• About
  • Advertise
  • Careers
  • Contact
Thursday, October 29, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS NATION

ಅಫ್ಘಾನಿಸ್ತಾನದಿಂದ‌ ಭಾರತಕ್ಕೆ ಡ್ರಗ್ಸ್!

cknewsnow desk by cknewsnow desk
October 1, 2021
in NATION, POLITICS, STATE
Reading Time: 1 min read
0
ಅಫ್ಘಾನಿಸ್ತಾನದಿಂದ‌ ಭಾರತಕ್ಕೆ ಡ್ರಗ್ಸ್!
927
VIEWS
FacebookTwitterWhatsuplinkedinEmail

ಗುಜರಾತಿನ ಅದಾನಿ ಮುಂದ್ರಾ ಬಂದರಿನಲ್ಲಿ ಡ್ರಗ್ಸ್ ಪತ್ತೆ ಪ್ರರಕರಣದಲ್ಲಿ ಸರ್ಕಾರದ ಮೌನ ಏಕೆ?: ಕಾಂಗ್ರೆಸ್

ಬೆಂಗಳೂರು: ‘ಅದಾನಿ ಮುಂದ್ರಾ ಅವರ ಬಂದರಲ್ಲಿ ಡ್ರಗ್ಸ್ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಬಿಜೆಪಿ ಸರ್ಕಾರ ಮೌನ ವಹಿಸಿರುವುದೇಕೆ? ಇದು ದೇಶದ ಭದ್ರತೆಗೆ ಅಪಾಯ ತರುವ ವಿಚಾರವಾಗಿದ್ದು, ಇದರ ಹಿಂದೆ ಯಾರಿದ್ದಾರೆ ಎಂದು ಪತ್ತೆ ಹಚ್ಚಲು ಹಾಲಿ ಸುಪ್ರೀಂ ಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಸಬೇಕು’ ಎಂದು ಕಾಂಗ್ರೆಸ್ ಆಗ್ರಹಿಸಿದೆ.

ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಈ ವಿಚಾರವಾಗಿ ಶುಕ್ರವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಎಐಸಿಸಿ ವಕ್ತಾರರಾದ ಸುಪ್ರಿಯಾ ಶ್ರೀನೇಟ್ ಅವರು, ‘ಅದಾನಿ ಮುಂದ್ರಾ ಬಂದರಿನಲ್ಲಿ ಈ ರೀತಿ ಡ್ರಗ್ಸ್ ಪತ್ತೆ ಪ್ರಕರಣ ಇದೇ ಮೊದಲ ಬಾರಿಯಲ್ಲ. ಈ ಹಿಂದೆಯೂ ಡ್ರಗ್ಸ್ ಪತ್ತೆಯಾಗಿದ್ದು, ಆದರೂ ಬಂದರು ನಡೆಸುತ್ತಿರುವ ಅದಾನಿ ಸಮೂಹದ ವಿಚಾರಣೆ ನಡೆಸಿಲ್ಲ ಯಾಕೆ?’ ಎಂದು ಪ್ರಶ್ನಿಸಿದರು.

