• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home CHIKKABALLAPUR

200 ವರ್ಷ ಇತಿಹಾಸವಿರುವ ಉಲ್ಲೋಡು ಶ್ರೀ ಅಭಯ ಆಂಜನೇಯ ಸ್ವಾಮಿ

cknewsnow desk by cknewsnow desk
October 9, 2021
in CHIKKABALLAPUR, STATE
Reading Time: 2 mins read
0
200 ವರ್ಷ ಇತಿಹಾಸವಿರುವ ಉಲ್ಲೋಡು ಶ್ರೀ ಅಭಯ ಆಂಜನೇಯ ಸ್ವಾಮಿ
1.4k
VIEWS
FacebookTwitterWhatsuplinkedinEmail

ಗುಡಿಬಂಡೆ ಸಮೀಪ ಹನುಮನ ಐತಿಹಾಸಿಕ ದೇಗುಲ

By GS Bharath Gudibande

ಗುಡಿಬಂಡೆ: ಪಟ್ಟಣದಿಂದ 6 ಕಿ.ಮೀ ದೂರದಲ್ಲಿರುವ ಶ್ರೀ ಅಭಯ ಆಂಜನೇಯ ಸ್ವಾಮಿ ಸಂಕಷ್ಟದಲ್ಲಿರುವ ಭಕ್ತಾಧಿಗಳು ತಮ್ಮ ಸಮಸ್ಯೆಗಳ ಬಗ್ಗೆ ಬೇಡಿಕೊಂಡರೆ ಕಾರ್ಯಗಳು ಸಿದ್ಧಿಸಿ ಅಭಯ ನೀಡಿ ಕಷ್ಟಗಳನ್ನು ತೊಲಗಿಸುತ್ತಾನೆ ಎಂಬ ನಂಬಿಕೆ ಇದೆ.

ದೇವಾಲಯದ ಗರ್ಭಗುಡಿಯಲ್ಲಿ ಒಂದು ಕೈಯನ್ನು ಮೇಲೆತ್ತಿ ಅಭಯವನ್ನು ನೀಡುವ ಮತ್ತೊಂದು ಕೈಯಲ್ಲಿ ಗದೆ ಹಿಡಿದಿರುವ, ಅಪಾರ ಭಕ್ತರ ಆರಾಧ್ಯದೈವ ನೆಲೆಸಿರುವ ಉಲ್ಲೋಡು ಪ್ರಸನ್ನ ಶ್ರೀ ಅಭಯ ಆಂಜನೇಯ ಸ್ವಾಮಿ ದೇವಾಲಯಕ್ಕೆ ಭಕ್ತರು ಶ್ರದ್ಧಾಭಕ್ತಿಯಿಂದ ನಡೆದುಕೊಳ್ಳುತ್ತಾರೆ.

ತಾಲೂಕು ಕೇಂದ್ರಕ್ಕೆ ಸಮೀಪದಲ್ಲಿರುವ ಉಲ್ಲೋಡು ಶ್ರೀ ಅಭಯ ಆಂಜನೇಯ ಸ್ವಾಮಿ ವಿಗ್ರಹ 6 ಅಡಿ ಎತ್ತರವಿದ್ದು, ಪ್ರತೀ ಶನಿವಾರ ವಿಶೇಷವಾದ ಪೂಜೆ ನೆರೆವೇರಿಸಲಾಗುತ್ತದೆ. ತೆಂಗಿನ ಕಾಯಿ ಇಟ್ಟು ಸಂಕಲ್ಪ ಮಾಡಿಕೊಂಡು ಎಂಟು ಮಂಗಳವಾರ ಅಷ್ಟೋತ್ತರ ಮೂಲಕ ಸ್ವಾಮಿಯನ್ನು ಜಪಿಸಿ, ಅಭಿಷೇಕ ಮಾಡಿಸಿದರೆ ಕಾರ್ಯ ಸಿದ್ಧಿಸುತ್ತದೆ ಎಂಬುದು ಭಕ್ತರ ನಂಬಿಕೆ.

