿ ಪ್ರಾದೇಶಿಕ ಪಕ್ಷದ ಶಕ್ತಿ ಬಗ್ಗೆ ಖುದ್ದು ಕುಮಾರಸ್ವಾಮಿ ಅವರಿಂದಲೇ ಪ್ರಾತ್ಯಕ್ಷಿಕೆ ಆಗಿದ್ದು ಎಲ್ಲಾ ಶಾಸಕರು, ಪ್ರತಿನಿಧಿಗಳಿಗೆ ಹೊಸ ಅನುಭವ ನೀಡಿತು. ಅವರು ಮಂಡಿಸಿದ ವಿಷಯಗಳಿಂದ ಬಹಳ ಪ್ರಭಾವಿತರಾದರು.

ದೇಶದಲ್ಲಿ ಪ್ರಾದೇಶಿಕ ರಾಜಕಾರಣಕ್ಕೆ ಹೆಚ್ಚು ಬಲವಿದೆ. ಅದರ ಮೂಲ ಬೇರುಗಳು ನಮ್ಮ ರಾಜ್ಯದಲ್ಲೇ ಇವೆ. ಜೆಡಿಎಸ್ ಈ ನಿಟ್ಟಿನಲ್ಲಿ ನಿರ್ಣಾಯಕ ಪಾತ್ರ ಪೋಷಿಸಲಿದೆ ಎಂದು ಮಾಜಿ ಮುಖ್ಯಮಂತ್ರಿಗಳು ಎಲ್ಲಾ ಮುಖಂಡರಿಗೆ ಉದಾಹರಣೆಗಳ ಮುಖೇನ ವಿವರಿಸಿದರು.

ಪ್ರಾದೇಶಿಕ ಪಕ್ಷ ಅಧಿಕಾರಕ್ಕೆ ಬಂದರೆ ಹೈಕಮಾಂಡ್ ಸಂಸ್ಕೃತಿ ಇರೋದಿಲ್ಲ. ಕನ್ನಡಿಗರ ಕೈಯ್ಯಲ್ಲಿಯೇ ಅಧಿಕಾರ ಇರುತ್ತದೆ. ಪ್ರತಿಯೊಂದಕ್ಕೂ ದಿಲ್ಲಿ ಕಡೆ ನೋಡಬೇಕಾಗಿಲ್ಲ. ಪ್ರಾದೇಶಿಕ ಪಕ್ಷ ಅಧಿಕಾರಕ್ಕೆ ಬಂದರೆ ಐತಿಹಾಸಿಕ ನಿರ್ಧಾರಗಳನ್ನು ಹೈಕಮಾಂಡ್ ಹಂಗಿಲ್ಲದೆ ತೆಗೆದುಕೊಳ್ಳಬಹುದು ಎಂದರು ಅವರು.

ಜನರ ಸಮಸ್ಯೆಗಳ ಪರಿಹಾರಕ್ಕೆ ಆದ್ಯತೆ ನೀಡೋಣ. ಕಾಲಮಿತಿಯಲ್ಲಿ ಅವುಗಳ ಪರಿಹಾರಕ್ಕೆ ಭರವಸೆ ಕೊಡೋಣ. ನೀರಾವರಿ ಯೋಜನೆಗಳು ಮತ್ತು ರೈತಪರ ಯೋಜನೆಗಳು ನಮ್ಮ ಪಕ್ಷದ ಮೊದಲ ಆದ್ಯತೆ ಎಂದರಲ್ಲದೆ, ಈ ನಿಟ್ಟಿನಲ್ಲಿ ಅಭ್ಯರ್ಥಿಗಳು ಜನರ ಬಳಿಗೆ ಹೋಗಬೇಕು. ಪಕ್ಷದ ಕಾರ್ಯಕ್ರಮಗಳನ್ನು ಮನವರಿಕೆ ಮಾಡಿಕೊಡಬೇಕು ಎಂದು ತಾಕೀತು ಮಾಡಿದರು ಹೆಚ್ದಿಕೆ.

ರಾಜ್ಯದ ಐದು ನೀರಾವರಿ ಯೋಜನೆಗಳಿಗೆ ಜೀವ ತುಂಬುವುದು ನಮ್ಮ ಮಹತ್ವದ ನಿಲುವು. ಮೇಕೆದಾಟು, ಯುಕೆಪಿ, ಮಹದಾಯಿ, ಎತ್ತಿನಹೊಳೆ ಯೋಜನೆಗಳ ಕ್ಷಿಪ್ರ ಕಾರ್ಯಗತದ ಭರವಸೆಯೊಂದಿಗೆ ಮುಂದಕ್ಕೆ ಹೋಗೋಣ. ಎತ್ತಿನಹೊಳೆ ಹೆಸರು ಹೇಳಿಕೊಂಡು ಮೊದಲು 8000 ಕೋಟಿ ರೂ. DPR ಮಾಡಲಾಯಿತು. ಆಮೇಲೆ 13000 ಕೋಟಿಗೆ ಮರು DPR ಮಾಡಲಾಯಿತು. ಈಗ ಪುನಾ 24000 ಕೋಟಿ ರೂ.ಗಳಿಗೆ DPR ಮಾಡಲು ಹೊರಟಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿಗಳು ದೂರಿದರು.