‘ಕೆಲ ದಿನಗಳ ಹಿಂದೆ ಗುಜರಾತಿನ ಅದಾನಿ ಮುಂದ್ರಾ ಬಂದರಿನಲ್ಲಿ 3,000 ಕೆ.ಜಿ ಅಂದರೆ 21 ಸಾವಿರ ಕೋಟಿ ಮೌಲ್ಯದ ಡ್ರಗ್ಸ್ ಪತ್ತೆಯಾಗಿತ್ತು. ಕಳೆದ ಜೂನ್ ತಿಂಗಳಲ್ಲಿ 25,000 ಕೆ.ಜಿಯಷ್ಟು ಡ್ರಗ್ಸ್ ಬಂದಿದ್ದು, ಅದು ಈಗಾಗಲೇ ಮಾರುಕಟ್ಟೆಯಲ್ಲಿ ಸರಬರಾಜಾಗುತ್ತಿವೆ. ಇದನ್ನು ಸೆಮಿ ಕಟ್ ಟಾಲ್ಕಮ್ ಪೌಡರ್ ಎಂದು ಹೆಸರಿಸಲಾಗಿದ್ದು, ಈ ಡ್ರಗ್ಸ್ ಗಳು ತಾಲಿಬಾನ್ ಹಿಡಿತದಲ್ಲಿರುವ ಅಫ್ಘಾನಿಸ್ತಾನದಿಂದ ಆಶಿ ಟ್ರೇಡಿಂಗ್ ಕಂಪನಿ ಆಮದು ಮಾಡಿಕೊಂಡಿದೆ. ಇದು ದೇಶದ ಯುವಕರ ಭವಿಷ್ಯದ ವಿಷಯವಾಗಿದೆ. ಆದರೂ ಈ ವಿಚಾರವಾಗಿ ನರೇಂದ್ರ ಮೋದಿ ಅವರ ಸರ್ಕಾರವಾಗಲಿ, ದೇಶದ ಪ್ರಮುಖ ಮಾಧ್ಯಮಗಳಾಗಲಿ ಮಾತನಾಡುತ್ತಿಲ್ಲ’ ಎಂದು ತಿಳಿಸಿದರು.

‘ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆಶಿ ಟ್ರೇಡಿಂಗ್ ಕಂಪನಿ ಮಾಲೀಕರಾದ ಸುಧಾಕರ್ ಮಚ್ವರಮ್ ಹಾಗೂ ಅವರ ಪತ್ನಿ ಗವಿಂದ ರಾಜು ವೈಶಾಲಿ ಅವರನ್ನು ಬಂಧಿಸಲಾಗಿದ್ದು, ಇಂತಹ ಸಣ್ಣ ಟ್ರೇಡಿಂಗ್ ಕಂಪನಿ ಇಷ್ಟು ದೊಡ್ಡ ಮೊತ್ತದ ಡ್ರಗ್ಸ್ ಆಮದು ಮಾಡಿಕೊಳ್ಳಲು ಸಾಧ್ಯವಿಲ್ಲ. ಇದರ ಹಿಂದೆ ಪ್ರಭಾವಿಗಳ ಕೈವಾಡದ ಶಂಕೆ ಇದ್ದು, ಅದು ಯಾರು ಎಂಬುದರ ಬಗ್ಗೆ ತನಿಖೆ ನಡೆದಿಲ್ಲ. ಜೂನ್ ತಿಂಗಳಲ್ಲಿ ಅಫ್ಘಾನಿಸ್ತಾನದ ಹಸನ್ ಹುಸೇನ್ ಲಿಮಿಟೆಡ್ ಕಂಪನಿ 25 ಸಾವಿರ ಕೆ.ಜಿ ಅಂದರೆ 1.75 ಲಕ್ಷ ಕೋಟಿಯಷ್ಟು ಮೊತ್ತದ ಹೆರಾಯಿನ್ ರಫ್ತು ಮಾಡಿದ್ದು, ಅದು ದೇಶದ ಮಾರುಕಟ್ಟೆಯಲ್ಲಿ ಸರಬರಾಜಾಗುತ್ತಿದೆ. ಇದು ದೇಶದ ಲಕ್ಷಾಂತರ ಯುವಕರು ಮಾದಕ ವ್ಯಸನಿಗಳಾಗುವ ಸ್ಥಿತಿ ನಿರ್ಮಾಣವಾಗಿದೆ. ಆ ಮೂಲಕ ಇದು ದೇಶದ ಭದ್ರತೆಗೆ ಮಾರಕವಾಗಲಿದೆ’ ಎಂದು ಅಭಿಪ್ರಾಯಪಟ್ಟರು.