200 ವರ್ಷಗಳ ಇತಿಹಾಸ

ಸುಮಾರು ಎರಡು ಶತಮಾನಗಳ ಹಿಂದೆ ನಾಲ್ವರು ಬ್ರಿಟೀಷರು ಪ್ರಜೆಗಳು ಬೇರೆ ರಾಜ್ಯಗಳಿಂದ ವ್ಯಾಪಾರ ಮಾಡಿಕೊಳುತ್ತಾ ಸಾಕಷ್ಟು ಸಂಪತ್ತನ್ನು ಹೊತ್ತುಕೊಂಡು ಹೋಗುತ್ತಿದ್ದಾಗ ಒಂದು ದಿನ ತಡರಾತ್ರಿ ವಿಶ್ರಾಂತಿ ಪಡೆಯಲು ಉಲ್ಲೋಡು ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದ ಹತ್ತಿರ ಬಂದು (ಆಗಿನ್ನೂ ದೇಗುಲ ನಿರ್ಮಾಣ ಆಗಿರಲಿಲ್ಲ, ಅದೊಂದು ನಿರ್ಜನ ಪ್ರದೇಶವಾಗಿತ್ತಂತೆ)  ಹಣ, ವಜ್ರ, ನಾಣ್ಯಗಳನ್ನು ಅಲ್ಲಿಯೇ ಇಟ್ಟು ಅದರ ಮೇಲೆ ಹುಲ್ಲು ಮುಚ್ಚಿ ಮಲಗಿದ್ದರಂತೆ.



  • 200 ವರ್ಷಗಳ ಇತಿಹಾಸ ಹೊಂದಿರುವ ಉಲ್ಲೋಡು ಪ್ರಸನ್ನ ಆಂಜನೇಯ ಸ್ವಾಮಿಯ ದೇವಸ್ಥಾನದ ಚಿತ್ರ

ಬೆಳ್ಳಗ್ಗೆ ಅವರು ನಿದ್ದೆಯಿಂದ ಎದ್ದು ಗಡಿಬಿಡಿಯಲ್ಲಿ ಹೊರಟುಬಿಡುತ್ತಾರೆ. ಚಿನ್ನದ ಸಂಪತ್ತನ್ನು ನಾಲ್ವರಲ್ಲಿ ಒಬ್ಬರು ಯಾರಾದರೂ ತಂದಿರುತ್ತಾರೆಂದು ಎಲ್ಲರೂ ಪರಸ್ಪರ ಯಾಮಾರಿರುತ್ತಾರೆ. ಆದರೆ, ಯಾರೊಬ್ಬರೂ ಅದನ್ನು ತೆಗೆದುಕೊಂಡು ಬಂದಿರುವುದಿಲ್ಲ.

ಸುಮಾರು ದೂರ ಪ್ರಯಾಣ ಮಾಡಿದ ಮೇಲೆ ನಾಲ್ವರಲ್ಲಿ ಒಬ್ಬ ಕೇಳುತ್ತಾನೆ, ನಾವು ಬಚ್ಚಿಟ್ಟಿದ್ದ ಚಿನ್ನ ಎಲ್ಲಿ ಎಂದು ಪ್ರಶ್ನಿಸುತ್ತಾನೆ. ಅದನ್ನು ಅಲ್ಲೇ ಬಿಟ್ಟು ಬಂದಿರುವುದು ಎಲ್ಲರಿಗೂ ಗೊತ್ತಾಗುತ್ತದೆ. ಕೊನೆಗೂ ಅಷ್ಟು ಸಂಪತ್ತು ಹೋಯಿತಲ್ಲಾ ಎಂದು ಎಲ್ಲರೂ ದುಃಖಿತರಾಗುತ್ತಾರೆ.

ಮುಂದಿನ ರಾತ್ರಿ ಅವರು ಬೇರೆ ರಾಜ್ಯದಲ್ಲಿಯೇ ವಿಶ್ರಾಂತಿ ಪಡೆಯುತ್ತಿದ್ದಾಗ ಆ ನಾಲ್ವರಿಗೆ ಪ್ರಸನ್ನ ಅಭಯ ಶ್ರೀ ಆಂಜನೇಯ ಸ್ವಾಮಿ ಕನಸ್ಸಿನಲ್ಲಿ ಬಂದು, ನಿಮ್ಮ ಸಂಪತ್ತು ಯಾರೂ  ತೆಗೆದುಕೊಂಡಿಲ್ಲ. ಎಲ್ಲವೂ ಅಲ್ಲಿಯೇ ಹಾಗೆಯೇ ಇದೆ ಎಂಬ ಅಭಯ ನೀಡುತ್ತಾನೆ. ಶ್ರೀ ಆಂಜನೇಯ ಸ್ವಾಮಿ ನೀಡಿದ ವಾಗ್ದಾನದಂತೆ ಸ್ಥಳಕ್ಕೆ ನಾಲ್ಕು ಜನ ಸ್ನೇಹಿತರು ಬಂದು ನೋಡಿದಾಗ ಎಲ್ಲ ಸಂಪತ್ತು ಹಾಗೆಯೇ, ಅಲ್ಲಿಯೇ ಇತ್ತಂತೆ.

