• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS STATE

ಐಎಸ್ಎಸ್ ಅಧಿಕಾರಿ ಡಿ.ಕೆ.ರವಿ ಆತ್ಮಹತ್ಯೆ ಪ್ರಕರಣ; ಸಿದ್ದರಾಮಯ್ಯ ಹೇಳಿದರು ಕಾರಣ!

cknewsnow desk by cknewsnow desk
October 2, 2021
in STATE
Reading Time: 1 min read
0
ಐಎಸ್ಎಸ್ ಅಧಿಕಾರಿ ಡಿ.ಕೆ.ರವಿ ಆತ್ಮಹತ್ಯೆ ಪ್ರಕರಣ; ಸಿದ್ದರಾಮಯ್ಯ ಹೇಳಿದರು ಕಾರಣ!
1.5k
VIEWS
FacebookTwitterWhatsuplinkedinEmail

ಮಾಜಿ ಮುಖ್ಯಮಂತ್ರಿ ಹೇಳಿದ ನಗ್ನಸತ್ಯವೇನು?

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ದಿವಂಗತ ಐಎಎಸ್ ಅಧಿಕಾರಿ ಡಿ.ಕೆ.ರವಿ ಸಾವಿನ ಕುರಿತು ಹಿರಿಯ ಪತ್ರಕರ್ತ ರಾಮಕೃಷ್ಣ ಉಪಾಧ್ಯ ಬರೆದಿರುವ “ನಗ್ನ ಸತ್ಯ” ಪುಸ್ತಕವನ್ನು ಲೋಕಾರ್ಪಣೆಗೊಳಿಸಿದರು.

ನಗ್ನಸತ್ಯ ಪುಸ್ತಕದ ಕನ್ನಡ ಅವತರಣಿಕೆಯನ್ನು ಅನುವಾದಿಸಿದ ಅನಾ ಪ್ರಹ್ಲಾದ ರಾವ್‌ ಹಾಗೂ ಸಿದ್ದರಾಮಯ್ಯ.

ಈ ಸಂದರ್ಭದಲ್ಲಿ ಮಾತನಾಡಿದ ಅವರು ದೀರ್ಘ ಭಾಷಣ ಮಾಡಿದರು. ಅವರು ಹೇಳಿದ್ದಿಷ್ಟು;