‘ಪ್ರಧಾನಿ ನರೇಂದ್ರ ಮೋದಿ ಅವರು ನಮ್ಮ ಯುವಕರಿಗೆ ಕಳೆದ 7 ವರ್ಷಗಳಲ್ಲಿ 14 ಕೋಟಿ ಉದ್ಯೋಗ ನೀಡಬೇಕಾಗಿತ್ತು, ಆದರೆ ದೇಶದ ಯುವಕರು ಈ ಡ್ರಗ್ಸ್ ಜಾಲಕ್ಕೆ ಸಿಲುಕುವಂತೆ ಮಾಡಲಾಗಿದೆ. ಕಳೆದ ವರ್ಷ ಕೇವಲ 2 ಗ್ರಾಂ ಡ್ರಗ್ಸ್ ಸಿಕ್ಕ ಪ್ರಕರಣದಲ್ಲಿ ಇಡೀ ಹಿಂದಿ ಚಿತ್ರರಂಗವನ್ನೇ ಜಾಲಾಡಿದ್ದ ಮಾಧ್ಯಮಗಳು, ಈ ವರ್ಷ ದೇಶದ ಇತಿಹಾಸದಲ್ಲಿ ಅತಿ ದೊಡ್ಡ ಪ್ರಮಾಣದ ಡ್ರಗ್ಸ್ ಪತ್ತೆಯಾಗಿದ್ದರೂ ಯಾವುದೇ ಚರ್ಚೆ ನಡೆಸುತ್ತಿಲ್ಲ. ಡ್ರಗ್ಸ್ ನಿಯಂತ್ರಣ ಮಾಡಲು ನೇಮಕಗೊಂಡಿರುವ ಮಾದಕ ವಸ್ತುಗಳ ನಿಯಂತ್ರಣ ಮಂಡಳಿಯಲ್ಲಿ ಕಳೆದ 18 ತಿಂಗಳಿನಿಂದ ವ್ಯವಸ್ಥಾಪಕ ನಿರ್ದೇಶಕರನ್ನು ನೇಮಿಸಿಲ್ಲ. ದೇಶಕ್ಕೆ ಡ್ರಗ್ಸ್ ಪ್ರವೇಶಿಸಲು ಗುಜರಾತಿನ ಬಂದರು ರಹದಾರಿಯಾಗಿದ್ದು, ಮೋದಿ ಸರ್ಕಾರ ಈ ವಿಚಾರದಲ್ಲಿ ಮೌನ ವಹಿಸಿದೆ’ ಎಂದು ತಿಳಿಸಿದರು.

Live from KPCC https://t.co/LKnKIanrM2

— Karnataka Congress (@INCKarnataka) October 1, 2021

ಈ ವೇಳೆ ಕೇಂದ್ರ ಬಿಜೆಪಿ ಸರ್ಕಾರಕ್ಕೆ ಸುಪ್ರಿಯಾ ಅವರು 10 ಪ್ರಶ್ನೆಗಳನ್ನು ಕೇಳಿದ್ದು ಅವುಗಳು ಹೀಗಿವೆ;

