• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS STATE

ಕರ್ನಾಟಕದಲ್ಲಿ ಅಭಿವೃದ್ಧಿಯ ಹೊಸ ಯುಗ ಆರಂಭವಾಗಲಿದೆ: ಸಿಎಂ

cknewsnow desk by cknewsnow desk
October 7, 2021
in STATE
Reading Time: 1 min read
0
ಕರ್ನಾಟಕದಲ್ಲಿ ಅಭಿವೃದ್ಧಿಯ ಹೊಸ ಯುಗ ಆರಂಭವಾಗಲಿದೆ: ಸಿಎಂ
924
VIEWS
FacebookTwitterWhatsuplinkedinEmail

ನಾನು ಒಬ್ಬನೇ ಮಾಡುತ್ತೇನೆ ಎಂದರೆ ಮೂರ್ಖತನ, ನಾವೆಲ್ಲರೂ ಸೇರಿ ಮಾಡುತ್ತೇವೆ ಎಂದರೆ ಅದಕ್ಕೊಂದು ಅರ್ಥ ಎಂದ ಬೊಮ್ಮಾಯಿ

ಮೈಸೂರು: ಸ್ವಚ್ಛ, ದಕ್ಷ, ಜನಪರ ಆಡಳಿತ ನೀಡಲು ಬದ್ಧರಾಗಿದ್ದು, ಕರ್ನಾಟಕದಲ್ಲಿ ಅಭಿವೃದ್ಧಿಯ ಹೊಸ ಯುಗ ಆರಂಭವಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಗುರುವಾರ ನಡೆದ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸಿಎಂ ಅವರು ಮಾತನಾಡಿದರು.

ದಸರಾ ಮಹೋತ್ಸವ ಅಂತರರಾಷ್ಟ್ರೀಯ ಮಟ್ಟಕ್ಕೆ ಹೋಗಬೇಕು ಎನ್ನುವ ವಿಚಾರವನ್ನು ಉದ್ಘಾಟಕರು ಕೂಡ ತಿಳಿಸಿದರು. ಖಂಡಿತವಾಗಿ ವಿಶ್ವದಲ್ಲಿ ಬೇರೆ ಬೇರೆ ಹಬ್ಬಗಳನ್ನು ಆಚರಣೆ ಮಾಡಲು ಟೂರಿಸಂ ಸರ್ಕಿಟ್ ಮಾಡಿ ಪ್ರಚಾರ ಕೊಟ್ಟು, ಜನರನ್ನು ಆಕರ್ಷಣೆ ಮಾಡುತ್ತಾರೆ. ಅದೇ ಮಾದರಿಯಲ್ಲಿ ಅಂತರರಾಷ್ಟ್ರೀಯ ಸರ್ಕಿಟ್ ಮಾಡಲಾಗುವುದು. ಸಂಬಂಧಿಸಿದ ಸಚಿವರುಗಳು ಜೊತೆ ಚರ್ಚಿಸಿ ರೂಪಿಸಲಾಗುವುದು ಎಂದು ತಿಳಿಸಿದರು.

ಸೇವೆ ಮಾಡುವ ಅವಕಾಶ ಸಿಕ್ಕಿದ್ದು ಸಣ್ಣ ಸಂತೃಪ್ತಿ. ಇವತ್ತಿನ ಸವಾಲುಗಳು. ಆರ್ಥಿಕ ಹಿಂಜರಿಕೆ ಇತರ ರಾಜ್ಯಗಳ ಜೊತೆಗೆ ನಾವು ಕೂಡ ಅಭಿವೃದ್ಧಿ ಹೊಂದಬೇಕೆನ್ನುವ ಚಿಂತನೆ ಇದೆ. ಹಲವಾರು ಬದಲಾವಣೆ ಮಾಡಿ ಆರ್ಥಿಕ ಬದಲಾವಣೆ ತಂದು ನಾಡಿನ ಸಮಗ್ರ ಅಭಿವೃದ್ಧಿ ಮಾಡಲಾಗುವುದು. ಮೈಸೂರು ಅಭಿವೃದ್ಧಿಗೆ ಹಲವು ಕಾರ್ಯಕ್ರಮಗಳನ್ನು ರೂಪಿಸಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಅವಶ್ಯಕತೆ ಇದೆ. ಎಲ್ಲ ರೀತಿಯ ವಿಸ್ತರಣೆಗೆ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ತಿಳಿಸಿದರು.