  • ರಾಮಕೃಷ್ಣ ಉಪಾಧ್ಯ ಅವರು ಡಿ.ಕೆ.ರವಿ ಅವರ ಸಾವಿನ ಕುರಿತಾಗಿ ಲ್ಯಾಂಡ್, ಲಸ್ಟ್, ಅಂಡ್ ಆಡಿಯೋ ಟೇಪ್ ಎಂಬ ಇಂಗ್ಲಿಷ್ ಭಾಷೆಯಲ್ಲಿ ಪುಸ್ತಕವನ್ನು ಬರೆದಿದ್ದಾರೆ. ಇದನ್ನು ಪ್ರಹ್ಲಾದ್ ರಾವ್ ಕನ್ನಡಕ್ಕೆ ತರ್ಜುಮೆ ಮಾಡಿದ್ದಾರೆ. ಈ ಎರಡೂ ಪುಸ್ತಕಗಳು ಇಂದು ಏಕಕಾಲದಲ್ಲಿ ಲೋಕಾರ್ಪಣೆಗೊಂಡಿವೆ.
  • ಡಿ.ಕೆ ರವಿ ಅವರ ಆತ್ಮಹತ್ಯೆಗೆ ಕಾರಣಗಳೇನು ಎಂಬ ಬಗ್ಗೆ ಹಲವಾರು ಮೂಲಗಳಿಂದ ಮಾಹಿತಿ ಸಂಗ್ರಹಿಸಿ, ಈ ಪುಸ್ತಕದ ಮೂಲಕ ಜನರಿಗೆ ಸತ್ಯವನ್ನು ತಿಳಿಸುವ ಕೆಲಸ ಮಾಡಿದ್ದಾರೆ.
  • ನಮ್ಮ ಸರ್ಕಾರ ಅಧಿಕಾರದಲ್ಲಿ ಇದ್ದ ವೇಳೆ 2015 ಮಾರ್ಚ್ 16 ರಂದು ಡಿ.ಕೆ ರವಿ ಅವರು ಆತ್ಮಹತ್ಯೆಗೆ ಶರಣಾಗಿದ್ದರು. ಈ ಸಂದರ್ಭದಲ್ಲಿ ವಿಧಾನಸಭಾ ಅಧಿವೇಶನ ನಡೆಯುತ್ತಿತ್ತು. ಈ ವಿಚಾರವನ್ನು ವಿರೋಧ ಪಕ್ಷಗಳು ದೊಡ್ಡ ಅಸ್ತ್ರವಾಗಿ ಬಳಸಿಕೊಂಡವು.
  • ಡಿ.ಕೆ.ರವಿ ಒಬ್ಬ ದಕ್ಷ ಹಾಗೂ ಪ್ರಾಮಾಣಿಕ ಅಧಿಕಾರಿ ಎಂಬ ಬಗ್ಗೆ ಎರಡು ಮಾತಿಲ್ಲ. ಇದರ ಜೊತೆಗೆ ಪ್ರಚಾರ ಪ್ರಿಯರು ಆಗಿದ್ದರು. ಮರಳು ಮತ್ತು ಭೂ ಮಾಫಿಯಾ ವಿರುದ್ಧ ಪ್ರತಿ ಬಾರಿ ಕ್ರಮ ಕೈಗೊಳ್ಳುವ ಮುಂಚೆ ಮೀಡಿಯಾಗಳಿಗೆ ಮೊದಲು ತಿಳಿಸಿ, ನಂತರ ಕ್ರಮ ಜರುಗಿಸುತ್ತಿದ್ದರು. ಈ ಮೂಲಕ ಬಹುಬೇಗ ಜನಪ್ರಿಯತೆ ಗಳಿಸುವ ಪ್ರಯತ್ನ ಮಾಡಿದ್ದರು. ಇದು ನನ್ನ ಅನುಭವಕ್ಕೆ ಬಂದದ್ದಷ್ಟೇ ಅಲ್ಲ ರಾಮಕೃಷ್ಣ ಉಪಾಧ್ಯ ಅವರ ಪುಸ್ತಕದಲ್ಲೂ ಉಲ್ಲೇಖಿಸಲಾಗಿದೆ.
  • ಅವರನ್ನು ವರ್ಗಾವಣೆ ಮಾಡುವಂತೆ ನಮ್ಮ ಪಕ್ಷದ ಯಾವುದೇ ಶಾಸಕರು ನನ್ನ ಬಳಿ ಒತ್ತಡ ಹೇರಿರಲಿಲ್ಲ. ಒಮ್ಮೆ ಡಿ.ಕೆ.ರವಿ ಅವರ ಮಾವ ಹನುಮಂತರಾಯಪ್ಪ ಅವರು ರಮೇಶ್ ಕುಮಾರ್ ಅವರ ಜೊತೆ ಬಂದು ತಮ್ಮ ಮಗಳು ಬೆಂಗಳೂರಿನಲ್ಲಿ ಇದ್ದಾರೆ. ಹೀಗಾಗಿ ರವಿ ಅವರನ್ನು ಬೆಂಗಳೂರಿಗೆ ವರ್ಗಾವಣೆ ಮಾಡಿ ಎಂದು ಮನವಿ ಮಾಡಿದ್ದರು. ನಂತರ ನಾನು ಅವರನ್ನು ಕಮರ್ಷಿಯಲ್ ಟ್ಯಾಕ್ಸ್ ಅಂಡ್ ಎನ್‌ಫೋರ್ಸ್‌ಮೆಂಟ್ ಇಲಾಖೆಯ ಅಸಿಸ್ಟೆಂಟ್ ಕಮಿಷನರ್ ಆಗಿ ವರ್ಗಾವಣೆ ಮಾಡಿದ್ದೆ. ಕೋಲಾರದಲ್ಲೇ ಡಿ.