  • 1) ದೇಶದಲ್ಲಿ ಡ್ರಗ್ಸ್ ಜಾಲ ನಿರಾತಂಕವಾಗಿ ಕಾರ್ಯಚಟುವಟಿಕೆ ನಡೆಸುತ್ತಿದ್ದು, 3 ಸಾವಿರ ಕೆ.ಜಿ ಹೆರಾಯಿನ್ ಪತ್ತೆಯಾಗಿರುವುದು ಇದಕ್ಕೆ ಸಾಕ್ಷಿಯಾಗಿದೆ. ಇದು ದೇಶದ ಯುವಕರ ಭವಿಷ್ಯಕ್ಕೆ ಮಾರಕವಲ್ಲವೇ?
  • 2) ಕಳೆದ ಜೂನ್ ನಲ್ಲಿ ಆಮದುಗೊಂಡ 1.75ಲಕ್ಷ ಕೋಟಿ ಮೌಲ್ಯದ 25 ಸಾವಿರ ಕೆ.ಜಿ ಹೆರಾಯಿನ್ ನಾಪತ್ತೆಯಾಗಿದ್ದು, ಇದರ ಬಗ್ಗೆ ಈವರೆಗೂ ತನಿಖೆ ನಡೆಸಿಲ್ಲ ಯಾಕೆ?
  • 3) ಭಾರತದ ಮಾದಕದ್ರವ್ಯ ನಿಯಂತ್ರಣ ಮಂಡಳಿ, ಸಿಬಿಐಐ, ಇಡಿ, ಡಿಆರ್ ಐ ಸಂಸ್ಥೆಗಳು ಏನು ಮಾಡುತ್ತಿವೆ? ಇವು ಕೇವಲ ರಾಜಕೀಯ ಎದುರಾಳಿಗಳ ವಿರುದ್ಧ ಬಳಸುವ ಅಸ್ತ್ರವಾಗಿದೆಯಾ?
  • 4) ತಾಲಿಬಾನ್ ನಿಯಂತ್ರಣದಲ್ಲಿರುವ ಆಫ್ಘಾನಿಸ್ತಾನದಿಂದ ದೇಶಕ್ಕೆ ಇಷ್ಟು ದೊಡ್ಡ ಪ್ರಮಾಣದಲ್ಲಿ ಡ್ರಗ್ಸ್ ರವಾನೆಯಾಗುತ್ತಿದ್ದು, ಇದು ದೇಶದ ಭದ್ರತೆಗೆ ಅಪಾಯಕಾರಿಯಲ್ಲವೇ?
  • 5) ಪ್ರಭಾವಿ ವ್ಯಕ್ತಿ ಹೊರತಾಗಿ ಇತರರು ಇಷ್ಟು ದೊಡ್ಡ ಮಟ್ಟದ ಡ್ರಗ್ಸ್ ಆಮದು ಮಾಡಿಕೊಳ್ಳಲು ಸಾಧ್ಯವೇ? ಈ ಬಗ್ಗೆ ಪ್ರಧಾನಮಂತ್ರಿಗಳಾಗಲಿ, ಗೃಹಮಂತ್ರಿಗಳಾಗಲಿ ಅನುಮಾನಾಸ್ಪದ ಮೌನಕ್ಕೆ ಶರಣಾಗಿರುವುದೇಕೆ?
  • 6) ಈ ಪ್ರಕರಣದಲ್ಲಿ ಅದಾನಿ ಮುಂದ್ರಾ ಬಂದರಿನ ವಿಚಾರಣೆ ನಡೆದಿಲ್ಲ ಯಾಕೆ? ಗುಜರಾತಿನಲ್ಲಿರುವ ಈ ಕಂಪನಿ ದೇಶಕ್ಕೆ ಡ್ರಗ್ಸ್ ಸರಬರಾಜು ಮಾಡುವ ರಹದಾರಿಯಾಗಿ ಮಾರ್ಪಟ್ಟಿದೆ?
  • 7) ವಿಶೇಷ ನ್ಯಾಯಾಲಯದ ಅಭಿಪ್ರಾಯದಂತೆ ಮುಂದ್ರಾ ಬಂದರು ನಡೆಸುತ್ತಿರುವ ಅದಾನಿ ಗ್ರೂಪ್ ಈ ಆಮದಿನಿಂದ ಲಾಭ ಪಡೆಯುತ್ತಿಲ್ಲವೇ?
  • 8) ಕಳೆದ 18 ತಿಂಗಳಿನಿಂದ ದೇಶದ ಮಾದಕ ದ್ರವ್ಯ ನಿಯಂತ್ರಣ ಮಂಡಳಿಯ ವ್ಯವಸ್ಥಾಪಕ ನಿರ್ದೇಶಕರ ಹುದ್ದೆ ಖಾಲಿ ಇರುವುದೇಕೆ?
  • 9) ರಾಷ್ಟ್ರೀಯ ಭದ್ರತೆ ವಿಚಾರವಾಗಿ ಪ್ರಧಾನಮಂತ್ರಿಗಳು ಹಾಗೂ ಕೇಂದ್ರ ಸರ್ಕಾರ ಪದೇ ಪದೆ ವಿಫಲರಾಗುತ್ತಿರುವುದೇಕೆ?
  • 10) ದೇಶದ ಯುವಕರ ಭವಿಷ್ಯಕ್ಕೆ ಮಾರಕವವಾಗಿರುವ ಈ ಡ್ರಗ್ಸ್ ಪ್ರಕರಣದಲ್ಲಿ ಹಾಲಿ ಸುಪ್ರಿಂ ಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಯುತ್ತಿಲ್ಲ ಯಾಕೆ?