ನಮ್ಮೆಲ್ಲರ ಬದುಕಿನಲ್ಲಿ ಸಂತೋಷ ಸಂಭ್ರಮವನ್ನು ತರಲಿ. ದುಃಖ ದುಮ್ಮಾನ ದೂರ ಮಾಡಲಿ ಎಷ್ಟೇ ಕಷ್ಟವಿದ್ದರೂ ಎದುರಿಸಲು ಶಕ್ತಿ ನೀಡಲಿ ಎಂದು ತಾಯಿ ಚಾಮುಂಡೇಶ್ವರಿಯಲ್ಲಿ ಪ್ರಾರ್ಥಿಸಿದ್ದೇನೆ ಎಂದರು.

ನಾನು ಒಬ್ಬನೇ ಮಾಡುತ್ತೇನೆ ಎಂದರೆ ಮೂರ್ಖತನ. ನಾವೆಲ್ಲರೂ ಸೇರಿ ಮಾಡುತ್ತೇವೆ ಎಂದರೆ ಅದಕ್ಕೊಂದು ಅರ್ಥ. ನಮ್ಮದು ಟೀಮ್ ವರ್ಕ್, ಆರ್ಥಿಕ ಪ್ರಗತಿ ಮಾಡಿ ಜನಮೆಚ್ಚುವ ಕೆಲಸ ಮಾಡುತ್ತೇವೆ. ರೈತರ ಮಕ್ಕಳಿಗೆ ವಿದ್ಯಾರ್ಥಿವೇತನ ನೀಡುವ ಕೆಲಸ ಮಾಡಿದ್ದೇವೆ. ವಿಶೇಷ ಸ್ವಚ್ಛ, ದಕ್ಷ ಜನಪರ ಆಡಳಿತ ನೀಡಲು ಕಂಕಣ ಬದ್ಧರಾಗಿದ್ದೇವೆ ಎಂದು ಪ್ರಮಾಣ ಮಾಡಿದರು. ಸಿಎಂ ಡ್ಯಾಶ ಬೋರ್ಡ್ ಮಾಡಿದ್ದು ಎಲ್ಲ ಯೋಜನೆಗಳು ನಮ್ಮ ಕಣ್ಣಮುಂದಿರಬೇಕು. ಇದರಿಂದ ಹಲವಾರು ನಿರ್ದೇಶನಗಳನ್ನು ಕಾಲಕಾಲಕ್ಕೆ ನೀಡಲು ಸಾಧ್ಯವಾಗಲಿದೆ. ಕರ್ನಾಟಕದಲ್ಲಿ ಹೊಸ ಅಭಿವೃದ್ಧಿಯ ಯುಗ ಆರಂಭವಾಗಲಿದೆ. ಶುಭ ಹಸ್ತದಲ್ಲಿ ಉದ್ಘಾಟನೆ ಆಗಿದ್ದು, ನಮಗೆಲ್ಲರಿಗೂ ಶುಭ ತರಲಿದೆ ಎಂದರು.

ನನ್ನ ಪೂರ್ವಜನ್ಮದ ಪುಣ್ಯ. ನಾಡದೇವತೆಯ ಸೇವೆ ಮಾಡುವಂತಹ ಸದವಕಾಶ ಬಂದಿದೆ. ಈ ನಾಡದೇವತೆಯ ಆಶೀರ್ವಾದದೊಂದಿಗೆ ಈ ನಾಡನ್ನು ಸುಭೀಕ್ಷವಾಗಿರುವಂತಹ ಕನ್ನಡ ನಾಡಿನಲ್ಲಿರುವಂತಹ ಪ್ರತಿಯೊಬ್ಬ ಕನ್ನಡಿಗನ ಬಾಳನ್ನು ಹಸನು ಮಾಡುವ ಅವಕಾಶ. ಎಲ್ಲರ ಶ್ರೇಯೋಭಿವೃದ್ಧಿಗೆ ಕೆಲಸ ಮಾಡುವ ಪಣ, ಈ ಎಲ್ಲ ಅವಕಾಶ ಮಾಡಿಕೊಟ್ಟಿದ್ದಾಳೆ. ಕೋಟಿ ಕೋಟಿ ನಮನ ಎಂದರು.