ಈ ಕಾರಣಕ್ಕೆ ಆ ನಾಲ್ವರು ಶ್ರೀ ಆಂಜನೇಯ ಸ್ವಾಮಿ ಅಭಯಕ್ಕೆ ಶರಣಾಗಿ ವಿಗ್ರಹವನ್ನು ಮಾಡಿಸಿ ದೇವಾಲಯವನ್ನು ನಿರ್ಮಾಣ ಮಾಡಿದರು ಎಂದು ಸ್ಥಳೀಯರು ಹೇಳುತ್ತಾರೆ.

ಇಲ್ಲಿನ ವಿಶೇಷವೇನು?

ಈ ದೇವಸ್ಥಾನಕ್ಕೆ ಬಂದು ಪೂಜೆ ಸಲ್ಲಿಸುವುದರಿಂದ ಕಷ್ಟಗಳು ದೂರವಾಗುತ್ತವೆ ಎಂಬ ನಂಬಿಕೆ ಭಕ್ತರದ್ದು. ಮನೆಯತ್ತ ದುಷ್ಟಶಕ್ತಿಗಳು ಸುಳಿಯುವುದಿಲ್ಲ, ಚಿಕ್ಕ ಮಕ್ಕಳು ಚಂಡಿ ಹಿಡಿದರೆ ದೇವಸ್ಥಾನಕ್ಕೆ ಕರೆತಂದು ತಾಯತ ಕಟ್ಟಿಸಿಕೊಳ್ಳುವುದರಿಂದ ಮಕ್ಕಳಲ್ಲಿರುವ ತೊಂದರೆ ಹಾಗೂ ಕಷ್ಟಗಳಿಗೆ ಸ್ವಾಮಿಯ ಅಭಯ ಸಿಗುತ್ತದೆಯಂತೆ.

ಅಭಯ ಆಂಜನೇಯ ಸ್ವಾಮಿಯನ್ನು ಪ್ರಾರ್ಥಿಸುವುದರಿಂದ ಗಾಳಿ ಹಿಡಿಯುವುದು, ಅಂದರೆ ಪಿಶಾಚಿಗಳಿಗೆ ಒಳಪಡುವುದರಿಂದ ಅಭಯವನ್ನು ಪಡೆಯಬಹುದು ಎಂಬ ನಂಬಿಕೆ ಇಲ್ಲಿನ ಜನರಲ್ಲಿದೆ. ಪ್ರತಿನಿತ್ಯ ಜನ ನೂರಾರು ಸಂಖ್ಯೆಯಲ್ಲಿ ಬಂದು ಪೂಜೆ ಮಾಡುತ್ತಾರೆ, ಕಷ್ಟ ಪರಿಹಾರಕ್ಕಾಗಿ ದೇವರಲ್ಲಿ ಹೂವನ್ನು ಕೇಳುವುದುಂಟು.





  • ಉಲ್ಲೋಡು ಶ್ರೀ ಅಭಯ ಆಂಜನೇಯ ಸ್ವಾಮಿಯ ದೇವಸ್ಥಾನದ 2007ರ ನಂತರದ ಚಿತ್ರ.

ವಿಶೇಷ ಪೂಜೆಗಳು

ಆಂಜನೇಯ ಸ್ವಾಮಿ ದೇಗುಲದಲ್ಲಿ ಪ್ರತೀ ವರ್ಷ ಹನುಮ ಜಯಂತಿ ಹಾಗೂ ರಾಮನವಮಿ ಸಂದರ್ಭದಲ್ಲಿ ದೇವಾಲಯದ ಆವರಣದಲ್ಲಿ ವಿಶೇಷ ಧಾರ್ಮಿಕ, ಸಾಂಸ್ಕೃತಿಕ ಹಾಗೂ ಪ್ರವಚನ, ಭಜನೆಗಳು ನಡೆಯುತ್ತವೆ. ನೂರಾರು ಜನ ಭಕ್ತಾಧಿಗಳಿಗೆ ಅನ್ನ ಸಂತರ್ಪಣ ಮಾಡಲಾಗುತ್ತದೆ. ಪ್ರತೀ ಶನಿವಾರ, ಹುಣ್ಣಿಮೆಯಂದು ವಿಶೇಷ ಪೂಜೆ ಇರುತ್ತದೆ.