ಈ ಸಂದರ್ಭದಲ್ಲಿ ಕೆಪಿಸಿಸಿ ಮಾಧ್ಯಮ ವಿಭಾಗ ಮುಖ್ಯಸ್ಥರಾದ ಬಿ.ಎಲ್ ಶಂಕರ್, ಎಐಸಿಸಿ ವಕ್ತಾರರಾದ ಭವ್ಯ ನರಸಿಂಹಮೂರ್ತಿ, ಕೆಪಿಸಿಸಿ ಸಂವಹನ ಹಾಗೂ ಮಾಧ್ಯಮ ವಿಭಾಗದ ಸಹ ಸಂಚಾಲಕರಾದ ರಾಮಚಂದ್ರಪ್ಪ ಹಾಗೂ ಸಲೀಂ ಅವರು ಇದ್ದರು.

Tags: adani groupCongressdrugs from Afghanistandrugs smugglingGujratindiakarnatakaSupriya Shrinate
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

by cknewsnow desk
October 28, 2026
0

ಬೆಂಗಳೂರಿನಲ್ಲಿ 43.13% ಮತದಾರರ ಪ್ರಮಾಣ ಕುಸಿತ

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

by cknewsnow desk
October 25, 2026
0

ಹಾಲಿ ಮುಖ್ಯಮಂತ್ರಿ ವಿರುದ್ಧ ಕೇಂದ್ರ ಸಚಿವರ ಗಂಭೀರ ಆರೋಪ; ಈಗಿನ ಮಹಾನ್ ಮುಖ್ಯಮಂತ್ರಿಗಳೇ ಸ್ಟಿಂಗ್ ಮೂಲಪುರುಷ

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

by cknewsnow desk
October 25, 2026
0

ಸ್ಟಿಂಗ್ ಆಪರೇಶನ್ ಪ್ರಕರಣದಲ್ಲಿ ರಾಜ್ಯ ಸರ್ಕಾರದ್ದು ಇಬ್ಬಗೆ ನೀತಿ; ಕೇಂದ್ರ ಸಚಿವ ಪ್ರಲ್ಹಾದ ಜೋಶಿ ವಾಗ್ದಾಳಿ

ಸ್ಟಿಂಗ್ ವಿರುದ್ಧ ಕೋರ್ಟ್ ಮೊರೆ ಹೋದ ಸಿದ್ದರಾಮಯ್ಯ! ಇಂದು ಆದೇಶ ನಿರೀಕ್ಷೆ

ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

by cknewsnow desk
October 25, 2026
0

ಹೆಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ; #kpsc ಹಗರಣದ ದಿಕ್ಕು ತಪ್ಪಿಸಲು ಪ್ರಿಯಾಂಕ್ ಖರ್ಗೆ ಒದ್ದಾಟ