ಕಳೆದೆರಡು ವರ್ಷಗಳಿಂದ ಕೋವಿಡ್ ಕಾರಣದಿಂದ ಕಳೆಗುಂದಿದೆ. ತಾಯಿ ಆಶಿರ್ವಾದದೊಂದಿಗೆ ಮುಂದಿನ ವರ್ಷ ಅತ್ಯಂತ ವೈಭವಪೂರಿತವಾಗಿ ಭಕ್ತಿಭಾವದಿಂದ ಆಚರಿಸಲು ಅವಕಾಶ ಮಾಡಿಕೊಡುವಂತೆ ಪ್ರಾರ್ಥಿಸಿದ್ದೇವೆ. ಅವಕಾಶ ಕೊಟ್ಟರೆ ವೈಭವಯುತವಾಗಿ ಮಾಡುತ್ತೇವೆ. ಈ ನಾಡಹಬ್ಬ ಜನರಲ್ಲಿ ಉತ್ಸಾಹ ತುಂಬುವ ಕೆಲಸ ವಾಗಬೇಕು. ಮಳೆ ಬೆಳೆ ಸರಿಯಾಗಿ ಬಂದು ರೈತ ಬೆಳೆದ ಬೆಳೆಗೆ ಯೋಗ್ಯ ಬೆಲೆ ಸಿಕ್ಕಿ ಮಕ್ಕಳಿಗೆ ಒಳ್ಳೆಯ ಶಿಕ್ಷಣ ಸಿಗಬೇಕು. ಈ ನಾಡು ಸಂಪದ್ಭರಿತವಾಗಬೇಕು. ಈ ನಾಡಿಜನ ಜನತೆ ಸುಖದ ಬದುಕನ್ನು ನಡೆಸಿದಾಗ ಮಾತ್ರ ಸಂಭ್ರಮದ ದಸರಾ ಆಗತ್ತೆ ಎಂದು ತಿಳಿಸಿದರು.

ನನ್ನ ಜನತೆಗೆ ದುಃಖ ನೀಡದೆ ಕೊವಿಡ್ ಮಾರಿ ತೊಲಗಿಸಿ ನಾಡಿನ ಜನತೆ ಸಂಕಷ್ಟಕ್ಕೆ ಈಡಾಗದಂತೆ ಕಾಪಾಡಿ ಏನಾದರೂ ಕಷ್ಟವಿದ್ದರೆ ನನಗೇ ಕೊಡು. ಕಷ್ಟಸಹಿಸುವ ಶಕ್ತಿಯನ್ನೂ ನೀಡಲಿ ಎಂದು ಪ್ರಾರ್ಥಿಸಿದ್ದಾಗಿ ಸಿಎಂ ತಿಳಿಸಿದರು.

ನಾಡಹಬ್ಬ ಉದ್ಘಾಟನೆ ಮಾಡಿದರೆಲ್ಲ ಬದುಕನ್ನು ಆದರ್ಶಪ್ರಾಯವಾಗಿಸಿಕೊಂಡವರು. ಹಲವಾರು ಮೌಲ್ಯ ಬಿಟ್ಟ ಹೋದವರು. ಅಪಾರ ಕೊಡುಗೆ ನೀಡಿದವರು. ಅದೇ ರೀತಿ ಎಸ್.ಎಂ.ಕೃಷ್ಣ ಅವರೂ ಕೂಡ ಧೀಮಂತ ನಾಯಕತು ಎಂದು ಬಣ್ಣಿಸಿದರು.