ಜೆಡಿಎಸ್ ವಿಷನ್- ಮಿಷನ್ 2023

2023 ಕ್ಕೆ ಸ್ವಂತ ಬಲದಲ್ಲಿ 123 ಸೀಟು ಪಡೆಯುವುದು ಪಕ್ಷದ ದೊಡ್ಡ ಗುರಿ. ಈ ನಿಟ್ಟಿನಲ್ಲಿ ಪಂಚರತ್ನ ಯೋಜನೆ ಜಾರಿ ಮಾಡೋದು ನಮ್ಮ ಗುರಿ. (ಆರೋಗ್ಯ, ಶಿಕ್ಷಣ, ಕೃಷಿ, ವಸತಿ, ಉದ್ಯೋಗ ಕ್ಷೇತ್ರದಲ್ಲಿ ವಿಶೇಷ ಯೋಜನೆ). ಈ ಮೂಲಕ ರಾಜ್ಯದ ಆಮೂಲಾಗ್ರ ಅಭಿವೃದ್ಧಿಗೆ ಕಾಣಿಕೆ ನೀಡುವುದು ಪಕ್ಷದ ಉದ್ದೇಶವಾಗಿದೆ.

ತಳ ಮಟ್ಟದಿಂದ ಅಭಿವೃದ್ಧಿ ಸಾಧನೆ ಮಾಡುವುದು ನಮ್ಮ ಪರಿಕಲ್ಪನೆ ಆಗಿದ್ದು, ಅದಕ್ಕೆ ಬೇಕಾದ ಪೂರಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಅವರು ಹೇಳಿದರು.

ಜೆಡಿಎಸ್ ಸದಸ್ಯರ ನಿಧಿ

ಜೆಡಿಎಸ್ ಸದಸ್ಯರ ನಿಧಿ ಸ್ಥಾಪನೆ ಮಾಡುವ ಮೂಲಕ ಪ್ರಾಮಾಣಿಕ ಕಾರ್ಯಕರ್ತರ ರಕ್ಷಣೆಗೆ ನಿಲ್ಲುವುದು ನಮ್ಮ ನಿಲುವು. ಪಕ್ಷದ ಸದಸ್ಯತ್ವ ನೋಂದಣಿಯಿಂದ ಬಂದ ಹಣದಿಂದ ಕಾರ್ಯಕರ್ತರ ಮಕ್ಕಳಿಗೆ ವಿದ್ಯಾರ್ಥಿ ವೇತನ, ಆರೋಗ್ಯ ಸಮಸ್ಯೆಗೆ ಹಣ ನೀಡುವುದು. ಕಾರ್ಯಕರ್ತರು ಮೃತರಾದಾಗ ಈ ನಿಧಿಯಿಂದ ಪರಿಹಾರ ನೀಡುವುದು ಇದರಲ್ಲಿ ಅಡಕವಾಗಿರುವ ಅಂಶಗಳು ಎಂದು ಹೆಚ್‌ಡಿಕೆ ಅವರು ವಿವರಿಸಿದರು.

Tags: hd devegowdahd kumaraswamyindiajanata parva 1.Ojdskannadakarnatakamission 123
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
2023 ಚುನಾವಣೆ: ಸಂಕ್ರಾಂತಿಗೆ ಜೆಡಿಎಸ್ ಅಭ್ಯರ್ಥಿಗಳ ಮೊದಲ ಪಟ್ಟಿ

2023 ಚುನಾವಣೆ: ಸಂಕ್ರಾಂತಿಗೆ ಜೆಡಿಎಸ್ ಅಭ್ಯರ್ಥಿಗಳ ಮೊದಲ ಪಟ್ಟಿ

Leave a Reply Cancel reply

Your email address will not be published. Required fields are marked *

Recommended

ದಾಖಲೆ ಸಲ್ಲಿಸಲು ಪೂರೈಕೆ ಕಂಪನಿಗಳ ಮೀನಾ-ಮೇಷ; ತಯಾರಿಕೆ ಕಂಪನಿಗಳಿಂದಲೇ ನೇರವಾಗಿ ವ್ಯಾಕ್ಸಿನ್  ಖರೀದಿಗೆ ಮುಂದಾದ ಸರಕಾರ

ಕಾಲೇಜು ವಿದ್ಯಾರ್ಥಿಗಳಿಗೆ ಜುಲೈ ತಿಂಗಳಲ್ಲಿ ಲಸಿಕೆ: ಶೀಘ್ರ ತರಗತಿಗಳ ಆರಂಭಕ್ಕೆ ಚಿಂತನೆ ಎಂದ ಡಿಸಿಎಂ

5 years ago
ಚಿಂತಾಮಣಿಯಲ್ಲಿ ಜೆಡಿಎಸ್ ಕೋರ್ ಕಮಿಟಿ ಸಭೆ

ಚಿಂತಾಮಣಿಯಲ್ಲಿ ಜೆಡಿಎಸ್ ಕೋರ್ ಕಮಿಟಿ ಸಭೆ

4 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