ಸಿ ಯಾಗಿ ಮುಂದುವರೆಯಬೇಕು ಎಂಬ ಆಸೆ ಇದ್ದುದ್ದರಿಂದ ರವಿ ಅವರಿಗೆ ಈ ವರ್ಗಾವಣೆ ಅಷ್ಟೊಂದು ಸಂತಸದಾಯಕವಾಗಿ ಇರಲಿಲ್ಲವೇನೋ ಎಂಬುದು ನನ್ನ ಭಾವನೆ.
  • ಕಾನೂನು ರೀತ್ಯಾ ಹಣ ಮಾಡಬೇಕೆಂಬ ಆಸೆಯಿಂದ ರಿಯಲ್ ಎಸ್ಟೇಟ್ ಆರಂಭಿಸಿದರು. ಅವರಿಗೆ ಹರಿಕೃಷ್ಣ ಮತ್ತು ಚಂದ್ರಶೇಖರ ಎಂಬ ಇಬ್ಬರು ಗೆಳೆಯರಿದ್ದರು. ಈ ಗೆಳೆಯರ ಜತೆಗೂಡಿ ಆರ್ ಅಂಡ್ ಎಚ್ ಎಂಬ ರಿಯಲ್ ಎಸ್ಟೇಟ್ ಕಂಪನಿ ಶುರು ಮಾಡಿದರು. ಒಂದು 500 ಕೋಟಿ ಹಣ ಸಂಪದಾನೆ ಮಾಡಿ, ನಂತರ ಐ.ಎ.ಎಸ್ ಹುದ್ದೆಗೆ ರಾಜೀನಾಮೆ ನೀಡಿ ದೊಡ್ಡ ಉದ್ಯಮಿಯಾಗಬೇಕು ಎಂದು ಅವರ ಮಹದಾಸೆಯಾಗಿತ್ತು. ಆದರೆ ಹಣ ಮಾಡುವ ಅವರ ಈ ಆಸೆ ಈಡೇರಲಿಲ್ಲ.‌ ಇದು ಅವರ ಜೀವನದ ವೈಫಲ್ಯ.
  • ರವಿ ಅವರ ಆತ್ಮಹತ್ಯೆ ವಿಷಯವನ್ನು ಮುಂದಿಟ್ಟಕೊಂಡು ಪ್ರತಿಪಕ್ಷಗಳು ರಾದ್ಧಾಂತ ಮಾಡಿದವು. ಮಾಧ್ಯಮಗಳು ಬೆಂಕಿಗೆ ತುಪ್ಪ ಸುರಿದವು. ಸಾಕ್ಷ್ಯಾಧಾರ ಇಲ್ಲದೆ ಮಾಧ್ಯಮಗಳು ಸುದ್ದಿ ಪ್ರಸಾರ ಮಾಡಿದವು. ತನಿಖೆ ಇಲ್ಲದೆಯೇ ಮಾಧ್ಯಮಗಳು ತೀರ್ಪು ನೀಡಿದವು.
  • ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಒಂದು ವಾರ ಏನೆಲ್ಲ ನಾಟಕಗಳು ನಡೆದವು. ಬಿಜೆಪಿ ನಾಯಕರಾದ ಜಗದೀಶ್ ಶೆಟ್ಟರ್, ಅನಂತ್ ಕುಮಾರ್, ಸದಾನಂದ ಗೌಡ ಈ ಎಲ್ಲರೂ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ರನ್ನು ಭೇಟಿ ಮಾಡಿ ಸಿಬಿಐ ತನಿಖೆಗೆ ಆಗ್ರಹಿಸಿದರು. ಈ ಪ್ರಕರಣವನ್ನು ಸಿ.ಬಿ.ಐ ಗೆ ವಹಿಸಲು ನಮ್ಮ‌ ಸರ್ಕಾರ ಯಾವುದೇ ಹಿಂದೇಟು ಹಾಕಿಲ್ಲ. ನಮ್ಮ ಸರ್ಕಾರದ ಅವಧಿಯಲ್ಲಿ ಆರು ಪ್ರಕರಣಗಳನ್ನು ಸಿ.ಬಿ.