ಸಾರ್ವಜನಿಕ ಜೀವನದಲ್ಲಿ ಬದುಕಿನಲ್ಲಿ ಬದಲಾವಣೆಯಾಗುವ ನಿರ್ಧಾರ ತೆಗೆದುಕೊಂಡು ಅನುಷ್ಠಾನ ಮಾಡಿದ ಧೀಮಂತ ನಾಯಕರಿದ್ದಾರೆ. ಈ ಬದಲಾವಣೆ ನಾನು ಮಾಡಬೇಕು. ಯಾರು ಯಾವೆಲ್ಲ ಕ್ಷೇತ್ರದಲ್ಲಿ ಸಾಧನೆ ಮಾಡಿದ್ದಾರೆ ಅವರೆಲ್ಲರನ್ನೂ ಗುರುತಿಸುವ ಕೆಲಸವಾಗಬೇಕು. ಸಜ್ಜನ ಪ್ರಾಮಾಣಿಕ, ಜನಸೇವೆ ಮಾಡಿದ ಎಸ್.ಎಂ.ಕೃಷ್ಣ ಅವರನ್ನು ಆಯ್ಕೆ ಮಾಡಿದರೆ ಎಲ್ಲರೂ ಸ್ವಾಗತಿಸುತ್ತಾರೆಂಬ ನಂಬಿಕೆಯಿತ್ತು. ಕನ್ನಡಿಗರು ದೊಡ್ಡ ಪ್ರಮಾಣದಲ್ಲಿ ಒಪ್ಪಿಕೊಂಡಿದ್ದಾರೆ. ಜನರ ಒಪ್ಪಿಗೆಯ ಮುದ್ರೆ ಸಿಕ್ಕಿದೆ. ನಮ್ಮ ಹೆಗ್ಗಳಿಕೆಯಲ್ಲ, ಅವರ ಸಾಧನೆಯ ಹೆಗ್ಗಳಿಕೆ. ಮನುಷ್ಯನಿಗೆ ಅವಕಾಶಗಳು ಸಿಕ್ಕಾಗ ಅವನ ಚಿತ್ತ ಚಿಂತನೆ ಏನಿದು ಎನ್ನುವುದು ಗೊತ್ತಾಗತ್ತೆ. ಸಿಎಂ ಆದಾಗ ಅವರು ತೆಗೆದುಕೊಂಡ ನಿರ್ಣಯಗಳನ್ನು ಜನತೆ ಇಂದಿಗೂ ಸ್ಮರಿಸುತ್ತಾರೆ ಎಂದರು.

ಮುಂದಿನ ದಿನಗಳಲ್ಲಿ ಇನ್ನೂ ವಿವಿಧ ಸಾಧಕರನ್ನು ಗುರುತಿಸಿ ಮಾಡಿಸಲಾಗುವುದು. ಕೆಲಸ ಮಾಡುವುದು ಸಹಜ. ನಾಡಿಗಾಗಿ ನಾಡ ಜನತೆಗಾಗಿ ಬದುಕನ್ನು ಮುಡಿಪಿಡುವವರು ವಿರಳ ಎಂದು ತಿಳಿಸಿದರು.

Tags: basavaraj bommaicknewsnowgoddess chamundeshvariMysurumysuru dasara 2021nada habbanewssm krishna
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಆರ್‌ಎಸ್‌ಎಸ್‌ ಬಗ್ಗೆ ಮಡಿವಂತಿಕೆ ಏಕೆ? ಮಾಜಿ ಗೆಳೆಯ ಸಿದ್ದರಾಮಯ್ಯ ಅವರಿಗೆ ಟಾಂಗ್‌ ಕೊಟ್ಟ ಎಂಎಲ್ಸಿ ವಿಶ್ವನಾಥ್‌

ಯಡಿಯೂರಪ್ಪ ಸಿಎಂ ಸ್ಥಾನದಿಂದ ಕೆಳಗಿಳಿದ ಕಾರಣ ಹೇಳಿದ ಹೆಚ್.ವಿಶ್ವನಾಥ್

Leave a Reply Cancel reply

Your email address will not be published. Required fields are marked *

Recommended

ದೇವರಾಜ ಅರಸು ಆಶಯ ಉಲ್ಟಾ ಮಾಡಿದ ಬಿಜೆಪಿ!!

ಸಂಕಷ್ಟ ಸೂತ್ರ ಇಲ್ಲದಿರುವುದೇ ಸಂಕಷ್ಟಕ್ಕೆ ಕಾರಣ ಎಂದು ಕೈಚೆಲ್ಲಿದ ಸಿದ್ದರಾಮಯ್ಯ

3 years ago
ಲಾಕ್ ಡೌನ್ ಇಲ್ಲ

ವೈಫಲ್ಯ ಮುಚ್ಚಿಕೊಳ್ಳಲು ಬೊಮ್ಮಾಯಿ ಬುಲ್ಡೋಜರ್ ಜಪ

4 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