ಬೆಂಗಳೂರು ಸುತ್ತಲಿನ ಜನರ ಸಮಾಧಿ ಮೇಲೆ ಬ್ರ್ಯಾಂಡ್‌ ಬೆಂಗಳೂರು

10 ತಿಂಗಳಾದರೂ ಸಿಗದ ಭೂಮಿ; ರಾಜ್ಯದ ಕೈತಪ್ಪಲಿದೆಯಾ ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರ

by cknewsnow desk
October 22, 2026
0

ಬೇಸತ್ತು ಮುಖ್ಯಮಂತ್ರಿ ಡಿಕೆಶಿಗೆ ಪತ್ರ ಬರೆದ ಕೇಂದ್ರ ಸಚಿವ #HDK

ರಾಜೀನಾಮೆ ಕೊಟ್ಟು ಹೊರಬನ್ನಿ; ಅಪಮಾನಿತ ದಲಿತ ಸಚಿವರಿಗೆ #Jds ಕಿವಿಮಾತು

ರಾಜೀನಾಮೆ ಕೊಟ್ಟು ಹೊರಬನ್ನಿ; ಅಪಮಾನಿತ ದಲಿತ ಸಚಿವರಿಗೆ #Jds ಕಿವಿಮಾತು

by cknewsnow desk
October 22, 2026
0

ಮೈಸೂರು ದಸರಾದಲ್ಲಿ ಅವಮಾನ ಪ್ರಸಂಗ; ಬಾಯಲ್ಲಿ ಜಾತ್ಯತೀತ ತತ್ವ, ಆಚರಣೆಯಲ್ಲಿ ಅಸೃಶ್ಯತೆ!; ಕಾಂಗ್ರೆಸ್ ವಿರುದ್ಧ ಜೆಡಿಎಸ್ ವಾಗ್ದಾಳಿ

Next Post
ಬಾಪು ಎಂಬ ಬೆಳಕು

ಬಾಪು ಎಂಬ ಬೆಳಕು

Leave a Reply Cancel reply

Your email address will not be published. Required fields are marked *

Recommended

ಬಾಗೇಪಲ್ಲಿ ಪ್ರತಿಭೆ ಬಿ.ವಿ.ಲಕ್ಷ್ಮಣರೆಡ್ಡಿಗೆ ನೀಟ್ ಪರೀಕ್ಷೆಯಲ್ಲಿ ದೇಶಕ್ಕೇ 65ನೇ ರ‍್ಯಾಂಕ್

ಬಾಗೇಪಲ್ಲಿ ಪ್ರತಿಭೆ ಬಿ.ವಿ.ಲಕ್ಷ್ಮಣರೆಡ್ಡಿಗೆ ನೀಟ್ ಪರೀಕ್ಷೆಯಲ್ಲಿ ದೇಶಕ್ಕೇ 65ನೇ ರ‍್ಯಾಂಕ್

5 years ago
ಉನ್ನತ ಶಿಕ್ಷಣ ಸಚಿವರ ಉದಾರತೆ

ಉನ್ನತ ಶಿಕ್ಷಣ ಸಚಿವರ ಉದಾರತೆ

5 years ago

Popular News

  • #SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

    #SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

    0 shares
    Share 0 Tweet 0
  • ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

    0 shares
    Share 0 Tweet 0
  • ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

    0 shares
    Share 0 Tweet 0
  • ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

    0 shares
    Share 0 Tweet 0
  • 10 ತಿಂಗಳಾದರೂ ಸಿಗದ ಭೂಮಿ; ರಾಜ್ಯದ ಕೈತಪ್ಪಲಿದೆಯಾ ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರ

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

October 28, 2026
ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

October 25, 2026
ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

October 25, 2026
ಸ್ಟಿಂಗ್ ವಿರುದ್ಧ ಕೋರ್ಟ್ ಮೊರೆ ಹೋದ ಸಿದ್ದರಾಮಯ್ಯ! ಇಂದು ಆದೇಶ ನಿರೀಕ್ಷೆ

ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

October 25, 2026

Covid 19

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

October 16, 2026
ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