ಐ ಗೆ ವಹಿಸಿದ್ದೆವು. ಬಿಜೆಪಿ ಸರ್ಕಾರ ಯಾವುದಾದರೂ ಒಂದು ಪ್ರಕರಣವನ್ನು ಸಿ.ಬಿ.ಐ ಗೆ ವಹಿಸಿದೆಯಾ? ಇದೇ ಬಿಜೆಪಿಯವರು ಸಿಬಿಐ ಅನ್ನು ಕಾಂಗ್ರೆಸ್ ಬ್ಯೂರೊ ಆಫ್‌ ಇನ್ವೆಸ್ಟಿಗೇಷನ್ ಎಂದು ಲೇವಡಿ ಮಾಡುತ್ತಿದ್ದವರು. ಅಪ್ರಮಾಣಿಕ ರಾಜಕಾರಣ ಮಾಡುವುದರಲ್ಲಿ ಅವರು ನಿಸ್ಸೀಮರು.
  • ಜೆಡಿಎಸ್ ನವರು ಡಿ.ಕೆ. ರವಿ ಅವರ ತಂದೆ, ತಾಯಿಯನ್ನು ಕರೆತಂದು ವಿಧಾನಸೌಧದ ಮುಂದೆ ಧರಣಿ ಕೂರಿಸಿದರು. ರವಿ ಸಾವಿನ ತನಿಖೆಯನ್ನು ಸಿಐಡಿಗೆ ವಹಿಸುವುದಾಗಿ ಹೇಳಿದರೂ ಅವರು ಕೇಳಲಿಲ್ಲ. ಯಾವುದಾದರೂ ಸರ್ಕಾರ ಘಟನೆ ನಡೆದ ವಾರದೊಳಗೆ ಸಿಬಿಐ ತನಿಖೆಗೆ ಒಪ್ಪಿಸಿದ್ದರೆ ಅದು ನಮ್ಮ ಸರ್ಕಾರ.
  • ನಮಗೂ ಘಟನೆಗೂ ಸಂಬಂಧ ಇರಲಿಲ್ಲ. ಉಪ್ಪು ತಿಂದವರು ನೀರು ಕುಡಿಯಲಿ ಎಂಬ ಆಶಯದೊಂದಿಗೆ ಧೈರ್ಯವಾಗಿ ನಮ್ಮ ಸರ್ಕಾರ ಸಿಬಿಐ ತನಿಖೆಗೆ ಒಪ್ಪಿಸಿತು. ಸಿ.ಬಿ.ಐ ವರದಿ ತುಂಬಾ ತಡವಾಗಿ ಬಂದಿತ್ತು. ಇದು ಸಿಬಿಐಗೆ ವಹಿಸುವ ಪ್ರಕರಣವಾಗಿರಲಿಲ್ಲ. ಈ ಹಿಂದೆ ಸಿ.ಐ.ಡಿ ಇಲಾಖೆಗೆ ನಡೆಸಿದ್ದ ತನಿಖೆ ಸರಿಯಾದ ಹಾದಿಯಲ್ಲಿ ಇತ್ತು ಎಂಬುದನ್ನು ಸಿಬಿಐ ವರದಿ ಹೇಳಿತ್ತು.
  • ಏಕಮುಖ ಪ್ರೀತಿ ಅಪಾಯಕಾರಿ. ಇನ್ನೊಬ್ಬರ ಭಾವನೆಗಳನ್ನು ಅರ್ಥ ಮಾಡಿಕೊಳ್ಳದೆ ಆತ್ಮಹತ್ಯೆ ಮಾಡಿಕೊಳ್ಳುವುದು ಮೂರ್ಖತನದ ಪರಮಾವಧಿ.
  • ಪುಸ್ತಕದಲ್ಲಿ ಹೇಳುರುವಂತೆ ಭೂಮಿ, ಕಾಮ, ಆಡಿಯೋ ಟೇಪ್ ರವಿ ಆತ್ಮಹತ್ಯೆಗೆ ಕಾರಣವೇ ಹೊರತು ಬೇರೆ ಯಾರೂ ಕಾರಣರರಲ್ಲ.‌ ಸತ್ಯ ಎಂದಿದ್ದರೂ ಹೊರಗೆ ಬಂದೇ ಬರುತ್ತದೆ. ಸಿಬಿಐ ತನಿಖಾ ವರದಿಯನ್ನು ನಮ್ಮ ಸರ್ಕಾರ ಇದ್ದಾಗಲೇ ಜನರ ಮುಂದೆ ಇಡಬೇಕಾಗಿತ್ತು. ಆದರೆ, ಸಾವಿನ ಹಿಂದಿನ ಸತ್ಯ ಅದಾಗಲೇ ಬಹಿರಂಗವಾಗಿದ್ದರಿಂದ ಆ ಕೆಲಸ ನಾವು ಮಾಡಲಿಲ್ಲ.