ಈ ದೇವಸ್ಥಾನ ಗುಡಿಬಂಡೆ ಪಟ್ಟಣದಿಂದ 6 ಕಿ.ಮೀ ದೂರವಿದ್ದು ರಾಮಪಟ್ಟಣ ರಸ್ತೆ  ಮಾರ್ಗವಾಗಿ ಹೊಗಬೇಕಾಗುತ್ತದೆ. ದೇವಸ್ಥಾನ ಮುಜರಾಯಿ ಇಲಾಖೆಗೆ ಇತ್ತೀಚಿಗೆ ಒಳಪಟ್ಟಿದ್ದು ಭಕ್ತಾಧಿಗಳು ಸಹ ದೇವಸ್ಥಾನದ ಅಭಿವೃದ್ದಿಗೆ ಸಾಕಷ್ಟು ಕೊಡುಗೆ ನೀಡಿದ್ದಾರೆ.

ಭಕ್ತರ ಕಷ್ಟ ಕಾರ್ಪಣ್ಯಗಳಿಗೆ ಪರಿಹಾರ ನೀಡುತ್ತಾ ಭಕ್ತರ ಆರಾಧ್ಯ ದೈವವಾಗಿರುವ ಪ್ರಸನ್ನ ಅಭಯ ಶ್ರೀ ಆಂಜನೇಯ ಸ್ವಾಮಿ ದರ್ಶನಕ್ಕೆ ಶನಿವಾರ, ಹುಣ್ಣಿಮೆ ಹಾಗೂ ಅಮಾವಾಸ್ಯೆ ಸಂದರ್ಭದಲ್ಲಿ ನೂರಾರು ಭಕ್ತರು ಆಗಮಿಸುತ್ತಾರೆ. ದರ್ಶನದಿಂದ ತಮ್ಮ ಸಂಕಲ್ಪಗಳಿಗೆ ಪರಿಹಾರ ಸಿಕ್ಕಿದ ಬಗ್ಗೆ ಧನ್ಯತಾ ಭಾವ ವ್ಯಕ್ತಪಡಿಸುತ್ತಿದ್ದಾರೆ.

Tags: 200 years old temple200 yers agoBritish indiachikkaballapurahanumankarnatakasri anjaneyaswamy templeullodu
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಲಸಿಕೆ: ಗುಜರಾತ್‌ಗೆ ಬೆಣ್ಣೆ! ಕರ್ನಾಟಕಕ್ಕೆ ಸುಣ್ಣ!!

ಮನಗೂಳಿ ವಿಷಯದಲ್ಲಿ ಸುಳ್ಳು ಹೇಳಿದ ಡಿಕೆಶಿ

Leave a Reply Cancel reply

Your email address will not be published. Required fields are marked *

Recommended

ಮುಜರಾಯಿ ಇಲಾಖೆ ಅರ್ಚಕರು, ದೇವಾಲಯ ನೌಕರರಿಗೆ ದಸರಾ ಬಂಪರ್

ಮುಜರಾಯಿ ಇಲಾಖೆ ಅರ್ಚಕರು, ದೇವಾಲಯ ನೌಕರರಿಗೆ ದಸರಾ ಬಂಪರ್

5 years ago
ನಮ್ಮ ದೇಶದಲ್ಲೇ ತಯಾರಾದ ಕೊರೊನಾ ಲಸಿಕೆ ಕುರಿತು ಅಗೌರವ ಬೇಡ; ಭಾರತ್ ಬಯೋಟೆಕ್ ನಂಬಿಕೆಗೆ ಅರ್ಹವಾದ ಕಂಪನಿ ಎಂದ ಡಾ.ಕೆ.ಸುಧಾಕರ್

ಕೋಲಾರದ ಮಾಲೂರಿನಲ್ಲಿ 100 ಎಕರೆ ಜಾಗದಲ್ಲಿ ಕೊವ್ಯಾಕ್ಸಿನ್ ಲಸಿಕೆ ತಯಾರಿಕಾ ಘಟಕ I ದೃಢಪಡಿಸಿದ ಡಿಸಿಎಂ I ಐದು ಪಟ್ಟು ಹೆಚ್ಚು ಲಸಿಕೆ ತಯಾರಿಕೆ, ರಾಜ್ಯದಲ್ಲಿ ನೀಗುತ್ತಾ ವ್ಯಾಕ್ಸಿನ್‌ ಕೊರತೆ

5 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