  • ಒಂದಂಕಿ ಲಾಟರಿಯಲ್ಲಿ ನಾನು ಮತ್ತು ಜಾರ್ಜ್ ಅಪಾರ ಹಣ ಮಾಡಿದ್ದೇವೆ ಎಂದು ಜೆ.ಡಿ.ಎಸ್ ಆರೋಪ ಮಾಡಿತ್ತು. ಮರುದಿನವೇ ಪ್ರಕರಣವನ್ನು ಸಿ.ಬಿ.ಐ ಗೆ ವಹಿಸಿದೆ. ಕೊನೆಗೆ ಏನಾಯ್ತು?
  • ನಾವು ಅಧಿಕಾರದಲ್ಲಿದ್ದಾಗ ಪಾರದರ್ಶಕವಾಗಿ ಆಡಳಿತ ನಡೆಸಿದ್ದೇವೆ. ರಾಜಕಾರಣಿಗಳು, ಅಧಿಕಾರಿಗಳಲ್ಲಿ ಒಳ್ಳೆಯವರು, ಕೆಟ್ಟವರು ಇದ್ದಾರೆ. ಈಗ ವ್ಯವಸ್ಥೆಯೇ ಕೆಟ್ಟು ಹೋಗಿದೆ. ಎಲ್ಲಿಯವರೆಗೆ ಸಮಾಜ ಇಂಥದನ್ನು ವಿರೋಧಿಸುವುದಿಲ್ಲವೋ ಅಲ್ಲಿಯವರೆಗೆ ವ್ಯವಸ್ಥೆ ಸುಧಾರಿಸದು.
  • ನಾನು ಮೊದಲ ಬಾರಿ 1983 ರಲ್ಲಿ ಚುನಾವಣೆಗೆ ನಿಂತಾಗ ಕೇವಲ 63,000 ರಾಪಾಯಿ ಖರ್ಚಾಗಿತ್ತು. ಇಂದಿನ ರಾಜಕಾರಣ ಹಿಂದಿನಂತೆ ಇಲ್ಲ. ಇದಕ್ಕೆ ಯಾರನ್ನು ದೂಷಿಸಬೇಕು?
  • ಡಿ.ಕೆ ರವಿ ಆತ್ಮಹತ್ಯೆಗೆ ಸಂಬಂಧಿಸಿದ ಸಿಬಿಐ ವರದಿಯನ್ನು ಸದನದ ಮುಂದಿಟ್ಟು, ಸತ್ಯಸಂಗತಿಯನ್ನು ಜನರಿಗೆ ತಿಳಿಸಬೇಕಿತ್ತು, ನಾವದನ್ನು ಮಾಡಿಲ್ಲ. ನಾವು ಮಾಡಬೇಕಿದ್ದ ಈ ಕೆಲಸವನ್ನು ರಾಮಕೃಷ್ಣ ಉಪಾಧ್ಯಾಯ ಅವರು ಮಾಡಿದ್ದಾರೆ. ಅವರಿಗೆ ನನ್ನ ಅಭಿನಂದನೆಗಳು.
Tags: dk ravi death mysterydk ravi life stroyias officer dk ravinagna satyasiddaramaiah
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಹೂ ಈಸ್ ಸಿದ್ದರಾಮಯ್ಯ?

ಹೂ ಈಸ್ ಸಿದ್ದರಾಮಯ್ಯ?

Leave a Reply Cancel reply

Your email address will not be published. Required fields are marked *

Recommended

ದೇವರಾಜ ಅರಸು ಆಶಯ ಉಲ್ಟಾ ಮಾಡಿದ ಬಿಜೆಪಿ!!

ಸಂಕಷ್ಟ ಸೂತ್ರ ಇಲ್ಲದಿರುವುದೇ ಸಂಕಷ್ಟಕ್ಕೆ ಕಾರಣ ಎಂದು ಕೈಚೆಲ್ಲಿದ ಸಿದ್ದರಾಮಯ್ಯ

3 years ago
ಲಾಕ್ ಡೌನ್ ಇಲ್ಲ

ವೈಫಲ್ಯ ಮುಚ್ಚಿಕೊಳ್ಳಲು ಬೊಮ್ಮಾಯಿ ಬುಲ್ಡೋಜರ್ ಜಪ

4 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